Subscribe to Updates
Get the latest creative news from FooBar about art, design and business.
Author: kannadanewsnow57
ಕಣ್ಣೂರು : ಶಾಲಾ ಬಸ್ ಪಲ್ಟಿಯಾಗಿ 5ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದು, ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರಿನ ವಳಕ್ಕೈನಲ್ಲಿ ನಡೆದಿದೆ. ಕಣ್ಣೂರಿನ ವಳಕೈ ಎಂಬಲ್ಲಿ ಬುಧವಾರ ಸಂಜೆ ಶಾಲಾ ಬಸ್ ಪಲ್ಟಿಯಾಗಿದ್ದು, 5ನೇ ತರಗತಿ ವಿದ್ಯಾರ್ಥಿನಿ ನೇದ್ಯ ಎಸ್ ರಾಜೇಶ್ ಪ್ರಾಣ ಕಳೆದುಕೊಂಡಿದ್ದು, ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕುರುಮತ್ತೂರು ಚಿನ್ಮಯ ಶಾಲೆಯ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಾದಾಗ ಬಸ್ಸಿನ ಮುಂದಿನ ಸೀಟಿನಲ್ಲಿದ್ದ ನೇದ್ಯ ಹೊರಕ್ಕೆ ಎಸೆಯಲ್ಪಟ್ಟು ವಾಹನದಡಿಯಲ್ಲಿ ಸಾವನ್ನಪ್ಪಿದ್ದಾಳೆ. ಅಪಘಾತದ ವೇಳೆ ಚಾಲಕನ ಫೋನ್‌ನಿಂದ ವಾಟ್ಸಾಪ್ ಸ್ಟೇಟಸ್ ಅಪ್‌ಲೋಡ್ ಆಗಿರುವುದು ಪತ್ತೆಯಾಗಿದೆ. ಆದ್ದರಿಂದ ಚಾಲಕ ವಾಹನ ಚಲಾಯಿಸುವಾಗ ಫೋನ್ ಬಳಸಿದ್ದು ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಬುಧವಾರ ಸಂಜೆ 4.03ಕ್ಕೆ ಅಪಘಾತ ಸಂಭವಿಸಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ಸ್ಪಷ್ಟವಾಗಿದೆ. ಇದೇ ವೇಳೆ ಚಾಲಕನ ವಾಟ್ಸ್ ಆಪ್ ನಿಂದ ಸ್ಟೇಟಸ್ ಅಪ್ ಲೋಡ್ ಆಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಇದಕ್ಕೆ ಸಾಕ್ಷಿ ಹೊರಬಿದ್ದಿದೆ. ಅಪಘಾತದ ಸಮಯ ಮತ್ತು ಸ್ಟೇಟಸ್ ಅಪ್ಲೋಡ್ ಮಾಡಿದ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಐಷರಾಮಿ ಬೈಕ್ ಶೋರೂಂಗೆ ಬೆಂಕಿ ಬಿದ್ದು, ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಮಹದೇವಪುರ ವ್ಯಾಪ್ತಿಯ ಬಿ.ನಾರಾಯಣಪುರದಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸಂಜೆ 7:30ರ ಸುಮಾರಿಗೆ ಯಮಹಾ ಬೈಕ್ ಶೋರೂಂನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಇಡೀ ಶೋರೂಂಗೆ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಬೈಕ್ ಗಳು ಸುಟ್ಟು ಕರಕಲಾಗಿವೆ. ಶೋರೂಂನಲ್ಲಿದ್ದ ಸುಮಾರು 30 ಬೈಕ್, ಹಿಂಭಾಗ ಸರ್ವೀಸ್ ಸೆಂಟರ್ ನಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಲಕ್ನೋ : ಪೊಲೀಸರು ಎಫ್ ಐಆರ್ ದಾಖಲಿಸಲು ನಿರಾಕರಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಕಚೇರಿಯ ಗೇಟ್‌ನಲ್ಲಿ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಕಚೇರಿಯ ಗೇಟ್‌ನಲ್ಲಿ ಬೆಂಕಿ ಹಚ್ಚಿಕೊಂಡು ಗಲ್ಫಾಮ್ ಎಂಬ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ವ್ಯಕ್ತಿಯನ್ನು ರಕ್ಷಿಸಲು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಎರಡು ದಿನಗಳ ಹಿಂದೆ ನನ್ನಿಂದ ಇ-ರಿಕ್ಷಾ ಮತ್ತು 2,200 ರೂ. ಪದೇ ಪದೇ ಮನವಿ ಮಾಡಿದರೂ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದರು,’’ ಎಂದು ಆರೋಪಿಸಿದರು. ಗುಲ್ಫಾಮ್ ಸರ್ಕಲ್ ಆಫೀಸರ್ (ಸಿಒ) ತನ್ನ ದೂರನ್ನು ಮುಂದುವರಿಸಿದರೆ ಡ್ರಗ್ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು. ಘಟನೆಯ ಕುರಿತು ಪೊಲೀಸರು ಸ್ಪಷ್ಟನೆ ನೀಡಿದ್ದು, ವೈಯಕ್ತಿಕ ವಿಷಯದಿಂದಾಗಿ ಗಲ್ಫಾಮ್ ಒತ್ತಡದಲ್ಲಿದ್ದ. ಒಂದು…
ಬೆಂಗಳೂರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ ಕಾರ್ಯಕ್ರಮದ” ಸೌಲಭ್ಯಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 15, 2025ರ ವರಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ https://ssp.postmatric.karnataka.gov.in ನಲ್ಲಿ ಫೆಬ್ರವರಿ 15, 2025 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಕಾರ್ಯಕ್ರಮದ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ ಸೈಟ್ https://bcwd.karnataka.gov.in ಗೆ ಭೇಟಿ ನೀಡಬಹುದು. ಇಲಾಖೆಯ ದೂರವಾಣಿ ಸಂಖ್ಯೆ : 8050770005 /080-22867628 ಇ-ಮೇಲ್ bcwdhelpline@gmail.com ಅಥವಾ ರಾಜ್ಯ ವಿದ್ಯಾರ್ಥಿವೇತನ ಇ-ಮೇಲ್ postmetrichelpadesk@karnataka.gov.in ಅಥವಾ ತಂತ್ರಾಂಶದ ಸಹಾಯವಾಣಿ ಸಂಖ್ಯೆ 1902 ಗೆ ಸಂರ್ಪಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಆಸ್ತಿ ಘೋಷಣೆ ಮಾಡದ ಜನಪ್ರತಿನಿಧಿಗಳಿಗೆ ಚುನಾವಣಾ ಆಯೋಗವು ಬಿಗ್ ಶಾಕ್ ನೀಡಿದ್ದು, ರಾಜ್ಯದ 6 ಗ್ರಾಮಪಂಚಾಯಿತಿ ಸದಸ್ಯರ ಸದಸ್ಯತ್ವವನ್ನು ರಾಜ್ಯ ಚುನಾವಣಾ ಆಯೋಗ ರದ್ದುಗೊಳಿಸಿದೆ. ಆಸ್ತಿ ಘೋಷಣೆ ಸಂಬಂಧ ಈ ಸದಸ್ಯರಿಗೆ ನೋಟಿಸ್ ನೀಡಿದಾಗಲೂ ಯಾವುದೇ ಉತ್ತರ ನೀಡದ ಹಿನ್ನೆಲೆಯಲ್ಲಿ ಈ ಕ್ರಮ ಗೊಳ್ಳಲಾಗಿದೆ. ಸದಸ್ಯತ್ವ ರದ್ದುಗೊಂಡ ಸದಸ್ಯ ಸ್ಥಾನಗಳನ್ನು ಖಾಲಿ ಎಂದೂ ಘೋಷಿಸಿದೆ. ಚಿಕ್ಕಮಗಳೂರು ಜಿಲ್ಲೆ ಅತ್ತಿಕೊಡಿಗೆ ಗ್ರಾಮ ಪಂಚಾಯಿತಿಯ ಚೈತ್ರಾ ರಘು, ಅಜ್ಜಂಪುರ ತಾಲೂಕು ಸೊಕ್ಕೆ ಗ್ರಾಮ ಪಂಚಾಯಿತಿಯ ಎಸ್.ಎಚ್.ಚಂದ್ರಶೇಖರ್, ಕಲಬುರಗಿ ಜಿಲ್ಲೆ ಅಳಂದ ಆಲೂಕು ಅಳಂಗಾ ಗ್ರಾಮ ಪಂಚಾಯಿತಿಯ ಗಣಪತಿ, ಕಮಲಾಪೂರ ತಾಲೂಕು ವ್ಹಿ.ಕೆ.ಸಲಗರ ಗ್ರಾಮ ಪಂಚಾಯಿತಿಯ ಇಸ್ಮಾಯಿಲ್ ಸಾಬ್, ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಚಿಕ್ಕಾಂಶಿ ಹೊಸೂರು ಗ್ರಾಮ ಪಂಚಾಯಿತಿಯ ಮಂಜುಳಾ ರಾಜಪ್ಪ ಹುಳ್ಳಿ ಹಾಗೂ ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ಕಳಕೇರಿ ಗ್ರಾಮ ಪಂಚಾಯಿತಿಯ ಬಿ.ವಿ. ಪ್ರಮೀಳಾ ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳಡಿ…
ಬೆಂಗಳೂರು: ಜನವರಿ 2 ರಂದು ಇಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ ಮಾಡಿದ್ದು, ಈ ವೇಳೆ ಹಲವು ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳುವುದರ ಬಗ್ಗೆ ತೀರ್ಮಾನ ಮಾಡಲಾಗುವುದು ಎನ್ನಲಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 02.01.2025, ಗುರುವಾರ ಬೆಳಿಗ್ಗೆ 11:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 1ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಅಂತ ಸೂಚನ ಪತ್ರದಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಜನವರಿ 31 ರವರೆಗೆ ಅವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಪಡಿತರ ಚೀಟಿ ತಿದ್ದುಪಡಿಗೆ ಈ ಹಿಂದೆ 2024ನೇ ಸಾಲಿನ ಡಿಸೆಂಬರ್ 31ರ ವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಈ ಅವಧಿಯನ್ನು ವಿಸ್ತರಿಸಲಾಗಿದ್ದು. ಪಡಿತರ ಚೀಟಿ ತಿದ್ದುಪಡಿ ಅವಧಿಯು 2025ನೇ ಸಾಲಿನ ಜನವರಿ ತಿಂಗಳ 31ರ ವರೆಗೆ ಇರಲಿದೆ. ಈ ಅವಧಿಯಲ್ಲಿ ನೀವು ರೇಷನ್ ಕಾರ್ಡ್ ತಿದ್ದುಪಡಿಗಳನ್ನು ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು…
ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಜನವರಿ 31 ರವರೆಗೆ ಅವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಪಡಿತರ ಚೀಟಿ ತಿದ್ದುಪಡಿಗೆ ಈ ಹಿಂದೆ 2024ನೇ ಸಾಲಿನ ಡಿಸೆಂಬರ್ 31ರ ವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಈ ಅವಧಿಯನ್ನು ವಿಸ್ತರಿಸಲಾಗಿದ್ದು. ಪಡಿತರ ಚೀಟಿ ತಿದ್ದುಪಡಿ ಅವಧಿಯು 2025ನೇ ಸಾಲಿನ ಜನವರಿ ತಿಂಗಳ 31ರ ವರೆಗೆ ಇರಲಿದೆ. ಈ ಅವಧಿಯಲ್ಲಿ ನೀವು ರೇಷನ್ ಕಾರ್ಡ್ ತಿದ್ದುಪಡಿಗಳನ್ನು ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು…
ನವದೆಹಲಿ : ದೇಶಾದ್ಯಂತ ಶಾಲಾ ಶಿಕ್ಷಣ ದಾಖಲಾತಿ 37 ಲಕ್ಷಕ್ಕೂ ಹೆಚ್ಚು ಕಡಿಮೆಯಾಗಿದೆ. SC, ST, OBC ಮತ್ತು ಬಾಲಕಿಯರ ವಿಭಾಗಗಳಲ್ಲಿ ಈ ಕುಸಿತವು ಅತ್ಯಧಿಕವಾಗಿದೆ. 2022-23 ವರ್ಷಕ್ಕೆ ಹೋಲಿಸಿದರೆ 2023-24 ರಲ್ಲಿ ಶಾಲಾ ಶಿಕ್ಷಣದ ವಿವಿಧ ವಿಭಾಗಗಳಲ್ಲಿ ಈ ಕುಸಿತ ದಾಖಲಾಗಿದೆ. ಸೆಕೆಂಡರಿ ಅಡಿಯಲ್ಲಿ, 9 ನೇ ತರಗತಿಯಿಂದ 12 ನೇ ತರಗತಿಯವರೆಗಿನ ಈ ಕುಸಿತವು 17 ಲಕ್ಷಕ್ಕಿಂತ ಹೆಚ್ಚು. ಆದರೆ, ಪೂರ್ವ ಪ್ರಾಥಮಿಕಕ್ಕೆ ದಾಖಲಾತಿಯಲ್ಲಿ ಹೆಚ್ಚಳವಾಗಿದೆ. ಹೈಯರ್ ಸೆಕೆಂಡರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ 37.45 ಲಕ್ಷ ಕುಸಿತವಾಗಿದೆ. ಶಿಕ್ಷಣ ಸಚಿವಾಲಯದ ಇಂಟಿಗ್ರೇಟೆಡ್ ಡಿಸ್ಟ್ರಿಕ್ಟ್ ಎಜುಕೇಶನ್ ಇನ್ಫರ್ಮೇಷನ್ ಸಿಸ್ಟಮ್ (ಯು-ಡಿಐಎಸ್ಇ ಪ್ಲಸ್) ವರದಿಯಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಲಾಗಿದೆ. ಇದರ ಪ್ರಕಾರ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ 37.45 ಲಕ್ಷ ಇಳಿಕೆಯಾಗಿದೆ. 2023-24ನೇ ಸಾಲಿನಲ್ಲಿ ಒಟ್ಟು ದಾಖಲಾತಿ 24.80 ಕೋಟಿ. ಈ ಹಿಂದೆ 2022-23ನೇ ಸಾಲಿನಲ್ಲಿ 25.17 ಕೋಟಿ ಹಾಗೂ 2021-22ರಲ್ಲಿ ಸುಮಾರು 26.52 ಕೋಟಿ ಹೀಗಾಗಿ,…
ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ರಾಜ್ಯದ ಜನತೆಗೆ ಇದೀಗ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಲು ಮುಂದಾಗಿದೆ. ಸಂಕ್ರಾಂತಿ ಬಳಿಕ KSRTC ಬಸ್ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹೌದು ಈ ಕುರಿತಂತೆ ಈಗಾಗಲೇ ಈ ಹಿಂದೆ ಶೇ. 25 ರಷ್ಟು ಟಿಕೆಟ್ ದರ ಏರಿಕೆಗೆ ಎಲ್ಲಾ ಸಾರಿಗೆ ನಿಗಮಗಳು ಮನವಿ ಮಾಡಿದ್ದವು. ಶೇ.25 ರಷ್ಟು ಅಲ್ಲದಿದ್ದರೂ, ಅದರ ಅರ್ಧದಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.ಸಂಕ್ರಾಂತಿ ನಂತರ ಟಿಕೆಟ್ ದರದ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿಎಂ ಜೊತೆ ಸಾರಿಗೆ ನೌಕರರ ಸಂಘಟನೆಗಳ ಸಭೆಯಲ್ಲಿ ಪ್ರಸ್ತಾಪವಾಗಬಹುದು ಎನ್ನಲಾಗಿದೆ. ಪೆಟ್ರೋಲ್-ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಅದರೆ, ಕಳೆದ ನಾಲ್ಕೈದು ವರ್ಷದಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಇಂಧನ ದರ ನಾಲ್ಕೈದು ವರ್ಷದಲ್ಲಿ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಗೆ ನಾಲ್ಕೂ ನಿಗಮಗಳು ಮನವಿ…













