Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ಬಂಧಿತ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ರಾಷ್ಟ್ರ ರಾಜಧಾನಿಯ ಮುಖ್ಯಮಂತ್ರಿ ಹುದ್ದೆಯಿಂದ ತೆಗೆದುಹಾಕುವಂತೆ ಕೋರಿ ಮಾಜಿ ಎಎಪಿ ಶಾಸಕ ಸಂದೀಪ್ ಕುಮಾರ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿಯನ್ನು ನ್ಯಾಯಮೂರ್ತಿ ಸುಬ್ರಮಣ್ಯಂ ಪ್ರಸಾದ್ ಅವರ ಮುಂದೆ ಸೋಮವಾರ ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ದೆಹಲಿಯಲ್ಲಿ ಈಗ ರದ್ದುಪಡಿಸಲಾದ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ ನಂತರ, ಕೇಜ್ರಿವಾಲ್ ಸಂವಿಧಾನದ ಅಡಿಯಲ್ಲಿ ಮುಖ್ಯಮಂತ್ರಿಯ ಕಾರ್ಯಗಳನ್ನು ನಿರ್ವಹಿಸಲು ಅಸಮರ್ಥರಾಗಿದ್ದಾರೆ ಎಂದು ಕುಮಾರ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ “ಅಲಭ್ಯತೆ” ಸಾಂವಿಧಾನಿಕ ಕಾರ್ಯವಿಧಾನವನ್ನು ಸಂಕೀರ್ಣಗೊಳಿಸುತ್ತದೆ ಮತ್ತು ಸಂವಿಧಾನದ ಆದೇಶದ ಪ್ರಕಾರ ಅವರು ಜೈಲಿನಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸಂವಿಧಾನದ ಅನುಚ್ಛೇದ 239 ಎಎ (4) ಶಾಸಕಾಂಗವು ಕಾನೂನುಗಳನ್ನು ಮಾಡುವ ಅಧಿಕಾರವನ್ನು ಹೊಂದಿರುವ ವಿಷಯಗಳಿಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಅವರ ಕಾರ್ಯಗಳನ್ನು ನಿರ್ವಹಿಸಲು ಸಹಾಯ ಮಾಡಲು ಮತ್ತು…
ಕೋಲಾರ : ಲೋಕಸಭಾ ಚುನಾವಣೆಯ ನಂತರ ಸರ್ಕಾರ ಬಿದ್ದುಹೋಗುವುದಲ್ಲ, ಇನ್ನಷ್ಟು ಸುಭದ್ರವಾಗಲಿದೆ. ಐದು ವರ್ಷಗಳೂ ಸರ್ಕಾರ ಸುಭದ್ರವಾಗಿರಲಿದೆ ಜೊತೆಗೆ ಗ್ಯಾರಂಟಿಗಳು ಜಾರಿಯಲ್ಲಿರಲಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಳಬಾಗಿಲು ನಗರದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಡಾ|| ಕೆ.ವಿ. ಗೌತಮ್ ಅವರ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು, ಮಾತನಾಡಿದ ಸಿಎಂಸಿದ್ದರಾಮಯ್ಯ, ಕೋಲಾರದಿಂದ ಇಂದು ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದು, ಜನರ ಪ್ರತಿಕ್ರಿಯೆ ಬಹಳ ಚೆನ್ನಾಗಿದೆ. ಎಲ್ಲಾ ಜಾತಿಯ ಜನರು, ಮಧ್ಯಮ ವರ್ಗದವರು ನಮ್ಮ ಪರವಾಗಿದ್ದಾರೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಅತ್ಯಧಿಕ ಅಂತರದಿಂದ ಗೆಲ್ಲಲಿದ್ದಾರೆ ಎಂದರು. ಲೋಕಸಭಾ ಚುನಾವಣೆಯ ನಂತರ ಸರ್ಕಾರ ಬಿದ್ದುಹೋಗುವುದಲ್ಲ, ಇನ್ನಷ್ಟು ಸುಭದ್ರವಾಗಲಿದೆ. 136 ಸ್ಥಾನಗಳನ್ನು ಗೆದ್ದು 43% ಮತಗಳನ್ನು ಕಾಂಗ್ರೆಸ್ ಗಳಿಸಿದ್ದೇವೆ. ಬಿಜೆಪಿ ಪಕ್ಷದವರು 64 ಸ್ಥಾನ ಗೆದ್ದಿದ್ದಾರೆ. ಇನ್ನಷ್ಟು ಜನ ನಮ್ಮ ಪಕ್ಷವನ್ನು ಸೇರಲಿದ್ದಾರೆ. ಸರ್ಕಾರ ಬಿದ್ದುಹೋಗುವ ಪ್ರಶ್ನೆ ಉದ್ಭಿಸುವುದಿಲ್ಲ. ಐದು ವರ್ಷಗಳೂ ಸರ್ಕಾರ ಸುಭದ್ರವಾಗಿರಲಿದೆ ಜೊತೆಗೆ ಗ್ಯಾರಂಟಿಗಳು ಜಾರಿಯಲ್ಲಿರಲಿವೆ ಎಂದು ಹೇಳಿದರು. ಭದ್ರಾ ಮೇಲ್ದಂಡೆ ಯೋಜನೆಗೆ…
ಅಂಡಮಾನ್ : ತಡರಾತ್ರಿ ಭಾರತದ ಅಂಡಮಾನ್ ಸಮುದ್ರದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಭಾರತದ ಅಂಡಮಾನ್ ಸಮುದ್ರದಲ್ಲಿ ಶನಿವಾರ ರಾತ್ರಿ ಪ್ರಬಲ ಭೂಕಂಪನ ಸಂಭವಿಸಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ರಾತ್ರಿ 01:05 ಕ್ಕೆ ಭೂಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರ ಬಿಂದು 137 ಕಿ.ಮೀ ಆಳದಲ್ಲಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. https://twitter.com/ANI/status/1776704633484071279?ref_src=twsrc%5Etfw%7Ctwcamp%5Etweetembed%7Ctwterm%5E1776704633484071279%7Ctwgr%5E%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಲಾಗೋಸ್ : ಮಧ್ಯ ನೈಜೀರಿಯಾದಲ್ಲಿ ಸಶಸ್ತ್ರ ತಂಡವೊಂದು ನಡೆಸಿದ ದಾಳಿಯಲ್ಲಿ ಕನಿಷ್ಠ 25 ಮಂದಿ ಮೃತಪಟ್ಟಿದ್ದಾರೆ ಎಂದು ಸಮುದಾಯದ ಮುಖಂಡರೊಬ್ಬರು ತಿಳಿಸಿದ್ದಾರೆ. ಕೋಗಿ ರಾಜ್ಯದಲ್ಲಿ ಈ ದಾಳಿ ನಡೆದಿದೆ. ಹತ್ಯಾಕಾಂಡ ನಡೆದ ಒಮಲಾ ಪಟ್ಟಣದ ಅಗೋಜೆಜು-ಒಡೋ ಸಮುದಾಯದ ಮುಖಂಡ ಎಲಿಯಾಸ್ ಅಟಾಬೋರ್, ದಾಳಿಕೋರರ ಗುಂಪು ಪಟ್ಟಣಕ್ಕೆ ನುಗ್ಗಿ ವಿವೇಚನೆಯಿಲ್ಲದೆ ಗುಂಡು ಹಾರಿಸಿದೆ ಎಂದು ಹೇಳಿದರು. ಇಲ್ಲಿಯವರೆಗೆ, ದಾಳಿಕೋರರಿಂದ ಜೀವ ಕಳೆದುಕೊಂಡ 25 ಜನರನ್ನು ನಾವು ಸಮಾಧಿ ಮಾಡಿದ್ದೇವೆ. ಅನೇಕ ಜನರು ಗಾಯಗೊಂಡಿದ್ದಾರೆ ಮತ್ತು ನಾವು ಮಾತನಾಡುವಾಗ, ಅನೇಕರು ಲೆಕ್ಕಕ್ಕೆ ಸಿಗದೆ ಉಳಿದಿದ್ದಾರೆ” ಎಂದು ಅಟಾಬೋರ್ ವಿಷಾದಿಸಿದರು.
ನವದೆಹಲಿ : ಆಂಧ್ರಪ್ರದೇಶ ಮತ್ತು ಯಾಣಂ ಕರಾವಳಿ ಪ್ರದೇಶಗಳು, ಗಂಗಾ ಪಶ್ಚಿಮ ಬಂಗಾಳ, ರಾಯಲಸೀಮಾ, ಬಿಹಾರ, ತೆಲಂಗಾಣ, ಜಾರ್ಖಂಡ್, ಕರ್ನಾಟಕದ ಉತ್ತರ ಒಳನಾಡು, ಒಡಿಶಾ ಮತ್ತು ವಿದರ್ಭ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಲ್ಲದೆ, ಹವಾಮಾನ ಇಲಾಖೆ ಏಪ್ರಿಲ್ 7 ಮತ್ತು 8 ರಂದು ಉಪ ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್ಗಢಕ್ಕೆ ಆಲಿಕಲ್ಲು ಮಳೆ ಎಚ್ಚರಿಕೆ ನೀಡಿದೆ. ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನ ಅನುಭವಿಸುವ ಪ್ರದೇಶಗಳನ್ನ ಐಎಂಡಿ ಗುರುತಿಸಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ ಭಾರತವು ತೀವ್ರ ಶಾಖವನ್ನು ಎದುರಿಸುವ ನಿರೀಕ್ಷೆಯಿದೆ, ಮಧ್ಯ ಮತ್ತು ಪಶ್ಚಿಮ ಪರ್ಯಾಯ ದ್ವೀಪದ ಭಾಗಗಳು ಹೆಚ್ಚಿನ ಪರಿಣಾಮವನ್ನು ಬೀರುತ್ತವೆ. ಇದು ಏಪ್ರಿಲ್ 19 ರಿಂದ ಪ್ರಾರಂಭವಾಗುವ ಏಳು ಹಂತಗಳ ಬೃಹತ್ ಸಾರ್ವತ್ರಿಕ ಚುನಾವಣೆಯೊಂದಿಗೆ ಹೊಂದಿಕೆಯಾಗುತ್ತದೆ. https://twitter.com/Indiametdept/status/1776246476949348636?ref_src=twsrc%5Etfw%7Ctwcamp%5Etweetembed%7Ctwterm%5E1776246476949348636%7Ctwgr%5E882a6280eff8440fd53b7bcbb2a1e1a320ee61de%7Ctwcon%5Es1_&ref_url=https%3A%2F%2Fwww.oneindia.com%2Findia%2Fweather-alert-imd-predicts-heatwave-and-hailstorms-in-several-states-3793019.html…
ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಯಲ್ಲಿ ಸಿಲುಕಿ, ಸಾವು ಗೆದ್ದಿದ್ದ ಸಾತ್ವಿಕ್ ಗುಣಮುಖನಾಗಿದ್ದು, ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸಾತ್ವಿಕ್ ಗೆ 48ಗಂಟೆಗಳವರೆಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದ ವೈದ್ಯರ ತಂಡ ಸಾತ್ವಿಕ್ ಹೆಸರಿನಲ್ಲಿ ಕೇಕ್ ತಂದು ಆಸ್ಪತ್ರೆಯಲ್ಲಿ ಮಗುವಿನ ತಂದೆ-ತಾಯಿ ಜೊತೆಗೆ ಕೇಕ್ ತಿನ್ನಿಸಿ ಸಂಭ್ರಮಿಸಿದರು. ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಏಪ್ರಿಲ್ 3 ರಂದು ಕೊಳವೆ ಬಾವಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಸಾತ್ವಿಕ್ ಇದೀಗ ಸಂಪೂರ್ಣವಾಗಿ ಗುಣಮುಖನಾಗಿ ಶನಿವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ.
ಶಿವಮೊಗ್ಗ : ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಚುನಾವಣಾಧಿಕಾರಿಗಳ ಕಚೇರಿಯಿಂದ ಅನುಮತಿ ಪಡೆಯದೇ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಏಪ್ರಿಲ್ 5 ರಂದು ತೀರ್ಥಹಳ್ಳಿ ತಾಲೂಕಿನ ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನವೊಂದರಲ್ಲಿ ಪೂಜಾ ಕಾರ್ಯಕ್ರಮ ನೆರವೇರಿಸಿ, ಬಳಿಕ ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆಗೆ ಹೋಗಿ, ಅವರ ಮನೆಯಂಗದಲ್ಲಿ ಸಭೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಶನಿವಾರ ಸುಸೂತ್ರವಾಗಿ ಮುಕ್ತಾಯಗೊಂಡಿದ್ದು, ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ಕನ್ನಡ ದಿನಪತ್ರಿಕೆಯ ಪರೀಕ್ಷೆಗೆ ಶೇ. 98.2 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಏಪ್ರಿಲ್15 ರಿಂದ ಮೌಲ್ಯ ಮಾಪನ ಕಾರ್ಯ ಆರಂಭವಾಗಲಿದೆ ಎಂದು ಕರ್ನಾಟಕ ಶಾಲಾ ಮತ್ತು ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ನಡುವೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ದಿನಾಂಕ: 06.04.2024ರಂದು ಮಂಡಲಿಯ ಜಾಲತಾಣದಲ್ಲಿ http://kseab.karnataka.gov.inನಲ್ಲಿ ಪ್ರಕಟಿಸಿದೆ.
ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಇಂದು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದಾಗಿ ದಿನದಿಂದ ದಿನಕ್ಕೆ ಉಷ್ಣಾಂಶ ಏರಿಕೆಯಾಗುತ್ತಿದ್ದು, ಇದರ ಪರಿಣಾಮದಿಂದ ಬಿಸಿಗಾಳಿ ಬೀಸುತ್ತಿದೆ. ಈ ನಡುವೆ ರಾಜ್ಯದ ಮಧ್ಯ, ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು, ನಾಳೆ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಎರಡು ದಿನ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು : ಪಿ.ಎಂ.ಪೋಷಣ್ ಶಕ್ತಿ ನಿರ್ಮಾಣ್ ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ 31 ಕಂದಾಯ ಜಿಲ್ಲೆಗಳಲ್ಲಿ ಬರ ಘೋಷಣೆಯ ಹಿನ್ನಲೆಯಲ್ಲಿ ಬರಗಾಲದಲ್ಲಿ ಮಕ್ಕಳಲ್ಲಿನ ಪೌಷ್ಟಿಕಾಂಶ ಕೊರತೆಯಾಗಬಾರದೆಂದು ಏಪ್ರಿಲ್ 11 ರಿಂದ ಮೇ 28 ರ ವರೆಗೆ ಭಾನುವಾರಗಳಂದು ಹೊರತುಪಡಿಸಿ ನಿರಂತರವಾಗಿ 41 ದಿನಗಳ ಕಾಲ ಮಧ್ಯಾಹ್ನದ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಬಿಸಿಯೂಟವನ್ನು ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ 1 ರಿಂದ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಅಂದರೆ ಪ್ರಸ್ತುತ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಒಳಗೊಂಡಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 12 ರಿಂದ 2 ಗಂಟೆಯ ಅವಧಿಯಲ್ಲಿ ಊಟ ನೀಡಲಾಗುತ್ತದೆ. ಶಾಲೆಗಳ ಬೇಸಿಗೆ ರಜೆ ಏಪ್ರಿಲ್ 11 ರಿಂದ ಆರಂಭವಾಗಲಿದೆ. ಶಾಲೆ ಆಯ್ಕೆ; ಗ್ರಾಮ, ಕೇಂದ್ರಸ್ಥಾನದಲ್ಲಿ ಒಂದಕ್ಕಿಂತ ಹೆಚ್ಚು ಶಾಲೆಗಳಿದ್ದಲ್ಲಿ ಅವುಗಳಲ್ಲಿ ಹೆಚ್ಚು ಮಕ್ಕಳಿರುವ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆ ಶಾಲೆಗೆ ಇತರೆ ಶಾಲೆ ಮಕ್ಕಳು ಬಂದು ಊಟ ಮಾಡಿ ಹೋಗಬಹುದಾಗಿದೆ. ಪ್ರತಿ…