Author: kannadanewsnow57

ಬೆಳಗಾವಿ : 11 ಜೂನ್ 2023 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಗೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ದೊರೆತಿದೆ. ರಾಜ್ಯ ಸರ್ಕಾರದಿಂದ ನವೆಂಬರ್ 2024ರ ವರೆಗೆ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆಯಡಿ ರೂ.6543 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಧಾನ ಸಭೆಯಲ್ಲಿ ಮಾಹಿತಿ ನೀಡಿದರು.  ಬೆಳಗಾವಿ ಸುವರ್ಣ ಸೌಧದಲ್ಲಿ ಜರುಗುತ್ತಿರುವ ಚಳಿಗಾಲ ಅಧಿವೇಶÀನದಲ್ಲಿ, ಸೋಮವಾರ ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದ ವೇಳೆ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಪರವಾಗಿ ಸಚಿವ ಸಂತೋಷ್ ಲಾಡ್ ಉತ್ತರಿಸಿದರು.  ಶಕ್ತಿ ಯೋಜನೆ ಜಾರಿಯಾದಾಗಿನಿಂದ ನಾಲ್ಕು ನಿಗಮದ ಬಸ್‌ಗಳಲ್ಲಿ ಪ್ರತಿನಿತ್ಯ 1.16 ಕೋಟಿ ಜನರು ಪ್ರಯಾಣ ಮಾಡುತ್ತಿದ್ದಾರೆ. ಸರ್ಕಾರ ಶಕ್ತಿಯೋಜನೆಯಡಿ ರೂ.8237 ಕೋಟಿ ಅನುದಾನವನ್ನು ಮಂಜೂರು ಮಾಡಿದೆ. ಇದರಲ್ಲಿ ರೂ.6543 ಕೋಟಿ ಈಗಾಗಲೇ ನಿಗಮಗಳಿಗೆ ಪಾವತಿ ಮಾಡಿದ್ದು, ಉಳಿದ 1694 ಕೋಟಿ ಹಣವನ್ನು ಹಂತ ಹಂತವಾಗಿ ನಿಗಮಗಳಿಗೆ ನೀಡಲಾಗುವುದು ಎಂದರು. ಸಾರಿಗೆ ನಿಗಮದ ನೌಕರರೊಂದಿಗೆ…

Read More

ಬೆಳಗಾವಿ : ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ರಚಿಸಬೇಕು ಎನ್ನುವ ಬೇಡಿಕೆ ನ್ಯಾಯಯುತವಾಗಿದ್ದು, ಸೂಕ್ತ ಸಂದರ್ಭದಲ್ಲಿ ಸರ್ಕಾರ ಈ ಬಗ್ಗೆ ನಿರ್ಣಯ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಸೋಮವಾರ ಸುವರ್ಣ ಸೌಧ ಜರುಗುತ್ತಿರುವ ಅಧಿವೇಶನದ ವಿಧಾನಸಭೆಯಲ್ಲಿ ಜರುಗಿದ ಪ್ರಶ್ನೋತ್ತರ ಕಲಾಪವೇಳೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಕಂದಾಯ ಸಚಿವರು ಉತ್ತರ ನೀಡಿದರು. ಶಾಸಕಿ ಶಶಿಕಲಾ ಜೊಲ್ಲೆ ಅವರು ಮಾತನಾಡಿ, ರಾಜ್ಯದಲ್ಲಿಯೇ ಬೆಳಗಾವಿ ಜಿಲ್ಲೆಯು ಭೌಗೋಳಿಕವಾಗಿ ಅತಿ ದೊಡ್ಡ ಜಿಲ್ಲೆಯಾಗಿದೆ.  ಜಿಲ್ಲೆಯು 55 ಲಕ್ಷ ಜನಸಂಖ್ಯೆ ಹೊಂದಿದ್ದು, 18 ವಿಧಾನಸಭಾ ಕ್ಷೇತ್ರಗಳು, 15 ತಾಲ್ಲೂಕುಗಳನ್ನು ಹೊಂದಿದೆ, ಅಲ್ಲದೆ 2 ಕ್ಕಿಂತ ಹೆಚ್ಚು ಲೋಕಸಭಾ ಕ್ಷೇತ್ರವನ್ನು ಕೂಡ ಒಳಗೊಂಡಿದೆ.  ಜಿಲ್ಲೆಯ ಅಥಣಿ ತಾಲ್ಲೂಕಿನ ಕೊನೆಯ ಭಾಗದಿಂದ ಜಿಲ್ಲಾ ಕೇಂದ್ರಕ್ಕೆ 200 ಕಿ.ಮೀ. ಗೂ ಹೆಚ್ಚು ದೂರವಿದ್ದು, ಜನರು ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರಕ್ಕೆ ಬರಲು ತುಂಬ…

Read More

ಬೆಳಗಾವಿ : ರಾಜ್ಯದಲ್ಲಿ  ಪ್ರಸಕ್ತ ಸಾಲಿನಲ್ಲಿ ಬಿದ್ದ ಮಳೆಯ ಪರಿಣಾಮ, ವಿದ್ಯುತ್ ಕಂಬಗಳು, ಪರಿವರ್ತಕಗಳು ಮತ್ತು ವಿದ್ಯುತ್ ಮಾರ್ಗಗಳಿಗೆ ರೂ 15,612.661 ಲಕ್ಷ  ನಷ್ಠ ಉಂಟಾಗಿದೆ ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿದರು. ಅವರು ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಭಾರತಿ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಪ್ರಸಕ್ತ ಸಾಲಿನ ಮಳೆಗಾಲದಲ್ಲಿ 74,594 ವಿದ್ಯುತ್ ಕಂಬಗಳು, 5,109  ಪರಿವರ್ತಕಗಳು ಹಾಗೂ 1693.19 ಕಿ.ಮೀ  ವಿದ್ಯುತ್ ಮಾರ್ಗಗಳಿಗೆ ಹಾನಿ ಸಂಭವಿಸಿದೆ ಎಂದರು. ರಾಜ್ಯಕ್ಕೆ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಉಂಟಾದಲ್ಲಿ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ಹಾನಿಯನ್ನು ತಗ್ಗಿಸಲು ಮುಂಗಾರು ಪೂರ್ವದಲ್ಲಿ ಪೂರ್ವ ಸಿದ್ಧತೆ/ಸನ್ನದ್ಧತೆ ಕ್ರಮಗಳನ್ನು ತಜ್ಞ ಪಾಲಿಸುವ ಸಲುವಾಗಿ, ಇಲಾಖೆ ವತಿಯಿಂದ ಪೂರ್ವಭಾವಿಯಾಗಿ ಮುಂಗಾರು ಪೂರ್ವ ನಿರ್ವಹಣೆ (Pre Monsoon Contingency Plan) ಜಾರಿಗೊಳಿಸುವಂತೆ ಸೂಚಿಸಿ ಸುತ್ತೋಲೆಯನ್ನು  ಹೊರಡಿಸಲಾಗಿದೆ ಎಂದರು.

Read More

ಬೆಳಗಾವಿ : ರಾಜ್ಯದಲ್ಲಿ 15 ಕಡೆ ರೋಪ್ ವೇಗಳ ನಿರ್ಮಾಣಕ್ಕೆ ಸರ್ಕಾರ ನಿರ್ಣಯ ಕೈಗೊಂಡಿದೆ. ಇವುಗಳ ನಿರ್ಮಾಣ ಮತ್ತು ಕಾರ್ಯನಿರ್ವಹಣೆಯನ್ನು ಅಧಿಕೃತಗೊಳಿಸಿ, ಸುಗಮಗೊಳಿಸುವ ಹಾಗೂ ನಿಯಂತ್ರಿಸುವ ಸಲುವಾಗಿ 2024ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕವನ್ನು ಜಾರಿಗೆ ತರಲಾಗುತ್ತಿದೆ ಎಂದು ಕಾನೂನು ಸಂಸದೀಯ ವ್ಯವಹಕಾರಗಳು ಮತ್ತು ಶಾಸಕ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದರು. ಸುವರ್ಣ ಸೌಧದಲ್ಲಿ ಸೋಮವಾರ ವಿಧಾನ ಸಭೆ ಕಲಾಪದಲ್ಲಿ ವಿಧೇಯಕವನ್ನು ಸದನದ ಪರ್ಯಾಲೋಚನೆಗೆ ಅವರು ಮಂಡಿಸಿದರು. ರೋಪ್‌ವೇಗಳ ನಿರ್ಮಾಣದಿಂದ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಇಂಬು ದೊರಕಲಿದೆ. ಈ ರೋಪ್‌ವೇಗಳ ನಿರ್ಮಾಣದ ಜೊತೆಗೆ ನಿರ್ವಹಣೆಯನ್ನು ಸಹ ಪ್ರತ್ಯೇಕವಾಗಿ ಇಡಲು ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ವಿಧೇಯಕವನ್ನು ಮಂಡಿಸಲಾಗುತ್ತಿದೆ. ಸದನ ಒಪ್ಪಿಗೆ ನೀಡುವಂತೆ ಅವರು ಕೋರಿದರು. ಆರ್.ಅಶೋಕ್ ಮಾತನಾಡಿ, ವಿಧೇಯಕದಡಿ ರಚಿಸಲಾಗುವ ಸಲಹಾ ಪ್ರಾಧಿಕಾರದಲ್ಲಿ ಸರ್ಕಾರದ ಅರಣ್ಯ ಇಲಾಖೆ ಕಾರ್ಯದರ್ಶಿಗಳನ್ನು ಸಹ ಸದಸ್ಯರನ್ನಾಗಿ ನೇಮಿಸಬೇಕು. ರೋಪ್‌ವೇ ನಿರ್ಮಿಸಲು ಉದ್ದೇಶಿಸಿದ ಅನೇಕ ಸ್ಥಳಗಳು ಅರಣ್ಯ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಇದರಿಂದ ಶೀಘ್ರವೇ ಅನುಮತಿ…

Read More

ಬೆಳಗಾವಿ : ಕೈಗಾರಿಕೆಗಳ ತ್ಯಾಜ್ಯ ವಿಲೇವಾರಿಗೆ ಅಗತ್ಯ ವ್ಯವಸ್ಥೆಯನ್ನು ಕಾಲ ಕಾಲಕ್ಕೆ ಪ್ರಾದೇಶಿಕ ಕಛೇರಿಯ ಅಧಿಕಾರಿಗಳು ಪರಿವೀಕ್ಷಿಸಿ, ನ್ಯೂನತೆಗಳು ಕಂಡು ಬಂದಲ್ಲಿ ಕಾಯಿದೆಗಳ ಮಾನದಂಡ ಅನುಸರಿಸಿ, ಜಲ ಕಾಯ್ದೆ,ವಾಯು ಕಾಯ್ದೆ ಅಡಿಯಲ್ಲಿ ಮುಚ್ಚುವ ಆದೇಶ ನೀಡಲಾಗುವುದು ಎಂದು ಅರಣ್ಯ ಜೀವಿಪರಿಸ್ಥಿತಿ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು. ಅವರು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೈಗಾರಿಕೆಗಳಿಗೆ ಷರತ್ತುಬದ್ದ ಸಮ್ಮತಿ ಪತ್ರಗಳನ್ನು ನೀಡುತ್ತಿದ್ದು, ಮಂಡಳಿಯ ಷರತ್ತುಗಳ ಅನ್ವಯ ತ್ಯಾಜ್ಯ ನೀರನ್ನು ಮಂಡಳಿಯು ನಿಗದಿಪಡಿಸಿರುವ ಮಾನದಂಡಗಳಿಗೆ ಕೈಗಾರಿಕೆಯಲ್ಲಿ ಸ್ಥಾಪಿತವಾಗಿರುವ ಶುದ್ಧಿಕರಣ ಘಟಕಗಳಲ್ಲಿ ಶುದ್ಧಿಕರಿಸಿ,ಶುದ್ಧಿಕರಿಸಿದ ನೀರನ್ನು ತೋಟಗಾರಿಕೆ ಹಾಗೂ ವ್ಯವಸಾಯಕ್ಕೆ ಬಳಸಬೇಕಾಗಿರುತ್ತದೆ. ಸಣ್ಣ ಕೈಗಾರಿಕೆಗಳು ಕಾರ್ಯಚಟುವಟಿಕೆಗಳಿಂದ ತಮ್ಮ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಮಂಡಳಿಯಿಂದ ಸಮ್ಮತಿ ಪಡೆದು ಕಾರ್ಯನಿರ್ವಹಿಸುತ್ತಿರುವ ಸಾಮೂಹಿಕ ಶುದ್ಧಿಕರಣ ಘಟಕಗಳಿಗೆ ನೀಡಬೇಕಾಗಿರುತ್ತದೆ. ಅಪಾಯಕಾರಿ ತ್ಯಾಜ್ಯಗಳನ್ನು ಮಂಡಳಿಯಿಂದ ಅಧಿಕಾರ ಪತ್ರ ಪಡೆದ ತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಬಿಲ್ಡರ್ಸ್‍ ಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5 ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಲ್ಡರ್ಸ್ ಗಳ ನಿವಾಸ, ಕಚೇರಿ ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಳಗಾವಿ : ರಾಯಚೂರು ವಿಶ್ವ ವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ಎಂದು ಮರು ನಾಮಕರಣ ಮಾಡುವ ವಿಧೇಯಕಕ್ಕೆ ಸೋಮವಾರ ವಿಧಾನ ಸಭೆಯಲ್ಲಿ ಅಂಗೀಕಾರ ದೊರೆಯಿತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೋಮವಾರ 2024ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವ ವಿದ್ಯಾನಿಲಯ ತಿದ್ದುಪಡಿ ವಿಧೇಯಕವನ್ನು ಸದನದಲ್ಲಿ ಪರ್ಯಾಲೋಚನೆಗೆ ಪ್ರಸ್ತಾಪಿಸಿದಾಗ, ಸದನ ಧ್ವನಿ ಮತದಿಂದ ವಿಧೇಯಕಕ್ಕೆ ಅಂಗೀಕಾರ ನೀಡಿತು. ಈ ಹಿಂದೆ ರಾಯಚೂರು ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿಶ್ವ ವಿದ್ಯಾನಿಲಯ ಇನ್ನೂ ಮುಂದೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ಮರು ನಾಮಕರಣಗೊಂಡಿದೆ. ಇದೇ ವೇಳೆ ಸಚಿವ ಡಾ.ಎಂ.ಸಿ.ಸುಧಾಕರ್ ಚಾಣಕ್ಯ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕ ಅನುಮೋದನೆಗೆ ಪ್ರಸ್ತಾಪಿಸಿದಾಗ ಯಾವುದೇ ಚರ್ಚೆ ಇಲ್ಲದೆ ಸದನ ಅಂಗೀಕರಿಸಿತು. ಈ ವಿಧೇಯಕದ ಉದ್ದೇಶವೇನೆಂದರೆ ರಾಜ್ಯ ಸರ್ಕಾರ ಮೂಲಕದ ಸಂಬAಧಪಟ್ಟ ಕ್ಷೇತ್ರದಿಂದ ವಿಶೇಷ ತಜ್ಞರನ್ನು ವಿಶ್ವ ವಿದ್ಯಾನಿಲಯ ಆಡಳಿತ ಮಂಡಳಿಗೆ ನಾಮ ನಿರ್ದೇಶನ ಮಾಡಲು ಅವಕಾಶ ಕಲ್ಪಿಸುವುದಾಗಿದೆ.

Read More

ಬೆಳಗಾವಿ : ಪಂಚಮಸಾಲಿ ಹೋರಾಟದ ಸಂದರ್ಭದಲ್ಲಿ ನಡೆದ ಲಾಠಿ ಚಾರ್ಜ್ ಕುರಿತಂತೆ ಯಾವುದೇ ತನಿಖೆಯ ಅಗತ್ಯವಿಲ್ಲವೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಚಿವ ಪರಮೇಶ್ವರ್ ಅವರು, ಪಂಚಮಸಾಲಿ ಹೋರಾಟದ ಕುರಿತಂತೆ ಪ್ರತಿಭಟನಾಕಾರರಿಗೆ ಪ್ರತಿಭಟನೆಗೆ ಜಾಗ ನಿಗದಿಪಡಿಸಲಾಗಿತ್ತು, 10000 ಮಂದಿ ಸೇರಲು ಅವಕಾಶ ನೀಡಲಾಗಿತ್ತು. ಅವರ ಮನವಿ ಆಲಿಸಲು 3 ಮಂದಿ ಸಚಿವರನ್ನು ಕಳುಹಿಸಲಾಗಿತ್ತು. ಆದರೆ ಪ್ರತಿಭಟನೆ ಸ್ಥಳಕ್ಕೆ ಮುಖ್ಯಮಂತ್ರಿಗಳು ಬರಬೇಕೆಂದು ಪಟ್ಟು ಹಿಡಿದು, ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಕಾನೂನು ಸುವ್ಯವಸ್ಥೆ ಕಾಪಾಡಲು ಲಘು ಲಾಠಿ ಪ್ರಹಾರ ನಡೆಸಲಾಗಿದ್ದು, ಈ ಪ್ರಕರಣದಲ್ಲಿ ಕೈಗೊಂಡ ಕ್ರಮ ತೆರೆದ ಪುಸ್ತಕದಂತೆ ಇದ್ದು ಯಾವುದೇ ತನಿಖೆ ನಡೆಸುವ ಅಗತ್ಯವೇ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿದರು. ಲಾಠಿ ಚಾರ್ಜ್ ಘಟನೆಯನ್ನು ನ್ಯಾಯoಗ ತನಿಖೆಗೆ ಒಳಪಡಿಸುವoತೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು.

Read More

ಬೆಳಗಾವಿ : ರಾಜ್ಯದ ಆರೋಗ್ಯಇಲಾಖೆ ಯಲ್ಲಿ ಒಟ್ಟು 69915 ಹುದ್ದೆಗಳು ಮಂಜೂರಾಗಿದ್ದು ಅವುಗಳಲ್ಲಿ 37045 ಹುದ್ದೆಗಳನ್ನು ಭರ್ತಿ ಮಾಡಿದ್ದು 32870 ಹುದ್ದೆಗಳು ಖಾಲಿ ಇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಎಂ. ಜಿ. ಮುಳೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಖಾಲಿಯಿರುವ ಹುದ್ದೆಗಳಲ್ಲಿ ಗ್ರೂಪ್-ಡಿ ಹುದ್ದೆಗಳನ್ನು ಶೇ.30 ರಷ್ಟು Non-Clinical ಗೂ, ಶೇ. 45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ. 75 ರಷ್ಟು ಮೀರದಂತೆ ಹೊರಗುತ್ತಿಗೆ ಮೂಲಕ ಟೆಂಡರ್ ಆಹ್ವಾನಿಸಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದರು. ರಾಜ್ಯದಲ್ಲಿ ಖಾಲಿಯಿರುವ ತಜ್ಞ ವೈದ್ಯರನ್ನು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಕೆಲವು ಷರತ್ತಿಗೊಳಪಟ್ಟು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಮತ್ತು ಇಲಾಖೆಯ ಮುಖಾಂತರ ಸೇವಾನಿರತ ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಬರುವ ತಜ್ಞ ವೈದ್ಯರನ್ನು ತಜ್ಞತ…

Read More

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲಿ ಘೋಷಿಸಿದಂತೆ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಸೋಮವಾರ ಅಂಗೀಕರಿಸಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು 2024ನೇ ಸಾಲಿನ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಪರ್ಯಾಲೋಚನೆ ಮಂಡಿಸಿ, ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ ಜೊತೆಯಲ್ಲೇ ಬಸವನ ಬಾಗೇವಾಡಿ ಅಭಿವೃದ್ಧಿಯನ್ನು ಸದ್ಯ ಕೈಗೊಳ್ಳಲಾಗುತ್ತಿತ್ತು. ಆದರೆ ಬಸವನ ಬಾಗೇವಾಡಿ ಇತಿಹಾಸವನ್ನು ಜನರಿಗೆ ಪರಿಚಯಿಸುವ ಹಾಗೂ ಹೆಚ್ಚಿನ ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಠಿಯಿಂದ ಪ್ರತ್ಯೇಕ ಪ್ರಾಧಿಕಾರ ರಚನೆ ಸರ್ಕಾರ ವಿಧೇಯಕ ಮಂಡಿಸಿದೆ. ಇದಕ್ಕೆ ಸದಸ್ಯರು ಪರ್ಯಾಲೋಚಿಸಿ ಅನುಮತಿ ನೀಡಬೇಕು ಎಂದು ಕೋರಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಧೇಯಕವನ್ನು ಸ್ವಾಗತಿಸಿ, ಬಸವನಬಾಗೇವಾಡಿ ವ್ಯಾಪ್ತಿ ಲೋಕಸಭಾ ಸದ್ಯಸರನ್ನು ಪ್ರಾಧಿಕಾರದ ಸದಸ್ಯರನ್ನಾಗಿ ನೇಮಿಸಬೇಕು. ಇದರಿಂದ ಕೇಂದ್ರ ಸರ್ಕಾರದ ಅನುದಾನ ಪಡೆಯುವಲ್ಲಿ ಸಹಾಯವಾಗುತ್ತದೆ ಎಂದು ತಿಳಿಸಿದರು. ಲೋಕಸಭಾ ಸದಸ್ಯರು ಹಾಗೂ ಮುದ್ದೇಬಿಹಾಳ ಶಾಸಕರನ್ನು ಸಹ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿಸುವ ತಿದ್ದುಪಡಿಯೊಂದಿಗಿನ ವಿಧೇಯಕಕ್ಕೆ…

Read More