Author: kannadanewsnow57

ಬೆಂಗಳೂರು : ರಾಜ್ಯದ ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರು ಮತ್ತು ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ದಿನಾಂಕ: 22.01.2024 ರ ಸರ್ಕಾರದ ಪತ್ರದಲ್ಲಿ ಅನುದಾನಿತ ಪ್ರೌಢ ಶಾಲಾ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ವಿಸ್ತರಿಸಿದಲ್ಲಿ ಆಡಳಿತಾತ್ಮಕವಾಗಿ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ರಜೆ ಸೌಲಭ್ಯವನ್ನು ವಿಸ್ತರಿಸಲು ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರೇ ಸ್ವಂತ ಸಂಪನ್ಮೂಲದಿಂದಲೇ ಒದಗಿಸಿಕೊಂಡು ಅನುದಾನಿತ ಶಾಲಾ ಮಹಿಳಾ ನೌಕರರಿಗೆ ಶಿಶುವಾಲನೆ ರಜೆ ಮಂಜೂರು ಮಾಡುವ ಬಗ್ಗೆ ಕ್ರಮ ವಹಿಸುವಂತೆ ತಿಳಿಸಲಾಗಿದೆ. ಸದರಿ ಪತ್ರವನ್ನು ಈ ಪತ್ರದೊಂದಿಗೆ ಅನುಬಂಧಿಸಿ ಕಳುಹಿಸುತ್ತಾ ಸರ್ಕಾರದ ಪತ್ರದಲ್ಲಿ ತಿಳಿಸಿರುವಂತೆ ಕ್ರಮ ವಹಿಸಲು ತಿಳಿಸಿದೆ.

Read More

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ,ಗದಗ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿ, ಗದಗ ಬೆಟಗೇರಿ ಸೇರಿದಂತೆ ಹಲವರು ಮನೆಗಳು, ತೋಟ,ದ ಮನೆ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಗದಗ ಬೆಟಗೇರಿ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಅವರ ಮನೆ ಮೇಲೂ ಲೋಕಾಯುಕ್ತ ದಾಳಿಯಾಗಿದೆ. ಗದಗ -ಬೆಟಗೇರಿ ನಗರಸಭೆ ಇಂಜಿನಿಯರ್ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಕಚೇರಿ, ತೋಟದ ಮನೆ ಮೇಲೆ ದಾಳಿ ನಡೆದಿದೆ. ಗದಗ, ಗಜೇಂದ್ರಗಢ, ಬಾಗಲಕೋಟೆ ಸೇರಿದಂತೆ 5 ಕಡೆ ದಾಳಿ ನಡೆಸಲಾಗಿದೆ ಬಳ್ಳಾರಿ ರಾಮಾಂಜನೇಯ ನಗರದಲ್ಲಿರುವ ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ನಿವಾಸದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.…

Read More

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ,ಗದಗ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು, ಬಳ್ಳಾರಿ, ಗದಗ ಬೆಟಗೇರಿ ಸೇರಿದಂತೆ ಹಲವರು ಮನೆಗಳು, ತೋಟ,ದ ಮನೆ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಗದಗ ಬೆಟಗೇರಿ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಅವರ ಮನೆ ಮೇಲೂ ಲೋಕಾಯುಕ್ತ ದಾಳಿಯಾಗಿದೆ. ಗದಗ -ಬೆಟಗೇರಿ ನಗರಸಭೆ ಇಂಜಿನಿಯರ್ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬಳ್ಳಾರಿ ರಾಮಾಂಜನೇಯ ನಗರದಲ್ಲಿರುವ ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ನಿವಾಸದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಲೋಕೇಶ್ ನಿವಾಸ ಅವರ ಸಂಬಂಧಿಕರು, ಸ್ನೇಹಿತರ ನಿವಾಸಗಳ ಮೇಲೆಯೂ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ…

Read More

ನವದೆಹಲಿ : ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಶೀಘ್ರವೆ ಅಡುಗೆ ಎಣ್ಣೆ ಸೇರಿದಂತೆ ಹಲವು ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕಳೆದ ತ್ರೈಮಾಸಿಕದಲ್ಲಿ ಬೆಲೆ ಏರಿಕೆ ಮಾಡಿದ್ದ ಎಫ್‌ಎಂಸಿಜಿ ಕಂಪನಿಗಳು ಮತ್ತೆ ತಮ್ಮ ಉತ್ಪನ್ನಗಳ ಬೆಲೆ ಏರಿಕೆ ಮಾಡಲು ಸಿದ್ಧತೆ ನಡೆಸಿವೆ. ಇದಕ್ಕೆ ದೊಡ್ಡ ಕಾರಣವೆಂದರೆ ಏಪ್ರಿಲ್‌ನಿಂದ ಇಲ್ಲಿಯವರೆಗೆ ತಾಳೆ ಎಣ್ಣೆ, ತೆಂಗಿನಕಾಯಿ, ಚಹಾ, ಕೋಕೋ ಮತ್ತು ಕಾಫಿಯಂತಹ ಕಚ್ಚಾ ವಸ್ತುಗಳ ಬೆಲೆಗಳು ಶೇಕಡಾ 35 ರಿಂದ 175 ರಷ್ಟು ಹೆಚ್ಚಾಗಿದೆ. ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಅವುಗಳ ಬೆಲೆಗಳು ಮತ್ತೊಮ್ಮೆ 30 ಪ್ರತಿಶತದಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಜನವರಿ-ಮಾರ್ಚ್ ಅವಧಿಯಲ್ಲಿ ಅನೇಕ ಎಫ್‌ಎಂಸಿಜಿ ಕಂಪನಿಗಳು ತಮ್ಮ ಉತ್ಪನ್ನಗಳ ಬೆಲೆಗಳನ್ನು ಹೆಚ್ಚಿಸಲು ಯೋಜಿಸುತ್ತಿವೆ ಎಂದು ನುವಾಮಾ ಇನ್‌ಸ್ಟಿಟ್ಯೂಷನಲ್ ಇಕ್ವಿಟೀಸ್ ವರದಿ ಹೇಳುತ್ತದೆ. ಕಳೆದ ಮೂರು ತಿಂಗಳಲ್ಲಿ ಸಾಮಾನ್ಯ ಗೃಹೋಪಯೋಗಿ ವಸ್ತುಗಳ ಬೆಲೆ ಶೇ.10ರಷ್ಟು ಏರಿಕೆಯಾಗಿದೆ ಎಂದು ಹೇಳಲಾಗಿದೆ. ಇದು ಆಹಾರ ಹಣದುಬ್ಬರದ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ,…

Read More

ನವದೆಹಲಿ : ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) ಪ್ರಮುಖ ಟೆಲಿಕಾಂ ಕಂಪನಿಗಳಾದ Airtel, BSNL, Jio ಮತ್ತು Vodafone Idea ಕೈಗೆಟುಕುವ ಧ್ವನಿ ಕರೆ ಮತ್ತು SMS ಯೋಜನೆಗಳನ್ನು ಪ್ರಾರಂಭಿಸಲು ಸ್ಪಷ್ಟ ಸೂಚನೆಗಳನ್ನು ನೀಡಿದೆ. 2G ಬಳಕೆದಾರರಿಗೆ ವಿಶೇಷ ಯೋಜನೆಗಳು 2G ಬಳಕೆದಾರರಿಗೆ ಡೇಟಾ ಉಚಿತ ಯೋಜನೆಗಳನ್ನು ಪರಿಚಯಿಸಲು TRAI ಆದೇಶಿಸಿದೆ, ಇದು ದೇಶಾದ್ಯಂತ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಪರಿಹಾರವನ್ನು ನೀಡುತ್ತದೆ. ಪ್ರಸ್ತುತ ರೀಚಾರ್ಜ್ ಯೋಜನೆಗಳಲ್ಲಿ ಡೇಟಾ ಪ್ಯಾಕ್‌ಗಳನ್ನು ಸೇರಿಸಿರುವುದರಿಂದ, 2G ನೆಟ್‌ವರ್ಕ್‌ಗಳಲ್ಲಿ ಹಳೆಯ ವೈಶಿಷ್ಟ್ಯದ ಫೋನ್‌ಗಳ ಬಳಕೆದಾರರು ಹೆಚ್ಚು ಖರ್ಚು ಮಾಡಬೇಕಾಗುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು, TRAI ವಿಶೇಷ ಸುಂಕದ ವೋಚರ್‌ಗಳನ್ನು (STV) ರಚಿಸಲು ನಿರ್ದೇಶಿಸಿದೆ, ಇದು ಧ್ವನಿ ಕರೆ ಮತ್ತು SMS ಗೆ ಮಾತ್ರ ಇರುತ್ತದೆ. ಡೇಟಾ ಬಳಕೆಯನ್ನು ಉತ್ತೇಜಿಸುವುದು ಅಗತ್ಯವಾಗಿದೆ, ಆದರೆ ಅದನ್ನು ಗ್ರಾಹಕರ ಮೇಲೆ ಹೇರಬಾರದು ಎಂದು ಟ್ರಾಯ್ ಅಧ್ಯಕ್ಷ ಅನಿಲ್ ಕುಮಾರ್ ಲಹೋಟಿ ಹೇಳಿದ್ದಾರೆ. ಗ್ರಾಹಕರು ತಮ್ಮ ಅಗತ್ಯಗಳಿಗೆ ಅನುಗುಣವಾಗಿ ಸೇವೆಗಳನ್ನು ಆಯ್ಕೆ…

Read More

ಟಿಬೆಟ್: ಮಂಗಳವಾರ ಬೆಳಗ್ಗೆ ಟೆಬೆಟ್ ನಲ್ಲಿ ಸಂಭವಿಸಿದ 6.8 ತೀವ್ರತೆಯ ಭೂಕಂಪದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 128 ಕ್ಕೆ ಏರಿದೆ ಎಂದು ಚೀನಾದ ಏಜೆನ್ಸಿ ಕ್ಸಿನ್ಹುವಾವನ್ನು ಉಲ್ಲೇಖಿಸಿ ಎಎಫ್ಪಿ ವರದಿ ಮಾಡಿದೆ. ಭೂಕಂಪದಿಂದಾಗಿ ಹಲವಾರು ಮನೆಗಳಿಗೆ ಹಾನಿಯಾಗಿದ್ದು, ಬೀದಿಗಳಲ್ಲಿ ಕಸದ ರಾಶಿ ಬಿದ್ದಿದ್ದು, ಸುಮಾರು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಂಜರು ಮತ್ತು ವಿರಳ ಜನಸಂಖ್ಯೆಯ ಪ್ರದೇಶದಲ್ಲಿ 1,000 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಚೀನಾದ ಪ್ರಸಾರಕ ಸಿಸಿಟಿವಿಯನ್ನು ಉಲ್ಲೇಖಿಸಿ ಎಪಿ ವರದಿ ಮಾಡಿದೆ. ಪ್ರಸಾರಕರು ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಕಟ್ಟಡದ ಅವಶೇಷಗಳು ಬೀದಿಗಳಲ್ಲಿ ಹರಡಿಕೊಂಡಿವೆ ಮತ್ತು ಕಾರುಗಳು ಪುಡಿಪುಡಿಯಾಗಿವೆ. ಮಂಗಳವಾರ ಸಂಜೆ ಟಿಬೆಟ್ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಆಫ್ ಸೀಸ್ಮಾಲಜಿ (ಎನ್ಸಿಎಸ್) ವರದಿ ಮಾಡಿದೆ. ಭಾರತೀಯ ಕಾಲಮಾನ ಸಂಜೆ 5:52 ಕ್ಕೆ ಈ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ ಎಂದು ಎನ್ಸಿಎಸ್ ತಿಳಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪವು 16 ಕಿಲೋಮೀಟರ್ ಆಳದಲ್ಲಿ…

Read More

ಮೈಸೂರು: ಹೊಸ ವರ್ಷದ ಮೈಸೂರು ಜೈಲಿನಲ್ಲಿ ಎಸೆನ್ಸ್ ಸೇವಿಸಿದ್ದ ಮತ್ತೊಬ್ಬ ಕೈದಿ ಸಾವನ್ನಪ್ಪಿದ್ದು, ಈ ಮೂಲಕ ಸಾವನ್ನಪ್ಪಿದ ಕೈದಿಗಳ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ. ಹೊಸ ವರ್ಷದ ದಿನ ಕೇಕ್ ತಯಾರಿಸಲು ಎಸೆನ್ಸ್ ತರಿಸಲಾಗಿದ್ದು, ಜೈಲಿನ ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕೈದಿಗಳು ಕೇಕ್ ತಯಾರಿಸಲು ಇಟ್ಟಿದ್ದ ಎಸೆನ್ಸ್ ಕುಡಿದಿದ್ದರು. ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಜೈಲಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ನಿನ್ನೆ ನಿನ್ನೆ ಮೈಸೂರಿನ ಸಾತಗಳ್ಳಿಯ ಮಾದೇಶ್ ಮೃತಪಟ್ಟಿದ್ದರು. ಇಂದು ಚಾಮರಾಜನಗರದ ಕೈದಿ ನಾಗರಾಜ್ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ್ದಾರೆ. ಮತ್ತೊಬ್ಬ ಕೈದಿ ರಮೇಶ್ ಆರೋಗ್ಯ ಸ್ಥಿತಿಯು ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಆಭರಣ ಪ್ರಿಯರಿಗೆ ಬಿಗ್ ಶಾಕ್, ದೇಶಾದ್ಯಂತ ಇಂದು ಮತ್ತೆ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಶುದ್ಧ ಚಿನ್ನದ ದರ 10 ಗ್ರಾಂಗೆ 700 ರೂ. ಏರಿಕೆಯಾಗಿ 79 700 ರೂ.ಗೆ ತಲುಪಿದೆ. ಚಿನ್ನಾಭರಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳ ತಾಜಾ ಖರೀದಿಯಿಂದಾಗಿ ದೆಹಲಿಯಲ್ಲಿ ಚಿನ್ನದ ದರ 10 ಗ್ರಾಂ ಗೆ 700 ರೂ. ಏರಿಕೆಯಾಗಿದ್ದು, 79,300 ರೂ.ಗೆ ಮಾರಾಟವಾಗಿದೆ. ಬೆಳ್ಳಿ ದರ ಕೆಜಿಗೆ 1300 ರೂ.ಏರಿಕೆಯಾಗಿದ್ದು, 92,000 ರೂ.ಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರ ಒಂದು ಗ್ರಾಂಗೆ 7215 ರೂ. ಇದ್ದು 10 ಗ್ರಾಂ ಗೆ 72,150 ರೂ. ಆಗಿದೆ. 24 ಕ್ಯಾರೆಟ್ ನ ಚಿನ್ನದ ದರ 10 ಗ್ರಾಂ ಗೆ 78210 ರೂ. ಇದೆ. ಈ ಮೂಲಕ ದಿನದಿಂದ ದಿನಕ್ಕೆ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ ಬೆಲೆ ಏರಿಕೆಯಾಗುತ್ತಿದ್ದು, ಆಭರಣ ಪ್ರಿಯರಿಗೆ ಶಾಕ್ ಎದುರಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಎಸ್ಕಾಂ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಎಸ್ಕಾಂ ಸಿಬ್ಬಂದಿಗಳಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಎಂಜಿನಿಯರ್ ಗಳ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಕಂಪನಿ (ಸೆಸ್ಕ್) ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ. ಇತರೆ ಎಸ್ಕಾಂಗಳಲ್ಲೂ ಶೀಘ್ರವೆ ಈ ಸೌಲಭ್ಯ ಕಲ್ಪಿಸಲಾಗುವುದು ಎಂದರು. ಇಂಧನ ಇಲಾಖೆಯ ಎಲ್ಲ ಎಸ್ಕಾಂ ಸಿಬ್ಬಂದಿಗೂ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಸದ್ಯದಲ್ಲೇ ಜಾರಿ ಮಾಡುವಂತೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರಿಗೆ ಸಚಿವರು ಸೂಚನೆ ನೀಡಿದ್ದಾರೆ.

Read More

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಕುಂದು–ಕೊರತೆಗಳು ಹಾಗೂ ವಿವಿಧ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಿ ನಿಮ್ಮ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಪಡೆಯಬಹುದು. ಈ ಸಮಸ್ಯೆಗಳಿಗೆ ತಕ್ಷಣವೇ ಸಿಗಲಿದೆ ಪರಿಹಾರ ಗ್ರಾಮ ಪಂಚಾಯಿತಿ ಆಸ್ತಿ ತೆರಿಗೆ ಪಾವತಿ ಜನನ ಹಾಗೂ ಮರಣ ಪ್ರಮಾಣ ಪತ್ರ ಮಾಹಿತಿ ನಿಮ್ಮ ಗ್ರಾಮದ ಕುಡಿಯು ನೀರಿನ ಸಮಸ್ಯೆ ಮಹತ್ಮಾ ಗಾಂಧಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಪಡೆಯಲು ಬೇಡಿಕೆ ಸಲ್ಲಿಸಲು ನಿಮ್ಮ ಗ್ರಾಮದ ರಸ್ತೆ ದುರಸ್ಥಿ ಮಾಡಿಸಲು ದೂರು ನೀಡಬೇಕೇ? ಮೇಲ್ಕಂಡ ಎಲ್ಲ ಸಮಸ್ಯೆಗಳಿಗೆ ದೂರು ಸಲ್ಲಿಸಲು ಸಾರ್ವಜನಿಕರು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಿ, ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾರ್ವಜನಿಕರು ಕರೆ ಮಾಡಬಹುದು.

Read More