Author: kannadanewsnow57

ಹುಬ್ಬಳ್ಳಿ : ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಮೃತ ಅಯ್ಯಪ್ಪ ಮಾಲಾಧಾರಿಗಳನ್ನ 58 ವರ್ಷದ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ ಹಾಗೂ 20 ವರ್ಷದ ಸಂಜಯ ಸವದತ್ತಿ ಎಂದು ಗುರುತಿಸಲಾಗಿದೆ. ಉಳಿದ ಏಳು ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು ಬೆಂಗಳೂರು ಮತ್ತಿತರ ಕಡೆಗಳಿಂದ ಉನ್ನತ ಚಿಕಿತ್ಸೆಗಾಗಿ ತಜ್ಞ ವೈದ್ಯರನ್ನು ಕರೆಸಲಾಗಿದೆ.

Read More

ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಪೋಷಕರು ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಮನನವೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಯುವತಿ ಧನುಶ್ರೀಗೆ ಪೋಷಕರು ಹೆಚ್ಚು ಮೊಬೈಲ್ ನೋಡಬೇಡ ಎಂದು ಬುದ್ದಿಮಾತು ಹೇಳಿದಕ್ಕೆ ಮನನೊಂದು ಕಳೆದ 3 ದಿನಗಳ ಹಿಂದೆ ವಿಷ ಸೇವಿಸಿದ್ದರು. ಕೂಡಲೇ ಪೋಷಕರು ಧನುಶ್ರೀಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಮೂರು ದಿನಗಳಿಂದ  ವಿದ್ಯಾರ್ಥಿನಿ ಧನುಶ್ರೀಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಧನುಶ್ರೀ ಮೃತಪಟ್ಟಿದ್ದಾಳೆ.

Read More

ನವದೆಹಲಿ : ವಿದ್ಯಾರ್ಥಿಗಳುಸಾರ್ವಜನಿಕ ವೈ-ಫೈ ಬಳಸಿ ಇ-ಮೇಲ್ ಖಾತೆ ತೆರೆಯಬಾರದು ಜೊತೆಗೆ ನೆಟ್ ಬ್ಯಾಂಕಿಂಗ್ ಬಳಸಬೇಡಿ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗವು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗಿರುವ ಯುಎಸ್‌ಬಿ ಚಾರ್ಜಿಂಗ್ ಪಾಯಿಂಟ್‌ಗಳಿಂದ ಮೊಬೈಲ್ ಅನ್ನು ಚಾರ್ಜ್ ಮಾಡುವ ಮೂಲಕ ಖಾತೆಯನ್ನು ಹ್ಯಾಕ್ ಮಾಡಬಹುದು. ವಿದ್ಯಾರ್ಥಿಗಳಿಗೆ UGC ಈ ಎಚ್ಚರಿಕೆಯನ್ನು ನೀಡಿದೆ. ಸೈಬರ್ ಅಪರಾಧವನ್ನು ತಡೆಯುವ ಅಭಿಯಾನದಲ್ಲಿ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಹ ತೊಡಗಿಸಿಕೊಳ್ಳುತ್ತಿದೆ. ಅದೇ ಸಮಯದಲ್ಲಿ, ಸೈಬರ್ ಅಪರಾಧದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಯುಜಿಸಿ ಎಲ್ಲಾ ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳನ್ನು ಕೇಳಿದೆ. ಮೇಲ್ ಮತ್ತು ಅದಕ್ಕೆ ಲಗತ್ತಿಸಲಾದ ಫೈಲ್‌ಗಳನ್ನು ಎಚ್ಚರಿಕೆಯಿಂದ ತೆರೆಯಬೇಕು ಎಂದು ಆಯೋಗ ಹೇಳಿದೆ. ವಿದ್ಯಾರ್ಥಿಗಳು ಯಾವುದೇ ಸಾಫ್ಟ್‌ವೇರ್ ಅನ್ನು ಅಧಿಕೃತ ವೆಬ್‌ಸೈಟ್‌ನಿಂದ ಮಾತ್ರ ಡೌನ್‌ಲೋಡ್ ಮಾಡಬೇಕು. ಕಾಲಕಾಲಕ್ಕೆ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್ ಅನ್ನು ನವೀಕರಿಸುತ್ತಿರಿ. UGC NET ಪ್ರವೇಶ ಕಾರ್ಡ್: UGC NET ಪ್ರವೇಶ…

Read More

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಬೆನ್ನಲ್ಲೇ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿಗೆ ಹೆಚ್ಚಿನ ಭದ್ರತೆ ನೀಡಲು ಪೊಲೀಸರು ಮುಂದಾಗಿದ್ದಾರೆ. ನಿನ್ನೆ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್ ಬಳಿಕ ಎಚ್ಚೇತ್ತಿರುವ ಪೊಲೀಸ್ ಇದೀಗ ಬಿಜೆಪಿ ಎಂಎಲ್ ಸಿ. ಸಿ.ಟಿ. ರವಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಸಿ.ಟಿ.ರವಿ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.

Read More

ಬೆಂಗಳೂರು : ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದ್ದು, ದರ ಏರಿಕೆಯ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ಸುಳಿವು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟ ತಕ್ಷಣ ನಂದಿನಿ ಹಾಲಿನ ದರ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ನಂದಿನಿ ಹಾಲಿನ ದರದಲ್ಲಿ 2 ರೂ.ಕಡಿತ ಮಾಡಲು ನಿರ್ಧರಿಸಲಾಗಿದ್ದು, ಇದೀಗ ನಂದಿನಿ ಹಾಲಿನ ದರ 44 ರೂ.42 ರೂ.ಗೆ ಇಳಿಕೆಯಾಗಲಿದೆ ಎಂದು ಕೆಂಎಫ್ ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಕೆಲ ದಿನಗಳ ಹಿಂದೆ ಪ್ರತಿ ಲೀಟರ್​ನಲ್ಲಿ​ ಹೆಚ್ಚುವರಿಯಾಗಿ 50 ಎಂಎಲ್​​ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ ಕೆಎಂಎಫ್​ ಹಾಲಿನ ದರ 2 ರೂ. ಕಡಿತ ಮಾಡಲು ನಿರ್ಧರಿಸಿದೆ.

Read More

ಬೆಂಗಳೂರು : ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ನಂದಿನಿ ಹಾಲಿನ ಹೆಚ್ಚುವರಿ 50 ಎಂಎಲ್ ಹಾಗೂ 2 ರೂ. ದರ ಕಡಿತ ಮಾಡಲು ನಿರ್ಧರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ. ಸುದ್ದಿಗಾರರೊಂದಗಿಎ ಮಾತನಾಡಿದ ಅವರು, ನಂದಿನಿ ಹಾಲಿನ ದರದಲ್ಲಿ 2 ರೂ.ಕಡಿತ ಮಾಡಲು ನಿರ್ಧರಿಸಲಾಗಿದ್ದು, ಇದೀಗ ನಂದಿನಿ ಹಾಲಿನ ದರ 44 ರೂ.42 ರೂ.ಗೆ ಇಳಿಕೆಯಾಗಲಿದೆ ಎಂದು ಕೆಂಎಫ್ ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಕೆಲ ದಿನಗಳ ಹಿಂದೆ ಪ್ರತಿ ಲೀಟರ್​ನಲ್ಲಿ​ ಹೆಚ್ಚುವರಿಯಾಗಿ 50 ಎಂಎಲ್​​ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ ಕೆಎಂಎಫ್​ ಹಾಲಿನ ದರ 2 ರೂ. ಕಡಿತ ಮಾಡಲು ನಿರ್ಧರಿಸಿದೆ.

Read More

ಬೆಳಗಾವಿ : ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಯ ವೀರಸೌಧದಲ್ಲಿ ಮಹಾತ್ಮ ಗಾಂಧಿಯವರ ಪುತ್ಥಳಿ ಅನಾವರಣಗೊಳಿಸಿದ್ದಾರೆ. ಗಾಂಧಿ ಭಾರತ – ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಂಗವಾಗಿ ಇಂದು ವೀರಸೌಧದಲ್ಲಿ ಮಹಾತ್ಮ ಗಾಂಧಿಯವರ ಪುತ್ಥಳಿ ಅನಾವರಣಗೊಳಿಸಿದ್ದಾರೆ, ಬಳಿಕ ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಎಐಸಿಸಿ ಸಭೆ ನಡೆದಿದ್ದ ಸ್ಥಳದ ಸಭಾಂಗಣದಲ್ಲಿನ ಫೋಟೋ ಗ್ಯಾಲರಿಯನ್ನು ಚರಕ ನೂಲುವ ಮೂಲಕ ಉದ್ಘಾಟಿಸಿ, ನಂತರ ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿದ್ದಾರೆ. https://twitter.com/siddaramaiah/status/1872167819552694305?ref_src=twsrc%5Egoogle%7Ctwcamp%5Eserp%7Ctwgr%5Etweet 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಡಿಸೆಂಬರ್‌ 27ರಂದು ಸುವರ್ಣಸೌಧದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಗೊಳಿಸಲಾಗುವುದು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ಸಿಗೆ ಕೈಜೋಡಿಸಬೇಕಾಗಿ ಎಂದು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

Read More

ಬೆಳಗಾವಿ : ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ವಿದ್ಯುಕ್ತ್ ಚಾಲನೆ ನೀಡಿದರು. ಬೆಳಗ್ಗೆ ನಗರದ ಟಿಳಕವಾಡಿಯಲ್ಲಿನ ವೀರಸೌಧದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ನೇರವಾಗಿ ಸರ್ದಾರ್ ಹೈಸ್ಕೂಲ್ ಮೈದಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಹಾಗೂ ಇನ್ನೀತರ ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು. ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸಚಿವರಾದ ಎಚ್.ಕೆ.ಪಾಟೀಲ್ , ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಲಕ್ಷ್ಮಿ ಹೆಬ್ಬಾಳಕರ, ಎಂ.ಬಿ.ಪಾಟೀಲ, ಡಾ. ಎಂ.ಸಿ.ಸುಧಾಕರ, ದಿನೇಶ್ ಗುಂಡೂರಾವ್, ಭೈರತಿ ಸುರೇಶ, ಶಾಸಕರಾದ ಆರ್ ವಿ ದೇಶಪಾಂಡೆ, ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೊಯ್ಲಿ ಸೇರಿದಂತೆ…

Read More

ಥಾಣೆ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‌ನಲ್ಲಿ 12-13 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿ ಆಕೆಯ ಶವವನ್ನು ಎಸೆದಿರುವ ಘಟನೆ ನಡೆದಿದೆ. ಮುಂಬೈ ಪಕ್ಕದ ಥಾಣೆಯ ಕಲ್ಯಾಣ್‌ನಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮಾಡಿ ಬಳಿಕ ಹತ್ಯೆ ಮಾಡಲಾಗಿದ್ದು, ಬುಧವಾರ (ಡಿಸೆಂಬರ್ 25) ದಿನವಿಡೀ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಸ್ಥಳೀಯರು ಪ್ರತಿಭಟನಾ ಮೆರವಣಿಗೆಯನ್ನೂ ನಡೆಸಿದ್ದಾರೆ. ಸೋಮವಾರ (ಡಿಸೆಂಬರ್ 23) ಮಧ್ಯಾಹ್ನ 12.00 ರ ಸುಮಾರಿಗೆ, 13 ವರ್ಷದ ಬಾಲಕಿ ಕಲ್ಯಾಣ್ ಕೊಲ್ಸೆವಾಡಿ ಪ್ರದೇಶದಲ್ಲಿನ ತನ್ನ ಮನೆಯಿಂದ ಅಂಗಡಿಗೆ ಹೋಗಿದ್ದಳು. ಎಷ್ಟೋ ಹೊತ್ತಾದರೂ ಮನೆಗೆ ಬಾರದೆ ಇದ್ದಾಗ ಮನೆಯವರು ಆತಂಕಗೊಂಡರು. ಬಳಿಕ ಬಾಲಕಿಗಾಗಿ ಹುಡುಕಾಟ ನಡೆಸಲಾಗಿತ್ತಾದರೂ ಪತ್ತೆಯಾಗಿರಲಿಲ್ಲ. ಪೊಲೀಸರಿಂದ ಸಹಾಯ ಕೇಳಿದ ನಂತರ ತನಿಖೆ ಪ್ರಾರಂಭವಾಯಿತು. ಪೊಲೀಸರು ಶೋಧ ಕಾರ್ಯ ಆರಂಭಿಸಿದರು. ಇದಾದ ನಂತರ ಮಂಗಳವಾರ ಬೆಳಗ್ಗೆ ಕಲ್ಯಾಣ್‌ನ ಭಿವಂಡಿ ಬಾಪಗಾಂವ್ ಬಳಿಯ ಸ್ಮಶಾನದ…

Read More

ಬೆಳಗಾವಿ : “ಗಾಂಧಿ ಭಾರತ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಗುರುವಾರ (ಡಿ.26) ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ‌ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗೆಯಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಆವರಣದ ಕಾಂಪೌಂಡ್, ತಂತಿಬೇಲಿ, ಪೇವರ್ಸ್ ಹಾಗೂ ಉದ್ಯಾನವನ ನಿರ್ಮಿಸಲಾಗಿದೆ. ಈ ಸಂದರ್ಭದಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಎಚ್.ಕೆ ಪಾಟೀಲ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು ವೀರಪ್ಪ ಮೊಯ್ಲಿ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಸಚೇತಕ…

Read More