Author: kannadanewsnow57

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯು ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆದಿದ್ದು, ವಿಚಾರಣೆ ಮುಂದೂಡಿಕೆ ಆಗಿದೆ. ಬೇಸಿಗೆ ರಜೆ ಬಳಿಕ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಡಿಸೆಂಬರ್ 2024ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ.

Read More

ಮೈಸೂರು : ಮನೆಯಲ್ಲಿ ಸಿಲಿಂಡರ್ ಬದಲಾಯಿಸುವಾಗ ಆದಷ್ಟು ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಏಕೆಂದರೆ  ಮೈಸೂರಲ್ಲಿ ಸಿಲಿಂಡರ್ ಖಾಲಿಯಾಗಿದೆ ಎಂದು ಸಿಲಿಂಡರ್ ಬದಲಾಯಿಸುವ ವೇಳೆ ಬೆಂಕಿ ಹತ್ತಿಕೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಐದು ಜನರ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೈಸೂರಿನ ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿ ನಡೆದಿದೆ. ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿರುವ ನಿಂಗರಾಜು ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ನಿಂಗರಾಜು ಪತ್ನಿ ಜ್ಯೋತಿ, ಪಕ್ಕದ ಮನೆಯ ರಾಣಿಯಮ್ಮ, ಶೀಲ, ನಾಗಮ್ಮಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಜ್ಯೋತಿ (38) ನಾಗಮ್ಮ (55) ಮೃತಪಟ್ಟಿದ್ದಾರೆ. ಘಟನೆ ಹಿನ್ನೆಲೆ ಸಿಲಿಂಡರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ದಂಪತಿಗೆ ಬೆಂಕಿ ಹತ್ತಿಕೊಂಡಿದೆ. ಜೋರಾದ ಶಬ್ದ ಕೇಳಿದ ಪಕ್ಕದ ಮನೆಯವರಾದ ರಾಣಿಯಮ್ಮ, ಶೀಲ, ನಾಗಮ್ಮರವರು ನೋಡಲು ಹೋಗುತ್ತಿದ್ದಂತೆ ಅವರ ಬಟ್ಟೆಗಳಿಗೆ ಬೆಂಕಿ ಹತ್ತಿಕೊಂಡಿದೆ. ಘಟನೆ ಸಂಬಂಧ ಹುಣಸೂರು ನಗರ ಠಾಣೆಯಲ್ಲಿ…

Read More

ತುಮಕೂರು :  ಡಾ.ಜಿ.ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜು, ಎಸ್ ಎಸ್ ಐಟಿ ಕಾಲೇಜು ಸೇರಿದಂತೆ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ವರದಿ ಸಿದ್ಧವಾಗಿದ್ದು 2025-26ನೇ ಶೈಕ್ಷಣಿಕ ಸಾಲಿನಿಂದ ಉನ್ನತ ಶಿಕ್ಷಣದಲ್ಲಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಶೀಘ್ರವೇ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಎಸ್‌ಇಪಿ ಕರಡು ರಚನಾ ಸಮಿತಿ ನೀಡಿರುವ ಮಧ್ಯಂತರ ವರದಿ ಹಿನ್ನೆಲೆಯಲ್ಲಿ 2024-25ನೇ ಸಾಲಿನಿಂದಲೇ ಎನ್‌ಇಪಿ ಅಡಿ 4 ವರ್ಷಗಳಿಗೆ ಹೆಚ್ಚಿಸಲಾಗಿದ್ದ ಪದವಿ ವ್ಯಾಸಂಗದ ಅವಧಿಯನ್ನು ಮರಳಿ 3 ವರ್ಷಗಳಿಗೆ ಇಳಿಸಲಾಗಿದೆ. ಇದೀಗ ಇಂಗ್ಲೀಷ್‌ನಲ್ಲಿರುವ ಅಂತಿಮ ವರದಿಯನ್ನು ಕನ್ನಡಕ್ಕೆ ಭಾಷಾಂತರಿಸುವ ಪ್ರಕ್ರಿಯೆ ಬಹುತೇಕ ಅಂತಿಮ ಹಂತದಲ್ಲಿದ್ದು ಈ ತಿಂಗಳ ಕೊನೆಯ ವಾರದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು, ರಾಜ್ಯ ಶಿಕ್ಷಣ ನೀತಿ ಸಿದ್ದವಾಗಿದ್ದು 2025-26ರನೇ ಸಾಲಿನಿಂದ ಜಾರಿಗೆ ಚಿಂತನೆ ನಡೆದಿ ದೆ. ಮೇ 25ರಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Read More

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದ್ದು, ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಡಿಸೆಂಬರ್ 2024ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ.

Read More

ಅಗತ್ಯವಿರುವ ಜನರಿಗೆ ಅಕ್ಕಿ, ಗೋಧಿ ಮುಂತಾದ ಪಡಿತರವನ್ನು ಪಡಿತರ ಚೀಟಿ ಮೂಲಕ ನೀಡಲಾಗುತ್ತದೆ. ಈ ಪಡಿತರ ಉಚಿತವಾಗಿ ಲಭ್ಯವಿದೆ. ಆದಾಗ್ಯೂ, ಇದಕ್ಕೂ ಅರ್ಹತೆಯನ್ನು ಕಾಯ್ದಿರಿಸಲಾಗಿದೆ. ಈಗ ಪಡಿತರ ಚೀಟಿಯ KYC ಮಾಡುವುದು ಕಡ್ಡಾಯವಾಗಿದೆ. ಪ್ರಸ್ತುತ, ನಿಮ್ಮನ್ನು ಪಡಿತರ ಚೀಟಿ ಇ-ಕೆವೈಸಿ ಮಾಡಲು ಕೇಳಲಾಗುತ್ತಿದ್ದರೆ, ಮೊದಲು ನಿಮ್ಮ ಮೊಬೈಲ್ ಸಂಖ್ಯೆಯನ್ನು ನವೀಕರಿಸಿ. ಮೊಬೈಲ್ ಸಂಖ್ಯೆಯನ್ನು ನವೀಕರಿಸದೆ, ನೀವು ಪಡಿತರ ಚೀಟಿ KYC ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಎಲ್ಲಾ ಪಡಿತರ ಚೀಟಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ನವೀಕರಿಸಬೇಕಾಗಿಲ್ಲ (Ration Card Mobile Number Update). ಮೊಬೈಲ್ ಸಂಖ್ಯೆಯನ್ನು ಯಾರು ನವೀಕರಿಸಬೇಕು? ನೀವು ಇತ್ತೀಚೆಗೆ ನಿಮ್ಮ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಿದ್ದರೆ. ನೀವು ಇನ್ನು ಮುಂದೆ ಪಡಿತರ ಚೀಟಿಯಲ್ಲಿ ನೋಂದಾಯಿಸಲಾದ ಫೋನ್ ಸಂಖ್ಯೆಯನ್ನು ಬಳಸುತ್ತಿಲ್ಲದಿದ್ದರೆ, ಮೊಬೈಲ್ ಸಂಖ್ಯೆಯನ್ನು ನವೀಕರಿಸಬೇಕಾಗುತ್ತದೆ. ಏಕೆಂದರೆ KYC ಮಾಡುವಾಗ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ. OTP ಇಲ್ಲದೆ KYC ಮಾಡುವುದು ಅಸಾಧ್ಯ. ಪಡಿತರ ಚೀಟಿಯಲ್ಲಿ ಮೊಬೈಲ್ ಸಂಖ್ಯೆಯನ್ನು ನವೀಕರಿಸುವುದು ಹೇಗೆ?…

Read More

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತೆ ನೀಡಿದ ದೂರಿನ ಆಧಾರದ ಮೇಲೆ ಶಾಸಕ ಮುನಿರತ್ನ ವಿರುದ್ಧ  ಎಫ್ ಐಆರ್ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತೆ ಮುನಿರತ್ನ ಸೇರಿ ಬೆಂಬಲಿಗಾರದ ವಸಂತ್, ಚನ್ನಕೇಶವ ವಿರುದ್ಧ ದೂರು ದಾಖಲಿಸಿದ್ದಾರೆ. 2013 ರಲ್ಲಿ ಸಾಮೂಹಿಕ ಅತ್ಯಾಚಾರ ಎಂದು ಮಹಿಳೆ ದೂರು ನೀಡಿದ್ದು, ಜೆಪಿ ಪಾರ್ಕ್ ನ ಶಾಸಕರ ಕಚೇರಿಯಲ್ಲಿ ಅತ್ಯಾಚಾರ ಎಸಗಲಾಗಿತ್ತು ಎಂದು ಆರೋಪಿಸಿದ್ದಾರೆ. ಅಪರಿಚಿತನಿಂದ ಇಂಜೆಕ್ಷನ್ ತರಿಸಿ ಇಂಜೆಕ್ಟ್ ಮಾಡಿದ್ದಾರೆ. ಇಂಜೆಕ್ಷನ್ ನಿಂದ ನನಗೆ ಇಡಿಆರ್ ಕಾಯಿಲೆಯಿದೆ ಎಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಮಹಿಳೆ ಆರೋಪಿಸಿದ್ದಾರೆ.

Read More

ವಿಜಯಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ  ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಅಪಘಾತ ಸಂಭವಿಸಿದೆ. ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದ್ದು, ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹಾಗೂ ಕಾರಿನಲ್ಲಿದ್ದ ಓರ್ವ ಸಾನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮನಗೂಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ವಿಜಯಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ  ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಅಪಘಾತ ಸಂಭವಿಸಿದೆ. ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದ್ದು, ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹಾಗೂ ಕಾರಿನಲ್ಲಿದ್ದ ಓರ್ವ ಸಾನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆಯೊಂದು ನಡೆದಿದ್ದು, ಸಾಮಾಜಿಕ ಬಹಿಷ್ಕಾರಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಮಾಂಬಳ್ಳಿ ಗ್ರಾಮದ ನಿವಾಸಿ ರಂಗಸ್ವಾಮಿ ಎಂಬುವರು ಸಾಮಾಜಿಕ ಬಹಿಷ್ಕಾರಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.

Read More