Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: 66/11 kV ಗೊಲ್ಲಹಳ್ಳಿ (ಬನ್ನೇರುಘಟ್ಟ) ಫ್-8 ಕಾಸರಗುಪ್ಪೆ ವಿದ್ಯುತ್ ಮಾರ್ಗದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಾರ್ಚ್ 27, 28 ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 27.03.2025(ಗುರುವಾರ) ಮತ್ತು 28.03.2025(ಶುಕ್ರವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಶ್ಯಾನುಭೋಗನಹಳ್ಳಿ ಕುಲುಮೆಪಾಳ್ಯ ಕನ್ನಾಯಕನ ಅಗ್ರಹಾರ ಕೆಂಚಯ್ಯನದೊಡ್ಡಿ ಮುನಿಮಾರನದೊಡ್ಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಿ ವಿವಿಧ ಹುದ್ದೆಗಳಿಗೆ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಹೀಗಿದೆ.
ಬೆಂಗಳೂರು : ಬೆಂಗಳೂರಿನ ಪುಲಕೇಶಿ ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಪೋಟಗೊಂಡಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಪುಲಕೇಶಿ ನಗರದಲ್ಲಿರುವ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ಒಂದರಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಸಿಲಿಂಡರ್ ಸ್ಪೋಟಗೊಂಡಿವೆ. ಒಟ್ಟಿಗೆ 4 ಸಿಲಿಂಡರ್ ಬ್ಲ್ಯಾಸ್ಟ್ ಆದ ಪರಿಣಾಮ ಫ್ಲ್ಯಾಟ್ ಹೊತ್ತಿ ಉರಿದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕಲಾತ್ : ಪಾಕಿಸ್ತಾನದ ಕಲಾತ್‌ನಲ್ಲಿ ನಡೆದ ಐಇಡಿ ದಾಳಿಯ ಹೊಣೆಯನ್ನು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಹೊತ್ತುಕೊಂಡಿದೆ. ಮಂಗಳವಾರ ನಡೆದ ಈ ದಾಳಿಯಲ್ಲಿ ಪಾಕಿಸ್ತಾನ ಸೇನೆಯ ಐವರು ಸೈನಿಕರು ಸಾವನ್ನಪ್ಪಿದ್ದರು. ಕಲಾತ್‌ನ ಹರ್ಬೋಯ್ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಪಾಕಿಸ್ತಾನ ಸೇನೆಯ ಮೇಲಿನ ಇತ್ತೀಚಿನ ದಾಳಿಯ ವಿವರಗಳನ್ನು ವಕ್ತಾರ ಝೀಂದ್ ಬಲೋಚ್ ಉಲ್ಲೇಖಿಸಿ ಬಿಎಲ್ಎ ಹೇಳಿಕೆ ನೀಡಿದೆ. ಮಂಗಳವಾರ ಪಾಕಿಸ್ತಾನ ಸೇನಾ ಬೆಂಗಾವಲು ಪಡೆಯ ವಾಹನದ ಮೇಲೆ ರಿಮೋಟ್-ನಿಯಂತ್ರಿತ ಸುಧಾರಿತ ಸ್ಫೋಟಕ ಸಾಧನ (IED) ಬಳಸಿ ದಾಳಿ ನಡೆಸಲಾಗಿದೆ ಎಂದು ಬಿಎಲ್‌ಎ ಹೇಳಿಕೊಂಡಿದೆ. ಸ್ಫೋಟದಲ್ಲಿ ಐವರು ಪಾಕಿಸ್ತಾನಿ ಸೇನಾ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಮೇಜರ್ ಶ್ರೇಣಿಯ ಅಧಿಕಾರಿ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದಲ್ಲಿ ಗುರಿಯಾಗಿಸಿಕೊಂಡ ವಾಹನವು ಸಂಪೂರ್ಣವಾಗಿ ನಾಶವಾಗಿದೆ ಎಂದು ಬಿಎಲ್‌ಎ ಹೇಳಿಕೊಂಡಿದೆ. ಬಿಎಲ್‌ಎ ಹೇಳಿಕೆಯ ಪ್ರಕಾರ, ಪಾಕಿಸ್ತಾನ ಸೇನೆಯು ಮಾರ್ಚ್ 24, 2025 ರಿಂದ ಹರ್ಬೋಯ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಮುನ್ನಡೆಯಲು ಪ್ರಯತ್ನಿಸುತ್ತಿತ್ತು. ಗುಂಪು ಬಿಡುಗಡೆ ಮಾಡಿದ…
ಗೃಹಜ್ಯೋತಿ ಯೋಜನೆಯ ಸೌಲಭ್ಯವನ್ನು 2023-24 ಮತ್ತು 2024-25 ನೇ ಸಾಲಿನ ವಿದ್ಯುತ್ ಬಳಕೆಯ ಸರಾಸರಿ ಪರಿಗಣಿಸಿ ಲೆಕ್ಕೀಕರಿಸುವ ನಿಯಮವನ್ನು ವಿಸ್ತರಿಸಿ ಎಲ್ಲ ಗೃಹ ಬಳಕೆಯ ಗ್ರಾಹಕರಿಗೆ ಗೃಹಜ್ಯೋತಿ ಸೌಲಭ್ಯ ದೊರಕಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಸಭೆಯು ಒಮ್ಮತದ ನಿರ್ಣಯ ಅಂಗೀಕರಿಸಿದೆ. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್ ಅವರ ಅಧ್ಯಕ್ಷತೆಯಲ್ಲಿ ಏರ್ಪಡಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಗೃಹಜ್ಯೋತಿ ಯೋಜನೆಯನ್ವಯ 2022-23 ನೇ ಸಾಲಿನ ಸರಾಸರಿ ವಿದ್ಯುತ್ ಬಳಕೆಯನ್ನು ಪರಿಗಣಿಸಿ ಲೆಕ್ಕೀಕರಿಸಿ 200 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸದೇ ಇರುವ ಕಾರಣ 2023-24 ನೇ ಸಾಲಿನ ವಿದ್ಯುತ್ ಬಳಕೆಯನ್ನು ಪರಿಗಣಿಸಲು ಗ್ರಾಹಕರು ಒಳಪಡುವುದಿಲ್ಲವೆಂದು ಮೆಸ್ಕಾಂ ಕಾ ಮತ್ತು ಪಾ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ಇವರಿಗೆ…
ನವದೆಹಲಿ : ಮಾರುಕಟ್ಟೆ ಪರಿಸ್ಥಿತಿ ಸುಧಾರಿಸುವ ದೃಷ್ಟಿಯಿಂದ ಸರ್ಕಾರ ಬುಧವಾರದಿಂದ ಚಿನ್ನದ ನಗದೀಕರಣ ಯೋಜನೆಯನ್ನು (ಜಿಎಂಎಸ್) ಸ್ಥಗಿತಗೊಳಿಸಲು ನಿರ್ಧರಿಸಿದೆ. ಗಮನಿಸಬೇಕಾದ ಅಂಶವೆಂದರೆ, ಚಿನ್ನದ ನಗದೀಕರಣ ಯೋಜನೆ (GMS) ವ್ಯಕ್ತಿಗಳು ಅಥವಾ ಸಂಸ್ಥೆಗಳು ತಮ್ಮ ಮನೆಯಲ್ಲಿರುವ ಚಿನ್ನದಿಂದ ಹಣ ಗಳಿಸಲು ಅವಕಾಶವನ್ನು ಒದಗಿಸುತ್ತದೆ. ಈ ಯೋಜನೆಯು ಠೇವಣಿ ಇಟ್ಟ ಚಿನ್ನಕ್ಕೆ ಅಸಲು ಮತ್ತು ಬಡ್ಡಿ ಮೊತ್ತವನ್ನು ಒದಗಿಸುತ್ತದೆ ಮತ್ತು ಚಿನ್ನದ ಬೆಲೆಯಲ್ಲಿನ ಏರಿಕೆಯಿಂದ ಠೇವಣಿದಾರರು ಪ್ರಯೋಜನ ಪಡೆಯುತ್ತಾರೆ. ಹಣಕಾಸು ಸಚಿವಾಲಯ ಮಂಗಳವಾರ ಈ ಮಾಹಿತಿಯನ್ನು ನೀಡಿದೆ. ಆದಾಗ್ಯೂ, ಬ್ಯಾಂಕುಗಳು ಒಂದರಿಂದ ಮೂರು ವರ್ಷಗಳ ಅಲ್ಪಾವಧಿಯ ಚಿನ್ನದ ಠೇವಣಿ ಯೋಜನೆಗಳನ್ನು ಮುಂದುವರಿಸಬಹುದು ಎಂದು ಸಚಿವಾಲಯ ತಿಳಿಸಿದೆ. ಸರ್ಕಾರವು ನವೆಂಬರ್ 2024 ರವರೆಗೆ ಚಿನ್ನದ ನಗದೀಕರಣ ಯೋಜನೆಯಡಿಯಲ್ಲಿ ಸುಮಾರು 31,164 ಕೆಜಿ ಚಿನ್ನವನ್ನು ಸಂಗ್ರಹಿಸಿತ್ತು. ಇದನ್ನು ಸೆಪ್ಟೆಂಬರ್ 15, 2015 ರಂದು ಪ್ರಾರಂಭಿಸಲಾಯಿತು ಸರ್ಕಾರ ಈ ಯೋಜನೆಯನ್ನು ಸೆಪ್ಟೆಂಬರ್ 15, 2015 ರಂದು ಘೋಷಿಸಿತು. ಇದನ್ನು ಪರಿಚಯಿಸುವ ಉದ್ದೇಶವು ದೀರ್ಘಾವಧಿಯಲ್ಲಿ ಚಿನ್ನದ ಆಮದಿನ ಮೇಲಿನ ದೇಶದ…
ಬೆಂಗಳೂರು : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ವಿಶ್ವ ಜಲದಿನ-2025 ಅಂಗವಾಗಿ ಜಲ ಸಂರಕ್ಷಣೆ ಕುರಿತು ವಿಶ್ವದ ಬೃಹತ್ ಪ್ರತಿಜ್ಞಾವಿಧಿ ಸ್ವೀಕರಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದಲ್ಲಿ ತಿಳಿಸಿರುವಂತೆ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಇವರ ವತಿಯಿಂದ ದಿನಾಂಕ: 21.03.2025 ರಂದು “ಕಾವೇರಿ ಆರತಿ” ಎಂಬ ಬೃಹತ್ ಕಾರ್ಯಕ್ರಮದಲ್ಲಿ “ವಿಶ್ವ ಜಲದಿನ-2025” ರ ಅಂಗವಾಗಿ ಜಲ ಸಂರಕ್ಷಣೆ ಕುರಿತು ವಿಶ್ವದ ಬೃಹತ್ ಪ್ರತಿಜ್ಞಾವಿಧಿ ಸ್ವೀಕಾರ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿರುತ್ತದೆ. ಈ ಪ್ರತಿಜ್ಞಾವಿಧಿ ಕಾರ್ಯಕ್ರಮವು ದಿನಾಂಕ: 21.03.2025 ರಿಂದ 28.03.2025 ರವರೆಗೆ ನಿಗಧಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಈ ಇಲಾಖಾ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಹಾಗೂ ತಾಂತ್ರಿಕ/ಇಂಜಿನಿಯರಿಂಗ್ ಕಾಲೇಜುಗಳ ಉಪನ್ಯಾಸಕರು ಹಾಗೂ ವಿಧ್ಯಾರ್ಥಿಗಳು ದಿನಾಂಕ: 28.03.2025 ರೊಳಗಾಗಿ ಗರಿಷ್ಠ ಮಟ್ಟದಲ್ಲಿ ಜಲ ಸಂರಕ್ಷಣೆ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿಕೊಳ್ಳುವಂತೆ ಕ್ರಮ ಕೈಗೊಳ್ಳಲು ಸೂಚಿಸಿದೆ. ಮುಂದುವರೆದು,…
ಬೆಂಗಳೂರು : ಸಚಿವ ಭೈರತಿ ಸುರೇಶ್ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳ ವಿರುದ್ಧ ಬೆಂಗಳೂರಿನ ಆರ್.ಟಿ. ನಗರದ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಸಚಿವ ಭೈರತಿ ಸುರೇಶ್ ಫೇಸ್ ಬುಕ್ ಖಾತೆ ಹ್ಯಾಂಡಲ್ ಮಾಡುವ ಯುವಕ ಪೊಲೀಸರಿಗೆ ದೂರು ನೀಡಿದ್ದು, ದೂರು ಪಡೆದು ಪೊಲೀಸರು ಅಪರಿಚಿತರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಸಚಿವ ಭೈರತಿ ಸುರೇಶ್ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿದ ಅಪರಿಚಿತರು ಕೆಟ್ಟದಾಗಿ ಕಮೆಂಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಬೈರತಿ ಸುರೇಶ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ನನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದೆ, ಯಾವುದೇ ರೀತಿಯ ಮೇಸೆಜ್ ಗಳಿಗೆ ಯಾರು ಕೂಡ ಅನ್ಯತಾ ಭಾವಿಸಬೇಡಿ ಎಂದು ಸಚಿವಭೈರತಿ ಸುರೇಶ್ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.
ಬೀಜಿಂಗ್: ಚೀನಾದ ಉತ್ತರ ಹೆಬೈ ಪ್ರಾಂತ್ಯದ ಲ್ಯಾಂಗ್‌ಫಾಂಗ್‌ನಲ್ಲಿರುವ ಯೋಂಗ್‌ಕಿಂಗ್ ಕೌಂಟಿಯಲ್ಲಿ ಬುಧವಾರ ಬೆಳಗಿನ ಜಾವ (ಬೀಜಿಂಗ್ ಸಮಯ) ಭೂಕಂಪ ಸಂಭವಿಸಿದೆ. ಇದು 4.2 ತೀವ್ರತೆಯ ಭೂಕಂಪವಾಗಿತ್ತು. ಚೀನಾದಲ್ಲಿ ಭೂಕಂಪಗಳನ್ನು ಮೇಲ್ವಿಚಾರಣೆ ಮಾಡುವ ಚೀನಾ ಭೂಕಂಪ ಜಾಲ ಕೇಂದ್ರ (CENC) ಇದನ್ನು ದೃಢಪಡಿಸಿದೆ. CENC ವರದಿಯ ಪ್ರಕಾರ, ಈ ಭೂಕಂಪವು ಮೇಲ್ಮೈಯಿಂದ 20 ಕಿ.ಮೀ ಆಳದಲ್ಲಿ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಚೀನಾದ ರಾಜಧಾನಿಯಿಂದ 55 ಕಿ.ಮೀ ದೂರದಲ್ಲಿದ್ದು, ಬೀಜಿಂಗ್‌ನಲ್ಲಿಯೂ ಕಂಪನದ ಅನುಭವವಾಗಿದೆ. ರಾಜಧಾನಿಯ ಅನೇಕ ಜನರು ತಮ್ಮ ಮೊಬೈಲ್‌ನಲ್ಲಿ ಈ ಎಚ್ಚರಿಕೆಯನ್ನು ಸ್ವೀಕರಿಸಿದ್ದಾರೆ.
ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತಾ ನೀಡುವ ವಿನೂತನ ವ್ಯವಸ್ಥೆಯನ್ನು ಬೆಂಗಳೂರಿನಲ್ಲಿ ಜಾರಿಗೆ ತರಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ ನಿಂದ ಚಾಲನೆ ದೊರೆಯಲಿದೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. https://twitter.com/KarnatakaVarthe/status/1904472866693009656 ಮನೆ ಬಾಗಿಲಿಗೆ ಉಚಿತವಾಗಿ ಖಾತೆ ವಿತರಣೆ, ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು ಎಂದು ತಿಳಿಸಿದರು. ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು. ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರ ವಾಗಿದೆ. ಜೊತೆಗೆ ಕಂದಾಯ ಬಡಾವಣೆಗಳಲ್ಲಿ ಇರುವ ಖಾಸಗಿ ರಸ್ತೆಗಳನ್ನೂ ಸಹ ಸರ್ಕಾರಿ ರಸ್ತೆಗಳು ಎಂದು…