Author: kannadanewsnow57

ಹಲವು ರೀತಿಯ ಕ್ಯಾನ್ಸರ್‌ಗಳಿವೆ ಮತ್ತು ಅದರ ಕಾರಣಗಳೂ ಇವೆ. ಆದಾಗ್ಯೂ, ಎಲ್ಲಾ ಅಪಾಯಕಾರಿ ಅಂಶಗಳ ಬಗ್ಗೆ ಹೇಳುವುದು ಮತ್ತು ಅವುಗಳನ್ನು ನಿಯಂತ್ರಿಸುವುದು ಕಷ್ಟ. 80-90 ಪ್ರತಿಶತದಷ್ಟು ವೇಗವಾಗಿ ಹರಡುವ ಕ್ಯಾನ್ಸರ್ ಪ್ರಕರಣಗಳು ಕೆಟ್ಟ ಅಭ್ಯಾಸಗಳು ಮತ್ತು ಬಾಹ್ಯ ಕಾರಣಗಳಿಂದ ಉಂಟಾಗುತ್ತವೆ. ಇದು ಕೆಟ್ಟ ಜೀವನಶೈಲಿಯನ್ನು ಸಹ ಒಳಗೊಂಡಿದೆ, ಇದನ್ನು ಸುಧಾರಿಸುವ ಮೂಲಕ ಕ್ಯಾನ್ಸರ್ ಅಪಾಯವನ್ನು ಸುಲಭವಾಗಿ ಕಡಿಮೆ ಮಾಡಬಹುದು. ಹೆಚ್ಚಿನ ಜನರಿಗೆ ತಿಳಿದಿಲ್ಲ ಆದರೆ ಆಹಾರವು ಅನೇಕ ರೀತಿಯ ಕ್ಯಾನ್ಸರ್ ಅಪಾಯಕ್ಕೆ ಸಂಬಂಧಿಸಿದೆ. ಆಹಾರದ ಸಹಾಯದಿಂದ ಕ್ಯಾನ್ಸರ್ ಗೆಡ್ಡೆಗಳು ಬೆಳೆಯುವುದನ್ನು ತಡೆಯಬಹುದಾದರೂ, ಅದಕ್ಕೆ ಕಾರಣವಾಗುವ ಅನೇಕ ಆಹಾರಗಳಿವೆ. ಇಲ್ಲಿ ನಾವು ನಿಮಗೆ ಅಂತಹ 5 ಆಹಾರಗಳ ಬಗ್ಗೆ ಹೇಳುತ್ತಿದ್ದೇವೆ, ಅಡುಗೆ ಮಾಡುವಾಗ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಕ್ಯಾನ್ಸರ್ ದೇಹದಲ್ಲಿ ಹರಡಬಹುದು. ಮಾಂಸ 2020 ರ ವರದಿಯ ಪ್ರಕಾರ, ಅತಿಯಾಗಿ ಬೇಯಿಸಿದ ಮಾಂಸವನ್ನು ತಿನ್ನುವುದು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಹೆಚ್ಚಿನ ಶಾಖದಲ್ಲಿ ಮಾಂಸವನ್ನು ಬೇಯಿಸುವುದು ಕಾರ್ಸಿನೋಜೆನಿಕ್ PAH ಗಳು ಮತ್ತು ಹೆಟೆರೋಸೈಕ್ಲಿಕ್…

Read More

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಅಕ್ಟೋಬರ್ 3 ರಿಂದ 7 ರವರೆಗೆ ನಗರದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು, ನೆರೆಯ ಜಿಲ್ಲೆಗಳಾದ ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಮಂಡ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ ಹಾವೇರಿ ಜಿಲ್ಲೆಗಳಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,…

Read More

ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ, ಪಿಜಿನೀಟ್-2024ರ ವೈದ್ಯಕೀಯ ನೋಂದಣಿ ದಿನಾಂಕ ವಿಸ್ತರಣೆಯನ್ನು ಮಾಡಿ, ಕೆಇಎ ಆದೇಶಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಕರ್ನಾಟಕದಲ್ಲಿನ ಸಿಜಿ ವೈದ್ಯಕೀಯ, ಶೋರ್ಸುಗಳ ಪ್ರವೇಶಕ್ಕಾಗಿ ಪಿಜಿನೀಟ್-2014 1 ಪ್ರಾಧಿಕಾರದಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಲು ದಿನಾಂಕವನ್ನು 07-10-2024 ರ ಮಧ್ಯಾಹ್ನ 2.00 ರ ವರೆಗೆ ವಿಸ್ತರಣೆ ಮಾಡಲಾಗಿದ್ದು, ನೋಂದಣಿ ಮಾಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವ ಶಕ್ತಿಯೆಯನ್ನು ಪೂರ್ಣಗೊಳಿಸಬಹುದಾಗಿದೆ. ಶುಲ್ಕ ಪಾವತಿಸದಿರುವ ಅಭ್ಯರ್ಥಿಗಳೂ ಸಹ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ ಎಂದಿದೆ. ನೋಂದಣಿ ಮಾಡಲು ಅಥವಾ ಶುಲ್ಕ ಪಾವತಿಸಲು ಮತ್ತೊಮ್ಮೆ ದಿನಾಂಶವನ್ನು ವಿಸ್ತರಿಸುವುದಿಲ್ಲ ಎಂಬುದಾಗಿ ತಿಳಿಸಿದೆ. ಸೂಚನೆ: ಎನ್‌ಎಮ್‌ಸಿ ಅವರ ಸೂಚನೆ ದಿನಾಂಕ 24-07-2023 ರ ಅನ್ವಯ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಸೇರಿದಂತೆ ಎಲ್ಲಾ ಸುತ್ತಿನ ಸೀಟು ಹಂಚಿಕೆಯನ್ನು ಆನ್‌ಲೈನ್ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ…

Read More

ನವದೆಹಲಿ : ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರವು ಬಿಗ್ ಶಾಖ್ ನೀಡಿದ್ದು, ಇನ್ಮುಂದೆ ಪಡಿತರ ಚೀಟಿ ವಿತರಣೆಗೆ ಕೇಂದ್ರ ಸರ್ಕಾರವು ಮಹತ್ವದ ನಿಯಮಗಳನ್ನು ಜಾರಿಗೆ ತಂದಿದೆ. ಹೌದು, ಭಾರತ ಸರ್ಕಾರದಿಂದ ಪಡಿತರ ಚೀಟಿಗೆ ಅನ್ವಯವಾಗುವ ನಿಯಮಗಳಿವೆ. ಅನೇಕರು ಇಂತಹ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಸರಕಾರ ಪಡಿತರ ಚೀಟಿದಾರರಿಗೆ ನಿಯಮಗಳನ್ನು ಜಾರಿಗೆ ತರುತ್ತಿದ್ದು, ಇದು ಹಲವು ಕುಟುಂಬಗಳಿಗೆ ಆತಂಕಕಾರಿಯಾಗಿದೆ. ಈ ನಿಯಮಗಳ ಅಡಿಯಲ್ಲಿ, ಈ ಯೋಜನೆಯಡಿ ಅನರ್ಹರೆಂದು ಪರಿಗಣಿಸಲ್ಪಡುವ ಕೆಲವು ಜನರಿಗೆ ಪಡಿತರ ಚೀಟಿಗಳನ್ನು ನಿಲ್ಲಿಸಬಹುದು. ಈ ಬದಲಾವಣೆಯ ಮುಖ್ಯ ಉದ್ದೇಶವೆಂದರೆ ಪಡಿತರದ ನಿಜವಾದ ಪ್ರಯೋಜನಗಳು ಹೆಚ್ಚು ಅಗತ್ಯವಿರುವವರಿಗೆ ತಲುಪುವುದು. ಈ ಹೊಸ ನಿಯಮ ಏನು ಮತ್ತು ಇದರಿಂದ ಯಾರ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ನಾವು ವಿವರವಾಗಿ ಅರ್ಥಮಾಡಿಕೊಳ್ಳೋಣ. ಇತ್ತೀಚೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹೊಸ ಮಾನದಂಡಗಳನ್ನು ರೂಪಿಸಿವೆ. ಈ ನಿಯಮಗಳು ಪಡಿತರ ಚೀಟಿಗೆ ಅರ್ಹರಾಗಿರುವವರು ಮಾತ್ರ ಸಬ್ಸಿಡಿ ಹೊಂದಿರುವ ಆಹಾರ ಧಾನ್ಯಗಳನ್ನು…

Read More

ನವದೆಹಲಿ : ಕೇಂದ್ರ ಸರ್ಕಾರ ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ (Pradhan Mantri Kisan Samman Yojana Scheme) ಅಡಿಯಲ್ಲಿ ಶನಿವಾರ ರೂ.20 ಸಾವಿರ ಕೋಟಿ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ. ಪಿಎಂ ಕಿಸಾನ್ ಯೋಜನೆ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ? 1. ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ pmkisan.gov.inಗೆ ಹೋಗಿ. 2. ನಂತರ ‘ನಿಮ್ಮ ಸ್ಥಿತಿಯನ್ನು ತಿಳಿಯಿರಿ’ ಕ್ಲಿಕ್ ಮಾಡಿ. 3. ನಂತರ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ. 4. ಇದರ ನಂತರ, ಪರದೆಯ ಮೇಲೆ ಕ್ಯಾಪ್ಚಾ ಪ್ರದರ್ಶನವನ್ನು ನಮೂದಿಸಿ. 5. ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ವಿವರಗಳನ್ನು ಪಡೆಯಿರಿ ಕ್ಲಿಕ್ ಮಾಡಿ. 6. ಈಗ ನೀವು ಪರದೆಯ ಮೇಲೆ ಸ್ಟೇಟಸ್ ಕಾಣಿಸುತ್ತೆ. ಖಾತೆಗೆ ಹಣ ಬರದಿದ್ದರೆ ಏನು ಮಾಡಬೇಕು? ನಿಮ್ಮ ಖಾತೆಯಲ್ಲಿ ಪಿಎಂ ಕಿಸಾನ್ ಯೋಜನೆಯ 18 ನೇ ಕಂತನ್ನು ನೀವು ಸ್ವೀಕರಿಸದಿದ್ದರೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ…

Read More

ರಾಯಚೂರು : ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ, ಒಳ ಮೀಸಲಾತಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ, ಶೈಕ್ಷಣಿಕ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು. ಪಕ್ಷದ ರಾಜ್ಯ ಮಟ್ಟದ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜೀನಾಮೆ ಬೇಡಿದರೆ, ರಾಜೀನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದರು. ಜಿ.ಟಿ.ದೇವೇಗೌಡ ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ…

Read More

ಬೆಂಗಳೂರು : ರಾಜ್ಯಪಠ್ಯಕ್ರಮದ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(1) ರಂತೆ ರಾಜ್ಯ ಸರ್ಕಾರವು ಶಿಕ್ಷಣ ಸಂಸ್ಥೆಗಳ ಸಂಬಂಧದಲ್ಲಿ ಪಾಠಕ್ರಮ, ಪಠ್ಯವಸ್ತು ಹಾಗೂ ಪಠ್ಯಪುಸ್ತಕಗಳನ್ನು ನಿಗದಿಪಡಿಸಬಹುದಾಗಿರುತ್ತದೆ. Karnataka Educational Institutions (classification, Regulation and Prescription of Curricula etc Rules-1995ರ ನಿಯಮ-19. ರ ಉಪನಿಯಮ-3 ರಂತೆ ರಾಜ್ಯಪಠ್ಯ ಕ್ರಮವನ್ನು ಅನುಸರಿಸುತ್ತಿರುವ ಎಲಾ ಶಿಕ್ಷಣ ಸಂಸ್ಥೆಗಳು ರಾಜ್ಯ ಸರ್ಕಾರದ ಸಕ್ಷಮ ಪ್ರಾಧಿಕಾರವು ನಿಗದಿಪಡಿಸುವ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳನ್ನೇ ಕಡ್ಡಾಯವಾಗಿ ಅನುಸರಿಸುವುದು ಮತ್ತು ಹೆಚ್ಚುವರಿಯಾಗಿ ಯಾವುದೇ ಇತರೆ ಪಠ್ಯಕ್ರಮ ಅಥವಾ ಪಠ್ಯಪುಸ್ತಕಗಳನ್ನು ಅನುಸರಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿರುತ್ತದೆ. ಅದರಂತೆ ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್-36ರಂತೆ ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಮಾನ್ಯತೆ/ಮಾನ್ಯತೆ ನವೀಕರಣ ನೀಡುವಾಗ ಮಾನ್ಯತೆ ಪ್ರಮಾಣ ಪತ್ರದಲ್ಲಿ ‘ಶಾಲೆಯು ಸಂಯೋಜಿತವಾಗಿರುವ ಶಾಲೆಯು ಸಂಯೋಜಿತವಾಗಿರುವ ಶೈಕ್ಷಣಿಕ ರಾಜ್ಯ ಪಠ್ಯಕ್ರಮ ಹಾಗೂ ರಾಜ್ಯ…

Read More

ತಿರುವನಂತಪುರ : ಪ್ರಸಿದ್ದ ಶಬರಿಮಲೆ ದೇಗುಲದ ವಾರ್ಷಿಕ ಮಂಡಲಂಮಕರವಿಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಆನ್ ಲೈನ್ ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ. ಕಳೆದ ವರ್ಷ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸಿದ್ದರಿಂದ ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಭಾರಿ ಅವ್ಯವಸ್ಥೆ ಉಂಟಾಗಿತ್ತು. ಭಕ್ತರು ದಿನಗಟ್ಟಲೆ ಕಾಯುವ ಪರಿಸ್ಥಿತಿ ಎದುರಾಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಭಕ್ತರ ನಿರ್ವಹಣೆ ಸಮರ್ಪಕವಾಗಿಸುವ ನಿಟ್ಟಿನಲ್ಲಿ ಆನ್ಲೈನ್ ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. ಶಬರಿಮಲೆ ಯಾತ್ರೆಗೆ ಇನ್ನು ಆನ್ಲೈನ್ ಬುಕಿಂಗ್ ಕಡ್ಡಾಯ ಮಾಡಲಾಗಿದೆ. ಪ್ರತಿದಿನ 80,000 ಭಕ್ತರಿಗೆ ಅವಕಾಶ ಇರುತ್ತದೆ. ನೂಕುನುಗ್ಗಲು ತಡೆಯಲು ಕೇರಳ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

Read More

ಬೆಂಗಳೂರು : “ಬಗರ್ ಹುಕುಂ” ಅರ್ಜಿ ವಿಲೇವಾರಿ ಕೆಲಸಗಳಿಗೆ ಸಂಬಂಧಿಸಿ ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಕೆ ನೀಡಿದರು. ಶನಿವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಭೆ ನಡೆಸಿ ಎಚ್ಚರಿಕೆ ನೀಡಿದ ಅವರು, “ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಈಗಲೂ ಮೀನಾಮೇಷ ಎಣಿಸುವುದು ಸರಿಯಲ್ಲ. ಹೀಗಾಗಿ ಎಲ್ಲಾ ತಹಶೀಲ್ದಾರರಿಗೆ ಅಕ್ಟೋಬರ್ ಹಾಗೂ ನವೆಂಬರ್ ಅಂತ್ಯದವರೆಗೆ ಎರಡು ತಿಂಗಳ ಗಡುವು ನೀಡುತ್ತಿದ್ದು, ಈ ಅವಧಿಯಲ್ಲೂ ಬಗರ್ ಹುಕುಂ ಅರ್ಜಿಗಳ ಸಮರ್ಪಕ ವಿಲೇವಾರಿ ಹಾಗೂ ಅರ್ಹ ರೈತರಿಗೆ ಭೂ ಮಂಜೂರು ಆಗದಿದ್ದರೆ, ಸಂಬಂಧಿತ ತಹಶೀಲ್ದಾರರಿಗೆ ನೋಟೀಸ್ ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು. “ಅರ್ಹ ಭೂ ಹೀನರಿಗೆ ಜಮೀನು ಮಂಜೂರು ಮಾಡಬೇಕು ಎಂಬುದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ…

Read More

ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 9 ಮತ್ತು 11 ನೇ ತರಗತಿಗೆ ಖಾಲಿ ಇರುವ ಸ್ಥಾನಗಳ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಈಗಾಗಲೇ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್, 30 ರವರೆಗೆ ವಿಸ್ತರಿಸಿದ್ದು, ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. 9ನೇ ತರಗತಿಗೆ ಅರ್ಜಿ ಸಲ್ಲಿಸುವವರು ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ಅಭ್ಯರ್ಥಿ ದಿನಾಂಕ 01/05/2010 ರಿಂದ 31/07/2012 ರೊಳಗೆ ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ಪರೀಕ್ಷೆಯು 2025 ರ ಫೆಬ್ರವರಿ, 08 ರಂದು ನಡೆಯಲಿದೆ. 11 ನೇ ತರಗತಿಗೆ ಅರ್ಜಿ ಸಲ್ಲಿಸುವವರು ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ…

Read More