Author: kannadanewsnow57

ನವದೆಹಲಿ : ಯಾವುದೇ ರಾಜಕೀಯ ಚಟುವಟಿಕೆಯಲ್ಲಿ ತೊಡಗಬಾರದು ಎಂದು ಒರಿಸ್ಸಾ ಹೈಕೋರ್ಟ್ ವಿಧಿಸಿರುವ ಜಾಮೀನು ಷರತ್ತು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ನ್ಯಾಯಪೀಠವು ಇಂತಹ ಷರತ್ತುಗಳು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಈ ಆದೇಶವನ್ನು ಹೊರಡಿಸಿದೆ. ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಶಿವಶಂಕರ್ ದಾಸ್, ಜಾಮೀನಿನ ಮೇಲೆ ಬಿಡುಗಡೆಯಾದ ಅವಧಿಯಲ್ಲಿ ಬೆಹ್ರಾಂಪುರ ಮುನ್ಸಿಪಲ್ ಕಾರ್ಪೋರೇನ್ ಮೇಯರ್ ಆಗಿ ಆಯ್ಕೆಯಾಗಿದ್ದರು. ಜಾಮೀನು ನೀಡುವಾಗ ಯಾವುದೇ ರಾಜಕೀಯ ಚಟುವಟಿಕೆ ನಡೆಸದಂತೆ ಹೈಕೋರ್ಟ್ ಅವರಿಗೆ ಷರತ್ತು ವಿಧಿಸಿತ್ತು. ಈ ಷರತ್ತು ಹಿಂಪಡೆಯುವಂತೆ ೨೦೨೨ ರಲ್ಲಿ ದಾಸ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಕೂಡ ಷರತ್ತು ತೆಗೆಯಲು ನಿರಾಕರಿಸಿತ್ತು. ಹೀಗಾಗಿ ದಾಸ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ನ ಜನವರಿ 18 ರ ಆದೇಶದ ವಿರುದ್ಧ ಬೆರ್ಹಾಮ್ಪುರ ಮುನ್ಸಿಪಲ್ ಕಾರ್ಪೊರೇಷನ್ನ ಮಾಜಿ ಮೇಯರ್ ಸಿಬಾ ಶಂಕರ್ ದಾಸ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು. “ಅಂತಹ ಷರತ್ತುಗಳನ್ನು…

Read More

ಬೆಂಗಳೂರು: ಏಪ್ರಿಲ್ ನಲ್ಲಿ ನಡೆಯಲಿರುವ ಬೆಂಗಳೂರು ಕರಗಕ್ಕೆ ಮುಂಚಿತವಾಗಿ, ಮೆರವಣಿಗೆ ಹಾದುಹೋಗುವ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳನ್ನು ದುರಸ್ತಿ ಮಾಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಂಗಳವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಉತ್ಸವದ ಸಿದ್ಧತೆಗಳನ್ನು ಪರಿಶೀಲಿಸಲು ನಡೆದ ಸಭೆಯಲ್ಲಿ, ಗಿರಿನಾಥ್ ಅವರು ಲೋಕಸಭಾ ಚುನಾವಣೆಗೆ ಜಾರಿಯಲ್ಲಿರುವ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಆಚರಣೆಯ ಸಮಯದಲ್ಲಿ ಉಲ್ಲಂಘಿಸದಂತೆ ನೋಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದರು. “ಬೀದಿ ದೀಪಗಳು ಕಾರ್ಯನಿರ್ವಹಿಸುತ್ತಿವೆ ಎಂದು ಖಚಿತಪಡಿಸಿಕೊಳ್ಳಿ ಮತ್ತು ಕಸವನ್ನು ತೆರವುಗೊಳಿಸಲು ಮತ್ತು ಬೀದಿಗಳು ಸ್ವಚ್ಛವಾಗಿವೆ ಎಂದು ಖಚಿತಪಡಿಸಿಕೊಳ್ಳಲು ಕಾರ್ಮಿಕರನ್ನು ನಿಯೋಜಿಸಿ” ಎಂದು ಗಿರಿನಾಥ್ ಹೇಳಿದರು. ಈ ವರ್ಷ ಏಪ್ರಿಲ್ 15 ರಿಂದ 23 ರವರೆಗೆ ಬೆಂಗಳೂರು ಕರಗ ನಡೆಯಲಿದೆ. ಮೆರವಣಿಗೆಯ ಸಮಯದಲ್ಲಿ ವಾಹನ ಸಂಚಾರವನ್ನು ನಿರ್ವಹಿಸಲು ಮತ್ತು ಪರ್ಯಾಯ ಮಾರ್ಗಗಳನ್ನು ರೂಪಿಸಲು ಬಿಬಿಎಂಪಿ ಬೆಂಗಳೂರು ಸಂಚಾರ ಪೊಲೀಸರೊಂದಿಗೆ (ಬಿಟಿಪಿ) ಸಮನ್ವಯ ಸಾಧಿಸುತ್ತಿದೆ. ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದ್ದು, ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಿಬಿಎಂಪಿ ಪೊಲೀಸರ ಬೆಂಬಲವನ್ನು ಕೋರಿದೆ.…

Read More

ನವದೆಹಲಿ. ಪ್ರತಿ ತಿಂಗಳು ಅನೇಕ ಹಣಕಾಸು ಕಾರ್ಯಗಳಿಗೆ ಕೊನೆಯ ಗಡುವು ಇರುತ್ತದೆ. ಹಣಕಾಸಿನ ಕೆಲಸಗಳಿಗೆ ಮಾರ್ಚ್ ತಿಂಗಳು ಬಹಳ ಮುಖ್ಯ. ವಾಸ್ತವವಾಗಿ, ಇದು ಆರ್ಥಿಕ ವರ್ಷದ ಕೊನೆಯ ತಿಂಗಳು. ನೀವು ಪಿಪಿಎಫ್, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಅಥವಾ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ, ಈ ಯೋಜನೆಗಳ ಹೂಡಿಕೆದಾರರು ಪ್ರತಿ ಹಣಕಾಸು ವರ್ಷದಲ್ಲಿ ಕನಿಷ್ಠ ಹಣವನ್ನು ಠೇವಣಿ ಮಾಡಬೇಕು. ಕನಿಷ್ಠ ಮೊತ್ತವನ್ನು ಠೇವಣಿ ಮಾಡದಿದ್ದರೆ ಅವರ ಖಾತೆ ನಿಷ್ಕ್ರಿಯವಾಗಿರುತ್ತದೆ. ಸಾರ್ವಜನಿಕ ಭವಿಷ್ಯ ನಿಧಿ (PPF) ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ದೀರ್ಘಾವಧಿಯ ಹೂಡಿಕೆ ಯೋಜನೆಯಾಗಿದೆ. ಇದು ಪ್ರತಿ ಹಣಕಾಸು ವರ್ಷದಲ್ಲಿ ಕನಿಷ್ಠ ೫೦೦ ರೂ.ಗಳನ್ನು ಹೂಡಿಕೆ ಮಾಡಬೇಕು. ಈ ಯೋಜನೆಯಲ್ಲಿ ಗರಿಷ್ಠ ಹೂಡಿಕೆ ಮೊತ್ತ 1.5 ಲಕ್ಷ ರೂ. ಹೂಡಿಕೆಯ ಮೊತ್ತದ ಮೇಲೆ ಸರ್ಕಾರವು ವಾರ್ಷಿಕವಾಗಿ ಶೇಕಡಾ 7.1 ರ ದರದಲ್ಲಿ ಬಡ್ಡಿಯನ್ನು ಪಾವತಿಸುತ್ತದೆ. ಪಿಪಿಎಫ್ 15 ವರ್ಷಗಳ ಲಾಕ್-ಇನ್ ಅವಧಿಯನ್ನು ಹೊಂದಿದೆ. ನೀವು 15 ವರ್ಷಗಳವರೆಗೆ ನಿಧಿಯಿಂದ ಯಾವುದೇ ಹಿಂಪಡೆಯುವಿಕೆಯನ್ನು…

Read More

ಬೆಂಗಳೂರು :  ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿಗಾಗಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿ ಆಧಾರಿತ ನರೇಗಾ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಸಣ್ಣ, ಅತಿ ಸಣ್ಣ ರೈತರಿಗೆ ಬಾಳೆ, ಅಂಜೂರ, ತಾಳೆಬೆಳೆ, ದಾಳಿಂಬೆ, ಸಪೋಟ, ಮಾವು, ನುಗ್ಗೆ, ತೆಂಗು, ಪಪ್ಪಾಯ ಮತ್ತು ಪೇರಲ ಬೆಳೆಗಳನ್ನು ಬೆಳೆಯಲು ಹಾಗೂ ಕೊಳವೆ ಬಾಯಿ ಮರುಪೂರ್ಣ ಘಟಕ ಮಾಡಲು ಸಹಾಯಧನ ನೀಡಲಾಗುವುದು. ನೀರಾವರಿ ಸೌಕರ್ಯವುಳ್ಳ ರೈತರು ತಮ್ಮ ಜಮೀನುಗಳಲ್ಲಿ ಕಾಮಗಾರಿ ಕೈಗೊಂಡಲ್ಲಿ ನರೇಗಾ ಯೋಜನೆಯ ಅನುದಾನ ಬಳಸಿ ಕೂಲಿ ಮೊತ್ತವನ್ನು ಮತ್ತು ಸಾಮಗ್ರಿ ವೆಚ್ಚವನ್ನು ಆನ್‍ಲೈನ್ ಮೂಲಕ ಪಾವತಿ ಮಾಡಲಾಗುತ್ತದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಹೊಸ ಪ್ರದೇಶ ವಿಸ್ತರಣೆ, ದಾಳಿಂಬೆ, ಅಂಜೂರ, ಈರುಳ್ಳಿ ಶೇಖರಣಾ ಘಟಕ, ಪಾಲಿಹೌಸ್ ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ನೀಡಲಾಗುವುದು. ಪ್ರಧಾನಮಂತ್ರಿ ಕೃಷಿ ಸಿಂಚಾಯನ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಸೌಲಭ್ಯವನ್ನು…

Read More

ಬೆಂಗಳೂರು : ಲೋಕಸಭೆ ಚುನಾವಣೆಯ ಕಾವು ನಾಳೆಯಿಂದ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಸೂಚನೆ ಪ್ರಕಟವಾಗಲಿದೆ. ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮಾರ್ಚ್, 28 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್, 04 ಕೊನೆಯ ದಿನವಾಗಿದೆ. ಏಪ್ರಿಲ್, 05 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 08 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಉಡುಪಿ-ಚಿಕ್ಕಮಗಳೂರು ಹಾಸನ ದಕ್ಷಿಣ ಕನ್ನಡ ಚಿತ್ರದುರ್ಗ ತುಮಕೂರು ಮಂಡ್ಯ ಮೈಸೂರು ಚಾಮರಾಜನಗರ ಬೆಂಗಳೂರು ಗ್ರಾಮಾಂತರ ಬೆಂಗಳೂರು ಉತ್ತರ ಬೆಂಗಳೂರು ದಕ್ಷಿಣ ಚಿಕ್ಕಬಳ್ಳಾಪುರ ಕೋಲಾರ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ…

Read More

ಬೆಂಗಳೂರು : ರಾಜ್ಯದಲ್ಲಿ ಅತಂಕ ಸೃಷ್ಟಿಸಿರುವ ಮಂಗನಕಾಯಿಲೆಗೆ (ಕೆಎಫ್ ಡಿ) ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಒಬ್ಬರು ಮಂಗನಕಾಯಿಲೆಗೆ ಬಲಿಯಾಗಿದ್ದು, ವಿವರ ಬಹಿರಂಗವಾಗಿಲ್ಲ. ಈ ಸಾವಿನೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಬಲಿಯಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಪಂಚಾಯಿತಿ ವ್ಯಾಪ್ತಿಯ ರತ್ನ ಎಂಬುವರು ಸೋಮವಾರ ಸಂಜೆ ಮೃತಪಟ್ಟಿದ್ದಾರೆ. ಈ ಮೂಲಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

Read More

ಬೆಂಗಳೂರು : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ಏಪ್ರಿಲ್ 1 ರಿಂದ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ರಾಜ್ಯದ 9 ಜಿಲ್ಲೆಗಳಲ್ಲಿ ಉಂಡೆ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭವಾಗಲಿದ್ದು, ಮಾ. 9 ಕ್ಕೆ ಕೊಬ್ಬರಿ ಮಾರಾಟಕ್ಕೆ ನೋಂದಣಿ ಅಂತ್ಯವಾಗಿದ್ದು9 ಜಿಲ್ಲೆಯಿಂದ 58,893 ರೈತರು ನೋಂದಣಿ ಮಾಡಿಸಿದ್ದಾರೆ. ಕೊಬ್ಬರಿ ಖರೀದಿಸಲು ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ನೋಡೆಲ್ ಏಜೆನ್ಸಿಯಾಗಿ ನೇಮಿಸಲಾಗಿದೆ. ಮೈಸೂರು, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾರಾಟ ಮಂಡಳಿಯಿಂದ ಕೊಬ್ಬರಿ ಖರೀದಿ ಸಂಸ್ಥೆಯಾಗಿ ನೇಮಿಸಲಾಗಿದೆ. ಹಾಸನ ಸೇರಿ ಉಳಿದ ಜಿಲ್ಲೆಗಳಲ್ಲಿ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳವನ್ನು ಖರೀದಿ ಸಂಸ್ಥೆಯಾಗಿ ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಬೆಂಗಳೂರು : ರಾಜ್ಯ ಪಠ್ಯಕ್ರಮದ 5,8 ಮತ್ತು 9ನೇ ತರಗತಿಗಳ ಮೌಲ್ಯಾಂಕನ ಮೌಲ್ಯಮಾಪನವನ್ನು ಏಪ್ರಿಲ್ 2 ರ ಒಳಗೆ ಪೂರ್ಣಗೊಳಿಸುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ(Summative Assessment(SA-2) ಕಾರ್ಯವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಡಿಯಲ್ಲಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ದಿನಾಂಕ:11.03.2024 ಮತ್ತು 12.03.2024 ರಂದು ಹಾಗೂ ಉಳಿದ ವಿಷಯಗಳ ಮೌಲ್ಯಾಂಕನವನ್ನು ಉಲ್ಲೇಖ(2) ರನ್ವಯ ದಿನಾಂಕ:25.03.2024 ರಿಂದ 28.03.2024 ರವರೆಗೆ ನಡೆಸಲಾಗುತ್ತಿದೆ. 5,8 ಮತ್ತು 9ನೇ ತರಗತಿಗಳ ಮೌಲ್ಯಾಂಕನಕ್ಕೆ ನೀಡಲಾದ ಪ್ರಶ್ನೆಪತ್ರಿಕೆಗಳಿಗೆ ಸಂಬಂಧಿಸಿದಂತೆ ವಿಷಯವಾರು ಕೀ ಉತ್ತರಗಳ ಪ್ರತಿಗಳನ್ನು ಕ್ಷೇತ್ರಶಿಕ್ಷಣಾಧಿಕಾರಿಗಳ ಲಾಗಿನ್‌ನಲ್ಲಿ ಲಭ್ಯಮಾಡಲಾಗುತ್ತಿದ್ದು, ಈಗಾಗಲೇ ಉಲ್ಲೇಖ(1) ರ ಸರ್ಕಾರಿ ಆದೇಶದಲ್ಲಿ ತಿಳಿಸಿರುವಂತೆ ಮೌಲ್ಯಮಾಪನ ಕಾರ್ಯವನ್ನು ಬ್ಲಾಕ್…

Read More

ಬೆಂಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಮಾರ್ಚ್, 28 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್, 04 ಕೊನೆಯ ದಿನವಾಗಿದೆ. ಏಪ್ರಿಲ್, 05 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 08 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಖಾತರಿಪಡಿಸಿಕೊಳ್ಳುವುದು, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯುವುದು ಇತರೆ ಚುನಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು/ ಮಾಹಿತಿಯನ್ನು ಪಡೆಯಲು ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಬಹುದಾಗಿದೆ. ಹಾಗೆಯೇ ವೋಟರ್ ಸಹಾಯವಾಣಿ 24*7 ಕಾರ್ಯನಿರ್ವಹಿಸಲಾಗುತ್ತದೆ. ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಮತಗಟ್ಟೆಗಳಿಗೆ ಒಬ್ಬರು ಅಧ್ಯಕ್ಷಾಧಿಕಾರಿ ಮತ್ತು ಮೂವರು ಮತಗಟ್ಟೆ ಅಧಿಕಾರಿಗಳು ಹಾಗೂ ಮೀಸಲು…

Read More

ಬೆಂಗಳೂರು : ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಲು ಸಾರ್ವಜನಿಕರ ಪಾತ್ರ ಅತ್ಯಮೂಲ್ಯವಾಗಿದೆ. ಅದೇರೀತಿಯಾಗಿ ಮುಕ್ತ, ಪಾರದರ್ಶಕ ಚುನಾವಣೆ ನಡೆಸಲು ಮತ್ತು ಚುನಾವಣಾ ಅಕ್ರಮ ತಡೆಯಲು ಭಾರತದ ಚುನಾವಣಾ ಆಯೋಗವು ಸಿ-ವಿಜಿಲ್ (C-Vigil) ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲರ ಬಳಿಯು ಸ್ಮಾರ್ಟ್‍ಫೋನ್ ಇರುವುದು ಸಹಜ. ಅಂಗೈ ತುದಿಯಲ್ಲಿ ಎಲ್ಲ ವಿಕ್ಷೀಸಬಹುದು ಮತ್ತು ಸೆರೆಹಿಡಿಯಬಹುದು. ಸಿ-ವಿಜಿಲ್ ನೊಂದಿಗೆ, ನಿಮ್ಮ ಸ್ಮಾರ್ಟ್‍ಫೆÇೀನ್‍ನಿಂದ ನೇರವಾಗಿ ಮಾದರಿ ನೀತಿ ಸಂಹಿತೆಯ ಯಾವುದೇ ಉಲ್ಲಂಘನೆಗಳನ್ನು ನೀವು ವರದಿ ಮಾಡಬಹುದು. ಅದು ಮತದಾರರ ಯಾವುದೇ ಆಮಿಷಗಳ ಅಥವಾ ಅಕ್ರಮ ಪ್ರಚಾರ ಹಾಗೂ ಸರ್ಕಾರಿ ಸಂಪನ್ಮೂಲಗಳ ದುರುಪಯೋಗ ಅಥವಾ ಯಾವುದೇ ರೀತಿಯ ಉಲ್ಲಂಘನೆಯಾಗಿರಬಹುದು. ನಿಮ್ಮ ವರದಿಯು ನಮ್ಮ ಚುನಾವಣೆಗಳ ಸಮಗ್ರತೆಯನ್ನು ಎತ್ತಿಹಿಡಿಯಲು ಸಹಾಯ ಮಾಡುತ್ತದೆ. ಮತಕ್ಕಾಗಿ ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೋರೆಗಳನ್ನು ಹಂಚುವವರನ್ನು ಪೆÇೀಲಿಸರಿಗೆ ತಿಳಿಸುವುದು ಹೇಗೆ? ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುವುದನ್ನು ಹೇಗೆ ತಡೆಗಟ್ಟಬೇಕು ಎಂಬ ಹಲವು ಪ್ರಶ್ನೆಗಳು ಇದ್ದಲ್ಲಿ ಸಿ-ವಿಜಿಲ್ ಆಪ್ (ಸಿಟಿಜನ್-ವಿಜಿಲ್)…

Read More