Author: kannadanewsnow57

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ನಾಲ್ಕು ಜಿಲ್ಲೆಗಳು, ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಳೆ, ನಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Read More

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ Cerebral Palsy, Muscular Dystrophy, Parkinson’s and Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆ ಮಾಡುತ್ತಿರುವ ಆರೈಕೆದಾರಿಗೆ ಮಾಹೆಯಾನ ರೂ.1 ಸಾವಿರಗಳ ಪ್ರೋತ್ಸಾಹಧನವನ್ನು ನೀಡುವ ಯೋಜನೆಯನ್ನು 2024-25ನೇ ಸಾಲಿನಲ್ಲಿ ಜಾರಿಗೊಳಿಸಲಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ವಿಕಲತೆ ಇರುವವರನ್ನು ಆರೈಕೆ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ಆಯಾಯ ತಾಲ್ಲೂಕಿನ ಎಂಆರ್‍ಡಬ್ಲ್ಯುಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಆಯಾಯ ತಾಲ್ಲೂಕಿನ ಎಂಆರ್‍ಡಬ್ಲ್ಯುಗಳಿಗೆ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಇದರ ಪ್ರಯೋಜನವನ್ನು ಕೊಡಗು ಜಿಲ್ಲೆಯಲ್ಲಿ Cerebral Palsy, Muscular Dystrophy, Parkinson’s and Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರು ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‍ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್…

Read More

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ನಬನ್ನಾದ ರಾಜ್ಯ ಸಚಿವಾಲಯದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆಸಿದ ನಂತರ ಕಿರಿಯ ವೈದ್ಯರು ಸೋಮವಾರ ಸಂಜೆ ತಮ್ಮ 17 ದಿನಗಳ ಆಮರಣಾಂತ ಉಪವಾಸವನ್ನು ಹಿಂತೆಗೆದುಕೊಂಡರು ಆಗಸ್ಟ್ನಲ್ಲಿ ಆರ್ಜಿ ಕಾರ್ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಗೆ ಪ್ರತಿಕ್ರಿಯೆಯಾಗಿ ಅಕ್ಟೋಬರ್ 5 ರಂದು ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಲಾಗಿತ್ತು. ರಾಜ್ಯ ಸಚಿವಾಲಯದಿಂದ ಮೊದಲ ಬಾರಿಗೆ ನೇರ ಪ್ರಸಾರವಾದ ಈ ಮಾತುಕತೆಯು ರಾಜ್ಯ ಆರೋಗ್ಯ ಕಾರ್ಯದರ್ಶಿಯನ್ನು ತೆಗೆದುಹಾಕುವುದು ಮತ್ತು ಆಸ್ಪತ್ರೆಗಳಲ್ಲಿ ಚಾಲ್ತಿಯಲ್ಲಿರುವ “ಬೆದರಿಕೆ ಸಂಸ್ಕೃತಿ” ಯನ್ನು ಪರಿಹರಿಸುವುದು ಸೇರಿದಂತೆ ವೈದ್ಯರ ಪ್ರಮುಖ ಬೇಡಿಕೆಗಳನ್ನು ಒಳಗೊಂಡಿದೆ. ಆರೋಗ್ಯ ಕಾರ್ಯದರ್ಶಿ ನಾರಾಯಣ್ ನಿಗಮ್ ಅವರನ್ನು ತೆಗೆದುಹಾಕುವ ಬೇಡಿಕೆಯನ್ನು ಬ್ಯಾನರ್ಜಿ ತಿರಸ್ಕರಿಸಿದರೂ, ಇತರ ಕಾಳಜಿಗಳನ್ನು ಪರಿಹರಿಸಲು ತಮ್ಮ ಆಡಳಿತದ ಬದ್ಧತೆಯ ಬಗ್ಗೆ ಅವರು ವೈದ್ಯರಿಗೆ ಭರವಸೆ ನೀಡಿದರು, ಅವರ ಆರೋಗ್ಯಕ್ಕಾಗಿ ಮತ್ತು ಅವರ ಸೇವೆಗಳನ್ನು ಅವಲಂಬಿಸಿರುವ ರೋಗಿಗಳ ಸಲುವಾಗಿ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಒತ್ತಾಯಿಸಿದರು. “ನಿಮ್ಮ ಹೆಚ್ಚಿನ…

Read More

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದಂತ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ರಾಜ್ಯ ಗೃಹ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ರಾಜ್ಯ ಗೃಹ ಇಲಾಖೆಯಿಂದ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ಸಂಬಂಧ ಅಧಿಸೂಚನೆಯನ್ನು ಹೊರಡಿಸಲಾಗಿದೆ. ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದಂತ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ನಂತ್ರ, ಅರ್ಹತೆಯನ್ನು ಪಡೆದಂತ ಅಭ್ಯರ್ಥಿಯಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಹೇಳಿದೆ. ದಿನಾಂಕ 18-10-2024ರಲ್ಲಿ 545 ಪಿಎಸ್ಐ ಹುದ್ದೆಗಳ ನೇರ ನೇಮಕಾತಿ ಕುರಿತಂತೆ ಆಯ್ಕೆ ಪಟ್ಟಿಯನ್ನು ದಿನಾಂಕ 01-02-2023ರ ಸುತ್ತೋಲೆಯ ಅನ್ವಯ ತಯಾರಿಸಿ ಪ್ರಕಟಿಸಲಾಗಿದೆ. ದಿನಾಂಕ 06-06-2020ರ ಸುತ್ತೋಲೆಯ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40 ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಅನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಿ,…

Read More

ನವದೆಹಲಿ: ರಷ್ಯಾ ಮಿಲಿಟರಿಯಿಂದ ನೇಮಕಗೊಂಡ ಒಟ್ಟು 85 ಭಾರತೀಯ ಪ್ರಜೆಗಳನ್ನು ಬಿಡುಗಡೆ ಮಾಡಲಾಗಿದ್ದು, ಇನ್ನೂ 20 ನಾಗರಿಕರ ಬಿಡುಗಡೆಗಾಗಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಸೋಮವಾರ ತಿಳಿಸಿದ್ದಾರೆ ರಷ್ಯಾದ ಮಿಲಿಟರಿಯಲ್ಲಿ ಸುಮಾರು 20 ವ್ಯಕ್ತಿಗಳು ಉಳಿದಿದ್ದಾರೆ ಎಂದು ಭಾರತ ಅರ್ಥಮಾಡಿಕೊಂಡಿದೆ ಎಂದು ಮಿಸ್ರಿ ಹೇಳಿದ್ದಾರೆ. ಮಂಗಳವಾರ ಕಜಾನ್ ನಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಡುವಿನ ಸಭೆಯಲ್ಲಿ ಉಳಿದ ಭಾರತೀಯರ ಬಿಡುಗಡೆಯ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಉಕ್ರೇನ್ ಯುದ್ಧದ ಮುಂಚೂಣಿಯಲ್ಲಿ ಕನಿಷ್ಠ ಒಂಬತ್ತು ಭಾರತೀಯರು ಸಾವನ್ನಪ್ಪಿದ ನಂತರ ರಷ್ಯಾದ ಮಿಲಿಟರಿ ಘಟಕಗಳಲ್ಲಿ ಅಡುಗೆಯವರು ಮತ್ತು ಸಹಾಯಕರಂತಹ ಸಹಾಯಕ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿದ ಭಾರತೀಯ ಪ್ರಜೆಗಳನ್ನು ವಾಪಸು ಕಳುಹಿಸುವುದು ಭಾರತಕ್ಕೆ ಮಹತ್ವದ ವಿಷಯವಾಗಿದೆ. ಜುಲೈನಲ್ಲಿ ಮಾಸ್ಕೋದಲ್ಲಿ ನಡೆದ ಭಾರತ-ರಷ್ಯಾ ಶೃಂಗಸಭೆಯಲ್ಲಿ ಪುಟಿನ್ ಅವರೊಂದಿಗಿನ ಸಭೆಯಲ್ಲಿ ಮೋದಿ ಈ ವಿಷಯವನ್ನು ಎತ್ತಿದ್ದರು. ರಷ್ಯಾದ ಸೇನೆಯಲ್ಲಿ ಹೋರಾಡಲು…

Read More

ಬೆಂಗಳೂರು : ಅಕ್ರಮ ಪಡಿತರ ಚೀಟಿಗಳನ್ನು ಗುರುತಿಸಿ ರದ್ದು ಮಾಡುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ವಿಕಾಸಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ ಆರು ತಿಂಗಳಿನಿಂದ ಪಡಿತರ ಪಡೆಯದ 2,75,667, ಆದಾಯ ತೆರಿಗೆ ಪಾವತಿ ಮಾಡುವ 98,485, ಆದಾಯ ಮಿತಿ ಹೆಚ್ಚಿರುವ 10,09,478 ಪಡಿತರ ಚೀಟಿಗಳು ಸೇರಿವೆ ಎಂದರು. 2023-24ನೆ ಸಾಲಿನಲ್ಲಿ ಹೊಸ ಪಡಿತರ ಚೀಟಿ ಕೋರಿ 2,95,986 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಈ ಪೈಕಿ 2,30,549 ಅರ್ಹ ಅರ್ಜಿಗಳಿದ್ದವು. 1,48,533 ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಿದ್ದೇವೆ. 65,437 ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. 82,016 ವಿತರಣೆಗೆ ಬಾಕಿಯಿವೆ. ಇವುಗಳನ್ನು…

Read More

ಬೆಂಗಳೂರು : ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು. ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಿಸಿದರು. ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ…

Read More

ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ ಇಂದಿನಿಂದ ಅಂದರೆ ಅಕ್ಟೋಬರ್.23ರವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಬೆಂಗಳೂರು: “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಇಂದಿನಿಂದ 23.10.2024 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ. ಈ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ‍್ಡನ್, ರ‍್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪರ‍್ಕ್ ನಾವು ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ ಪವರ್ ಕಟ್ ಆಗಲಿದೆ. ಹೂವಿನ ಉದ್ಯಾನ, ಹೊಸ…

Read More

ನವದೆಹಲಿ : ಉತ್ತರ ಪ್ರದೇಶದ ಸಿಕಂದರಾಬಾದ್‌ನ ಆಶಾಪುರಿ ಕಾಲೋನಿಯ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮಹಿಳೆಯರು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬುಲಂದ್‌ಶಹರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್, ಆಶಾಪುರಿ ಕಾಲೋನಿಯ ಮನೆಯೊಂದರಲ್ಲಿ ರಾತ್ರಿ 8:30-9 ರ ನಡುವೆ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮಹಿಳೆಯರು ಸೇರಿದಂತೆ ಒಟ್ಟು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೆಯಲ್ಲಿ 18-19 ಜನರಿದ್ದರು, ಎಂಟು ಜನರನ್ನು ರಕ್ಷಿಸಲಾಗಿದ್ದು, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ತಂಡ, ಮುನ್ಸಿಪಲ್ ಕಾರ್ಪೊರೇಷನ್ ತಂಡ, ವೈದ್ಯಕೀಯ ತಂಡ, ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು “ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಕೈಗೊಳ್ಳುವಂತೆ ನಮಗೆ ಸೂಚಿಸಿದ್ದಾರೆ. ಸ್ಫೋಟಕ್ಕೆ ಕಾರಣಗಳನ್ನು ತನಿಖೆ ಮಾಡಲಾಗುತ್ತದೆ” ಎಂದು ಜಿಲ್ಲಾಧಿಕಾರಿ ಹೇಳಿದರು.

Read More

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಹಿಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಮಳೆಗೆ ಸಾವಿರಾರು ಎಕರೆ ಬೆಳೆ ನಷ್ಟವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕಳೆದ 2-3 ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಗೆ ಸುಮಾರು 36 ಸಾವಿರ ಹೆಕ್ಟೇ‌ರ್ ಪ್ರದೇಶವ್ಯಾಪ್ತಿಯ ಬೆಳೆ ಹಾನಿಗೊಳಗಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 25 ಸಾವಿರ ಹೆಕ್ಟೇರ್ ಅಡಕೆ ಬೆಳೆಗೆ ಕೊಳೆ ರೋಗ ತಗುಲಿದೆ. 3,000 ಹೆಕ್ಟೇರ್ ಪ್ರದೇಶದಲ್ಲಿನ ಈರುಳ್ಳಿ ಬೆಳೆ ಹಾನಿಯಾಗಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನಲ್ಲಿ 850 ಎಕರೆಗೂ ಹೆಚ್ಚು ಪ್ರದೇಶವ್ಯಾಪ್ತಿಯ ಮೆಕ್ಕೆಜೋಳ ಬೆಳೆ ಹಾನಿಯಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 350 ರ್‌ಭತ್ತದ ಬೆಳೆ ಹಾನಿಯಾಗಿದ್ದರೆ, 900 ಹೆಗ್ಡೆ ಹೆಕ್ಟೇರ್‌ಗೂ ನ್‌ಗೂ ಅಧಿಕ ವ್ಯಾಪ್ತಿಯ ಮೆಕ್ಕೆಜೋಳ, ಈರುಳ್ಳಿ, ಮೆಣಸಿನಕಾಯಿ ಬೆಳೆಗಳು ಹಾನಿಗೊಳಗಾಗಿವೆ ಹಾವೇರಿ ಜಿಲ್ಲೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಎಕರೆಯಲ್ಲಿ ಬೆಳೆದಿದ್ದ ಈರುಳ್ಳಿ, ಕಡ್ಲೆ ಬೆಳೆ ಹಾನಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಲ್ಲಿ ಹಲವಡೆ ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದ ಪರಿಣಾಮ ಹೊಲ,…

Read More