Author: kannadanewsnow57

ಚಿತ್ರದುರ್ಗ : ಕಡಿಮೆ ಬೆಲೆಗೆ ಚಿನ್ನ ಸಿಗುತ್ತೆ ಅಂತ ಕೊಳ್ಳುವ ಮುನ್ನ ಎಚ್ಚರವಾಗಿರಿ, ನಕಲಿ ಚಿನ್ನ ನೀಡಿ ಬರೋಬ್ಬರಿ 35 ಲಕ್ಷ ರೂ. ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ತಮಿಳುನಾಡು ಮೂಲದ ಕೆ.ಪಾಂಡಿ ಎಂಬುವರಿಗೆ  2ಕೆಜಿ ಚಿನ್ನ ಕೊಡುವುಆಗಿ 35 ಲಕ್ಷ ರೂ. ಪಡೆದು, ನಕಲಿ ಚಿನ್ನ ನೀಡಿ ವಂಚಿಸಿ ಪರಾರಿಯಾಗಿದ್ದರು, ಇದೀಗ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ದಾವಣಗೆರೆ ಮೂಲದ ರಮೇಶ್ ಹಾಗೂ ವಿಜಯನಗರ ಮೂಲದ ರಾಮಕೃಷ್ಣ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Read More

ಮಡಿಕೇರಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಹಠಾತ್ ಹೃದಯಾಘಾತದಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ಹೃದಯಾಘಾತದಿಂದ ಮಹಿಳೆ ಸಾವನ್ನಪ್ಪಿದ್ದಾರೆ. ಹಠಾತ್ ಹೃದಯಾಘಾತದಿಂದ ಸುಮಾ (58) ಮೃತಪಟ್ಟಿದ್ದಾರೆ. ಸುಮಾ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇದ್ದಿಲ್ಲ. ಆದರೆ ಹಠಾತ್ ಹೃದಯಘಾತದಿಂದ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.  ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್ ನಲ್ಲಿ ಈ ಕೃತ್ಯ ನಡೆದಿದ್ದು, ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳು ನಂತರ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಹಣ ಪಡೆದ ಕಾಮುಕರು ಮನೆಯಲ್ಲಿದ್ದ ಫ್ರಿಡ್ಜ್ ಹಾಗೂ ವಾಷಿಂಗ್ ಮಷಿನ್, ಎರಡು ಮೊಬೈಲ್ ಸೇರಿದಂತೆ ಮನೆಯಲ್ಲಿದ್ದ ಪೀಠೋಪಕರಣ ದೋಚಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ಧಾರೆ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಲಾಗಿತ್ತು. ಈ ಮನವಿಗೆ ಸಕಾರಾತ್ಮಕವಾಗಿಯೇ ಪ್ರತಿಸ್ಪಂದಿಸಿರುವಂತ ರಾಜನಾಥ್ ಸಿಂಗ್ ಅವರು, ದಸರಾ ಏರ್ ಶೋಗೆ ಒಪ್ಪಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ. ಬುಧವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಎಂ.ಬಿ ಪಾಟೀಲ್ ಅವರನ್ನೊಳಗೊಂಡು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ವಿವಿಧ ವಿಚಾರಗಳ ಕುರಿತಂತೆ ಚರ್ಚಿಸಲಾಯಿತು. ಇನ್ನೂ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಅನುಮತಿ ನೀಡುವಂತೆಯೂ ಮನವಿ ಮಾಡಲಾಯಿತು. ಈ ಮನವಿಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವಂತ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ದಸರಾದಲ್ಲಿ ಏರ್ ಶೋಗೆ ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿದು ಬಂದಿದೆ.

Read More

ಹಾಸನ : ಹಾಸನದಲ್ಲಿ ಡಬರ್ ಮರ್ಡರ್ ನಡೆದಿದ್ದು ಆಸ್ತಿ ವಿಚಾರಕ್ಕೆ ಸಹೋದರನೇ ತಂದೆ, ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹೊಳೆನರಸೀಪುರದಲ್ಲಿ ನಡೆದಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ  ಆಸ್ತಿ ವಿಚಾರಕ್ಕೆ ಅಣ್ಣ, ತಮ್ಮ ಹಾಗೂ ತಂದೆಯ ನಡುವೆ ಗಲಾಟೆ ನಡೆದಿದೆ. ನಂತರ ಗಲಾಟೆ ತಾರಕಕ್ಕೇರಿ ತಂದೆ ಹಾಗೂ ಅಣ್ಣನನ್ನೇ ತಮ್ಮ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ತಂದೆ ದೇವೇಗೌಡ ಹಾಗೂ ಅಣ್ಣ ಮಂಜುನಾಥ್ ನನ್ನು ಮೋಹನ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಬೆಂಗಳೂರು : ಕೈಗಾರಿಕೆಗಳಿಂದ ಗ್ರಾಮ ಪಂಚಾಯಿತಿಗಳು ತೆರಿಗೆ ಸಂಗ್ರಹಿಸಲು ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ನೆಲಮಂಗಲದ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಹಲವಾರು ಇತರೆ ಕೈಗಾರಿಕಾ ಸಂಸ್ಥೆಗಳಿಗೆ ಸೋಂಪುರ ಗ್ರಾಮ ಪಂಚಾಯಿತಿ ಆಸ್ತಿ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿದೆ. ಇದನ್ನು ಪ್ರಶ್ನಿಸಿ ಕಲ್ಪತರು ಬ್ರೀವರಿಸ್ ಮತ್ತು ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಅರ್ಜಿಗಳ ಪರಿಶೀಲನೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(KIADB) ಅಧಿಸೂಚಿತ ಮತ್ತು ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕಾ ಸಂಸ್ಥೆಗಳಿಂದ ತೆರೆಗೆ ಸಂಗ್ರಹಿಸಲು ಗ್ರಾಮ ಪಂಚಾಯಿತಿಗಳಿಗೆ ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲವೆಂದು ಹೈಕೋರ್ಟ್ ಆದೇಶಿಸಿದೆ.

Read More

ಬೆಂಗಳೂರು: ತಾವರೆಕರೆ ಗ್ರಾಮದಲ್ಲಿ 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಕೊಪ್ಪಳ ಮೂಲದ ದಂಪತಿ ಗಾರೆ ಕೆಲಸ ಮಾಡಿಕೊಂಡು 15 ವರ್ಷಗಳಿಂದ ಇಲ್ಲಿಯೇ ವಾಸವಾಗಿದ್ದಾರೆ. ಪಾಲಕರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಳು. ಮಧ್ಯಾಹ್ನ ಮನೆಯಲ್ಲಿ ಬಾಲಕಿ ಶವ ಪತ್ತೆಯಾಗಿರುವುದನ್ನು ಸ್ಥಳೀಯರು ಗಮನಿಸಿ ನೀಡಿ ಪರಿಶೀಲನೆ ನಡೆಸಿದರು. ಬೆಂಗಳೂರು ಹೊರವಲಯದ ತಾವರೆಕೆರೆಯಲ್ಲಿ ಈ ಒಂದು ಕೃತ್ಯ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ತಂದೆ ತಾಯಿ ಕೆಲಸಕ್ಕೆ ಹೋಗಿದ್ದಾಗ ಬಾಲಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಶಾಲೆಗೆ ಹೋಗದೆ ಮನೆಯಲ್ಲಿ ಇದ್ದಂತಹ ಬಾಲಕಿಯ ಮೇಲೆ ಹಂತಕರು ಹಲ್ಲೆ ಮಾಡಿದ್ದಾರೆ. ಆದರೆ ಒಂದು ಭೀಕರ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ತಾವರೆಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಬಾಲಕಿ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿವೆ. ದುಷ್ಕರ್ಮಿಗಳು ಅತ್ಯಾಚಾರವೆಸಗಿ ನಂತರ…

Read More

ಬೆಂಗಳೂರು : ರಾಜ್ಯದಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಾನ್ಸೂನ್ ಚುರುಕಾಗಿದೆ. ಈಗಾಗಲೇ ಮಲೆನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಹಲವು ಅವಾಂತರಗಳು ಸಹ ಸೃಷ್ಟಿಯಾಗಿವೆ. 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 10 ರಿಂದ 16 ರವರೆಗೆ ಭಾರೀ ಮಳೆಯಾಗುವ ಸಂಭವವಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ಮೊದಲ ವಾರ ರಾಜ್ಯದ 18 ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇಕಡ 70ರಷ್ಟು ಕಡಿಮೆ ಮಳೆಯಾಗಿದೆ. ಬೆಳಗಾವಿ,…

Read More

ನವದೆಹಲಿ : ಬಿಹಾರದ ವಿಶೇಷ ತೀವ್ರ ಪರಿಷ್ಕರಣೆ (SIR) ಮತದಾರರ ಪಟ್ಟಿಗೆ ಸ್ವೀಕಾರಾರ್ಹ ಗುರುತಿನ ದಾಖಲೆಗಳ ಪಟ್ಟಿಯಿಂದ ಆಧಾರ್ ಅನ್ನು ಹೊರಗಿಡುವ ಬಗ್ಗೆ ನಡೆಯುತ್ತಿರುವ ಗದ್ದಲದ ನಡುವೆ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಸಿಇಒ ಭುವನೇಶ್ ಕುಮಾರ್ ಅವರು ಆಧಾರ್ “ಎಂದಿಗೂ ಮೊದಲ ಗುರುತು ಅಲ್ಲ” ಎಂದು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕುಮಾರ್, ನಕಲಿ ಆಧಾರ್ ಕಾರ್ಡ್ ಉದ್ಯಮವನ್ನು ಪರಿಶೀಲಿಸಲು UIDAI ನಡೆಸುತ್ತಿರುವ ಪ್ರಯತ್ನಗಳ ಬಗ್ಗೆ ಹೇಳಿದ್ದು, ಆಧಾರ್ ಕಾರ್ಡ್ಗಳು QR ಕೋಡ್ ಮೂಲಕ ಅಂತರ್ನಿರ್ಮಿತ ಭದ್ರತಾ ಕಾರ್ಯವಿಧಾನವನ್ನು ಹೊಂದಿವೆ ಎಂದು ಹೇಳಿದರು. ನೀಡಲಾದ ಎಲ್ಲಾ ಹೊಸ ಆಧಾರ್ ಕಾರ್ಡ್ಗಳಲ್ಲಿ QR ಕೋಡ್ ಇರುತ್ತದೆ ಮತ್ತು UIDAI ಅಭಿವೃದ್ಧಿಪಡಿಸಿದ ಆಧಾರ್ QR ಸ್ಕ್ಯಾನರ್ ಅಪ್ಲಿಕೇಶನ್ ಇದೆ. ಈ ಅಪ್ಲಿಕೇಶನ್ನೊಂದಿಗೆ, QR ಕೋಡ್ನಲ್ಲಿ ಎಂಬೆಡ್ ಮಾಡಲಾದ ಆಧಾರ್ ಕಾರ್ಡ್ನ ರುಜುವಾತುಗಳನ್ನು ಹೊಂದಿಸಬಹುದು. ಯಾರಾದರೂ ನಕಲಿ ಆಧಾರ್ ಕಾರ್ಡ್ ತಯಾರಿಸಿದರೆ, ಅದನ್ನು ಸುಲಭವಾಗಿ ಪರಿಶೀಲಿಸಬಹುದು ಮತ್ತು ನಿಲ್ಲಿಸಬಹುದು” ಎಂದು ತಿಳಿಸಿದ್ದಾರೆ. ಫೋಟೋಶಾಪ್ ಅಥವಾ…

Read More

ಬೆಂಗಳೂರು : ಶಾಲಾ ಗೋಡೆ, ಪುಸ್ತಕ, ನೋಟ್‌ಬುಕ್‌ಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬರೆಸುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ – ಕಾಲೇಜುಗಳ ಕಟ್ಟಡಗಳ ಗೋಡೆ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ಬರೆಸಬೇಕು. ಬೆಳಗಿನ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಗೆ ಈ ಕುರಿತು ಮಾಹಿತಿ ನೀಡಬೇಕು. ಮಕ್ಕಳಿಗೆ ವಿತರಿಸುವ ಪಠ್ಯಪುಸ್ತಕಗಳ ಮೇಲೆ, ನೋಟ್‌ಬುಕ್‌ಗಳ ಎಲ್ಲ ಪುಟಗಳ ಕೆಳ ಭಾಗದಲ್ಲಿ ಸಹಾಯವಾಣಿ ಸಂಖ್ಯೆ ನಮೂದಿಸಬೇಕು ಎಂದು ಸೂಚಿಸಲಾಗಿದೆ. ಪಾಲನೆ ಮತ್ತು ರಕ್ಷಣೆ ಅವಶ್ಯಕತೆ ಇರುವ ಮಕ್ಕಳು ಸೇರಿದಂತೆ ಎಲ್ಲಾ ಮಕ್ಕಳಿಗೆ ತುರ್ತು ಸೇವೆಯನ್ನು ಒದಗಿಸುವ 24*7 ಉಚಿತ ಮಕ್ಕಳ ಸಹಾಯವಾಣಿ- 1098 ಕುರಿತು ಹೆಚ್ಚಿನ ಪ್ರಚಾರ ನೀಡುವ ಕುರಿತಂತೆ ಸಾರ್ವಜನಿಕರಲ್ಲಿ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸುವ ಮೂಲಕ ಮಕ್ಕಳ ಘನತೆಯ ಬದುಕಿನ ನಿರ್ಮಾಣ ಮಾಡಬೇಕಾಗಿರುವುದರಿಂದ ಹಾಗೂ ಮಕ್ಕಳ ರಕ್ಷಣೆ ಎಲ್ಲರ ಕರ್ತವ್ಯವಾಗಿದ್ದು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಮಕ್ಕಳ ಸಹಾಯವಾಣಿ 1098 ಕುರಿತು ಎಲ್ಲಾ…

Read More