Subscribe to Updates
Get the latest creative news from FooBar about art, design and business.
Author: kannadanewsnow57
ಕಾರವಾರ : ಬಿಜೆಪಿಯ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ವಸ್ತುಗಳು ಸುಟ್ಟು ಭಸ್ಮವಾಗಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೆ.ಹೆಚ್.ಬಿ ಕಾಲೋನಿಯಲ್ಲಿರುವ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರ ಬೆಂಕಿ ಅವಘಡ ಸಂಭವಿಸಿದ್ದು, ಹಲವು ವಸ್ತುಗಳು ಸುಟ್ಟು ಭಸ್ಮವಾಗಿದೆ ಎಂದು ವರದಿಯಾಗಿದೆ. ಅನಂತ್ ಕುಮಾರ್ ನಿವಾಸಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.
ಬೆಂಗಳೂರು : ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರಾಜ್ಯದಲ್ಲಿ ಶೇ60 ರಷ್ಟು ಜನರು ಡೆಂಗ್ಯೂ ರೋಗದಿಂದ ಬಳಲುತ್ತಿದ್ದಾರೆ. ರಾಜ್ಯದಲ್ಲಿ ಜನವರಿಯಿಂದ ಜೂನ್20 ರವರೆಗೆ ಒಟ್ಟು 7343 ಕೇಸ್ ಪತ್ತೆಯಾಗಿವೆ. 2023ರ ಜೂನ್ನಲ್ಲಿ ಒಟ್ಟು 2,003 ಪ್ರಕರಣಗಳು ವರದಿಯಾಗಿದ್ದವು. ಆದರೆ, ಈ ವರ್ಷ ಜೂನ್ನಲ್ಲಿ 4886 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಜನರಿಗೆ ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ಡೆಂಗ್ಯೂ ಜ್ವರವು ಜನರಿಗೆ ನಿರಂತರ ಬೆದರಿಕೆಯಾಗಿದೆ. ಇದು ಪ್ರತಿ ವರ್ಷ ಸುಮಾರು ಇಪ್ಪತ್ತು ಸಾವಿರ ಜನರನ್ನು ಕೊಲ್ಲುತ್ತದೆ. ಇದು ಬೇಸಿಗೆಯ ಕೊನೆಯಲ್ಲಿ ಸಂಗ್ರಹವಾಗುವ ವಿವಿಧ ನಗರಗಳಲ್ಲಿ ಸ್ಥಿರ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತದೆ. ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ಸಭೆ ಬಳಿಕ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು…
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಿದೆ. ನಾಳೆಯಿಂದಲೇ (ಜೂನ್ 26) ನಂದಿನಿ ಹಾಲಿನ ದರ ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಮಾಹಿತಿ ನೀಡಿದ್ದಾರೆ. ಭಾರತದ ಸಹಕಾರ ಹಾಲು ಮಹಾಮಂಡಳವಾಗಿ ಹೈನೋದ್ಯಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳವು ರಾಷ್ಟ್ರದಲ್ಲಿಯೇ ಎರಡನೆಯ ದೊಡ್ಡ ಮಹಾಮಂಡಳವಾಗಿದ್ದು, ದಕ್ಷಿಣ ಕಾರ್ಯನಿರ್ವಹಿಸುತ್ತಿರುತ್ತದೆ. ಕಹಾಮವು ಕಳೆದ 05 ದಶಕಗಳಿಂದಲೂ ತನ್ನ ಸದಸ್ಯ ಹಾಲು ಒಕ್ಕೂಟಗಳ ಮೂಲಕ ರಾಜ್ಯದ 27 ಲಕ್ಷಕ್ಕೂ ಹೆಚ್ಚು ಹೈನುಗಾರರಿಂದ ಹಾಲು ಖರೀದಿಸಿ, ಸಂಸ್ಕರಿಸಿ, “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯನ್ನು ಹೊತ್ತು “ನಂದಿನಿ” ಬ್ಯಾಂಡ್ನಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರ ಅಭಿರುಚಿಗೆ ತಕ್ಕಂತೆ ಪರಿಚಯಿಸಿರುತ್ತದೆ. ಪ್ರಸ್ತುತ ಸುಗ್ಗಿ ಕಾಲವಾಗಿರುವುದರಿಂದ ಎಲ್ಲಾ ಜಿಲ್ಲಾ ಹಾಲು ಒಕ್ಕೂಟಗಳ ವ್ಯಾಪ್ತಿಯಲ್ಲಿ ಹಾಲಿನ ಶೇಖರಣೆಯು ಪ್ರತಿ ದಿನ ಹೆಚ್ಚಾಗುತ್ತಿದ್ದು, ಪ್ರಸ್ತುತ ಶೇಖರಣೆಯೂ ಒಂದು ಕೋಟಿ ಲೀಟರ್ಗಳ ಹತ್ತಿರ ತಲುಪಿರುತ್ತದೆ, ಈ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಹೆಚ್ಚುವರಿಯಾಗಿ ಪ್ರತಿ…
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿದ್ದು, ಇದೀಗ ಮತ್ತೆ ನಾಲ್ಕು ದಿನ ಎಸ್ ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿದ್ದಾರೆ. ಆದರೆ ಪ್ರಜ್ವಲ್ ವಿರುದ್ಧದ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮತ್ತೆ ನಾಲ್ಕು ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಈಗಾಗಲೇ ಎರಡು ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಗೆ ಪಡೆದಿದ್ದ ಎಸ್ಐಟಿ (SIT) ಇದೀಗ ಮೂರನೇ ಪ್ರಕರಣದಲ್ಲಿ ಕಸ್ಟಡಿಗೆ ಪಡೆದುಕೊಂಡಿದೆ.
ಬೆಳಗಾವಿ : ರಾಹುಲ್ ಗಾಂಧಿ ಕಪ್ಪ ಕಾಣಿಕೆ ಕೊಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ವಿರೋಧ ವಿಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಸೋಲಿನ ಕೋಪಕ್ಕೆ ಬೆಲೆರ ಏರಿಕೆ ಮಾಡಲಾಗಿದೆ. ಕಾಫಿ, ಟೀ ಕುಡಿಯಲು ಸಿದ್ದರಾಮಯ್ಯ ಸರ್ಕಾರ ಕಲ್ಲು ಹಾಕಿದೆ. ರಾಹುಲ್ ಗಾಂಧಿಗೆ ಕಪ್ಪ ಕಾಣಿಗೆ ನೀಡಲು ಬೆಲೆ ಏರಿಕೆ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ. ಬಡವರನ್ನು ಸರ್ವನಾಶ ಮಾಡಲು ಬೆಲೆ ಏರಿಕೆ ಮಾಡುತಿತದೆ. ಬಸ್ ಟಿಕೆಟ್ ದರ ಏರಿಕೆಗೂ ಸಿದ್ಧತೆ ಮಾಡಲಾಗಿದೆ. ಅಧಿಕಾರಿಗಳಿಂದ ಈಗಾಗಲೇ ವರದಿ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.
ನವದೆಹಲಿ:ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಸಂಸದ ಕೆ.ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದರು. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು ಸ್ಪೀಕರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ ಕೆಲವೇ ಕ್ಷಣಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.
ನವದೆಹಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಬಹುಮತ ಗಳಿಸುವ ಮೂಲಕ ಕೇಂದ್ರದಲ್ಲಿ ಎನ್ಡಿಎ ಅಧಿಕಾರಕ್ಕೆ ಬಂದ ಮೊದಲ ಹದಿನೈದು ದಿನಗಳನ್ನು ಇಂದು ಆಚರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಸಂಭವಿಸಿದ ರೈಲು ಅಪಘಾತ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಸರಣಿ ಭಯೋತ್ಪಾದಕ ದಾಳಿಗಳು ಸೇರಿದಂತೆ ಹತ್ತು ಘಟನೆಗಳು ಮತ್ತು ಸಮಸ್ಯೆಗಳನ್ನು ರಾಹುಲ್ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಎಲ್ಲಾ ಘಟನೆಗಳ ಸಮಯದಲ್ಲಿ, “ಮಾನಸಿಕವಾಗಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರವನ್ನು ಉಳಿಸುವಲ್ಲಿ ನಿರತರಾಗಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದರು. ಉತ್ತರದಾಯಿತ್ವವಿಲ್ಲದೆ ಪ್ರಧಾನಿ ಮೋದಿ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಎನ್ಡಿಎ ಸರ್ಕಾರದ ಮೊದಲ 15 ದಿನಗಳಲ್ಲಿ ಸಂಭವಿಸಿದ 10 ವಿಷಯಗಳು ಅಥವಾ ಘಟನೆಗಳು: “ಭಯಾನಕ ರೈಲು ಅಪಘಾತ, ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳು, ರೈಲುಗಳಲ್ಲಿ ಪ್ರಯಾಣಿಕರ ದುಃಸ್ಥಿತಿ,…
ಬೆಂಗಳೂರು : ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕೆ ಮಂಡಳಿಯು ಕಲಿಕೆ ಭಾಗ್ಯ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ನೀಡುತ್ತದೆ. ಫಲಾನುಭವಿಯು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಮಂಡಳಿಯು ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕೆ ಕಲಿಕೆ ಭಾಗ್ಯ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ನೀಡುತ್ತದೆ ಅರ್ಹತೆ ಮತ್ತು ಮಾನದಂಡಗಳು * ವಿದ್ಯಾರ್ಥಿಯ ತಂದೆ ಅಥವಾ ತಾಯಿ ಮ೦ಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಿರಬೇಕು * ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಉತ್ತೀರ್ಣರಾಗಿ ಮುಂದಿನ ತರಗತಿಗೆ ದಾಖಲಾಗಿರಬೇಕು * ನೋ೦ದಾಯಿತ ಕಾರ್ಮಿಕರ ಇಬ್ಬರು ಮಕ್ಕಳು ಮಾತ್ರ ವಿದ್ಯಾರ್ಥಿ ವೇತನವನ್ನು ಪಡೆಯಬಹುದು * ಇಬ್ಬರು ಪೋಷಕರು ನೋಂದಾಯಿತ ಕಾರ್ಮಿಕರರಾಗಿದ್ದಲ್ಲಿ ಅವರ ಮಕ್ಕಳು ಒಂದು ಬಾರಿ ಮಾತ್ರ ಈ ಪ್ರಯೋಜನವನ್ನು ಪಡೆದುಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ತಡೆಹಿಡಿಯುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಮಂಗಳವಾರ ತನ್ನ ತೀರ್ಪನ್ನು ಪ್ರಕಟಿಸಲಿದೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿದ್ದ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಕಳೆದ ಗುರುವಾರ ಜಾಮೀನು ನೀಡಿತ್ತು. ಮರುದಿನ, ಜಾರಿ ನಿರ್ದೇಶನಾಲಯವು ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ಕೋರಿ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಿತು. ಜಾರಿ ನಿರ್ದೇಶನಾಲಯದ ಮನವಿಯ ಬಗ್ಗೆ ನಿರ್ಧಾರ ಬಾಕಿ ಇರುವಾಗ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಬಿಡುಗಡೆಗೆ ಮಧ್ಯಂತರ ತಡೆ ನೀಡಿದೆ. ಮಧ್ಯಂತರ ತಡೆಯಾಜ್ಞೆಯ ವಿರುದ್ಧ ಕೇಜ್ರಿವಾಲ್ ಶನಿವಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಕೆಳ ನ್ಯಾಯಾಲಯದ ಆದೇಶಕ್ಕೆ ನ್ಯಾಯಾಲಯ ತಡೆ ನೀಡದಿದ್ದರೆ, ಕೇಜ್ರಿವಾಲ್ ಶುಕ್ರವಾರ ತಿಹಾರ್ ಜೈಲಿನಿಂದ ಹೊರಬರುತ್ತಿದ್ದರು. ಏತನ್ಮಧ್ಯೆ, ವಿಚಾರಣಾ ನ್ಯಾಯಾಲಯದ ಆದೇಶವು ಪಕ್ಷಪಾತ ಮತ್ತು ಅನ್ಯಾಯವಾಗಿದೆ…
ಬೆಂಗಳೂರು : ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ಸಂಬಂಧಸಿದಂತೆ ತಮಿಳುನಾಡಿನ ಸಚಿವ ಉದಯನಿಧಿ ಸ್ಟ್ಯಾಲಿನ್ ಅವರು ಬೆಂಗಳೂರಿನ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಕ್ ಕೋರ್ಟ್ ಗೆ ಹಾಜರಾಗಿದ್ದು, ಕೋರ್ಟ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪರಮೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಹೀಗಾಗಿ ಇಂದು ಕೋರ್ಟ್ ಗೆ ಉದಯನಿಧಿ ಸ್ಟ್ಯಾಲಿನ್ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ಸೆಪ್ಟೆಂಬರ್ 4ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿದ್ದ ಉದಯನಿಧಿ, ಸನಾತನ ಧರ್ಮ ಡೆಂಗಿ, ಮಲೇರಿಯಾ ಹಾಗೂ ಕೊರೊನಾ ಇದ್ದಂತೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಅದು ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.












