Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ಬೆಳ್ಳಂದೂರು ಯಾರ್ಡ್ ನ ಪುನರ್ನಿರ್ಮಾಣಕ್ಕಾಗಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳ ಸಂಚಾರ ತಾತ್ಕಾಲಿಕ ರದ್ದು ಮತ್ತು ನಿಯಂತ್ರಿಸಲಾಗುತ್ತಿದೆ. ಅವುಗಳ ವಿವರ ಕೆಳಗಿನಂತಿವೆ: ರದ್ದು: ಯಶವಂತಪುರ-ಹೊಸೂರು ಮೆಮು (06203) ಮತ್ತು ಹೊಸೂರು-ಯಶವಂತಪುರ ಮೆಮು (06204) ವಿಶೇಷ ರೈಲುಗಳ ಸಂಚಾರ ಡಿಸೆಂಬರ್ 5 ರಂದು ರದ್ದುಗೊಳ್ಳಲಿದೆ. ನಿಯಂತ್ರಣ: ಡಿಸೆಂಬರ್ 5 ರಂದು ತಮ್ಮ ಮೂಲ ನಿಲ್ದಾಣದಿಂದ ಹೊರಡುವ ರೈಲುಗಳ ಸಂಖ್ಯೆ 11014 ಕೊಯಮತ್ತೂರು-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 90 ನಿಮಿಷ, ರೈಲು ಸಂಖ್ಯೆ 06393 ಯಶವಂತಪುರ-ಹೊಸೂರು ಮೆಮು ವಿಶೇಷ ರೈಲು ಮಾರ್ಗ ಮಧ್ಯದಲ್ಲಿ 60 ನಿಮಿಷಗಳ ಮತ್ತು ರೈಲು ಸಂಖ್ಯೆ 16211 ಯಶವಂತಪುರ-ಸೇಲಂ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 10 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ಹಾಗೂ ಮಾರ್ಚ್, ಏಪ್ರಿಲ್ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ದಿನಾಂಕ 20-03-2025ರಿಂದ ಆರಂಭಗೊಂಡು, ದಿನಾಂಕ 02-04-2025ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ದಿನಾಂಕ 01-03-2025ರಿಂದ ಆರಂಭಗೊಂಡು ದಿನಾಂಕ 19-03-2025ರವರೆಗೆ ನಡೆಯಲಿದೆ. ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ದಿನಾಂಕ 02-12-2024ರಿಂದ 16-12-2024ರವರೆಗೆ 15 ದಿನಗಳಲ್ಲಿ ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಆಕ್ಷೇಪಣೆಯನ್ನು ಮಂಡಳಿಯ ಇಮೇಲ್ chairpersonkseab@gmail.com ಗೆ ಕಳುಹಿಸಬಹುದಾಗಿದೆ. ಹೀಗಿದೆ ವಿಷಯವಾರು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ದಿನಾಂಕ 20-03-2025ರ…
ಬೆಂಗಳೂರು : 2023-24 ಸಾಲಿಗೆ ಮಾನ್ಯತೆ ನವೀಕರಣ ಪಡೆಯದ ಖಾಸಗಿ ಅನುದಾನಿತ/ಅನುದಾನರಹಿತ ಪ್ರಾಥಮಿಕ/ಪ್ರೌಢಶಾಲೆಗಳಿಗೆ ಕರ್ನಾಟಕ ಶಿಕ್ಷಣ ಕಾಯ್ದೆ-1983 ಮತ್ತು ಆರ್.ಟಿ.ಇ ನಿಯಮ-2012ರ ಅಡಿಯಲ್ಲಿ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣವನ್ನು ಪಡೆಯಲು ಅವಕಾಶ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2023-24ನೇ ಸಾಲಿಗೆ ಮಾನ್ಯತೆ ನವೀಕರಣ ಪಡೆಯಲು ಖಾಸಗಿ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾನ್ಯತೆ ಕೋರಿ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಉಲ್ಲೇಖ(6) ಮತ್ತು (7) ಅವಕಾಶ ನೀಡಿ ಸುತ್ತೋಲೆ ನೀಡಲಾಗಿತ್ತು. ಆದಾಗ್ಯೂ ಕೆಲವು ಶಾಲೆಗಳು 2023-24ನೇ ಸಾಲಿನಲ್ಲಿ ನೀಡಿದ ಕಾಲಾವಧಿಯಲ್ಲಿ ಮಾನ್ಯತೆ ಪಡೆಯಲು ವಿಫಲರಾಗಿದ್ದು, ಅವಕಾಶ ಕೋರಿದ ಹಿನ್ನೆಲೆಯಲ್ಲಿ ಅಂತಹ ಶಾಲೆಗಳಿಗೆ ಉಲ್ಲೇಖ(8) ರ ಸರ್ಕಾರದ ಪತ್ರದಂತೆ 2023- 24ನೇ ಸಾಲಿಗೆ ಮಾನ್ಯತೆ/ಮಾನ್ಯತೆ ನವೀಕರಣ ಪಡೆಯಲು ಖಾಸಗಿ ಅನುದಾನಿತ/ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮುಂದಿನ ವರ್ಷಗಳಲ್ಲಿ ನಿಗದಿತ ಅವಧಿಯಲ್ಲಿ ಕಡ್ಡಾಯವಾಗಿ ಮಾನ್ಯತೆ ನವೀಕರಣ ಮಾಡಿಕೊಳ್ಳುವ ಮತ್ತು ಆ ರೀತಿ ಮಾನ್ಯತೆ ನವೀಕರಣ ಮಾಡಿಕೊಳ್ಳಲು ವಿಫಲವಾಗುವ…
ಬೆಂಗಳೂರು : 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಸಮಿತಿ ಸಭೆಯ ಮುಖ್ಯಾಂಶಗಳು ಹೀಗಿವೆ: * ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. * ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸಲು ಸೂಚನೆ ನೀಡಲಾಯಿತು. * ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧರಿಸಲಾಯಿತು. * ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ ಮಾಡಲಾಗುವುದು. * ಕಾಂಗ್ರೆಸ್ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ.…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಫಎಂಗಲ್ ಚಂಡಮಾರುತದ ಅಬ್ಬರ ಪರಿಣಾಮ, ರಾಜ್ಯದ ಮಂಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ, ಚಳಿಗಾಳಿ ಆರಂಭಗೊಂಡಿದೆ. ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಕೋಲಾರ, ತುಮಕೂರು ಸೇರಿ ಇತರೆ ಜಿಲ್ಲೆಗಳಲ್ಲಿ ಮೋಡ ಕವಿತ ವಾತಾವರಣದ ಜೊತೆಗೆ ಸಾಮಾನ್ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರಿನಲ್ಲಿ ಇಂದು ಆರೇಂಜ್ ಅಲರ್ಟ್ ಅನ್ನು ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದಾರೆ. ಅಲ್ಲದೇ ಯಾವುದೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಮೀನುಗಾರಿಕೆಗೆ ತೆರಳಿದ್ದರೇ, ಕೂಡಲೇ ವಾಪಾಸಾಗುವಂತೆ ಮುನ್ಸೂಚನೆ ನೀಡಿದ್ದಾರೆ. ಮಂಗಳೂರಿನ ಹಲವೆಡೆ ಸತತ ಒಂದು ಗಂಟೆಯಿಂದ ಭಾರೀ ಮಳೆಯ ಜೊತೆಗೆ ಸುಳಿಗಾಳಿ ಬೀಸುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದಾಗಿ ಕತ್ತಲು ಕವಿದಂತೆ ಆಗಿದ್ದು, ರಸ್ತೆಗಳಲ್ಲಿ ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ಇಂದು ರಾತ್ರಿ…
ಬೆಂಗಳೂರು : ರಾಜ್ಯದ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಡಿಸೆಂಬರ್ 03, 2024 ರಂದು ವಿಶ್ವ ವಿಶೇಷ ಚೇತನರ ದಿನಾಚರಣೆ ಆಚರಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯ 47/3 ರಂತೆ ಪ್ರತಿ ವರ್ಷ ಡಿಸೆಂಬರ್ – 03 ರಂದು ವಿಶ್ವ ವಿಶೇಷ ಚೇತನರ ದಿನಾಚರಣೆ ಆಚರಿಸಲು ನಿರ್ಣಯವಾಗಿದೆ. ವಿಶ್ವ ವಿಶೇಷ ಚೇತನರ ದಿನಾಚರಣೆಯ ಉದ್ದೇಶಗಳು: ವಿಶೇಷ ಚೇತನರ ಸಮಸ್ಯೆಗಳನ್ನು ಅರಿಯುವುದು ಮತ್ತು ಇವರ ಆತ್ಮಗೌರವನ್ನು ಹೆಚ್ಚಿಸುವ, ಹಕ್ಕುಗಳನ್ನು ರಕ್ಷಿಸುವ ಮತ್ತು ಇವರ ಒಳಿತಿಗಾಗಿ ಕ್ರಮವಹಿಸುವುದಾಗಿದೆ. ವಿಶೇಷ ಚೇತನರನ್ನು ಮುಖ್ಯವಾಹಿನಿಗೆ ಸೇರಿಸುವ ಕುರಿತು ಜಾಗೃತಿ, ಸಮಾನ ಅವಕಾಶ, ಸೌಲಭ್ಯ ಕಲ್ಪಿಸುವುದು. ವಿಶೇಷ ಚೇತನರಲ್ಲಿ ಆತ್ಮವಿಶ್ವಾಸ ಬೆಳೆಸುವುದು ಹಾಗೂ ಸಮಾಜದ ಇತರ ವ್ಯಕ್ತಿಗಳಂತೆ ಸಮಾನವಾದ ಅವಕಾಶಗಳನ್ನು ಒದಗಿಸುವುದು ಮತ್ತು ಅವರಿಗೆ ಯೋಗ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು. ಪ್ರತಿ ವರ್ಷದಂತೆ, 2024-25 ನೇ ಸಾಲಿನಲ್ಲಿಯೂ ಡಿಸೆಂಬರ್- 03 ರಂದು ಶಾಲಾ, ಕ್ಲಸ್ಟರ್, ಬ್ಲಾಕ್ ಹಾಗೂ ಜಿಲ್ಲಾ ಹಂತದಲ್ಲಿ ವಿಶ್ವವಿಶೇಷ…
ಬೆಂಗಳೂರು : ರಾಜ್ಯಾಧ್ಯಂತ ಬಂಗಾಲಕೊಳ್ಳಿಯಲ್ಲಿ ಎದ್ದಿರುವಂತ ಫೆಂಗಲ್ ಚಂಡಮಾರುತದ ಕಾರಣ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಚಳಿಗಾಳಿ ಸಹಿತ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಫೆಂಗಲ್ ಚಂಡಮಾರುತದ ಕಾರಣ ಇಂದು ರಾಜ್ಯದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಇಂದು ರಾಜ್ಯದ ಹಲವಡೆ ಭಾರೀ ಮಳೆ, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಕೋಲಾರ, ತುಮಕೂರು ಸೇರಿ ಇತರೆ ಜಿಲ್ಲೆಗಳಲ್ಲಿ ಮೋಡ ಕವಿತ ವಾತಾವರಣದ ಜೊತೆಗೆ ಸಾಮಾನ್ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮೈಸೂರು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಇಂದು ಮೈಸೂರು ಜಿಲ್ಲೆಯ ಧಾರಾಕಾರ…
ಬೆಂಗಳೂರು : 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ.? ಮೇಲೆ ಓದಲಾದ ಕ್ರ.ಸಂ. (1) ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು. ಮೇಲೆ ಓದಲಾದ ಕ್ರ.ಸಂ. (2) ರ ಸಹಕಾರ ಸಂಘಗಳ ನಿಬಂಧಕರ ಪ್ರಸ್ತಾವನೆಯಲ್ಲಿ ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಒಂದು ಪ್ರತಿಷ್ಠಿತ (Flagship) ವಿಶಿಷ್ಟ ಯೋಜನೆಯಾಗಿದ್ದು, ಇದರಲ್ಲಿ ಯಶಸ್ವಿನಿ ಪ್ರೋಟೋಕಾಲ್‌ನಂತೆ ನಿಗದಿ ಪಡಿಸಿರುವ ಚಿಕಿತ್ಸೆಗಳ ಪ್ಯಾಕೇಜಿನ ದರದ ಮಿತಿಗೊಳಪಟ್ಟು ಫಲಾನುಭವಿ ಮತ್ತು ಅವರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ.5.00 ಲಕ್ಷ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಿತಿಯೊಂದಿಗೆ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ. ಯಶಸ್ಸಿನಿ ಯೋಜನೆಯು ವಿಮಾ ಯೋಜನೆಯಾಗಿರುವುದಿಲ್ಲ. ಬದಲಾಗಿ ಇದೊಂದು…
ತುಮಕೂರು : ತುಮಕೂರಿನಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ಬ್ಯಾಟಿಂಗ್ ಮಾಡುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅವರು, ತುಮಕೂರು ಜಿಲ್ಲೆಯಲ್ಲಿ ಸುಮಾರು 938 ಕೋಟಿ ರೂ. ಮೊತ್ತದ 825 ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಿದ್ದು, 94 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ನೂತನ ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದಾರೆ. ಪಿ ಗೊಲ್ಲಹಳ್ಳಿ ಮತ್ತು ಸೂರೆಕುಂಟೆ ವ್ಯಾಪ್ತಿಯಲ್ಲಿ 41 ಎಕರೆ ಭೂಮಿಯನ್ನು ಕೆಐಎಡಿಬಿ ವತಿಯಿಂದ ಈಗಾಗಲೇ ಕೆಎಸ್‌ಸಿಎ (ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್)ಗೆ ಹಸ್ತಾಂತರಿಸಲಾಗಿದೆ. ಬರೋಬ್ಬರಿ 150 ಕೋಟಿ ರೂ. ವೆಚ್ಚದ ಸುಸಜ್ಜಿತ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಎರಡು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಸ್ಟೇಡಿಯಂ ನಿರ್ಮಾಣವಾದರೆ, ಇದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ಪರ್ಯಾಯವಾಗಲಿದೆ.
ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗಕ್ಕೆ ಕಾರಣವಾಗುವ SARS-CoV-2 ವೈರಸ್ ದೇಹದ ಮೇಲೆ ಮಾತ್ರವಲ್ಲದೆ ಮೆದುಳಿನ ಮೇಲೂ ದೀರ್ಘಕಾಲೀನ ಪರಿಣಾಮ ಬೀರುತ್ತದೆ. ಇತ್ತೀಚಿನ ಪ್ರಮುಖ ಜರ್ಮನ್ ಅಧ್ಯಯನವು SARS-CoV-2 ವೈರಸ್‌ನ ಸ್ಪೈಕ್ ಪ್ರೋಟೀನ್ ಮೆದುಳಿನ ರಕ್ಷಣಾತ್ಮಕ ಪದರದಲ್ಲಿ (ಮೆನಿಂಜಸ್) ಮತ್ತು ತಲೆಬುರುಡೆಯ ಮೂಳೆಯೊಳಗಿನ ಮೂಳೆ ಮಜ್ಜೆಯಲ್ಲಿ ಸೋಂಕಿನ ನಂತರವೂ ವರ್ಷಗಳವರೆಗೆ ಇರುತ್ತದೆ ಎಂದು ತೋರಿಸಿದೆ. ಈ ಪ್ರೋಟೀನ್ ಮೆದುಳಿನಲ್ಲಿ ದೀರ್ಘಕಾಲದ ಉರಿಯೂತವನ್ನು ಉಂಟುಮಾಡುತ್ತದೆ ಮತ್ತು ನ್ಯೂರೋ ಡಿಜೆನೆರೆಟಿವ್ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ವಿಜ್ಞಾನಿಗಳು ಏನು ಕಂಡುಕೊಂಡರು? ಹೆಲ್ಮ್ಹೋಲ್ಟ್ಜ್ ಮ್ಯೂನಿಚ್ ಮತ್ತು ಲುಡ್ವಿಗ್-ಮ್ಯಾಕ್ಸಿಮಿಲಿಯನ್ಸ್ ವಿಶ್ವವಿದ್ಯಾನಿಲಯದ (LMU) ಸಂಶೋಧಕರು SARS-CoV-2 ನ ಸ್ಪೈಕ್ ಪ್ರೋಟೀನ್ ಮೆದುಳಿನ ಸಂರಕ್ಷಿತ ಪ್ರದೇಶಗಳಲ್ಲಿ ನಾಲ್ಕು ವರ್ಷಗಳವರೆಗೆ ಇರುತ್ತದೆ ಎಂದು ಕಂಡುಹಿಡಿದಿದ್ದಾರೆ. ಹೆಲ್ಮ್‌ಹೋಲ್ಟ್ಜ್ ಮ್ಯೂನಿಚ್‌ನ ಇನ್‌ಸ್ಟಿಟ್ಯೂಟ್ ಫಾರ್ ಇಂಟೆಲಿಜೆಂಟ್ ಬಯೋಟೆಕ್ನಾಲಜಿಯ ನಿರ್ದೇಶಕರಾದ ಪ್ರೊಫೆಸರ್ ಅಲಿ ಎರ್ಟುರ್ಕ್, ಇದರ ದೀರ್ಘಕಾಲೀನ ನರವೈಜ್ಞಾನಿಕ ಪರಿಣಾಮಗಳು “ಶೀಘ್ರ ಮೆದುಳಿನ ವಯಸ್ಸಾಗುವಿಕೆಗೆ” ಕಾರಣವಾಗುತ್ತವೆ, ಇದು ಪೀಡಿತ ವ್ಯಕ್ತಿಗಳಲ್ಲಿ ಐದರಿಂದ ಹತ್ತು ವರ್ಷಗಳ ಆರೋಗ್ಯಕರ ಮಿದುಳಿನ ಕಾರ್ಯಗಳನ್ನು…












