Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಮಾನ್ಯ ನ್ಯಾಯಾಲಯದಲ್ಲಿ ಬಿಡುಗಡೆ ಹೊಂದಿದ ಪ್ರಕರಣಗಳಲ್ಲಿ Acquittal Review Committee ಸಮಿತಿಯು ಶಿಫಾರಸ್ಸಿನ ಆಧಾರದ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ತನಿಖೆಯಲ್ಲಿ ಕರ್ತವ್ಯಲೋಪವೆಸಗಿರುವ ಬಗ್ಗೆ ಶಿಸ್ತು ಕ್ರಮ ಜರುಗಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪೊಲೀಸ್ ಇಲಾಖೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಅಪರಾಧ ಮೊಕದ್ದಮೆಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಅಂತಿಮ ವರದಿಗಳು ಸಲ್ಲಿಸಲ್ಪಟ್ಟ ನಂತರ ಮಾನ್ಯ ನ್ಯಾಯಾಲಯವು ವಿಚಾರಣೆ ನಡೆಸಿ ಹೊರಡಿಸುತ್ತಿರುವ ಅನೇಕ ತೀರ್ಪುಗಳಲ್ಲಿ ವಿವಿಧ ವೃಂದದ ಅಧಿಕಾರಿ/ಸಿಬ್ಬಂದಿಗಳು ಸಮರ್ಪಕವಾಗಿ ತನಿಖೆ ಮಾಡದೇ ಇರುವುದರ ಬಗ್ಗೆ ಅಥವಾ ತನಿಖೆಯಲ್ಲಿನ ಲೋಪದೋಷಗಳ ಬಗ್ಗೆ ಉಲ್ಲೇಖಿಸಲಾಗಿರುತ್ತದೆ ಮತ್ತು ಇದರಿಂದಾಗಿ ಆರೋಪಿತರುಗಳಿಗೆ ಸಂಶಯದ ಲಾಭವನ್ನು ನೀಡಿ ಪ್ರಕರಣಗಳು ಖುಲಾಸೆಯಾಗುತ್ತಿರುತ್ತವೆ. ಸರ್ಕಾರದ ಆದೇಶ ಸಂಖ್ಯೆ: ಹೆಚ್‌ಡಿ126/ಸಿಡಬ್ಲೂಪಿ/2014 0:20.10.2014 ಆದೇಶಿಸಿರುವಂತೆ ನ್ಯಾಯಾಲಯದಲ್ಲಿ ಖುಲಾಸೆಗೊಂಡ ಪ್ರಕರಣಗಳನ್ನು ಕೇಸಿನ ಕಡತದೊಂದಿಗೆ ಪರಾಮರ್ಶಿಸುವುದರ ಸಲುವಾಗಿ ರಾಜ್ಯದ ಪ್ರತಿ ವಲಯ ಮತ್ತು ನಗರ ಕಮೀಷನರೇಟ್‌ಗಳಲ್ಲಿ ಹಾಗೂ ಜಿಲ್ಲಾಘಟಕಗಳಲ್ಲಿ ಸರ್ಕಾರಿ ಅಭಿಯೋಜಕರುಗಳನ್ನು ಒಳಗೊಂಡ Acquittal Review Committee…
ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ಓದುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 50 ಲಕ್ಷ ರೂ.ವರೆಗೆ ಪ್ರೋತ್ಸಾಹಧನ ನೀಡಲು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ವಿದ್ಯಾರ್ಥಿಯು ಪಿಯುಸಿಯಲ್ಲಿ ಶೇಕಡ 95 ರಷ್ಟು ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಲಭ್ಯವಾಗದಿದ್ದಾಗ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೊದಲನೇ ವರ್ಷದ ಕಾಲೇಜು ಶುಲ್ಕ 25 ಲಕ್ಷ ರೂಪಾಯಿ ಪಾವತಿಸಲು ಪ್ರೋತ್ಸಾಹ ಧನ ಮಂಜೂರು ಮಾಡಲಾಗುವುದು. ಅದೇ ವಿದ್ಯಾರ್ಥಿಯು ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 60ರಷ್ಟು ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ ಪುನಃ 25 ಲಕ್ಷ ಪ್ರೋತ್ಸಾಹಧನ ಮಂಜೂರು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ 2024-25 ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸ್ತಕರು ವೆಬ್ ಸೈಟ್ www.kacdc.karnataka.gov.in ನಲ್ಲಿ ಡಿಸೆಂಬರ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಬೆಂಗಳೂರು ದಕ್ಷಿಣ ಜಿಲ್ಲೆ, ನಂ.123/1037, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ರಾಜಾಜಿನಗರ, ಬೆಂಗಳೂರು- 560010, ಅಥವಾ ದೂರವಾಣಿ ಸಂಖ್ಯೆ: 080-23156006 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ನ.13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪವ ಹಾಗೂ ಇತ್ಯಾದಿಗಳನ್ನು ನ.11 ರೊಳಗಾಗಿ ತಿಳಿಸಬಹುದು. ಪತ್ರ ಲಕೋಟೆ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವೆಂಕಟಸುಬ್ಬಯ್ಯ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ಆದೇಶದ ಮೇರೆಗೆ ಧಾರವಾಡ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿಸೆಂಬರ್ 14, 2024 ರಂದು ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ರಾಷ್ಟ್ರೀಯ ಲೋಕ ಆದಾಲತ್ ಆಯೋಜಿಸಲಾಗುವುದು. ಲೋಕ ಅದಾಲತ್‍ದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಸಿವಿಲ್ ವ್ಯಾಜ್ಯ, ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕ್, ಸಹಕಾರಿ ಸಂಘ, ಖಾಸಗಿ ವ್ಯಕ್ತಿಗಳ ನಡುವಿನ ಚೆಕ್ ಅಮಾನ್ಯ, ಹಣ ವಸೂಲಾತಿ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳು, ಜೀವನಾಂಶ, ವೈವಾಹಿಕ ಪ್ರಕರಣಗಳು (ವಿವಾಹ ವಿಚ್ಛೇದನ ಹೊರತುಪಡಿಸಿ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳು, ವಿದ್ಯುಚ್ಛಕ್ತಿ ಮತ್ತು ನೀರಿನ ಶುಲ್ಕ ಪಾವತಿ ಪ್ರಕರಣಗಳು, ಸಾರ್ವಜನಿಕ ಸೇವೆ ಮತ್ತು ನಿವೃತ್ತಿ ವೇತನಗಳಿಗೆ ಸಂಬಂಧಿಸಿದ ಪ್ರಕರಣಗಳು, ಕಂದಾಯ ಮತ್ತು ಅದಕ್ಕೆ ಸಂಬಂಧಿಸಿದ ಪ್ರಕರಣಗಳು,…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ, ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ಖಡಕ್ ಆದೇಶ ಹೊರಡಿಸಲಾಗಿದೆ. ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು ಸಾರ್ವಜನಿಕ ಪುದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು THE CIGARETTES AND OTHER TOBACCO PRODUCTS (PROHIBITION OF ADVERTISEMENT AND REGULATION OF TRADE AND COMMERCE, PRODUCTION, SUPPLY AND DISTRIBUTION) ACT, 2003 (ಕೇಂದ್ರ ಅಧಿನಿಯಮ 34/2003)ರಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ. ಶಾಸನತ್ಮಾಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ…
ಬೆಂಗಳೂರು: ಆದಾಯ ತೆರಿಗೆ ಮತ್ತು ಜಿಎಸ್‌ಟಿ ಪಾವತಿಸದಿದ್ದರೂ ತಾಂತ್ರಿಕ ಕಾರಣದಿಂದಾಗಿ ರಾಜ್ಯದಲ್ಲಿ 10 ಸಾವಿರಕ್ಕೂ ಅಧಿಕ ಕುಟುಂಬಗಳ ಬಡತನ ರೇಖೆಗಿಂತ ಕೆಳಗಿನ ಬಿಪಿಎಲ್ ಕಾರ್ಡ್ ರದ್ದಾಗಿದೆ. ಈ ಕುಟುಂಬಗಳು ಈಗಾಗಲೇ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯಿಂದಲೂ ವಂಚಿತರಾಗಿದ್ದಾರೆ. ಇದರ ಬೆನ್ನಲ್ಲೇ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿರುವುದು 10,000 ಕುಟುಂಬಗಳಿಗೆ ಶಾಕ್ ನೀಡಿದೆ. ತಾವು ಐಟಿ, ಜಿಎಸ್‌ಟಿ ಪಾವತಿದಾರರಲ್ಲ. ಆದರೂ, ಐಟಿ, ಜಿಎಸ್‌ಟಿ ಪಾವತಿದಾರರು ಎಂದು ಭಾಗ್ಯಲಕ್ಷ್ಮಿ ಹಣ ಪಾವತಿ ಮಾಡುತ್ತಿಲ್ಲ ಎಂದು ಅರ್ಹ ಸಾವಿರಾರು ಮಹಿಳೆಯರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿ ಸುಮಾರು 7-8 ತಿಂಗಳಾಗಿದ್ದರೂ, ಕೆಲವರು ಐಟಿ, ಜಿಎಸ್‌ಟಿ ಪಾವತಿದಾರರಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಿದ್ದರೂ ಭಾಗ್ಯಲಕ್ಷ್ಮಿ ಹಣ ಪಾವತಿ ಆಗಿಲ್ಲ. ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ…
ನ್ಯೂಯಾರ್ಕ್: ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಭಾರತದ ಸಂಸತ್ ಸದಸ್ಯ ರಾಜೀವ್ ಶುಕ್ಲಾ ಅವರು ಪಾಕಿಸ್ತಾನಕ್ಕೆ ಉತ್ತರ ನೀಡಿದ್ದಾರೆ. ಪಾಕಿಸ್ತಾನವನ್ನು ಉಲ್ಲೇಖಿಸಿದ ಶುಕ್ಲಾ, “ನಿಯೋಗವು ಮತ್ತೊಮ್ಮೆ ಸುಳ್ಳನ್ನು ಹರಡಲು ಈ ವೇದಿಕೆಯನ್ನು ಬಳಸಿಕೊಂಡಿದೆ. ಈ ನಿಯೋಗವು ತಪ್ಪು ಮಾಹಿತಿಯನ್ನು ಆಶ್ರಯಿಸುವುದು ಅಭ್ಯಾಸವಾಗಿದೆ. ಈ ನಿಯೋಗವು ಇದೇ ರೀತಿಯ ಮಾನದಂಡಗಳನ್ನು ಬಳಸಿಕೊಂಡು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವನ್ನು ಅಳೆಯಲು ಒಲವು ತೋರುತ್ತದೆ “. ಶುಕ್ಲಾ ಹೇಳಿದರು, “ನಾನು ಸ್ಪಷ್ಟವಾಗಿ ಹೇಳುತ್ತೇನೆ. ನಿಜವಾದ ಪ್ರಜಾಪ್ರಭುತ್ವಗಳು ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತವೆ. ಇತ್ತೀಚೆಗೆ ಮುಕ್ತಾಯಗೊಂಡ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಜನರು ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಯಾವುದೇ ತಪ್ಪು ಮಾಹಿತಿಯು ನೆಲದ ಮೇಲಿನ ಸತ್ಯಗಳನ್ನು ಬದಲಾಯಿಸುವುದಿಲ್ಲ” ಎಂದರು. ಜಮ್ಮು ಮತ್ತು ಕಾಶ್ಮೀರ ರಾಜ್ಯದ ಬಗ್ಗೆ ತಪ್ಪು ಮಾಹಿತಿಯನ್ನು ಹರಡುವಲ್ಲಿ ಪಾಕಿಸ್ತಾನ ವಾಡಿಕೆಯಂತೆ ತೊಡಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ…
ನವದೆಹಲಿ :ವಹಿವಾಟಿನ ವಾರದ ಮೂರನೇ ದಿನ ಮಾರುಕಟ್ಟೆಯಲ್ಲಿ ಬಲ ಕಂಡುಬಂದಿದೆ. ಮೂರನೇ ದಿನವೂ ಮಾರುಕಟ್ಟೆಗಳು ಏರುಗತಿಯಲ್ಲಿ ತೆರೆದಿವೆ. ಸೆನ್ಸೆಕ್ಸ್ ಮತ್ತು ನಿಫ್ಟಿಯಲ್ಲಿ ಏರಿಕೆ ಕಂಡುಬಂದಿದೆ. ಮಾರುಕಟ್ಟೆಯ ಆರಂಭದಲ್ಲಿ, ಸೆನ್ಸೆಕ್ಸ್ ಸುಮಾರು 236 ಅಂಕಗಳ ಏರಿಕೆಯೊಂದಿಗೆ 79713 ಮಟ್ಟದಲ್ಲಿ ಪ್ರಾರಂಭವಾಯಿತು. ಆದರೆ ನಿಫ್ಟಿ ಸುಮಾರು 66 ಪಾಯಿಂಟ್‌ಗಳ ಏರಿಕೆ ಮತ್ತು 24279 ಮಟ್ಟದಲ್ಲಿ ತೆರೆದುಕೊಂಡಿತು. ಮಾರುಕಟ್ಟೆಯ ಆರಂಭದಲ್ಲಿ 1444 ಶೇರುಗಳಲ್ಲಿ ಏರಿಕೆ ಕಂಡುಬಂದಿದೆ. 251 ಷೇರುಗಳು ಕುಸಿತ ಕಂಡಿವೆ. ನಿಫ್ಟಿ ಬ್ಯಾಂಕ್ ಸುಮಾರು 235 ಅಂಕಗಳ ಏರಿಕೆಯೊಂದಿಗೆ 52443 ರಲ್ಲಿ ಪ್ರಾರಂಭವಾಯಿತು. ಮಾರುಕಟ್ಟೆಯ ಆರಂಭದಲ್ಲಿ ನಿಫ್ಟಿ ಸ್ಮಾಲ್‌ಕ್ಯಾಪ್ ಮತ್ತು ಮಿಡ್‌ಕ್ಯಾಪ್ ಸೂಚ್ಯಂಕಗಳು ಸಹ ಬಲವಾಗಿ ತೆರೆದವು. ಮಿಡ್‌ಕ್ಯಾಪ್ ಸೂಚ್ಯಂಕವು ಸುಮಾರು 516 ಪಾಯಿಂಟ್‌ಗಳ ಏರಿಕೆಯೊಂದಿಗೆ 56632 ನಲ್ಲಿ ಪ್ರಾರಂಭವಾಯಿತು. ನಿಫ್ಟಿ ಐಟಿ ಕೂಡ 501 ಅಂಕಗಳನ್ನು ತೆರೆದಿದೆ
ಬೆಂಗಳೂರು : ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆಯ ಉತ್ಪನ್ನಗಳಿಗೆ ಬ್ರ್ಯಾಂಡ್ ಹೆಸರು ಸೂಚಿಸಿದ್ರೆ ರಾಜ್ಯ ಸರ್ಕಾರವು ಬಹುಮಾನ ನೀಡಲಿದೆ. ಹೌದು, ತಡ ಯಾಕೆ ಈಗಲೇ ಇಲಾಖೆಯ ವೆಬ್ ಸೈಟ್ ಗೆ ಭೇಟಿನೀಡಿ, ನಿಮ್ಮ ವಿವರಗಳೊಂದಿಗೆ ಬ್ರ್ಯಾಂಡ್ ಹೆಸರು ನಮೂದಿಸಿ, ಆಕರ್ಷಕ ನಗದು ಬಹುಮಾನ ನಿಮ್ಮದಾಗಿಸಿಕೊಳ್ಳಿ. ಹೆಚ್ಚಿನ ವಿವರಗಳಿಗಾಗಿ ವೀಡಿಯೋವನ್ನು ಪೂರ್ತಿ ನೋಡಿ. https://twitter.com/siddaramaiah/status/1853726357261320585?ref_src=twsrc%5Egoogle%7Ctwcamp%5Eserp%7Ctwgr%5Etweet












