Author: kannadanewsnow57

ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಬಿಜೆಪಿ ಎಂಎಲ್ ಸಿ ಸಿ.ಟಿ ರವಿ ಸದನದಲ್ಲೇ ಅವಚ್ಯವಾಗಿ ನಿಂದಿಸಿದ್ದರು ಎನ್ನಲಾದ ಪ್ರಕರಣ ಹಾಗೂ ಸಚಿವರ ಸಹಚರರ ವಿರುದ್ಧ ಹಲ್ಲೆ ಪ್ರಕರಣಗಳ ತನಿಖೆ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ರಾಜ್ಯ ಸರ್ಕಾರವು ಪ್ರಕರಣದ ತನಿಖೆಗೆ ಪಿಎಸ್ ಐ ನೇಮಕಾತಿ ಹಗರಣದ ಸಾರಥ್ಯ ವಹಿಸಿದ್ದ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದ ತನಿಖಾ ತಂಡವನ್ನು ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ರಚಿಸಿದ್ದು, ಡಿವೈ ಎಸ್ಪಿ ಕೇಶವಮೂರ್ತಿ ಅವರನ್ನು ತನಿಖಾಧಿಕಾರಿಯಾಗಿ ನೇಮೀಸಿದ್ದಾರೆ. ಇನ್ನು ಪ್ರಕರಣ ಸಂಬಂಧ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ಬೆಳಗಾವಿ ಪೊಲೀಸರನ್ನು ಸಂಪರ್ಕಿಸಿ ಪ್ರಾಥಮಿಕ ಮಾಹಿತಿ ಪಡೆದಿದ್ದು, ಇಂದು ಬೆಳಗಾವಿಗೆ ಭೇಟಿ ನೀಡಿ ತನಿಖೆ ನಡೆಸಲಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಬಡ್ತಿ ಸೇರಿದಂತೆ ವಿವಿಧ ಭತ್ಯೆ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆಗೊಳಿಸುವುದು ಕಡ್ಡಾಯವಾಗಿದೆ. ಈ ಪರೀಕ್ಷೆ ಪಾಸ್ ಮಾಡಲು ಸರ್ಕಾರಿ ನೌಕರರಿಗೆ ದಿನಾಂಕ 31-12-2025ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಇ-ಆಡಳಿತ ಇಲಾಖೆಯು ಪತ್ರ ಬರೆದಿದೆ. ಈ ಕುರಿತಂತೆ ಇಂದು ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ- ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಉಲ್ಲೇಖಿತ (1)ರ ಅನ್ವಯ ಸರ್ಕಾರವು ದಿನಾಂಕ: 31-12-2024 ರವರೆಗೆ ಸಮಯಾವಕಾಶ ವಿಸ್ತರಿಸಿ ಅಧಿಸೂಚನೆ ಹೊರಡಿಸಿರುತ್ತದೆ ಎಂದಿದ್ದಾರೆ. ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದ್ದು, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ/ಪರೀಕ್ಷೆ ತೆಗೆದುಕೊಳ್ಳದೆ ಇರುವ…

Read More

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಐವರು ಯೋಧರು ಹುತಾತ್ಮರಾಗಿದ್ದು, ಇದರಲ್ಲಿ ಬೆಳಗಾವಿ ಜಿಲ್ಲೆಯ ಯೋಧ ಧರ್ಮರಾಜ ಸುಭಾಷ್ ಖೋತ ಅವರು ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ನಿವಾಸಿ ಧರ್ಮರಾಜ ಸುಭಾಷ್ ಖೋತ ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ನಲ್ಲಿ ಸೇನಾ ವಾಹನವೊಂದು ಅಪಘಾತಕ್ಕೀಡಾಗಿ ಐವರು ಯೋಧರು ಹುತಾತ್ಮರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ, ಮತ್ತು ಗಾಯಗೊಂಡ ಸಿಬ್ಬಂದಿ ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗುವ ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯು ಇದೇ ಡಿ.29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಈ ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿದೆ. ಅಭ್ಯರ್ಥಿಗಳು ಕೆಪಿಎಸ್‍ಸಿಯಿಂದ ಡೌನ್‍ಲೋಡ್ ಮಾಡಿಕೊಂಡ ಮರು ಪರೀಕ್ಷೆಯ ಪ್ರವೇಶ ಪತ್ರ, ಭಾವಚಿತ್ರವಿರುವ ಮೂಲ ಗುರುತಿನ ಚೀಟಿ (ಚುನಾವಣೆ ಐಡಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾನ್‍ಕಾರ್ಡ್, ಪಾಸ್‍ಪೋರ್ಟ್, ಸರ್ಕಾರಿ ನೌಕರರ ಐಡಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಹಾಜರುಪಡಿಸಬೇಕು. ಅಭ್ಯರ್ಥಿಗಳು ಮೊಬೈಲ್, ಕ್ಯಾಲ್ಕುಕಲೇಟರ್, ಸ್ಮಾರ್ಟ್‍ವಾಚ್, ಬ್ಲೂಟೂತ್, ವೈಟ್ ಫ್ಲೂಯಿಡ್, ವೈರ್ ಲೆಸ್ ಸೆಟ್, ಪೇಪರ್, ಬುಕ್ಸ್ ಇತರೆ ಎಲೆಕ್ಟ್ರಾನಿಕ್ ಗ್ಯಾಜೆಟ್‍ಗಳನ್ನು ತರುವಂತಿಲ್ಲ. ಅಭ್ಯರ್ಥಿಗಳು ಶೂ, ಸಾಕ್ಸ್, ಸ್ವೆಟರ್ ಮತ್ತು ಜರ್ಕಿನ್, ತುಂಬು ತೋಳಿನ ಷರ್ಟ್ ಮತ್ತು ಫೇಸ್ ಮಾಸ್ಕ್ ಹಾಗೂ ಇತರೆ ವಸ್ತುಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಅಭ್ಯರ್ಥಿಗಳು ಸಾಧಾರಣ ಚಪ್ಪಲಿಯನ್ನು ಮಾತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಜಾಮರ್ ಅಳವಡಿಕೆ: ಮೊಬೈಲ್ ಬ್ಲೂಟೂತ್ ಮತ್ತು…

Read More

ಬೆಂಗಳೂರು: ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಹೌದು, ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ ಎನ್ನಲಾಗಿದೆ. ಹೀಗಾಗಿ ಅವರ ಅಭಿಮಾನಿಗಳ ಪೂಜಾಫಲ ಫಲಿಸಿದೆ. ನಟ ಶಿವರಾಜ್ ಕುಮಾರ್ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿದ್ದು, ಆ ಬಳಿಕ ಅವರು ಆಸ್ಪತ್ರೆಯಲ್ಲೇ ಒಂದು ತಿಂಗಳ ಕಾಲ ವಿಶ್ರಾಂತಿಯನ್ನು ಪಡೆಯಲಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಶಸ್ತ್ರಚಿಕಿತ್ಸೆ ಪಡೆದು ಗುಣಮುಖರಾಗಿ ಬರಲಿ ಅಂತ ದೂರವಾಣಿ ಕರೆ ಮಾಡಿದಂತ ಸಿಎಂ ಸಿದ್ಧರಾಮಯ್ಯ ಅವರು ಶುಭ ಹಾರೈಸಿದ್ದಾರೆ. ಶಿವಣ್ಣ ಅಭಿಮಾನಿಗಳು ಕೂಡ ದೇವಸ್ಥಾನದಲ್ಲಿ ಪೂಜೆ, ಪುರಸ್ಕಾರದಲ್ಲಿ ತೊಡಗಿದ್ದು, ಬೇಗ ಗುಣಮುಖರಾಗಿ ಬರಲಿ ಅಂತ ಬೇಡಿಕೊಂಡಿದ್ದಾರೆ.

Read More

ನವದೆಹಲಿ : ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಕೋಟ್ಯಂತರ ಸದಸ್ಯರಿಗೆ ದೊಡ್ಡ ಸಿಹಿ ಸುದ್ದಿ ನೀಡಿದೆ. ಇಪಿಎಫ್ಒ ತನ್ನ ಚಂದಾದಾರರಿಗೆ ದೊಡ್ಡ ಸೌಲಭ್ಯವನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಈಗ ನಿಮ್ಮ ಪಿಎಫ್ ಖಾತೆಯಿಂದ ಹಣವನ್ನು ಹಿಂಪಡೆಯಲು ನೀವು ದೀರ್ಘ ಪ್ರಕ್ರಿಯೆಗಳ ಮೂಲಕ ಹೋಗಬೇಕಾಗಿಲ್ಲ. ಶೀಘ್ರದಲ್ಲೇ ನೀವು ನಿಮ್ಮ ಪಿಎಫ್ ಹಣವನ್ನ ನೇರವಾಗಿ ಎಟಿಎಂನಿಂದ ಹಿಂಪಡೆಯಲು ಸಾಧ್ಯವಾಗುತ್ತದೆ. ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಈಗ ತನ್ನ ಚಂದಾದಾರರು ತಮ್ಮ ಭವಿಷ್ಯ ನಿಧಿ ಹಣವನ್ನ ನೇರವಾಗಿ ಎಟಿಎಂನಿಂದ ಹಿಂಪಡೆಯಲು ಸಾಧ್ಯವಾಗುತ್ತದೆ ಎಂದು ದೊಡ್ಡ ಘೋಷಣೆ ಮಾಡಿದೆ. ಈ ಸೌಲಭ್ಯವು ಜನವರಿ 2025ರಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾರ್ಮಿಕ ಕಾರ್ಯದರ್ಶಿ ಸುಮಿತಾ ದವ್ರಾ, ಇಪಿಎಫ್ಒ ಕ್ಲೈಮ್ಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುತ್ತಿದೆ ಮತ್ತು ಜನರ ಜೀವನವನ್ನು ಸುಲಭಗೊಳಿಸಲು ಇಪಿಎಫ್ಒನಿಂದ ಹಣವನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲು ಕೆಲಸ ಮಾಡುತ್ತಿದೆ ಎಂದು ಹೇಳಿದರು. ಈಗ ಹಕ್ಕುದಾರ, ಫಲಾನುಭವಿ ಅಥವಾ ವಿಮಾದಾರ ವ್ಯಕ್ತಿಯು ಕನಿಷ್ಠ…

Read More

ಶಿವಮೊಗ್ಗ : ಇ-ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ. ಯ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ ನೌಕರನನ್ನು ತನಿಖೆ ಸಂಬAಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ. ಮಹಮ್ಮದ್ ಗೌಸ್ ರವರ ತಂದೆ ಭಾಷಾ ಸಾಬ್‌ನವರು ಇಂಡುವಳ್ಳಿ ಗ್ರಾಮದಲ್ಲಿ ಜಮೀನನ್ನು ಹೊಂದಿದ್ದು, ಅದರಲ್ಲಿ ಒಂದು ಮನೆಯನ್ನು ಕಟ್ಟಿಕೊಂಡಿರುತ್ತಾರೆ. ಆ ಮನೆಯ ಮೇಲೆ ಲೋನ್ ತೆಗೆದುಕೊಳ್ಳುವ ಸಂಬAಧ, ಮನೆ ಇರುವ ಜಾಗವನ್ನು ತನ್ನ ತಾಯಿ ಶ್ರೀಮತಿ ಮಮ್ರಾಜ್ ರವರ ಹೆಸರಿನಲ್ಲಿ ಈ-ಖಾತಾ ಮಾಡಿಕೊಡುವಂತೆ ಇಂಡುವಳ್ಳಿ ಗ್ರಾಮ ಪಂಚಾಯ್ತಿಗೆ ಅರ್ಜಿಯನ್ನು ಸಲ್ಲಿಸಿದ್ದು, ಇಂಡುವಳ್ಳಿ ಗ್ರಾಮದ ಪ್ರಭಾರ ಪಿಡಿಓ ರವರಾದ ಈಶ್ವರಪ್ಪ ರವರು ಮನೆ ಜಾಗಕ್ಕೆ ಬಂದು. ಅಳತೆ ಮಾಡಿಕೊಂಡು ಹೋಗಿದ್ದು, ಈ-ಖಾತಾ ಕೊಡುವಂತೆ ಹಲವಾರು ಬಾರಿ ಈಶ್ವರಪ್ಪ ರವರ ಹತ್ತಿರ ಕೇಳಿದಾಗ ಅವರು…

Read More

ನವದೆಹಲಿ : ಸಾಲ ಮಾಡಿದ ಸಾಲಗಾರರಿಗೆ ಅವರ ಫೋಟೋಗಳನ್ನು ಪ್ರಕಟಿಸುವ ಮೂಲಕ ಪಾವತಿಸಲು ಬ್ಯಾಂಕ್‌ಗಳು ಒತ್ತಾಯಿಸಲು ಸಾಧ್ಯವಿಲ್ಲ, ಇದು ಗೌಪ್ಯತೆ ಮತ್ತು ಖ್ಯಾತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಕೇರಳ ಹೈಕೋರ್ಟ್ ಹೇಳಿದೆ. ಸಾಲವನ್ನು ಮರುಪಾವತಿಸುವಂತೆ ಒತ್ತಾಯಿಸಲು ಸಾಲಗಾರರ ಡೀಫಾಲ್ಟ್ ಮಾಡಿದವರ ಫೋಟೋ ಮತ್ತು ವಿವರಗಳನ್ನು ಬ್ಯಾಂಕ್ ಪ್ರಕಟಿಸುವಂತಿಲ್ಲ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇಂತಹ ಕೃತ್ಯಗಳು ವ್ಯಕ್ತಿಯ ಘನತೆ ಮತ್ತು ಪ್ರತಿಷ್ಠೆಯಿಂದ ಬದುಕುವ ಹಕ್ಕನ್ನು ಆಕ್ರಮಿಸುತ್ತದೆ ಎಂದು ನ್ಯಾಯಮೂರ್ತಿ ಮುರಳಿ ಪುರುಷೋತ್ತಮನ್ ಅವರ ಹೈಕೋರ್ಟ್ ಪೀಠ ಹೇಳಿದೆ. ಸಾಲಗಾರರು ತಮ್ಮ ಪ್ರತಿಷ್ಠೆ ಮತ್ತು ಗೌಪ್ಯತೆಗೆ ಧಕ್ಕೆ ತರುವ ಮೂಲಕ ಸಾಲವನ್ನು ಮರುಪಾವತಿಸುವಂತೆ ಒತ್ತಾಯಿಸಲಾಗುವುದಿಲ್ಲ. ಸಾರ್ವಜನಿಕವಾಗಿ ಫೋಟೊಗಳು ಮತ್ತು ಇತರ ವಿವರಗಳ ಪ್ರಕಟಣೆ ಅಥವಾ ಪ್ರದರ್ಶನವು ಸಾಲಗಾರರ ಘನತೆ ಮತ್ತು ಖ್ಯಾತಿಯೊಂದಿಗೆ ಬದುಕುವ ಹಕ್ಕಿನ ಮೇಲೆ ಆಕ್ರಮಣವಾಗುತ್ತದೆ. ಕಾನೂನು ಸ್ಥಾಪಿಸಿದ ಕಾರ್ಯವಿಧಾನದ ಪ್ರಕಾರ ಹೊರತುಪಡಿಸಿ ಜೀವನ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಇಂತಹ ಅಭಾವವನ್ನು ಮಾಡಲಾಗುವುದಿಲ್ಲ ಎಂದು ರಾಜ್ಯದ ಉನ್ನತ ನ್ಯಾಯಾಲಯ ಹೇಳಿದೆ. ಇಂತಹ…

Read More

ನವದೆಹಲಿ : ರಾಜಸ್ಥಾನದಲ್ಲಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಡ್ರಗ್ಸ್ ಸ್ಮಗ್ಲರ್ ಸುನಿಲ್ ಯಾದವ್ ಕ್ಯಾಲಿಫೋರ್ನಿಯಾದ ಸ್ಟಾಕ್‌ಟನ್‌ನಲ್ಲಿ ನಡೆದ ಶೂಟೌಟ್‌ನಲ್ಲಿ ಕೊಲ್ಲಲ್ಪಟ್ಟಿದ್ದಾನೆ. ಸುನೀಲ್ ಯಾದವ್ ಪಾಕಿಸ್ತಾನದ ಮಾರ್ಗದ ಮೂಲಕ ಭಾರತಕ್ಕೆ ಡ್ರಗ್ಸ್ ತಲುಪಿಸುತ್ತಿದ್ದ ಎಂದು ತಿಳಿದುಬಂದಿದೆ ಮತ್ತು 300 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸರಕನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಅವರ ಹೆಸರೂ ಬಂದಿತ್ತು. ಸುನಿಲ್ ಯಾದವ್ ಹತ್ಯೆಯ ಹೊಣೆಯನ್ನು ದರೋಡೆಕೋರ ರೋಹಿತ್ ಗೋಡಾರಾ ಹೊತ್ತುಕೊಂಡಿದ್ದಾನೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಭಾಗವಾಗಿರುವ ರೋಹಿತ್ ಗೋಡಾರಾ, ಸುನೀಲ್ ಯಾದವ್ ಬಗ್ಗೆ ಹೇಳಿಕೆ ನೀಡಿದ್ದು, “ನಮ್ಮ ಸಹೋದರ ಅಂಕಿತ್ ಭಾದು ಅವರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲು ಪಂಜಾಬ್ ಪೊಲೀಸರೊಂದಿಗೆ ಕೆಲಸ ಮಾಡಿದ್ದರು. ನಾವು ಅವನ ಪ್ರತೀಕಾರ ತೀರಿಸಿಕೊಂಡಿದ್ದೇವೆ. ಎಂದು ಹೇಳಿದರು. ಸುನಿಲ್ ಯಾದವ್ ಪಂಜಾಬ್‌ನ ಫಾಜಿಲ್ಕಾ ಜಿಲ್ಲೆಯ ಅಬೋಹರ್‌ನವರಾಗಿದ್ದು, ಒಮ್ಮೆ ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್‌ಗೆ ಹತ್ತಿರವಾಗಿದ್ದರು ಆದರೆ ಅಂಕಿತ್ ಭಾದು ಅವರ ಹತ್ಯೆಯು ಅವರನ್ನು ಅವನ ವಿರುದ್ಧ ತಿರುಗಿಸಿತು. ಅವರು ಮೊದಲು ದುಬೈನಲ್ಲಿ ವಾಸಿಸುತ್ತಿದ್ದರು ಮತ್ತು ರಾಜಸ್ಥಾನ…

Read More

ಮಂಡ್ಯ : ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ನಗದು ದರೋಡೆ ಮಾಡಿರುವ ಘಟನೆ ಮಂಡ್ಯ ತಾಲ್ಲೂಕಿನ ಬೂದನೂರು ಬಳಿ ಬೆಂ-ಮೈ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಸೋಮವಾರ ರಾತ್ರಿ ಜರುಗಿದೆ. ಮಂಡ್ಯದ ಗುತ್ತಲು ನಿವಾಸಿ ವಿನೋದ್ ದರೋಡೆಗೆ ಒಳಗಾದವರು. ಬೆಲ್ಲದ ವ್ಯಾಪಾರಿಯಾದ ವಿನೋದ್ ವ್ಯಾಪಾರ ಮುಗಿಸಿಕೊಂಡು ಮದ್ದೂರಿನಿಂದ ಮಂಡ್ಯ ನಗರಕ್ಕೆ ಹಿಂದಿರುಗುವ ವೇಳೆ ಹಳೇ ಬೂದನೂರು-ಹೊಸ ಬೂದನೂರು ನಡುವಿನ ಕಾಲುವೆ ಬಳಿ ಬೈಕ್’ನಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ ಕಾರಿನ ಗಾಜಿನ ಮೇಲೆ ಮೊಟ್ಟೆ ಹೊಡೆದು ವಾಹನ ಚಾಲನೆ ಮಾಡುತ್ತಿದ್ದ ವಿನೋದ್ ಅವರ ಕಣ್ಣಿಗೆ ಖಾರದ ಪುಡಿ ಎರಚಿದಾಗ ವಾಹನ ನಿಲ್ಲಿಸಲಾಗಿದೆ‌. ಈ ವೇಳೆ ವ್ಯಕ್ತಿಯ ಮೇಲೆರಗಿ ಹಲ್ಲೆ ಮಾಡಿರುವ ದುಷ್ಕರ್ಮಿಗಳು 55 ಸಾವಿರ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿ ತನಿಖೆ ಅರಂಭಿಸಿದ್ದಾರೆ. ಬೂದನೂರು ಬಳಿ ಹೆದ್ದಾರಿ ಸರ್ವೀಸ್…

Read More