Subscribe to Updates
Get the latest creative news from FooBar about art, design and business.
Author: kannadanewsnow57
ರಾಯಚೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಯಚೂರಿನ ಮಸ್ಕಿ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಮಸ್ಕಿ ತಾಲೂಕಿನ ಪಗಡದಿನ್ನಿ ಕ್ಯಾಂಪ್ನ ಶರಣಬಸವ (32) ಮೃತ ವ್ಯಕ್ತಿಯಾಗಿದ್ದು, ಎದೆನೋವಿನಿಂದ ನರಳುತ್ತಿದ್ದ ಶರಣಬಸವನನ್ನು ಆತನ ಸ್ನೇಹಿತರು ಚಿಕಿತ್ಸೆಗಾಗಿ ಬೈಕ್ ನಲ್ಲಿಯೇ ಮಸ್ಕಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದರು. ಆದರೆ ಆ ಸಮಯದಲ್ಲಿ ಆಸ್ಪತ್ರೆಯಲ್ಲಿ ವೈದ್ಯರು ಇರಲಿಲ್ಲ. ಅಲ್ಲಿದ್ದ ನರ್ಸ್ಗಳು ಆತನಿಗೆ ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಕೂಡ ಫಲಕಾರಿಯಾಗಿರಲಿಲ್ಲ. ಪ್ರಾಣ ಉಳಿಸಲು ಆತನ ಸ್ನೇಹಿತರು, ಸಂಬಂಧಿಕರು ನಾನಾ ಪ್ರಯತ್ನಗಳನ್ನು ಮಾಡಿದ್ದು, ಬಳಿಕ ಆರೋಗ್ಯ ಕೇಂದ್ರದಿಂದ ಸಿಂಧನೂರು ತಾಲೂಕಾಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ನರಳಾಡಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ `ಹಾರ್ಟ್ ಅಟ್ಯಾಕ್’ ಗೆ 11 ಜನರು ಬಲಿ ರಾಜ್ಯದಲ್ಲಿ ನಿನ್ನೆ ಒಂದೇ ದಿನ ಬರೋಬ್ಬರಿ 11 ಮಂದಿ ಹೃದಯಾಘಾತಕ್ಎಕ ಬಲಿಯಾಗಿದ್ದಾರೆ. ತುಮಕೂರಿನಲ್ಲಿ ಮೂವರು ನಿನ್ನೆ ಒಂದೇ…
ಅಮೃತಸರ : ಪಂಜಾಬ್ ನ ಹೋಶಿಯಾರ್ಪುರದಲ್ಲಿ ರಾಕ್ಷಸಿ ಕೃತ್ಯವೊಂದು ನಡೆದಿದ್ದು, ವ್ಯಕ್ತಿಯೊಬ್ಬ ಮಲಗಿದ್ದ ನಾಯಿಯನ್ನು ಗುಂಡಿಕ್ಕಿ ಕೊಂದ ಆಘಾತಕಾರಿ ಘಟನೆ ನಡೆದಿದೆ. ದುಷ್ಕರ್ಮಿಯ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಡಬಲ್ ಬ್ಯಾರೆಲ್ ಗನ್ ಹಿಡಿದ ವ್ಯಕ್ತಿ ಮಲಗಿದ್ದ ನಾಯಿಗೆ ಗುಂಡು ಹಾರಿಸುವುದನ್ನು ವೀಡಿಯೊದಲ್ಲಿ ಕಾಣಬಹುದು. ನಾಯಿ ನೋವಿನಿಂದ ನರಳುತ್ತಿದ್ದರೂ ಸಾಯುವರೆಗೆ ಗುಂಡು ಹಾರಿಸಿದ್ದಾನೆ. ಈ ವಿಡಿಯೋ ಪಂಜಾಬ್ನ ಹೋಶಿಯಾರ್ಪುರದಿಂದ ಬರುತ್ತಿದೆ. ದುಷ್ಕರ್ಮಿ ಮಲಗಿದ್ದ ನಾಯಿಗೆ ಗುಂಡು ಹಾರಿಸಿದ್ದಾನೆ. ನೀವು ಬಯಸಿದರೆ, ಅವನನ್ನು ಹಿಡಿಯಬಹುದು. ಅವನನ್ನು ಪತ್ತೆಹಚ್ಚಲು ಈ ವಿಡಿಯೋವನ್ನು ಹೆಚ್ಚು ಹೆಚ್ಚು ಹಂಚಿಕೊಳ್ಳಿ ಎಂದು ಟ್ವೀಟ್ ಮಾಡಲಾಗಿದೆ. https://twitter.com/sanataniVishall/status/1942268371216802130?ref_src=twsrc%5Etfw%7Ctwcamp%5Etweetembed%7Ctwterm%5E1942268371216802130%7Ctwgr%5E0f417395376e4d8b7f5652b665d9007875bce3ff%7Ctwcon%5Es1_c10&ref_url=https%3A%2F%2Fkannadadunia.com%2Fthe-disfigured-man-shot-and-killed-a-dog-shocking-video-goes-viral-watch-video%2F
ನವದೆಹಲಿ : ಬ್ಯಾಂಕಿಂಗ್, ವಿಮೆ, ಅಂಚೆ ಸೇವೆಗಳಿಂದ ಕಲ್ಲಿದ್ದಲು ಗಣಿಗಾರಿಕೆಯವರೆಗೆ 25 ಕೋಟಿಗೂ ಹೆಚ್ಚು ಕಾರ್ಮಿಕರು ಬುಧವಾರ ನಡೆಯಲಿರುವ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿರುವ ಈ ಮುಷ್ಕರವನ್ನು ಕೇಂದ್ರ ಸರ್ಕಾರದ “ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಕಾರ್ಪೊರೇಟ್ ಪರ ನೀತಿಗಳು” ಎಂದು ಒಕ್ಕೂಟಗಳು ಲೇಬಲ್ ಮಾಡಿರುವುದನ್ನು ವಿರೋಧಿಸಿ ‘ಭಾರತ್ ಬಂದ್’ ಎಂದು ವಿವರಿಸಲಾಗಿದೆ. ಔಪಚಾರಿಕ ಮತ್ತು ಅನೌಪಚಾರಿಕ ವಲಯಗಳಲ್ಲಿ ತಿಂಗಳುಗಳ ತೀವ್ರ ಸಿದ್ಧತೆಗಳನ್ನು ಉಲ್ಲೇಖಿಸಿ “ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು ಭರ್ಜರಿಯಾಗಿ ಯಶಸ್ವಿಗೊಳಿಸಲು” ಕಾರ್ಮಿಕ ಸಂಘಗಳು ಕರೆ ನೀಡಿವೆ. “25 ಕೋಟಿಗೂ ಹೆಚ್ಚು ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ದೇಶಾದ್ಯಂತ ರೈತರು ಮತ್ತು ಗ್ರಾಮೀಣ ಕಾರ್ಮಿಕರು ಸಹ ಪ್ರತಿಭಟನೆಯಲ್ಲಿ ಸೇರಲಿದ್ದಾರೆ” ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC) ನ ಅಮರ್ಜೀತ್ ಕೌರ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ವ್ಯಾಪಕವಾದ ಈ ಮುಷ್ಕರವು ಪ್ರಮುಖ…
ನವದೆಹಲಿ : 17 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಬ್ರೆಜಿಲ್ ರಾಜಧಾನಿ ಬ್ರೆಸಿಲಿಯಾವನ್ನು ತಲುಪಿದ್ದಾರೆ. ಅವರು ಇಲ್ಲಿಗೆ ಅಧಿಕೃತ ಭೇಟಿಯಲ್ಲಿದ್ದಾರೆ, ಅಲ್ಲಿ ಅವರು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ವ್ಯಾಪಾರ, ರಕ್ಷಣೆ, ಇಂಧನ, ತಂತ್ರಜ್ಞಾನ ಮತ್ತು ಆರೋಗ್ಯದಂತಹ ಹಲವು ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿರುವ ಭಾರತ ಮತ್ತು ಬ್ರೆಜಿಲ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಗೆ ಹೊಸ ದಿಕ್ಕನ್ನು ನೀಡುವ ಉದ್ದೇಶದಿಂದ ಈ ಭೇಟಿಯನ್ನು ಕೈಗೊಳ್ಳಲಾಗುತ್ತಿದೆ. ಕಾರ್ಯತಂತ್ರದ ಪಾಲುದಾರಿಕೆಗೆ ಹೊಸ ದಿಕ್ಕು ಪ್ರಧಾನಿ ಮೋದಿ ಅವರು ಬ್ರೆಸಿಲಿಯಾಕ್ಕೆ ಆಗಮಿಸಿದಾಗ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಅವರ ಭೇಟಿಯು ಭಾರತ ಮತ್ತು ಬ್ರೆಜಿಲ್ ನಡುವಿನ ಬಹುಪಕ್ಷೀಯ ಸಹಕಾರವನ್ನು ಇನ್ನಷ್ಟು ಗಾಢವಾಗಿಸುವ ನಿರೀಕ್ಷೆಯಿದೆ. ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆ 2006 ರಿಂದ ನಡೆಯುತ್ತಿದ್ದು, ಇದನ್ನು ಈಗ ವಿಸ್ತರಿಸಲಾಗುತ್ತಿದೆ. https://twitter.com/ANI/status/1942337495867498585?ref_src=twsrc%5Etfw%7Ctwcamp%5Etweetembed%7Ctwterm%5E1942337495867498585%7Ctwgr%5E2fc4feefec9b466ffb7ab61e16eb7bb883af8e79%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fhindi%2Fdainikjagran-epaper-dh8f289d060ef1400296ad0c47fd86406b%2Fbrikssammelankebadbrasiliyapahunchepmmodiearaportparhuaabhavysvagat-newsid-n671613864
ಬೆಂಗಳೂರು : ಕಳೆದ ವರ್ಷ ಚಿತ್ರದುರ್ಗದ ರೇಣುಕಾ ಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರಿದ್ದರು. ರೇಣುಕಾಸ್ವಾಮಿಯನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರ ಗೌಡ ಸೇರಿದಂತೆ ಹದಿನೇಳು ಆರೋಪಿಗಳು ಜೈಲು ಶಿಕ್ಷೆ ಅನುಭವಿಸಿದ್ದರು. ಇದೀಗ ಬೆಂಗಳೂರಿನಲ್ಲಿ ರೇಣುಕಾಸ್ವಾಮಿ ರೀತಿಯೇ ಅಮಾನುಷ ಕೃತ್ಯ ನಡೆದಿದ್ದು ಹುಡುಗಿಯ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಹೌದು ದರ್ಶನ್ ಗ್ಯಾಂಗ್ ರೀತಿ ಮತ್ತೊಂದು ಗ್ಯಾಂಗ್ ಈ ಕೃತ್ಯ ಎಸಗಿದ್ದು, ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ ರೇಣುಕಾ ಸ್ವಾಮಿ ರೀತಿ ಮತ್ತೊಂದು ಅಮಾನುಷ ಕೃತ್ಯ ನಡೆದಿದ್ದು ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ರಾಕ್ಷಸರಂತೆ ವರ್ತಿಸಿದ ಇವರಿಗೆ ದರ್ಶನ್ ಸ್ಪೂರ್ತಿ ಎಂದು ಹೇಳಲಾಗುತ್ತಿದೆ. ನೀನು ರೇಣುಕಾ…
BIG NEWS : ರಾಜ್ಯದಲ್ಲಿ `CBSE’ ಮಾದರಿಯಲ್ಲಿ ನಡೆಯಲಿದೆ `SSLC’ ಪರೀಕ್ಷೆ : 33 ಅಂಕ ಪಡೆದರೂ ವಿದ್ಯಾರ್ಥಿಗಳು ಪಾಸ್.!
ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸಿಬಿಎಸ್ಇ ಮಾದರಿ ಅಳವಡಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಸ್ತಾಪನೆ ಸಲ್ಲಿಸಿದ್ದು, ಇನ್ಮುಂದೆ ವಿದ್ಯಾರ್ಥಿಗಳು ಕನಿಷ್ಠ 33 ಅಂಕ ಪಡೆದವರನ್ನೂ ತೇರ್ಗಡೆ ಮಾಡಲಾಗುತ್ತದೆ. ಹೌದು, ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ಮಕ್ಕಳು ಇನ್ನು ಮುಂದೆ ಸಿಬಿಎಸ್ಇ ಮಾದರಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಸಿಬಿಎಸ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆಂತರಿಕ ಅಂಕ ಸೇರಿ ಒಟ್ಟು ಶೇಕಡ 33 ಅಂಕ ಪಡೆದರೂ ಪಾಸ್ ಆಗುತ್ತಾರೆ. ಪ್ರತಿ ವಿಷಯಕ್ಕೆ 20 ಆಂತರಿಕ ಅಂಕಗಳು ನಿಗದಿಪಡಿಸಿದ್ದು, 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಎರಡೂ ಸೇರಿ 100 ಅಂಕಗಳಿಗೆ ಕನಿಷ್ಠ 33 ಅಂಕ ಪಡೆದವರು ಪಾಸ್ ಆಗುತ್ತಾರೆ. ಇದೇ ಮಾದರಿಯನ್ನು ರಾಜ್ಯ ಪಠ್ಯಕ್ರಮದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಳವಡಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷಾ ನಿಯಮದ ಪ್ರಕಾರ ಒಬ್ಬ ವಿದ್ಯಾರ್ಥಿ ಪಾಸಾಗಲು…
ಬೆಂಗಳೂರು : ರಾಜ್ಯದಲ್ಲಿ ಹೃದಯಾಘತದಿಂದ ಸಾವಿಗೀಡಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ನಿನ್ನೆ ಒಂದೇ ದಿನ ಕರ್ನಾಟಕದಲ್ಲಿ ಹೃದಯಾಘಾತದಿಂದ 11 ಮಂದಿ ಮೃತಪಟ್ಟಿದ್ದಾರೆ. ಹೌದು, ರಾಜ್ಯದಲ್ಲಿ ನಿನ್ನೆ ಒಂದೇ ದಿನ ಬರೋಬ್ಬರಿ 11 ಮಂದಿ ಹೃದಯಾಘಾತಕ್ಎಕ ಬಲಿಯಾಗಿದ್ದಾರೆ. ತುಮಕೂರಿನಲ್ಲಿ ಮೂವರು ನಿನ್ನೆ ಒಂದೇ ದಿನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತುಮಕೂರಿನ ಹನುಮಂತಪುರದ ನಿವಾಸಿಗಳಾದ ಜಯಂತ್ (31) ಹಾಗೂ ಶ್ರೀಧರ್ (52) ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ಶಾಂತವ್ವ ತೋಟಗೇರ (56) ಮಗಳನ್ನು ಗಂಡನ ಮನೆಯಿಂದ ಕರೆದುಕೊಂಡು ಬರಲು ಸಮೀಪದ ಹೆಬ್ಬಳ್ಳಿ ಗ್ರಾಮಕ್ಕೆ ಹೋದಾಗ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಹುಬ್ಬಳ್ಳಿ ಕೆಎಂಸಿಆರ್ಐ ಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನಲ್ಲಿ ಸೋಮವಾರ ಒಂದೇ ದಿನ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಪಟ್ಟಣದ ನಾರಾಯಣ ರಾಯ್ಕರ (52), ಬಸಪ್ಪ ಸತ್ಯಪ್ಪ ಬಾಗಲಕೋಟಿ (78) ತಾಲೂಕಿನ ಬಸಾಪೂರ ಗ್ರಾಮದ ಅಣ್ಣಪೂರ್ಣಮ್ಮ ಯಲ್ಲಪ್ಪ ಚವಡಿ (56) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ರಾಯಚೂರು ಜಿಲ್ಲೆ…
ಬೆಂಗಳೂರು : ರಾಜ್ಯದಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಾನ್ಸೂನ್ ಚುರುಕಾಗಿದೆ. ಈಗಾಗಲೇ ಮಲೆನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಹಲವು ಅವಾಂತರಗಳು ಸಹ ಸೃಷ್ಟಿಯಾಗಿವೆ. 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 14ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ…
ಬೆಂಗಳೂರು: 2025-26ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರ ಘೋಷಣೆಯಂತೆ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದ್ದು ಈ ಯೋಜನೆಯನ್ನು 2025-26ನೇ ಸಾಲಿನಲ್ಲಿ ಮುಂದುವರೆಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. 1-10 ನೇ ತರಗತಿ ವರೆಗೂ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಸರ್ಕಾರ ಘೋಷಣೆ ಮಾಡಿದೆ. ಆದರೆ, ಕೆಲವು ಶಾಲೆಗಳಲ್ಲಿ SDMC ಸೂಚನೆ ಮೇರೆಗೆ 3 ದಿನ ಮೊಟ್ಟೆ, 3 ದಿನ ಬಾಳೆಹಣ್ಣು ಕೊಡಲಾಗುತ್ತಿದೆ. ಸೋಮವಾರ ಮತ್ತು ಶನಿವಾರ ಮೊಟ್ಟೆ ಕೊಡದೆ ಬಾಳೆಹಣ್ಣು ವಿತರಿಸಲಾಗುತ್ತಿದೆ. 762 ಶಾಲೆಗಳಲ್ಲಿ ಪರಿಶೀಲನೆ ಮಾಡಿದಾಗ ಸುಮಾರು 568 ಶಾಲೆಗಳಲ್ಲಿ…
ಶಿವಮೊಗ್ಗ: ರಾಜ್ಯದಲ್ಲಿ ಮತ್ತೊಂದು ಆಘಾತಕಾರಿ ಘಟನೆಯೊಂದು ನಡೆದಿದ್ದು ದೆವ್ವ ಬಿಡಿಸುವುದಾಗಿ ಹೇಳಿ ಚಿತ್ರಹಿಂಸೆ ನೀಡಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಜಂಬರಗಟ್ಟೆಯಲ್ಲಿ ಮಹಿಳೆಗೆ ದೆವ್ವ ಸೇರಿಕೊಂಡಿದ್ದು ಅದನ್ನು ಬೀಡಿಸುವುದಾಗಿ ಹೇಳಿ ಚಿತ್ರಹಿಂಸೆ ನೀಡಿದ್ದಾರೆ. ಈ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಸಾವನ್ನಪ್ಪಿದ್ದಾರೆ. ಜಂಬರಗಟ್ಟೆ ನಿವಾಸಿ ಗೀತಮ್ಮ (50) ಸಾವನ್ನಪ್ಪಿದ ಮಹಿಳೆ. ತಾಯಿಗೆ ಹುಷಾರಿಲ್ಲದ ಹಿನ್ನೆಲೆ ಮಗನೇ ದೆವ್ವ ಬಿಡಿಸಲು ಹೊಸ ಜಂಬರಘಟ್ಟಕ್ಕೆ ಕರೆದುಕೊಂಡು ಹೋಗಿದ್ದ. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಗೀತಮ್ಮನನ್ನು ದೆವ್ವ ಹಿಡಿದಿದೆ ಎಂದು ಕರೆದುಕೊಂಡು ಹೋಗಿದ್ದ. ಈ ವೇಳೆ ದೆವ್ವಾ ಬಿಡಿಸುತ್ತೇನೆ ಎಂದು ಶಾಂತಮ್ಮ ಎಂಬ ಮಹಿಳೆ ಗೀತಮ್ಮನಿಗೆ ಚಿತ್ರಹಿಂಸೆ ನೀಡಿದ್ದಾಳೆ ಎನ್ನಲಾಗಿದ್ದು, ಚಿತ್ರಹಿಂಸೆ ತಾಳಲಾರದೇ ಗೀತಮ್ಮ ಸಾವನ್ನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.