Author: kannadanewsnow57

ಬೆಂಗಳೂರು : ಡಿಜಿಟಲ್ ಅರೆಸ್ಟ್ ಎಂದರೆ ವಂಚಕರು ಸರ್ಕಾರಿ ಅಧಿಕಾರಿ / ಪೊಲೀಸರ ಸೋಗಿನಲ್ಲಿ ವಾಟ್ಸಾಪ್ ಕರೆ ಮಾಡಿ, ಅಪರಾಧ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ಹಣ ವಸೂಲಿ ಮಾಡುವುದಾಗಿದೆ. ಡಿಜಿಟಲ್ ಅರೆಸ್ಟ್ ಎಂದರೇನು? “ವಂಚಕರು ಸರ್ಕಾರಿ ಅಧಿಕಾರಿಗಳ / ಪೊಲೀಸರ ಸೋಗಿನಲ್ಲಿ ವಾಟ್ಸಾಪ್ ವಿಡಿಯೋ ಕರೆ ಮಾಡಿ, ಅಪರಾಧ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ಹಣ ವಸೂಲಿ ಮಾಡುವುದಾಗಿದೆ.’ ಇಂತಹ ಕರೆಗಳನ್ನು ಸ್ವೀಕರಿಸಬೇಡಿ. ನಂಬರ್ ಅನ್ನು ಬ್ಲಾಕ್ ಮಾಡಿ. ಯಾವುದೇ ಹಣವನ್ನು ವರ್ಗಾವಣೆ ಮಾಡಬೇಡಿ. ನಿಮ್ಮ ವೈಯಕ್ತಿಕ / ಬ್ಯಾಂಕ್ ಮಾಹಿತಿಗಳನ್ನು ನೀಡಬೇಡಿ. ನೈಜತೆ ಪರಿಶೀಲಿಸಲು ನಿಮ್ಮ ಹತ್ತಿರ ಪೊಲೀಸ್ ಠಾಣೆ ಸಂಪರ್ಕಿಸಿ. ಸಹಾಯವಾಣಿ ಸಂಖ್ಯೆ 1930ಕ್ಕೆ ಕರೆ ಮಾಡಿ, ದೂರು ದಾಖಲಿಸಿ, ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ https://twitter.com/KarnatakaVarthe/status/1970458914182353162

Read More

ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರವಹಿಸಿದೆ. ಈ ಸಂಖ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದ್ದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕತೆ ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಿದೆ. ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ…

Read More

ಹಾಸನ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ (93) ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಒಬ್ಬ ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಚಾಮರಾಜನಗರ ಜಿಲ್ಲೆ ಅಂಗಳ ಗ್ರಾಮದ ಎಚ್.ಎಂ.ಶಿವಣ್ಣ 1932ರ ಮಾರ್ಚ್ 1ರಂದು ಜನಿಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಸೆರೆವಾಸ ಅನುಭವಿಸಿದ್ದರು.ಐದು ದಶಕಗಳಿಂದ ಹಾನದಲ್ಲಿ ನೆಲೆಸಿದ್ದರು. ಹೋಂಗಾರ್ಡ್ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸಿದ್ದರು. ಸ್ವಾತಂತ್ರ್ಯ ಹೋರಾಟ ಸಂಗ್ರಾಮದ ನೆನಪಿನ ಕೊಂಡಿಯಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ.ಶಿವಣ್ಣ ನಿಧನಕ್ಕೆ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಅವರಿ ಸಂತಾಪ ಸೂಚಿಸಿದ್ದಾರೆ.

Read More

ಹಾಸನ : ರಾಜ್ಯದಲ್ಲಿ ಆನ್ ಲೈನ್ ಪ್ಲಾಟ್ ಫಾರಂನಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರು 4 ರಿಂದ 5 ಲಕ್ಷ ಜನ ಇದ್ದಾರೆ ಇವರನ್ನು ಇಲಾಖೆ ವ್ಯಾಪ್ತಿಗೆ ತರುವ ಮೂಲಕ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಅಧಿನಿಮಯ 2025 ಅನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ತಿಳಿಸಿದ್ದಾರೆ. ನಗರದ ಮಲೆನಾಡು ಇಂಜಿನಿಯರಿAಗ್ ಕಾಲೇಜಿನ ಆಡಿಟೋರಿಯಮ್‌ನಲ್ಲಿಂದು ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಬೆಂಗಳೂರು, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಹಾಸನ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿ ದ ಅವರು ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿದೆಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಮಿಕರನ್ನು ನೋಂದಾಯಿಸಿ ಸಾಮಾಜಿಕ ಭದ್ರತೆ ಒದಗಿಸಲಾಗುತ್ತಿದೆ ಎಂದರು. ಚಾಲಕ, ನಿರ್ವಾಹಕ, ಕ್ಲೀನರ್,…

Read More

ನವದೆಹಲಿ : ಜಾಗತಿಕವಾಗಿ ಚಿನ್ನದ ಮೇಲಿನ ನಿರಂತರ ಬೇಡಿಕೆ ಮತ್ತು ಅಮೆರಿಕದ H-1B ವೀಸಾ ಶುಲ್ಕ ಹೆಚ್ಚಳದ ನಂತರ ರೂಪಾಯಿ ಮೌಲ್ಯದಲ್ಲಿ ತೀವ್ರ ಕುಸಿತ ಕಂಡುಬಂದಿದ್ದು, ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ 2,700 ರೂ. ಏರಿಕೆಯಾಗಿ 10 ಗ್ರಾಂಗೆ 1,18,900 ರೂ.ಗೆ ತಲುಪಿದೆ. ಆಲ್ ಇಂಡಿಯಾ ಸರಾಫಾ ಅಸೋಸಿಯೇಷನ್ ಪ್ರಕಾರ, ಹಿಂದಿನ ವಹಿವಾಟಿನಲ್ಲಿ 99.9 ಪ್ರತಿಶತ ಶುದ್ಧತೆಯ ಚಿನ್ನವು 10 ಗ್ರಾಂಗೆ 1,16,200 ರೂ.ಗೆ ಮುಕ್ತಾಯಗೊಂಡಿತ್ತು ಎಂದು ವರದಿಯಾಗಿದೆ. ಸ್ಥಳೀಯ ಬುಲಿಯನ್ ಮಾರುಕಟ್ಟೆಯಲ್ಲಿ, 99.5 ಪ್ರತಿಶತ ಶುದ್ಧತೆಯ ಚಿನ್ನವು 10 ಗ್ರಾಂಗೆ 1,18,300 ರೂ.ಗೆ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ (ಎಲ್ಲಾ ತೆರಿಗೆಗಳನ್ನು ಒಳಗೊಂಡಂತೆ), ಸೋಮವಾರದ ಮುಕ್ತಾಯದ 10 ಗ್ರಾಂಗೆ 2,650 ರೂ.ಗೆ ಏರಿಕೆಯಾಗಿದೆ. ಯುಎಸ್ ಡಾಲರ್ ವಿರುದ್ಧ ರೂಪಾಯಿಯ ತೀವ್ರ ಕುಸಿತವು ಹಳದಿ ಲೋಹದ ರ್ಯಾಲಿಗೆ ಕಾರಣವಾಯಿತು ಎಂದು ವ್ಯಾಪಾರಿಗಳು ಗಮನಿಸಿದರು. ಈ ವರ್ಷ ಇಲ್ಲಿಯವರೆಗೆ, ಚಿನ್ನದ ಬೆಲೆಗಳು 10 ಗ್ರಾಂಗೆ 39,950 ರೂ. ಅಥವಾ ಶೇ. 50.60…

Read More

ಬೆಂಗಳೂರು : ಆಸ್ತಿ ಮಾಲೀಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಇ-ಖಾತಾ ಅರ್ಜಿ ಸಲ್ಲಿಕೆಯನ್ನು ಇನ್ನಷ್ಟು ಸರಳ ಮತ್ತು ಸುಲಭಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಶೀಘ್ರದಲ್ಲೇ ಇ-ಖಾತಾ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಿದೆ. ಇ-ಖಾತಾ ಪಡೆಯಲು ಬೆಂಗಳೂರು ಒನ್ ಕೇಂದ್ರ, ಸೈಬರ್ ಸೆಂಟರ್ ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅರ್ಜಿ ಸಲ್ಲಿಸಲು ವೆಬ್ ಆಧಾರಿತ ತಂತ್ರಾಂಶ ರೂಪಿಸಲಾಗಿದ್ದು, ಸಾರ್ವಜನಿಕರು ಕಂಪ್ಯೂಟರ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾ ಗಿತ್ತು. ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತಷ್ಟು ಸರಳಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇ-ಆಸ್ತಿ ಮೊಬೈಲ್ ಆ್ಯಪ್ ಸಿದ್ಧ ಪಡಿಸಿದ್ದು, ಶೀಘ್ರವೇ ಈ ಆ್ಯಪ್ ಕಾರ್ಯಾಚರಣೆ ಆರಂಭಿಸಲಿದೆ ಎನ್ನಲಾಗಿದೆ. ಸಾರ್ವಜನಿಕರು ತಮ್ಮ ಮೊಬೈಲ್ನಲ್ಲಿ ಆ್ಯಪ್ ಡೌನ್ಲೋಡ್ ಮಾಡಿ, ಅದರಲ್ಲೇ ಅರ್ಜಿ ಸಲ್ಲಿಸಬಹುದಾಗಿದೆ. ಆಸ್ತಿ ಮಾಲೀಕರು ಮಾತ್ರವಲ್ಲದೆ ಮಾಲೀಕರ ಪರ ಇತರರು ತಮ್ಮ ಮೊಬೈಲ್ನಲ್ಲಿ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

Read More

ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವಾರದಲ್ಲಿ 5 ದಿನ ರಾಗಿ ಮಾಲ್ಟ್ ವಿತರಿಸಲು ಮುಂದಾಗಿದೆ. ಹೌದು, ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1-10ನೇ ತರಗತಿ ಮಕ್ಕಳಿಗೆ ರಾಗಿ ಹೆಲ್ತ್ ಮಿಕ್ಸ್ ಪುಡಿ ಮಿಶ್ರಿತ ಬಿಸಿ ಹಾಲು ನೀಡುವ ಕಾರ್ಯಕ್ರಮವನ್ನು ವಾರದಲ್ಲಿ 5 ದಿನಗಳಿಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದಂತೆ ಶಾಲಾ ಮಕ್ಕಳಿಗೆ ವಾರದಲ್ಲಿ 5 ದಿನ ಕ್ಷೀರಭಾಗ್ಯ ಹಾಲಿನ ಜೊತೆ ರಾಗಿ ಹೆಲ್ತ್ ಮಿಕ್ಸ್ ನೀಡಲು ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಮಕ್ಕಳಿಗೆ ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ನಿಂದ ವಾರದಲ್ಲಿ ಮೂರು ದಿನ ಕ್ಷೀರ ಭಾಗ್ಯ ಯೋಜನೆಯ ಬಿಸಿ ಹಾಲಿನ ಜತೆಗೆ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿ ವಿತರಿಸಲಾಗುತ್ತಿದ್ದ, ಇನ್ಮುಂದೆ ವಾರದಲ್ಲಿ 5 ದಿನ 1-10ನೇ ತರಗತಿ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸಲು…

Read More

ಬೆಳಗಾವಿ : ಬೆಳಗಾವಿಯ ಕುಡಚಿ ಪಟ್ಟಣದಿಂದ ಹೈದರಾಬಾದ್ ಗೆ ಅಕ್ರಮವಾಗಿ 3 ಟನ್ ಗೋಮಾಂಸ ಸಾಗಿಸುತ್ತಿದ್ದುದು ಬೆಳ ಕಿಗೆ ಬಂದಿದೆ. ಇದನ್ನು ಪತ್ತೆ ಹಚ್ಚಿರುವ ಐನಾಪುರದ ಸ್ಥಳೀಯರು, ಇಡೀ ಲಾರಿಗೆ ಬೆಂಕಿ ಹಚ್ಚಿದ್ದಾರೆ. ಐನಾಪುರ ಗ್ರಾಮದ ಬಳಿ ಕುಡಚಿ ಪಟ್ಟಣದಿಂದ ಹೈದರಾಬಾದ್ ಕಡೆಗೆ ಸಾಗುತ್ತಿದ್ದ ನಾಲ್ಕು ಲಾರಿಗಳಲ್ಲಿ ಗೋ ಮಾಂಸ ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರಕಿದೆ. ಸೋಮವಾರ ರಾತ್ರಿ ಮಾರ್ಗಮಧ್ಯ ಲಾರಿ ತಡೆದು ಪರಿಶೀಲಿಸಿದಾಗ KA71 2045 ಸಂಖ್ಯೆಯ ಲಾರಿಯಲ್ಲಿ ಅಧಿಕ ಪ್ರಮಾಣದ ಗೋ ಮಾಂಸ ಕಂಡುಬಂದಿದ್ದು, ಈ ವೇಳೆ ಲಾರಿಗೆ ಕಲ್ಲು ತೂರಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಅಥಣಿ ಡಿವೈಎಸ್ಪಿ ಮತ್ತು ಕಾಗವಾಡ ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಲಾರಿಯಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Read More

ಬೆಂಗಳೂರು: ಜಾತಿ ಪಟ್ಟಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರದ ಮಾಜಿ ಸಚಿವ ಎ ನಾರಾಯಣಸ್ವಾಮಿ, ಮಾಜಿ ಸಚಿವ ವಿ ಸುನೀಲ್ ಕುಮಾರ್ ಆರೋಪಿಸಿದಂತ ಈ 14 ಜಾತಿಗಳನ್ನು ಜಾತಿ ಪಟ್ಟಿಯಲ್ಲಿ ಸೇರಿಸಿಲ್ಲ ಎಂಬುದಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸ್ಪಷ್ಟ ಪಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಹಿಂದುಳಿದ ವರ್ಗಗಳ ಆಯೋಗವು, ದಿನಾಂಕ:23-09-20250 ಪತ್ರದ ಮೂಲಕ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳಾದ ಛಲವಾದಿ ನಾರಾಯಣಸ್ವಾಮಿ (ವಿಧಾನ ಪರಿಷತ್ ವಿಪಕ್ಷ ನಾಯಕರು), ಎ.ನಾರಾಯಣಸ್ವಾಮಿ (ಕೇಂದ್ರದ ಮಾಜಿ ಸಚಿವರು) ಹಾಗೂ ವಿ. ಸುನಿಲ್ ಕುಮಾರ್(ಬಿ.ಜೆ.ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕರು) ಆಯೋಗದ ಅಧ್ಯಕ್ಷರಿಗೆ ಮನವಿ ಸಲ್ಲಿಸಿ ಈ ಕೆಳಕಂಡ ಜಾತಿಗಳನ್ನು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಸೇರಿಸಬಾರದು ಎಂದು ಆಗ್ರಹಿಸಿರುತ್ತಾರೆ ಎಂದಿದೆ. ಆದಿ ಆಂಧ್ರ ಕ್ರಿಶಿಯನ್ ಆದಿದ್ರಾವಿಡ ಕ್ರಿಶ್ಚಿಯನ್ ಬುಡುಗ ಜಂಗಮ ಕ್ರಿಶ್ಚಿಯನ್ ಲಮಾಣಿ ಕ್ರಿಶ್ಚಿಯನ್ ಮಾದಿಗ ಕ್ರಿಶ್ಚಿಯನ್ ಮಾಲಾ ಕ್ರಿಶ್ಚಿಯನ್ ವಡ ಕ್ರಿಶ್ಚಿಯನ್…

Read More

ಬೆಂಗಳೂರು : ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ. ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಬೆಂಗಳೂರು ನಗರದಲ್ಲೇ 1 ಲಕ್ಷಕ್ಕೂ ಅಧಿಕ ಮಂದಿ ಬಿಪಿಎಲ್ ಕಾರ್ಡ್ ಹೊಂದಿರುವುದು ಪತ್ತೆಯಾಗಿದೆ. ಇಲಾಖೆ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದ್ದು ಈ ಬಗ್ಗೆ ಶೀಘ್ರವೇ ಆಹಾರ ಇಲಾಖೆ ಸರ್ಕಾರಕ್ಕೆ ಈ ಬಗ್ಗೆ ಅಧಿಕೃತ ವರದಿ ಸಲ್ಲಿಸಲಿದೆ. 12 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಶಂಕಾಸ್ಪದ ಎಂದು ಗುರುತಿಸಿದ್ದ…

Read More