Author: kannadanewsnow57

ಬಿಜಾಪುರ: ದಕ್ಷಿಣ ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತನನ್ನು ಮಾವೋವಾದಿಗಳು ಪೊಲೀಸ್ ಮಾಹಿತಿದಾರ ಎಂಬ ಅನುಮಾನದ ಮೇಲೆ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ 35 ವರ್ಷದ ತಿರುಪತಿ ಭಂಡಾರಿ ಅವರು ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಯೋಜನೆಯ ಭಾಗವಾಗಿ ಉಸೂರು ಗ್ರಾಮದಲ್ಲಿ ಮರುಡ್ಬಕ ನಿವಾಸಿಗಳಿಗೆ ಅಕ್ಕಿ ವಿತರಿಸುತ್ತಿದ್ದಾಗ, ಐದರಿಂದ ಆರು ಮಾವೋವಾದಿಗಳ ಗುಂಪು ಉಸೂರು ಪೊಲೀಸ್ ಠಾಣೆಯಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಸ್ಥಳಕ್ಕೆ ಬಂದು ಅವರಿಂದ ಅಕ್ಕಿಯನ್ನು ತೆಗೆದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಂಡಾರಿ ಹತ್ಯೆಗೀಡಾದರು. ಭಂಡಾರಿ ಕೆಲವು ವರ್ಷಗಳಿಂದ ರಾಜಕೀಯವಾಗಿ ನಿಷ್ಕ್ರಿಯರಾಗಿದ್ದರು. ಭಂಡಾರಿ ಅವರ ಸಹೋದರರು ಸೇನೆಯಲ್ಲಿರುವುದರಿಂದ ಅವರು ಪೊಲೀಸ್ ಮಾಹಿತಿದಾರ ಎಂದು ಅವರು ಶಂಕಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರಲ್ಲಿ ಒಬ್ಬರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತು ಇನ್ನೊಬ್ಬರು ಸಿಆರ್ಪಿಎಫ್ ಬೆಟಾಲಿಯನ್ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮಾವೋವಾದಿಗಳು ಮರುಡ್ಬಾಕಾ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. 2019 ರಲ್ಲಿ, ಭಂಡಾರಿ ಮತ್ತು…

Read More

ಶಿವಮೊಗ್ಗ : ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಯಾವುದೇ ರೈತರು ಧೃತಿಗೆಡಬಾರದು. ಸರ್ಕಾರ ರೈತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಲೋಕೋಪಯೋಗಿ ಭವನದಲ್ಲಿನ ಸಭೆ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಅ.21 ಕ್ಕೆ ಸಾಗರದಲ್ಲಿ ಅರಣ್ಯ ಭೂಮಿ ಸಮಸ್ಯೆ ಕುರಿತು ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ಕೆಲಸ ಮಾಡುತ್ತಿದೆ. ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಸಂಬAಧ ಸುಪ್ರೀಂ ಕೋರ್ಟ್ನಲ್ಲಿ ಉತ್ತಮ ನ್ಯಾಯವಾದಿಗಳನ್ನು ನೇಮಿಸಿ ಐಎ ಹಾಕಲಾಗುವುದು. ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿ ಮತ್ತು ನ್ಯಾಯ ಒದಗಿಸಲು ಎಲ್ಲ ಪ್ರಯತ್ನವನ್ನು ಸರ್ಕಾರ ನಡೆಸುತ್ತಿದೆ. ರೈತರಿಗೆ ಒಳ್ಳೆಯ ಸುದ್ದಿಯನ್ನೇ ನಿಡುತ್ತೇವೆ. ಕೋರ್ಟ್ ವಿಚಾರ ಸೂಕ್ಷö್ಮವಾಗಿದ್ದು ಹುಷಾರಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಇಂದಿನ ಸಮಸ್ಯೆಯಲ್ಲ. ಹಾಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸಂತ್ರಸ್ತರು ಧೃತಿಗೆಡಬಾರದು ಎಂದರು. ಸಂತ್ರಸ್ತರ ಪರವಾದ ಹೋರಾಟವನ್ನು ನಿಲ್ಲಿಸುವುದಿಲ್ಲ. ಅದಕ್ಕಾಗಿ ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಮುಳುಗಡೆಗೆ ಸಂಬAಧಪಟ್ಟAತೆ ಚಿಕ್ಕಮಗಳೂರು ಮತ್ತು…

Read More

ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ಇಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕೆಲ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಬೆಂಗಳೂರು: “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ದಿನಾಂಕ 20.10.2024 ರಿಂದ 23.10.2024 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 22:00 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ‍್ಡನ್, ರ‍್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪರ‍್ಕ್ ನಾವು ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್ ಪವರ್ ಕಟ್ ಆಗಲಿದೆ. ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ,…

Read More

ಮೈಸೂರು: ಮೈಸೂರು: ಮುಡಾ ಹಗರಣದ ಬಳಿಕ, ಇಡಿ ಅಧಿಕಾರಿಗಳಿಗೆ ದೂರುದಾರ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಈ ದೂರು ಆಧರಿಸಿ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡಿದ್ದರು. ಈ ಬೆನ್ನಲ್ಲೇ ಮೈಸೂರಿನ ಮುಡಾ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ತಡರಾತ್ರಿ 2.30 ಕ್ಕೆ ಮುಕ್ತಾಯವಾಗಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಕಚೇರಿಯ ಮೇಲೆ ಹಗರಣ ಸಂಬಂಧ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಹುಡುಕಾಟ ನಡೆಸಿದ್ದರು. ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಅಂತ್ಯವಾಗಿದೆ. ತಡರಾತ್ರಿ 2.30ರ ವರೆಗೂ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ. ಶೋಧ ಕಾರ್ಯಾಚರಣೆ ಮುಗಿಸಿದ ಇಡಿ ಅಧಿಕಾರಿಗಳು ಎರಡು ಬಾಕ್ಸ್ ಗಳಲ್ಲಿ ದಾಖಲೆಗಳನ್ನು ತೆಗೆದುಕೊಂಡು ಬೆಂಗಳೂರಿಗೆ ತೆರಳಿದ್ದಾರೆ. ನಿವೇಶನ ಹಂಚಿಕೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಜಾರಿ ನಿರ್ದೇಶನ ಅಧಿಕಾರಿಗಳು…

Read More

ನವದೆಹಲಿ:ನಾಲ್ಕು ಕೇಂದ್ರ ಸಚಿವಾಲಯಗಳಿಗೆ ಹೊಸ ಕಾರ್ಯದರ್ಶಿಗಳು ಸೇರಿದಂತೆ ಏಳು ಕಾರ್ಯದರ್ಶಿ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ (ಎಸಿಸಿ) ಶನಿವಾರ ಅನುಮೋದನೆ ನೀಡಿದೆ ಪಶ್ಚಿಮ ಬಂಗಾಳ ಕೇಡರ್ನ (1990 ರ ಬ್ಯಾಚ್) ಐಎಎಸ್ ಅಧಿಕಾರಿ ಸುಬ್ರತಾ ಗುಪ್ತಾ ಅವರನ್ನು ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಿಸಲಾಗಿದ್ದು, ಪ್ರಸ್ತುತ ಕಾರ್ಯದರ್ಶಿ ಅನಿತಾ ಪ್ರವೀಣ್ ಅವರು ನವೆಂಬರ್ 30 ರಂದು ನಿವೃತ್ತರಾಗಲಿದ್ದಾರೆ. ರಾಜಸ್ಥಾನ ಕೇಡರ್ನ 1993ರ ಬ್ಯಾಚ್ನ ಐಎಎಸ್ ಅಧಿಕಾರಿ ತನ್ಮಯ್ ಕುಮಾರ್ ಅವರನ್ನು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಕಾರ್ಯದರ್ಶಿಯಾಗಿ ನೇಮಿಸಲಾಗಿದ್ದು, ಪ್ರಸ್ತುತ ಕಾರ್ಯದರ್ಶಿ ಲೀನಾ ನಂದನ್ ಅವರು ಡಿಸೆಂಬರ್ 31 ರಂದು ನಿವೃತ್ತರಾಗಲಿದ್ದಾರೆ. ಹರಿಯಾಣ ಕೇಡರ್ನ 1993ರ ಬ್ಯಾಚ್ನ ಐಎಎಸ್ ಅಧಿಕಾರಿ ಉಮಾಶಂಕರ್ ಅವರನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. 1993ರ ಬ್ಯಾಚ್ ನ ಎಜಿಎಂಯುಟಿ (ಅರುಣಾಚಲ ಪ್ರದೇಶ-ಗೋವಾ-ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶ) ಕೇಡರ್ ನ ಐಎಎಸ್ ಅಧಿಕಾರಿ ವಿಕ್ರಮ್ ದೇವ್ ದತ್…

Read More

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯಿಸಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 486 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗ(KPSC) ಅವಕಾಶ ಕಲ್ಪಿಸಿದೆ. ಕೊರೋನಾ ಸಂದರ್ಭದಲ್ಲಿ ಎಲ್ಲಾ ವರ್ಗದವರಿಗೂ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಕಳೆದ ತಿಂಗಳು ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಅಧಿಸೂಚನೆಗಳಿಗೆ ಸಂಬಂಧಿಸಿದಂತೆ 486 ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸಿ ಅಕ್ಟೋಬರ್ 30ರವರೆಗೆ ಅರ್ಜಿ ಸಲ್ಲಿಸಲು ಲೋಕಸೇವಾ ಆಯೋಗ ಅವಕಾಶ ಕಲ್ಪಿಸಿದೆ. ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನೆನಿ 2024. ದಿನಾಂಕ:10.09.2024ರಲ್ಲಿ ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿರುವ ಹಿನ್ನೆಲೆಯಲ್ಲಿ ಮೇಲ್ಕಂಡ ಅಧಿಸೂಚನೆಗಳಲ್ಲಿನ ವಿವಿಧ ಗ್ರೂಪ್-ಸಿ ವೃಂದದ ಹುದ್ದೆಗಳಿಗೆ ಸಾಮಾನ್ಯ ಅರ್ಹತೆ- 38 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ- 41 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ…

Read More

ಬೆಂಗಳೂರು: ಉಪ–ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ ‘ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಇನ್ಮುಂದೆ ಮನೆಯಲ್ಲಿ ಕುಳಿತು ಆಸ್ತಿ ನೋಂದಣಿ ಮಾಡಬಹುದು. ಆಸ್ತಿ ನೋಂದಣಿ ಮಸೂದೆಗೆ ವಿಧಾನಮಂಡಲವು ಇದೇ ಫೆಬ್ರುವರಿಯಲ್ಲಿ ಅನುಮೋದನೆ ನೀಡಿತ್ತು. ಅದನ್ನು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರ ಅನುಮೋದನೆಗೆ ಕಳುಹಿಸಲಾಗಿತ್ತು. ಆದರೆ, ಅವರು ಕೆಲವು ಸ್ಪಷ್ಟನೆಗಳನ್ನು ಕೇಳಿ ಮಸೂದೆಯನ್ನು ಸರ್ಕಾರಕ್ಕೆ ಮರಳಿಸಿದ್ದರು. ಸ್ಪಷ್ಟನೆ ದೊರೆತ ನಂತರ ಸೆಪ್ಟಂಬರ್ ನಲ್ಲಿ ಮಸೂದೆಗೆ ರಾಜ್ಯಪಾಲರು ಅನುಮೋದನೆ ನೀಡಿ ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿದ್ದರು. ಇದೀಗ ರಾಷ್ಟ್ರಪತಿಗಳು ಮಸೂದೆಗೆ ಅನುಮೋದನೆ ನೀಡಿದೆ. ನಂತರ ಮಸೂದೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಗೆ ಸಂಬಂಧಿಸಿದಂತೆ ಕೆಲವು ಸ್ಪಷ್ಟನೆಗಳ ಕೇಳಿದ್ದರು. ಸ್ಪಷ್ಟನೆ ದೊರೆತ ನಂತರ ಸೆಪ್ಟಂಬರ್ ನಲ್ಲಿ ಮಸೂದೆಗೆ ರಾಜ್ಯಪಾಲರು ಅನುಮೋದನೆ ನೀಡಿ ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿದ್ದರು. ಇದೀಗ ರಾಷ್ಟ್ರಪತಿಗಳು ಮಸೂದೆಗೆ ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರವು ಮಸೂದೆ ಜಾರಿಗೆ ಶನಿವಾರ ಅಧಿಸೂಚನೆ ಹೊರಡಿಸಿದೆ.

Read More

ಸಾರ್ವಜನಿಕ ವಿತರಣಾ ಪದ್ಧತಿಯಡಿ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಆಹಾರಧಾನ್ಯವನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಪಡಿತರ ವಿತರಣೆ ಕಾರ್ಯವನ್ನು ಈ ಹಿಂದೆ ಎನ್‍ಐಸಿ ತಂತ್ರಾಂಶದಿಂದ ನಿರ್ವಹಿಸಲಾಗುತ್ತಿತ್ತು. ಆದರೆ ರಾಜ್ಯಾದ್ಯಂತ ಅಕ್ಟೋಬರ ಮಾಹೆಯಿಂದ ಎನ್‍ಐಸಿ ತಂತ್ರಾಂಶದಿಂದ ಬೇರ್ಪಡಿಸಿ ಕರ್ನಾಟಕ ಸ್ಟೇಟ್ ಡೆಟಾ ಸೆಂಟರ್ (ಕೆಎಸ್‍ಡಿಸಿ) ನಿಂದ ಪಡಿತರ ವಿತರಣೆ ಕಾರ್ಯವನ್ನು ನಿರ್ವಹಿಸುತ್ತಿರುವುದರಿಂದ ಸರ್ವರ್ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸರ್ವರ್ ತೀವ್ರಗತಿಯಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ಈಗಾಗಲೇ ಕೇಂದ್ರ ಕಛೇರಿಯ ಗಮನಕ್ಕೆ ತರಲಾಗಿದ್ದು, ಕಾರ್ಡುದಾರರು ಆಂತಕಪಡುವ ಅಗತ್ಯವಿಲ್ಲ. ಅಕ್ಟೋಬರ-2024ನೇ ಮಾಹೆಯ ಪಡಿತರ ವಿತರಣೆಯನ್ನು ನಿಗದಿತ ಅವಧಿಯೊಳಗಾಗಿ ಕಾರ್ಡುದಾರರಿಗೆ ವಿತರಿಸಲಾಗುವದು. ಆದ್ದರಿಂದ ಕಾರ್ಡುದಾರರು ಆತಂಕಕ್ಕೆ ಒಳಗಾಗಬಾರದೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಇನ್ನೂ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು,  ಇಂದಿನಿಂದ ಅಕ್ಟೋಬರ್ 24 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 21 ರ ನಾಳೆ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ,…

Read More

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಅಕ್ಟೋಬರ್ 21 ರ ಸೋಮವಾರದಿಂದ ಶಾಲೆಗಳು ಮತ್ತೆ ಆರಂಭವಾಗಲಿವೆ. 2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಘೋಷಿಸಲಾಗಿತ್ತು. ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ಒಟ್ಟು 17 ದಿನ ದಸರಾ ರಜೆ ನೀಡಲಾಗಿತ್ತು. ಅಕ್ಟೋಬ‌ರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

Read More