Author: kannadanewsnow57

ಬೆಂಗಳೂರು: 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿನ ದ್ವಿತೀಯ ಪಿಯುಸಿ ಎಲ್ಲಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪದವಿ ಪೂರ್ವ ಪಠ್ಯಕ್ರಮ ಬೋಧಿಸುವ ಉಪನ್ಯಾಸಕರಿಂದ ತಯಾರಿಸಿ ಮಂಡಳಿಯ https://dpue-exam.karnataka.gov.in/ModelQp2025/frmkmpdamodelpapers ಜಾಲತಾಣದಲ್ಲಿ ಅಪ್ ಲೋಡ್ ಮಾಡಲಾಗಿದೆ ಅಂತ ತಿಳಿಸಿದೆ. ಇನ್ನೂ ಈ ಹಿಂದೆ ಲಿಖಿತ ಪರೀಕ್ಷೆಗೆ 100 ಅಂಕಗಳ ಪ್ರಶ್ನೆ ಪತ್ರಿಕೆಗಳ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿತ್ತು. ಈ ಕಾರಣದಿಂದಾಗಿ 3 ಗಂಟೆ 15 ನಿಮಿಷ ಕಾಲಾವಕಾಶ ನೀಡಲಾಗುತ್ತಿತ್ತು. ಆದರೇ ಈಗ 70 ರಿಂದ 80 ಅಂಕಗಳ ಪ್ರಶ್ನೆ ಪತ್ರಿಕೆಗೆ ಉತ್ತರಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಅವಧಿಯನ್ನು 3 ಗಂಟೆಗೆ ಮಿತಿಗೊಳಿಸಲಾಗಿದೆ. ಈ ಕಾಲವಾಶದಲ್ಲಿ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಓದಿ ಕೊಳ್ಳೋದಕ್ಕೆ 15 ನಿಮಿಷ ನೀಡಿದ್ದರೇ, ಪ್ರಶ್ನೆಗಳಿಗೆ ಲಿಖಿತ ಉತ್ತರ…

Read More

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳಲ್ಲಿ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ವಿವರಗಳು http://bcwd.karnataka.gov.in ವೆಬ್ ಸೈಟ್ ನಲ್ಲಿ ಲಭ್ಯವಿದ್ದು ಅಭ್ಯರ್ಥಿಗಳು ಮಾಹಿತಿಯನ್ನು ತಿಳಿದು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿರಬೇಕು. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಪ್ರವರ್ಗ :ರೂ 4.50 ಲಕ್ಷ , 2 (ಎ), 3(ಎ) ಹಾಗೂ 3(ಬಿ) : ರೂ 3.40 ಲಕ್ಷ ಮಿತಿ ಇರಬೇಕು. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು. ಆಸಕ್ತರು ಅರ್ಜಿಯನ್ನು ಜನವರಿ 20 ಸಂಜೆ 5 ಗಂಟೆಯೊಳಗೆ ಸಹಾಯಕ ನಿರ್ದೇಶಕರ ಕಛೇರಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ…

Read More

ಬೆಂಗಳೂರು : ಸಾರ್ವಜನಿಕ ಸಾರಿಗೆಯಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್’ಗಳನ್ನು ಲಭ್ಯ ಗೊಳಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಕೈಗೊಂಡಿರುವ ವಿನೂತನವಾದ “ಕ್ಷೇಮ” ಯೋಜನೆಗೆ ಚಾಲನೆ ನೀಡಲಾಗಿದೆ. ಇಂದು ಸಚಿವ ರಾಮಲಿಂಗ ರೆಡ್ಡಿ ಅವರು ಚಾಲನೆ ನೀಡಿದ್ದಾರೆ. ಸಕ್ರಿಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಮೊದಲಿಗೆ ಆಟೋ ರಿಕ್ಷಾಗಳಲ್ಲಿ ಇದರ ಅಳವಡಿಕೆ ಮಾಡಲಾಗಿದೆ. ಭಾರತದಲ್ಲಿ ಒಂದು ವಿಶಿಷ್ಟ ಕಾರ್ಯಕ್ರಮವಾದ ಕ್ಷೇಮ ಚಾಲನೆ ನೀಡಲಾಗಿದೆ, ಇದು ಆಟೋ-ರಿಕ್ಷಾಗಳಿಂದ ಪ್ರಾರಂಭಿಸಿ ಸಾರ್ವಜನಿಕ ಸಾರಿಗೆಯಲ್ಲಿ ಪ್ಯಾಡ್ ವೆಂಡಿಂಗ್ ಯಂತ್ರಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ. ಇದು ಇಡೀ ದೇಶದಲ್ಲಿ ಇದೇ ರೀತಿಯ ಮೊದಲ ಉಪಕ್ರಮವಾಗಿದ್ದು, ಮಹಿಳೆಯರ ನಿರ್ಣಾಯಕ ಅಗತ್ಯಗಳನ್ನು ಪರಿಹರಿಸುವ ಮತ್ತು ಹೆಚ್ಚಿನ ಸ್ವಾತಂತ್ರ್ಯ ಮತ್ತು ಘನತೆಯಿಂದ ಅವರನ್ನು ಸಬಲೀಕರಣಗೊಳಿಸುವ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಅಗತ್ಯ ನೈರ್ಮಲ್ಯ ಉತ್ಪನ್ನಗಳಿಗೆ ಸುಲಭ ಪ್ರವೇಶವನ್ನು ಒದಗಿಸುವ ಮೂಲಕ, ಮಹಿಳೆಯರು ಅನಿರೀಕ್ಷಿತ ಸವಾಲುಗಳನ್ನು ಎದುರಿಸದೆ ಸಾರ್ವಜನಿಕ ಸಾರಿಗೆಯಲ್ಲಿ ಸಂಚರಿಸಬಹುದು. ಸಕ್ರಿಯಾ ಚಾರಿಟೇಬಲ್ ಟ್ರಸ್ಟ್ ಮತ್ತು ಶ್ರೀಮತಿ ಅನಿತಾ ರಾವ್ ಅವರ ದೃಷ್ಟಿಕೋನ…

Read More

ತುಮಕೂರು: ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರ ಆಯ್ಕೆ ಹಿನ್ನೆಲೆಯಲ್ಲಿ ನಡೆದ ವಿವಾದಗಳು ಮತ್ತು ನ್ಯಾಯಾಲಯದಲ್ಲಿ ಉಳಿದಿದ್ದ ಪ್ರಕರಣಗಳು ಕೊನೆಗೊಂಡಿವೆ. ಜನವರಿ 9ರಂದು ಫಲಿತಾಂಶ ಬಿಡುಗಡೆಗೊಳಿಸಲು ನ್ಯಾಯಾಲಯದಿಂದ ಆದೇಶ ಹೊರಡಿಸಿದ್ದು, ಇಂದು ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದೆ. ಜಿಲ್ಲೆಯ 10 ವಿಧಾನಸಭಾ ಕ್ಷೇತ್ರಗಳಲ್ಲಿ ಫಲಿತಾಂಶ ಪ್ರಕಟಗೊಂಡಿದ್ದು, ಫಲಿತಾಂಶ ವಿವರ: ತುಮಕೂರು: ನಂಜೇಗೌಡ ಗುಬ್ಬಿ: ಭಾರತೀ ಶ್ರೀನಿವಾಸ್ ತಿಪಟೂರು: ಪ್ರಕಾಶ್ ಚಿಕ್ಕನಾಯಕನಹಳ್ಳಿ: ಶಿವಪ್ರಕಾಶ್ ಕೊರಟಗೆರೆ: ಸಿದ್ದಗಂಗಪ್ಪ ಕುಣಿಗಲ್: ಕೃಷ್ಣಕುಮಾರ್ ಮಧುಗಿರಿ: ನಾಗೇಶ್ ಬಾಬು ತುರುವೇಕೆರೆ: ಮಹಾಲಿಂಗಪ್ಪ ಪಾವಗಡ: ಚಂದ್ರಶೇಖರ್ ಶಿರಾ: ಎಸ್ ಆರ್ ಗೌಡ  

Read More

ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿಗೆ ಸಿಐಡಿ ನೋಟಿಸ್ ನೀಡಿದೆ. ಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆಗೆ ಹಾಜರಾಗುಂತೆ ಸಿ.ಟಿ. ರವಿಗೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಡಿ.19ರಂದು ವಿಧಾನಪರಿಷತ್ ಕಲಾಪದ ಸಂದರ್ಭದಲ್ಲಿ ಎಂಎಲ್ ಸಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಬಂಧ ಸಿ.ಟಿ.ರವಿ ಬಂಧನವಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

Read More

ಬಳ್ಳಾರಿ : ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ 6 ಜನರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ಆಂಧ್ರಪ್ರದೇಶ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ 6 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡಲಾಗುವುದು ಮುಜರಾಯಿ ಸಚಿವ ನಾರಾಯಣ ರೆಡ್ಡಿ ಹೇಳಿದ್ದಾರೆ. ಭೀಕರ ಕಾಲ್ತುಳಿತದಲ್ಲಿ ಕೇರಳ ಮೂಲದ ಮಹಿಳೆ ನಿರ್ಮಲಾ (50) ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಉಳಿದಂತೆ ಆಂಧ್ರಪ್ರದೇಶದ ನರಸೀಪಟ್ಟಣದ ಬಿ.ನಾಯ್ಡು ಬಾಬು (51), ರಜಿನಿ (47), ಲಾವಣ್ಯ (40), ವಿಶಾಖಪಟ್ಟಣದ ಶಾಂತಿ (34) ಮತ್ತು ತಮಿಳುನಾಡಿನ ಸೇಲಂ ಪ್ರದೇಶದ ಮಲ್ಲಿಗಾ (49) ಶವವಾಗಿ ಪತ್ತೆಯಾಗಿದ್ದಾರೆ. . ಇನ್ನೂ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರುಯು ಆಸ್ಪತ್ರೆಗೆ ಕರೆದೊಯ್ಯಲಾಯಿತು. https://twitter.com/i/status/1877032963084267986

Read More

ಬಳ್ಳಾರಿ : ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಮಹಿಳೆ ಸಾವನ್ನಪ್ಪಿಲ್ಲ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ 6 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ವೇಳೆ ಬಳ್ಳಾರಿ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು ಎನ್ನಲಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ಬಳ್ಳಾರಿ ಜಿಲ್ಲಾಧಿಕಾರಿಗಳು ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಯಾವುದೇ ಮಹಿಳೆ ಸಾವನ್ನಪ್ಪಿಲ್ಲ ಎಂದು ತಿಳಿಸಿದ್ದಾರೆ. ಭೀಕರ ಕಾಲ್ತುಳಿತದಲ್ಲಿ ಕೇರಳ ಮೂಲದ ಮಹಿಳೆ ನಿರ್ಮಲಾ (50) ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಉಳಿದಂತೆ ಆಂಧ್ರಪ್ರದೇಶದ ನರಸೀಪಟ್ಟಣದ ಬಿ.ನಾಯ್ಡು ಬಾಬು (51), ರಜಿನಿ (47), ಲಾವಣ್ಯ (40), ವಿಶಾಖಪಟ್ಟಣದ ಶಾಂತಿ (34) ಮತ್ತು ತಮಿಳುನಾಡಿನ ಸೇಲಂ ಪ್ರದೇಶದ ಮಲ್ಲಿಗಾ (49) ಶವವಾಗಿ ಪತ್ತೆಯಾಗಿದ್ದಾರೆ. . ಇನ್ನೂ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರುಯು ಆಸ್ಪತ್ರೆಗೆ ಕರೆದೊಯ್ಯಲಾಯಿತು. https://twitter.com/i/status/1877032963084267986

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸುಟ್ಟುಭಸ್ಮವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿ ಎಂಎಸ್ ಆರ್ ನಗರದಲ್ಲಿ ಬೀಗ ಹಾಕಿದ್ದ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಅಂಗಡಿ ಹೊತ್ತಿ ಉರಿದಿದೆ. ಸ್ಪೋಟದ ತೀವ್ರತೆಗೆ ಅಕ್ಕಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸದಾಶಿವನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ರಾಮನಗರ : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರದ ಅಚ್ಚಲು ಗ್ರಾಮದ ಬಳಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಕೆಎಸ್ ಅರ್ ಟಿಸಿ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಒಂದು ಅಪಘಾತ ರಾಮನಗರದ ಅಚ್ಚಲು ಗ್ರಾಮದ ಬಳಿ ಬೆಳ್ಳಂ ಬೆಳಗ್ಗೆ ಈ ಘಟನೆ ನಡೆದಿದೆ. ಮೃತರನ್ನು ಒಂದೇ ಕುಟುಂಬದ ತಂದೆ ಹಾಗೂ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದ್ದು,ಇನ್ನು ಅಪಘಾತದಲ್ಲಿ ಮೃತ ಮಕ್ಕಳ ತಾಯಿಯು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.. KSRTC ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರದಿಂದ ಕನಕಪುರಕ್ಕೆ ಈ ಒಂದು ಬಸ್ ತೆರಳುತ್ತಿತ್ತು. ಕನಕಪುರದಿಂದ ರಾಮನಗರಕ್ಕೆ ತೆರಳುತ್ತಿದ್ದಾಗ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಹಿನ್ನೆಲೆಯಲ್ಲಿ ರಾಮನಗರ ಮತ್ತು ಕನಕಪುರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ವೈಕುಂಠ ಏಕಾದಶಿ ಉಪವಾಸ 2025 ಪೆರುಮಾಳ್ ಎದೆಯಲ್ಲಿ ನೆಲೆಸಿರುವವಳು ಮಹಾಲಕ್ಷ್ಮಿ. ಈ ವೈಕುಂಠ ಏಕಾದಶಿಯ ದಿನದಂದು ಪೆರುಮಾಳ್ ಮತ್ತು ಮಹಾಲಕ್ಷ್ಮಿಯನ್ನು ಪೂಜಿಸುವವರಿಗೆ ಜೀವನದಲ್ಲಿ ಸಂಪತ್ತು ದೊರೆಯುತ್ತದೆ. ಮಾಡಿದ ಪಾಪಗಳು ನಿವಾರಣೆಯಾಗುತ್ತವೆ. ಅವರು ಸ್ವರ್ಗದಲ್ಲಿ ಸ್ಥಳವನ್ನು ಕಂಡುಕೊಳ್ಳುತ್ತಾರೆ ಎಂದು ಅವರು ಹೇಳುತ್ತಾರೆ. ಪೆರುಮಾಳ್ ಒಬ್ಬನೇ ಪೂಜಿಸಬಾರದು. ಮಾತೆ ಮಹಾಲಕ್ಷ್ಮಿಯೊಂದಿಗೆ ಪೆರುಮಾಳ್ ನನ್ನು ಪೂಜಿಸಬೇಕಲ್ಲವೇ? ಆದ್ದರಿಂದ ಈ ವರ್ಷ ಪೆರುಮಾಳ್‌ನ ಮಂಗಳಕರ ದಿನದಂದು ಮಹಾಲಕ್ಷ್ಮಿಯನ್ನು ಪೂಜಿಸಲು ಪ್ರಯತ್ನಿಸಿ. ಆರ್ಥಿಕತೆಯಲ್ಲಿ ನಿಮ್ಮ ಪರಿಸ್ಥಿತಿಯು ಈ ವರ್ಷ ಖಂಡಿತವಾಗಿಯೂ ಮೇಲುಗೈ ಸಾಧಿಸುತ್ತದೆ. ಈ ವರ್ಷ ಏಕಾದಶಿ ತಿಥಿ ಯಾವ ದಿನದಂದು ಬರುತ್ತದೆ? ಉಪವಾಸ ಮಾಡದವರು ಯಾವ ದಿನದಂದು ಉಪವಾಸ ಆರಂಭಿಸಬೇಕು ಮತ್ತು ಅಂತ್ಯಗೊಳಿಸಬೇಕು. ಈ ಪೋಸ್ಟ್ ಮೂಲಕ ಪೆರುಮಾಳ್ಗೆ ಯಾವ ದಿನ ಎದ್ದೇಳಬೇಕು ಮತ್ತು ಪೂಜಿಸಬೇಕು ಎಂಬ ಆಧ್ಯಾತ್ಮಿಕ ಮಾಹಿತಿಯನ್ನು ನಾವು ತಿಳಿದುಕೊಳ್ಳುತ್ತೇವೆಯೇ? ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು…

Read More