Author: kannadanewsnow57

ಬೆಂಗಳೂರು : ಸೆಪ್ಟೆಂಬರ್ 13ರಂದು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ “ಬೃಹತ್ ಉದ್ಯೋಗಮೇಳಕ್ಕೆ ಇದುವರೆಗೆ 116 ಕಂಪನಿಗಳು ನೋಂದಾಯಿಸಿಕೊಂಡಿದ್ದು, ವಿವಿಧ ಕಂಪನಿ ಹಾಗೂ ಏಜೆನ್ಸೀ ವತಿಯಿಂದ 28,840 ಉದ್ಯೋಗಗಳಿಗೆ ಬೇಡಿಕೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾ ಮಟ್ಟದ ಬೃಹತ್ ಉದ್ಯೋಗಮೇಳದಲ್ಲಿ ಅಂದಾಜು 120 ಕ್ಕೂ ಅಧಿಕ ನಿಯೋಜಕರು/ಕಂಪನಿಗಳು ಹಾಗೂ 15,000 ಉದ್ಯೋಗಾಂಕ್ಷಿಗಳ ಭಾಗವಹಿಸುವ ಗುರಿ ಹೊಂದಲಾಗಿದೆ. ಇದುವರೆಗೂ ನೇರ ಸಂದರ್ಶನ ಮೂಲಕ ಆಯ್ಕೆಗೆ ಅಂದಾಜು 8,000 ಉದ್ಯೋಗ ಬೇಡಿಕೆ ಇದೆ ಹಾಗೂ ಏಜೆನ್ಸೀ ಮೂಲಕ ಆಯ್ಕೆಗೆ 20,000 ಉದ್ಯೋಗಕ್ಕೆ ಬೇಡಿಕೆ ಇದೆ ಎಂದು ಹೇಳಿದರು. ಪ್ರತಿ ಗ್ರಾಮ ಪಂಚಾಯಿತಿಗೆ 100 ಉದ್ಯೋಗಾಂಕ್ಷಿಗಳು ನೋಂದಣಿ ಹಾಗೂ ನಗರಸಭೆ ಮತ್ತು ಪುರಸಭೆ ವ್ಯಾಪ್ತಿಗಳಲ್ಲಿ 2000 ದಿಂದ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ವರ್ಗಗಳಾದ ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೊಟೋಗ್ರಾಫರ್ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆಂಡಾಲ್ಗಳ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು ಮತ್ತು ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರನ್ನು ನೋಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ಮಾಹಿತಿ ಅವಶ್ಯಕತೆಯಿದ್ದು, ವಿವಿಧ-ಸಂಘ-ಸಂಸ್ಥೆಗಳಲ್ಲಿ ನೋಂದಣಿಯಾದ ಕಾರ್ಮಿಕರ ದತ್ತಾಂಶ ಸಂಗ್ರಹಿಸಬೇಕಾಗಿರುತ್ತದೆ. ಕಾರ್ಮಿಕ ಸಂಘಗಳಲ್ಲಿ ನೋಂದಾಯಿಸದೇ ಇರುವ ಇತರೆ ಕಾರ್ಮಿಕರನ್ನೂ ಸಹ ಹೊಸದಾಗಿ ಅಭಿವೃದ್ಧಿಪಡಿಸಿದ ತಂತ್ರಾಂಶದಲ್ಲಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲು ಕಾರ್ಮಿಕ ಇಲಾಖೆಯಿಂದ ಉದ್ದೇಶಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಂಘಟಿತ ಕಾರ್ಮಿಕರ ವರ್ಗಗಳ…

Read More

ಬೆಂಗಳೂರು : ರಾಜ್ಯದಲ್ಲಿ ಸರ್ಕಾರವು ಕರ್ನಾಟಕದ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ ನೀಡಿದೆ. ಆಗಸ್ಟ್‌ 1 ರಿಂದ 7 ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಮಾಡಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಆಗಸ್ಟ್‌ 1 ರಿಂದ ಜಾರಿಗೆ ಬಂದಿವೆ. ರಾಜ್ಯ ಸರ್ಕಾರಿ ನೌಕರರಿಗೆ ಗೃಹನಿರ್ಮಾಣ ಮುಂಗಡವನ್ನು ‘ಎ’ ವೃಂದಕ್ಕೆ 65.00 ಲಕ್ಷ ಮತ್ತು ಇತರೆ ವೃಂದದ ನೌಕರರಿಗೆ ರೂ. 40.00 ಲಕ್ಷಗಳಿಗೆ ಹೆಚ್ಚಳ ಮಾಡಲಾಗಿದ್ದು, ನಾಲ್ಕು ಚಕ್ರ ವಾಹನ ಖರೀದಿ ಮುಂಡವನ್ನು ರೂ. 3.00 ಲಕ್ಷದಿಂದ ರೂ. 6.00 ಲಕ್ಷಕ್ಕೆ ಹಾಗೂ ದ್ವಿ-ಚಕ್ರ ವಾಹನಕ್ಕೆ ರೂ. 50,000-00 ರಿಂದ ರೂ. 80,000-00 ಗಳಿಗೆ ಹೆಚ್ಚಳ ಮಾಡಲಾಗಿದೆ. ಹೀಗಿದೆ 7 ನೇ ವೇತನ ಆಯೋಗದ ಪ್ರಮುಖ ಶಿಫಾರಸ್ಸುಗಳು * ದಿನಾಂಕ: 01-07-2022ಕ್ಕೆ ಇದ್ದಂತಹ ಶೇ. 31% ತುಟ್ಟಿಭತ್ಯೆ ವಿಲೀನ ಹಾಗೂ ಮೇಲಿನ 27.50 ರಷ್ಟು ಸೇರಿ ಒಟ್ಟು ಶೇ. 58.50ರಷ್ಟು ಮೂಲ ವೇತನದಲ್ಲಿ…

Read More

ನವದೆಹಲಿ: 2023 ರ ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಆರು ಆರೋಪಿಗಳಲ್ಲಿ ಒಬ್ಬರಾದ ನೀಲಂ ಆಜಾದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪಟಿಯಾಲ ಹೌಸ್ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ ವಿಚಾರಣೆಯ ಸಮಯದಲ್ಲಿ, ಆಜಾದ್ ಅವರ ವಕೀಲರು ಅವರು ಪಿತೂರಿಗಾರರಲ್ಲ ಮತ್ತು ಘಟನೆಯ ಸಮಯದಲ್ಲಿ ಸಂಸತ್ತಿನ ಕಟ್ಟಡದ ಹೊರಗೆ ಇದ್ದರು ಎಂದು ವಾದಿಸಿದರು. ಅವರು ಒಂಬತ್ತು ತಿಂಗಳುಗಳಿಂದ ಬಂಧನದಲ್ಲಿದ್ದಾರೆ ಮತ್ತು ವಿಚಾರಣೆಯು ಬಹಳ ಸಮಯ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಅವರ ವಕೀಲರು ಒತ್ತಿ ಹೇಳಿದರು. ಕೇವಲ ಧ್ವನಿ ಎತ್ತಲು ಪ್ರಯತ್ನಿಸುವ ಯುವ ನಾಗರಿಕರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯನ್ನು (ಯುಎಪಿಎ) ಬಳಸಬಾರದು ಎಂದು ಅವರು ವಾದಿಸಿದರು. ಆದಾಗ್ಯೂ, ದೆಹಲಿ ಪೊಲೀಸರ ವಕೀಲರು ಜಾಮೀನನ್ನು ವಿರೋಧಿಸಿದರು, ಭದ್ರತಾ ಉಲ್ಲಂಘನೆಯನ್ನು ಯೋಜಿಸಲಾಗಿದೆ ಎಂದು ಹೇಳಲಾದ ಐದು ಸಭೆಗಳಲ್ಲಿ ಮೂರರಲ್ಲಿ ಆಜಾದ್ ಭಾಗವಹಿಸಿದ್ದರು ಎಂದು ಪ್ರತಿಪಾದಿಸಿದರು. ಘಟನೆಯ ದಿನ, ಡಿಸೆಂಬರ್ 13 ಸಂಸತ್ತಿನಲ್ಲಿ ವಾಡಿಕೆಯ ದಿನವಲ್ಲ ಎಂದು ವಾದಿಸಿದ ಪೊಲೀಸ್ ವಕೀಲರು, ಸಂಸತ್ತಿನ ಮೇಲೆ 2001 ರ…

Read More

ನವದೆಹಲಿ : ಕೇಂದ್ರ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರವು ಜಾನುವಾರು ಸಾಕಣೆದಾರರ ಜೀವನೋಪಾಯವನ್ನು ಸುಧಾರಿಸಲು ಮತ್ತು ಅವರ ಜೀವನ ಮಟ್ಟವನ್ನು ಹೆಚ್ಚಿಸಲು ಹಲವಾರು ಯೋಜನೆಗಳನ್ನು ತಂದಿದೆ. ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರನ್ನು ಪ್ರೋತ್ಸಾಹಿಸಲು ‘ಉದ್ಯಮಿ ಮಿತ್ರ ಯೋಜನೆ’ಯನ್ನು ಜಾರಿಗೊಳಿಸಲಾಗುತ್ತಿದ್ದು, ಕುರಿ, ಕೋಳಿ, ಹಂದಿ ಸಾಕಣೆಗೆ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯು ಹಿತ್ತಲಿನಲ್ಲಿ ಕೋಳಿ, ಕುರಿ, ಮೇಕೆ, ಹಂದಿ ಸಾಕಣೆ, ಮೇವು ಮತ್ತು ಮೇವಿನ ಬೆಳೆ ದಾಸ್ತಾನುಗಳನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಇದರಲ್ಲಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಹಾಗೂ ಇತರೆ ಸ್ಥಳೀಯ ಬ್ಯಾಂಕ್ ಗಳ ಸಹಯೋಗದಲ್ಲಿ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮೇಕೆಗಳು: 100 ರಿಂದ 500 ಮೇಕೆಗಳನ್ನು ಸಾಕುವ ರೈತನಿಗೆ ಶೇ.50 ಸಹಾಯಧನ ದೊರೆಯುತ್ತದೆ. 100 ಮೇಕೆಗಳನ್ನು ಸಾಕಲು ರೂ.20 ಲಕ್ಷ ನೀಡುವ ಈ ಯೋಜನೆಯಡಿ ರೈತರಿಗೆ ತಲಾ ರೂ.5 ಲಕ್ಷದಂತೆ ಎರಡು ಬಾರಿ ಸಬ್ಸಿಡಿ ನೀಡಲಾಗುತ್ತದೆ. 200 ಮೇಕೆ ಸಾಕಾಣಿಕೆಗೆ 40 ಲಕ್ಷ ರೂ.,…

Read More

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಆದೇಶಿಸಿದೆ. ಆ ಬಗ್ಗೆ ಪಟ್ಟಿ ಮುಂದಿದೆ ಓದಿ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಬಾಲ ನ್ಯಾಯ ( ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ ಕಾಯ್ದೆ 2021 ಹಾಗೂ ಬಾಲ ನ್ಯಾಯ ( ಮಕ್ಕಳ ಪಾಲನೆ ಮತ್ತು ರಕ್ಷಣೆ ) ಮಾದರಿ ನಿಯಮಗಳು 2016, ತಿದ್ದುಪಡಿ ಮಾದರಿ ನಿಯಮಗಳು 2022ರ ಅನ್ವಯ ಈ ಕೆಳಕಂಡ 26 ಜಿಲ್ಲೆಗಳ ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು 3 ವರ್ಷಗಳ ಅವಧಿಗೆ ನೇಮಕಾತಿ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಜವಾಬ್ದಾರಿ ಮತ್ತು ಕರ್ತವ್ಯಗಳು:- 1.…

Read More

ಬೆಂಗಳೂರು: ಪರಿಸರ ಸೂಕ್ಷ್ಮ ವಲಯ (ಇಎಸ್ಝಡ್) ಅಧಿಸೂಚನೆ ಕುರಿತು ಪಶ್ಚಿಮ ಘಟ್ಟ ರಾಜ್ಯಗಳಿಂದ ಪ್ರತಿಕ್ರಿಯೆ ಪಡೆಯಲು ಕೇಂದ್ರವು ಸೆಪ್ಟೆಂಬರ್ 27 ರ ಗಡುವನ್ನು ನಿಗದಿಪಡಿಸಿರುವುದರಿಂದ, ರಾಜ್ಯ ಸರ್ಕಾರವು ಸೆಪ್ಟೆಂಬರ್ 19 ರಂದು 10 ಘಟ್ಟ ಜಿಲ್ಲೆಗಳ ಮುಖಂಡರೊಂದಿಗೆ ಸಮಾಲೋಚಿಸಲು ಮಧ್ಯಸ್ಥಗಾರರ ಸಭೆ ನಡೆಸಲಿದೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಎಂಒಇಎಫ್ ಮತ್ತು ಸಿಸಿ) ಜುಲೈ 31 ರಂದು ಆರನೇ ಕರಡು ಇಎಸ್ಝಡ್ ಅಧಿಸೂಚನೆಯನ್ನು ಹೊರಡಿಸಿದ್ದು, ಕರ್ನಾಟಕದ 10 ಜಿಲ್ಲೆಗಳಲ್ಲಿ 20,668 ಚದರ ಕಿ.ಮೀ ಸೇರಿದಂತೆ ಆರು ರಾಜ್ಯಗಳಲ್ಲಿ 56,825.7 ಚದರ ಕಿ.ಮೀ ಅನ್ನು ಇಎಸ್ಝಡ್ ಎಂದು ಘೋಷಿಸುವ ಪ್ರಸ್ತಾಪವನ್ನು ಪುನರುಚ್ಚರಿಸಿದೆ. “ನಾವು ಸೆಪ್ಟೆಂಬರ್ 27 ರಂದು ರಾಜ್ಯ ಸರ್ಕಾರದ ನಿಲುವನ್ನು ಸಲ್ಲಿಸಬೇಕಾಗಿದೆ. ಸೆಪ್ಟೆಂಬರ್ 20 ರಂದು ಸಚಿವ ಸಂಪುಟ ಉಪಸಮಿತಿಗೆ ನಾಯಕರ ಅಭಿಪ್ರಾಯವನ್ನು ತೆಗೆದುಕೊಂಡು ಹೋಗಿ ಸರ್ಕಾರದ ನಿಲುವನ್ನು ಅಂತಿಮಗೊಳಿಸಲು ಮರುದಿನ ಮುಖ್ಯಮಂತ್ರಿಗಳ ಮುಂದೆ ನಮ್ಮ ಶಿಫಾರಸನ್ನು ಇಡುತ್ತೇವೆ” ಎಂದು ಅವರು ಹೇಳಿದರು. ಈಗಾಗಲೇ ಅಧಿಸೂಚಿತ ಅರಣ್ಯಗಳು, ಅಭಯಾರಣ್ಯಗಳು…

Read More

ಮಂಡ್ಯ : ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಗಲಾಟೆ ಸಂಭವಿಸಿದ್ದು, ಪೆಟ್ರೋಲ್ ಬಾಂಬ್ ಎಸೆದು, ಅಂಗಡಿಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬದರಿಕೊಪ್ಪಲದಲ್ಲಿ ಗಣಪತಿ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ಗಲಾಟೆ ನಡೆದಿದ್ದು,ಗಣಪತಿ ಮೇಲೆ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಪೆಟ್ರೋಲ್ ಬಾಂಬ್ ಎಸೆದು ಮುಸ್ಲಿಮರ ಅಂಗಡಿಗಳಿಗೆ ಬೆಂಕಿ ಹಚ್ಚಿರುವ ವರದಿಯಾಗಿದೆ. ಸೆಪ್ಟಂಬರ್ 14ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಅದ್ದೂರಿಯಾಗಿ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನುಕೋಮಿನವರು ಕಲ್ಲೆಸೆದಿದ್ದಾರೆ. ಗಣೇಶ ಮೂರ್ತಿಯ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಈ ವೇಳೆ ಹಿಂದೂ ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ, ನೂಕಾಟ ನಡೆದಿದೆ. ಈ ವೇಳೆ ನಾಗಮಂಗಲದ ಟೌನ್ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಅಗ್ರಹಿಸಿ ಠಾಣೆ…

Read More

ಬೆಂಗಳೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತ ಸಮುದಾಯದ ಪ್ರಮುಖ ಬೇಡಿಕೆಗಳ ಕುರಿತು ಚರ್ಚಿಸಿದರು. ಈ ವೇಳೆ ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಮಾಡುವುದಕ್ಕೆ ಸರ್ಕಾರ ಬದ್ದವಾಗಿದೆ. ವಿಧಾನ ಪರಿಷತ್‌ನಲ್ಲಿ ಪಕ್ಷ ಬಹುಮತ ಸಾಧಿಸಿದ ನಂತರ ತಿದ್ದುಪಡಿ ವಿಧೇಯಕ ಮಂಡಿಸಿ ಹಿಂದಿನ ಕಾಯ್ದೆ ಮರು ಸ್ಥಾಪಿಸಲಾಗುವುದು. ನೀರಾವರಿ ಪಂಪ್‌ಸೆಟ್‌ಗಳಿಗೆ ರೈತರ ಆಧಾ‌ರ್ ಸಂಖ್ಯೆ ಜೋಡಣೆ ಮಾಹಿತಿಯಿಲ್ಲ. ಈ…

Read More

ಮಡಿಕೇರಿ : ನಗರದಲ್ಲಿ ಕೆಎಸ್‍ಆರ್‍ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರು ತಿಳಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗ ವತಿಯಿಂದ ಶನಿವಾರಸಂತೆಯಲ್ಲಿ ಸುಮಾರು 1 ಕೋಟಿ ರೂ. ವೆಚ್ಚದ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೆಎಸ್‍ಆರ್‍ಟಿಸಿ ಬಸ್ ಘಟಕವಿದೆ. ಜೊತೆಗೆ ಕುಶಾಲನಗರದಲ್ಲಿ ನೂತನ ಬಸ್ ಘಟಕ ನಿರ್ಮಾಣವಾಗುತ್ತಿದೆ. ಈ ಎರಡು ಘಟಕಕ್ಕೆ ವಿಭಾಗೀಯ ಕಚೇರಿ ಆರಂಭಿಸಲು ಕಷ್ಟಸಾಧ್ಯ. ಆದ್ದರಿಂದ ಹತ್ತಿರದ ರಾಮನಾಥಪುರ ಇತರೆ ಒಟ್ಟು 4 ಘಟಕಗಳನ್ನು ಒಳಗೊಂಡು ಒಂದು ವಿಭಾಗೀಯ ಕಚೇರಿ ಆರಂಭಿಸಬೇಕು. ಆ ನಿಟ್ಟಿನಲ್ಲಿ ಆದ್ಯತೆ ಮೇಲೆ ಪ್ರಯತ್ನಿಸಲಾಗುವುದು ಎಂದು ಸಾರಿಗೆ ಸಚಿವರು ಹೇಳಿದರು. ಸರ್ಕಾರದ ಶಕ್ತಿ ಯೋಜನೆ ನಂತರ ಕರ್ನಾಟಕ ಸಾರಿಗೆ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಮತ್ತು ಸುಧಾರಣೆಯಾಗಿದೆ. ಪ್ರತಿನಿತ್ಯ ಸಾವಿರಾರು ಮಹಿಳೆಯರು ಬಸ್‍ನಲ್ಲಿ ಸಂಚರಿಸುತ್ತಿದ್ದಾರೆ ಎಂದು ಸಚಿವರು ತಿಳಿಸಿದರು. ಶಕ್ತಿ…

Read More