Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ನಮ್ಮ ಸರ್ಕಾರದ ಅಭಿಪ್ರಾಯವನ್ನಾಗಿಸುವ ದಿಕ್ಕಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜನ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ. ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಡ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಕಡಿಮೆಯಾಗುತ್ತಿದೆ ಎಂದರು. ನಮ್ಮ ಸಂವಿಧಾನದಲ್ಲಿ ಕುವೆಂಪು, ಬಸವಣ್ಣ ಅವರ ಆಶಯಗಳೂ ಅಡಕವಾಗಿವೆ. ಸಂವಿಧಾನದ ಮೌಲ್ಯ ಮತ್ತು ಮಹತ್ವ ಅರಿಯುವ ಕೆಲಸ ಹೆಚ್ಚಾಗಬೇಕು. ಈ ಉದ್ದೇಶದಿಂದಲೇ ಸಂವಿಧಾನ ಓದು, ಸಂವಿಧಾನ ಪೀಠಿಕೆ ಅಭಿಯಾನವನ್ನು ನಾವು ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ರಾಜಕಾರಣಿಯಾಗಿ ನನಗೆ ಕೆಲವು ಮಿತಿಗಳು ಇರುತ್ತವೆ. ಸಮಾಜದ…
ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ನೊಂದು ವಾರದಲ್ಲಿ ಮೇ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬಾಕಿ ಉಳಿದಿರುವ ಮೇ ತಿಂಗಳ ಗೃಹಲಕ್ಷ್ಮಿ ಹಣವನ್ನು ಇನ್ನೊಂದು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಫಲಾನುಭವಿಗಳಿಗೆ ಹಣ ಪಾವತಿಯಾಗದಿದ್ದ ಸಂದರ್ಭದಲ್ಲಿ ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ NPCI Failure/ E-KYC Failure ಎಂದು ಬಂದ ಕೂಡಲೇ ಅಗತ್ಯ ದಾಖಲೆಗಳಾದ ರೇಷನ್ಕಾರ್ಡ್, ಆಧಾರ್ ಕಾರ್ಡ್, ಆಧಾರ್ ಲಿಂಕ್ ಆಗಿರುವ ಮೊಬೈಲ್ ಹಾಗೂ ಬ್ಯಾಂಕ್ ಪಾಸ್ಪುಸ್ತಕ ಒಂದು ಅಥವಾ ಇತರೆ ಪಾಸ್ಪುಸ್ತಕ ಇದ್ದಲ್ಲಿ ತೆಗೆದುಕೊಂಡು ಬಂದು ಸರಿಪಡಿಸಿಕೊಳ್ಳಬಹುದು.
ಬೀದರ್ : ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಅಕ್ಕ ಪಡೆ ವಿಸ್ತರಣೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ್ ಜಿಲ್ಲಾ ಪೊಲೀಸರು ರಚಿಸಿರುವ ಮಹಿಳಾ ಪೊಲೀಸರ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಗೃಹ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಮಹಿಳೆಯರ ರಕ್ಷಣೆ ಹಾಗೂ ಸಮಸ್ಯೆ ಬಗೆಹರಿಸಲು ಅಕ್ಕ ಪಡೆ ಮಾದರಿ ಮತ್ತು ಶ್ಲಾಘನೀಯವಾಗಿದೆ. ಇಂಥ ಪಡೆಯನ್ನು ಪ್ರತಿ ಜಿಲ್ಲೆಯಲ್ಲಿ ರಚಿಸುವಂತೆ ಗೃಹ ಸಚಿವರೊಂದಿಗೆ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ.
ಭವಿಷ್ಯ ನಿಧಿ (PF) ಅನ್ನು ಉದ್ಯೋಗಿ ಮತ್ತು ಉದ್ಯೋಗದಾತರಿಂದ ಮಾಸಿಕ ಕೊಡುಗೆಗಳ ಮೂಲಕ ನಿರ್ಮಿಸಲಾಗಿದೆ. ಸರ್ಕಾರಿ ಬೆಂಬಲಿತ ದೀರ್ಘಾವಧಿಯ ಉಳಿತಾಯ ಯೋಜನೆಯಾಗಿರುವುದರಿಂದ, ಇದು ವಾರ್ಷಿಕ ಬಡ್ಡಿಯನ್ನು ಗಳಿಸುತ್ತದೆ, ಅದು ಕಾಲಾನಂತರದಲ್ಲಿ ಗಮನಾರ್ಹ ಕಾರ್ಪಸ್ ಆಗಿ ಸಂಯೋಜಿಸಲ್ಪಡುತ್ತದೆ. ಅನಾರೋಗ್ಯ ಅಥವಾ ಉದ್ಯೋಗ ನಷ್ಟದಂತಹ ತುರ್ತು ಸಂದರ್ಭಗಳಲ್ಲಿ ಇದು ಆರ್ಥಿಕ ಸುರಕ್ಷತಾ ಜಾಲವಾಗಿಯೂ ಕಾರ್ಯನಿರ್ವಹಿಸುತ್ತದೆ. ನಿಮ್ಮ PF ಬ್ಯಾಲೆನ್ಸ್ ಅನ್ನು ಪರಿಶೀಲಿಸಲು ನೀವು ಇನ್ನು ಮುಂದೆ EPFO ವೆಬ್ಸೈಟ್ ತೆರೆಯುವ ಅಗತ್ಯವಿಲ್ಲ ಅಥವಾ ಯಾವುದೇ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡುವ ಅಗತ್ಯವಿಲ್ಲ. ಈ ಪರ್ಯಾಯ ವಿಧಾನಗಳು ಸರಳ, ತ್ವರಿತ ಮತ್ತು ಸಂಪೂರ್ಣವಾಗಿ ಉಚಿತವಾಗಿದ್ದು, ಸರ್ವರ್ ಡೌನ್ಟೈಮ್ ಸಮಯದಲ್ಲಿ ಅವುಗಳನ್ನು ಸೂಕ್ತವಾಗಿಸುತ್ತದೆ. SMS ಮೂಲಕ ನಿಮ್ಮ PF ಬ್ಯಾಲೆನ್ಸ್ ಅನ್ನು ಪರಿಶೀಲಿಸಲು, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ 7738299899 ಗೆ “EPFOHO UAN HIN” ಸ್ವರೂಪದಲ್ಲಿ ಸಂದೇಶವನ್ನು ಕಳುಹಿಸಿ. ಇಲ್ಲಿ, “UAN” ನಿಮ್ಮ ಸಾರ್ವತ್ರಿಕ ಖಾತೆ ಸಂಖ್ಯೆ, ಮತ್ತು “HIN” ಭಾಷೆಯನ್ನು ಸೂಚಿಸುತ್ತದೆ. SMS ಸೇವೆಯು…
ಹಾಸನ : 500 ಮೀಟರ್ ನಿಂದ ಹೊರಗಿನ ಪಂಪ್ ಸೆಟ್ಗಳಿಗೆ ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗಳನ್ನು ಒದಗಿಸಲಾಗುತ್ತದೆ ಎಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ ಇಂಧನ ಇಲಾಖೆಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ರೈತರಿಗೆ ಅವಶ್ಯವಿರುವ ಕಡೆಗಳಲ್ಲಿ ಕುಡಿಯುವ ನೀರಿಗೆ ಟ್ರಾನ್ಸ್ ಫಾರ್ಮರ್ ಅಳವಡಿಸಿ ಎಂದು ತಿಳಿಸಿದರು. ರಾಜ್ಯದಲ್ಲಿ 2500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಟೆಂಡರ್ ಆಹ್ವಾನಿಸಲಾಗಿದ್ದು, ಇದಕ್ಕಾಗಿ ಖಾಸಗಿಯವರು 10 ಸಾವಿರ ಕೋಟಿ ಹಣ ಹೂಡಲು ಸಿದ್ಧರಿದ್ದಾರೆ ಎಂದು ತಿಳಿಸಿದರು. ಖಾಸಗಿಯವರು ವಿದ್ಯುತ್ ಉತ್ಪಾದನೆ ಮಾಡಲಿದ್ದಾರೆ. ಹಾಗೆಯೇ ದೊಡ್ಡ ದೊಡ್ಡ ಸಬ್ ಸ್ಟೇಷನ್ ಸಹ ಆಗಲಿವೆ. ನಾವು ಅವರಿಂದ ಯೂನಿಟ್ಗೆ 3.17 ರೂ. ಹಾಗೂ 2.75 ಪೈಸೆ ನೀಡಿ ಖರೀದಿ ಮಾಡುತ್ತೇವೆ ಎಂದರು. ಇಂಧನ ಇಲಾಖೆಯಲ್ಲಿ ಎಲ್ಲ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿವೆ. ಯಾವುದೇ ಆರ್ಥಿಕ ಸಮಸ್ಯೆ ಇಲ್ಲ. ಕಳೆದ ವರ್ಷ…
ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಭರ್ಜರಿ ಸಿಹಿಸುದ್ದಿ ನೀಡಿದ್ದು, 2025 ರಲ್ಲಿ ವಿವಿಧ ಇಲಾಖೆಗಳಿಗೆ 20,000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. 10 ನೇ ತರಗತಿ, 12 ನೇ ತರಗತಿ ಮತ್ತು ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯನ್ನು SSC CGL, SSC CHSL, SSC MTS ಮತ್ತು SSC JE 2025 ಸೇರಿದಂತೆ SSC ಯ ಪ್ರಮುಖ ಪರೀಕ್ಷೆಗಳ ಮೂಲಕ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್ಸೈಟ್ ssc.gov.in ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಯಾವ ನೇಮಕಾತಿಯಲ್ಲಿ ಎಷ್ಟು ಹುದ್ದೆಗಳಿವೆ, ಅರ್ಹತೆ ಏನು ಮತ್ತು ನಾವು ಯಾವಾಗ ಫಾರ್ಮ್ ಅನ್ನು ಭರ್ತಿ ಮಾಡಬಹುದು ಎಂದು ಇಲ್ಲಿದೆ ಸಂಪೂರ್ಣ ವಿವರ 1. SSC CGL 2025: 14582 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಪ್ರತಿ ವರ್ಷ…
ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳ ಗೋಡೆಗಳ ಮಕ್ಕಳ ಸಹಾಯವಾಣಿ-1098 ಕುರಿತು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಪದವಿ ಪೂರ್ವ ಕಾಲೇಜುಗಳ ಕಟ್ಟಡಗಳ ಸೂಕ್ತ ಸ್ಥಳಗಳ ಮೇಲೆ ಗೋಡೆ ಬರಹ ಬರೆಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪಾಲನೆ ಮತ್ತು ರಕ್ಷಣೆ ಅವಶ್ಯಕತೆ ಇರುವ ಮಕ್ಕಳು ಸೇರಿದಂತೆ ಎಲ್ಲಾ ಮಕ್ಕಳಿಗೆ ತುರ್ತು ಸೇವೆಯನ್ನು ಒದಗಿಸುವ 24*7 ಉಚಿತ ಮಕ್ಕಳ ಸಹಾಯವಾಣಿ- 1098 ಕುರಿತು ಹೆಚ್ಚಿನ ಪ್ರಚಾರ ನೀಡುವ ಕುರಿತಂತೆ ಸಾರ್ವಜನಿಕರಲ್ಲಿ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸುವ ಮೂಲಕ ಮಕ್ಕಳ ಘನತೆಯ ಬದುಕಿನ ನಿರ್ಮಾಣ ಮಾಡಬೇಕಾಗಿರುವುದರಿಂದ ಹಾಗೂ ಮಕ್ಕಳ ರಕ್ಷಣೆ ಎಲ್ಲರ ಕರ್ತವ್ಯವಾಗಿದ್ದು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಮಕ್ಕಳ ಸಹಾಯವಾಣಿ 1098 ಕುರಿತು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಪದವಿ ಪೂರ್ವ ಕಾಲೇಜುಗಳ ಕಟ್ಟಡಗಳ ಸೂಕ್ತ ಸ್ಥಳಗಳ ಮೇಲೆ ಗೋಡೆ ಬರಹ ಬರೆಸಲು ಹಾಗೂ ಎಲ್ಲಾ ಶಾಲೆಗಳ ವೆಬ್ಸೈಟ್ ನಲ್ಲಿ 1098…
ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಿಂದೂ ದೇವರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಜಿ.ಕೆ ಮಿಥುನ್ ಕುಮಾರ್, ಶಿವಮೊಗ್ಗ ಸಬ್ ಡಿವಿಜನ್-2 ಡಿವೈಎಸ್ಪಿ ಸಂಜೀವ್ ಕುಮಾರ್ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಬೆಳಗಾವಿ: ಜಿಲ್ಲೆಯಲ್ಲಿ ಜಾತ್ರೆಯೊಂದರಲ್ಲಿ ಪಾಲ್ಗೊಂಡಿದ್ದಂತ ರಮೇಶ್ ಜಾರಕಿಹೊಳಿ ಪುತ್ರ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದನು. ಈ ಘಟನೆ ಸಂಬಂಧ ಇದೀಗ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಲಕ್ಷ್ಮೀದೇವಿ ಜಾತ್ರೆ ನಡೆಯುತ್ತಿದ್ದು, ಈ ವೇಳೆ ಸಂತೋಷ್ ಜಾರಕಿಹೊಳಿ ಸಾರ್ವಜನಿಕರ ಮಧ್ಯೆ ಕೈಯಲ್ಲಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿಯೇ ಶಾಸಕನ ಪುತ್ರ ಸಂತೋಷ್ ಜಾರಕಿಹೊಳಿ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದರು. ಈ ಘಟನೆಯ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಘಟನೆ ಸಂಬಂಧ ಗೋಕಾಕ್ ನ ಶಹರ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಎಸ್ ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮಪಂಚಾಯಿತಿ ಬಿ ಖಾತಾ ಆಸ್ತಿಗೆ ತೆರಿಗೆ ವಿಧಿಸುವ ಹೊಸ ಕರಡು ನಿಯಮಗಳನ್ನು ಪ್ರಕಟಿಸಿದ್ದು, ಗ್ರಾ.ಪಂ. ವ್ಯಾಪ್ತಿಗಳಲ್ಲಿ ತೆರಿಗೆ ವ್ಯಾಪ್ತಿಗೊಳಪಡದ (ಬಿ ಖಾತಾ-199ಸಿ) ಆಸ್ತಿಗಳನ್ನು ಪತ್ತೆ ಮಾಡಿ, ಅವುಗಳಿಂದಲೂ ತೆರಿಗೆ, ಶುಲ್ಕವಸೂಲಿ ಮಾಡುವುದು ಹಾಗೂ ಎಲ್ಲ ಗ್ರಾಪಂಗಳಲ್ಲೂ ಏಕರೂಪ ತೆರಿಗೆ, ಶುಲ್ಕ ವಿಧಿಸಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಯಮಬದ್ದ ವಾಗಿ ತೆರಿಗೆ ಮತ್ತು ಶುಲ್ಕಗಳ ವಸೂಲಿ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಫೀಸುಗಳು) ಕರಡು ನಿಯಮ 2025ನ್ನು ರೂಪಿಸಿ ರಾಜ್ಯ ಸರ್ಕಾರ ಪ್ರಕಟಿಸಿದೆ. ಕರಡು ನಿಯಮದ ಪ್ರಕಾರ, ಗ್ರಾ.ಪಂ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಶುಲ್ಕ ವಿಧಿಸಿ, ನಂತರ ಅನುಮತಿ ನೀಡುವಂತೆ ಸೂಚಿಸಲಾಗಿದೆ. ಅದರೊಂದಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರತಿ ವಸತಿ, ವಸತಿಯೇತರ ಕಟ್ಟಡ, ವಾಣಿಜ್ಯ ಉದ್ದೇಶದ ಭೂಮಿ ಸೇರಿದಂತೆ ಇನ್ನಿತರ ಎಲ್ಲ ಆಸ್ತಿಗಳಿಗೆ ಆಸ್ತಿ ಗುರುತಿನ ಸಂಖ್ಯೆ (ಪಿಐಡಿ) ನೀಡಿ, ನೋಂದಣಿ ಮಾಡುವಂತೆಯೂ ಗ್ರಾಮ ಪಂಚಾಯತಿ…