Author: kannadanewsnow57

ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನವೆಂಬರ್ 20 ರ ಇಂದು ಕೊನೆಯ ದಿನವಾಗಿದೆ. ನೀವು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೇ ತಪ್ಪದೇ ಅರ್ಜಿ ಸಲ್ಲಿಸಿ. ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಹತೆ – ಎಸ್ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು. ಆಯ್ಕೆಯ ವಿಧಾನ-…

Read More

ಬೆಂಗಳೂರು : ಭಾರತದ ಮೊದಲ ಗ್ಲೋಬಲ್ ಕೆಪೆಬಿಲಿಟಿ ಸೆಂಟರ್ ನೀತಿಯನ್ನು ಕರ್ನಾಟಕ ಜಾರಿಗೆ ತಂದಿದ್ದು, ನಮ್ಮ ಸರ್ಕಾರವು ಈ ಕೇಂದ್ರಗಳನ್ನು ಸಶಕ್ತಗೊಳಿಸಲು ಹಾಗೂ ಬೆಂಬಲಿಸಲು ಉದ್ದೇಶಿಸಿದೆ. ಇದರ ಮುಂದುವರೆದ ಭಾಗವಾಗಿ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ಜಾಗತಿಕ ನಾವೀನ್ಯತಾ ಜಿಲ್ಲೆಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು ಅರಮನೆಯಲ್ಲಿ ಏರ್ಪಡಿಸಲಾಗಿರುವ ಮೂರು ದಿನಗಳ 27 ನೇ ಆವೃತ್ತಿಯ ಬೆಂಗಳೂರು ತಂತ್ರಜ್ಞಾನ ಶೃಂಗ-2024ವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂಡಿಯನ್ ವೆಂಚರ್ ಮತ್ತು ಆಲ್ಟರ್ನೇಟ್ ಕ್ಯಾಪಿಟಲ್ ಅಸೋಸಿಯೇಷನ್ (IVCA) ಜೊತೆಗಿನ ನಮ್ಮ ಸಹಯೋಗದ ಮೂಲಕ 200ಕ್ಕೂ ಹೆಚ್ಚು ನವೋದ್ಯಮಗಳಿಗೆ 100 ಧನಸಹಾಯ ಸಂಸ್ಥೆಗಳಿಂದ ಬಂಡವಾಳ ಹೂಡಿಕೆ, ಮಾರ್ಗದರ್ಶನ ಕೊಡಿಸಲಾಗಿದ್ದು ಬೆಳವಣಿಗೆಯ ಅವಕಾಶಗಳನ್ನು ಒದಗಿಸಲಾಗಿದೆ ಎಂದರು. ಕೋಚನಹಳ್ಳಿಯಲ್ಲಿ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ (EMC) ನ್ನು ಸ್ಥಾಪಿಸಲಾಗುವುದು. ಇದು ಜಾಗತಿಕ ಸೆಮಿಕಂಡಕ್ಟರ್ ಉದ್ಯಮದಲ್ಲಿ ಕರ್ನಾಟಕದ ಪಾತ್ರವನ್ನು ಮತ್ತಷ್ಟು ಹೆಚ್ಚಿಸುತ್ತದೆಯಲ್ಲದೆ ಉದ್ಯೋಗಗಳನ್ನು ಸೃಷ್ಟಿಸಿ, ನಗರ ಮತ್ತು ಗ್ರಾಮೀಣ ಪ್ರದೇಶಗಳ ಆರ್ಥಿಕ ಬೆಳವಣಿಗೆಗೆ ವೇಗ…

Read More

ಬೆಂಗಳೂರು : ಶಿಕ್ಷಕರ ಹುದ್ದೆ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಂಧತ್ವ ಹೊಂದಿರುವ ಮಹಿಳೆಯೊಬ್ಬರಿಗೆ ಹೈಕೋರ್ಟ್ ಅನುಮತಿಸಿ ಮಹತ್ವದ ಆದೇಶ ಹೊರಡಿಸಿದೆ. ಹೋಮರ್, ಹೆಲೆನ್ ಕೆಲ್ಲರ್ ಮತ್ತು ಲೂಯಿಸ್ ಬ್ರೈಲ್ ಅವರಂತಹ ದೃಷ್ಟಿ ವಿಕಲಚೇತನರ ಉದಾಹರಣೆಗಳನ್ನು ಉಲ್ಲೇಖಿಸಿ, ಕರ್ನಾಟಕ ಹೈಕೋರ್ಟ್ ಶಿಕ್ಷಕರ ಕರ್ತವ್ಯ ನಿರ್ವಹಣೆಯಲ್ಲಿ ಕುರುಡುತನಕ್ಕೆ ಅಡ್ಡಿಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರು ಕರ್ನಾಟಕ ಹೊರಡಿಸಿದ ಆದೇಶವನ್ನು ಎತ್ತಿ ಹಿಡಿದಿದ್ದಾರೆ ಉದ್ಯೋಗದ ವಿಷಯಕ್ಕೆ ಬಂದರೆ, ‘ಕಡಿಮೆ ದೃಷ್ಟಿ’ ಹೊಂದಿರುವ ಅಭ್ಯರ್ಥಿಗಳಿಗಿಂತ ‘ಸಂಪೂರ್ಣ ಕುರುಡುತನ’ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ, ಏಕೆಂದರೆ ಅವರು ಹೆಚ್ಚು ಅನನುಕೂಲಕರ ಸ್ಥಾನದಲ್ಲಿದ್ದಾರೆ. ಆದರೆ ಇದು ಅವರ ಅಂಗವೈಕಲ್ಯ ಕರ್ತವ್ಯಗಳನ್ನು ನಿರ್ವಹಿಸುವ ರೀತಿಯಲ್ಲಿ ಬರುವುದಿಲ್ಲ ಎಂಬ ಸ್ಥಿತಿಗೆ ಒಳಪಟ್ಟಿರುತ್ತದೆ. ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಶಾಲಾ ಶಿಕ್ಷಣ ಇಲಾಖೆ ಮತ್ತು ಇತರರು…

Read More

ಹಾವೇರಿ : ಮನೆಯಲ್ಲಿ ಮಕ್ಕಳನ್ನು ಒಂಟಿಯಾಗಿ ಬಿಡುವ ಪೋಷಕರೇ ಎಚ್ಚರ. ಸ್ನಾನದ ಮನೆಯಲ್ಲಿ ಇಟ್ಟಿದ್ದ ನೀರಿನ ಡ್ರಮ್ ನಲ್ಲಿ ಬಿದ್ದು ಎರಡು ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ನೀರಲಕಟ್ಟಿ ಗ್ರಾಮದಲ್ಲಿ ನೀರಿನ ಡ್ರಮ್ ಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದೆ. ಗ್ರಾಮದ ಆದಿತ್ಯಾ ಲಮಾಣಿ ಮೃತಪಟ್ಟ ಮಗು. ಮೃತಪಟ್ಟ ಆದಿತ್ಯಾ ಲಮಾಣಿ ಪೋಷಕರು ಕೆಲಸಕ್ಕೆಂದು ಹೊರಗಡೆ ಹೋಗಿದ್ದಾಗ ಮಗು ಆಟವಾಡುತ್ತಾ ಸ್ನಾನದ ಮನೆಗೆ ಹೋಗಿದ್ದು, ಈ ವೇಳೆ ನೀರಿನ ಡ್ರಮ್ ನಲ್ಲಿ ಬಿದ್ದು ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ.

Read More

ಚಾಮರಾಜನಗರ : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅಕ್ರಮ-ಸಕ್ರಮ ಯೋಜನೆ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವವರು, ಅಕ್ರಮ ಸಕ್ರಮ ಯೋಜನೆ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದೆ. ಮೊದಲ ಆದ್ಯತೆ ಮೇರೆಗೆ 1,500 ಅರ್ಜಿಗಳನ್ನು ತೆಗೆದುಕೊಳ್ಳಲಿದ್ದು, ಎರಡು ವರ್ಷದೊಳಗೆ ಬಾಕಿ ಎಲ್ಲಾ ಅರ್ಜಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ರೈತರ ಕೃಷಿ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ.  ವಿದ್ಯುತ್ ಕಳವು ತಪ್ಪಿಸಲು ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಕಡ್ಡಾಯ ಮಾಡಲಾಗಿದ್ದು, ಇದರಿಂದ ರೈತರಿಗೆ ಅನುಕೂಲವಾಗುತ್ತದೆ. ಆಧಾರ್ ಜೋಡಣೆಯಿಂದ ವಿದ್ಯುತ್ ಕಳ್ಳತನ ತಪ್ಪಲಿದೆ ಹೇಳಿದ್ದಾರೆ. ಕೃಷಿ ಪಂಪ್ ಸೆಟ್ ಅಕ್ರಮ ಸಕ್ರಮದಡಿ 4 ಲಕ್ಷ ಅರ್ಜಿಗಳು ಬಾಕಿ ಉಳಿದಿದ್ದು, ಅವುಗಳೆಲ್ಲ ಕಡಿಮೆಯಾಗಿದೆ. ವಿದ್ಯುತ್ ಲೈನ್ ನಿಂದ 500 ಮೀಟರ್ ಒಳಗೆ ಇರುವ ಕೃಷಿ ಪಂಪ್ಸೆಟ್ ಗಳ ಸಕ್ರಮಕ್ಕೆ ಕ್ರಮ ವಹಿಸಲಾಗುವುದು. 500 ಮೀ.ಗಿಂತ…

Read More

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ಖಂಡಿಸಿ ಇಂದು ಮದ್ಯ ಮಾರಾಟಗಾರರಿಂದ ಎಣ್ಣೆ ಮಾರಾಟ ಬಂದ್ ಮಾಡಿ ಪ್ರತಿಭಟನೆ ನಿರ್ಧರಿಸಲಾಗಿತ್ತು. ನಿನ್ನೆ ಸಿಎಂ ಸಿದ್ಧರಾಮಯ್ಯ ಜೊತೆಗಿನ ಮಾತುಕತೆ ಸಕ್ಸಸ್ ಆದ ಪರಿಣಾಮ, ಇಂದು ರಾಜ್ಯಾಧ್ಯಂತ ಬಾರ್ ಬಂದ್ ಮಾಡದೇ, ಮದ್ಯ ಮಾರಾಟ ಮಾಡಲು ನಿರ್ಧರಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸ್ವಚ್ಛ ಅಬಕಾರಿ ಅಭಿಯಾನದಡಿ ನ. 20ರ ಇಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್‌ ಅಸೋಸಿಯೇಶನ್ ಕರ್ನಾಟಕ ಕರೆ ನೀಡಿತ್ತು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಂತ  ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ, ಅಬಕಾರಿ ಇಲಾಖೆ ಯನ್ನು ಆರ್ಥಿಕ ಸಚಿವರೇನಿರ್ವಹಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಬೇಕು. ವ್ಯಾಪಾರಿಗಳು ಪರವಾನಗಿ ಪಡೆಯುವಾಗ ಹಾಗೂ ಮರು ನೋಂದಣಿ ಮಾಡಿಕೊಳ್ಳುವಾಗ ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಗೃಹ ಕಚೇರಿ…

Read More

ಬೆಂಗಳೂರು : ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಭಾರತ್ ಜೋಡೋ ಭವನದಲ್ಲಿರುವ ಇಂದಿರಾಗಾಂಧಿ ಅಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳೆಯರಿಗೆ ಮೀಸಲಾತಿಯನ್ನು 2028 ರಲ್ಲಿ ಕೊಡುವುದಾಗಿ ಹೇಳುವ ನರೇಂದ್ರ ಮೋದಿ ಅವರು ಅದನ್ನು ಈಗಲೇ ಮಾಡಬಹುದಿತ್ತು. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಹಾಗೂ ಬದ್ಧತೆ ಅಗತ್ಯವಿದೆ. ಸಂಸತ್ತಿನಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ನಮ್ಮ ತಕರಾರೇನಿಲ್ಲ, ನಾವೇ ಇದನ್ನು ಜಾರಿಗೆ ತರಬೇಕು ಎಂದಿದ್ದೆವು. ಜಿಲ್ಲಾ ಪಂಚಾಯತಿ, ಪಟ್ಟಣ ಪಂಚಾಯತಿಗಳಲ್ಲಿ 50% ಮೀಸಲಾತಿ ಇದೆ. ಮಹಿಳೆಯರಿಗೆ ಸಮಾನ ಅವಕಾಶಗಳು ದೊರಕಬೇಕು. ಸಂಸತ್ತು, ವಿಧಾನಸಭೆಯಲ್ಲಿಯೂ ಮೀಸಲಾತಿ ನೀಡಲು ನಮ್ಮ ತಕರಾರು ಇಲ್ಲ ಎಂದರು. ದೇಶದ ಐಕ್ಯತೆಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಇಂದಿರಾ ಗಾಂಧಿಯವರ ಬದುಕು ನಮ್ಮೆಲ್ಲರಿಗೂ ಆದರ್ಶ. ಅವರು…

Read More

ನವದೆಹಲಿ : ಇಂದು ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬೆಳಗ್ಗೆ 7 ಗಂಟೆಗೆ ಮತದಾನಕ್ಕೆ ಚುನಾವಣಾ ಆಯೋಗವು ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ ಇಂದು ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್, ಕೇರಳ ಮತ್ತು ಉತ್ತರಾಖಂಡದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಶಿವಸೇನೆ ಮತ್ತು ಎನ್‌ಸಿಪಿ ಕ್ರಮವಾಗಿ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ನೇತೃತ್ವದ ಪ್ರತಿಸ್ಪರ್ಧಿ ಬಣಗಳಾಗಿ ವಿಭಜನೆಯಾದ ನಂತರ ಇದು ಮೊದಲ ವಿಧಾನಸಭಾ ಚುನಾವಣೆಯಾಗಿದೆ. ಮತದಾನ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. 2,086 ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ ಒಟ್ಟು 4,136 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಜ್ಯದಲ್ಲಿ ಸುಮಾರು 9.70 ಕೋಟಿ ಮತದಾರರಿದ್ದಾರೆ. ಬಿಜೆಪಿ 149, ಶಿವಸೇನೆ 81, ಎನ್‌ಸಿಪಿ 59 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿವೆ. ಕಾಂಗ್ರೆಸ್ 101 ಅಭ್ಯರ್ಥಿಗಳು, ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಎಸ್‌ಪಿ) 86 ಅಭ್ಯರ್ಥಿಗಳನ್ನು…

Read More

ಬೆಂಗಳೂರು : ನವೆಂಬರ್ 17 ರಂದು ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನಡೆಸಿದ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ. ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ನಲ್ಲಿ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ನವೆಂಬರ್ 26ರಂದು ಸಂಜೆ 5:30ರ ಒಳಗೆ ಅಂಚೆಯ ಮೂಲಕ ಪರೀಕ್ಷಾ ನಿಯಂತ್ರಕರಿಗೆ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ, ನವೆಂಬರ್.20, 2024ರ ಇಂದು, ನವೆಂಬರ್.21, 2024ರ ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ನಿರ್ವಹಣಾ ಕಾಮಗಾರಿ ನಿಮಿತ್ತ ನವೆಂಬರ್.20ರ ನಾಳೆಯ ಬುಧವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇಂದು ಈ ಏರಿಯಾಗಳಲ್ಲಿ ಪವರ್ ಕಟ್ ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್​ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ರಾಮಾಂಜನೇಯ ನಗರ, ನಂದ ಕುಮಾರ್ ಲೇಔಟ್, ಉತ್ತರಹಳ್ಳಿ ಮೇನ್ ರೋಡ್, ಉದಯ ನಗರ, ಗೌಡನ ಪಾಳ್ಯ, ಟೆಲಿಕಾಂ ಲೇಔಟ್, ಮುನೇಶ್ವರ ನಗರ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಸುತ್ತಮುತ್ತಲ ಪ್ರದೇಶ, ನಾಯ್ಡು ಲೇಔಟ್, ಎಜಿಎಸ್ ಲೇಔಟ್, ಹನುಮ ಆದಶð ಅಪಾಟ್ðಮೆಂಟ್ 1 & 2, ಹಿಲ್ಸ್ ಲೇಔಟ್, ಕಾಮಾಕ್ಯ ಲೇಔಟ್, ಹೊಸಕೆರೆಹಳ್ಳಿ, ಟಾಟಾ…

Read More