Author: kannadanewsnow57

ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಒಂದು ದೊಡ್ಡ ಅಪಘಾತ ಸಂಭವಿಸಿದೆ. ನವರಾತ್ರಿ ಹಬ್ಬದ ನಂತರ ಮಾತಾ ವೈಷ್ಣೋದೇವಿ ವಿಗ್ರಹವನ್ನು ವಿಸರ್ಜಿಸಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯು ಕಲ್ವರ್ಟ್ ದಾಟುವಾಗ ಕೆರೆಗೆ ಬಿದ್ದು 14 ಜನರು ಸಾವನ್ನಪ್ಪಿದ್ದಾರೆ.  ಪಂಧಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಜಮ್ಲಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಆರಂಭದಲ್ಲಿ ಐದು ಸಾವುಗಳು ವರದಿಯಾಗಿದ್ದವು, ಆದರೆ ಈಗ ಸಾವಿನ ಸಂಖ್ಯೆ 14 ಕ್ಕೆ ಏರಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ದೋಣಿಗಳಲ್ಲಿ ದೀಪಗಳನ್ನು ಅಳವಡಿಸಲಾಗಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ಕಲೆಕ್ಟರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಆಗಮಿಸಿದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಖಾಂಡ್ವಾ ಜಿಲ್ಲೆಯ ಪಾಂಧಾನಾ ಪ್ರದೇಶದ ಅರ್ಡ್ಲಾ ಮತ್ತು ಜಮ್ಲಿ ಗ್ರಾಮಗಳಿಂದ 30-35 ಜನರು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಕೊಳಕ್ಕೆ ಬಂದಿದ್ದರು. ಟ್ರಾಲಿ ಅಗತ್ಯಕ್ಕಿಂತ ಹೆಚ್ಚಿನ ಜನರನ್ನು ಹೊತ್ತೊಯ್ಯುತ್ತಿತ್ತು ಎಂದು ವರದಿಯಾಗಿದೆ. ಟ್ರಾಲಿ ಸಮತೋಲನ ಕಳೆದುಕೊಂಡು ಪಲ್ಟಿಯಾಗಿ ಕೆರೆಗೆ ಬಿದ್ದಿತು. ಈ ದುರಂತ ಅಪಘಾತದಲ್ಲಿ ಇಲ್ಲಿಯವರೆಗೆ 11 ಜನರ…

Read More

ನವದೆಹಲಿ : ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿದ ಒಟ್ಟು ಎಂಟು ಮಕ್ಕಳು ಮೃತಪಟ್ಟಿದ್ದು ಕಳವಳದ ವಾತಾವರಣ ಪೋಷಕರಲ್ಲಿ ಸೃಷ್ಟಿಯಾಗಿದೆ. ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ನಿಂದ ಮತ್ತು ಮಧ್ಯಪ್ರದೇಶದಲ್ಲಿ ಮೂತ್ರಪಿಂಡ ವೈಫಲ್ಯದಿಂದ ಮಕ್ಕಳು ಸಾವನ್ನಪ್ಪಿದ ಪ್ರಕರಣದಲ್ಲಿ, ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್ಸಿಡಿಸಿ) ಎರಡೂ ರಾಜ್ಯಗಳ ಆಸ್ಪತ್ರೆಗಳು ಮತ್ತು ಇತರ ಸ್ಥಳಗಳಿಂದ ನೀರು ಮತ್ತು ಔಷಧ ಮಾದರಿಗಳನ್ನು ಸಂಗ್ರಹಿಸಿದೆ. ಪರೀಕ್ಷಾ ಫಲಿತಾಂಶಗಳು ಬಂದ ನಂತರ, ಅವುಗಳನ್ನು ರಾಜ್ಯ ಔಷಧ ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ. ರಾಜ್ಯ ಔಷಧ ಅಧಿಕಾರಿಗಳು ಔಷಧ ಮಾದರಿಗಳನ್ನು ಸಹ ಪರೀಕ್ಷಿಸುತ್ತಿದ್ದಾರೆ, ಅದರ ಫಲಿತಾಂಶಗಳು ಇನ್ನೂ ಬರಬೇಕಿದೆ. ರಾಜಸ್ಥಾನದ ಸಿಕಾರ್ನಲ್ಲಿ ಐದು ವರ್ಷದ ಮಗುವಿನ ಕೆಮ್ಮು ಸಿರಪ್ (ಡೆಕ್ಸ್ಟ್ರೋಮೆಥೋರ್ಫಾನ್ ಹೈಡ್ರೋಬ್ರೋಮೈಡ್) ಕುಡಿದು ಸಾವನ್ನಪ್ಪಿದ ನಂತರ, ಅವರ ಚಿಕ್ಕಪ್ಪ ಕೂಡ ಪೊಲೀಸರಿಗೆ ದೂರು ನೀಡಿದ್ದಾರೆ. ಭರತ್ಪುರ, ಜೈಪುರ, ಸಿಕಾರ್ ಮತ್ತು ಬನ್ಸ್ವಾರಾಗಳಲ್ಲಿಯೂ ಈ ಔಷಧಿ ಮಕ್ಕಳಿಗೆ ಅಸ್ವಸ್ಥಗೊಳಿಸಿದೆ. ರಾಜ್ಯ ಸರ್ಕಾರವು ಸಿರಪ್ ಅನ್ನು ನಿಷೇಧಿಸಿದೆ ಮತ್ತು ವಿವಿಧ ಬ್ಯಾಚ್ಗಳ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಗಳಿಗೆ…

Read More

ಬೆಂಗಳೂರು : ಅವಿವಾಹಿತ ಯುವಕ ಮೃತಪಟ್ಟರೆ ಆತನ ಕುಟುಂಬ ಸದಸ್ಯರಿಗೂ ಪರಿಹಾರ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಪಘಾತದಲ್ಲಿ ಮೃತಪಟ್ಟ ಯುವಕ ಅವಿವಾಹಿತ ಎನ್ನುವ ಕಾರಣಕ್ಕೆ ಆತನ ಕುಟುಂಬ ಸದಸ್ಯರಿಗೆ ಅವಲಂಬನೆಯ ನಷ್ಟ ಪರಿಹಾರ ನೀಡದ ಅಧೀನ ನ್ಯಾಯಾಲಯದ ಆದೇಶವನ್ನು ಮಾರ್ಪಡಿಸಿರುವ ಹೈಕೋರ್ಟ್ ಕುಟುಂಬದ ಆದಾಯಕ್ಕೆ ಮೃತನೂ ಸಹ ಕೊಡುಗೆ ನೀಡುತ್ತಿದ್ದ ಅಂಶ ಪರಿಗಣಿಸಿ 22.88 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮೃತ ಯುವಕನ ತಂದೆ, ತಾಯಿ ಮಾತ್ರವಲ್ಲ ಆತನ ಸಹೋದರಿಯರು ಮತ್ತು ಸಹೋದರರು ಸಹ ಮೃತರ ಅವಲಂಬಿತರಾಗಿರುತ್ತಾರೆ. ಪರಿಹಾರ ಮೊತ್ತವನ್ನು ಪ್ರಕರಣದಲ್ಲಿ ಮೃತಪಟ್ಟಿರುವ ಯುವಕನ ಕುಟುಂಬದ ಸದಸ್ಯರು ಸಮಾನವಾಗಿ ಪಡೆಯಲು ಅರ್ಹರಾಗಿದ್ದಾರೆ. ಆ ಮೂಲಕ ಮೃತನ ಪೋಷಕರೊಂದಿಗೆ ಒಡಹುಟ್ಟಿದವರಿಗೆ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬಿ.ಕಾಂ. ಪದವಿ ಪೂರ್ಣಗೊಳಿಸಿ ಉದ್ಯೋಗ ಮಾಡುತ್ತಿದ್ದ 24 ವರ್ಷದ ಅವಿವಾಹಿತ ಪುತ್ರ ರೋಶನ್ ಅಪಘಾತದಲ್ಲಿ ಮೃತಪಟ್ಟಿದ್ದರು. ಆತನ ಮೇಲೆ ಅವಲಂಬಿತರಾಗಿದ್ದ ನಮಗೆ ಮೋಟಾರ್ ವಾಹನ ಅಪಘಾತ ಪರಿಹಾರ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನೀವು ಆನ್‌ಲೈನ್‌ ಮೂಲಕವೂ ಪಾಲ್ಗೊಳ್ಳಬಹುದು. ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಿದ್ದು, ತಪ್ಪದೇ ಎಲ್ಲಾರೂ ಈ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ಸಮೀಕ್ಷೆಯಲ್ಲಿ ಸಾರ್ವಜನಿಕರು ಈ ಕೆಳಕಂಡ QR Code ಅಥವಾ ಲಿಂಕ್ ನ್ನು ಉಪಯೋಗಿಸಿಕೊಂಡು ತಮ್ಮ ಮೊಬೈಲ್ ನಲ್ಲಿ ನಾಗರಿಕ ಲಾಗಿನ್ ಮೂಲಕ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಭಾಗವಹಿಸಲು ಕೋರಿದೆ. https://kscbcselfdeclaration.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ, ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿ. ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಲು ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ. ಅವಶ್ಯವಿರುವ ದಾಖಲೆಗಳು: 1. UHID/MESCOM Account Number 3. ಚುನಾವಣಾ ಗುರುತಿನ ಚೀಟಿ…

Read More

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ವಾರಾಂತ್ಯದವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಗುರುವಾರ ಕರಾವಳಿಯ ಉತ್ತರಕನ್ನಡ, ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಇನ್ನೂ ಕೆಲ ದಿನಗಳ ವರೆಗೂ ವರ್ಷಧಾರೆ ಆಗುವ ನಿರೀಕ್ಷೆ ಇದೆ. ಮಲೆನಾಡು ಒಳಗೊಂಡಿರುವ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಶುಕ್ರವಾರ ಹಾಗೂ ಶನಿವಾರ ಮಳೆಯಾಗಲಿದೆ. ವಾರಾಂತ್ಯದ ನಂತರ ಕೆಲ ದಿನಗಳ ಕಾಲ ಮಳೆ ಕ್ಷೀಣಿಸಲಿದ್ದು, ನಂತರ ಮತ್ತೆ ಮಳೆ ಪುನರಾರಂಭವಾಗಲಿದೆ.

Read More

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಳ್ಳಲಾಗಿರುವ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿ / ನೌಕರರು ಸಮೀಕ್ಷಾ ಕಾರ್ಯಕ್ಕೆ ಹಾಜರಾಗದ ಮತ್ತು ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ: (1) ರ ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ:(2)ರ ಪತ್ರಗಳಲ್ಲಿ ಮುಖ್ಯ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳನ್ನು ಗುರುತಿಸುವ ಸಲುವಾಗಿ ಸಮೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿದೆ. ಅದರಂತೆ, ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲ್ಪಡುವ ಗ್ರೂಪ್-‘ಬಿ’, ‘ಸಿ’ ಮತ್ತು ‘ಡಿ’ ವೃಂದದ ಅಧಿಕಾರಿ / ನೌಕರರುಗಳು ಸಮೀಕ್ಷಾ ಕಾರ್ಯದಲ್ಲಿ…

Read More

ಮೈಸೂರು : ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಸುಮಾರು 10ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ರೈತರಿಗೆ ಸಮೀಕ್ಷೆ ನಡೆಸಿ ಬೆಳೆಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿದೆ. ಆದರೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಸುಮಾರು 10ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ರೈತರಿಗೆ ಸಮೀಕ್ಷೆ ನಡೆಸಿ ಬೆಳೆಪರಿಹಾರ ನೀಡುವುದಾಗಿ ಕಲಬುರಗಿಯ ಭೇಟಿ ಸಂದರ್ಭದಲ್ಲಿ ತಿಳಿಸಿದ್ದು, ಸರ್ಕಾರ ಮತ್ತು ಎನ್ಡಿಆರ್ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17,000 ರೂ., ನೀರಾವರಿ ಜಮೀನಿಗೆ 17,500 ರೂ. ಮತ್ತು ಬಹುಬೆಳೆ ಬೆಳೆಯುವ ಜಮೀನಿಗೆ 31,000 ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಲಾಗಿದೆ. ಆದರೆ ಹೆಚ್ಚಿನ ಮಳೆಯಿರುವುದರಿಂದ ಬೆಳೆಹಾನಿಯ ಜಂಟಿಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ ನೀಡಲಾಗುವುದು ಎಂದರು.…

Read More

ಬೆಂಗಳೂರು : ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಯಾಗಿದ್ದು, ಜ್ಯೋತಿ ಸಂಜೀವಿನಿ ಯೋಜನೆಯು ಸ್ಥಗಿತಗೊಳಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರಿಗೆ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಉಲ್ಲೇಖಿತ (2) ರನ್ವಯ ಅಕ್ಟೋಬರ್ 01. 2025 ಜಾರಿಗೊಳಿಸಲು ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬಂದ ದಿನಾಂಕದಿಂದ ಪ್ರಸ್ತುತ ಜಾರಿಯಲ್ಲಿರುವ ಜ್ಯೋತಿ ಸಂಜೀವಿನಿ ಯೋಜನೆಯು ಸ್ಥಗಿತಗೊಳ್ಳುವುದು ಎಂದು ಸರ್ಕಾರವು ಆದೇಶಿಸಲಾಗಿದೆ. ಅದರಂತೆ ನೊಂದಾಯಿತ ಆಸ್ಪತ್ರೆಗಳಿಗೆ ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಲಾಗಿದೆ. 1. ಆಸ್ಪತ್ರೆಗಳು ಈಗಾಗಲೇ ಒಡಂಬಡಿಕೆ (MoU) ಸಲ್ಲಿಸಿರುವ ಹಾಗೂ ಅನುಮೋದನೆಗೊಂಡಿರುವ ಆಸ್ಪತ್ರೆಗಳಲ್ಲಿ KASS ಫಲಾನುಭವಿಗಳಿಗೆ ನಗದು ರಹಿತ ಚಿಕಿತ್ಸೆಯನ್ನು ನೀಡುವುದು. 2. KASS ಯೋಜನೆಯಡಿಯಲ್ಲಿ ನೊಂದಾಯಿಸಲ್ಪಟ್ಟ ಫಲಾನುಭವಿಗಳಿಗೆ ಮಾತ್ರ ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ರೋಗಿಗೆ ಚಿಕಿತ್ಸೆಯನ್ನು ನೀಡಿ KASS ಯೋಜನೆಯಡಿಯಲ್ಲಿ ನೊಂದಾವಣೆ ಮಾಡಿಕೊಳ್ಳಲು 48 ಗಂಟೆಗಳ ಕಾಲಾವಕಾಶ ಕಲ್ಪಿಸಿಕೊಡುವುದು. ಒಂದು ವೇಳೆ 48 ಗಂಟೆಗಳಲ್ಲಿ…

Read More

ಮುಂಬೈ: ಸಾಲದ ಮಾಸಿಕ ಕಂತುಗಳನ್ನು ದೀರ್ಘಕಾಲ ಬಾಕಿ ಉಳಿಸಿಕೊಂಡರೆ ಬೈಕ್ ಮತ್ತು ಕಾರನ್ನು ಸಾಲದ ನೀಡದ ಕಂಪನಿಗಳು ಜಪ್ತಿ ಮಾಡಿದಂತೆ ಇನ್ನು ಮುಂದೆ ಮೊಬೈಲ್ ಕೂಡಾ ಜಪ್ತಿಯಾಗಲಿದೆ. ಹೌದು. ಭಾರತೀಯ ರಿಸರ್ವ್ ಬ್ಯಾಂಕ್ ಈ ಬಗ್ಗೆ ಚಿಂತನೆ ನಡೆಸಿದೆ. ಮೊಬೈಲ್ ಅನ್ನು ಸಾಲ ಮಾಡಿ ಖರೀದಿಸಿ, ಅದರ ಪ್ರತಿ ತಿಂಗಳ ಕಂತನ್ನು (ಇಎಂಐ) ಸರಿಯಾಗಿ ಪಾವತಿಸದೇ ಇದ್ದಲ್ಲಿ ಅದನ್ನು ಮಾಡಿ, ಬಳಸಲು ಲಾಕ್ ಸಾಧ್ಯವಾಗದಂತೆ ಮಾಡಲು ಆರ್ಬಿಐ ಚಿಂತನೆ ನಡೆಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಸಾಲಗಳ ಕುರಿತು ಹೊಸ ನಿಯಮವನ್ನು ಜಾರಿಗೆ ತರಲು ಯೋಜಿಸುತ್ತಿದೆ. ಹೊಸ ಆರ್ಬಿಐ ನಿಯಮ ಜಾರಿಗೆ ಬಂದ ನಂತರ, ಸಾಲದಾತರು ಸಾಲವನ್ನು ಮರುಪಾವತಿಸಲು ಸಾಧ್ಯವಾಗದವರ ಫೋನ್ಗಳನ್ನು ರಿಮೋಟ್ ಆಗಿ ಲಾಕ್ ಮಾಡುತ್ತಾರೆ. 2024 ರಲ್ಲಿ ಹೋಮ್ ಕ್ರೆಡಿಟ್ ಫೈನಾನ್ಸ್ ನಡೆಸಿದ ಅಧ್ಯಯನವು ಪ್ರಮುಖ ಅಂಶಗಳನ್ನು ಬಹಿರಂಗಪಡಿಸಿದೆ. ಗ್ರಾಹಕರು ಮೊಬೈಲ್ ಫೋನ್ಗಳು ಸೇರಿದಂತೆ ಮೂರನೇ ಒಂದು ಭಾಗಕ್ಕಿಂತ ಹೆಚ್ಚಿನ ಎಲೆಕ್ಟ್ರಾನಿಕ್ಸ್ ಅನ್ನು ಕ್ರೆಡಿಟ್ನಲ್ಲಿ ಖರೀದಿಸುತ್ತಾರೆ ಎಂದು ಕಂಡುಬಂದಿದೆ. ಟೆಲಿಕಾಂ…

Read More

ನವದೆಹಲಿ : ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಶೇ.3 ರಷ್ಟು ತುಟ್ಟಿಭತ್ಯೆ ಏರಿಸಿದೆ. ಪ್ರಸಕ್ತ ಮೂಲ ವೇತನದ ಶೇ.55ರಷ್ಟು ತುಟ್ಟಿಭತ್ಯೆಗೆ ಇದೀಗ ಇನ್ನು ಶೇ.3ರಷ್ಟು ಸೇರಲಿದೆ. ಕೇಂದ್ರ ಸಚಿವ ಸಂಪುಟವು ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಮತ್ತು ಡಿಆರ್ ಪರಿಹಾರದಲ್ಲಿ ಶೇ. 3 ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಈ ಕ್ರಮವು 49 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು 69 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವೆ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಈ ಹೆಚ್ಚಳವು ಜುಲೈ 1, 2025 ರಿಂದ ಜಾರಿಗೆ ಬರಲಿದ್ದು, 10,084 ಕೋಟಿ ರೂ.ಗಳಷ್ಟು ವೆಚ್ಚವಾಗಲಿದೆ. “ಈ ಹೆಚ್ಚಳವು 7 ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿದೆ” ಎಂದು ಸಂಪುಟ ಪ್ರಕಟಣೆ ತಿಳಿಸಿದೆ. ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ, ಭಾರತದಲ್ಲಿ ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರು ಡಿಎ ಮತ್ತು ಡಿಆರ್ ಹೆಚ್ಚಳದ…

Read More