Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಕಳೆದ ಹಲವು ದಿನಗಳಿಂದ ಮಳೆರಾಯ ತಣ್ಣಗಾಗಿದ್ದ ಎನ್ನುವಷ್ಟರಲ್ಲಿ ಇದೀಗ ಮತ್ತೆ ವರ್ಣಾರ್ಭಟ ಆರಂಭವಾಗಲಿದ್ದು, ಡಿಸೆಂಬರ್ 24 ರಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯಕ್ಕೆ ರಾಜ್ಯಾದ್ಯಂತ ಚಳಿಯ ವಾತಾವರಣವಿದೆ.ಆದರೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 24 ರಿಂದ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿನೀಡಿದೆ.
ಮಂಡ್ಯ : ಡಿಸೆಂಬರ್ 20 ರಿಂದ ಮೂರು ಮಂಡ್ಯದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಹಿನ್ನಲೆಯಲ್ಲಿ ವಾಹನಗಳ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ. ದಿನಾಂಕ: 20-12-2024 ರಿಂದ ದಿನಾಂಕ: 22-12-2024 ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯ ನಗರದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ರಸ್ತೆ ಬಳಿಯ ಅಮರಾವತಿ ಹೋಟೆಲ್ ಹಾಗೂ ಸ್ಯಾಂಟೋ ಆಸ್ಪತ್ರೆ ಹಿಂಭಾಗದ ಸ್ಥಳದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಸಂಖ್ಯೆಯಲ್ಲಿ ಗಣ್ಯ ವ್ಯಕ್ತಿಗಳು ಹಾಗೂ ಸಹಸ್ರಾರು ಸಂಖ್ಯೆಯ ಸಾಹಿತ್ಯಾಸಕ್ತರು, ಸಾರ್ವಜನಿಕರು ಭಾಗವಹಿಸಲಿದ್ದಾರೆ. ಸದರಿ ಸಮ್ಮೇಳನ ಸ್ಥಳವು ರಾಷ್ಟ್ರೀಯ ಹೆದ್ದಾರಿ 275 ಪಕ್ಕದಲ್ಲಿರುವುದರಿಂದ ವಾಹನಗಳ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಸದರಿ ವಾಹನಗಳ ಸುಗಮ ಸಂಚಾರದ ಸಲುವಾಗಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಅಪಘಾತಗಳನ್ನು ತಡೆಗಟ್ಟುವ ದೃಷ್ಟಿಯಿಂದ ಸಮ್ಮೇಳನಕ್ಕೆ ಆಗಮಿಸಲು ಮತ್ತು ನಿರ್ಗಮಿಸಲು ಸೂಕ್ತ ಮಾರ್ಗಗಳನ್ನು ನಿಗಧಿಪಡಿಸುವುದು ಅಗತ್ಯವಿರುತ್ತದೆ. ಆದ್ದರಿಂದ, ವಾಹನಗಳ ಮಾರ್ಗ ಬದಲಾವಣೆಯನ್ನು…
ಕೈ ಬೆರಳುಗಳಲ್ಲಿ ಹೆಬ್ಬೆರಳು ಪ್ರಮುಖವಾದುದು, ದೇಹದಲ್ಲಿ ಬೆನ್ನುಮೂಳೆಯಷ್ಟೇ ಮುಖ್ಯ ಹೆಬ್ಬೆರಳು. ಹೆಬ್ಬೆರಳು ವ್ಯಕ್ತಿಯ ಪಾತ್ರವನ್ನು ಓದಲು ಅಥವಾ ತಿಳಿದುಕೊಳ್ಳಲು ಸಹಾಯ ಮಾಡುತ್ತದೆ. ಹೆಬ್ಬೆರಳಿನಿಂದ ಭವಿಷ್ಯವನ್ನು ಊಹಿಸಲು, ಆಕಾರ, ಅಳತೆ, ದಪ್ಪ, ಉದ್ದ, ಹೆಬ್ಬೆರಳಿನ ಸಂಧಿ, ಹೆಬ್ಬೆರಳಿನ ತುದಿ ಇತ್ಯಾದಿಗಳಿಗೆ ಗಮನ ಕೊಡಬೇಕು. ಹೆಬ್ಬೆರಳು ಉದ್ದ ಅಥವಾ ಚಿಕ್ಕದಾಗಿರಬಹುದು. ಉದ್ದನೆಯ ಹೆಬ್ಬೆರಳು ಬುದ್ಧಿವಂತಿಕೆ ಮತ್ತು ವಿವೇಕದ ಸಂಕೇತವಾಗಿದ್ದರೆ, ಚಿಕ್ಕ ಹೆಬ್ಬೆರಳು ಆತುರವನ್ನು ಸೂಚಿಸುತ್ತದೆ. ಹೆಬ್ಬೆರಳಿನ ಉದ್ದವನ್ನು ಅಳೆಯಲು, ಹೆಬ್ಬೆರಳು ಅಂಗೈ ಮೇಲೆ ಒತ್ತಬೇಕು ಮತ್ತು ತೋರುಬೆರಳಿನ ಕೀಲುಗಳೊಂದಿಗೆ ಹೋಲಿಸಬೇಕು. ಹೆಬ್ಬೆರಳು ತೋರುಬೆರಳಿನ ಬುಡಕ್ಕಿಂತ ಕೆಳಗಿದ್ದರೆ ಹೆಬ್ಬೆರಳನ್ನು ಚಿಕ್ಕದಾಗಿ ಪರಿಗಣಿಸಬೇಕು. ನಿಮ್ಮ ಹೆಬ್ಬೆರಳು ಹೇಗಿದೆ ಹೆಬ್ಬೆರಳು ತೋರು ಬೆರಳಿನ ಮೂರನೇ ಸಂಧಿಯನ್ನು ಮುಟ್ಟಿದರೆ ಅದನ್ನು ಸಮಾನ ಉದ್ದವೆಂದು ಪರಿಗಣಿಸಬೇಕು ಮತ್ತು ಹೆಬ್ಬೆರಳು ತೋರು ಬೆರಳಿನ ಎರಡನೇ ಸಂಧಿಯನ್ನು ಮುಟ್ಟಿದರೆ ಅದನ್ನು ಉದ್ದವೆಂದು ಪರಿಗಣಿಸಬೇಕು. ಹೆಬ್ಬೆರಳು ಇಚ್ಛಾ ಶಕ್ತಿ ಮತ್ತು ತಾರ್ಕಿಕ ಶಕ್ತಿಯ ಬಗ್ಗೆ ಮಾಹಿತಿಯನ್ನು ನೀಡುತ್ತದೆ. ಹೆಬ್ಬೆರಳಿನ ಮೊದಲ ಭಾಗ, ಇದನ್ನು ಮೊದಲ ಜಂಟಿ…
ಬೆಂಗಳೂರು : 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ತಾಲ್ಲೂಕುಗಳ ಸರ್ಕಾರಿ ಶಾಲೆಗಳಲ್ಲಿ 6 ಮತ್ತು 7ನೇ ತರಗತಿಗಳ ವಿದ್ಯಾರ್ಥಿಗಳಿಗೆ ಮರುಸಿಂಚನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಮತ್ತು ಉಲ್ಲೇಖದನ್ವಯ ಮುಖ್ಯಮಂತ್ರಿಗಳ 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿತವಾದ “ಮರುಸಿಂಚನ” ಕಾರ್ಯಕ್ರಮವನ್ನು ಮಹತ್ವಾಕಾಂಕ್ಷಿ ತಾಲ್ಲೂಕುಗಳ ಸರ್ಕಾರಿ ಶಾಲೆಗಳ 6 ಮತ್ತು 7ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದು, ಈಗಾಗಲೇ ರಾಜ್ಯಮಟ್ಟದ ಮತ್ತು ಜಿಲ್ಲಾ ಮಟ್ಟದ ತರಬೇತಿಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ಕಾರ್ಯಕ್ರಮದ ಪ್ರಮುಖ ಉದ್ದೇಶ ವಿದ್ಯಾರ್ಥಿಗಳಲ್ಲಿ ಕಲಿಕಾ ನ್ಯೂನತೆಗಳನ್ನು ಸರಿಪಡಿಸುವುದು, ತರಗತಿಗನುಗುಣವಾದ ಕಲಿಕಾ ಫಲಗಳನ್ನು ಸಾಧಿಸಲು ಹಿಂದಿನ ತರಗತಿಗಳ ಕಲಿಕಾ ಫಲಗಳನ್ನು ವೃದ್ಧಿಸುವುದು, ಪ್ರಮಾಣೀಕೃತ ಮೌಲ್ಯಮಾಪನವನ್ನು ಕೈಗೊಳ್ಳುವುದು ಹಾಗೂ 10ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಗುಣಾತ್ಮಕವಾಗಿ ಸಾಧಿಸುವುದು. ಇದರ ಮುಂದುವರಿದ ಭಾಗವಾಗಿ, ಮರುಸಿಂಚನ ಕಾರ್ಯಕ್ರಮವನ್ನು ಮಹಾತ್ವಕಾಂಕ್ಷಿ ತಾಲ್ಲೂಕುಗಳ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ತರಗತಿ ಮಟ್ಟದ ಚಟುವಟಿಕೆಗಳನ್ನು ನಡೆಸಬೇಕಾಗಿದೆ. ಮರುಸಿಂಚನ ಕಾರ್ಯಕ್ರಮವನ್ನು ಶಾಲಾ ಮಟ್ಟದ…
ಬೆಳಗಾವಿ : ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸುನಿಲ್ ಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅಬಕಾರಿ ಸಚಿವರಾದ ಆರ್. ಬಿ. ತಿಮ್ಮಾಪುರ ಅವರ ಉತ್ತರ ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ ಕಳೆದ ಮೂರು ವರ್ಷಗಳಲ್ಲಿ ಒಟ್ಟು 5,751 ದಾಳಿಗಳನ್ನು ನಡೆಸಿ, 4,437 ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಕರಣಗಳಲ್ಲಿ ಭಾಗಿಯಾದ 5,021 ಆರೋಪಿತರನ್ನು ದಸ್ತಗಿರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನವದೆಹಲಿ : ಕೇಂದ್ರ ಸರ್ಕಾರವು ಲೋನ್ ಆ್ಯಪ್ ಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದು, ಆ್ಯಪ್ ಸಾಲ ಸೇರಿ ಅನಿಯಂತ್ರಿತ ಸಾಲಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರಲು ನಿರ್ಧರಿಸಿದೆ. ಇದರ ಪ್ರಕಾರ ಅಪರಾಧಿಗಳಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಕೋಟಿ ರೂ.ವರೆಗೆ ದಂಡ ಇರಲಿದೆ. ಪ್ಲಾಟ್‌ಫಾರ್ಮ್‌ಗಳು ಸೇರಿದಂತೆ ಅನಿಯಂತ್ರಿತ ಸಂಸ್ಥೆಗಳಿಂದ ಸಾಲ ನೀಡುವುದನ್ನು ನಿಷೇಧಿಸುವ ಕರಡು ಶಾಸನವನ್ನು ಕೇಂದ್ರವು ಪ್ರಸಾರ ಮಾಡಿದೆ, ಉಲ್ಲಂಘಿಸುವವರಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಮರುಪಾವತಿಗಾಗಿ ಕಿರುಕುಳ ನೀಡುವ ಮತ್ತು ಕಾನೂನುಬಾಹಿರ ಮಾರ್ಗಗಳನ್ನು ಬಳಸುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸುತ್ತಾರೆ, ಅಂತಹ ಸಾಲವನ್ನು ಉತ್ತೇಜಿಸುವವರು ಐದು ವರ್ಷಗಳವರೆಗೆ ಅವಧಿಯನ್ನು ಎದುರಿಸುತ್ತಾರೆ. ಚೀನೀ ಘಟಕಗಳಿಂದ ನಿರ್ವಹಿಸಲ್ಪಡುವ ಡಿಜಿಟಲ್ ಲೆಂಡಿಂಗ್ ಪ್ಲಾಟ್‌ಫಾರ್ಮ್‌ಗಳಿಂದ ಹೆಚ್ಚಿನ ದರದಲ್ಲಿ ಸಾಲವನ್ನು ತೆಗೆದುಕೊಳ್ಳುವ ಸಾಲಗಾರರು ಹಲವಾರು ದೂರುಗಳ ಮಧ್ಯೆ ಈ ಕ್ರಮವು ಬಂದಿದೆ. ಮತ್ತು ಈ ಪ್ಲಾಟ್‌ಫಾರ್ಮ್‌ಗಳು ಡೀಫಾಲ್ಟ್‌ಗಳ ಸಂದರ್ಭದಲ್ಲಿ ಗ್ರಾಹಕರನ್ನು ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಕಿರುಕುಳ…
ಬೆಳಗಾವಿ : ವೈದ್ಯರ ವರ್ಗವಣೆಯ ಕೌನ್ಸಲಿಂಗ್ ಪದ್ಧತಿಯನ್ನು ಮತ್ತೆ ಜಾರಿಗೊಳಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿ ಸರ್ಕಾರವು ಸ್ಥಗಿತಗೊಳಿಸಿದ್ದ ವೈದ್ಯರ ವರ್ಗಾವಣೆಯ ಕೌನ್ಸಿಲಿಂಗ್ ಪದ್ದತಿಯನ್ನು ನಾವು ಮತ್ತೆ ಜಾರಿಗೊಳಿಸುತ್ತಿದ್ದೇವೆ. ಇದನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಆದರೆ ನಾವು ಯಾರ ಒತ್ತಡಕ್ಕೂ ಮಣಿಯದೆ ಕಾನೂನಾತ್ಮಕವಾಗಿಯೇ ಆಡಳಿತದಲ್ಲಿ ಸುಧಾರಣೆ ತರುತ್ತೇವೆ ಎಂದು ಹೇಳಿದ್ದಾರೆ. https://twitter.com/dineshgrao/status/1869740130103407031?s=08
ಬೆಳಗಾವಿ : ರಾಜ್ಯದ ಗ್ರಾಮೀಣ ಭಾಗದ ರಸ್ತೆಗಳ ಅಭವೃದ್ಧಿಗಳಡಿ ಪಕ್ಷಾತೀತವಾಗಿ ಎಲ್ಲಾ ಶಾಸಕರುಗಳ ಕ್ಷೇತ್ರಗಳಿಗೆ ಒಟ್ಟು 6,000 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಮೇಲಿನ ಚರ್ಚೆಗೆ ಉತ್ತರ ನೀಡುವಾಗ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್-ಇ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಯೋಜನೆಗಳಡಿ ಪಕ್ಷಾತೀತವಾಗಿ ಎಲ್ಲಾ ಶಾಸಕರುಗಳ ಕ್ಷೇತ್ರಗಳಿಗೆ 6,000 ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಅಪೆಂಡಿಕ್ಸ್-ಇ ಅಡಿ ವಿವಿಧ ಯೋಜನೆಗಳಿಗೆ 4,000 ಕೋಟಿ ರೂ ಮತ್ತು ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಎಲ್ಲಾ ಕ್ಷೇತ್ರಗಳಿಗೂ ಒಟ್ಟಾರೆ 2,000 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪುಣ್ಯಕ್ಷೇತ್ರಗಳ ದರ್ಶನಕ್ಕೆ 17 ಸಾವಿರ ರೂ. ಸಹಾಯಧನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ರಾಜ್ಯ ಸರ್ಕಾರವು ಹೊಸ ವರ್ಷಕ್ಕೆ ದ್ವಾರಕ, ಪುರಿ, ಜಗನ್ನಾಥ, ದಕ್ಷಿಣ ಭಾರತ ಕ್ಷೇತ್ರಗಳ ಯಾತ್ರೆಗೆ ತೆರಳುವ ಭಕ್ತರಿಗೆ 3 ಪ್ರವಾಸಿ ಪ್ಯಾಕೇಜ್ ಗಳನ್ನು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು, ಕರ್ನಾಟಕ ಭಾರತ್ ಗೌರವ್ ಯಾತ್ರೆ ಸಹಾಯಧನ ಘೋಷಿಸಲಾಗಿದೆ. ದಕ್ಷಿಣ ಯಾತ್ರೆಯು ಜನವರಿ 25 ರಿಂದ ಜನವರಿ 30ರವರೆಗೆ ಇರಲಿದ್ದು, ರಾಮೇಶ್ವರ, ಕನ್ಯಾಕುಮಾರಿ, ಮಧುರೆ, ತಿರುವನಂತಪುರಂಗೆ ಆರು ದಿನ ಪ್ರಯಾಸ ಇರಲಿದೆ. ಇದಕ್ಕೆ 25,000 ರೂ. ವೆಚ್ಚವಾಗಲಿದ್ದು, ಸರ್ಕಾರ 15000 ಭರಿಸಲಿದೆ. ಯಾತ್ರಾರ್ಥಿಗಳು 10,000 ರೂ.ನೀಡಬೇಕಿದೆ. ಬೆಂಗಳೂರು ಸರ್.ಎಂ.ವಿ. ರೈಲ್ವೆ ನಿಲ್ದಾಣ, ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ತುಮಕೂರಿನಲ್ಲಿ ರೈಲು ಹತ್ತಿ ಇಳಿಯಬಹುದು. ದ್ವಾರಕ, ನಾಗೇಶ್ವರ, ಸೋಮನಾಥ, ತ್ರಯಂಬಕೇಶ್ವರ ಒಳಗೊಂಡಂತೆ 8 ದಿನಗಳ ಯಾತ್ರಾ ಪ್ಯಾಕೇಜ್. ಪುರಿ, ಕೊನಾರ್ಕ್, ಗಂಗಾಸಾಗರ, ಕೊಲ್ಕತ್ತಾ ಒಳಗೊಂಡ 8 ದಿನಗಳ…
ಮಂಡ್ಯ: ಡಿಸೆಂಬರ್ 20, 21ರಂದು ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( School and College Holiday ) ಎರಡು ದಿನ ರಜೆಯನ್ನು ಘೋಷಿಸಿ, ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕುಮಾರ ಅವರು ಆದೇಶ ಹೊರಡಿಸಿದ್ದು, ದಿನಾಂಕ: 20-12-2024 ರಿಂದ ದಿನಾಂಕ: 22-12-2024 ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯ ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ರಸ್ತೆ ಬಳಿಯ ಅಮರಾವತಿ ಹೋಟೆಲ್ ಹಾಗೂ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಸ್ಥಳದಲ್ಲಿ ನಡೆಯಲಿದೆ. ಸದರಿ ಸಮ್ಮೇಳನ ಕಾರ್ಯಕ್ರಮಕ ಮುಖ್ಯಮಂತ್ರಿಯವರು, ಉಪಮುಖ್ಯಮಂತ್ರಿಯವರು, ಸಚಿವರುಗಳು, ನ್ಯಾಯಾಧೀಶರುಗಳು ಹಾಗೂ ಗಣ್ಯ ವ್ಯಕ್ತಿಗಳು ಆಗಮಿಸಲಿದ್ದು, ಸದರಿ ಗಣ್ಯ ವ್ಯಕ್ತಿಗಳಿಗೆ ಮತ್ತು ನೋಂದಾಯಿತ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಾಸ್ತವ್ಯಕ್ಕೆ ಕೊಠಡಿ ವ್ಯವಸ್ಥೆ…












