Author: kannadanewsnow57

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಮ್ ನಾಪತ್ತೆಯಾಗಿದ್ದು, ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಕಾರು ಪತ್ತೆಯಾಗಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಮನೆಯಿಂದ ಹೋಗಿರುವ ಮುಮ್ತಾಜ್ ಅವರ ಕಾರು ಕುಳೂರಿನ ಸೇತುವೆ ಮೇಲೆ ಪತ್ತೆಯಾಗಿದ್ದು, ಸ್ಥಳಕ್ಕೆ ಮೊಯಿದ್ದೀನ್ ಕುಟುಂಬಸ್ಥರು ಆಗಮಿಸಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮುಮ್ತಾಜ್ ಅವರ ಕಾರು ಸೇತುವೆ ಮೇಲೆ ಪತ್ತೆಯಾಗಿದ್ದು, ಕಾರು ಡ್ಯಾಮೇಜ್ ಆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅಗರ್ವಾಲ್ ಭೇಟಿ ನೀಡಿದ್ದಾರೆ. ನದಿಯಲ್ಲಿ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ತಂಡಗಳಿಂದ ಪರಿಶೀಲನೆ ನಡೆಸಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಮೀನುಗಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಮುದ್ರ ಆಂಬುಲೆನ್ಸ್ ಆರಂಭಕ್ಕೆ ನಿರ್ಧರಿಸಲಾಗಿದೆ. ಕರಾವಳಿಯ ಮೀನುಗಾರರು ಮತ್ತು ಪ್ರವಾಸಿಗರ ಸುರಕ್ಷತೆಗಾಗಿ ಸಮುದ್ರ ಆಂಬುಲೆನ್ಸ್ ಸೇವೆ ಒದಗಿಸುವಂತೆ ಅನೇಕ ವರ್ಷಗಳಿಂದ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗುತ್ತಿತ್ತು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರಾವಳಿ ಭಾಗದಲ್ಲಿ ಪ್ರಚಾರ ಮಾಡುವಾಗ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮುದ್ರ ಅಂಬುಲೆನ್ಸ್ ಸೇವೆ ಆರಂಭಿಸುವಂತೆ ಮೀನುಗಾರರು ಒತ್ತಾಯಿಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮುದ್ರ ಆಂಬುಲೆನ್ಸ್ ಸೇವೆ ಕಲ್ಪಿಸುವಂತೆ ಸೂಚನೆ ನೀಡಿದ್ದರು. ಅಂತೆಯೇ 2024- 25 ನೇ ಸಾಲಿನ ಬಜೆಟ್ ನಲ್ಲಿ ಹಣ ಮೀಸಲಿಡಲಾಗಿತ್ತು. ಇದೀಗ ಸಮುದ್ರ ಆಂಬುಲೆನ್ಸ್ ಖರೀದಿಗೆ ಮೀನುಗಾರಿಕೆ ಇಲಾಖೆ ಮುಂದಾಗಿದ್ದು, ಇನ್ನೂ ಕೆಲವೇ ತಿಂಗಳಲ್ಲಿ ಸಮುದ್ರಕ್ಕೆ ಆಂಬುಲೆನ್ಸ್ ಗಳು ಇಳಿಯಲಿವೆ. 320 ಕಿಲೋಮೀಟರ್ ಕರಾವಳಿ ಪ್ರದೇಶದ ಮೂರು ಬಂದರೆಗಳಿಂದ ಸಮುದ್ರ ಆಂಬುಲೆನ್ಸ್…

Read More

ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕುಡಿಯವ ನೀರಿನ ಟ್ಯಾಂಕ್ ಗೆ ವಿಷ ಬೆರೆಸಿದ ಆರೋಪ ಕೇಳಿ ಬಂದಿದ್ದು, ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ತವಗಾ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಗೆ ಕಿಡಿಗೇಡಿಗಳು ವಿಷ ಬೆರೆಸಿರುವ ಶಂಕೆ ವ್ಯಕ್ತವಾಗಿದ್ದು, ಕಿಡಿಗೇಡಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನಿನ್ನೆ ಇಡೀ ಗ್ರಾಮಕ್ಕೆ ಟ್ಯಾಂಕರ್ ನೀರು ಸರಬರಾಜು ಮಾಡಲಾಗಿತ್ತು. ಈ ವೇಳೆ ಕುಡಿಯುವ ನೀರಿನಲ್ಲಿ ನೊರೆ, ದುರ್ವಾಸನೆ ಬಂದಿದೆ. ಕೂಡಲೇ ಗ್ರಾಮಸ್ಥರು ಕುಡಿಯುವ ನೀರಿನ ಟ್ಯಾಂಕರ್ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಿಡಿಗೇಡಿಗಳು ನೀರಿನ ಟ್ಯಾಂಕ್ ನಲ್ಲಿ ವಿಷ ಬೆರೆಸಿರುವುದು ಪತ್ತೆಯಾಗಿದೆ. ಘಟನೆ ಸಂಬಂಧ ಕಿಡಿಗೇಡಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.

Read More

ನವದೆಹಲಿ : ಭಾರತೀಯ ರಕ್ಷಣಾ ಸಂಶೋಧನಾ ಸಂಸ್ಥೆ (DRDO) ಮತ್ತೊಂದು ಪ್ರಮುಖ ಯಶಸ್ಸನ್ನು ಸಾಧಿಸಿದೆ. VSHORADS ಕ್ಷಿಪಣಿಯನ್ನು ರಾಜಸ್ಥಾನದ ಪೋಖ್ರಾನ್ ಫೈರಿಂಗ್ ರೇಂಜ್‌ನಿಂದ ಪರೀಕ್ಷಿಸಲಾಯಿತು. ಕಡಿಮೆ ವ್ಯಾಪ್ತಿಯ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಗಳ ಮೂರು ಹಾರಾಟ ಪರೀಕ್ಷೆಗಳನ್ನು DRDO ಯಶಸ್ವಿಯಾಗಿ ನಡೆಸಿದೆ. ರಕ್ಷಣಾ ಸಚಿವಾಲಯದ ಪ್ರಕಾರ, ಅಕ್ಟೋಬರ್ 3 ಮತ್ತು 4 ರಂದು ನಡೆಸಲಾದ ಈ ಪರೀಕ್ಷೆಗಳು ಕ್ಷಿಪಣಿ ವ್ಯವಸ್ಥೆಗಳ ಗರಿಷ್ಠ ವ್ಯಾಪ್ತಿ ಮತ್ತು ಎತ್ತರದ ಪ್ರತಿಬಂಧಕ ಸಾಮರ್ಥ್ಯಗಳನ್ನು ಪ್ರದರ್ಶಿಸುವ ಹೈ-ಸ್ಪೀಡ್ ವಸ್ತುಗಳನ್ನು ಗುರಿಯಾಗಿಸಿಕೊಂಡಿವೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಪೋಖ್ರಾನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ನಾಲ್ಕನೇ ತಲೆಮಾರಿನ ಸುಧಾರಿತ ಮಿನಿಯೇಟರೈಸ್ಡ್ ವೆರಿ ಶಾರ್ಟ್ ರೇಂಜ್ ಏರ್ ಡಿಫೆನ್ಸ್ ಸಿಸ್ಟಮ್ (VSHORADS) ಪ್ರಯೋಗಗಳನ್ನು ನಡೆಸಿತು. ಯಶಸ್ವಿ ಪ್ರಯೋಗಗಳು ಸ್ವಾವಲಂಬಿ ಭಾರತದ ಸರ್ಕಾರದ ಸ್ಥಳೀಯ ದೃಷ್ಟಿಗೆ ಅನುಗುಣವಾಗಿ, ಆರಂಭಿಕ ಬಳಕೆದಾರ ಪ್ರಯೋಗಗಳು ಮತ್ತು ಉತ್ಪಾದನೆಗೆ ಕಾರಣವಾಗುತ್ತವೆ ಎಂದು ನಿರೀಕ್ಷಿಸಲಾಗಿದೆ. ಅಭಿವೃದ್ಧಿ-ಕಮ್-ಉತ್ಪಾದನಾ ಪಾಲುದಾರ (DcPP) ಮೋಡ್‌ನಲ್ಲಿ ತೊಡಗಿಸಿಕೊಂಡಿರುವ ಎರಡು ಉತ್ಪಾದನಾ ಏಜೆನ್ಸಿಗಳೊಂದಿಗೆ…

Read More

ದಕ್ಷಿಣಕನ್ನಡ : ಭಾಷಣದಲ್ಲಿ ಅನ್ಯ ಧರ್ಮಕ್ಕೆ ನೋವುಂಟು ಮಾಡಿದ್ದರ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪಡೆದಂತಹ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಇದೀಗ FIR ದಾಖಲಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಹೌದು ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡಿದ್ದ ಡಾ.ಅರುಣ್ ಉಳ್ಳಾಲ್, ಬೇರೆ ಧರ್ಮಕ್ಕೆ ದಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿದ ಆರೋಪದ ಹಿನ್ನಲೆಯಲ್ಲಿ ಮಂಗಳೂರು ಸೆನ್ ಪೊಲೀಸರು ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಪ್ರಾಧ್ಯಪಕ ಹೇಳಿದ್ದೇನು? ನವದಂಪತಿ ಸಮಾವೇಶದಲ್ಲಿ ಬಾಷಣ ಮಾಡುತ್ತಾ ಹಿಂದುಗಳು ಹಿಂದು ಮಾಲಿಕತ್ವದ ಸಭಾಂಗಣದಲ್ಲೆ ಮದುವೆ ಆಗಬೇಕು. ಹಿಂದು ಮಾಲಿಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ ಎಂದು ಅರುಣ್ ಉಳ್ಳಾಲ್ ಅವರು ಹೇಳಿದ್ದರು. ಇವರ…

Read More

ಮಧ್ಯ ನೈಜೀರಿಯಾದ ನೈಜರ್ ರಾಜ್ಯದಲ್ಲಿ ದೋಣಿಯೊಂದು ನದಿಯಲ್ಲಿ ಮುಳುಗಿ ಕನಿಷ್ಠ 78 ಜನರು ಸಾವನ್ನಪ್ಪಿದ್ದಾರೆ. ಕ್ಸಿನ್ಹುವಾ ಸುದ್ದಿ ಸಂಸ್ಥೆಯ ವರದಿಯ ಪ್ರಕಾರ, ರಾಜ್ಯ ನಿರ್ವಹಣಾ ಏಜೆನ್ಸಿ ಮುಖ್ಯಸ್ಥ ಅಬ್ದುಲ್ಲಾಹಿ ಬಾಬಾ-ಅರಾಹ್ ಅವರು ಶನಿವಾರ ಇನ್ನೂ 17 ಜನರ ಶವಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ ದೋಣಿ ಇಸ್ಲಾಮಿಕ್ ಹಬ್ಬದಂದು 300 ಕ್ಕೂ ಹೆಚ್ಚು ಜನರನ್ನು ಕರೆತರುತ್ತಿತ್ತು ಎಂದು ಹೇಳಲಾಗುತ್ತಿದೆ. ಆದರೆ ಇದ್ದಕ್ಕಿದ್ದಂತೆ ಅದು ನದಿಗೆ ಉರುಳಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ನೀರಿನಲ್ಲಿ ಎಸೆಯಲ್ಪಟ್ಟಿದ್ದಾರೆ. 150 ಜನರನ್ನು ರಕ್ಷಿಸಲಾಗಿದೆ ನೈಜೀರಿಯಾದ ಅಧ್ಯಕ್ಷ ಬೋಲಾ ಟಿನುಬು ಅವರ ವಕ್ತಾರರು 300 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿದ ನಂತರ ಕನಿಷ್ಠ 78 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೃಢಪಡಿಸಿದ್ದಾರೆ. ಮಂಗಳವಾರ ತಡರಾತ್ರಿ ನೈಜರ್ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಮೊಕ್ವಾ ಸ್ಥಳೀಯ ಸರ್ಕಾರಿ ಪ್ರದೇಶದ ಜೆಬ್ಬಾ ಅಣೆಕಟ್ಟು ಬಳಿ ಅಪಘಾತ ಸಂಭವಿಸಿದೆ. 300 ಜನರಲ್ಲಿ ಸುಮಾರು 150 ಜನರನ್ನು ಉಳಿಸಲಾಗಿದೆ.…

Read More

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಸೂಚಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜಿಸಿ, ಅಕ್ಟೊಬರ್ 07, 2024 ರಿಂದ ಜಾರಿಗೆ ಬರುವಂತೆ ಸರ್ಕಾರವು ಆದೇಶಿಸಿದೆ. ಈ ಕುರಿತು ಪ್ರಕಟಣೆ ನೀಡಿದ್ದು, ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ. ಜಮೀನಿನ ಸರ್ವೇ ನಕ್ಷೆ (ಸ್ಕೆಚ್) ನಮೂನೆ 11 ಇ ಇರುವ ಮೋಜಣಿ ತಂತ್ರಾಂಶದೊಂದಿಗೆ ಕಾವೇರಿ ತಂತ್ರಾಂಶವನ್ನು ಅಕ್ಟೋಬರ್ 05, 2016 ರಿಂದ ಸಂಯೋಜನೆ ಮಾಡಲಾಗಿದೆ. ಗ್ರಾಮ ಪಂಚಾಯತ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ 2014 ರಿಂದ ಸಂಯೋಜನೆಗೊಳಿಸಲಾಗಿದೆ ಎಂದಿದೆ. ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-…

Read More

ಬೆಂಗಳೂರು: 2024-25 ನೇ ಸಾಲಿಗೆ ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಅನುಷ್ಠಾನ ಮಾಡುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿ ನೇರಸಾಲ, ಉದ್ಯಮಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhu.karantaka.gov.in ಮೂಲಕ ಕರ್ನಾಟಕ ಒನ್, ಗ್ರಾಮ್ ಒನ್, ಹುಬ್ಬಳ್ಳಿ, ಧಾರವಾಡ ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 10, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಪಲಾಪೇಕ್ಷಿಗಳ ಅರ್ಜಿಗಳನ್ನು ಶಾಸಕರ ಅಧ್ಯಕ್ಷತೆಯಲ್ಲಿರುವ ಆಯ್ಕೆ ಸಮಿತಿಯ ಮೂಲಕ ಗುರಿಗನುಗುಣವಾಗಿ ಫಲಾಪೇಕ್ಷಿಗಳನ್ನು ಆಯ್ಕೆ ಮಾಡಲಾಗುವುದು.

Read More

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹಲವಡೆ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಗಿದೆ. ಬೆಂಗಳೂರಿನ ಶಾಂತಿನಗರ, ಕೋರಮಂಗಲ, ರಿಚ್ಮಂಡ್ ವೃತ್ತ, ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ಯಶವಂತಪುರ ಹಾಗೂ ನಂದಿನಿ ಲೇಔಟ್ ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ.ಈ ವೇಳೆ ವಾಹನ ಸವಾರರು ಪರದಾಟ ನಡೆಸಿದರು. ಭಾರೀ ಮಳೆಯಿಂದ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದೆ. ಕೆಳ ಪ್ರದೇಶಗಳಲ್ಲಿ ಇರುವ ಅಂಗಡಿ -ಮುಂಗಟ್ಟು, ಪಾರ್ಕಿಂಗ್‌ ಲಾಟ್‌ಗಳಲ್ಲಿ ನೀರು ತುಂಬಿದ್ದು ಅಪಾರ ನಷ್ಟ ಉಂಟಾಗಿದೆ. ಕೇಂದ್ರೀಯ ವಿಹಾರ್ ಅಪಾರ್ಟ್ ಮೆಂಟ್ ನ ಕಾಂಪೌಡ್ ಕುಸಿದ ಪರಿಣಾಮ ಅಪಾರ್ಟ್ ಮೆಂಟ್ ಗೆ ನೀರು ನುಗ್ಗಿದ್ದು, 80 ಕ್ಕೂ ಹೆಚ್ಚು ಕಾರುಗಳು, 100 ಕ್ಕೂ ಹೆಚ್ಚು ಬೈಕ್ ಗಳು ಜಲಾವೃತವಾಗಿದ್ದು, ಕರೆಂಟ್ ಇಲ್ಲದೇ ಅಪಾರ್ಟ್ ಮೆಂಟ್ ನಿವಾಸಿಗಳು ರಾತ್ರಿ ಕಳೆದಿದ್ದಾರೆ.

Read More

ನವದೆಹಲಿ : ಒಂದು ರಾಷ್ಟ್ರ-ಒಂದು ಚುನಾವಣೆ ಸಂವಿಧಾನದ ವಿರುದ್ಧವಲ್ಲ, ಕೆಲವರು ಅದನ್ನು ತಪ್ಪಾಗಿ ಅರ್ಥೈಸಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸ್ಪಷ್ಟ ಪಡಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅನುಷ್ಠಾನ ಸಮಿತಿಯು ಯೋಜನೆಯನ್ನು ಕಾರ್ಯಗತಗೊಳಿಸಲು ಅಗತ್ಯವಾದ ಸಾಂವಿಧಾನಿಕ ತಿದ್ದುಪಡಿಗಳನ್ನು ಪರಿಗಣಿಸುತ್ತದೆ ಮತ್ತು ನಂತರ ಅಂತಿಮ ನಿರ್ಧಾರವನ್ನು ಸಂಸತ್ತು ತೆಗೆದುಕೊಳ್ಳಬೇಕಾಗುತ್ತದೆ. ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮಾರಕ ಉಪನ್ಯಾಸ ನೀಡಿದ ಕೋವಿಂದ್, 1967ರವರೆಗೆ ಮೊದಲ ನಾಲ್ಕು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದಿದ್ದವು. ಹೀಗಿರುವಾಗ ಏಕಕಾಲಕ್ಕೆ ಚುನಾವಣೆ ನಡೆಸುವುದನ್ನು ಅಸಾಂವಿಧಾನಿಕ ಎನ್ನಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. ಈ ವಿಚಾರ ಸಂವಿಧಾನ ಬಾಹಿರ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ಇದು ನಿಜವಲ್ಲ, ಏಕೆಂದರೆ ಈ ಪರಿಕಲ್ಪನೆಯನ್ನು ಸಂವಿಧಾನದ ನಿರ್ಮಾಪಕರು ಒಪ್ಪಿಕೊಂಡಿದ್ದಾರೆ. ಚುನಾವಣಾ ಆಯೋಗ ಸೇರಿದಂತೆ ಹಲವು ಸಂಸ್ಥೆಗಳು ಈ ಹಿಂದೆ ಈ ವಿಚಾರವನ್ನು ಬೆಂಬಲಿಸಿದ್ದವು. ಎಲ್ಲಾ ಮೂರು ಹಂತದ ಸರ್ಕಾರವು ಐದು ವರ್ಷಗಳ ಕಾಲ ಒಟ್ಟಿಗೆ ಕೆಲಸ ಮಾಡುವುದರಿಂದ, ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದು…

Read More