Subscribe to Updates
Get the latest creative news from FooBar about art, design and business.
Author: kannadanewsnow57
ಕೊಪ್ಪಳ : ಮಳೆಗಾಲ ಮುಗಿದ ತಕ್ಷಣ ತುಂಗಭದ್ರಾ ಜಲಾಶಯದ ಗೇಟ್ ಗಳ ಬದಲಾವಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ನಿಂತ ನಂತರ ಗೇಟ್ಗಳನ್ನು ಅಳವಡಿಸಲಾಗುವುದು, ಮಳೆಗಾಲ ಮುಗಿದ ತಕ್ಷಣ ನಾವು ಅದನ್ನು ಬದಲಾಯಿಸುತ್ತೇವೆ, ಜಲಾಶಯ ಹಳೆಯದಾಗಿದೆ, ಆದ್ದರಿಂದ ಬದಲಾವಣೆ ಮಾಡಲಾಗುವುದು” ಎಂದು ಹೇಳುತ್ತಾರೆ. ಬ್ಯಾಲೆಟ್ ಪೇಪರ್ ವಿಷಯದ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿಗೆ ಬ್ಯಾಲೆಟ್ ಪೇಪರ್ ಬಗ್ಗೆ ಭಯ ಏಕೆ? ಮುಂದುವರಿದ ದೇಶಗಳು ಈಗಾಗಲೇ ಬ್ಯಾಲೆಟ್ ಪೇಪರ್ ಅನ್ನು ಜಾರಿಗೆ ತಂದಿವೆ, ಆ ದೇಶಗಳು ಶಿಲಾಯುಗಕ್ಕೆ ಹಿಂತಿರುಗಿವೆಯೇ?.” ಎಂದು ಪ್ರಶ್ನಿಸಿದ್ದಾರೆ. https://twitter.com/ANI/status/1964273070975098947?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು. ಸುಟ್ಟ ಗಾಯ, ವಿಷಪ್ರಾಶನ, ಹಲ್ಲೆಯಿಂದಾದ ಗಾಯ ಸೇರಿ ಇತರೆ ತುರ್ತು ಸಂದರ್ಭದಲ್ಲಿಯೂ ವೈದ್ಯಕೀಯ ಸಂಸ್ಥೆ ಅಥವಾ ವೈದ್ಯರು ಮುಂಗಡ ಹಣ ಪಾವತಿಗೆ ಬೇಡಿಕೆ ಇಡದೆ, ಸಂತ್ರಸ್ತರಿಗೆ ತುರ್ತು ಚಿಕಿತ್ಸೆ ನೀಡಬೇಕು. ಇದನ್ನು ಉಲ್ಲಂಘಿಸಿದಲ್ಲಿ ₹1 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಗಾಯಗೊಂಡ ವ್ಯಕ್ತಿಯ ಆರೋಗ್ಯ ಸ್ಥಿತಿ ಸುಧಾರಿಸಲು ಪ್ರತಿಯೊಂದು ಆಸ್ಪತ್ರೆಯೂ ತಕ್ಷಣದ ವೈದ್ಯಕೀಯ ತಪಾಸಣೆ ಸೇವೆ ಮತ್ತು ಪ್ರಾಥಮಿಕ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಅಗತ್ಯವೆಂದು ಪರಿಗಣಿಸಿ ಒದಗಿಸಬೇಕು. ಸೌಲಭ್ಯಗಳ ಕೊರತೆಯಿರುವ ಆಸ್ಪತ್ರೆಗಳು, ರೋಗಿಯನ್ನು ಇತರೆ ಆಸ್ಪತ್ರೆಗಳಿಗೆ ವರ್ಗಾವಣೆ ಮಾಡುವ ಮೊದಲು ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ವಿವರಗಳೊಂದಿಗೆ ಸ್ಥಳಾಂತರಿಸಬೇಕು ಎಂದು ಆದೇಶಿಸಿದೆ. ರಸ್ತೆ ಅಪಘಾತದ ಸಂತ್ರಸ್ತರು, ಅಪಘಾತದ ದಿನಾಂಕದಿಂದ ಏಳು ದಿನಗಳವರೆಗೆ ₹1.50 ಲಕ್ಷದವರೆಗೆ ಯಾವುದೇ ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ರಾಜ್ಯ ರಸ್ತೆ…
ಬೆಂಗಳೂರು : ಬೆಂಗಳೂರಲ್ಲಿ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣ ಸಂಬಂಧ ಇಂದು ಆರೋಪಿ ಜಗದೀಶ್ ಅಲಿಯಾಸ್ ಜಗ್ಗನ ವಿರುದ್ಧ ಮತ್ತೆ ರೌಡಿಶೀಟ್ ಓಪನ್ ಮಾಡಲಾಗಿದೆ. ಹೌದು, ಬೆಂಗಳೂರಿನ ಭಾರತಿನಗರ ಪೊಲೀಸರಿಂದ ಜಗದೀಶ್ ವಿರುದ್ಧ ಮತ್ತೆ ರೌಡಿಶೀಟ್ ಓಪನ್ ಮಾಡಲಾಗಿದೆ. ಅಪರಾಧ ಪ್ರಕರಣಗಳ ಹಿನ್ನೆಲೆಯನ್ನು ಹೊಂದಿರುವ ಜಗದೀಶ್ ಬಿಜೆಪಿ ಶಾಸಕ ಭೈರತಿ ಬಸವರಾಜ್ ಪ್ರಭಾವ ಬಳಕೆ ಆರೋಪ, ಶಾಸಕರ ಪ್ರಭಾವ ಬಳಸಿ ರೌಡಿಪಟ್ಟಿಯಿಂದ ತೆಗೆಯಲಾಗಿತ್ತು. 2023 ರ ಸೆಪ್ಟೆಂಬರ್ ನಲ್ಲಿ ರೌಡಿಪಟ್ಟಿಯಿಂದ ಕೈಬಿಡಲಾಗಿತ್ತು. ಜಗದೀಶ್ ಅಲಿಯಾಸ್ ಜಗ್ಗನ ವಿರುದ್ಧ ಮತ್ತೆ ರೌಡಿಶೀಟ್ ಓಪನ್ ಮಾಡಲಾಗಿದೆ. ಕಳೆದ ಜುಲೈ.15ರಂದು ಬೆಂಗಳೂರಿನ ಭಾರತಿನಗರದಲ್ಲಿ ಬಿಕ್ಲು ಶಿವ ಕೊಲೆಯಾಗಿತ್ತು. ಈ ಕೊಲೆಯಲ್ಲಿ ಜಗದೀಶ್ ಎ.1 ಆರೋಪಿಯಾಗಿದ್ದರು. ಕೊಲೆಯ ಬಳಿಕ ಚೆನ್ನೈ ಏರ್ ಪೋರ್ಟ್ ಮೂಲಕ ದುಬೈಗೆ ಎಸ್ಕೇಪ್ ಆಗಿದ್ದನು.
ಬೆಂಗಳೂರು : ಬೆಂಗಳೂರು: ಬಿಜೆಪಿ ನಾಯಕರಿಂದ ಧರ್ಮಸ್ಥಳ ಚಲೋ ನಡೆದ ಬಳಿಕ ಇದೀಗ ಕಾಂಗ್ರೆಸ್ ಶಾಸಕರಿಂದಲೂ ಧರ್ಮಸ್ಥಳ ಚಲೋ ಆರಂಭವಾಗಿದೆ. ಹೌದು, ಕುಣಿಗಲ್ ಶಾಸಕ ರಂಗನಾಥ್ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಕಾರ್ ರ್ಯಾಲಿ ಶುರುವಾಗಿದೆ. 300 ಕಾರುಗಳಲ್ಲಿ ಕುಣಿಗಲ್ ನಿಂದ ಧರ್ಮಸ್ಥಳಕ್ಕೆ 300 ಕಾರುಗಳಲ್ಲಿ ರ್ಯಾಲಿ ನಡೆಸಲಾಗುತ್ತಿದೆ. ಧರ್ಮಸ್ಥಳ ಚಲೋಗೆ ಕಾಂಗ್ರೆಸ್ ಕಾರ್ಯಕರ್ತರೂ ಸಾಥ್ ನೀಡಿದ್ದು, ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ.
ನವದೆಹಲಿ : ಮಾಲೀಕತ್ವದ ಹಕ್ಕುಗಳ ಬಗ್ಗೆ ಸುಪ್ರೀಂ ಕೋರ್ಟ್ ಒಂದು ದೊಡ್ಡ ನಿರ್ಧಾರವನ್ನು ನೀಡಿದೆ. ನೀವು ನೋಂದಾಯಿಸಿಕೊಂಡ ಮಾತ್ರಕ್ಕೆ ಆಸ್ತಿಯ ಮಾಲೀಕರಾಗಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳುತ್ತದೆ.ಆಸ್ತಿಯ ನೋಂದಣಿ ಮಾತ್ರ ಮಾಲೀಕತ್ವವನ್ನು ದೃಢೀಕರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನಿಜವಾದ ಮಾಲೀಕತ್ವದ ಹಕ್ಕುಗಳನ್ನು ಸಾಬೀತುಪಡಿಸಲು ಕಾನೂನು ದಾಖಲೆಗಳು ಮತ್ತು ನ್ಯಾಯಾಲಯದ ಮಾನ್ಯತೆ ಮುಖ್ಯ.ಭಾರತದಲ್ಲಿ ಆಸ್ತಿಯ ಬಗ್ಗೆ ಜನರ ಚಿಂತನೆಯನ್ನು ಬದಲಾಯಿಸಿದ ದೊಡ್ಡ ತೀರ್ಪಿನಲ್ಲಿ, ಆಸ್ತಿಯನ್ನು ನೋಂದಾಯಿಸುವುದು ಎಂದರೆ ನೀವು ಅದರ ಕಾನೂನುಬದ್ಧ ಮಾಲೀಕರು ಎಂದು ಅರ್ಥವಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸುಪ್ರೀಂ ಕೋರ್ಟ್ ಇತ್ತೀಚಿನ ತೀರ್ಪಿನ ಪ್ರಕಾರ, ನೋಂದಣಿ ಎಂದರೆ ನಿಮಗೆ ಸಂಪೂರ್ಣ ಮಾಲೀಕತ್ವದ ಹಕ್ಕುಗಳಿವೆ ಎಂದಲ್ಲ. ಸುಪ್ರೀಂ ಕೋರ್ಟ್ನ ತೀರ್ಪಿನ ಪ್ರಕಾರ, ನೋಂದಣಿ ಕೇವಲ ಹಣಕಾಸಿನ ವಹಿವಾಟಿನ ದಾಖಲೆಯಾಗಿದೆ. ಸುಪ್ರೀಂ ಕೋರ್ಟ್ನ ತೀರ್ಪು ಇದು ನಿಮಗೆ ಸಂಪೂರ್ಣ ಮಾಲೀಕತ್ವದ ಹಕ್ಕುಗಳನ್ನು ನೀಡುತ್ತದೆ ಎಂದು ಭಾವಿಸುವುದು ತಪ್ಪು ಎಂದು ತೋರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಭಾವನಾ ಕೋಆಪರೇಟಿವ್…
ತಿರುಪತಿ: ನಾಳೆ ಸಂಭವಿಸಲಿರುವ ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನವು ಸುಮಾರು 12 ಗಂಟೆಗಳ ಕಾಲ ಮುಚ್ಚಲ್ಪಡುತ್ತದೆ. ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಪ್ರಕಾರ, ಸೆಪ್ಟೆಂಬರ್ 7 ರಂದು ಮಧ್ಯಾಹ್ನ 3.30 ರಿಂದ ಸೆಪ್ಟೆಂಬರ್ 8 ರಂದು ಬೆಳಗಿನ ಜಾವ 3 ಗಂಟೆಯವರೆಗೆ ಬೆಟ್ಟದ ದೇವಸ್ಥಾನದಲ್ಲಿ ಯಾತ್ರಿಕರ ಪೂಜೆಯನ್ನು ಸ್ಥಗಿತಗೊಳಿಸಲಾಗುತ್ತದೆ. ಗ್ರಹಣಕ್ಕೆ ಆರು ಗಂಟೆಗಳ ಮೊದಲು ದೇವಸ್ಥಾನವನ್ನು ಮುಚ್ಚುವುದು ವಾಡಿಕೆಯಾಗಿತ್ತು ಎಂದು ಟಿಟಿಡಿ ಅಧಿಕಾರಿಗಳು ವಿವರಿಸಿದರು. ಮತ್ತು ಚಂದ್ರಗ್ರಹಣವು ಸೆಪ್ಟೆಂಬರ್ 7 ರಂದು ರಾತ್ರಿ 9.50 ರ ಸುಮಾರಿಗೆ ಪ್ರಾರಂಭವಾಗಿ ಸೆಪ್ಟೆಂಬರ್ 8 ರಂದು ಬೆಳಗಿನ ಜಾವ 1.31 ರ ಸುಮಾರಿಗೆ ಕೊನೆಗೊಳ್ಳುವುದರಿಂದ, ದೇವಸ್ಥಾನದ ಅರ್ಚಕರು ತಿರುಮಲ ದೇವಸ್ಥಾನವನ್ನು ಸೆಪ್ಟೆಂಬರ್ 7 ರಂದು ಮಧ್ಯಾಹ್ನ 3.30 ರೊಳಗೆ ಮುಚ್ಚಲು ನಿರ್ಧರಿಸಿದ್ದಾರೆ. ತಿರುಮಲ ದೇವಸ್ಥಾನದ ಬಾಗಿಲುಗಳನ್ನು ಸೆಪ್ಟೆಂಬರ್ 8 ರಂದು ಬೆಳಗಿನ ಜಾವ 3 ಗಂಟೆಗೆ ಮತ್ತೆ ತೆರೆಯಲಾಗುವುದು ಮತ್ತು ಶುದ್ಧಿ-ಪುಣ್ಯಾಹವಾಚನ ಶುದ್ಧೀಕರಣ ವಿಧಿಗಳನ್ನು ದೇವಾಲಯದ ಅರ್ಚಕರು ನಡೆಸುತ್ತಾರೆ ಎಂದು…
ಕೋಲಾರ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಸೀಮೆಎಣ್ಣೆ ಸುರಿದುಕೊಂಡು ತಾಯಿ,ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ನಡೆದಿದೆ. ಅರಿಕೆರೆ ಗ್ರಾಮದ ಬಳಿ ಕೋಳಿಫಾರಂನಲ್ಲಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ರಶ್ಮಿಪ್ರಿಯ (34) ಹಾಗೂ ಪ್ರಭಾತ್ (7) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪತಿ ದೀಪಕ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಘಟನೆ ನಡೆದಿದೆ. ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಕಾವ್ಯ (26) ಕ್ರಿಮಿನಾಶ ಸೇವಿಸಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಹಾಸನ ಮೂಲದ ಯುವಕನ ಜೊತೆಗೆ ಕಾವ್ಯಾಗೆ ಮದುವೆ ಫಿಕ್ಸ್ ಆಗಿತ್ತು. ಯುವಕನ ಮನೆಯವರು ಮದುವೆ ಕ್ಯಾನ್ಸಲ್ ಮಾಡಿಕೊಂಡ ಹಿನ್ನೆಲೆಯಲ್ಲಿ ಮನನೊಂದು ಕಾವ್ಯಾ ಕ್ರಿಮಿನಾಶ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್, ಶಿಕ್ಷಣ, ಕೃಷಿ ಸೇರಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ಸಂಸ್ಥೆಗಳಲ್ಲಿ ಅನುಮೋದಿತ ಹುದ್ದೆಗಳ ನೇರ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಬೀಳಲಿದೆ. ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣದಂತೆ ಈಗಾಗಲೇ ನಿಗದಿಯಾದ ರೋಸ್ಟರ್ ಬಿಂದು ಆಧರಿಸಿ ಅನುಮೋದಿತ ಹುದ್ದೆಗಳ ನೇರ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಡಿಸಲು ಮತ್ತು ಕಾಲಮಿತಿಯಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಿದೆ. ಕೃಷಿ, ಪಶು ಸಂಗೋಪನೆ, ಶಿಕ್ಷಣ, ಪೊಲೀಸ್, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಸುಮಾರು 80,000ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ಸಂಬಂಧಿತ ನೇಮಕಾತಿ ಪ್ರಾಧಿಕಾರಗಳಿಂದ ಸರಣಿ ಅಧಿಸೂಚನೆಗಳು ಶೀಘ್ರವೇ ಹೊರಬೀಳಲಿವೆ. ಈ ಮೂಲಕ ವರ್ಷಗಳಿಂದ ಸ್ಥಗಿತಗೊಂಡಿದ್ದ ನೇಮಕ ಪ್ರಕ್ರಿಯೆ ಶುರುವಾಗಲಿದೆ. ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನ ಆಧರಿಸಿ ಹೊರಡಿಸಿದ ಈ ಸುತ್ತೋಲೆಯಿಂದಾಗಿ ಕಳೆದ…
ಬೆಂಗಳೂರು: ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡಬೇಕೆಂಬ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ. ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ. ಸರ್ಕಾರದ ಕ್ರಮಕ್ಕೆ ತಡೆ ನೀಡಬೇಕು. ಮೈಸೂರಿನ ರಾಜಮನಎತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿಯಾಗಿದೆ. ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶನ ನೀಡುವಂತೆ ಪ್ರತಾಪ್ ಸಿಂಹ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.












