Subscribe to Updates
Get the latest creative news from FooBar about art, design and business.
Author: kannadanewsnow57
ಶಿವಮೊಗ್ಗ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ ಶ್ರೀ ನಾರಾಯಣ ಗುರು/ ಶ್ರೀಮತಿ ಇಂದಿರಾಗಾಂಧಿ / ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 2025-26ನೇ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಪ.ಜಾ/ಪ.ವ./ಸಾಮಾನ್ಯ/ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಆಯಾ ತಾಲೂಕಿನ ಮೇಲ್ಕಂಡ ವಸತಿ ಶಾಲೆಗಳ ಮೂಲಕ ಜ.25 ರೊಳಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸುವುದು. ಪ.ಜಾ./ಪ.ವ. ಹಾಗೂ ಹಿಂ.ವ. ಪ್ರವರ್ಗ-1 ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ಆದಾಯವು ರೂ.2.50 ಲಕ್ಷ, ಮತ್ತು ಹಿಂ.ವ. 2ಎ ,2ಬಿ, 3ಎ ಮತ್ತು 3ಬಿ ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ಆದಾಯವು ರೂ. 1.00 ಲಕ್ಷಗಳ ಮಿತಿಯೊಳಗಿರಬೇಕು. ಪ್ರವೇಶ ಪರೀಕ್ಷೆಯು ದಿ: 15/02/2025 ರಂದು ನಡೆಯಲಿದ್ದು, ಪ್ರವೇಶ ಪತ್ರಗಳನ್ನು ಫೆ.06ರಿಂದ ವೆಬ್‌ಸೈಟ್‌ಗಳಿಂದ ಡೌನ್‌ಲೋಡ್…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತವೊಂದು ಸಂಭವಿಸಿದ್ದು, ಬಯೋ ಇನ್ನೋವೇಶನ್ ಸೆಂಟರ್ ನಲ್ಲಿ ಬೆಂಕಿ ಬಿದ್ದು ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಗಳೂರಿನ ಸರ್ಕಾರದ ಅಧೀನದಲ್ಲಿರುವ ಬಯೋ ಇನ್ನೋವೇಶನ್ ಸೆಂಟರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಶೇ. 70 ರಷ್ಟು ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಶಿವಮೊಗ್ಗ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಭದ್ರಾವತಿ ತಾಲೂಕಿನ ಕಲ್ಲಹಳ್ಳಿ, ಹೊಸನಗರ ತಾಲೂಕಿನ ಚಿಕ್ಕಜೇನಿ, ಸಾಗರ ತಾಲೂಕಿನ ಖಂಡಿಕ, ಆವಿನಹಳ್ಳಿ ಮತ್ತು ಹಿರೇನೆಲ್ಲೂರು, ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ, ಕೊರಟಿಗೆರೆ, ಶಿವಮೊಗ್ಗ ತಾಲೂಕಿನ ಸೋಗಾನೆ, ತೀರ್ಥಹಳ್ಳಿ ತಾಲೂಕಿನ ನಾಲೂರು (ಕೊಲಗಿ), ಬಸವಾನಿ, ದೇಮ್ಲಾಪುರ, ಅರಗ, ಮುಳಬಾಗಿಲು ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತಿಯುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramaOneFranchisee1crms ರಲ್ಲಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಂಗಳೂರು : ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿದೇದಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ರಾಗಿಣಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿದೆ. ರಾಗಿಣಿ ವಿರುದ್ಧ ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೆ ಅವಕಾಶ ನೀಡಲಾಗಿತ್ತು ಎನ್ನುವ ಆರೋಪವಿತ್ತು, ಆದರೆ ಆರೋಪದ ಯಾವುದೇ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಿಲ್ಲ. ಕೇವಲ ಸಹ ಆರೋಪಿಗಳ ಹೇಳಿಕೆ ಆಧರಿಸಿ ಕೇಸ್ ದಾಖಲಿಸಲಾಗಿದೆ ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಂಡಿಸಿದ್ದರು. ಪ್ರಕರಣದ ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠದನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ. ಎ. ನಾಲ್ಕು ಆರೋಪಿ ಪ್ರಶಾಂತ್ ರಂಕಾ ವಿರುದ್ಧದ ಪ್ರಕರಣವನ್ನು ಕೂಡ ರದ್ದು ಮಾಡಲಾಗಿದೆ.
ನವದೆಹಲಿ: ಭಾರತ ಸರ್ಕಾರ, ರೈಲ್ವೆ ಸಚಿವಾಲಯ, ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಪಾಯಿಂಟ್ಸ್ಮನ್, ಅಸಿಸ್ಟೆಂಟ್, ಟ್ರ್ಯಾಕ್ ಮೆಂಟೇನರ್ ಮತ್ತು ಇತರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಮುಖ ದಿನಾಂಕಗಳು: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23-01-2025 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22-02-2025 ರೈಲ್ವೆ ಗ್ರೂಪ್ ಡಿ ಹುದ್ದೆಗಳ ವಿವರ ಹೀಗಿದೆ ಟ್ರ್ಯಾಕ್ ಮೇಂಟೆನರ್ ಗ್ರೇಡ್ IV ತಾಂತ್ರಿಕ ವಿಭಾಗದ ಸಹಾಯಕ ಅಸಿಸ್ಟಂಟ್ ಪಾಯಿಂಟ್ಸ್‌ಮನ್ ಟ್ರ್ಯಾಕ್ ಮನ್ ಅಸಿಸ್ಟಂಟ್ ಬ್ರಿಡ್ಜ್ ಇತರೆ ಹಲವು ವಿಭಾಗಗಳ ಲೆವೆಲ್ 1 ಪೋಸ್ಟ್‌ಗಳು: ಆರ್ಆರ್ಬಿ ಗ್ರೂಪ್ ಡಿ ಅರ್ಹತಾ 2025 ಎನ್ಸಿವಿಟಿ / ಎಸ್ಸಿವಿಟಿಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪ್ರೌಢಶಾಲಾ (10 ನೇ ತರಗತಿ) ಪೂರ್ಣಗೊಳಿಸಿದ ಅಥವಾ ಎನ್ಸಿವಿಟಿ ಒದಗಿಸಿದ ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ಪ್ರಮಾಣಪತ್ರ (ಎನ್ಎಸಿ) ಹೊಂದಿರುವ…
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗಿದ್ದು, ಈ ನಡುವೆ ರಾಜ್ಯದಲ್ಲಿ ಇಂದಿನಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 14ರ ಇಂದಿನಿಂದ ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರು, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು: ಎಲ್ಲಾ ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಂಫರ್ ಗಿಫ್ಟ್ ನೀಡಿದ್ದಾರೆ. ಶಾಸಕರಿಗೆ ತಲಾ 10 ಕೋಟಿ ಅನುದಾವನವನ್ನು ಘೋಷಣೆ ಮಾಡಿದ್ದಾರೆ. ಕಳೆದ ಬೆಳಗಾವಿಯಲ್ಲಿ ನಡೆದಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಶಾಸಕರಿಗೆ ಅನುದಾನ ಬಿಡುಗಡೆಯ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತ ಪಡಿಸಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಿಎಲ್ ಪಿ ಸಭೆಯಲ್ಲಿ ಶಾಸಕರಿಗೆ ಅನುದಾನವನ್ನು ನೀಡುವ ಘೋಷಣೆ ಮಾಡಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ತಲಾ 10 ಕೋಟಿ ಅನುದಾನವನ್ನು ನೀಡಿದ್ದೇವೆ. ಬಿಜೆಪಿ, ಜೆಡಿಎಸ್ ಶಾಸಕರಿಗೂ 10 ಕೋಟಿ ಅನುದಾನ ಕೊಡ್ತಿರೋದಾಗಿ ಘೋಷಿಸಿದರು. ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾದರು. ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರು ತಮ್ಮ ಪಾಲಿಗೆ ಒದಗಿ ಬಂದಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಈ ಆದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯೋಣ ಎಂದರು. ಸರ್ದಾರ್ ವಲ್ಲಭಬಾಯಿ ಪಟೇಲ್…
ನವದೆಹಲಿ : ಕೇಂದ್ರ ಸರ್ಕಾರದ ಡಿಜಿಟಲ್ ಅಗ್ರಿಕಲ್ಚರ್ ಮಿಷನ್ ಅಡಿಯಲ್ಲಿ, ದೇಶದ ಪ್ರತಿಯೊಬ್ಬ ರೈತರ ಡಿಜಿಟಲ್ ಗುರುತನ್ನು ರಚಿಸಲು ರೈತ ಗುರುತಿನ ಚೀಟಿಯನ್ನು ಮಾಡಲಾಗುವುದು. 11 ಕೋಟಿ ರೈತರಿಗೆ ಡಿಜಿಟಲ್ ಐಡೆಂಟಿಟಿ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಒಂದೇ ಕಾರ್ಡ್‌ನಿಂದ ಕಿಸಾನ್ ಸಮ್ಮಾನ್ ನಿಧಿ, ಕಿಸಾನ್ ಕ್ರೆಡಿಟ್ ಕಾರ್ಡ್ ಮತ್ತು ಬೆಳೆ ಮಾರಾಟದಂತಹ ಕೆಲಸ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ಇದೀಗ ರೈತ ಗುರುತಿನ ಚೀಟಿ ಮಾಡುವ ಕಾರ್ಯವನ್ನು ಚುರುಕುಗೊಳಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಿದೆ. ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ನವೆಂಬರ್ 28 ರಂದು ರಾಜ್ಯಗಳಿಗೆ ಪತ್ರವನ್ನು ಕಳುಹಿಸಿದ್ದು, 2024-25 ನೇ ಹಣಕಾಸು ವರ್ಷದಲ್ಲಿ 6 ಕೋಟಿ ರೈತರಿಗೆ, 2025-26 ರಲ್ಲಿ 3 ಕೋಟಿ ಮತ್ತು 2 ಕೋಟಿ ರೈತರಿಗೆ ರೈತ ಗುರುತಿನ ಚೀಟಿಗಳನ್ನು ತಯಾರಿಸಲು ಶಿಬಿರಗಳನ್ನು ಆಯೋಜಿಸಲು ಆದೇಶಿಸಿದೆ. 2026-27 ರಲ್ಲಿ ಒಳಗೊಳ್ಳಲಿದೆ. ಕಿಸಾನ್ ಪೆಹಚಾನ್ ಪತ್ರವು ಆಧಾರ್-ಸಂಯೋಜಿತ ಡಿಜಿಟಲ್ ಗುರುತಾಗಿದೆ, ಇದನ್ನು ಭೂ ದಾಖಲೆಗಳಿಗೆ ಲಿಂಕ್ ಮಾಡಲಾಗುತ್ತಿದೆ.…
ನವದೆಹಲಿ: ಪೊಂಗಲ್ ಮತ್ತು ಮಕರ ಸಂಕ್ರಾಂತಿ ಹಬ್ಬಗಳ ಕಾರಣ ಬುಧವಾರ (ಜನವರಿ 15, 2025)ದ ನಾಳೆ ನಿಗದಿಯಾಗಿದ್ದ ಯುಜಿಸಿ-ನೆಟ್ ಪರೀಕ್ಷೆಯನ್ನು ( UGC-NET examination ) ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಪ್ರಕಟಿಸಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಎನ್ಟಿಎ ತಿಳಿಸಿದೆ. 2025 ರ ಜನವರಿ 15 ರಂದು ಪೊಂಗಲ್, ಮಕರ ಸಂಕ್ರಾಂತಿ ಮತ್ತು ಇತರ ಹಬ್ಬದ ಕಾರಣದಿಂದಾಗಿ ಯುಜಿಸಿ – ನೆಟ್ ಡಿಸೆಂಬರ್ 2024 ಪರೀಕ್ಷೆಯನ್ನು ಮುಂದೂಡಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಮನವಿ ಬಂದಿದೆ ಎಂದು ಎನ್ಟಿಎ ಹೇಳಿಕೆಯಲ್ಲಿ ತಿಳಿಸಿದೆ. “ಆಕಾಂಕ್ಷಿಗಳ ಹಿತದೃಷ್ಟಿಯಿಂದ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) 2025 ರ ಜನವರಿ 15 ರಂದು ನಿಗದಿಯಾಗಿದ್ದ ಯುಜಿಸಿ-ನೆಟ್ ಡಿಸೆಂಬರ್ 2024 ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು” ಎಂದು ಅದು ಹೇಳಿದೆ.
ಬಾಗಲಕೋಟೆ : ಸೈಬರ್ ವಂಚಕರು ಜನಸಾಮಾನ್ಯರನ್ನು ಗುರಿಯಾಗಿಸಿ ಕೊಂಡು ಡಿಜಿಟಲ್ ಮತ್ತು ಒನ್ಲೈನ್ ವಂಚನೆಯ ಮೂಲಕ ಅವರ ಖಾತೆಯಲ್ಲಿದ್ದಂತಹ ಲಕ್ಷಾಂತರ ಹಣವನ್ನು ದೋಚಿರುವ ಪ್ರಕರಣಗಳನ್ನು ನಾವು ಕೇಳಿದ್ದೇವೆ. ಆದರೆ ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೂಡ ಇದೀಗ ವಂಚನೆ ಎಸಗಿರುವುದು ಬೆಳಗೆ ಬಂದಿದೆ. ಹೌದು ಬಾಗಲಕೋಟೆಯಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದ್ದು, ಮೊಬೈಲ್ನಲ್ಲಿ ಒಂದು ಲಿಂಕ್ ಬರುತ್ತದೆ. ಈ ಒಂದು ಲಿಂಕ್ ಓಪನ್ ಮಾಡಿದ್ ತಕ್ಷಣ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರ ಕಾಣಿಸಿಕೊಳ್ಳುತ್ತದೆ. ಲಿಂಕ್ ಓಪನ್ ಮಾಡಿದ ತಕ್ಷಣ ನಿಮ್ಮ ಖಾತೆಯಲ್ಲಿನ ಹಣ ಫೋನ್ ಪೇ ಮೂಲಕ 749 ವಂಚಕರ ಖಾತೆಗೆ ವರ್ಗಾವಣೆಯಾಗುತ್ತದೆ. ಮೊಬೈಲ್ ರಿಚಾರ್ಜ್ ಹೆಸರಿನಲ್ಲಿ ವಂಚಕರು ಈ ಒಂದು ಲಿಂಕ್ ಕ್ರಿಯೇಟ್ ಮಾಡಿದ್ದಾರೆ ಎನ್ನಲಾಗಿದೆ. ಇದನ್ನ ಮೊಬೈಲ್ ಇಂದ ಮೊಬೈಲ್ ಗೆ ಫೇಕ್ ಲಿಂಕ್ ಪಾಸ್ ಆಗುತ್ತಿದ್ದು, ಮತ್ತೊಂದೆಡೆ ಫೇಕ್ ಲಿಂಕ್ ಓಪನ್ ಮಾಡಿದ್ರೆ ಸಿಎಂ ಸಿದ್ದರಾಮಯ್ಯ ಪೋಟೋ ಓಪನ್ ಆಗುತ್ತೆ.…











