Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ವಯಸ್ಕರು ಮತ್ತು ಹದಿಹರೆಯದವರಲ್ಲಿ ಕೋವಾಕ್ಸಿನ್ ನ ದೀರ್ಘಕಾಲೀನ ಸುರಕ್ಷತಾ ವಿಶ್ಲೇಷಣೆಯ ಬಗ್ಗೆ ಇತ್ತೀಚೆಗೆ ಪ್ರಕಟವಾದ ಬಿಎಚ್ ಯು ಅಧ್ಯಯನವನ್ನು ಅದರ ಕಳಪೆ ವಿಧಾನ ಮತ್ತು ವಿನ್ಯಾಸಕ್ಕಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ತಳ್ಳಿಹಾಕಿದೆ ಮತ್ತು ಲೇಖನವು ಪತ್ರಿಕೆಯಲ್ಲಿ ಐಸಿಎಂಆರ್ ಅನ್ನು ತಪ್ಪಾಗಿ ಮತ್ತು ದಾರಿತಪ್ಪಿಸುತ್ತದೆ ಎಂದು ಹೇಳಿದೆ. ಐಸಿಎಂಆರ್ ಮಹಾನಿರ್ದೇಶಕ ಡಾ.ರಾಜೀವ್ ಬಹ್ಲ್ ಅವರು ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಎಚ್ಯು) ಅಧ್ಯಯನವನ್ನು ಕಳಪೆಯಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ನಿರ್ಣಾಯಕ ನ್ಯೂನತೆಗಳನ್ನು ಹೊಂದಿದೆ ಎಂದು ಹೇಳಿದರು ಮತ್ತು ಕೋವಾಕ್ಸಿನ್ ಸುರಕ್ಷತೆಯ ಬಗ್ಗೆ ದಾರಿತಪ್ಪಿಸುವ ಪ್ರಬಂಧವನ್ನು ಪ್ರಕಟಿಸಿದ್ದಕ್ಕಾಗಿ ಸಂಶೋಧಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಲಸಿಕೆ ತೆಗೆದುಕೊಂಡವರಲ್ಲಿ 30 ಪ್ರತಿಶತದಷ್ಟು ಜನರು ಪಾರ್ಶ್ವವಾಯು, ಗುಲ್ಲೆನ್-ಬಾರ್ ಸಿಂಡ್ರೋಮ್, ತೋಳುಗಳು ಮತ್ತು ಕಾಲುಗಳಲ್ಲಿನ ನರಗಳಲ್ಲಿ ದೌರ್ಬಲ್ಯವನ್ನು ಉಂಟುಮಾಡುವ ಸ್ವಯಂ ನಿರೋಧಕ ಕಾಯಿಲೆ, ನರವೈಜ್ಞಾನಿಕ ಅಸ್ವಸ್ಥತೆಗಳು ಮತ್ತು ಮೇಲ್ಭಾಗದ ಉಸಿರಾಟದ ಸಮಸ್ಯೆಗಳು ಸೇರಿದಂತೆ ಪ್ರತಿಕೂಲ ಘಟನೆಗಳನ್ನು ಎದುರಿಸಿದ್ದಾರೆ ಎಂದು ಅಧ್ಯಯನ ಹೇಳಿದೆ.…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಹಾಗೂ ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶದ ನಂತ್ರ, ಸಾಮಾನ್ಯ ಪ್ರವೇಶ ಪರೀಕ್ಷೆ( CET-2024) ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಪೋಸ್ಟ್ ಮಾಡಿದ್ದು, ದ್ವಿತೀಯ ಪಿಯುಸಿ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರವೇ ಕೆಸಿಇಟಿ-24ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದಿದೆ. ಇದಲ್ಲದೆ, ಪ್ರಕಟಣೆಯ ದಿನಾಂಕಕ್ಕೆ ಮುಂಚಿತವಾಗಿ ಫಲಿತಾಂಶಗಳನ್ನು ಪ್ರಕಟಿಸುವ ದಿನಾಂಕವನ್ನು ಕೆಇಎ ಅಧಿಕೃತವಾಗಿ ತಿಳಿಸುತ್ತದೆ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದು. ಹೆಚ್ಚಿನ ಮಾಹಿತಿಗೆ ಸಂಬಂಧಿಸಿದಂತೆ ಕೆಇಎ ಅಧಿಕೃತ ಜಾಲತಾಣ www.kea.kar.nic.in ಗೆ ಭೇಟಿ ನೀಡಿ ಪರಿಶೀಲಿಸಬಹುದು ಎಂದು ಹೇಳಿದೆ. https://twitter.com/KEA_karnataka/status/1792446348773708038
ಬೆಂಗಳೂರು : ರಾಜ್ಯದ ಖಾಸಗಿ ಶಾಲೆಗಳು ಮೇ. 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿ ಮತ್ತು ಸುತ್ತೋಲೆ ಅನುಸಾರ ಎಲ್ಲ ಶಾಲೆಗಳು ಮೇ. 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಸೂಚನೆ ನೀಡಲಾಗಿದೆ. ರಾಜ್ಯದ ಹಲವು ಖಾಸಗಿ ಶಾಲೆಗಳು ಬೇಸಿಗೆ ರಜೆಯನ್ನು ಕಡಿತಗೊಳಿಸಿ ಮೇ ತಿಂಗಳ ಆರಂಭದಲ್ಲೇ ತರಗತಿಗಳನ್ನು ಆರಂಭಿಸಿ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿವೆ. ಹೀಗಾಗಿ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ. ಶೈಕ್ಷಣಿಕ ಮಾರ್ಗಸೂಚಿ ಮತ್ತು ಸುತ್ತೋಲೆಯಲ್ಲಿ ತಿಳಿಸಿರುವ ಪ್ರಕಾರವೇ ಮೇ. 29 ರಿಂದ ಖಾಸಗಿ ಶಾಲೆಗಳು ತರಗತಿಗಳನ್ನು ಆರಂಭಿಸಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು ; ರಾಜ್ಯದಲ್ಲಿ ಜಾತಿಗಣತಿ ವರದಿಯನ್ನು ಶೀಘ್ರವೇ ಸಚಿವ ಸಂಪುಟ ಸಭೆಯಲ್ಲಿ ಮುಂದಿಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪ್ರೆಸ್ ಕ್ಬಬ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಜಾತಿಗಣತಿ ವರದಿ ಸ್ವೀಕರಿಸಬೇಡಿ ಎಂದು ತುಂಬಾ ಒತ್ತಡ ಹೇರಿದರು. ಆದರೆ ಸಾಮಾಜಿಕ ನ್ಯಾಯ, ಸರ್ವರಿಗೂ ಸಮಪಾಲು ಸಮಬಾಳು ಎನ್ನುವ ಮೌಲ್ಯ ಕಾಪಾಡಲು ವರದಿ ಸ್ವೀಕರಿಸಿದ್ದೇವೆ ಎಂದು ತಿಳಿಸಿದ್ದಾರೆ. ಜಾತಿಗಣತಿ ವರದಿ ಸ್ವೀಕರಿಸಬೇಡಿ ಎಂದು ಒತ್ತಡ ಹೇರಿದರು. ಆದರೆ, ಸಾಮಾಜಿಕ ನ್ಯಾಯ, ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಮೌಲ್ಯ ಕಾಪಾಡಲು ವರದಿ ಸ್ವೀಕರಿಸಿದೆವು. ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರನ್ನು ಪತ್ತೆ ಹಚ್ಚಲು ಜಾತಿ ಗಣತಿ,ಸಾಮಾಜಿಕ ಆರ್ಥಿಕ ಸಮೀಕ್ಷೆ ಅತ್ಯಗತ್ಯ. ಹೀಗಾಗಿಯೇ ನಾವು ಜಾತಿಗಣತಿ ಮಾಡಿಸಿ ವರದಿ ಸ್ವೀಕರಿಸಿದೆವು. ಈ ವರದಿ ಯಾವುದೇ ಸಮುದಾಯಕ್ಕೂ ತೊಂದರೆ ಮಾಡುವುದಿಲ್ಲ. ಮೋದಿ ಆರ್ಥಿಕವಾಗಿ ಹಿಂದುಳಿದವರಿಗಾಗಿ EWS ಮೀಸಲಾತಿ ಜಾರಿತಂದರು. ಇಡೀ ದೇಶದಲ್ಲಿ ಮೀಸಲಾತಿಯ ಅನುಕೂಲ ಪಡೆಯದ ಯಾವುದೇ…
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಬಂಧನದ ವಾರೆಂಟ್ ಜಾರಿಗೊಳಿಸಿದ ಬೆನ್ನಲ್ಲೇ ಇದೀಗ ಪಾಸ್ ಪೋರ್ಟ್ ರದ್ದುಗೊಳಿಸಲು ಕೇಂದ್ರ ಸರ್ಕಾರಕ್ಕೆ ಎಸ್ ಐಟಿ ಪತ್ರ ಬರೆದಿದೆ. ವಿದೇಶದಲ್ಲಿ ಅಜ್ಞಾತವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಕೋರಿ ವಿದೇಶಾಂಗ ಇಲಾಖೆಗೆ ಎಸ್ ಐಟಿ ಪತ್ರ ಬರೆದಿದೆ. ಲೈಂಗಿಕ ಹಗರಣ ಬೆಳಿಕಗೆ ಬಂದ ನಂತರ ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿಕೊಂಡು ಏಪ್ರಿಲ್ 26 ರಂದು ಜಮರ್ನಿಯ ಮ್ಯೂನಿಕ್ ನಗರಕ್ಕೆ ತೆರಳಿರುವ ಪ್ರಜ್ವಲ್ ರೇವಣ್ಣ ಅಂದಿನಿಂದ ಬಹಿರಂತವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಪ್ರಸ್ತುತ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಪಾಸ್ ಪೋರ್ಟ್ ರದ್ದತಿಗೆ ಎಸ್ ಐಟಿ ಮುಂದಾಗಿದ್ದು, ಈ ಸಂಬಂಧ ವಿದೇಶಾಂಗ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದೆ.
ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ಇಲಾಖೆ, ಸ್ವಾಯತ್ತ ಸಂಸ್ಥೆಗಳು, ನಿಗಮ-ಮಂಡಳಿ, ವಿಶ್ವವಿದ್ಯಾಲಯಗಳಿಗೆ ಅನ್ವಯವಾಗುವಂತೆ ಹೊರ ಗುತ್ತಿಗೆ ಆಧಾರದ ಮೇಲೆ ಮಾಡಿಕೊಳ್ಳುವ ನೇಮಕಾತಿಯಲ್ಲೂ ಕಡ್ಡಾಯವಾಗಿ ಮೀಸಲಾತಿ ದಾಖಲಿಸುವಂತೆ ಸಿಬ್ಬಂದಿ ಮತ್ತು ಆಢಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯ ಸರ್ಕಾರದ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದು ಹೇಳಿದ್ದಾರೆ. ದಿನಾಂಕ: 21.12.2023 ರಂದು ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿದೆ. ಆದುದರಿಂದ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಈ ಕೆಳಕಂಡ ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದ್ದಾರೆ. 1. ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ. 2. ಪುತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ…
ಉಡುಪಿ : ಜೂನ್ ನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ-2 ರಲ್ಲಿ ಗ್ರೇಸ್ ಅಂಕ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರೇಸ್ ಮಾರ್ಕ್ ನೀಡಿರುವುದು ಈ ವರ್ಷಕ್ಕೆ ಮಾತ್ರ. ನಾವೀಗ ಎಲ್ಲಿದ್ದೇವೆ ಅನ್ನೋದು ಅರಿವಿಗೆ ಬಂದಿದೆ.ಹಾಗಾಗಿ ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ. ಉಡುಪಿ ದಕ್ಷಿಣ ಕನ್ನಡ ಯಾವತ್ತೂ ಟಾಪರ್ಸ್ ಆಗಿ ಇರುತ್ತಿದ್ದರು. ನಂತರ ರಿಸಲ್ಟ್ ನಲ್ಲಿ ಇಳಿಮುಖವಾಯಿತು. ಈಗ ಮತ್ತೆ ಉಡುಪಿ, ಮಂಗಳೂರು ಟಾಪರ್ಸ್ ಆಗಿದೆ ಎಂದರು. ನಾವು ಪರೀಕ್ಷೆಯ ಪವಿತ್ರತೆಯನ್ನು ಉಳಿಸಿದ್ದೇವೆ. ಪರೀಕ್ಷೆಗಳ ಪವಿತ್ರತೆ ಉಳಿಸಲು 20 ಗ್ರೇಸ್ ಮಾರ್ಕ್ ನೀಡಲಾಗಿದೆ. ಅಗತ್ಯವಿದ್ದವರು ಎರಡು ಮತ್ತು ಮೂರನೇ ಪರೀಕ್ಷೆ ತೆಗೆದುಕೊಳ್ಳಬಹುದು. ಗ್ರೇಸ್ ಮಾರ್ಕ್ ಪಡೆದವರು ಕೂಡ ಮತ್ತೊಮ್ಮೆ ಪರೀಕ್ಷೆ ಬರೆಯುತ್ತಿದ್ದಾರೆ.ಇಲಾಖೆಯನ್ನು ಸಮರ್ಥವಾಗಿ ನಡೆಸಿಕೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳು ನನಗೆ ನೀಡಿದ್ದಾರೆ. ಎರಡನೇ ಮತ್ತು ಮೂರನೇ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ ಎಂದು…
ಬೆಂಗಳೂರು : ದ್ವಿತೀಯ ಪಿಯುಸಿ ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ-2 ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಇಲಾಖೆಯು ವೆಬ್ ಸೈಟ್ ನಲ್ಲಿ https://karresults.nic.in ಫಲಿತಾಂಶ ಲಭ್ಯವಾಗಲಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು, ಇದರ ಫಲಿತಾಂಶವನ್ನು ದಿನಾಂಕ:21-05-2024ರ ಮಧ್ಯಾಹ್ನ: 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ರ್ಪಕಟಿಸಲಾಗುವುದು ಎಂದು ತಿಳಿಸಿದೆ. ಫಲಿತಾಂಶ ಹೀಗೆ ನೋಡಿ https://karresults.nic.in ವೆಬ್‌ಸೈಟ್ ಕ್ಲಿಕ್ ಮಾಡಿ ದ್ವಿತೀಯ ಪಿಯುಸಿ ಫಲಿತಾಂಶ ಎನ್ನುವ ಲಿಂಕ್ ಕ್ಲಿಕ್ ಮಾಡಿ ನಿಮ್ಮ ರೋಲ್ ನಂಬರ್ ಅನ್ನು ನಮೂದಿಸಿ ನಿಮ್ಮ ವಿಷಯ ಯಾವುದು ಎನ್ನುವುದನ್ನು ತಿಳಿಸಿ ಅಲ್ಲಿ ಕಲಾ, ವಿಜ್ಞಾನ, ವಾಣಿಜ್ಯ ಎನ್ನುವ ವಿಷಯ ಬರಲಿದೆ ಅದರ ಮೇಲೆ ನಿಮ್ಮ ವಿಷಯ ಕ್ಲಿಕ್ ಮಾಡಿ ನಿಮ್ಮ ಫಲಿತಾಂಶ ಸಿಗಲಿದೆ https://kannadanewsnow.com/kannada/former-cm-hd-kumaraswamy-calls-dk-shivakumar-cd-shivu/ https://kannadanewsnow.com/kannada/reservation-in-outsourced-recruitment-will-now-be-applicable-state-govt/
ಬೆಂಗಳೂರು : ರಾಜ್ಯ ಪಠ್ಯಕ್ರಮದ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದಲ್ಲಿ ನಡೆಸಿರುವ ಪರೀಕ್ಷೆಗಳ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲು ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಆದೇಶಿಸಿದ್ದು, ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನಡೆದಿರುವ ಪರೀಕ್ಷೆಗಳ ಮೌಲ್ಯಾಂಕನ ಆಧರಿಸಿ ಮುಂದಿನ ತರಗತಿಗೆ ದಾಖಲಾತಿಗೆ ಅನುಕೂಲ ಮಾಡಿಕೊಡುವಂತೆ ಸೂಚಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಆದೇಶದಲ್ಲಿ ಏನಿದೆ..? 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯ ಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿಗೆ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ದಿನಾಂಕ:11.04.2024 ರಿಂದ 28.05.2024ರವರೆಗೆ ಬೇಸಿಗೆ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಆದರೆ ಉಲ್ಲೇಖ-2ರನ್ನಯ ರಾಜ್ಯದಲ್ಲಿನ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆಯನ್ನು ಕಡಿತಗೊಳಿಸಿ ತರಗತಿಗಳನ್ನು ಪ್ರಾರಂಭಿಸಿದ್ದು, ಈ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈಗಾಗಲೇ ನಿಗಧಿಯಾದಂತೆ…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಾರ್ವಜನಿಕ ಜೀವನ, ನಾಯಕತ್ವದ ತತ್ವ ಮತ್ತು 2024 ರ ಲೋಕಸಭಾ ಚುನಾವಣೆ ಮತ್ತು ಹಿಂದಿನ ಚುನಾವಣೆಗಳಲ್ಲಿ ಬಳಸಿದ “ಬ್ರಾಂಡ್ ಮೋದಿ” ಬಗ್ಗೆ ಪ್ರಾಮಾಣಿಕ ಪ್ರತಿಬಿಂಬಗಳನ್ನು ಹಂಚಿಕೊಂಡಿದ್ದಾರೆ. ‘ಬ್ರಾಂಡ್’ ಎಂದರೇನು ಮತ್ತು ಅದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನನಗೆ ತಿಳಿದಿಲ್ಲ. ಜನರು ಮೋದಿಯವರ ಜೀವನ ಮತ್ತು ಅವರ ಕೆಲಸವನ್ನು ನೋಡುತ್ತಾರೆ” ಎಂದು ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಭಾರತೀಯ ಜನತಾ ಪಕ್ಷವು ಚುನಾವಣಾ ಪ್ರಚಾರದಲ್ಲಿ ಅವರ ಹೆಸರನ್ನು ಬ್ರಾಂಡ್ ಆಗಿ ಬಳಸುತ್ತಿರುವ ಬಗ್ಗೆ ಕೇಳಿದಾಗ ಪ್ರಧಾನಿ ಹೇಳಿದರು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ 13 ವರ್ಷಗಳು ಮತ್ತು ಪ್ರಧಾನಿಯಾಗಿ ಒಂದು ದಶಕ ಸೇರಿದಂತೆ ಅವರ ವ್ಯಾಪಕ ಅನುಭವವನ್ನು ಸಾರ್ವಜನಿಕ ಸೇವೆಗೆ ಅವರ ಬದ್ಧತೆಗೆ ಪುರಾವೆಯಾಗಿ ಎತ್ತಿ ತೋರಿಸಿದರು. ಸರ್ಕಾರಿ ಆಸ್ಪತ್ರೆಯಲ್ಲಿ ತನ್ನ ಕೊನೆಯ ದಿನಗಳನ್ನು ಕಳೆದ ತನ್ನ ದಿವಂಗತ ತಾಯಿಯನ್ನು ಪ್ರಧಾನಿ ಉಲ್ಲೇಖಿಸಿದರು, ಇದು ಅವರ “ಅವಿವೇಕದ ಜೀವನಶೈಲಿಗೆ”…