Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದು, ಇತ್ತೀಚೆಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ಪರಿಷ್ಕರಿಸಿ 70 ವರ್ಷ ಮೇಲ್ಪಟ್ಟ ಹಿರಿಯರಿಗೆ 5 ಲಕ್ಷ ರೂ.ವರೆಗೆ ಪ್ರತ್ಯೇಕ ವಿಮಾ ಸೌಲಭ್ಯವನ್ನು ಜಾರಿಗೆ ತಂದಿದ್ದು, ಅರ್ಹರನ್ನು ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದು ರಾಜ್ಯಗಳಿಗೆ ಸೂಚನೆ ನೀಡಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ 70 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಈಗ ₹ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯುತ್ತಾರೆ ಎಂದು ಭಾರತ ಸರ್ಕಾರ ಘೋಷಿಸಿದೆ. ನಿಮ್ಮ ಕುಟುಂಬವು ಯೋಜನೆಗೆ ಅರ್ಹವಾಗಿದೆಯೇ ಅಥವಾ ಇಲ್ಲವೇ ಎಂಬುದರ ಹೊರತಾಗಿಯೂ, ಹಿರಿಯ ನಾಗರಿಕರು ಇದರ ಪ್ರಯೋಜನವನ್ನು ಪಡೆಯುತ್ತಾರೆ. ಆದಾಗ್ಯೂ, ಈ ಪ್ರಯೋಜನಗಳನ್ನು ಪಡೆಯಲು ಯೋಜನೆಯಲ್ಲಿ ನೋಂದಣಿ ಅಗತ್ಯವಿದೆ. ನೋಂದಣಿ ನಂತರ, ಹಿರಿಯ ನಾಗರಿಕರಿಗೆ ಹೊಸ ಕಾರ್ಡ್ ನೀಡಲಾಗುತ್ತದೆ. ಈ ಯೋಜನೆಯು ಬಡವರು ಮತ್ತು ಶ್ರೀಮಂತರು ಇಬ್ಬರಿಗೂ ಲಭ್ಯವಿದೆ. ಆಯುಷ್ಮಾನ್ ಭಾರತ್ ಯೋಜನೆಗೆ ಹೇಗೆ ನೋಂದಾಯಿಸಿಕೊಳ್ಳುವುದು ಮತ್ತು ಆಯುಷ್ಮಾನ್ ಭಾರತ್ ಕಾರ್ಡ್ ಪಡೆಯಲು ಅಗತ್ಯವಾದ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಸರ್ಕಾರಿ ನೌಕರನ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಇರುವ ಉಳಿಕೆ ಮೊತ್ತದ ಗರಿಷ್ಠ 90% ಅನ್ನು ಮಂಜೂರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಶೇ.90ರಷ್ಟು GPF ಹಣವನ್ನು ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ಭವಿಷ್ಯ ನಿಧಿಗಳ ಅಧಿನಿಯಮ, 1925 (1925 ರ ಕೇಂದ್ರ ಅಧಿನಿಯಮ XIX) ರ 8 ನೇ ಪ್ರಕರಣವನ್ನು ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990ರ ಕರ್ನಾಟಕ ಅಧಿನಿಯಮ 14)ರ 8 ರೊಂದಿಗೆ ಓದಿಕೊಂಡು ಅದೇ ಅಧಿನಿಯಮದ (3)ನೇ ಪ್ರಕರಣದ (1)ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ 2016 ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಈ ಮುಂದಿನ ಕರಡನ್ನು ರಚಿಸಲು…
ಬೆಂಗಳೂರು : ಆಭರಣ ಪ್ರಿಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಸತತವಾಗಿ ಚಿನ್ನ, ಬೆಳ್ಳಿ ಬೆಲೆ ಇಳಿಕೆಯಾಗುತ್ತಿದ್ದು, ನವೆಂಬರ್ 18 ರ ಇಂದೂ ಸಹ ಚಿನ್ನ, ಬೆಳ್ಳಿ ಬೆಲೆ ಇಳಿಕೆಯಾಗಿದೆ. ಇಂದು ಬೆಳಗ್ಗೆ 6.20ರ ವೇಳೆಗೆ ಕೊಂಚ ಇಳಿಕೆ ಕಂಡುಬಂದಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 60 ರೂಪಾಯಿ ಇಳಿಕೆಯಾಗಿ ರು. 75,740, ಪ್ರತಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 69,440 ತಲುಪಿದೆ. ಮತ್ತು ಹೈದರಾಬಾದ್ ಮತ್ತು ವಿಜಯವಾಡದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ರೂ. 75,590, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ. 69,280 ತಲುಪಿದೆ. ಅದೇ ಸಮಯದಲ್ಲಿ ಬೆಳ್ಳಿಯ ಬೆಲೆ ಕೆಜಿಗೆ 100 ರೂ. ಈ ಹಿನ್ನಲೆಯಲ್ಲಿ ದೇಶದ ಪ್ರಮುಖ ಭಾಗಗಳಲ್ಲಿನ ಚಿನ್ನ ಮತ್ತು ಬೆಳ್ಳಿ ದರಗಳನ್ನು ನೋಡೋಣ. ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳು (ಪ್ರತಿ 10 ಗ್ರಾಂ) (24 ಕ್ಯಾರೆಟ್, 22 ಕ್ಯಾರೆಟ್) ಮುಂಬೈನಲ್ಲಿ ರೂ.…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇತ್ತೀಚಿಗೆ ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನೀಡಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು. ಬಳಿಕ ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಡಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಿದ್ದತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೌದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾದರೂ ಕೂಡ ನಟ ದರ್ಶನ್ ಗೆ ರಿಲೀಫ್ ಇಲ್ಲದಂತಾಗಿದೆ. ಇದಕ್ಕೆ ಕಾರಣ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇದೀಗ ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ನಟ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆ ತಿಳಿಸಿ ಹೈಕೋರ್ಟ್ ನಿಂದ ಜಾಮೀನು ಪಡೆದುಕೊಂಡಿದ್ದರು. ಈ ಒಂದು ಆದೇಶವನ್ನು ಪ್ರಶ್ನಿಸಿ ಇದೀಗ ಬೆಂಗಳೂರಿನ ಪೊಲೀಸರು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಆರೋಪಿ ದರ್ಶನಿಗೆ ಮಧ್ಯಂತರ ಜಾಮೀನು ಮಂಜೂರು ಆದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲು…
ನವದೆಹಲಿ : ಪದವಿ ಪಡೆಯುವ ಅಥವಾ ಪದವಿ ಪಡೆಯಲು ಹೊರಟಿರುವ ವಿದ್ಯಾರ್ಥಿಗಳಿಗೆ ಒಂದು ದೊಡ್ಡ ಸುದ್ದಿ ಇದೆ. ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿಯಲ್ಲಿ ಹಲವು ಬದಲಾವಣೆಗಳನ್ನು ಮಾಡಿದೆ. ಸಮಿತಿಯ ಶಿಫಾರಸಿನ ಪ್ರಕಾರ, ಮುಂದಿನ ಅವಧಿಯಿಂದ ವಿದ್ಯಾರ್ಥಿಗಳು ತಮ್ಮ ಪದವಿ ಪದವಿಯನ್ನು ಸಮಯಕ್ಕೆ ಮುಂಚಿತವಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ವಿದ್ಯಾರ್ಥಿಗಳು 4 ವರ್ಷಗಳ ಪದವಿ ಕಾರ್ಯಕ್ರಮವನ್ನು 3 ವರ್ಷಗಳಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಮತ್ತು 3 ವರ್ಷಗಳ ಪದವಿ ಕಾರ್ಯಕ್ರಮವನ್ನು 2.5 ವರ್ಷಗಳಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಇದರೊಂದಿಗೆ, 3-ವರ್ಷದ ಕಾರ್ಯಕ್ರಮವನ್ನು 4-ವರ್ಷದ ಪದವಿ ಕಾರ್ಯಕ್ರಮವನ್ನಾಗಿ ಪರಿವರ್ತಿಸಲು ಬಯಸುವ ವಿದ್ಯಾರ್ಥಿಗಳಿಗೆ ಹಾಗೆ ಮಾಡಲು ಅವಕಾಶವನ್ನು ನೀಡಲಾಗುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP)-2020 ಅಡಿಯಲ್ಲಿ UGC ಈ ಬದಲಾವಣೆಯನ್ನು ಮಾಡಿದೆ. ಮುಂದಿನ ಅಧಿವೇಶನದಿಂದ ಪದವಿ ಕಾರ್ಯಕ್ರಮದಲ್ಲಿ ಪ್ರವೇಶ ಮತ್ತು ನಿರ್ಗಮನ ಬಿಂದುಗಳಿಗೆ ಅವಕಾಶ ಕಲ್ಪಿಸಲಾಗುವುದು. ಇದರ ಅಡಿಯಲ್ಲಿ, ತ್ವರಿತವಾಗಿ ಕಲಿಯುವ ಮತ್ತು ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ವಿದ್ಯಾರ್ಥಿಗಳು ಈ ಯೋಜನೆಯ…
ಲೆಬನಾನ್ : ಹಿಜ್ಬುಲ್ಲಾ ನೆಲೆಗಳ ಮೇಲೆ ಇಸ್ರೇಲ್ ಮತ್ತೆ ಏರ್ ಸ್ಟ್ರೈಕ್ ನಡೆಸಿದ್ದು, ದಾಳಿಯಲ್ಲಿ ಜ್ಬುಲ್ಲಾದ ಮುಖ್ಯ ವಕ್ತಾರ ಮೊಹಮ್ಮದ್ ಆಸೀಫ್ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಬೈರುತ್‌ನಲ್ಲಿ ಇಸ್ರೇಲಿ ವೈಮಾನಿಕ ದಾಳಿಯಿಂದ ಹಿಜ್ಬುಲ್ಲಾದ ಹಲವರು ಸಾವನ್ನಪ್ಪಿದ್ದಾರೆ. ಹಿಜ್ಬುಲ್ಲಾದ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ಇಸ್ರೇಲ್ ಹಲವರು ಪ್ರದೇಶಗಳನ್ನು ನಾಶ ಪಡೆಸಿದೆ. ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಮುಖ ಶಿಯಾ ಧರ್ಮಗುರುವಿನ ಮಗ, ಉಗ್ರಗಾಮಿ ಇಸ್ಲಾಮಿಸ್ಟ್ ಗುಂಪಿನ ಮಾಧ್ಯಮ ಸಂಬಂಧಗಳ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಅಫೀಫ್ ಹಿಜ್ಬುಲ್ಲಾ ನಡೆಸುತ್ತಿರುವ ಟಿವಿ ನೆಟ್ವರ್ಕ್ ಅಲ್ ಮನರ್ ಅನ್ನು ನಿರ್ವಹಿಸುತ್ತಿದ್ದರು. ಸೆಪ್ಟೆಂಬರ್ 28 ರಂದು ಹಿಜ್ಬುಲ್ಲಾದ ದೀರ್ಘಕಾಲದ ನಾಯಕ ಹಸನ್ ನಸ್ರಲ್ಲಾ ಅವರನ್ನು ಕೊಂದ ನಂತರ, ಅಫೀಫ್ ಬೈರುತ್‌ನಲ್ಲಿ ಹಲವಾರು ಪತ್ರಿಕಾಗೋಷ್ಠಿಗಳನ್ನು ನಡೆಸಿ ಗುಂಪಿನ ಪ್ರಮುಖ ಅಧಿಕಾರಿಗಳಲ್ಲಿ ಒಬ್ಬರಾದರು. ಹಿಂದಿನ ಎಲ್ಲಾ ಗುರಿಗಳು ಮಿಲಿಟರಿ ಅಥವಾ ಹಿರಿಯ ನಾಯಕತ್ವದ ಹುದ್ದೆಗಳನ್ನು ಹೊಂದಿದ್ದರಿಂದ, ಇಸ್ರೇಲ್‌ನಿಂದ ಕೊಲ್ಲಲ್ಪಟ್ಟ ಅಂತಹ ಪಾತ್ರವನ್ನು ಹೊಂದಿರುವ ಮೊದಲ ಅಧಿಕಾರಿ ಅಫೀಫ್…
ಬಾಗಲಕೋಟೆ : ಕೋಆಪರೇಟೀವ್ ಮ್ಯಾನೇಜ್‌ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಯಾವತ್ತೂ ಸಹಕಾರಿ ಚಳವಳಿ ಮತ್ತು ಸಹಕಾರಿ ತತ್ವದ ಪರವಾಗಿ ಇರುವವನು. ಈ ಕಾರಣಕ್ಕೆ ಸಹಕಾರ ಇಲಾಖೆಯ ನೇಮಕಾತಿಗಳಲ್ಲಿ ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವಿ, ಡಿಪ್ಲೊಮೋ ಪಡೆದವರಿಗೆ ಮೀಸಲಾತಿ ನೀಡುವ ಪರವಾಗಿದ್ದೀನಿ. ರಾಜ್ಯದಲ್ಲಿ ಸಹಕಾರಿ ಚಳವಳಿ 1904 ರಲ್ಲೇ ಅಂದರೆ ಸ್ವಾತಂತ್ರ್ಯ ಪೂರ್ವದಲ್ಲೇ ಆರಂಭವಾಗಿತ್ತು. 1905 ರಲ್ಲಿ ಸಹಕಾರಿ ನಿಯಮಗಳು ಜಾರಿಗೆ ಬಂದವು. ಸ್ವಾತಂತ್ರ್ಯ ನಂತರ ನೆಹರೂ ಅವರು ದೇಶದ ಪ್ರಧಾನಿಯಾಗಿ ಸಹಕಾರಿ ಕ್ಷೇತ್ರಕ್ಕೆ ಹೆಚ್ಚಿನ ಬೆಂಬಲ ಮತ್ತು ಪ್ರೋತ್ಸಾಹ ಕೊಟ್ಟಿದ್ದರಿಂದ ಸಹಕಾರಿ ಚಳವಳಿ ದೇಶವ್ಯಾಪಿ ವ್ಯಾಪಿಸಲು ನೆರವಾಯಿತು ಎಂದರು. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹೆಚ್ಚೆಚ್ಚು ಸಹಕಾರಿ ಚಳವಳಿಯಲ್ಲಿ ತೊಡಗಿಸಿಕೊಳ್ಳಬೇಕು. ನಾನು…
ಬಾಗಲಕೋಟೆ : ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್ ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಆದಾಯ ತೆರಿಗೆ ಪಾವತಿಸುವವರಿಗೂ, ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ ಎಂದು ಮರು ಪ್ರಶ್ನಿಸಿದ ಸಿಎಂ, ಯಾವ ಕಾರ್ಡ್ ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು ಎಂದರು. 40% ಕಮಿಷನ್ ಆರೋಪದಿಂದ ಮುಕ್ತರಾಗಿದ್ದೇವೆ ಎನ್ನುವ ಆರ್.ಅಶೋಕ್ ಮಾತಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೊಟ್ಟ ದೂರಿನ ಆಧಾರದಲ್ಲಿ ನಾವು…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ 12692 ಪೌರಕಾರ್ಮಿಕರನ್ನು ಅಂತಿಮವಾಗಿ ಆಯ್ಕೆ ಮಾಡಿ ಪಟ್ಟಿಯನ್ನು ಇಂದು ಬಿಡುಗಡೆಗೊಳಿದಲಾಗಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ರವರು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: 09-10-2024 ರಂದು ಪಾಲಿಕೆ ವೆಬ್‌ಸೈಟ್ http://bbmp.gov.in/home ನಲ್ಲಿ ಪ್ರಕಟಿಸುವ ಜೊತೆಗೆ, ಆಯಾ ವಲಯಜಂಟಿ ಆಯುಕ್ತರು ರವರ ಕಛೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಅದರಂತೆ, ವಲಯವಾರು ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಕ್ರಮವಹಿಸಿ ಅಂತಿಮವಾಗಿ 12692 ಸಂಖ್ಯೆಯ ಪೌರಕಾರ್ಮಿಕರನ್ನು ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ಅಂತಿಮ ಆಯ್ಕೆ ಪಟ್ಟಿಯನ್ನು ಆಯಾ ವಲಯ ಜಂಟಿ ಆಯುಕ್ತರು ರವರ ಕಛೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲಿ ಪ್ರಕಟಿಸಲಾಗುವುದು. ಅಲ್ಲದೆ ಪಾಲಿಕೆಯ ವೆಬ್‌ಸೈಟ್ ನಲ್ಲೂ ಸಹ…
ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ಗ್ಲೋಬಲ್ ಟೆಕ್ ಪಾರ್ಕ್, ನಿಮಾನ್ಸ್ ಮತ್ತು ಜಯದೇವ ಉಪಕೇಂದ್ರಗಳಲ್ಲಿ ತುರ್ತ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೋರಮಂಗಲ ವಿಭಾಗ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.11.2024 ವರೆಗೆ ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಂದು ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ ಎಕೋವರ್ಲ್ಡ್ ಕ್ಯಾಂಪಸ್, ಮ್ಯಾರಿಯಟ್ ಹೋಟೆಲ್, ದೇವರಬೀಸನಹಳ್ಳಿ, ವಜ್ರಮ್ ಅಪಾರ್ಟ್ ಮೆಂಟ್ ದೇವರಬೀಸನಹಳ್ಳಿ ಗ್ರಾಮ, ದೊಡ್ಡಕನ್ನೆಳ್ಳಿ ರೋಡ್, ಗೇರ್ ಸ್ಕೂಲ್ ರೋಡ್, ಆದರ್ಶ್, ಸಾಯಿ ಶೃತಿ , ಸ್ಟರ್ಲಿಂಗ್ ಅಸೆಂಟಿಯಾ, ಸಾಮ್ವಿ, ಜೆ.ವಿ, ಹೋಟೆಲ್, ಕಲ್ಯಾಣಿ ಟೆಕ್ ಪಾರ್ಕ್, ಎಕ್ಸೋರ ಟೆಕ್ ಪಾರ್ಕ್, ಒರೆಕಲ್ ಟೆಕ್ ಪಾರ್ಕ್, ಸೆಸ್ನಾ ಟೆಕ್ ಪಾರ್ಕ್, ಕಾಡುಬೀಸನಹಳ್ಳಿ, ಐಬಿಎಮ್, ಅಸ್ಸೆಂಚರ್, ಐಬಿಎಮ್ ‘ಡಿ’ ಬ್ಲಾಕ್, ಐಬಿಎಮ್, ಗುರಪ್ಪನ ಪಾಳ್ಯ, ಸೋಬಾ ಮಜಾರಿಯಾ ಅಪಾರ್ಟ್ ಮೆಂಟ್, ಬಿ.ಜಿ.ರಸ್ತೆ, ಬಿಟಿಎಂ 1ನೇ ಹಂತ, ವಕೀಲ್ ಸ್ಕೋಯರ್ ಬಿಲ್ಡಿಂಗ್, ಮಡಿವಾಳ ಮಾರುತಿ ನಗರ, ಬಿಸ್ಮಿಲ್ಲಾ ನಗರ,…












