Subscribe to Updates
Get the latest creative news from FooBar about art, design and business.
Author: kannadanewsnow57
ಹುಬ್ಬಳ್ಳಿ : ಅಪ್ರಾಪ್ತ ಮಕ್ಕಳ ಕೈಗೆ ವಾಹನ ಕೊಡುವ ಪೋಷಕರೇ ಎಚ್ಚರ, ಮಗ ಬೈಕ್ ವ್ಹೀಲಿಂಗ್ ಮಾಡಿದಕ್ಕೆ ತಂದಗೆ ಬರೋಬ್ಬರಿ 25,000 ರೂ. ದಂಡ ವಿಧಿಸಲಾಗಿದೆ. ಹೌದು, ಹುಬ್ಬಳ್ಳಿಯ ಉಣಕಲ್ ಹತ್ತಿರ ಅಪ್ರಾಪ್ತನೊಬ್ಬ ಬೈಕ್ ವೀಲಿಂಗ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಂದೆಗೆ ನ್ಯಾಯಾಲಯ 25 ಸಾವಿರ ದಂಡ ವಿಧಿಸಿದೆ. ಹಳೇ ಹುಬ್ಬಳ್ಳಿಯ ಅಬ್ದುಲ್ ರಸೂಲ್ಖಾನ್ ಟಿನ್ವಾಲೆ ಅವರ ಮಗ ಉಣಕಲ್ ಹತ್ತಿರ ಬೈಕ್ ವೀಲಿಂಗ್ ಮಾಡಿದ್ದ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ಹಂಚಿಕೊಂಡಿದ್ದ. ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿದ್ದ ಉತ್ತರ ಸಂಚಾರ ಠಾಣೆ ಪೊಲೀಸರು ಬೈಕನ್ನು ವಶಪಡಿಸಿಕೊಂಡಿದ್ದರು. ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ಆರೋಪದಡಿ ತಂದೆಗೆ 25 ಸಾವಿರ ದಂಡ ವಿಧಿಸಿದ್ದಾರೆ.
ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಕಿರುಕುಳದಿಂದ ಬೇಸತ್ತ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅನಿಕೇತನ ವಿದ್ಯಾಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಎಚ್.ಎಲ್.ಮಿಲನಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಲಕ್ಷ್ಮಿ ಪ್ರಸಾದ್, ಎಚ್.ಎಸ್.ರಶ್ಮಿ ದಂಪತಿ ಪುತ್ರಿ, ಮಿಲನಾ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗೆ ಆಯ್ಕೆ ಆಗಿದ್ದರೂ ಸಹ ಶಾಲೆ ಆಡಳಿತ ಮಂಡಳಿ, ಮುಖ್ಯಶಿಕ್ಷಕಿ ಶೈಲಜಾ ಸೇರಿದಂತೆ ಮೂವರು ಶಿಕ್ಷಕರು ಶಾಲಾ ಶುಲ್ಕ ಪಾವತಿ ಮಾಡುವಂತೆ ವಿದ್ಯಾರ್ಥಿನಿಗೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಪ್ರಾರ್ಥನಾ ಸಮಯದಲ್ಲಿ ಭಾಗವಹಿಸಲು ಅವಕಾಶ ಕೊಡದೆ ಬಹಿಷ್ಕಾರ ಹಾಕಿದ್ದರು ಎನ್ನಲಾಗಿದೆ.…
ಬೆಂಗಳೂರು: ರಾಜ್ಯದಲ್ಲಿ ಚಿಕ್ಕವಯಸ್ಸಿನವರಲ್ಲಿ ಉಂಟಾಗುತ್ತಿರುವ ಹಠಾತ್ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕೊರೋನಾ ಸೋಂಕು ಅಥವಾ ಕೋವಿಡ್ ಲಸಿಕೆ ಕಾರಣವಲ್ಲ ಎಂದು ಜಯ ದೇವ ಆಸ್ಪತ್ರೆ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ಅಧ್ಯಕ್ಷತೆಯ ತಜ್ಞರ ಸಮಿತಿಯು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದೆ. ರಾಜ್ಯದಲ್ಲಿ ಹೃದಯಾಘಾತದಿಂದ ದಿನೇ ದಿನೇ ಸಾವು ಪ್ರಕರಣಗಳ ಹೆಚ್ಚಳದ ಬಗ್ಗೆ ಆರೋಗ್ಯ ಇಲಾಖೆಗೆ ಟೆಕ್ನಿಕಲ್ ಕಮಿಟಿಯಿಂದ ವರದಿಯನ್ನು ಸಲ್ಲಿಸಲಾಗಿದೆ. ರಾಜ್ಯದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಟೆಕ್ನಿಕಲ್ ಕಮಿಟಿಯ ವರದಿಯ ಅಂಶಗಳನ್ನು ಚರ್ಚಿಸಲಾಗಿದೆ. ಹೃದಯಾಘಾತ ಅಧ್ಯಯನ ಕುರಿತ ಸಂಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಅಲ್ಲದೇ ಸರ್ಕಾರಕ್ಕೆ ನೀಡಬೇಕಾದ ಸಲಹೆ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರ ನಾಥ್ ತಂಡದಿಂದ ತಾಂತ್ರಿಕ ಸಲಹಾ ಸಮಿತಿಯು ವರದಿಯನ್ನು ನೀಡಲಾಗಿದ್ದು, ವರದಿಯಲ್ಲಿ ಪ್ರಮುಖ ಅಂಶಗಳನ್ನು ಉಲ್ಲೇಖಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಸಲ್ಲಿಸಿದಂತ ವರದಿಯಲ್ಲಿ ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ.…
ಹಾಸನ : ಫೀಡರ್ಗಳಿಂದ 500 ಮೀಟರ್ ಒಳಗಿನ ಪಂಪ್ಸೆಟ್ಗಳಿಗೆ ಇಲಾಖೆಯೇ ಟ್ರಾನ್ಸ್ಫಾರ್ಮರ್ ಒದಗಿಸಲಿದೆ. 500 ಮೀಟರ್ ನಿಂದ ಹೊರಗಿನ ಪಂಪ್ ಸೆಟ್ಗಳಿಗೆ ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗಳನ್ನು ಒದಗಿಸಲಾಗುತ್ತದೆ. ಅದೇ ರೀತಿ ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಕುಸುಮ್-ಸಿ ಯೋಜನೆಯಡಿ ಫೀಡರ್ ಸೌರೀಕರಣ ಮಾಡಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿAದು ಜಿಲ್ಲೆಯ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ ಇಂಧನ ಇಲಾಖೆಗೆ ಸಂಬAಧಪಟ್ಟAತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ರೈತರಿಗೆ ಅವಶ್ಯವಿರುವ ಕಡೆಗಳಲ್ಲಿ ಕುಡಿಯುವ ನೀರಿಗೆ ಟ್ರಾನ್ಸ್ ಫಾರ್ಮ್ ಮರ್ ಅಳವಡಿಸಿ ಎಂದು ತಿಳಿಸಿದರು. ರಾಜ್ಯದಲ್ಲಿ 2500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಟೆಂಡರ್ ಆಹ್ವಾನಿಸಲಾಗಿದ್ದು, ಇದಕ್ಕಾಗಿ ಖಾಸಗಿಯವರು 10 ಸಾವಿರ ಕೋಟಿ ಹಣ ಹೂಡಲು ಸಿದ್ಧರಿದ್ದಾರೆ ಎಂದು ತಿಳಿಸಿದರು. ಖಾಸಗಿಯವರು ವಿದ್ಯುತ್ ಉತ್ಪಾದನೆ ಮಾಡಲಿದ್ದಾರೆ. ಹಾಗೆಯೇ ದೊಡ್ಡ ದೊಡ್ಡ ಸಬ್ ಸ್ಟೇಷನ್ ಸಹ ಆಗಲಿವೆ. ನಾವು ಅವರಿಂದ…
ದಾವಣಗೆರೆ : ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮ ಜಿ.ಎಂ. ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಗಳ ಸೇವೆಗಳ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಾರ್ವಜನಿಕರು ಕಂದಾಯ ಇಲಾಖೆಯಲ್ಲಿನ ಹಳೇ ಪಹಣಿ, ಮುಟೇಷನ್, ಲ್ಯಾಂಡ್ ಗ್ರಾಂಟ್ ರಿಜಿಸ್ಟರ್, ಬಗರ್ಹುಕುಂ ಕಡತ ಸೇರಿದಂತೆ ಭೂಮಿಯ ಎಲ್ಲಾ ದಾಖಲೆಗಳನ್ನು ಪಡೆಯಲು ಅವಕಾಶ ನೀಡಲಾಗಿದೆ. ಇದಕ್ಕಾಗಿಯೇ ಎಲ್ಲಾ ತಾಲ್ಲೂಕುಗಳಲ್ಲಿನ ಅಭಿಲೇಖಾಲಯದ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕೆಲಸ ನಡೆಯುತ್ತಿದ್ದು ಇಲ್ಲಿಯವರೆಗೆ 1.13 ಕೋಟಿ ಪುಟಗಳ ಕಂದಾಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಿ ಅಪ್ಲೋಡ್ ಮಾಡಲಾಗಿದೆ ಎಂದರು. ಕಂದಾಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಲು ದಾವಣಗೆರೆ ತಾಲ್ಲೂಕನ್ನು ಮಾದರಿ ತಾಲ್ಲೂಕಾಗಿ ತೆಗೆದುಕೊಳ್ಳಲಾಗಿತ್ತು. ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿರುವ ಒಟ್ಟು 105466 ಕಡತಗಳಲ್ಲಿ 83802 ಕಡತಗಳ 52,80,765 ಪುಟಗಳ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ಮಾದರಿಯಲ್ಲಿ ಅಪ್ಲೋಡ್ ಮಾಡಲಾಗಿದೆ. ಮತ್ತು ಇತರೆ ತಾಲ್ಲೂಕುಗಳಾದ…
ಬೆಂಗಳೂರು : ಇಂದು ನಿಗದಿತ ನಿರ್ವಹಣಾ ಕಾಮಗಾರಿಗಾಗಿ, ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯವಾಗಲಿದೆ. ಈ ಕುರಿತು ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದ್ದು, ಜುಲೈ 06, 2025 ರಂದು ಭಾನುವಾರ ಬೆಳಿಗ್ಗೆ 7:00 ರಿಂದ 8:00ರ ಒಂದು ಗಂಟೆಯ ಅವಧಿಗೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಿದೆ. ಈ ಕಾಮಗಾರಿಗಳನ್ನು ನಿರ್ವಹಿಸಲು, ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಈ ಮಾರ್ಗದಲ್ಲಿ ಬೆಳಿಗ್ಗೆ 08:00 ರಿಂದ ಸಾಮಾನ್ಯ ಸೇವೆಗಳನ್ನು ಪುನರಾರಂಭಿಸುತ್ತದೆ. ಇತರ ಎಲ್ಲಾ ಮಾರ್ಗಗಳಲ್ಲಿ ಮೆಟ್ರೋ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸಲಿದ್ದು ಚಲ್ಲಘಟ್ಟದಿಂದ ಇಂದಿರಾನಗರ, ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ (ಕಾಡುಗೋಡಿ), ಮತ್ತು ಮಾದಾವರದಿಂದ ರೇಷ್ಮೆ ಸಂಸ್ಥೆ ವರೆಗಿನ ಸೇವೆಗಳು ಬೆಳಿಗ್ಗೆ 07:00 ಗಂಟೆಯಿಂದ ನಿಗದಿತ ಸಮಯದಂತೆ ಕಾರ್ಯನಿರ್ವಹಿಸಲಿದೆ. ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆಯನ್ನು…
ಕಲಬುರಗಿ : ಉದ್ಯೋಗಾಕಾಂಕ್ಷಿಗಳಿಗೆ ಸಚಿವ ಈಶ್ವರ್ ಖಂಡ್ರೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಇಲಾಖೆಯಲ್ಲಿ ಇತ್ತೀಚೆಗೆ 341 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, 510 ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರವೇ 6000 ಕಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಆನೆ, ಹುಲಿಗಳ ದಾಳಿಯಿಂದಾಗಿ ಪ್ರತಿ ವರ್ಷ 50ರಿಂದ 60 ಜನರು ಸಾವಿಗೀಡಾಗುತ್ತಿದ್ದಾರೆ. ಆನೆ ಮಾನವ ಸಂಘರ್ಷ ತಪ್ಪಿಸಲು ಕಾಡಿನಿಂದ ಆನೆಗಳು ಬರುವುದನ್ನು ತಪ್ಪಿಸಬೇಕಿದೆ. ಅದಕ್ಕಾಗಿ ಅರಣ್ಯದಲ್ಲಿ ಹೆಚ್ಚಿನ ಬಿದಿರು ಬೆಳೆಸಿ ಆನೆಗಳಿಗೆ ಆಹಾರ ಒದಗಿಸಲಾಗುವುದು. ಆನೆ ಕಾರಿಡಾರ್ ಗಳನ್ನು ಹಂತ ಹಂತವಾಗಿ ಪುನರ್ ಸ್ಥಾಪನೆ ಮಾಡಲಾಗುತ್ತಿದೆ ಎಂದರು. ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದ ಬಿಸಿಲಿನ ತಾಪ ತಗ್ಗಿಸಲು ಈ ಭಾಗದ ಐದು ಜಿಲ್ಲೆಗಳಲ್ಲಿ 25 ಲಕ್ಷ ದೊಡ್ಡ ಗಾತ್ರದ ಸಸಿಗಳನ್ನು ನೆಡಲಾಗುತ್ತಿದೆ.…
ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ವಾರ್ಷಿಕ ಆರೋಗ್ಯ ತಪಾಸಣೆಯ ವೆಚ್ಚವನ್ನು ಹೆಚ್ಚಿಸಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಉಲ್ಲೇಖಿತ (3)ರ ಸರ್ಕಾರದ ಆದೇಶದಲ್ಲಿ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ಆರೋಗ್ಯ ತಪಾಸಣೆಗಾಗಿ ವೈದ್ಯಕೀಯ ವೆಚ್ಚ ರೂ. 1000/- ಗಳಿಂದ ರೂ. 1500/- (ಒಂದು ಸಾವಿರದ ಐದು ನೂರು ರೂಪಾಯಿಗಳು ಮಾತ್ರ) ಗಳಿಗೆ ಹೆಚ್ಚಿಸಿ ಆದೇಶಿಸಲಾಗಿರುತ್ತದೆ. ಸರ್ಕಾರದ ಆದೇಶವನ್ನು ಸೂಕ್ತ ಕ್ರಮಕ್ಕಾಗಿ ಈ ಸುತ್ತೋಲೆಯೊಂದಿಗೆ ಲಗತ್ತಿಸಿದೆ. ಘಟಕಾಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ. 1. ವಾರ್ಷಿಕ ಆರೋಗ್ಯ ತಪಾಸಣೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಸದರಿ ವೆಚ್ಚದಲ್ಲಿ ಈ ಕೆಳಕಂಡ ಪರೀಕ್ಷೆಗಳನ್ನು ಮಾಡಿಸತಕ್ಕದ್ದು. 1) Blood Pressure (BP) 2) Blood & Urine Sugar Test 3) Kidney Function Test 4) Ultrasound Test 5) ECG 6) Cholestrol Test 7) Liver Function Test 8) Optholmic Investigation 9) CBC 10)…
ರಸ್ತೆಯ ಮೇಲೆ ಚಾಲನಾ ಅನುಜ್ಞಾಪತ್ರ ಹಾಗೂ ನೋಂದಣಿ/ ಅರ್ಹತಾ ಪತ್ರ/ ರಹದಾರಿ/ ಹೊಗೆ ತಪಾಸಣೆ ಪತ್ರ/ ವಿಮೆ ಇಲ್ಲದೇ ಸಂಚರಿಸುತ್ತಿರುವುದನ್ನು ಸಾಗರ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಗಮನಿಸಿದ್ದು, ವಾಹನ ಮಾಲೀಕರು/ಸವಾರರು ಈ ಎಲ್ಲಾ ದಾಖಲೆಗಳನ್ನು ಪಡೆದು/ ವಾಯಿದೆಯ 15 ದಿನಗಳ ಮುಂಚಿತವಾಗಿ ನವೀಕರಿಸುವಂತೆ ಸಾಗರ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿರೇಶ್ ಡಿ.ಹೆಚ್. ತಿಳಿಸಿದ್ದಾರೆ. ಸಾಗರ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವ್ಯಾಪ್ತಿಗೆ ಬರುವ ಎಲ್ಲಾ ಆಟೋರಿಕ್ಷಾ/ ಮೋಟಾರ್ ಕ್ಯಾಬ್/ಮ್ಯಾಕ್ಸಿ ಕ್ಯಾಬ್/ಹಾಗೂ ಇತರೆ ಸಾರಿಗೇತರ ವಾಹನಗಳಿಗೆ ನೋಂದಣಿ/ ಅರ್ಹತಾ ಪತ್ರ/ ರಹದಾರಿ/ ಹೊಗೆ ತಪಾಸಣೆ ಪತ್ರ/ ವಿಮೆ / ಚಾಲನಾ ಅನುಜ್ಞಾ ಪತ್ರಗಳನ್ನೊಳಗೊಂಡ ಸೂಕ್ತ ದಾಖಲೆಗಳನ್ನು ಮಾಡಿಸುವಂತೆ ಹಾಗೂ ನೋಂದಣಿ/ ಅರ್ಹತಾ ಪತ್ರಗಳ ಅವಧಿ ಮೀರಿದ ವಾಹನಗಳ ನಿಗಧಿತ ಶುಲ್ಕ ಹಾಗೂ ಅರ್ಜಿ ಸಲ್ಲಿಸಿ ವಾಹನ ತಪಾಸಿಸಲು ಕಚೇರಿಗೆ ಹಾಜರುಪಡಿಸುವಂತೆ ವಾಹನ ಮಾಲೀಕರಿಗೆ ತಿಳಿಸಲಾಗಿದೆ ತಪ್ಪಿದಲ್ಲಿ ಅಂತಹ ವಾಹನಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿರುತ್ತಾರೆ.
ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಪಡೆಯಲು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ವಿಕಲಚೇತನ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾರ್ಥಿವೇತನ ಪಡೆಯುವುದಕ್ಕಾಗಿ ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು https://ssp.postmatric.karnataka.gov.in/homepage.aspx URL for Pre-matric application: https://ssp.postmatric.karnataka.gov.in/ssppre/ ನಲ್ಲಿ ಮೆಟ್ರಿಕ್ ಪೂರ್ವ ನೋಂದಣಿ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದು. URL for Post matric application: https://ssp.postmatric.karnataka.gov.in/post_sa/signin.aspx/ ನಲ್ಲಿ ನೋಂದಣಿ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ಜಿಲ್ಲಾ ಸಂಯೋಜಕರು, ಗ್ರಾಮೀಣ ಪುನರ್ವಸತಿ ಯೋಜನೆ, ದಾವಣಗೆರೆ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್, ಗಳು, ತಿಳಿಸಿದ್ದಾರೆ.