Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಹೊಸ ಅರ್ಜಿದಾರರು ಕಿಸಾನ್ ಐಡಿ (ಕೃಷಿಕರ ಗುರುತಿನ ಚೀಟಿ) ಪಡೆಯುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಪ್ರತಿ ತಿಂಗಳು ಸುಮಾರು 2 ಲಕ್ಷ ಹೊಸ ಅರ್ಜಿಗಳು ಬರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಈ ಕ್ರಮ ಕೈಗೊಂಡಿದೆ. ಅಧಿಕಾರಿಯೊಬ್ಬರ ಪ್ರಕಾರ, “ಈ ರೈತ ಐಡಿ ಅರ್ಜಿದಾರ ರೈತನು ಭೂಮಿಯ ಮಾಲೀಕತ್ವ ಹೊಂದಿದ್ದಾನೆ ಎಂಬುದನ್ನು ದೃಢಪಡಿಸುತ್ತದೆ. ಇದು ಪಿಎಂ-ಕಿಸಾನ್ ನೋಂದಣಿ ಪ್ರಕ್ರಿಯೆಯನ್ನು ಬಹಳ ಸರಳಗೊಳಿಸುತ್ತದೆ ಮತ್ತು ರೈತರು ಯೋಜನೆಯ ಪ್ರಯೋಜನಗಳನ್ನು ಪಡೆಯುವುದನ್ನು ಸುಲಭಗೊಳಿಸುತ್ತದೆ. 10 ರಾಜ್ಯಗಳಲ್ಲಿ ಹೊಸ ನಿಯಮ ಜಾರಿಗೆ ಜನವರಿ 1, 2025 ರಿಂದ ಹೊಸ ಅರ್ಜಿದಾರರಿಗೆ ಕಿಸಾನ್ ಐಡಿ ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಪ್ರಸ್ತುತ 10 ರಾಜ್ಯಗಳಲ್ಲಿ ಜಾರಿಗೆ ತರಲಾಗಿದೆ – ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ ಮತ್ತು ಉತ್ತರ ಪ್ರದೇಶ. ಈ ರಾಜ್ಯಗಳು ದೇಶದ ಪಿಎಂ-ಕಿಸಾನ್ ಫಲಾನುಭವಿಗಳಲ್ಲಿ…
ಬೆಂಗಳೂರು : ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ಕ್ಕೆ ತಿದ್ದುಪಡಿ ಸಂಬಂಧ ರಾಜ್ಯ ಸರ್ಕಾರವು ರಾಜ್ಯ ಪತ್ರ ಹೊರಡಿಸಿದೆ. ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ಅಧಿನಿಯಮ, 2024 ಇದಕ್ಕೆ 2025 ರ ಜನವರಿ ತಿಂಗಳ 9ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025 ರ ಕರ್ನಾಟಕ ಅಧಿನಿಯಮ ಸಂಖ್ಯೆ: 10 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ. (2025 ರ ಜನವರಿ ತಿಂಗಳ 10ನೇ ದಿನಾಂಕದಂದು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪಕಟವಾಗಿದೆ). ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ಅಧಿನಿಯಮ,…
ಬೆಂಗಳೂರು : ದಿನಾಂಕ:13.01.2025 ರ ಇಂದು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕನಕಪುರ ಮುಖ್ಯರಸ್ತೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ಅಮ್ಮನವರ ಬ್ರಹ್ಮ ರಥೋತ್ಸವ ಪ್ರಯುಕ್ತ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರರು ರಥೋತ್ಸವಕ್ಕೆ ದರ್ಶನಕ್ಕಾಗಿ ಬರುವ ನಿರೀಕ್ಷೆ ಇದ್ದು, ಈ ಸಮಯದಲ್ಲಿ ಪಾದಚಾರಿಗಳ ಹಾಗೂ ವಾಹನ ಸವಾರರ ಹಿತದೃಷ್ಠಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ. ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ. ಕನಕಪುರ ಮುಖ್ಯರಸ್ತೆ ಬನಶಂಕರಿ ದೇವಸ್ಥಾನದಿಂದ ಸಾರಕ್ಕಿ ಮಾರ್ಕೆಟ್ ಜಂಕ್ಷನ್ ವರೆಗೆ. ನಿರ್ಬಂಧಿಸಲಾದ ಸಂಚಾರಕ್ಕೆ ಬದಲಿ ಮಾರ್ಗಗಳು: ಕನಕಪುರ ಮುಖ್ಯರಸ್ತೆ ಕೋಣನಕುಂಟೆ ಕಡೆಯಿಂದ ಬನಶಂಕರಿ ಬಸ್ ನಿಲ್ದಾಣದ ಕಡೆಗೆ ಹೋಗುವ ವಾಹನಗಳು ಜೆ.ಪಿ. ನಗರ ಮೇಟೊ ಜಂಕ್ಷನ್ (ಸಾರಕ್ಕಿ ಸಿಗ್ನಲ್) ಹತ್ತಿರ ಬಲ ತಿರುವು ಪಡೆದು ಸಿಂಧೂರ ವೃತ್ತದ ಮೂಲಕ ರಾಜಲಕ್ಷ್ಮಿ ಮಾರ್ಗವಾಗಿ ಸಂಚರಿಸಿ ಅವಶ್ಯಕ ಮಾರ್ಗಗಳಲ್ಲಿ ಹೋಗಬಹುದು ಅಥವಾ ಸಾರಕ್ಕಿ ಮಾರ್ಕೆಟ್ ಜಂಕ್ಷನ್ ಬಲ ತಿರುವು ಪಡೆದು ಇಂದಿರಗಾಂಧಿ ಸರ್ಕಲ್ ಹತ್ತಿರ ಎಡತಿರುವು ಪಡೆದು ಆರ್.ವಿ. ಆರ್ಸ್ಟ…
ನಾಸಿಕ್ : ಮಹಾರಾಷ್ಟ್ರದ ನಾಸಿಕ್‌ನಲ್ಲಿ ತಡರಾತ್ರಿ ಟೆಂಪೋ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 6 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ 7:30 ರ ಸುಮಾರಿಗೆ ಅಯ್ಯಪ್ಪ ದೇವಸ್ಥಾನದ ಬಳಿಯ ದ್ವಾರಕಾ ವೃತ್ತದಲ್ಲಿ ಈ ದುರದೃಷ್ಟಕರ ಘಟನೆ ನಡೆದಿದೆ. ಸಿಡ್ಕೊ ಪ್ರದೇಶಕ್ಕೆ ಹೋಗುತ್ತಿದ್ದ ಟೆಂಪೋದಲ್ಲಿ 16 ಪ್ರಯಾಣಿಕರಿದ್ದರು. ಅವರು ನಿಫಡ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದರು. ಟೆಂಪೋ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ಕಬ್ಬಿಣದ ರಾಡ್‌ಗಳನ್ನು ಹೊತ್ತ ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತಕ್ಷಣದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಕೆಲವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ಇತರರನ್ನು ಚಿಕಿತ್ಸೆಗಾಗಿ ಖಾಸಗಿ ವೈದ್ಯಕೀಯ ಸೌಲಭ್ಯಗಳಿಗೆ ದಾಖಲಿಸಲಾಯಿತು ಎಂದು ಅಧಿಕಾರಿ ಹೇಳಿದರು.
ಬೆಂಗಳೂರು : ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್ 21 ರಿಂದ ಏಪ್ರಿಲ್ 4ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿಗಾಗಿ https://kseab.karnataka.gov.in/ ಗೆ ಭೇಟಿ ನೀಡಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮಂಡಳಿಯು, 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ “ಅಂತಿಮ ವೇಳಾಪಟ್ಟಿ” ಯನ್ನು ಮಂಡಲಿಯ ಜಾಲತಾಣದಲ್ಲಿ ದಿನಾಂಕ:10-01-2025 ರಂದು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ ದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ದಿನಾಂಕ 01-03-2025ರ ಶನಿವಾರದಿಂದ ಆರಂಭಗೊಂಡು, ದಿನಾಂಕ 20-03-2025ರ ಗುರುವಾರದವರೆಗೆ ನಡೆಯಲಿವೆ. ಆ ವಿಷಯವಾರು ಅಂತಿಮ ವೇಳಾಪಟ್ಟಿ ಈ ಕೆಳಗಿನಂತಿದೆ. ಇನ್ನೂ 2024-25ನೇ ಸಾಲಿನ ಎಸ್ ಎಸ್ ಎಲ್…
ಬೆಂಗಳೂರು : ನಗರದ ಚಾಮರಾಜಪೇಟೆಯಲ್ಲಿ ವ್ಯಕ್ತಿಯೊಬ್ಬರ ಹಸುವಿನ ಕೆಚ್ಚಲನ್ನೇ ಕಿಡಿಗೇಡಿಗಳು ಕೊಯ್ದು ದುಷ್ಕೃತ್ಯವನ್ನು ಮೆರೆಯಲಾಗಿತ್ತು. ಈ ಸಂಬಂಧ ಈಗ ಕಾಟನ್ ಪೇಟೆ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾಟನ್ ಪೇಟೆ ಪೊಲೀಸರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿದ್ದು, ಘಟನಾ ಸ್ಥಳದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಆದರೆ ಪೊಲೀಸರು ಆರೋಪಿಯ ಹೆಸರನ್ನು ಬಹಿರಂಗ ಪಡಿಸಿಲ್ಲ. ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳ ಕ್ರೌರ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪ್ರತಿಪಕ್ಷ ನಾಯಕ ಆರ್.ಅಶೋಕ್ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದರು. ಈ ಬೆನ್ನಲ್ಲೇ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಹಿಂಸಾಚಾರ ತಡೆ ಕಾಯ್ದೆಯಡಿ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಚಾಮರಾಜಪೇಟೆಯ ವಿನಾಯಕನಗರದಲ್ಲಿ ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ರಸ್ತೆಯಲ್ಲಿ ಮಲಗಿದ್ದ 3 ಹಸುವಿನ ಕೆಚ್ಚಲು ಕೊಯ್ದು ಎಸ್ಕೇಪ್ ಆಗಿದ್ದರು. ಗಾಯಗೊಂಡ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗಿದ್ದು, ಈ ನಡುವೆ ರಾಜ್ಯದಲ್ಲಿ ಜನವರಿ 14 ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 14ರಿಂದ ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರು, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಾವಣಗೆರೆ : ದಾವಣಗೆರೆಯಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಒಪಿಎಸ್ ಮರು ಸ್ಥಾಪನೆ ಸೇರಿ ಹಲವು ನಿರ್ಣಗಳಿಗೆ ಬೆಂಬಲ ಸೂಚಿಸಲಾಗಿದೆ. ಈ ಕೆಳಕಂಡ ನಿರ್ಣಯಗಳಿಗೆ ಬೆಂಬಲ ಸೂಚಿಸಲಾಗಿದೆ. NPS ರದ್ದು ಪಡಿಸಿ OPS ಮರುಸ್ಥಾಪನೆಗೆ ಮೊದಲ ಆದ್ಯತೆ ಮೇರೆಗೆ ಯಾವುದೇ ರೀತಿಯ ಹೋರಾಟಕ್ಕೆ ಬೆಂಬಲ. ನಗದು ರಹಿತ ಚಿಕಿತ್ಸೆ ಆದಷ್ಟು ಬೇಗನೆ ಜಾರಿಗೆ ತರಲು ಒತ್ತಾಯ. 2026ಕ್ಕೆ ಕೇಂದ್ರ ಮಾದರಿ ವೇತನಕ್ಕೆ ಹೋರಾಟ ರೂಪಿಸುವುದು. ಪ್ರಾಥಮಿಕ ಶಾಲಾ ಶಿಕ್ಷಕರ(PST) C&R ತಿದ್ದುಪಡಿ ಹೋರಾಟಕ್ಕೆ ಬೆಂಬಲಿಸವುದು. ಬಾಕಿ ಉಳಿದಿರುವ ವೈಧ್ಯಕೀಯ ವೆಚ್ಚ ಮರುಪಾವತಿ ಬಿಲ್ಲುಗಳಿಗೆ ಶೀಘ್ರವಾಗಿ ಹಣ ಬಿಡುಗಡೆ ಮಾಡಿಸಲು ಕ್ರಮ. ಹಬ್ಬದ ಮುಂಗಡ ಹಣ 25000 ರಿಂದ 50000 ರೂಗಳಿಗೆ ಹೆಚ್ಚಿಸಲು ಕ್ರಮ. ನಿವೃತ್ತಿ ಸಮಯದ ಗಳಿಕೆ ರಜೆಗಳನ್ನು 300 ರಿಂದ 340 ಕ್ಕೆ ಹೆಚ್ಚಿಸಲು ಕ್ರಮ. ಮರಣ ಉಪಲಬ್ಧ ಹಣವನ್ನು 15000ಗಳಿಂದ 25000 ಹೆಚ್ಚಿಸುವುದು. ಕೇಂದ್ರ ಸಂಘದದಿಂದ…
ಬೆಂಗಳೂರು : ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಬೆಂಗಳೂರು ಇತಿಹಾಸದಲ್ಲೇ ಮೊದಲ ಬಾರಿಗೆ ತೆಂಗಿನ ಕಾಯಿ ಬೆಲೆ 60 ರೂಪಾಯಿಯ ಗಡಿಯನ್ನು ದಾಟಿದೆ. ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ಎಳನೀರಿಗೆ ಸಿಕ್ಕಾಪಟ್ಟೆ ಬೇಡಿಕೆ ಹಿನ್ನೆಲೆ ಎಳನೀರು ಭರ್ಜರಿ ಮಾರಾಟವಾದ ಹಿನ್ನೆಲೆಯಲ್ಲಿ ಈಗ ತೆಂಗಿನಕಾಯಿಯ ಇಳುವರಿ ಕಡಿಮೆ ಆಗಿದೆ. ಆದ್ದರಿಂದ ತೆಂಗಿನ ಕಾಯಿ ಬೆಲೆ ಏರಿಕೆಗೆ ಕಾರಣವಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ತೆಂಗಿನಕಾಯಿಗೆ 20 ರಿಂದ 30 ರೂ.ವರೆಗೆ ದರ ಇತ್ತು. ಈಗ 65, ರೂ.ವರೆಗೆ ಮಾರಾಟವಾಗುತ್ತಿದೆ. ಕೆಜಿಗೆ 32 -33 ಗೆ ಮಾರಾಟವಾಗುತ್ತಿದ್ದ ತೆಂಗಿನಕಾಯಿ ಈಗ 60 ರೂ.ಗೆ ತಲುಪಿದೆ. ಈ ಮೂಲಕ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ.
BREAKING : ತಡರಾತ್ರಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರಕ್-ಟೆಂಪೋ ನಡುವೆ ಡಿಕ್ಕಿಯಾಗಿ 5 ಮಂದಿ ಸ್ಥಳದಲ್ಲೇ ಸಾವು.!
ನಾಸಿಕ್ : ಮಹಾರಾಷ್ಟ್ರದ ನಾಸಿಕ್‌ನಲ್ಲಿ ತಡರಾತ್ರಿ ಟೆಂಪೋ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ 7:30 ರ ಸುಮಾರಿಗೆ ಅಯ್ಯಪ್ಪ ದೇವಸ್ಥಾನದ ಬಳಿಯ ದ್ವಾರಕಾ ವೃತ್ತದಲ್ಲಿ ಈ ದುರದೃಷ್ಟಕರ ಘಟನೆ ನಡೆದಿದೆ. ಸಿಡ್ಕೊ ಪ್ರದೇಶಕ್ಕೆ ಹೋಗುತ್ತಿದ್ದ ಟೆಂಪೋದಲ್ಲಿ 16 ಪ್ರಯಾಣಿಕರಿದ್ದರು. ಅವರು ನಿಫಡ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದರು. ಟೆಂಪೋ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ಕಬ್ಬಿಣದ ರಾಡ್‌ಗಳನ್ನು ಹೊತ್ತ ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತಕ್ಷಣದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಕೆಲವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ಇತರರನ್ನು ಚಿಕಿತ್ಸೆಗಾಗಿ ಖಾಸಗಿ ವೈದ್ಯಕೀಯ ಸೌಲಭ್ಯಗಳಿಗೆ ದಾಖಲಿಸಲಾಯಿತು ಎಂದು ಅಧಿಕಾರಿ ಹೇಳಿದರು.














