Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಜನವರಿಯಲ್ಲೇ 5,000 ರೈತರಿಗೆ ಸಾಗುವಳಿ ಚೀಟಿ ನೀಡುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಎಡಿಎಲ್‌ಆರ್ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜನವರಿ 15ರ ಒಳಗೆ 15,000 ಫಲಾನುಭವಿಗಳಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಸಾಗುವಳಿ ಚೀಟಿ ನೀಡಬೇಕು ಎಂಬ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿತ್ತು. ಈ ಗುರಿಯನ್ನು ಸಾಧಿಸಲಾಗದಿದ್ದರೂ ಇದೇ ಅವಧಿಯಲ್ಲಿ ಕನಿಷ್ಟ 5600ಕ್ಕೂ ಅಧಿಕ ಅರ್ಹ ಫಲಾನುಭವಿಗಳನ್ನು ಗುರುತಿಸಿರುವುದು ಹಾಗೂ ಎಲ್ಲಾ ಜಿಲ್ಲೆ-ತಾಲೂಕುಗಳಲ್ಲೂ ಈ ಸಂಬಂಧ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿರುವುದು ಉತ್ತಮ ಬೆಳವಣಿಗೆ. ಶೀಘ್ರವೇ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಜಮೀನು ಮಂಜೂರುಗೊಳಿಸಿ” ಎಂದು ಕಿವಿಮಾತು ಹೇಳಿದರು. ನಮೂನೆ 1 to 5 ಪೋಡಿ ದುರಸ್ಥಿಗೆ ಒತ್ತಡ: ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂಬ…
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಳವಾಗುತ್ತಿದ್ದು, 3-4 ದಿನದ ಬಳಿಕ ರಾಜ್ಯದಲ್ಲಿ ಮತ್ತೆ ಚಳಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮಳೆಯ ಮಾರುತಗಳು ರೂಪಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚಳಿಯ ಪ್ರಮಾಣ ಕೊಂಚ ಇಳಿಕೆಯಾಗಿದ್ದು, ಮೂರ್ನಾಲ್ಕು ದಿನದ ಬಳಿ ರಾಜ್ಯದಲ್ಲಿ ಮತ್ತೆ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕಳೆದ ಎರಡ್ಮೂರು ವಾರ ಶುಭ್ರಾಕಾಶ ಇದ್ದ ಪರಿಣಾಮ ರಾಜ್ಯದಲ್ಲಿ ಚಳಿ ಪ್ರಮಾಣ ವಿಪರೀತ ಹೆಚ್ಚಾಗಿದ್ದು, ಇದೀಗ ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮಳೆ ಮೋಡಗಳು ರೂಪುಗೊಂಡಿವೆ. ಹೀಗಾಗಿ ಚಳಿ ಪ್ರಮಾಣ ಕಡಿಮೆಯಾಗಿದ್ದು, 3-4 ದಿನದ ಬಳಿಕ ಮತ್ತೆ ಚಳಿ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವದೆಹಲಿ : ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) ಪ್ರಮುಖ ಟೆಲಿಕಾಂ ಕಂಪನಿಗಳಾದ Airtel, BSNL, Jio ಮತ್ತು Vodafone Idea ಕೈಗೆಟುಕುವ ಧ್ವನಿ ಕರೆ ಮತ್ತು SMS ಯೋಜನೆಗಳನ್ನು ಪ್ರಾರಂಭಿಸಲು ಸ್ಪಷ್ಟ ಸೂಚನೆಗಳನ್ನು ನೀಡಿದೆ. 2G ಬಳಕೆದಾರರಿಗೆ ವಿಶೇಷ ಯೋಜನೆಗಳು 2G ಬಳಕೆದಾರರಿಗೆ ಡೇಟಾ ಉಚಿತ ಯೋಜನೆಗಳನ್ನು ಪರಿಚಯಿಸಲು TRAI ಆದೇಶಿಸಿದೆ, ಇದು ದೇಶಾದ್ಯಂತ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಪರಿಹಾರವನ್ನು ನೀಡುತ್ತದೆ. ಪ್ರಸ್ತುತ ರೀಚಾರ್ಜ್ ಯೋಜನೆಗಳಲ್ಲಿ ಡೇಟಾ ಪ್ಯಾಕ್‌ಗಳನ್ನು ಸೇರಿಸಿರುವುದರಿಂದ, 2G ನೆಟ್‌ವರ್ಕ್‌ಗಳಲ್ಲಿ ಹಳೆಯ ವೈಶಿಷ್ಟ್ಯದ ಫೋನ್‌ಗಳ ಬಳಕೆದಾರರು ಹೆಚ್ಚು ಖರ್ಚು ಮಾಡಬೇಕಾಗುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು, TRAI ವಿಶೇಷ ಸುಂಕದ ವೋಚರ್‌ಗಳನ್ನು (STV) ರಚಿಸಲು ನಿರ್ದೇಶಿಸಿದೆ, ಇದು ಧ್ವನಿ ಕರೆ ಮತ್ತು SMS ಗೆ ಮಾತ್ರ ಇರುತ್ತದೆ. ಡೇಟಾ ಬಳಕೆಯನ್ನು ಉತ್ತೇಜಿಸುವುದು ಅಗತ್ಯವಾಗಿದೆ, ಆದರೆ ಅದನ್ನು ಗ್ರಾಹಕರ ಮೇಲೆ ಹೇರಬಾರದು ಎಂದು ಟ್ರಾಯ್ ಅಧ್ಯಕ್ಷ ಅನಿಲ್ ಕುಮಾರ್ ಲಹೋಟಿ ಹೇಳಿದ್ದಾರೆ. ಗ್ರಾಹಕರು ತಮ್ಮ ಅಗತ್ಯಗಳಿಗೆ ಅನುಗುಣವಾಗಿ ಸೇವೆಗಳನ್ನು ಆಯ್ಕೆ…
ಬೆಂಗಳೂರು: 66/11 kV ಫ್ರೇಸ್ಟೀಜ್ ಪಾಲ್ಕಾಂನ್ ಸಿಟಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಯನಗರ ವಿಭಾಗದ S14 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.01.2025 ಇಂದು ಬೆಳಗ್ಗೆ 10:00 ಯಿಂದ ಸಂಜೆ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಪೋರಮ್ ಮಾಲ್, ಫ್ರೇಸ್ಟೀಜ್ ಪಾಲ್ಕಾಂನ್ ಸಿಟಿ ಅಪಾರ್ಟ್ ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮ್ಯೇನ್ ರೋಡ್ ನಾರಾಯಣ ನಗರ, 3ನೇ ಬ್ಲಾಕ್, ಮುನಿ ರೆಡ್ಡಿ ಲೇಔಟ್, ಕುಮಾರನ್ಸ್ ಶಾಲೆ, ಜ್ಯೋತಿ ಲೇಔಟ್, ಗಂಗಪತಿಪುರ, ಸುಪ್ರಜ ನಗರ, ಜೆಎಸ್ ಎಸ್ ಶಾಲೆ, ಕೋಣನಕುಂಟೆ ಸರ್ಕಾರಿ ಶಾಲೆ, ಜರಗನಹಳ್ಳಿ ಪಾರ್ಕ್, ಗಂಗಾದಾರೇಶ್ವರ ದೇವಸ್ಥಾನ, ಬಸವರಾಜು ಲೇಔಟ್, ಶಾಂತಿ ಸಾ ಮಿಲ್, ರಾಜೀವ್ ಗಾಂಧಿ ರಸ್ತೆ, ಸಾರಕ್ಕಿ ಕೆರೆ, ಸಾರಕ್ಕಿ ಸಿಗ್ನಲ್, ನಾಗಾರ್ಜುನ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಎಸ್‌ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್‌ಎಎಲ್…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು. ಪೋರ್ಟಲ್ ಸುಧಾರಣೆಗೆ ಸೂಚನೆ ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಗೌರವಧನ ನಿಲ್ಲಿಸದೆ ರಜೆ ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು. ಸರ್ಕಾರ ನಿಮ್ಮೊಂದಿಗಿದೆ ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ…
ಬಳ್ಳಾರಿ : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ತಾವು ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ, ಆಯೋಗದಲ್ಲಿ ಬಾಕಿ ಉಳಿದಿದ್ದ ಹಾಗೂ ಹೊಸದಾಗಿ ಸಲ್ಲಿಕೆಯಾದ ಪ್ರಕರಣಗಳೂ ಸೇರಿದಂತೆ ಒಟ್ಟು 11,200 ಪ್ರಕರಣಗಳ ಪೈಕಿ ಕಳೆದ 2024ರ ಡಿಸೆಂಬರ್ ಅಂತ್ಯವರೆಗೆ 8,061 ಪ್ರಕರಣಗಳನ್ನು ವಿಲೇ ಮಾಡಲಾಗಿದ್ದು, 3,139 ಪ್ರಕರಣಗಳು ವಿವಿಧ ಹಂತದಲ್ಲಿ ಬಾಕಿ ಇವೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಅವರು ಹೇಳಿದರು. ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದ ಅವರು, ತಾವು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಆಯೋಗದಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಗೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಲು ಆಯೋಗವೇ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು, ಈಗಾಗಲೆ 16 ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ. ಜಿಲ್ಲಾ ಹಂತದಲ್ಲಿಯೇ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯ ಮಾಡಲಾಗುತ್ತಿದೆ. ಆಯೋಗಕ್ಕೆ ಹೆಚ್ಚಿನ ಸೌಕರ್ಯ ನೀಡುವಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.…
2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ ಮಾಡಿದ್ದು ರೈತರು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಬೆಳೆ ಸಮೀಕ್ಷೆ ಆ್ಯಪ್‍ನಲ್ಲಿ ನೋಂದಾಯಿಸಬೇಕು. ಸರಕಾರದ ವಿವಿಧ ಯೋಜನೆಗಳಾದ ಫಸಲ ಭೀಮಾ ಯೋಜನೆ, ಬೆಳೆ ಪರಿಹಾರ, ಬೆಂಬಲ ಬೆಲೆ ಯೋಜನೆಗಳ ಸೌಲಭ್ಯವನ್ನು ಪಡೆಯಲು ಬೆಳೆ ಸಮೀಕ್ಷೆ ಮಾಡುವುದು ಅವಶ್ಯಕವಾಗಿರುತ್ತದೆ. ಬೆಳೆ ವಿಮೆ ಮಾಡಿಸಿದ ರೈತರು ಕಡ್ಡಾಯವಾಗಿ ತಾವು ಬೆಳೆದ ಬೆಳೆಯನ್ನು ಬೆಳೆ ಸಮೀಕ್ಷೆಯಡಿ ನೋಂದಾಯಿಸಬೇಕು. ಬೆಳೆ ಸಮೀಕ್ಷೆ ಆ್ಯಪ್‍ನ್ನು ಗೂಗಲ್ ಪ್ಲೇಸ್ಟೋರ್‍ನಲ್ಲಿ ಲಭ್ಯವಿದ್ದು, ಹಿಂಗಾರು ರೈತರ ಬೆಳೆ ಸಮೀಕ್ಷೆ 2024 ಎಂದು ಟೈಪ್ ಮಾಡಿ ಆ್ಯಪ್ ಡೌನ್‍ಲೋಡ್ ಮಾಡುವ ಮೂಲಕ ಪಡೆದು ಬೆಳೆ ಸಮೀಕ್ಷೆ ಮಾಡಬಹುದು ಹಾಗೂ ಖಾಸಗಿ ನಿವಾಸಿಗಳನ್ನು ಸಂಪರ್ಕಿಸಿ ಖಾಸಗಿ ನಿವಾಸಿ ಬೆಳೆ ಆ್ಯಪ್ ಮೂಲಕವು ಬೆಳೆ ಸಮೀಕ್ಷೆಯನ್ನು ಮಾಡಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧಾರವಾಡ : 2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ (FRUITS ID) ಹೊಂದಿರುವ ರೈತರಿಗೆ ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದಲ್ಲಿ ಇಲ್ಲಿಯವರೆಗೆ ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 69,573 ರೈತ ಫಲಾನುಭವಿಗಳಿಗೆ ರೂ.48.45 ಕೋಟಿಗಳನ್ನು ಒಟ್ಟು ಕ್ಷೇತ್ರ 55,809.19 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಒಂದನೇ ಹಂತವಾಗಿ ಸೆಪ್ಟಂಬರ್ ತಿಂಗಳಲ್ಲಿ ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲ್ಲೂಕುಗಳಲ್ಲಿ ಒಟ್ಟು 19,058 ಜನ ರೈತರಿಗೆ ರೂ.6.34 ಕೋಟಿ ಒಟ್ಟು ಕ್ಷೇತ್ರ 7,706.51 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ. ಅಕ್ಟೋಬರ್ ತಿಂಗಳಲ್ಲಿ…
ಬೆಂಗಳೂರು : . ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಈ ಯೋಜನೆಯಡಿ ಸರ್ಕಾರವು ರೈತರಿಗೆ ಕೃಷಿಗಾಗಿ ಹಣವನ್ನು ನೀಡುತ್ತದೆ. ಹೊಲಗಳಿಗೆ ನೀರಾವರಿ ಸೌಲಭ್ಯ ನೀಡಲು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯು 2015 ರಲ್ಲಿ ಪ್ರಾರಂಭವಾಯಿತು. ಈ ಯೋಜನೆಯಡಿ ಅನುಪಾತವು 75 ರಿಂದ 25 ಆಗಿರುತ್ತದೆ. ಅಂದರೆ 100% ಹಣದಲ್ಲಿ, ನೀವು ಖರ್ಚು ಮಾಡುವ 75% ಹಣವನ್ನು ಸರ್ಕಾರವು ನಿಮಗೆ ನೀಡುತ್ತದೆ ಮತ್ತು 25% ಹಣವನ್ನು ನೀವೇ ಹೂಡಿಕೆ ಮಾಡಬೇಕಾಗುತ್ತದೆ. 2024-25 ನೇ ಸಾಲಿನ ರಾಷ್ಟ್ರೀಯ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕ (ಸ್ಪಿಂಕ್ಲರ್ ಪೈಪ್ ಗಳು) ಸಾಮಾನ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಎಲ್ಲಾ ರೈತರಿಗೆ 1 ಹೆಕ್ಟರ್ ಘಟಕಕ್ಕೆ ರೂ.4667/- ಗಳು ಮಾತ್ರ ರೈತರ ವಂತಿಗೆಯನ್ನು ಪಾವತಿಸಬೇಕಾಗುತ್ತದೆ. ಈ ಸೌಲಭ್ಯ ಪಡೆಯಲು ಈ ಕೆಳಕಂಡ ದಾಖಲಾತಿಗಳನ್ನು ಸಲ್ಲಿಸಿ ಸೌಲಭ್ಯ ಪಡೆಯಲು ಕೋರಿದೆ. 1. ಪಹಣಿ 2. ಅಧಾರ್ ಕಾರ್ಡ್ ಜೆರಾಕ್ಸ್ 3. ಪಾಸ್ ಪುಸ್ತಕ ಜೆರಾಕ್ಸ್…
ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಬೇಕು. ಕಡ್ಡಾಯವಾಗಿ ಅನರ್ಹರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಹಾರ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಆದೇಶ ಮಾಡಿದರು. ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಅವರು ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್ ಕಾರ್ಡುದಾರನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು. ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್ ಕಾರ್ಡ್‌ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು, ಆ ಬಳಿಕ ಅಂತವರಿಗೆ ನೊಟೀಸ್ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಅಂತ ಸೂಚಿಸಿದರು. ಈಗಾಗಲೇ 4ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು…











