Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಚುನಾವಣಾ ನೀತಿ ಸಂಹಿತೆಗೆ ತೆರೆ ಬೀಳುತ್ತಿದ್ದಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ವೇತನ, ಭತ್ಯೆ ಹಾಗೂ ಸೌಲಭ್ಯಗಳು ಪರಿಷ್ಕರಣೆ ಆಗುವ ಸಾಧ್ಯತೆ ಇದೆ. 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರಿಗೆ ಅಂತಿಮವಾಗಿ ಶೇ.8 ರಿಂದ ಶೇ.8.5 ರಷ್ಟು ವೇತನ ಹೆಚ್ಚಳ ನಿರೀಕ್ಷಿಸಲಾಗಿದ್ದು, ಒಟ್ಟಾರೆ ಏರಿಕೆ ಮೂಲವೇತನದ ಶೇ.25 ರಿಂದ ಶೇ.25.5 ತಲುಪುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇಲ್ಲಿದೆ ಕರ್ನಾಟಕ 7ನೇ ರಾಜ್ಯ ವೇತನ ಆಯೋಗ ವರದಿಯ ಸಂಪೂರ್ಣ ಸಾರಾಂಶ
ನವದೆಹಲಿ:2024ರ ಏಷ್ಯನ್ ರಿಲೇ ಚಾಂಪಿಯನ್ಶಿಪ್ನಲ್ಲಿ ಭಾರತದ ಪುರುಷರ 4×400 ಮೀಟರ್ ರಿಲೇ ತಂಡ ಬೆಳ್ಳಿ ಪದಕ ಗೆದ್ದಿದೆ. ಮುಹಮ್ಮದ್ ಅನಾಸ್ ಯಹಿಯಾ, ಸಂತೋಷ್ ಕುಮಾರ್ ತಮಿಳರಸನ್, ಮಿಜೋ ಚಾಕೋ ಕುರಿಯನ್ ಮತ್ತು ಅರೋಕಿಯಾ ರಾಜೀವ್ ಅವರನ್ನೊಳಗೊಂಡ ತಂಡ 3:05.76 ಸೆಕೆಂಡುಗಳಲ್ಲಿ ಗುರಿ ತಲುಪಿ ಎರಡನೇ ಸ್ಥಾನ ಪಡೆಯಿತು. ಶ್ರೀಲಂಕಾ ರಿಲೇ ತಂಡ 3:04.48 ಸೆಕೆಂಡುಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ಗೆದ್ದುಕೊಂಡಿತು. ಇದಕ್ಕೂ ಮುನ್ನ ಭಾರತದ ಮಹಿಳಾ ತಂಡ ಬೆಳ್ಳಿ ಪದಕ ಗೆದ್ದಿತ್ತು. ಏಷ್ಯನ್ ರಿಲೇ ಚಾಂಪಿಯನ್ಶಿಪ್ 2024: ಭಾರತದ ಪುರುಷರ ರಿಲೇ ತಂಡ ಬೆಳ್ಳಿ ಪದಕ ಗೆದ್ದಿದೆ
ಕೈರೋ:20 ಪ್ರಯಾಣಿಕರನ್ನು ಹೊತ್ತ ಮಿನಿ ಬಸ್ ನೈಲ್ ನದಿಗೆ ಉರುಳಿದ ಪರಿಣಾಮ 10 ಮಂದಿ ಮೃತಪಟ್ಟಿರುವ ಘಟನೆ ಕೈರೋ ಬಳಿ ನಡೆದಿದೆ. ಸಾವುನೋವುಗಳನ್ನು ದೃಢಪಡಿಸಿದ ಈಜಿಪ್ಟ್ನ ಆರೋಗ್ಯ ಸಚಿವಾಲಯವು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಬಹಿರಂಗಪಡಿಸಿದೆ. ಚಾಲಕ ಹ್ಯಾಂಡ್ ಬ್ರೇಕ್ ಬಿಡುಗಡೆ ಮಾಡಿದ ನಂತರ ಬಸ್ ನದಿಗೆ ಬಿದ್ದಿದೆ ಎಂದು ವರದಿಯಾಗಿದೆ. ಘಟನಾ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಚಾಲಕನನ್ನು ಬಂಧಿಸಲಾಗಿದೆ. ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಮತ್ತು ಘಟನೆಯ ಪೂರ್ಣ ವ್ಯಾಪ್ತಿಯನ್ನು ನಿರ್ಧರಿಸಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ನವದೆಹಲಿ : ಮಧ್ಯ ಪ್ರದೇಶ ಹೈಕೋರ್ಟ್ ತನ್ನ ಪ್ರಮುಖ ಆದೇಶವೊಂದರಲ್ಲಿ ಅರ್ಜಿದಾರ ಉದ್ಯೋಗಿ ವಸೂಲಾತಿಗೆ ಸಂಬಂಧಿಸಿದ ಮುಚ್ಚಳಿಕೆಯನ್ನು ಎಂದಿಗೂ ಭರ್ತಿ ಮಾಡಿಲ್ಲ, ಆದ್ದರಿಂದ ಅವನಿಂದ ವಸೂಲಿ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ವಿವೇಕ್ ಅಗರ್ವಾಲ್ ಅವರ ಏಕಸದಸ್ಯ ಪೀಠವು ಈ ಅಭಿಪ್ರಾಯದೊಂದಿಗೆ ವಿಶೇಷ ಶಾಖೆಯ ಸಬ್ ಇನ್ಸ್ಪೆಕ್ಟರ್ ವಿರುದ್ಧ ಹೊರಡಿಸಲಾದ ವಸೂಲಾತಿಯನ್ನು ರದ್ದುಗೊಳಿಸಿತು. ಮೊತ್ತವನ್ನು ವಸೂಲಿ ಮಾಡಿದ್ದರೆ, 30 ದಿನಗಳಲ್ಲಿ ಅರ್ಜಿದಾರರಿಗೆ ಶೇಕಡಾ 8 ರಷ್ಟು ಬಡ್ಡಿಯೊಂದಿಗೆ ಪಾವತಿಸಬೇಕು ಎಂದು ನ್ಯಾಯಾಲಯ ಹೇಳಿದೆ. ರೈಸನ್ ನಿವಾಸಿ ಜೈನೇಂದ್ರ ದುಬೆ ಪರವಾಗಿ ವಕೀಲರಾದ ಮೋಹನ್ ಲಾಲ್ ಶರ್ಮಾ, ಶಿವಂ ಶರ್ಮಾ ಮತ್ತು ಅಮಿತ್ ಸ್ಥಪಕ್ ವಾದ ಮಂಡಿಸಿದ್ದರು. ಜಂಟಿ ನಿರ್ದೇಶಕರು ಖಜಾನೆ ಅರ್ಜಿದಾರರ ವಿರುದ್ಧ 2,53,000 ರೂ.ಗಳನ್ನು ವಸೂಲಿ ಮಾಡಿದ್ದಾರೆ ಎಂದು ಅವರು ವಾದಿಸಿದರು. ಅವರ ಪರವಾಗಿ ತಪ್ಪು ಪಾವತಿ ಮಾಡಲಾಗಿದೆ ಎಂದು ವಾದಿಸಲಾಯಿತು. ಪಾವತಿಸುವ ಮೊದಲು ಅರ್ಜಿದಾರರಿಂದ ಯಾವುದೇ ಭರವಸೆಯನ್ನು ತೆಗೆದುಕೊಂಡಿಲ್ಲ. ಈ ನಿಟ್ಟಿನಲ್ಲಿ, ಹೈಕೋರ್ಟ್ನ ಹಿಂದಿನ ಪೂರ್ವನಿದರ್ಶನಗಳನ್ನು ನೀಡಲಾಯಿತು,…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇಂದು ಮಳೆ ಹಾನಿ ಪ್ರದೇಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಸಿಟಿ ರೌಂಡ್ಸ್ ಕೈಗೊಂಡಿದ್ದು, ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಬಿಬಿಎಂಪಿ, ಬಿಡಬ್ಲುಎಸ್ ಎಸ್ ಬಿ ಹಾಗೂ ಬಿಡಿಎ ಅಧಿಕಾರಿಗಳು ಸಾಥ್ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮೊದಲಿಗೆ ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇರುವ ರಾಜಕಾಲುವೆ ಪರಿಶೀಲನೆ ನಡೆಸಲಿದ್ದಾರೆ. ನಂತರ ನಾಯಂಡಹಳ್ಳಿ ಜಂಕ್ಷನ್ ಬಳಿಕ ರಾಜಕಾಲುವೆ ಹೂಳು ತೆರವು ಪರಿಶೀಲನೆ, ಜೆ.ಪಿ.ನಗರದ ರಾಗಿಗುಡ್ಡ ಜಂಕ್ಷನ್ ವೀಕ್ಷಣೆ, ಅನುಗ್ರಹ ಲೇಔಟ್ ನ ರಾಜಕಾಲುವೆ ಕಾಮಗಾರಿ, ಸಿಲ್ಕ್ ಬೋರ್ಡ್ ಜಂಕ್ಷನ್ ನ ರಾಜ ಕಾಲುವೆ ಕಾಮಗಾರಿ, ಯೆಮಲೂರು ಬಳಿಕ ರಾಜಕಾಲುವೆ ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಗೃಹ ಕಚೇರಿಗೆ ಸಿಎಂ ಸಿದ್ದರಾಮಯ್ಯ ವಾಪಸ್ ಆಗಲಿದ್ದಾರೆ ಎಂದು ಸಿಎಂ ಕಚೇರಿ…
ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಮೇ 31 ಅವಕಾಶ ನೀಡಲಾಗಿತ್ತು. ಈ ನಡುವೆ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಜೂನ್ 12 ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಸರ್ಕಾರ ಕಾಲಾವಕಾಶ ನೀಡಿದೆ. ಹೌದು, ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇರುವ ಮೇ 31ರ ಗಡುವು ವಿಸ್ತರಣೆ ಕೋರಿ BND ಎನರ್ಜಿ ಲಿಮಿಟೆಡ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ನಿನ್ನೆ ಹೈಕೋರ್ಟ್ ಮುಂದೆ ಈ ರಿಟ್ ಅರ್ಜಿ ವಿಚಾರಣೆಗೆ ಬಂದಿದೆ. ಆದ್ರೆ, ಹಲವು ರಿಟ್ ಅರ್ಜಿಗಳ ವಿಚಾರಣೆ ಜೂನ್ 11ಕ್ಕೆ ನಿಗದಿಯಾಗಿದೆ. ಹೀಗಾಗಿ ಹೀಗಾಗಿ ಜೂನ್ 12 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರದ ಪರವಾಗಿ ಎಎಜಿ ರೂಬೆನ್ ಜೇಕಬ್ ಅವರು ಹೈಕೋರ್ಟ್ಗೆ ಹೇಳಿದ್ದಾರೆ. ಎಎಜಿ ರೂಬೆನ್ ಜೇಕಬ್ ಅವರು ಈ ಹೇಳಿಯನ್ನು ದಾಖಲಿಸಿಕೊಂಡ…
ನವದೆಹಲಿ : ಹಾಂಕಾಂಗ್, ನೇಪಾಳ ಮತ್ತು ಸಿಂಗಾಪುರದಲ್ಲಿ ನಿಷೇಧಕ್ಕೆ ಒಳಗಾಗಿರುವ ಎಂಡಿಎಚ್, ಎವರೆಸ್ಟ್ ಕಂಪನಿಯ ಮಸಾಲೆ ಪದಾರ್ಥಗಳಲ್ಲಿ ಯಾವುದೇ ಹಾನಿಕಾರಕ ಅಂಶಗಳಿಲ್ಲ ಎಂದು ಕೇಂದ್ರ ಸರ್ಕಾರದ ಎಫ್‌ಎಸ್‌ಎಐ ಸ್ಪಷ್ಟನೆ ನೀಡಿದೆ. ಸರ್ಕಾರಿ ಮೂಲಗಳ ಪ್ರಕಾರ, ನೇಪಾಳದಲ್ಲಿನ ಭಾರತೀಯ ಮಿಷನ್ನ ಅಧಿಕಾರಿಗಳು ನೇಪಾಳದ ಅಧಿಕಾರಿಗಳೊಂದಿಗೆ ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸಿದರು, ಅವರು ಸ್ವತಂತ್ರ ಮೌಲ್ಯಮಾಪನಗಳಿಗಿಂತ ಸುದ್ದಿ ವರದಿಗಳ ಆಧಾರದ ಮೇಲೆ ಕಾರ್ಯನಿರ್ವಹಿಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ನಿರ್ದೇಶನಗಳಿಗೆ ಅನುಗುಣವಾಗಿ, ಸಾಂಬಾರ ಪದಾರ್ಥಗಳ ಮಂಡಳಿಯು ಆಯಾ ಕಂಪನಿಗಳ ಉತ್ಪನ್ನಗಳ ಮೇಲೆ ಎಚ್ಚರಿಕೆಯಿಂದ ತಪಾಸಣೆ ಮತ್ತು ಮಾದರಿ ಅಭ್ಯಾಸವನ್ನು ಕೈಗೊಂಡಿತು. ಎಂಡಿಎಚ್ ಗಾಗಿ ಪರೀಕ್ಷಿಸಲಾದ ಎಲ್ಲಾ 18 ಮಾದರಿಗಳು ಮಾನದಂಡದ ಪ್ರಕಾರ ಇರುವುದು ಕಂಡುಬಂದಿದೆ. ಆದಾಗ್ಯೂ, ಎವರೆಸ್ಟ್ನ 12 ಮಾದರಿಗಳಲ್ಲಿ ಕೆಲವು ಅನುಸರಣೆಯಲ್ಲ ಎಂದು ಪರಿಗಣಿಸಲ್ಪಟ್ಟವು, ಇದು ಸರಿಪಡಿಸುವ ಕ್ರಮ ಮತ್ತು ನಿರ್ದೇಶನಗಳನ್ನು ಅಗತ್ಯಗೊಳಿಸಿತು. ಕಂಪನಿಗಳು ತಮ್ಮ ಉತ್ಪನ್ನಗಳ ಸಂಗ್ರಹಣೆ, ಸಂಗ್ರಹಣೆ, ಪ್ಯಾಕೇಜಿಂಗ್ ಮತ್ತು ಸಾರಿಗೆ ಹಂತಗಳಲ್ಲಿ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. ಹಾಜರಾದಂತ ವಿದ್ಯಾರ್ಥಿಗಳಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ದಿನಾಂಕ 29-04-2024ರಿಂದ 16-05-2024ರವರೆಗೆ ಒಟ್ಟು 301 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಿತು. ಉತ್ತರ ಪತ್ರಿಕೆಗಳ ಮೌಲ್ಯ ಮಾಪನಕಾರ್ಯವು ಒಟ್ಟು 28 ಮೌಲ್ಯಮಾಪನ ಶಿಬಿರಗಳಲ್ಲಿ ದಿನಾಂಕ 15-05-2024ರಿಂದ 18-05-2024ರವರೆಗೆ 7875 ಮೌಲ್ಯ ಮಾಪಕರಿಂದ ನಡೆಸಲಾಯಿತು ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಈಗ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ. ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪರೀಕ್ಷೆ-1 ಮತ್ತು ಪರೀಕ್ಷೆ-2ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು https://kseab.karnataka.gov.in ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ 1,49,824 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 1,48,942 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 52,505…
ಬೆಂಗಳೂರು : ಬೆಳೆ ಹಾನಿ, ಬೆಳೆ ಪರಿಹಾರ ಜಮೆ ಅಗದೆ ಇರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪಡೆಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ ಹೊಂದಿರುವ ಬಗ್ಗೆ ಪರಿಶೀಲಿಸಿ, ಖಾತರಿ ಮಾಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಲಾಗಿದ್ದು, ಅಕೌಂಟ್‍ಗಳನ್ನು ನಿರ್ಬಂಧಿಸಿರುವುದು ಅಥವಾ ಫ್ರೀಜ್ ಮಾಡಿರುವುದು ಹಾಗೂ ಯಾವ ರೈತರ ಖಾತೆಯನ್ನು ಮುಚ್ಚಲಾಗಿದೆಯೋ ಅಂತಹ ಫಲಾನುಭವಿಗಳು ಬ್ಯಾಂಕ್‍ಗೆ ಹೋಗಿ ಕೌಂಟ್ ರಿ ಓಪನ್ ಮಾಡಿಸಬೇಕು. ಫ್ರೂಟ್ಸ್ ಅಪ್‍ಡೇಟ್‍ನಲ್ಲಿ ಆಧಾರ್ ಹೆಸರು ಹೊಂದಿಕೆಯಾಗುತ್ತಿಲ್ಲ ಆ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ಅಪ್ಡೇಟ ಮಾಡಿಸಬೇಕು. ಆಧಾರ್ ಅನ್ನು ಬ್ಯಾಂಕ್‍ನೊಂದಿಗೆ ಸೀಡ್, ಖಾತೆಗೆ ಆಧಾರ್ ಮ್ಯಾಪ್, ಕುಸಿದ ಪಾವತಿ ಹಾಗೂ ಎನ್.ಪಿ.ಸಿ.ಐ ಸೀಡಿಂಗ್ ಸಮಸ್ಯೆ ಇರುವಂತ ಫಲಾನುಭವಿಗಳು ಬ್ಯಾಂಕ್‍ಗೆ ಹೋಗಿ ಎನ್.ಪಿ.ಸಿ.ಐ (ಓPಅI) ಮಾಡಿಸಬೇಕು. ಅಮಾನ್ಯ ಸ್ವೀಕೃತ ಐ.ಎಫ್.ಎಸ್.ಸಿ ಕೋಡ್ ಹೊಂದಿರುವ ಫಲಾನುಭವಿಗಳು ಬ್ಯಾಂಕ್‍ಗೆ ಹೋಗಿ ಐ.ಎಫ್.ಎಸ್.ಸಿ ಕೋಡ್ ಅಪ್ಡೇಟ್ ಮಾಡಿಸಿ…
ಬೆಂಗಳೂರು: ರಾಜ್ಯದ ಅನೇಕ ಜನರ ಕನಸು ನಗರದಲ್ಲಿ ಒಂದು ಸೈಟು ಖರೀದಿ ಮಾಡಬೇಕು. ಆ ಬಳಿಕ ಮನೆ ಕಟ್ಟಬೇಕು ಅನ್ನೋದು. ಈ ನಿಮ್ಮ ಕನಸಿಗೆ ರಾಜ್ಯ ಸರ್ಕಾರ ನನಸು ಮಾಡೋದಕ್ಕೆ ಮುಂದಾಗಿದೆ. ರಾಜ್ಯ ಸರ್ಕಾರದಿಂದ ಜಮೀನು ಖರೀದಿಸಿ, ಲೇಔಟ್ ಮಾಡಿ, ಅವುಗಳನ್ನು ಮಾರಾಟಕ್ಕೆ ಮುಂದಾಗೋ ಸುಳಿವನ್ನು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ನಡೆದಿರುವ ಕಾಮಗಾರಿಗಳು, ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಈ ವೇಳೆ ಮಾತನಾಡಿದಂತ ಅವರು, ಖಾಸಗಿ ಲೇಔಟ್ ನಿರ್ಮಾಣ ಮಾಡಿರುವವರಿಗೆ ನಕ್ಷೆ ಮತ್ತು ಲೇಔಟ್ ಅನುಮೋದನೆ ನೀಡುವ ಬದಲು ಆಯ ಪ್ರಾಧಿಕಾರಗಳ ವತಿಯಿಂದ ನೀವೆ ಜಮೀನನ್ನು ಗುರುತಿಸಿ ಖರೀದಿ ಮಾಡಿ ಅಭಿವೃದ್ಧಿ ಪಡಿಸಿ ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ನೀಡಲು ಮುಂದಾಗಬೇಕೆಂದು ತಾಕೀತು ಮಾಡಿದರು. ಸಾಧ್ಯವಾದ ಮಟ್ಟಿಗೆ ಸರ್ಕಾರಿ ಜಮೀನುಗಳನ್ನು ಗುರುತಿಸಲು ಪ್ರಾಧಿಕಾರಗಳ ಆಯುಕ್ತರು ಮುಂದಾಗಬೇಕು.…