Author: kannadanewsnow57

ಬೆಂಗಳೂರು: ಈಗಾಗಲೇ 2.68 ಕೋಟಿ ರೈತರ ಆಧಾರ್‌ ಸೀಡಿಂಗ್‌ ಕೆಲಸ ಮುಕ್ತಾಯವಾಗಿದ್ದು, ಆಗಸ್ಟ್‌ ತಿಂಗಳಾಂತ್ಯದೊಳಗಾಗಿ ಆಧಾರ್ ಸೀಡಿಂಗ್‌ ಕೆಲಸವನ್ನು ಸಂಪೂರ್ಣಗೊಳಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಅವರು, “ರಾಜ್ಯಾದ್ಯಂತ 4.8 ಕೋಟಿ ಜಮೀನಿನ ಮಾಲಿಕತ್ವ ಇದೆ. ಈವರೆಗೆ 2.68ಕೋಟಿ ರೈತರನ್ನು ಖುದ್ದು ಭೇಟಿ ಮಾಡಿ ಆಧಾರ್‌ ಜೊತೆಗೆ ಆರ್‌ಟಿಸಿ ಲಿಂಕ್‌ ಮಾಡಲಾಗಿದೆ. ಶೇ.65 ರಷ್ಟು ಕೆಲಸ ಸಂಪೂರ್ಣವಾಗಿದ್ದು, ಈ ತಿಂಗಳಾಂತ್ಯದೊಳಗೆ ಕನಿಷ್ಟ ಶೇ.90 ರಷ್ಟು ಕೆಲಸ ಮುಗಿಸುವ ಗುರಿ ಹೊಂದಲಾಗಿದೆ” ಎಂದರು. ಮುಂದುವರೆದು, “ಆಧಾರ್‌ ಸೀಡಿಂಗ್‌ ನಿಂದಾಗಿ ಸರ್ಕಾರಕ್ಕೆ ಸಾಕಷ್ಟು ಅಂಕಿಅಂಶಗಳು ಸಿಗುತ್ತಿದೆ. 36.53 ಲಕ್ಷ ಜಮೀನುಗಳಲ್ಲಿ ವ್ಯಕ್ತಿ ತೀರಿ ಹೋಗಿದ್ರೂ ಪಹಣಿಯಲ್ಲಿ ಅವರ ಹೆಸರೇ ಉಲ್ಲೇಖವಾಗಿರುವುದು ಆಧಾರ್‌ ಸೀಡಿಂಗ್‌ನಿಂದ ತಿಳಿದುಬಂದಿದೆ. ಹೀಗಾಗಿ ಎರಡು ತಿಂಗಳ ನಂತರ ಅಧಾಲತ್‌ ಮೂಲಕ ಫೌತಿಖಾತೆ ಅಭಿಯಾನ ಆರಂಭಿಸುವ ಚಿಂತನೆ ಇದೆ. ಅಲ್ಲದೆ, ಆಧಾರ್‌ ಸೀಡಿಂಗ್‌ನಿಂದಾಗಿ ನಕಲಿ ವ್ಯಕ್ತಿ ಸೃಷ್ಟಿಸಿ ಅಕ್ರಮವಾಗಿ ಜಮೀನು ಮಾರಾಟವನ್ನು ತಪ್ಪಿಸಬಹುದು, ಬಿಟ್ಟುಹೋದ ಸರ್ಕಾರದ…

Read More

ದಿನವಿಡೀ ಕನಿಷ್ಠ 8 ಲೀಟರ್ ನೀರನ್ನು ಕುಡಿಯಬೇಕು ಎಂದು ಹೇಳಲಾಗುತ್ತದೆ. ಆದಾಗ್ಯೂ, ನಾವು ಮಾಡುವ ಸಣ್ಣ ತಪ್ಪುಗಳು ನಮ್ಮ ಆರೋಗ್ಯಕ್ಕೆ ಹಾನಿ ಮಾಡಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಅವುಗಳಲ್ಲಿ ಒಂದು ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿಯುವುದು. ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿಯಬೇಡಿ: ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ತಜ್ಞರು ಹೇಳುತ್ತಲೇ ಇರುತ್ತಾರೆ. ಆದರೆ ಇಂದಿನ ಕಾಲದಲ್ಲಿ ಅದರ ಬಳಕೆ ಹೆಚ್ಚಾಗಿದೆ. ಇದರಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚು ಎಂದು ನಮಗೆ ಎಚ್ಚರಿಕೆ ನೀಡಿದ್ದರೂ ನಾವು ಅವರ ಮಾತನ್ನು ಕೇಳುತ್ತಿಲ್ಲ. ಆದಾಗ್ಯೂ, ಇತ್ತೀಚಿನ ಅಧ್ಯಯನವು ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿಯುವುದರಿಂದ ಬಿಪಿ ಹೆಚ್ಚಾಗುತ್ತದೆ ಎಂದು ಕಂಡುಹಿಡಿದಿದೆ. ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. ಏಕೆಂದರೆ ಪ್ಲಾಸ್ಟಿಕ್ ಬಾಟಲಿಯಲ್ಲಿರುವ ಮೈಕ್ರೋಪ್ಲಾಸ್ಟಿಕ್ ಗಳು ರಕ್ತದಲ್ಲಿ ಬೆರೆಯುತ್ತವೆ ಮತ್ತು ಇದು ಬಿಪಿಗೆ ಕಾರಣವಾಗಬಹುದು ಎಂದು ತಜ್ಞರು ಹೇಳುತ್ತಾರೆ. ಇದಲ್ಲದೆ, ಪ್ಲಾಸ್ಟಿಕ್ ಬಾಟಲಿಗಳನ್ನು ಹೊರತುಪಡಿಸಿ ಬಾಟಲಿಗಳಲ್ಲಿ ಕುಡಿಯುವ ನೀರು ಕಡಿಮೆ ಬಿಪಿಯನ್ನು…

Read More

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಈ ನಡುವೆ ರಾಜ್ಯಪಾಲರ ವಿಚಾರಣೆಯನ್ನೇ ಪ್ರಶ್ನೆ ಮಾಡಲು ಕಾಂಗ್ರೆಸ್ ನಿರ್ಧರಿಸಿದ್ದು, ಇಂದೇ ಕೋರ್ಟ್ ಗೆ  ಅರ್ಜಿ ಸಲ್ಲಿಸಲು ಕಾಂಗ್ರೆಸ್ ಸಜ್ಜಾಗಿದೆ.  ಇಂದು ಬೆಂಗಳೂರಿಗೆ ಸುಪ್ರೀಂಕೋರ್ಟ್ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ಕಪಿಲ್ ಸಿಬಲ್ ಆಗಮಿಸಲಿದ್ದು, ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ 2024 ರ ಹೊಸ ವೇತನ ಶ್ರೇಣಿ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ 7ನೇ ವೇತನ ಶ್ರೇಣಿಯನ್ನು ಜಾರಿಗೊಳಿಸಲಾಗಿತ್ತು. ಈ ಬೆನ್ನಲ್ಲೇ 2024ರ ಹೊಸ ವೇತನ ಶ್ರೇಣಿಯ ಪರಿಷ್ಕೃತ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ರೇಜು ಎಂ.ಟಿ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978ರ (1990ನೇ ಕರ್ನಾಟಕ ಅಧಿನಿಯಮದ ಸಂಖ್ಯೆ: 14) ಪ್ರಕರಣ 3ರ ಉಪ-ಪ್ರಕರಣ (2)ರ ಪರಂತುಕದೊಡನೆ ಓದಿಕೊಂಡ, ಸದರಿ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ರಾಜ್ಯ ಸರ್ಕಾರವು ಈ ಮೂಲಕ ಈ ಮುಂದಿನ ನಿಯಮಗಳನ್ನು ರಚಿಸಿ ಈ ಕೆಳಗಿನಂತೆ ಆದೇಶ ಹೊರಡಿಸಿದೆ.

Read More

ಬೆಂಗಳೂರು: ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಬೆಸ್ಕಾಂನ ವಿವಿಧ ಉಪ ವಿಭಾಗಗಳಿಂದ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ದಿನಾಂಕ 18-08-2024ರ ಇಂದು ಹಾಗೂ ದಿನಾಂಕ 19-08-2024ರ ನಾಳೆ ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಆಗಸ್ಟ್.18ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಈ ಕುರಿತಂತೆ ಬೆಸ್ಕಾಂನಿಂದ ( BESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 220/66/11ಕೆವಿ ಎಸ್‌ಆರ್‌ಎಸ್ ಪೀಣ್ಯ  ದಿನಾಂಕ  18.08.2024 ರಂದು 09:30ಗಂಟೆಗಳಿಂದ 15:30ಗಂಟೆಗಳವರೆಗೆ ತ್ರೈಮಾಸಿಕ ನಿರ್ವಹಣೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಎಚ್‌ಎಂಟಿ ರಸ್ತೆ, ಆರ್‌ಎನ್‌ಎಸ್ ಅಪಾರ್ಟ್‌ಮೆಂಟ್, ಸಿಎಮ್‌ಟಿಐ, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಎಂಇಸಿ ಲೇಔಟ್, ಮಲಯಾಳಿ ಅತಿಥಿ ಗೃಹ…

Read More

ಅಲಹಾಬಾದ್: ಉದ್ಯೋಗ ಅಥವಾ ಇತರ ಆಸ್ತಿಯ ಮೂಲಕ ತನ್ನನ್ನು ತಾನು ಪೋಷಿಸಿಕೊಳ್ಳಲು ಸಾಧ್ಯವಾಗದ ಅವಿವಾಹಿತ ಮಗಳ ಜೀವನೋಪಾಯವನ್ನು ಗಳಿಸುವುದು ತಂದೆಯ ಜವಾಬ್ದಾರಿಯಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಹಿಂದೂ ದತ್ತು ಮತ್ತು ಆರೈಕೆ ಕಾಯ್ದೆಯ ಸೆಕ್ಷನ್ 20 ಅಂತಹ ಅವಕಾಶವನ್ನು ಒದಗಿಸುತ್ತದೆ. ಈ ವಿಭಾಗವು ಹಿಂದೂ ತತ್ವಗಳ ಸಂಕೇತವಾಗಿದೆ. ಇದರ ಅಡಿಯಲ್ಲಿ, ಅವಿವಾಹಿತ ಮಗಳ ಹೊಣೆಗಾರಿಕೆಯನ್ನು ತಂದೆಯ ಮೇಲೆ ನಿಗದಿಪಡಿಸಲಾಗಿದೆ ಎಂದು ನ್ಯಾಯಾಲಯ ಉಲ್ಲೇಖಿಸಿದೆ. ಪತ್ನಿಗೆ ಜೀವನಾಂಶ ವೆಚ್ಚವಾಗಿ ತಿಂಗಳಿಗೆ 25,000 ರೂ., ಮಗಳಿಗೆ 20,000 ರೂ.ಗಳನ್ನು ಪಾವತಿಸುವಂತೆ ಹತ್ರಾಸ್ ಕೌಟುಂಬಿಕ ನ್ಯಾಯಾಲಯವು ತಂದೆಗೆ ಆದೇಶಿಸಿತ್ತು. ಈ ಆದೇಶದ ವಿರುದ್ಧ ತಂದೆ ಅಲಹಾಬಾದ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮಗಳ ನಿರ್ವಹಣಾ ವೆಚ್ಚವನ್ನು ಪಾವತಿಸಲು ಹತ್ರಾಸ್ ನ್ಯಾಯಾಲಯದ ಆದೇಶವನ್ನು ಆದೇಶವಿಲ್ಲದೆ ಮಾಡಬೇಕು ಎಂದು ತಂದೆ ಒತ್ತಾಯಿಸಿದ್ದರು. ನಂತರ, ಜೀವನಾಂಶ ಶುಲ್ಕವನ್ನು ಹೆಚ್ಚಿಸುವಂತೆ ಪತ್ನಿ ಹೈಕೋರ್ಟ್ನಲ್ಲಿ ಮನವಿ ಮಾಡಿದರು. ಈ ಎರಡೂ ಅರ್ಜಿಗಳನ್ನು ನ್ಯಾಯಮೂರ್ತಿ ಮನೀಶ್ ಕುಮಾರ್ ನಿಗಮ್ ಅವರ ಏಕಸದಸ್ಯ…

Read More

ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸಬೇಕು. ಇಲ್ಲದಿದ್ದರೆ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಆದರೆ ಎಲ್ಲರೂ ಬೆಳಿಗ್ಗೆ ಮತ್ತು ಸಂಜೆ ಸ್ನಾನ ಮಾಡುತ್ತಿದ್ದಾರೆ. ಈ ಋತುವಿನಲ್ಲಿ ಸಮಸ್ಯೆಗಳನ್ನು ತಪ್ಪಿಸಲು, ಸ್ನಾನ ಮಾಡಿ ಮತ್ತು ನೀರಿನಲ್ಲಿ ಸ್ವಲ್ಪ ಉಪ್ಪನ್ನು ಸೇರಿಸುವುದು ಉತ್ತಮ. ಉಪ್ಪು ನೀರು ಆರೋಗ್ಯಕರ ಪೋಷಕಾಂಶಗಳನ್ನು ಹೊಂದಿರುತ್ತದೆ. ಇದು ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ ಮತ್ತು ದೇಹಕ್ಕೆ ಪರಿಹಾರವನ್ನು ನೀಡುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಉಪ್ಪು ನೀರಿನಲ್ಲಿ ಸ್ನಾನ ಮಾಡುವುದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಕೆಲವು ವಿಷಯಗಳನ್ನು ನೋಡೋಣ. ಲವಣಯುಕ್ತ ನೀರಿನಿಂದ ಸ್ನಾನ ಮಾಡುವುದರಿಂದ ಆಗುವ ಪ್ರಯೋಜನಗಳು: ಉಪ್ಪು ನೀರು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಉಪ್ಪು ನೀರಿನಿಂದ ಸ್ನಾನ ಮಾಡುವುದರಿಂದ ಕೀಲು ನೋವು ನಿವಾರಣೆಯಾಗುತ್ತದೆ ಮತ್ತು ಒತ್ತಡ ಕಡಿಮೆಯಾಗುತ್ತದೆ. ಸ್ನಾನದ ನೀರಿಗೆ ಈ ಉಪ್ಪನ್ನು ಸೇರಿಸಿದರೆ ದೇಹದ ಮೇಲಿನ ಕಲೆಗಳು ಕಡಿಮೆಯಾಗುತ್ತವೆ. ಉಪ್ಪು ನೀರಿನಿಂದ ಸ್ನಾನ ಮಾಡುವುದರಿಂದ ಮುಖದ ಮೇಲಿನ ಸುಕ್ಕುಗಳನ್ನು ತೆಗೆದುಹಾಕುತ್ತದೆ ಮತ್ತು ಉತ್ತಮ ಫಲಿತಾಂಶವನ್ನು ನೀಡುತ್ತದೆ. ಉಪ್ಪು…

Read More

ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳು ಬೆಳಿಗ್ಗೆಗಿಂತ ರಾತ್ರಿಯಲ್ಲಿ ವೇಗವಾಗಿ ಬೆಳೆಯುತ್ತವೆ. ಇದು ಪ್ಲೇಕ್, ಕುಳಿ, ಒಸಡು ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಆಶ್ಚರ್ಯಕರವಾಗಿ, ಬಾಯಿಯಲ್ಲಿ 650 ರೀತಿಯ ಬ್ಯಾಕ್ಟೀರಿಯಾಗಳಿವೆ. ಬ್ಯಾಕ್ಟೀರಿಯಾಗಳು  ಪ್ರತಿ 5 ಗಂಟೆಗಳಿಗೊಮ್ಮೆ ಬೆಳೆಯುತ್ತವೆ. ನೀವು ಬೆಳಿಗ್ಗೆ ಎದ್ದಾಗ, ಬಾಯಿಯಲ್ಲಿ ಅನೇಕ ರೀತಿಯ ಬ್ಯಾಕ್ಟೀರಿಯಾಗಳಿವೆ. ಅವುಗಳನ್ನು ಸ್ವಚ್ಛಗೊಳಿಸಲು ನಾವು ಅವುಗಳನ್ನು ಬ್ರಷ್ ಮಾಡುತ್ತೇವೆ. ಈ ಬ್ಯಾಕ್ಟೀರಿಯಾಗಳು ತುಂಬಾ ಹಾನಿಕಾರಕ. ನೀವು ಬೆಳಿಗ್ಗೆ ಎದ್ದಾಗ ಅನೇಕ ಬ್ಯಾಕ್ಟೀರಿಯಾಗಳನ್ನು ಹೊಂದಿರುವ ಬಾಯಿ ವಿಷಕಾರಿಯಾಗುತ್ತದೆಯೇ ಎಂಬ ಬಗ್ಗೆ ಕೆಲವು ವಿಷಯಗಳನ್ನು ನಾವೀಗ ಕಲಿಯೋಣ. ಬಾಯಿಯ ನೈರ್ಮಲ್ಯ ಏಕೆ ಮುಖ್ಯ: ಬಾಯಿಯಲ್ಲಿರುವ ಹಳೆಯ ಲಾಲಾರಸವು ಪೊಟ್ಯಾಸಿಯಮ್, ಸೋಡಿಯಂ, ಗ್ಲೂಕೋಸ್, ಫಾಸ್ಫೇಟ್, ಕ್ಯಾಲ್ಸಿಯಂ ಮತ್ತು ಪ್ರೋಟೀನ್ಗಳನ್ನು ಹೊಂದಿರುತ್ತದೆ. ಇದು ಹಲ್ಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಲಾಲಾರಸದಲ್ಲಿರುವ ಪ್ರತಿಜೀವಕಗಳು ಹಲ್ಲುಗಳನ್ನು ಸೋಂಕು ಮತ್ತು ಕ್ಷಯದಿಂದ ರಕ್ಷಿಸುತ್ತವೆ. ಬೆಳಿಗ್ಗೆ ಎದ್ದ ತಕ್ಷಣ ನೀರು ಕುಡಿಯುವುದರಿಂದ ದೇಹವನ್ನು ಅನೇಕ ರೋಗಗಳಿಂದ ರಕ್ಷಿಸಬಹುದು. ಬೆಳಿಗ್ಗೆ ಎದ್ದ ನಂತರ ಬಾಯಿ ವಿಷಕಾರಿಯಾಗುತ್ತದೆ ಎಂದು ಹೇಳುವುದು ತಪ್ಪಾಗುತ್ತದೆ. ಹಾಗಿದ್ದರೆ.. ಬಾಯಿಯನ್ನು…

Read More

ಬೆಳಗಾವಿ : ಸಿಎಂ ಸಿದ್ದರಾಮಯ್ಯ ಮಾಸ್ ಲೀಡರ್, ರಾಜಕೀಯ ದುರುದ್ದೇಶದಿಂದ ಈ ಮಾತು ಹೇಳುತ್ತಿಲ್ಲ.ಅವರ ಮೇಲೆ  ನನಗೆ ತುಂಬಾ ಗೌರವ ಇದೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಾಸ್ ಲೀಡರ್. ಸಿಡಿ ಶಿವು ಅಧಿಕಾರಕ್ಕೆ ಬಂದ್ರೆ ರಾಜ್ಯ ಅದೋಗತಿಗೆ ಹೋಗಲಿದೆ.  ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ರೆ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿರುವುದಿಲ್ಲ ಎಂದು ಹೇಳಿದ್ದಾರೆ. ಸಿಡಿ ಶಿವು ಬಂದ್ರೆ ರಾಜ್ಯ ಅದೋಗತಿಗೆ ಹೋಗಲಿದೆ. ಭ್ರಷ್ಟಾಚಾರದ ಪಿತಾಮಹ ಡಿಸಿಎಂ ಸಿಎಂ ರೇಸ್ ನಲ್ಲಿದ್ದಾರೆ. ಹೀಗಾಗಿ ಪಕ್ಷಕ್ಕೆ ಉಳಿಗಾಲವಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯರನ್ನು ಹೊಗಳಿ ಡಿಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Read More

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದ್ದು, ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. 1.08,2024 ರಲ್ಲಿ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದೇವೆ ಎಂದರು.  ನಾವು ಕಾನೂನು ಚೌಕಟ್ಟಿನಲ್ಲಿ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿದ್ದೇವೆ. ಪ್ರಾಸಿಕ್ಯೂಷನ್ ರಾಜಕೀಯ ಪ್ರೇರಿತವಾಗಿದೆ. ರಾಜ್ಯಪಾಲರು ಸಂವಿಧಾನ ವಿರೋಧಿ ಪತ್ರ ಕೊಟ್ಟಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಹೇಳಿದ್ದಾರೆ. ಶೋಕಾಸ್ ನೋಟಿಸ್ ಗೆ ಈಗಾಗಲೇ ಉತ್ತರ ನೀಡಲಾಗಿತ್ತು. ಇಂದು ನೇರವಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಪತ್ರ ಕಳುಹಿಸಿದ್ದಾರೆ.  ಇದಕ್ಕೆ ಕಾನೂನಿನ ಮೂಲಕವೇ ಉತ್ತರ ಕೊಡುತ್ತೇವೆ.  ಸರ್ಕಾರ ಇಂಥ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ರಾಜ್ಯಪಾಲರಿಗೆ…

Read More