Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು ಕೇಂದ್ರ ಸರ್ಕಾರವು 5 ಮತ್ತು 8 ನೇ ತರಗತಿಯ ವಾರ್ಷಿಕ ಪರೀಕ್ಷೆ ನಂತರ ಮರು ಪರೀಕ್ಷೆಯಲ್ಲೂ ಫೇಲಾದ ಮಕ್ಕಳನ್ನು ಅದೇ ತರಗತಿಯಲ್ಲಿ ಮತ್ತೊಂದು ವರ್ಷ ತಡೆಯಲು ಜಾರಿಗೊಳಿಸಿರುವ ನಿಯಮವನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸದಂತೆ ಶಿಕ್ಷಣ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ (ಫಾಫ್ರೆ) ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಫಾಫ್ರೆ ಪ್ರಧಾನ ಸಂಚಾಲಕ ಹಾಗೂ ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ, ಯಪಿಎ ಜಾರಿಗೆ ಬಂದ ಆರ್ ಟಿ ನೀತಿ 8 ನೇ ತರಗತಿವರೆಗೆ ಯಾವುದೇ ಮಕ್ಕಳನ್ನು ಒಂದೇ ತರಗತಿಯಲ್ಲಿ ತಡೆಹಿಡಿಯುವುದಾಗಲಿ, ಫೇಲ್ ಮಾಡವುದಾಗಲಿ ನಿಷೇಧಿಸಲಾಗಿತ್ತು. ಮಕ್ಕಳನ್ನು ಶಾಲೆಯಿಂದ ಹೊರಗುಳಿಯುವುದನ್ನು ತಪ್ಪಿಸಲು ಈ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಈಗ ಕೇಂದ್ರ ಸರ್ಕಾರದ ನೀತಿಯು ಆರ್ ಟಿ ಇ ಮೂಲ ಉದ್ದೇಶಕ್ಕೆ ವಿರುದ್ಧವಾಗುತ್ತದೆ. ಹಾಗಾಗಿ ರಾಜ್ಯ ಸರ್ಕಾರವು ಇದನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಲಾಗಿದೆ.
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಅಲ್ಲಲ್ಲಿ ತುಂತುರು ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ ಜಿಲ್ಲೆಗಳ ಅಲ್ಲಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 26, 27ರಂದು ಉತ್ತರ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಸಂಬಂಧ ಕನಿಷ್ಠ ಪಕ್ಷ 15 ದಿನಗಳ ಮುಂಚಿತವಾಗಿ ಪ್ರಾಂಶುಪಾಲರು ಪ್ರಸ್ತಾವನೆ ಕಳುಹಿಸಬೇಕೆಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಪ್ರಾಂಶುಪಾಲರು ತಮ್ಮ ಕಾಲೇಜಿನ ಪ್ರಸ್ತಾವನೆಗಳನ್ನು ಪ್ರವಾಸಕ್ಕೆ ಕೆಲವೇ ದಿನಗಳು ಇರುವಾಗ ಕಳುಹಿಸುತ್ತಿರುವುದರಿಂದ ಕಚೇರಿ ಕಾರ್ಯಕ್ಕೆ ಅಡಚಣೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇನ್ಮುಂದೆ 15 ದಿನ ಮುಂಚಿತವಾಗಿ ಪ್ರಸ್ತಾವನೆ ಸಲ್ಲಿಸಬೇಕು. ತಪ್ಪಿದರೆ ಅಂಥ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ. ಮುಂದಿನ ಆಗುಹೋಗುಗಳಿಗೆ ಪ್ರಾಂಶುಪಾಲರೇ ನೇರ ಹೊಣೆ ಆಗುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ, ಶೈಕ್ಷಣಿಕ ಪ್ರವಾಸಕ್ಕೆ ಅನುಮತಿ ಕೋರಿ ಅತಿ ಕಡಿಮೆ ಅವಧಿಯಲ್ಲಿ ಅಥವಾ ಕೊನೆ ಕ್ಷಣದಲ್ಲಿ ಇಲಾಖೆಯನ್ನು ಸಂಪರ್ಕಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಗ್ನಿಅವಘಡ ಸಂಭವಿಸಿದ್ದು, ಸತತ 1 ಗಂಟೆಗೂ ಹೆಚ್ಚು ಕಾಲ ಸ್ಪಾ ಹೊತ್ತಿ ಉರಿದ ಘಟನೆ ನಡೆದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿರುವ ಸ್ಪಾದಲ್ಲಿ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸತತ 1 ಗಂಟೆಗಳ ಕಾಲ ಬೆಂಕಿ ಹೊತ್ತಿ ಉರಿದಿದೆ. ಬೆಂಕಿಯ ಜ್ವಾಲೆಗೆ ಸ್ಪಾದಲ್ಲಿರುವ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನೆ ಕುರಿತು ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಬಿಜೆಪಿ ಎಂಎಲ್ ಸಿ ಸಿ.ಟಿ ರವಿ ಸದನದಲ್ಲೇ ಅವಚ್ಯವಾಗಿ ನಿಂದಿಸಿದ್ದರು ಎನ್ನಲಾದ ಪ್ರಕರಣ ಹಾಗೂ ಸಚಿವರ ಸಹಚರರ ವಿರುದ್ಧ ಹಲ್ಲೆ ಪ್ರಕರಣಗಳ ತನಿಖೆ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಪ್ರಕರಣದ ತನಿಖೆಗೆ ಪಿಎಸ್ ಐ ನೇಮಕಾತಿ ಹಗರಣದ ಸಾರಥ್ಯ ವಹಿಸಿದ್ದ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದ ತನಿಖಾ ತಂಡವನ್ನು ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ರಚಿಸಿದ್ದು, ಡಿವೈ ಎಸ್ಪಿ ಕೇಶವಮೂರ್ತಿ ಅವರನ್ನು ತನಿಖಾಧಿಕಾರಿಯಾಗಿ ನೇಮೀಸಿದ್ದಾರೆ. ಇನ್ನು ಪ್ರಕರಣ ಸಂಬಂಧ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ಬೆಳಗಾವಿ ಪೊಲೀಸರನ್ನು ಸಂಪರ್ಕಿಸಿ ಪ್ರಾಥಮಿಕ ಮಾಹಿತಿ ಪಡೆದಿದ್ದು, ಇಂದು ಬೆಳಗಾವಿಗೆ ಭೇಟಿ ನೀಡಿ ತನಿಖೆ ನಡೆಸಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಬಡ್ತಿ ಸೇರಿದಂತೆ ವಿವಿಧ ಭತ್ಯೆ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆಗೊಳಿಸುವುದು ಕಡ್ಡಾಯವಾಗಿದೆ. ಈ ಪರೀಕ್ಷೆ ಪಾಸ್ ಮಾಡಲು ಸರ್ಕಾರಿ ನೌಕರರಿಗೆ ದಿನಾಂಕ 31-12-2025ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಇ-ಆಡಳಿತ ಇಲಾಖೆಯು ಪತ್ರ ಬರೆದಿದೆ. ಈ ಕುರಿತಂತೆ ಇಂದು ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ- ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಉಲ್ಲೇಖಿತ (1)ರ ಅನ್ವಯ ಸರ್ಕಾರವು ದಿನಾಂಕ: 31-12-2024 ರವರೆಗೆ ಸಮಯಾವಕಾಶ ವಿಸ್ತರಿಸಿ ಅಧಿಸೂಚನೆ ಹೊರಡಿಸಿರುತ್ತದೆ ಎಂದಿದ್ದಾರೆ. ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದ್ದು, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ/ಪರೀಕ್ಷೆ ತೆಗೆದುಕೊಳ್ಳದೆ ಇರುವ…
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಐವರು ಯೋಧರು ಹುತಾತ್ಮರಾಗಿದ್ದು, ಇದರಲ್ಲಿ ಬೆಳಗಾವಿ ಜಿಲ್ಲೆಯ ಯೋಧ ಧರ್ಮರಾಜ ಸುಭಾಷ್ ಖೋತ ಅವರು ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ನಿವಾಸಿ ಧರ್ಮರಾಜ ಸುಭಾಷ್ ಖೋತ ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ನಲ್ಲಿ ಸೇನಾ ವಾಹನವೊಂದು ಅಪಘಾತಕ್ಕೀಡಾಗಿ ಐವರು ಯೋಧರು ಹುತಾತ್ಮರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ, ಮತ್ತು ಗಾಯಗೊಂಡ ಸಿಬ್ಬಂದಿ ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗುವ ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯು ಇದೇ ಡಿ.29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಈ ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿದೆ. ಅಭ್ಯರ್ಥಿಗಳು ಕೆಪಿಎಸ್ಸಿಯಿಂದ ಡೌನ್ಲೋಡ್ ಮಾಡಿಕೊಂಡ ಮರು ಪರೀಕ್ಷೆಯ ಪ್ರವೇಶ ಪತ್ರ, ಭಾವಚಿತ್ರವಿರುವ ಮೂಲ ಗುರುತಿನ ಚೀಟಿ (ಚುನಾವಣೆ ಐಡಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾನ್ಕಾರ್ಡ್, ಪಾಸ್ಪೋರ್ಟ್, ಸರ್ಕಾರಿ ನೌಕರರ ಐಡಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಹಾಜರುಪಡಿಸಬೇಕು. ಅಭ್ಯರ್ಥಿಗಳು ಮೊಬೈಲ್, ಕ್ಯಾಲ್ಕುಕಲೇಟರ್, ಸ್ಮಾರ್ಟ್ವಾಚ್, ಬ್ಲೂಟೂತ್, ವೈಟ್ ಫ್ಲೂಯಿಡ್, ವೈರ್ ಲೆಸ್ ಸೆಟ್, ಪೇಪರ್, ಬುಕ್ಸ್ ಇತರೆ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳನ್ನು ತರುವಂತಿಲ್ಲ. ಅಭ್ಯರ್ಥಿಗಳು ಶೂ, ಸಾಕ್ಸ್, ಸ್ವೆಟರ್ ಮತ್ತು ಜರ್ಕಿನ್, ತುಂಬು ತೋಳಿನ ಷರ್ಟ್ ಮತ್ತು ಫೇಸ್ ಮಾಸ್ಕ್ ಹಾಗೂ ಇತರೆ ವಸ್ತುಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಅಭ್ಯರ್ಥಿಗಳು ಸಾಧಾರಣ ಚಪ್ಪಲಿಯನ್ನು ಮಾತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಜಾಮರ್ ಅಳವಡಿಕೆ: ಮೊಬೈಲ್ ಬ್ಲೂಟೂತ್ ಮತ್ತು…
ಬೆಂಗಳೂರು: ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಹೌದು, ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ ಎನ್ನಲಾಗಿದೆ. ಹೀಗಾಗಿ ಅವರ ಅಭಿಮಾನಿಗಳ ಪೂಜಾಫಲ ಫಲಿಸಿದೆ. ನಟ ಶಿವರಾಜ್ ಕುಮಾರ್ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿದ್ದು, ಆ ಬಳಿಕ ಅವರು ಆಸ್ಪತ್ರೆಯಲ್ಲೇ ಒಂದು ತಿಂಗಳ ಕಾಲ ವಿಶ್ರಾಂತಿಯನ್ನು ಪಡೆಯಲಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಶಸ್ತ್ರಚಿಕಿತ್ಸೆ ಪಡೆದು ಗುಣಮುಖರಾಗಿ ಬರಲಿ ಅಂತ ದೂರವಾಣಿ ಕರೆ ಮಾಡಿದಂತ ಸಿಎಂ ಸಿದ್ಧರಾಮಯ್ಯ ಅವರು ಶುಭ ಹಾರೈಸಿದ್ದಾರೆ. ಶಿವಣ್ಣ ಅಭಿಮಾನಿಗಳು ಕೂಡ ದೇವಸ್ಥಾನದಲ್ಲಿ ಪೂಜೆ, ಪುರಸ್ಕಾರದಲ್ಲಿ ತೊಡಗಿದ್ದು, ಬೇಗ ಗುಣಮುಖರಾಗಿ ಬರಲಿ ಅಂತ ಬೇಡಿಕೊಂಡಿದ್ದಾರೆ.
ನವದೆಹಲಿ : ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಕೋಟ್ಯಂತರ ಸದಸ್ಯರಿಗೆ ದೊಡ್ಡ ಸಿಹಿ ಸುದ್ದಿ ನೀಡಿದೆ. ಇಪಿಎಫ್ಒ ತನ್ನ ಚಂದಾದಾರರಿಗೆ ದೊಡ್ಡ ಸೌಲಭ್ಯವನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಈಗ ನಿಮ್ಮ ಪಿಎಫ್ ಖಾತೆಯಿಂದ ಹಣವನ್ನು ಹಿಂಪಡೆಯಲು ನೀವು ದೀರ್ಘ ಪ್ರಕ್ರಿಯೆಗಳ ಮೂಲಕ ಹೋಗಬೇಕಾಗಿಲ್ಲ. ಶೀಘ್ರದಲ್ಲೇ ನೀವು ನಿಮ್ಮ ಪಿಎಫ್ ಹಣವನ್ನ ನೇರವಾಗಿ ಎಟಿಎಂನಿಂದ ಹಿಂಪಡೆಯಲು ಸಾಧ್ಯವಾಗುತ್ತದೆ. ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಈಗ ತನ್ನ ಚಂದಾದಾರರು ತಮ್ಮ ಭವಿಷ್ಯ ನಿಧಿ ಹಣವನ್ನ ನೇರವಾಗಿ ಎಟಿಎಂನಿಂದ ಹಿಂಪಡೆಯಲು ಸಾಧ್ಯವಾಗುತ್ತದೆ ಎಂದು ದೊಡ್ಡ ಘೋಷಣೆ ಮಾಡಿದೆ. ಈ ಸೌಲಭ್ಯವು ಜನವರಿ 2025ರಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾರ್ಮಿಕ ಕಾರ್ಯದರ್ಶಿ ಸುಮಿತಾ ದವ್ರಾ, ಇಪಿಎಫ್ಒ ಕ್ಲೈಮ್ಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುತ್ತಿದೆ ಮತ್ತು ಜನರ ಜೀವನವನ್ನು ಸುಲಭಗೊಳಿಸಲು ಇಪಿಎಫ್ಒನಿಂದ ಹಣವನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲು ಕೆಲಸ ಮಾಡುತ್ತಿದೆ ಎಂದು ಹೇಳಿದರು. ಈಗ ಹಕ್ಕುದಾರ, ಫಲಾನುಭವಿ ಅಥವಾ ವಿಮಾದಾರ ವ್ಯಕ್ತಿಯು ಕನಿಷ್ಠ…