Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ರೈತರಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಿಹಿಸುದ್ದಿ ನೀಡಿದ್ದು, ಸೋಲಾರ್ ವಿದ್ಯುತ್ ಉತ್ಪಾದನೆ ಹೆಚ್ಚಾಗುತ್ತಿರುವುದರಿಂದ ಹಗಲು ವೇಳೆಯೇ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸೂಚಿಸಿದ್ದಾರೆ. ವಿದ್ಯುತ್ ಉತ್ಪಾದನೆ, ಖರೀದಿ/ವಿನಿಮಯ ಮತ್ತು ಪ್ರಸರಣ ಕುರಿತಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್), ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ (ಪಿಸಿಕೆಎಲ್) ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಸಚಿವರು, “ಸಮರ್ಪಕ ವಿದ್ಯುತ್ ಪೂರೈಕೆ ಜತೆಗೆ ಅಗತ್ಯ ಸಂದರ್ಭದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ ಮೂಲಕ ಬೇಡಿಕೆ ಮತ್ತು ಪೂರೈಕೆ ನಡುವೆ ಅಂತರ ಇಲ್ಲದಂತೆ ನೋಡಿಕೊಳ್ಳಬೇಕು”, ಎಂದು ಸೂಚಿಸಿದರು. ಕೆಪಿಸಿಎಲ್ ನ ಉಷ್ಣ ವಿದ್ಯುತ್ ಸ್ಥಾವರಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನ ನಡೆಸಿದ ಅವರು, ಕಳೆದ ಬೇಸಿಗೆಯಲ್ಲಿ ಸರಾಸರಿ 3,600 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಮೂಲಕ ಉಷ್ಣ ವಿದ್ಯುತ್ ಸ್ಥಾವರಗಳು ದಾಖಲೆ ನಿರ್ಮಿಸಿದ್ದವು.ಈ ಬಾರಿ…
ಬೆಂಗಳೂರು : ರಾಜ್ಯ ಸಾರಿಗೆ ಇಲಾಖೆ ಇದೀಗ ವಾಹನ ಸವಾರರಿಗೆ ಮತ್ತೊಮ್ಮೆ ಬಿಗ್ ರಿಲೀಫ್ ನೀಡಿದ್ದು, HSRP ನಂಬರ್ ಪ್ಲೇಟ್ ಅಳವಡಿಕೆಗೆ ವಾಹನ ಮಾಲೀಕರಿಗೆ ಇದೀಗ ರಾಜ್ಯ ಸಾರಿಗೆ ಇಲಾಖೆಯು ಜನವರಿ 31 ರವರೆಗೆ ವಿಸ್ತರಿಸಿದೆ. ಜನವರಿ 31ರವರೆಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಇದುವರೆಗೂ ಆರು ಬಾರಿ ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ನೀಡಿತ್ತು. ಇದೀಗ ಮತ್ತೊಮ್ಮೆ ಅವಕಾಶ ನೀಡಿದ್ದು, ಜನವರಿ 31 ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ರಾಜ್ಯ ಸಾರಿಗೆ ಇಲಾಖೆ ಗಡು ವಿಸ್ತರಿಸಿ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಮುಂದಿನ ಆದೇಶದವರೆಗೂ ವಾಹನ ಮಾಲೀಕರ ಮೇಲೆ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಈ ಹಿಂದೆ ಆದೇಶ ನೀಡಿತು. ಕಳೆದ ಒಂದುವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಎಚ್ಎಸ್ಆರ್ಪಿ ನಂಬರ್ ಅಳವಡಿಕೆ ಮಾಡಲಾಗಿದೆ ಅಲ್ಲದೆ ಇನ್ನೂ 1.40 ಕೋಟಿ…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿದ್ಯುತ್ ಉತ್ಪಾದನೆ, ಖರೀದಿ/ವಿನಿಮಯ ಮತ್ತು ಪ್ರಸರಣ ಕುರಿತಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್), ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ (ಪಿಸಿಕೆಎಲ್) ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಸಚಿವರು, “ಸಮರ್ಪಕ ವಿದ್ಯುತ್ ಪೂರೈಕೆ ಜತೆಗೆ ಅಗತ್ಯ ಸಂದರ್ಭದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ ಮೂಲಕ ಬೇಡಿಕೆ ಮತ್ತು ಪೂರೈಕೆ ನಡುವೆ ಅಂತರ ಇಲ್ಲದಂತೆ ನೋಡಿಕೊಳ್ಳಬೇಕು”, ಎಂದು ಸೂಚಿಸಿದರು. ಕೆಪಿಸಿಎಲ್ ನ ಉಷ್ಣ ವಿದ್ಯುತ್ ಸ್ಥಾವರಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನ ನಡೆಸಿದ ಅವರು, ಕಳೆದ ಬೇಸಿಗೆಯಲ್ಲಿ ಸರಾಸರಿ 3,600 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಮೂಲಕ ಉಷ್ಣ ವಿದ್ಯುತ್ ಸ್ಥಾವರಗಳು ದಾಖಲೆ ನಿರ್ಮಿಸಿದ್ದವು.ಈ ಬಾರಿ ಅದಕ್ಕಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಿ ಹೊಸ ದಾಖಲೆ ಸ್ಥಾಪಿಸಬೇಕು. ಅದಕ್ಕಾಗಿ ಎಲ್ಲಾ…
ದಾವಣಗೆರೆ : ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ನಡೆಸುವ ರಾಜ್ಯ ಮಟ್ಟದ ಯುವಜನೋತ್ಸವ ಜನವರಿ 5 ಮತ್ತು 6 ರಂದು ನಡೆಯಲಿದ್ದು ನಗರದ ಎಂ.ಬಿ.ಎ. ಮೈದಾನದ ಮುಖ್ಯ ವೇದಿಕೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕಾರ್ಯಕ್ರಮ ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು. ಯುವಜನೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸೇರಿದಂತೆ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು ಮತ್ತು ಯುವ ಪ್ರಶಸ್ತಿ ಪುರಷ್ಕøತರು ಭಾಗವಹಿಸುವರು. 7 ಸ್ಪರ್ಧೆಗಳು; ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ 7 ಸ್ಪರ್ಧೆಗಳಿದ್ದು ಪ್ರತ್ಯೇಕವಾಗಿ ನಡೆಯಲಿವೆ. ಜಾನಪದ ನೃತ್ಯ ಸ್ಪರ್ಧೆಯು ಬಿಐಇಟಿ ಕಾಲೇಜಿನ ಎಸ್.ಎಸ್.ಎಂ. ಸಾಂಸ್ಕøತಿಕ ಸಭಾಂಗಣ, ಜಾನಪದ ಗೀತೆ ಸ್ಪರ್ಧೆಯು ಬಾಪೂಜಿ ಎಂಬಿಎ ಕಾಲೇಜು ಸಭಾಂಗಣ, ವಿಜ್ಞಾನ ವಸ್ತು ಪ್ರದರ್ಶನ ಎಂಬಿಎ ಮೈದಾನದಲ್ಲಿನ ಎಸ್.ಎಸ್. ಪಬ್ಲಿಕ್ ಸ್ಕೂಲ್, ಕವನ ರಚನೆ ಎಂಬಿಎ ಕಾಲೇಜಿನ ಕೊಠಡಿ 1, ಕಥೆ ಬರೆಯುವುದು ಇಲ್ಲಿನ ಕೊಠಡಿ 2 ರಲ್ಲಿ ಹಾಗೂ ಚಿತ್ರಕಲೆ ಸ್ಪರ್ಧೆ ಮತ್ತು…
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಡಿಸೆಂಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 35 ಕೆ.ಜಿ ಅಕ್ಕಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 5 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು. ಪಡಿತರ ಚೀಟಿದಾರರ ಖಾತೆಗೆ ನೇರ ನಗದು ವರ್ಗಾವಣೆ ಸಂಬಂಧಿಸಿದಂತೆ, ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯನ್ನು ಮಾಡಿಸಿಕೊಳ್ಳಬೇಕು ಹಾಗೂ ಹಣ ಪಡೆಯಲು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಮ್ಮ ಬ್ಯಾಂಕ್ ಶಾಖೆಗಳಿಗೆ ಹಾಗೂ ಸ್ಥಳೀಯ ಆಹಾರ ನಿರೀಕ್ಷರನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು ಎಂದು ನ್ಯಾಮತಿ ತಹಶೀಲ್ದಾರ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ‘ಯುವನಿಧಿ’ ಯೋಜನೆಯಲ್ಲಿ 2022-23 ಮತ್ತು 2023-24 ನೇ ಸಾಲಿನಲ್ಲಿ ಸ್ನಾತಕ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ದಿ: 06-01-2025 ರಿಂದ 20-01-2025 ರವರೆಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ಹೆಸರು ನೋಂದಾಯಿಸಿ ಪ್ರಯೋಜನ ಪಡೆದುಕೊಳ್ಳಬಹುದು. ಪದವೀಧರರಿಗೆ ಪ್ರತಿ ತಿಂಗಳು ರೂ.3000/- ಹಾಗೂ ಡಿಪ್ಲೊಮಾ ಪದವೀಧರರಿಗೆ ರೂ.1500 ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನ ಪೂರೈಸಿ ಹೆಸರನ್ನು ನೋಂದಾಯಿಸಿಕೊAಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ನಂತರ ಪ್ರತಿ ತಿಂಗಳು ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಮಾಹೆಯಾನ ತಾನು ನಿರುದ್ಯೋಗಿಯೆಂದು, ಉನ್ನತ ವ್ಯಾಸಂಗ ಮುಂದುವರೆಸುತ್ತಿಲ್ಲವೆAದು ಹಾಗೂ ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಸ್ವಯಂ ಘೋಷಣೆ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಮುಂದಿನ ಕಂತು ಪಾವತಿಸಲಾಗುವುದು.…
ಶಿವಮೊಗ್ಗ : ಇತ್ತೀಚೆಗೆ ವಿವಿಧ ರೈತರಿಗೆ ಕೆಲವು ಅನಾಮಧೇಯ ಮತ್ತು ಅನಧಿಕೃತ ವ್ಯಕ್ತಿಗಳಿಂದ ನಾವು ಕೃಷಿ ಇಲಾಖೆಯಿಂದ ಕರೆ ಮಾಡುತ್ತಿದ್ದು, ಸ್ಪ್ರಿಂಕ್ಲರ್ ಸೆಟ್ ಮತ್ತು ಟಾರ್ಪಾಲಿನ್ ಅನ್ನು ನಿಮಗೆ ನೀಡಲಾಗುತ್ತದೆ, ಇದಕ್ಕೆ ನೀವು ಫೋನ್‌ಪೇ, ಅಥವಾ ಗೂಗಲ್ ಪೇ ಮೂಲಕ ಹಣವನ್ನು ಪಾವತಿಸಲು ತಿಳಿಸುತ್ತಿರುತ್ತಾರೆ. ಸದರಿ ದೂರವಾಣಿ ಸಂಖ್ಯೆ 7259260962 ಟ್ರೂಕಾಲರ್‌ನಲ್ಲಿ China Sharnago ಕೃಷಿ ಇಲಾಖೆ ಎಂದು ತೋರಿಸುತ್ತಿದೆ. ಆದರೆ ವಾಸ್ತವವಾಗಿ ಕೃಷಿ ಇಲಾಖೆಯಿಂದ ಯಾವುದೇ ಸವಲತ್ತು ಪಡೆಯಬೇಕಾದರೆ ನಿಮ್ಮ ರೈತ ಸಂಪರ್ಕ ಕೇಂದ್ರಗಳಿಗೆ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಜೊತೆಗೆ ಅರ್ಹರಿದ್ದಲ್ಲಿ ಇಲಾಖೆಯಿಂದ ಹಣ ವರ್ಗಾವಣೆಗೆ ಪತ್ರವನ್ನು ಪಡೆದು ರೈತರು ತಮ್ಮ ಖಾತೆಯಿಂದ ನೇರವಾಗಿ ಸಂಸ್ಥೆಯ ಖಾತೆಗೆ ರೈತರ ವಂತಿಕೆ ಮೊತ್ತವನ್ನು ಪಾವತಿಸಿ, ನಂತರ ಪಾವತಿಸಿದ ದಾಖಲೆಯನ್ನು ಸಲ್ಲಿಸಿದ ನಂತರವೇ ನಿಮಗೆ ಸೌಲಭ್ಯವನ್ನು ರೈತ ಸಂಪರ್ಕ ಕೇಂದ್ರದಲ್ಲಿಯೇ ವಿತರಿಸಲಾಗುವುದು. ಆದ್ದರಿಂದ ಈ ರೀತಿಯ ಅನುಮಾನಾಸ್ಪದ ಕರೆಗಳು ಬಂದಾಗ ಯಾವುದೇ ರೀತಿಯಾಗಿ ಹಣ ವರ್ಗಾವಣೆಯನ್ನು ವ್ಯಕ್ತಿಗೆ ಮಾಡಬಾರದು ಹಾಗೂ ಅಂತಹವರ ಕರೆಯನ್ನು…
ಚೆನ್ನೈ: ಅತ್ಯಾಚಾರ ಪ್ರಕರಣದ ಆರೋಪಿಗಳ ಪರವಾಗಿ ಡಿಎಂಕೆ ಸರ್ಕಾರ ವರ್ತಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ಹಾಗೂ ನಟಿ ಖುಷ್ಬೂ ಮಹಿಳಾ ಮೋರ್ಚಾ ಅಧ್ಯಕ್ಷೆ ಉಮಾರಾತಿ ನೇತೃತ್ವದಲ್ಲಿ ಶುಕ್ರವಾರ ಮಧುರೈನಲ್ಲಿ ಪ್ರತಿಭಟನೆ ನಡೆಸಲಾಯಿತು. ನಟಿ ಖುಷ್ಬೂ ಮಧುರೈನಿಂದ ಚೆನ್ನೈಗೆ ರ್ಯಾಲಿ ಮಾಡಲು ಪ್ರಯತ್ನಿಸಿದರು ಮತ್ತು ಪೊಲೀಸರ ಅನುಮತಿಯಿಲ್ಲದೆ ಈ ಪ್ರತಿಭಟನೆ ನಡೆಸಿದ್ದಕ್ಕಾಗಿ ಖುಷ್ಬೂ ಸೇರಿದಂತೆ ಎಲ್ಲರನ್ನೂ ಬಂಧಿಸಲಾಯಿತು. ಮಹಿಳಾ ಮೋರ್ಚಾ ಕಾರ್ಯಕರ್ತರು ಬೃಹತ್ ವ್ಯಾನ್‌ನಲ್ಲಿ ತೆರಳಲು ಸಿದ್ಧತೆ ನಡೆಸಿದರು. ಖುಷ್ಬೂ ಅವರು ಧ್ವಜಾರೋಹಣ ಮಾಡುವ ಮೂಲಕ ವ್ಯಾನ್ ಪ್ರಯಾಣಕ್ಕೆ ಚಾಲನೆ ನೀಡಿದರು. ಅನುಮತಿಯಿಲ್ಲದೆ ನಡೆದ ಈ ರ್ಯಾಲಿಯನ್ನು ತಡೆಯಲು ಪೊಲೀಸ್ ಪಡೆಗಳು ಸಾಕಷ್ಟು ಪ್ರಯತ್ನಿಸಿದವು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಖುಷ್ಬೂ, ಇತರ ಮಹಿಳಾ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿ ವ್ಯಾನ್‌ಗಳಲ್ಲಿ ಕರೆದೊಯ್ಯಲಾಯಿತು. ಆಂದೋಲನದಲ್ಲಿ ಭಾಗವಹಿಸಿದ್ದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ಖುಷ್ಬೂ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಎಲ್ಲೆಂದರಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ, ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್…
2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನಾಧಾರಿತ ಬೆಳೆವಿಮೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ 3584 ರೈತರಿಗೆ ರೂ.2333.01 ಲಕ್ಷ ವಿಮಾ ಮೊತ್ತವನ್ನು ಕ್ಷೇಮಾ ಇನ್ಸುರೆನ್ಸ್ ಕಂಪನಿಯರು ವಿಮಾದಾರರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನಧಾರಿತ ಬೆಳೆವಿಮೆ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಅಡಿಕೆ, ಮಾವು ಮತ್ತು ದಾಳಿಂಬೆ ಬೆಳೆಗೆ ಜಿಲ್ಲೆಯ 3648 ರೈತರು ರೂ.226.99 ಲಕ್ಷ ಪ್ರೀಮಿಯಂ ಪಾವತಿಸಿ ನೋಂದಾಯಿಸಿಕೊಂಡಿದ್ದು, ಈ ಪೈಕಿ 3584 ರೈತರಿಗೆ ರೂ.2333.01 ಲಕ್ಷ ವಿಮಾ ಮೊತ್ತವನ್ನು ಕ್ಷೇಮಾ ಇನ್ಸುರೆನ್ಸ್ ಕಂಪನಿಯರು ಜಿಲ್ಲೆ ಎಲ್ಲಾ ವಿಮಾದಾರರ ಖಾತೆಗೆ ಬಿಡುಗಡೆ ಮಾಡಿರುತ್ತಾರೆ. ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಸಹಕರಿಸಿದ ಜಿಲ್ಲೆಯ ಎಲ್ಲ ರೈತರಿಗೆ ಅಭಿನಂದನೆ ಸಲ್ಲಿಸುತ್ತಾ, ಮುಂದಿನ ದಿನಗಳಲ್ಲಿ ಈ ಯೋಜನೆ ಅನುಷ್ಟಾನ ಮಾಡಲು ಸಹಕರಿಸಲು ಕೋರಿದ್ದಾರೆ. ಮುಂದಿನ ವರ್ಷಗಳಲ್ಲಿ ಈ ಯೋಜನೆಯಡಿ ನೋಂದಾಯಿಸಿಕೊಳ್ಳುವ ರೈತರು ಯೋಜನೆಯ ಸದುಪಯೋಗ ಪಡೆಯಲು ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಕಡ್ಡಾಯವಾಗಿ ಬೆಳೆಯನ್ನು…
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಕಸದ ಲಾರಿ ಸವಾರರ ಮೇಲೆ ಹರಿದು ಹೋಗಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ನಾಜಿಯಾ ಸುಲ್ತಾನ್ ಹಾಗೂ ನಾಜಿಯಾ ಇರ್ಫಾನ್ ಎಂದು ಗುರುತಿಸಲಾಗಿದೆ. ಅಪಘಾತದ ಬೆನ್ನಲ್ಲೇ ಪೊಲೀಸರು ಕಸದ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.











