Author: kannadanewsnow57

ಬೆಂಗಳೂರು : ಇದೇ ಮೊದಲ ಬಾರಿಗೆ ಕನ್ನಡದ ಸಾಹಿತಿ ಬಾನು ಮುಷ್ತಾಕ್ ಗೆ ಪ್ರತಿಷ್ಠಿತಿ ಬೂಕರ್ ಪ್ರಶಸ್ತಿ ಲಭಿಸಿದೆ. ಕನ್ನಡ ಸಾಹಿತ್ಯಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಸಿಕ್ಕಿದ್ದು, ಇದೇ ಮೊದ ಬಾರಿಗೆ ಬಾನು ಮುಷ್ತಾಕ್ ಗೆ ಕನ್ನಡದ ಹಾರ್ಟ್ ಲ್ಯಾಂಪ್  ಕೃತಿ ಬೂಕರ್ ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತಿ ಇಂಟರ್ ನ್ಯಾಷನಲ್ ಬೂಕಲ್ ಪ್ರಶ್ನೆ 57.34 ಲಕ್ಷ ನಗದು ಒಳಗೊಂಡಿದೆ. ಖ್ಯಾತ ಕನ್ನಡ ಲೇಖಕಿ ಬಾನು ಮುಷ್ತಾಕ್‌ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನದ ಇಂಗ್ಲಿಷ್ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ. ಮೇ 2024 ಮತ್ತು ಏಪ್ರಿಲ್ 2025 ರ ನಡುವೆ UK ಮತ್ತು ಐರ್ಲೆಂಡ್‌ನಲ್ಲಿ ಪ್ರಕಟವಾದ ಇಂಗ್ಲಿಷ್‌ಗೆ ಅನುವಾದಿಸಲಾದ ಅತ್ಯುತ್ತಮ ಕಾದಂಬರಿ ಅಥವಾ ಸಣ್ಣ ಕಥೆಗಳ ಸಂಗ್ರಹಕ್ಕೆ ಈ ವಾರ್ಷಿಕ ಪ್ರಶಸ್ತಿಯನ್ನು ನೀಡಲಾಗುತ್ತದೆ. 1970 ರ ದಶಕವು ಕರ್ನಾಟಕದಲ್ಲಿ ಚಳುವಳಿಗಳ ದಶಕವಾಗಿತ್ತು – ದಲಿತ ಚಳುವಳಿ, ರೈತ ಚಳುವಳಿ, ಭಾಷಾ…

Read More

ಬೆಂಗಳೂರು : ಇದೇ ಮೊದಲ ಬಾರಿಗೆ ಕನ್ನಡದ ಸಾಹಿತಿ ಬಾನು ಮುಷ್ತಾಕ್ ಗೆ ಪ್ರತಿಷ್ಠಿತಿ ಬೂಕರ್ ಪ್ರಶಸ್ತಿ ಲಭಿಸಿದೆ. ಕನ್ನಡ ಸಾಹಿತ್ಯಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಸಿಕ್ಕಿದ್ದು, ಇದೇ ಮೊದ ಬಾರಿಗೆ ಬಾನು ಮುಷ್ತಾಕ್ ಗೆ ಕನ್ನಡದ ಹಾರ್ಟ್ ಲ್ಯಾಂಪ್  ಕೃತಿ ಬೂಕರ್ ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತಿ ಇಂಟರ್ ನ್ಯಾಷನಲ್ ಬೂಕಲ್ ಪ್ರಶ್ನೆ 57.34 ಲಕ್ಷ ನಗದು ಒಳಗೊಂಡಿದೆ. ಖ್ಯಾತ ಕನ್ನಡ ಲೇಖಕಿ ಬಾನು ಮುಷ್ತಾಕ್‌ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನದ ಇಂಗ್ಲಿಷ್ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ. ಮೇ 2024 ಮತ್ತು ಏಪ್ರಿಲ್ 2025 ರ ನಡುವೆ UK ಮತ್ತು ಐರ್ಲೆಂಡ್‌ನಲ್ಲಿ ಪ್ರಕಟವಾದ ಇಂಗ್ಲಿಷ್‌ಗೆ ಅನುವಾದಿಸಲಾದ ಅತ್ಯುತ್ತಮ ಕಾದಂಬರಿ ಅಥವಾ ಸಣ್ಣ ಕಥೆಗಳ ಸಂಗ್ರಹಕ್ಕೆ ಈ ವಾರ್ಷಿಕ ಪ್ರಶಸ್ತಿಯನ್ನು ನೀಡಲಾಗುತ್ತದೆ.

Read More

ಬೆಂಗಳೂರು : ಈಗಾಗಲೇ ಸಿಂಗಾಪುರ್ ಮತ್ತು ಹಾಂಕಾಂಗ್ ನಲ್ಲಿ ಕೊರೋನಾ ಹೊಸ ತಳಿ ಸೋಂಕು ಹೆಚ್ಚಾಗಿದ್ದು, ಈ ಒಂದು ಕೊರೋನಾ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕದಲ್ಲಿ ಇದೀಗ 8 ಪ್ರಕರಣಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ. ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ 69, ಮಹಾರಾಷ್ಟ್ರ 44, ತಮಿಳುನಾಡು 34, ಗುಜರಾತ್, ದೆಹಲಿ, ಹರ್ಯಾಣ, ರಾಜಸ್ಥಾನ, ಸಿಕ್ಕಿಂನಲ್ಲೂ ಪಾಸಿಟಿವ್ ಕೇಸ್‌ಗಳಿವೆ. ಸದ್ಯ ಯಾವುದೇ ರೀತಿಯ ಗಂಭೀರವಾದ ಗುಣಲಕ್ಷಣಗಳು ಕಾಣಿಸಿಕೊಂಡಿಲ್ಲ. ಹೀಗಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ನಿರ್ಲಕ್ಷ್ಯ ಬೇಡ ಎಂದು ಆರೋಗ್ಯ ಇಲಾಖೆ ತಿಳಿಸಿದ್ದು, ಎಲ್ಲ ಕಡೆ ಸಂದೇಶ ರವಾನಿಸಿದ್ದು, ಕಟ್ಟೆಚ್ಚರ ವಹಿಸಿದೆ. ಈಗಾಗಲೇ ಸಿಂಗಾಪುರ ಮತ್ತು ಹಾಂಗ್‌ಕಾಂಗ್‌ನಲ್ಲಿ ಅಲರ್ಟ್ ಘೋಷಿಸಲಾಗಿದೆ. ಸಿಂಗಾಪುರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಮೇ 03 ರಿಂದ ಮೆ…

Read More

ಬೆಂಗಳೂರು : ವಿದ್ಯಾವಿಕಾಸ ಯೋಜನೆಯಡಿ 2025-56ನೇ ಸಾಲಿಗೆ ಎಲ್ಲಾ ವಿಭಾಗದ ಜಿಲ್ಲೆಗಳ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ, ಬಟ್ಟೆ ಸರಬರಾಜು ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಸಾಲಿಗೆ ವಿದ್ಯಾವಿಕಾಸ ಯೋಜನೆಯಡಿ ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 1 ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಉಲ್ಲೇಖ (1)ರಲ್ಲಿ ಸರ್ಕಾರದ ಆಡಳಿತಾತ್ಮಕ ಅನುಮೋದನೆ ಪಡೆದು, ಕೆಳಕಂಡ ಸಂಸ್ಥೆಗಳ ಮೂಲಕ ಎರಡು ಜೊತೆ ಉಚಿತ ಸಮವಸ್ತ್ರ, ಬಟ್ಟೆಗಳ ಸರಬರಾಜು ಕಾರ್ಯಕ್ರಮವನ್ನು ಕೈಗೊಳ್ಳಲಾಗಿರುತ್ತದೆ. ಸಂಸ್ಥೆ ಸರಬರಾಜು ಮಾಡುವ ಜಿಲ್ಲೆಗಳು ಬೆಂಗಳೂರು ವಿಭಾಗದ ಎಲ್ಲಾ 11 ಮತ್ತು ಮೈಸೂರು ವಿಭಾಗದ ಎಲ್ಲಾ 8 ಜಿಲ್ಲೆಗಳ 1 ರಿಂದ 7ನೇ ತರಗತಿಯ ಗಂಡು ಹಾಗೂ 1 ರಿಂದ 5ನೇ ತರಗತಿಯ ಹೆಣ್ಣು ಮಕ್ಕಳಿಗೆ ಒಂದು ಜೊತೆ ಕಲಬುರಗಿ ವಿಭಾಗದ ಎರಡು ಜಿಲ್ಲೆಗಳಾದ ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳ 1 ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಎರಡು ಜೊತೆ.…

Read More

ಉತ್ತರಕನ್ನಡ : ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ಅವಧಿಗೂ ಮುನ್ನವೇ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣ ಇಂದು ಉತ್ತರಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಹೌದು ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೇ.21ರ ಇಂದು ರಜೆ ಘೋಷಿಸಿ ಉತ್ತರ ಕನ್ನಡದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರ 19 ಮಂದಿ ಡಿವೈಸ್ ಪಿ ಹಾಗೂ 25 ಪೊಲೀಸ್ ಇನ್ಸ್ ಪೆಕ್ಟರ್ ( ಸಿವಿಲ್) ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.    

Read More

ಹೊಸಪೇಟೆ : ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 242 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಅಷ್ಟೂ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದ್ದ “ಪ್ರಗತಿಯತ್ತ ಕರ್ನಾಟಕ- ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ? ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು…

Read More

ಬೆಂಗಳೂರು: 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 2024ರ ಅಂತ್ಯಕ್ಕೆ ಶಿಕ್ಷಕರ ಅಂತಿಮ ವೇಯ್ಟೇಡ್ ಅಂಕಗಳನ್ನು ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದ್ದು, 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ, ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ, ಡಿಸೆಂಬರ್ ತಿಂಗಳವರೆಗೂ ನವೀಕರಿಸಿದ ಶಿಕ್ಷಕರ ಸೇವಾ ವಿವರದ ಆಧಾರದ ಮೇಲೆ ಗಣನೆಗೆ ತೆಗೆದುಕೊಂಡು ಕರಡು ವೇಯ್‌ಡ್ ಅಂಕಗಳನ್ನು, ಇ.ಇ.ಡಿ.ಎಸ್. ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್‌ನಲ್ಲಿ ಹಾಗೂ ಇಲಾಖಾ ವೆಬ್‌ಸೈಟ್ ನಲ್ಲಿ ಉಲ್ಲೇಖ 3 ರಲ್ಲಿ ಪ್ರಕಟಿಸಿ, ಸೇವಾ ಮಾಹಿತಿಯ ಇಂದೀಕರಣಕ್ಕಾಗಿ ದಿನಾಂಕ : 20-03-2025 ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು ಎಂದು ತಿಳಿಸಿದೆ. ಮುಂದುವರೆದು, ಉಲ್ಲೇಖ 4 ರಲ್ಲಿ ಇಇಡಿಎಸ್‌ನಲ್ಲಿ ಎಲ್ಲಾ ನೌಕರರ ಮಾಹಿತಿಯನ್ನು ಇಂದೀಕರಣ ಮಾಡಲು ದಿನಾಂಕ : 28-03-2025 ರವರೆಗೆ ಮತ್ತೊಮ್ಮೆ ಅವಕಾಶವನ್ನು…

Read More

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರೆದಿದ್ದು, ಮಂಗಳವಾರ ಮಳೆಗೆ 6 ಮಂದಿ ಬಲಿಯಾಗಿದ್ದಾರೆ. ಮುಂಗಾರು ಪೂರ್ವ ಮಳೆಗೆ ರಾಯಚೂರು ಜಿಲ್ಲೆಯಲ್ಲಿ ಇಬ್ಬರು, ಧಾರವಾಡ, ಬಳ್ಳಾರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ತಲಾ ಒಬ್ಬೊಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ರಾಮನಗರದ ಹೊರವಲಯದಲ್ಲಿ ಬೆಂಗಳೂರಿನ ಬಾಲಕನೊಬ್ಬ ಅರ್ಕಾವತಿ ನದಿಯಲ್ಲಿ ಕೊಚ್ಚಿಹೋಗಿದ್ದಾನೆ. ರಾಮನಗರದ  ಹಳ್ಳಿಮಾಳ ಸಮೀಪ ಅರ್ಕಾವತಿ ನದಿ ಪಕ್ಕದಲ್ಲಿರುವ ದರ್ಗಾಗೆ ಬಂದಿದ್ದ ಬೆಂಗಳೂರಿನ ಲಕ್ಕಸಂದ್ರದ ಮೊಹಮ್ಮದ್ ಸೈಫ್ (9) ಎಂಬ ಬಾಲಕ ನೀರಿನಲ್ಲಿ ಆಟವಾಡುವಾಗ ಕಾಲುಜಾರಿ ಬಿದ್ದು ಕೊಚ್ಚಿ ಹೋಗಿದ್ದಾನೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಕರಜಗಿಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ರೈತ ನಬಿಲಾಲ ಚೌಧರಿ (70) ಎಂಬುವರು ಮೃತಪಟ್ಟಿದ್ದಾ. ರಾಯಚೂರು ಜಿಲ್ಲೆ ಅರಕೇರಾ ತಾಲೂಕಿನ ಭೋಗಿ ರಾಮನಗುಡ್ಡ ಗ್ರಾಮದಲ್ಲಿ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಹನುಮಗೌಡ ನಾಯಕ (16) ಎಂಬುವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ದೇವದುರ್ಗ ತಾಲೂಕಿನ ಲಿಂಗದಹಳ್ಳಿಯಲ್ಲಿ ಸಿಡಿಲಿಗೆ ಯಲ್ಲಮ್ಮ (42) ಎಂಬುವರು ಮೃತಪಟ್ಟಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ…

Read More

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದಲ್ಲಿ ಇನ್ನೂ ಎರಡು  ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ  ಕರಾವಳಿಯ ಮೂರು ಜಿಲ್ಲೆಗಳು ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಮೇ 21, 22ಕ್ಕೆ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನಕ್ಕೆ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.  ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಬೀದ‌ರ್, ವಿಜಯಪುರ, ಕೊಪ್ಪಳ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ.  

Read More