Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಪ್ರಾಧಿಕಾರದಿಂದ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಅವುಗಳನ್ನು ಕಡ್ಡಾಯವಾಗಿ ಪಾಲಿಸಿ, ನೈಸರ್ಗಿಕ ಅವಘಡಗಳಿಂದ ಆಗುವ ಹಾನಿಯಿಂದಾಗಿ ತಪ್ಪಿಸಿಕೊಳ್ಳಬಹುದಾಗಿದೆ. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸೂಚಿಸಿದೆ. ಸಾರ್ವಜನಿಕರಿಗೆ ಗುಡುಗು ಮತ್ತು ಸಿಡಿಲಿನಿಂದ ಸಾರ್ವಜನಿಕರು ಮತ್ತು ಜಾನುವಾರು ಪ್ರಾಣಹಾನಿಗಳನ್ನು ತಪ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡ ಸಲಹೆಗಳನ್ನು ನೀಡಿದೆ ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು…
ನವದೆಹಲಿ : ಮಂಗಳವಾರದ ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಹೆಚ್ಚಿನ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು ವ್ಯಕ್ತಿಯನ್ನು ಕೊಲ್ಲುವುದಕ್ಕಿಂತ ಗಂಭೀರ ಅಪರಾಧ ಎಂದು ಹೇಳಿದೆ. ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಯಾವುದೇ ದಯೆ ಇರುವುದಿಲ್ಲ ಎಂದು ಹೇಳಿದ ನ್ಯಾಯಾಲಯ, ಅಕ್ರಮವಾಗಿ ಕಡಿದ ಪ್ರತಿ ಮರಕ್ಕೂ 1 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭೂಯಾನ್ ಅವರ ಪೀಠವು ಅನುಮತಿಯಿಲ್ಲದೆ ಮರಗಳನ್ನು ಕಡಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ. 454 ಸಂರಕ್ಷಿತ ಮರಗಳನ್ನು ಅಕ್ರಮವಾಗಿ ಕಡಿದ ವ್ಯಕ್ತಿಯೊಬ್ಬರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು ಮತ್ತು ದಂಡವನ್ನು ಕಡಿಮೆ ಮಾಡಲು ನಿರಾಕರಿಸಿತು. “ಪರಿಸರ ವಿಷಯಗಳಲ್ಲಿ ಕರುಣೆ ಇಲ್ಲ” ಎಂದು ನ್ಯಾಯಾಲಯ ಹೇಳಿದೆ. 454 ಮರಗಳನ್ನು ಒಳಗೊಂಡಿರುವ ಹಸಿರು ಹೊದಿಕೆಯನ್ನು ಪುನರುಜ್ಜೀವನಗೊಳಿಸಲು ಕನಿಷ್ಠ 100 ವರ್ಷಗಳು ಬೇಕಾಗುತ್ತದೆ.” ದಂಡವನ್ನು ಶಿಫಾರಸು ಮಾಡಿದ ಕೇಂದ್ರೀಯ ಅಧಿಕಾರ ಸಮಿತಿಯ (ಸಿಇಸಿ) ವರದಿಯನ್ನು ನ್ಯಾಯಾಲಯ ಅಂಗೀಕರಿಸಿತು. ಇದಲ್ಲದೆ, ಈ 454 ಮರಗಳನ್ನು…
ಬೆಂಗಳೂರು : ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಸರ್ಜರಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಗೀತಾ ಅವರಿಗೆ ಸರ್ಜರಿಯಾದ ಬಗ್ಗೆ ಅವರ ಸಹೋದರ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸಚಿವರು ಈ ಸಮಾರಂಭಕ್ಕೆ ನಾನು ಬೆಳಗ್ಗೆ ಬರಬೇಕಿತ್ತು, ಆದರೆ ಬರಲು ಆಗಲಿಲ್ಲ. ಗೀತಕ್ಕ ಅವರದ್ದು ಸರ್ಜರಿ ಇತ್ತು, ಹಾಗಾಗಿ ಬರಲಿಲ್ಲ, ನಿನ್ನೆ ಇವತ್ತು 2 ದಿನ ಸರ್ಜರಿ ಇತ್ತು, ಹಾಗಾಗಿ ಬರಲಿಲ್ಲ. ಈಗ ಸರ್ಜರಿ ಮುಗಿದಿದೆ, ಅವರ ಆರೋಗ್ಯ ಸುಧಾರಿಸಿದೆ ಎಂದಿದ್ದಾರೆ. ಮೂಲಗಳ ಪ್ರಕಾರ ಗೀತಾ ಶಿವಕುಮಾರ್ ಅವರಿಗೆ ಸರ್ಜರಿಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ, ನಿಮ್ಮ ಉಳಿತಾಯ ಖಾತೆಯನ್ನು ವೇತನ ಖಾತೆಯಾಗಿ ಬದಲಾವಣೆ ಮಾಡಲು ಕೆಲ ದಾಖಲೆಗಳು ಕಡ್ಡಾಯಗೊಳಿಸಲಾಗಿದೆ. ಅವು ಏನು ಅಂತ ಮುಂದೆ ಓದಿ. ಈ ಸಂಬಂಧ ಬ್ಯಾಂಕ್ ನಿಂದ ಮಾಹಿತಿ ನೀಡಲಾಗಿದ್ದು, ಇದಕ್ಕಾಗಿ ಸರ್ಕಾರಿ ನೌಕರರು ಬ್ಯಾಂಕಿಗೆ ಒಂದು ಅರ್ಜಿಯನ್ನು ಸಲ್ಲಿಸಬೇಕಿದೆ. ಅದರಲ್ಲಿ ಹೆಸರು, ಹುದ್ದೆ, ಶಾಖೆಯ ಹೆಸರು, ಬ್ಯಾಂಕ್ ಖಾತೆಯ ವಿವರವನ್ನು ನಮೂದಿಸಬೇಕು. ಇದಲ್ಲದೇ ನಾನು ಉಳಿತಾಯ ಖಾತೆಯನ್ನು ಈ ಬ್ಯಾಂಕ್ ನಲ್ಲಿ ಹೊಂದಿದ್ದೇನೆ. ಈ ಖಾತೆಯನ್ನು ವೇತನ ಖಾತೆಯಾಗಿ ಬದಲಾಯಿಸೋದಕ್ಕೆ, ತಮ್ಮ ಬ್ಯಾಂಕಿನ ಮೂಲಕ ಸಿಗುವ ವಿವಿಧ ಪ್ರಯೋಜನ ಪಡೆಯಲು ಇಚ್ಚಿಸುತ್ತೇನೆ ಎಂಬುದಾಗಿಯೂ ತಿಳಿಸಬೇಕು. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರೆಲ್ಲರೂ ತಮ್ಮ ಉಳಿತಾಯ ಖಾತೆಯನ್ನು ವೇತನ ಖಾತೆಯಾಗಿ ಬದಲಾಯಿಸಿಕೊಂಡು, ಸಂಬಂಳ ಪ್ಯಾಕೇಜ್ ಗಳ ಅಡಿಯಲ್ಲಿನ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರ ಆದೇಶಿಸಿರುತ್ತದೆ. ಹೀಗಾಗಿ ನನ್ನ ವೇತನ ಖಾತೆಯಾಗಿ ಬದಲಾಯಿಸೋದಕ್ಕೆ ಮನವಿಯನ್ನು ಮಾಡಬೇಕು. ಉಳಿತಾಯ ಖಾತೆ, ವೇತನ ಖಾತೆಯಾಗಿ ಬದಲಾಯಿಸಲು ಈ ದಾಖಲೆ…
ಬೆಂಗಳೂರು: ರಾಜ್ಯದ ಐವರು ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. 72 ಗಂಟೆಯಲ್ಲಿ ಉತ್ತರಿಸುವಂತೆ ಐವರು ಬಿಜೆಪಿ ನಾಯಕರಿಗೆ ಶೋಕಾಸ್ ನೋಟಿಸ್ ನೀಡಿದೆ. ಈ ಸಂಬಂಧ ಬಿಜೆಪಿಯ ಶಿಸ್ತು ಪಾಲನಾ ಸಮಿತಿಯಿಂದ ಕರ್ನಾಟಕದ ಐವರು ಬಿಜೆಪಿ ನಾಯಕರಿಗೆ ನೋಟಿಸ್ ನೀಡಲಾಗಿದೆ. ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿ.ಪಿ ಹರೀಶ್, ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಗೆ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿದೆ. ಬಿಜೆಪಿ ಶಿಸ್ತು ಪಾಲನಾ ಸಮಿತಿಯಿಂದ ನೀಡಿರುವಂತ ನೋಟಿಸ್ ನಲ್ಲಿ 72 ಗಂಟೆಯಲ್ಲಿ ಉತ್ತರಿಸುವಂತೆ ತಿಳಿಸಲಾಗಿದೆ. ಈ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆನ್ನಲ್ಲೇ ಐವರು ಬಿಜೆಪಿ ನಾಯಕರಿಗೂ ಬಿಜೆಪಿ ಹೈಕಮಾಂಟ್ ನೋಟಿಸ್ ನೀಡಿ ಶಾಕ್ ನೀಡಲಾಗಿದೆ. https://twitter.com/ANI/status/1904544013220229394?ref_src=twsrc%5Etfw%7Ctwcamp%5Etweetembed%7Ctwterm%5E1904544013220229394%7Ctwgr%5E8194f56cb03e50318999988aa710596058df3420%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಬೆಂಗಳೂರು: 66/11 kV ಗೊಲ್ಲಹಳ್ಳಿ (ಬನ್ನೇರುಘಟ್ಟ) ಫ್-8 ಕಾಸರಗುಪ್ಪೆ ವಿದ್ಯುತ್ ಮಾರ್ಗದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಾರ್ಚ್ 27, 28 ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 27.03.2025(ಗುರುವಾರ) ಮತ್ತು 28.03.2025(ಶುಕ್ರವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಶ್ಯಾನುಭೋಗನಹಳ್ಳಿ ಕುಲುಮೆಪಾಳ್ಯ ಕನ್ನಾಯಕನ ಅಗ್ರಹಾರ ಕೆಂಚಯ್ಯನದೊಡ್ಡಿ ಮುನಿಮಾರನದೊಡ್ಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಿ ವಿವಿಧ ಹುದ್ದೆಗಳಿಗೆ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಹೀಗಿದೆ.
ಬೆಂಗಳೂರು : ಬೆಂಗಳೂರಿನ ಪುಲಕೇಶಿ ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಪೋಟಗೊಂಡಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಪುಲಕೇಶಿ ನಗರದಲ್ಲಿರುವ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ಒಂದರಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಸಿಲಿಂಡರ್ ಸ್ಪೋಟಗೊಂಡಿವೆ. ಒಟ್ಟಿಗೆ 4 ಸಿಲಿಂಡರ್ ಬ್ಲ್ಯಾಸ್ಟ್ ಆದ ಪರಿಣಾಮ ಫ್ಲ್ಯಾಟ್ ಹೊತ್ತಿ ಉರಿದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕಲಾತ್ : ಪಾಕಿಸ್ತಾನದ ಕಲಾತ್ನಲ್ಲಿ ನಡೆದ ಐಇಡಿ ದಾಳಿಯ ಹೊಣೆಯನ್ನು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್ಎ) ಹೊತ್ತುಕೊಂಡಿದೆ. ಮಂಗಳವಾರ ನಡೆದ ಈ ದಾಳಿಯಲ್ಲಿ ಪಾಕಿಸ್ತಾನ ಸೇನೆಯ ಐವರು ಸೈನಿಕರು ಸಾವನ್ನಪ್ಪಿದ್ದರು. ಕಲಾತ್ನ ಹರ್ಬೋಯ್ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಪಾಕಿಸ್ತಾನ ಸೇನೆಯ ಮೇಲಿನ ಇತ್ತೀಚಿನ ದಾಳಿಯ ವಿವರಗಳನ್ನು ವಕ್ತಾರ ಝೀಂದ್ ಬಲೋಚ್ ಉಲ್ಲೇಖಿಸಿ ಬಿಎಲ್ಎ ಹೇಳಿಕೆ ನೀಡಿದೆ. ಮಂಗಳವಾರ ಪಾಕಿಸ್ತಾನ ಸೇನಾ ಬೆಂಗಾವಲು ಪಡೆಯ ವಾಹನದ ಮೇಲೆ ರಿಮೋಟ್-ನಿಯಂತ್ರಿತ ಸುಧಾರಿತ ಸ್ಫೋಟಕ ಸಾಧನ (IED) ಬಳಸಿ ದಾಳಿ ನಡೆಸಲಾಗಿದೆ ಎಂದು ಬಿಎಲ್ಎ ಹೇಳಿಕೊಂಡಿದೆ. ಸ್ಫೋಟದಲ್ಲಿ ಐವರು ಪಾಕಿಸ್ತಾನಿ ಸೇನಾ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಮೇಜರ್ ಶ್ರೇಣಿಯ ಅಧಿಕಾರಿ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದಲ್ಲಿ ಗುರಿಯಾಗಿಸಿಕೊಂಡ ವಾಹನವು ಸಂಪೂರ್ಣವಾಗಿ ನಾಶವಾಗಿದೆ ಎಂದು ಬಿಎಲ್ಎ ಹೇಳಿಕೊಂಡಿದೆ. ಬಿಎಲ್ಎ ಹೇಳಿಕೆಯ ಪ್ರಕಾರ, ಪಾಕಿಸ್ತಾನ ಸೇನೆಯು ಮಾರ್ಚ್ 24, 2025 ರಿಂದ ಹರ್ಬೋಯ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಮುನ್ನಡೆಯಲು ಪ್ರಯತ್ನಿಸುತ್ತಿತ್ತು. ಗುಂಪು ಬಿಡುಗಡೆ ಮಾಡಿದ…
ಗೃಹಜ್ಯೋತಿ ಯೋಜನೆಯ ಸೌಲಭ್ಯವನ್ನು 2023-24 ಮತ್ತು 2024-25 ನೇ ಸಾಲಿನ ವಿದ್ಯುತ್ ಬಳಕೆಯ ಸರಾಸರಿ ಪರಿಗಣಿಸಿ ಲೆಕ್ಕೀಕರಿಸುವ ನಿಯಮವನ್ನು ವಿಸ್ತರಿಸಿ ಎಲ್ಲ ಗೃಹ ಬಳಕೆಯ ಗ್ರಾಹಕರಿಗೆ ಗೃಹಜ್ಯೋತಿ ಸೌಲಭ್ಯ ದೊರಕಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಸಭೆಯು ಒಮ್ಮತದ ನಿರ್ಣಯ ಅಂಗೀಕರಿಸಿದೆ. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್ ಅವರ ಅಧ್ಯಕ್ಷತೆಯಲ್ಲಿ ಏರ್ಪಡಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಗೃಹಜ್ಯೋತಿ ಯೋಜನೆಯನ್ವಯ 2022-23 ನೇ ಸಾಲಿನ ಸರಾಸರಿ ವಿದ್ಯುತ್ ಬಳಕೆಯನ್ನು ಪರಿಗಣಿಸಿ ಲೆಕ್ಕೀಕರಿಸಿ 200 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸದೇ ಇರುವ ಕಾರಣ 2023-24 ನೇ ಸಾಲಿನ ವಿದ್ಯುತ್ ಬಳಕೆಯನ್ನು ಪರಿಗಣಿಸಲು ಗ್ರಾಹಕರು ಒಳಪಡುವುದಿಲ್ಲವೆಂದು ಮೆಸ್ಕಾಂ ಕಾ ಮತ್ತು ಪಾ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ಇವರಿಗೆ…