Author: kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಪೊಲೀಸರು ಬದಲಿ ಮಾರ್ಗ ಬಳಸುವಂತೆ ಮನವಿ ಮಾಡಿದ್ದಾರೆ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಳೆ ಬೀಳುತ್ತಿರುವುದರಿಂದ ರೂಪೇನ ಅಗ್ರಹಾರದ ಬಳಿ ವಾಟರ್ ಲಾಗಿಂಗ್ ಆಗಿದ್ದು ಹೊಸೂರು ಮುಖ್ಯ ರಸ್ತೆ ಮೂಲಕ ನಗರದ ಒಳ ಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ಆದ್ದರಿಂದ ವಾಹನ ಸವಾರರು ಬದಲಿ ರಸ್ತೆಗಳನ್ನು ಬಳಸುವುದು ಮತ್ತು ಸಹಕರಿಸುವುದು. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ಅಂಡರ್ ಪಾಸ್ ನಲ್ಲಿ ಮಳೆ ಬಂದಿದ್ದರಿಂದ ವಾಟರ್ ಲಾಗಿಂಗ್ ಆಗಿದ್ದು, ಹೊಸೂರು ಮುಖ್ಯರಸ್ತೆಯಲ್ಲಿ ನಗರದಿಂದ ಹೊರಭಾಗಕ್ಕೆ ಹೋಗುವ ಮತ್ತು ನಗರದ ಒಳಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದ್ದು ವಾಹನ ಸವಾರರು ಬದಲಿ ರಸ್ತೆ ಬಳಸುವುದು. ಅಧಿಕ ಮಳೆ ಬಂದು ರಸ್ತೆಯಲ್ಲಿ ನೀರು ನಿಂತ ಸಂದರ್ಭಲ್ಲಿ ಅಗತ್ಯವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳು 1)ಹೊಸೂರು ಮುಖ್ಯರಸ್ತೆ:- ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರೂಪೇನ…

Read More

ವಿಕಾರಾಬಾದ್ : ತೆಲಂಗಾಣದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರಕ್-ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದು, 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಕಾರಾಬಾದ್ ಜಿಲ್ಲೆಯ ಪರಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಮೆಂಟ್ ತುಂಬಿದ ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿ, 17 ಮಂದಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ (ಪಿಎಂಇ) ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. https://twitter.com/ANI/status/1924654568488800310?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಆನ್‌ಲೈನ್‌ನಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ದಿನಾಂಕವನ್ನು ಮೇ.25 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆ ಬಯಸಿದ ಪೊಲೀಸ್ ಸಿಬ್ಬಂದಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವೆಂದು ನಿಗದಿಮಾಡಲಾಗಿತ್ತು. ಆಡಳಿತಾತ್ಮಕ ಕಾರಣಗಳಿಂದ ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಲು ಕಾಲಮಿತಿಯನ್ನು ಮೇ 25ರ ವರೆಗೆ ವಿಸ್ತರಿಸಲಾಗಿದೆ. ವರ್ಗಾವಣೆ ಬಯಸುವ ಪೊಲೀಸ್ ಸಿಬ್ಬಂದಿಗಳು ಪರಿಷ್ಕೃತವಾಗಿ ಅರ್ಜಿ ಸಲ್ಲಿಸಬಹುದು ಎಂದು ಪೊಲೀಸ್ ಮಹಾನಿರ್ದೇಶಕರು ಸೂಚನೆ ನೀಡಿದ್ದಾರೆ.

Read More

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲೆಗಳಲ್ಲಿ 10 ದಿನಗಳ ‘ಬ್ಯಾಗ್ ರಹಿತ ದಿನ’ ಆಚರಣೆಗೆ ಮಾರ್ಗಸೂಚಿ ಹೊರಡಿಸಿದೆ. ಹೌದು, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಾರ್ಗಸೂಚಿರೂಪಿಸಿದ್ದು, ವಿದ್ಯಾರ್ಥಿಗಳು ಈ 10 ದಿನಗಳಲ್ಲಿ ಪಾಠದ ಬದಲು ಪಕ್ಷೇತರ ಚಟುವಟಿಕೆಗೆಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳಿಗೆ ಪ್ರಕೃತಿ, ತಂತ್ರಜ್ಞಾನ, ಕೈಗಾರಿಕೆ, ಕೌಶಲ್ಯ ಶಿಕ್ಷಣ ಸೇರಿದಂತೆ ಬಹುತೇಕ ಎಲ್ಲ ರೀತಿಯ ಅನುಭವ ನೀಡುವ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇಕಿ ಇಲಾಖೆ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ. ಪ್ರತಿ ತಿಂಗಳು ಒಂದು ಶನಿವಾರದಂತೆ 10 ಶೈಕ್ಷಣಿಕ ತಿಂಗಳಿಗೆ 10 ದಿನಗಳಂತೆ ಬ್ಯಾಗ್‌ರಹಿತ ದಿನ ಆಚರಿಸಲು ಸೂಚಿಸಲಾಗಿದೆ. 6ರಿಂದ 8ನೇ ತರಗತಿಗಳಲ್ಲಿ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿ 10 ದಿನಗಳ ಶನಿವಾರ ಸಂಭ್ರಮ ಆಚರಣೆ ಮಾಡಬೇಕಿದೆ.

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಬ್ರಹನ್ಮಠದ ಹಿರಿಯ ಶ್ರೀ ಗುರುಸ್ವಾಮಿ (75) ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 5 ಗಂಟಗೆ ಶ್ರೀಮಠದ ಆವರಣದಲ್ಲಿ ಸುತ್ತೂರು ಶ್ರೀಗಳು ಹಾಗೂ ಸಿದ್ದಗಂಗಾ ಶ್ರೀಗಳ ನೇತೃತ್ವದಲ್ಲಿ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Read More

ನವದೆಹಲಿ : ‘ಆಪರೇಷನ್ ಸಿಂಧೂರ್’ ಯಶಸ್ಸಿಗೆ ಗೌರವ ಸಲ್ಲಿಸಲು ಭಾರತೀಯ ರೈಲ್ವೆ, ರೈಲು ಟಿಕೆಟ್‌ಗಳ ಮೇಲೆ ಪ್ರಧಾನಿ ನರೇಂದ್ರ ಮೋದಿ ಸೆಲ್ಯೂಟ್ ಮಾಡುತ್ತಿರುವ ಚಿತ್ರವನ್ನು ಮುದ್ರಿಸಿದೆ. ಈ ಚಿತ್ರವು ವೀರ ಸೈನಿಕರ ಶೌರ್ಯ ಮತ್ತು ತ್ಯಾಗಕ್ಕೆ ಗೌರವ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರ ನಿರ್ದೇಶಕ ದಿಲೀಪ್ ಕುಮಾರ್, ‘ಗೌರವಾನ್ವಿತ ಪ್ರಧಾನ ಮಂತ್ರಿಗಳು ಆಪರೇಷನ್ ಸಿಂಧೂರ್‌ನ ವೀರರಿಗೆ ನಮನ ಸಲ್ಲಿಸಿದ್ದಾರೆ ಮತ್ತು ಅವರ ಶೌರ್ಯವನ್ನು ಗೌರವಿಸಿದ್ದಾರೆ. ಈ ಉದ್ದೇಶಕ್ಕಾಗಿ, ಅವರ ಚಿತ್ರ ಮತ್ತು ಸಂದೇಶವನ್ನು ರೈಲು ಟಿಕೆಟ್‌ಗಳ ಮೇಲೆ ಮುದ್ರಿಸಲಾಗಿದೆ. ರೈಲ್ವೆಯ ವಿವಿಧ ವಲಯಗಳು ಮತ್ತು ವಿಭಾಗಗಳು ಸಹ ಈ ಅಭಿಯಾನವನ್ನು ವ್ಯಾಪಕವಾಗಿ ಆಚರಿಸಿದವು. ಅನೇಕ ಪ್ರಮುಖ ರೈಲು ನಿಲ್ದಾಣಗಳನ್ನು ತ್ರಿವರ್ಣ ಧ್ವಜದಿಂದ ಅಲಂಕರಿಸಲಾಗಿತ್ತು ಮತ್ತು ಶಾಲಾ ಮಕ್ಕಳಿಗೆ ‘ಆಪರೇಷನ್ ಸಿಂಧೂರ್’ ಎಂಬ ವಿಷಯದ ಮೇಲೆ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಜಮ್ಮು, ಪಠಾಣ್‌ಕೋಟ್, ನವದೆಹಲಿ ಮತ್ತು ಶ್ರೀನಗರದಂತಹ ನಿಲ್ದಾಣಗಳಲ್ಲಿನ ಬೆಂಚುಗಳು ಮತ್ತು ಇತರ ಸೌಲಭ್ಯಗಳನ್ನು ಸೇನಾ…

Read More

ವಿಜಯಪುರ : ರಾಜ್ಯಾದ್ಯಂತ ಮೇ.29 ರಿಂದ ಶಾಲೆಗಳು ಪುನಾರರಂಭವಾಗಲಿದ್ದು, ಪ್ರಾರಂಭೋತ್ಸವ ದಿನದಿಂದಲೇ ಪುಸ್ತಕ, ಸಮವಸ್ತ್ರ ಕೊಡಲು ಸಿದ್ಧತೆ ಕೈಗೊಳ್ಳಲಾಗಿದೆ. ಶೂ, ಸಾಕ್ಸ್ ಮೂರು ತಿಂಗಳ ನಂತರ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೇ 29ರಿಂದ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆಯಲಿದೆ. ವಿದ್ಯಾರ್ಥಿಗಳನ್ನು ಗೌರವದಿಂದ ಶಾಲೆಗೆ ಬರಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಲಾ ಆರಂಭೋತ್ಸವದ ದಿನದಂದೇ ಎಲ್ಲ ಮಕ್ಕಳಿಗೆ ಸಮ ವಸ್ತ್ರ, ಪಠ್ಯಪುಸ್ತಕ ವಿತರಿಸಲಾಗುತ್ತದೆ. ಶೂ, ಸಾಕ್ಸ್ ಹಂತಹಂತವಾಗಿ ಶಾಲೆಯಲ್ಲಿ ವಿತರಿಸಲಾಗುತ್ತಿದೆ. ಅದಕ್ಕೂ ಒಂದು ಕಠಿಣ ಕಾನೂನು ರೂಪಿಸಿ ಶಾಲಾ ಆರಂಭದಲ್ಲೇ ಮಕ್ಕಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ಈ ವರ್ಷ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮಾನವೀಯ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, ಕೆಲವೊಂದು ಶಾಲೆಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಬಂದಿವೆ. ಅವುಗಳು ಮುಂದೆ ಬರದಂತೆ…

Read More

ನವದೆಹಲಿ : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಬಹುತೇಕ ಎಲ್ಲಾ ರೈಲ್ವೆ ಸೇವೆಗಳನ್ನು ಒಂದೇ ಡಿಜಿಟಲ್ ಛತ್ರಿಯಡಿಯಲ್ಲಿ ಸಂಯೋಜಿಸಲು ವಿನ್ಯಾಸಗೊಳಿಸಲಾದ ಸ್ವಾರೈಲ್ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ರೈಲ್ವೆ ಮಾಹಿತಿ ವ್ಯವಸ್ಥೆಗಳ ಕೇಂದ್ರ (CRIS) ಅಭಿವೃದ್ಧಿಪಡಿಸಿದ ಸ್ವಾರೈಲ್, ಗೂಗಲ್ ಪ್ಲೇ ಸ್ಟೋರ್ ಮೂಲಕ ಆಂಡ್ರಾಯ್ಡ್ ಬಳಕೆದಾರರಲ್ಲಿ ಪರೀಕ್ಷೆಗೆ (ಆವೃತ್ತಿ v127) ಲಭ್ಯವಿದೆ. ಇದು ಪ್ರಸ್ತುತ ಆಪಲ್ ಆಪ್ ಸ್ಟೋರ್‌ನಲ್ಲಿ ಲಭ್ಯವಿಲ್ಲದಿದ್ದರೂ, ಅಪ್ಲಿಕೇಶನ್‌ನ ಆಗಮನವು ಭಾರತವು ತನ್ನ ರೈಲ್ವೆಗಳೊಂದಿಗೆ ಹೇಗೆ ಮಾತನಾಡುತ್ತದೆ ಎಂಬುದನ್ನು ಸರಳಗೊಳಿಸುವತ್ತ ಒಂದು ಪ್ರಮುಖ ಹೆಜ್ಜೆಯನ್ನು ಪ್ರತಿನಿಧಿಸುತ್ತದೆ. ಸ್ವಾರೈಲ್ ಅನ್ನು “ಸೂಪರ್ ಆಪ್” ಎಂದು ಪ್ರಚಾರ ಮಾಡಲಾಗುತ್ತಿದೆ – ಮತ್ತು ಸಮಯಕ್ಕಿಂತ ಮುಂಚೆಯೇ ಅಲ್ಲ. ಟಿಕೆಟ್ ಕಾಯ್ದಿರಿಸುವಿಕೆ ಮತ್ತು ರೈಲುಗಳ ಬಗ್ಗೆ ಮಾಹಿತಿಯಿಂದ ಹಿಡಿದು ಊಟ, ಪ್ರವಾಸೋದ್ಯಮ ಪ್ಯಾಕೇಜ್‌ಗಳು ಮತ್ತು ಲೈವ್ ಟ್ರ್ಯಾಕಿಂಗ್‌ವರೆಗೆ, ಅಪ್ಲಿಕೇಶನ್ ಇಡೀ ಪ್ರಯಾಣಿಕರ ಪರಿಸರ ವ್ಯವಸ್ಥೆಯನ್ನು ಒಂದೇ ಸಂಯೋಜಿತ ಇಂಟರ್ಫೇಸ್‌ನಲ್ಲಿ ಒಟ್ಟಿಗೆ ತರುತ್ತದೆ. ಇದು ಹಲವಾರು ಅಪ್ಲಿಕೇಶನ್‌ಗಳು ನೀಡುವ ವಿಘಟಿತ…

Read More

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮುಂದಿನ ಮೂರು ದಿನ ರಾಜ್ಯದ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬುಧವಾರವೂ ಭಾರೀ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿಸಲಾಗಿದೆ.

Read More

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ವರದಿ ಸಿದ್ಧವಾಗಿದ್ದು 2025-26ನೇ ಶೈಕ್ಷಣಿಕ ಸಾಲಿನಿಂದ ಉನ್ನತ ಶಿಕ್ಷಣದಲ್ಲಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಶೀಘ್ರವೇ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಎಸ್‌ಇಪಿ ಕರಡು ರಚನಾ ಸಮಿತಿ ನೀಡಿರುವ ಮಧ್ಯಂತರ ವರದಿ ಹಿನ್ನೆಲೆಯಲ್ಲಿ 2024-25ನೇ ಸಾಲಿನಿಂದಲೇ ಎನ್‌ಇಪಿ ಅಡಿ 4 ವರ್ಷಗಳಿಗೆ ಹೆಚ್ಚಿಸಲಾಗಿದ್ದ ಪದವಿ ವ್ಯಾಸಂಗದ ಅವಧಿಯನ್ನು ಮರಳಿ 3 ವರ್ಷಗಳಿಗೆ ಇಳಿಸಲಾಗಿದೆ. ಇದೀಗ ಇಂಗ್ಲೀಷ್‌ನಲ್ಲಿರುವ ಅಂತಿಮ ವರದಿಯನ್ನು ಕನ್ನಡಕ್ಕೆ ಭಾಷಾಂತರಿಸುವ ಪ್ರಕ್ರಿಯೆ ಬಹುತೇಕ ಅಂತಿಮ ಹಂತದಲ್ಲಿದ್ದು ಈ ತಿಂಗಳ ಕೊನೆಯ ವಾರದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು, ರಾಜ್ಯ ಶಿಕ್ಷಣ ನೀತಿ ಸಿದ್ದವಾಗಿದ್ದು 2025-26ರನೇ ಸಾಲಿನಿಂದ ಜಾರಿಗೆ ಚಿಂತನೆ ನಡೆದಿ ದೆ. ಮೇ 25ರಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Read More