Author: kannadanewsnow57

ಬೆಂಗಳೂರು : ಮಳೆ ಬರುತ್ತಿರುವಾಗ ಒಂದು ಕೈಯಲ್ಲಿ ಛತ್ರಿ , ಮತ್ತೊಂದು ಕೈಯಲ್ಲಿ ಸ್ಟೀರಿಂಗ್‌ ಹಿಡಿದು ಬಸ್‌ ಚಾಲನೆ ಮಾಡಿದ ವಿಡಿಯೋ ಸಂಬಂಧ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಚಿವರು, ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ಚಾಲನೆ ಮಾಡುವ ವಿಡಿಯೋ (ಮನರಂಜನೆಗಾಗಿ ಮಾಡಿದ‌ ವಿಡಿಯೋ ಕುರಿತು) BJP Karnataka ದವರು ಟ್ವೀಟ್ ಮಾಡಿ ಮಾಡಿ ಉತ್ತರಕುಮಾರನ ಪೌರುಷವನ್ನು ತೋರಿಸುತ್ತಿರುವುದಕ್ಕೆ ಹಾಗೂ ಅವರ ಈ ಸಂತೋಷಕ್ಕೆ ಕಡಿವಾಣ ಹಾಕಬೇಕಾಗಿದೆಯಲ್ಲ‌ ಎಂಬ ನೋವಿನೊಂದಿಗೆ ಈ ವಿವರಣೆ ನೀಡಲಾಗುತ್ತಿದೆ. ಕೆಲವರಿಗೆ ಕಣ್ಣಿರುತ್ತದೆ ಆದರೆ‌ ನೋಡಲು ಸಾಧ್ಯವಾಗದ ಸ್ಥಿತಿ, ತಲೆ ಇರುತ್ತದೆ ಬುದ್ದಿಯನ್ನು ಸರಿಯಾಗಿ‌ ಉಪಯೋಗಿಸಲಾಗದ ಪರಿಸ್ಥಿತಿ, ಇವೆಲ್ಲವೂ ಅನ್ವಯಿಸುವುದು ಬಸನಗೌಡ ಪಾಟೀಲ್‌ ಯತ್ನಾಳ್ ,‌ ಆರ್.‌ ಆಶೋಕ್, ಡಾ. ಅಶ್ವತ್‌ ನಾರಾಯಣ‌ ಹಾಗೂ ಬಿ.ಜೆ.ಪಿ ಕಣ್ಣು, ತಲೆ ಯಾವುದೂ ಸರಿಯಾಗಿ ಕನೆಕ್ಟ್ ಆಗದೆ‌ ಇರೋ ಪಂಡಿತ ಪುತ್ರರು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ…

Read More

ನವದೆಹಲಿ: ಪಿಎಫ್ ಖಾತೆದಾರರು ತಮ್ಮ ಯುಎಎನ್ ಸಂಖ್ಯೆಯನ್ನು ಆಧಾರ್ ನೊಂದಿಗೆ ಲಿಂಕ್ ಮಾಡಬೇಕಾಗುತ್ತದೆ. ಇಲ್ಲದಿದ್ದರೆ, ಪಿಎಫ್ ಮೊತ್ತವನ್ನು ಹಿಂಪಡೆಯುವಾಗ ಸಮಸ್ಯೆಗಳು ಉಂಟಾಗುತ್ತವೆ. ಸಾಮಾಜಿಕ ಭದ್ರತಾ ಸಂಹಿತೆ, 2020 ರ ಸೆಕ್ಷನ್ 142 ರ ಪ್ರಕಾರ, ಸಂಸ್ಥೆಯಲ್ಲಿ ಕೆಲಸ ಮಾಡುವ ನೌಕರರು ಮತ್ತು ಕಾರ್ಮಿಕರು ತಮ್ಮ ಆಧಾರ್ ಖಾತೆಯನ್ನು ಇಪಿಎಫ್ ಖಾತೆಯೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಲಿಂಕ್ ಪ್ರಕ್ರಿಯೆಯನ್ನು ಆನ್ಲೈನ್ ಅಥವಾ ಆಫ್ಲೈನ್ನಲ್ಲಿ ಮಾಡಬಹುದು. ಆನ್ ಲೈನ್ ನಲ್ಲಿ ಹೇಗೆ ಲಿಂಕ್ ಮಾಡುವುದು? EPFO ನ ಅಧಿಕೃತ ವೆಬ್ಸೈಟ್ಗೆ ಲಿಂಕ್ ಮಾಡಿ UAN, ಪಾಸ್ ವರ್ಡ್ ಬಳಸಿ ನಿಮ್ಮ ಖಾತೆಗೆ ಲಾಗ್ ಇನ್ ಮಾಡಿ. “Manage” ವಿಭಾಗಕ್ಕೆ ಹೋಗಿ ಮತ್ತು ಡ್ರಾಪ್-ಡೌನ್ ಮೆನುನಿಂದ “KYC” ಆಯ್ಕೆ ಮಾಡಿ. ಡಾಕ್ಯುಮೆಂಟ್ ಪ್ರಕಾರವಾಗಿ “ಆಧಾರ್” ಆಯ್ಕೆ ಮಾಡಿ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ. ವಿವರಗಳನ್ನು ಸಲ್ಲಿಸಲು “ಉಳಿಸು” ಬಟನ್ ಕ್ಲಿಕ್ ಮಾಡಿ. ಆಧಾರ್ ವಿವರಗಳನ್ನು ಇಪಿಎಫ್ಒ ಪರಿಶೀಲಿಸುತ್ತದೆ. ಇದರಿಂದ ಅದು ಸ್ವಯಂಚಾಲಿತವಾಗಿ ಯುಎಎನ್ ಗೆ ಲಿಂಕ್…

Read More

ಹಾಸನ : ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ದೂರು ನೀಡಲು ಎಸ್‌ ಐಟಿಯಿಂದ ಸಹಾಯವಾಣಿ ತೆರೆಯಲಾಗಿದ್ದು, ಈವರೆಗೆ ಇದಕ್ಕೆ 30 ಜನರು ಕರೆ ಮಾಡಿದ್ದಾರೆ ಎಂದು ಎಸ್‌ ಐಟಿ ಅಧಿಕಾರಿಗಳು ತಿಳಿಸಿದಾರೆ. ಎಸ್‌ ಐಟಿ ಸಹಾಯವಾಣಿ ಸಂಖ್ಯೆಗೆ ಯಾರು ಯಾರು ಕರೆ ಮಾಡಿದ್ದಾರೆ? ಅವರು ಏನು ಹೇಳಿದ್ದಾರೆ? ಈ ಕರೆಗಳು ಸಂತ್ರಸ್ತೆಯರಿಂದಲೇ ಬಂದಿವೆಯೇ ಎಂಬುದವರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಈ ನಡುವೆ ಸಹಾಯವಾಣಿ ಮೂಲಕ ದಾಖಲಾಗುವ ಹೇಳಿಕೆಗಳನ್ನೂ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಸ್‌ ಐಟಿ ಅಧಿಕಾರಿಗಳು ತಿಳಿಸಿದ್ದು, ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಇನ್ನು ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದ ನಂತರ ಜರ್ಮನಿಗೆ ಪಲಾಯನ ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳುವಂತೆ ವಿದೇಶಾಂಗ ಸಚಿವಾಲಯಕ್ಕೆ ಮನವಿ ಬಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಖಚಿತಪಡಿಸಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿರುವ 33…

Read More

ಬೆಂಗಳೂರು : ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು 2024-25ನೇ ಸಾಲಿನ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟಿ ಜಾತಿ ಅಭ್ಯರ್ಥಿಗಳಿಂದ ರಾಷ್ಟೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ (NOS)ಗೆ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪದವಿ. ಪಿಎಚ್‌ಡಿ ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿhttps://overseas.tribal.gov.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 31 ರಂದು ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ 8352276124 ಗೆ ಸಂಪರ್ಕಿಸಬಹುದಾಗಿ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ರಾಯಚೂರು : ಕೃಷ್ಣಾ ನದಿ ದಡದಲ್ಲಿ ಕುರಿ ಮೇಯಿಸುತ್ತಿದ್ದ ಬಾಲಕನನ್ನು ಮೊಸಳೆಯೊಂದು ಎಳೆದುಕೊಂಡು ಹೋಗಿರುವ ಘಟನೆ ರಾಯಚೂರು ತಾಲೂಕಿನ ಗಂಜಳ್ಳಿ ಗ್ರಾಮದಲ್ಲಿ ನಡೆದಿದೆ. ಬಾಲಕನ್ನು ಗಂಜಳ್ಳಿ ಗ್ರಾಮದ ವಿಶ್ವ (12) ಎಂದು ಗುರುತಿಸಲಾಗಿದ್ದು, ಕುರಿಗಳಿಗೆ ನೀರು ಕುಡಿಸಲು ಕೃಷ್ಣಾನದಿಗೆ ಹೋದಾಗ ಮೊಸಳೆ ದಾಳಿ ಮಾಡಿ ವಿಶ್ವನನ್ನು ಎಳೆದೊಯ್ದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್‌ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಬೋಟ್‌ ಹಾಕಿ ಬಾಲಕನಿಗಾಗಿ ಶೋಧ ಕಾರ್ಯ ನಡೆಸಿದೆ.

Read More

ಬೆಂಗಳೂರು : ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಕೊಠಡಿ ಒಳಗೆ ಗರ್ಭಿಣಿಯರನ್ನು ಹೊರತುಪಡಿಸಿ ಇತರೆ ಸಂಬಂಧಿಕರು ಹಾಗೂ ಹೆಚ್ಚುವರಿ ಮಾನಿಟರ್ ಅನ್ನು ನಿಷೇಧಿಸಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಗರ್ಭ ಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆಗೆ ಸಂಬಂಧಿಸಿದ ಕಾರ್ಯಗಾರದಲ್ಲಿ ರೆಡಿಯಾಲಜಿಸ್ಟ್, ಸೋನಾಲಜಿಸ್ಟ್ ಹಾಗೂ ಸ್ತ್ರೀ ರೋಗ ತಜ್ಞರು ಈ ಬಗ್ಗೆ ಚರ್ಚಿಸಿದ್ದರು. ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಕೊಠಡಿಯೊಳಗೆ ಗರ್ಭಿಣಿಯರ ಜೊತೆಗೆ ಇರುವ ಸಂಬಂಧಿಗಳು ಅಲ್ಟ್ರಾ ಸೌಂಡ್ ಕಾರ್ಯ ವಿಧಾನಗಳ ಫೋಟೋ ಹಾಗೂ ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅಲ್ಲದೆ ಕೆಲವರು ಈ ವಿಡಿಯೋ ಮತ್ತು ಫೋಟೋಗಳನ್ನ ಭ್ರೂಣಲಿಂಗ ಪತ್ತೆಗೆ ಬಳಸಿಕೊಳ್ಳುತ್ತಿರುವ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದರು. ಹೀಗಾಗಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.

Read More

ಬೆಂಗಳೂರು : 2024-25ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿಗೆ ಕ್ರಿಯಾ ಯೋಜನೆ ಸಲ್ಲಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿಗೆ ಸಂಬಂಧಿಸಿದಂತೆ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿಗಳಿಗೆ ಅನುಬಂಧ-1ರಲ್ಲಿ ಸಾಮಾನ್ಯ ಅನುಬಂಧ-2ರಲ್ಲಿ ಎಸ್.ಸಿ ಮತ್ತು ಅನುಬಂಧ-3ರಲ್ಲಿ ಎಸ್.ಟಿ ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾದ ಅನುದಾನಕ್ಕೆ ಕೆಳಕಂಡ ಷರತ್ತುಗಳನ್ವಯ ಲಗತ್ತಿಸಲಾದ ನಮೂನೆಯಲ್ಲಿ ಕ್ರಿಯಾಯೋಜನೆಯನ್ನು ದಿನಾಂಕ:28.05.2024 ಸಲ್ಲಿಸಲು ತಿಳಿಸಿದೆ. ಷರತ್ತುಗಳು: 1. 2024-25ನೇ ಸಾಲಿನ ಯು-ಡೈಸ್ ಮಾಹಿತಿ ಅನುಸಾರ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆಗಳಿಗೆ ಕೊಠಡಿ ದುರಸ್ಥಿ ಅವಶ್ಯಕತೆ ಇರುವ ಬಗ್ಗೆ ಖಾತ್ರಿಪಡಿಸಿಕೊಂಡು ಆದ್ಯತೆ ನೀಡಬೇಕು ಹಾಗೂ ಶಾಲಾ ಕೊಠಡಿ ದುರಸ್ಥಿ ಅವಶ್ಯಕತೆ ಇರುವ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪನಿರ್ದೇಶಕರು ಖಚಿತಪಡಿಸಿಕೊಂಡು ದೃಢೀಕರಿಸಿ ದಿನಾಂಕ:28.05.2024 ರೊಳಗೆ ಕ್ರಿಯಾ ಯೋಜನೆ ಸಲ್ಲಿಸುವುದು, 2. ಈಗಾಗಲೇ ಮಾನ್ಯ ಲೋಕಾಯುಕ್ತರು, ಜನಪ್ರತಿನಿಧಿಗಳು, ಎಸ್.ಡಿ.ಎಂ.ಸಿ…

Read More

ಬೆಂಗಳೂರು : ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (KPTCL) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿತ್ತು. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಇಂತಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಣೆ ಮಾಡಲಾಗಿದೆ.  ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್‌(ವಿದ್ಯುತ್‌), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು. ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ…

Read More

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆ/ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಸಲು ಉದ್ದೇಶಿಸಿರುವ ನೇಮಕಾತಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿ ಯರ್ ಮತ್ತು ಗ್ರೂಪ್ – ಸಿ 64 ಹುದ್ದೆಗಳಿಗೆ ಆ.11 ರಂದು, ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆ.1ರಂದು ಪರೀಕ್ಷೆ ನಡೆಯಲಿದೆ. 402 ಪಿಎಸ್‌ಐ ಹುದ್ದೆಗಳಿಗೆ ಸೆ.22ರಂದು ಮತ್ತು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅ.27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.

Read More

ಬೆಂಗಳೂರು : 2024ರ ಎಸ್. ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದಿನಾಂಕ:29.05.2024 ರಿಂದ 13.06.2024ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ನಡೆಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದ ಈ ಕಛೇರಿ ಜ್ಞಾಪನಾದಲ್ಲಿ 2024ರ ಮಾರ್ಚ್-ಏಪ್ರಿಲ್ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಹಾಗೂ ಸಿ ಮತ್ತು ಸಿ+ ಶ್ರೇಣಿ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ದಿನಾಂಕ: 14.06.2024 ರಿಂದ ಪ್ರಾರಂಭವಾಗುವ 20240 ໖. ಲ್.ಎಲ್.ಸಿ.ಪರೀಕ್ಷೆ-2 ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ: 29.05.2024 ರಿಂದ 13.06.2024ರವರೆಗೆ ನಡೆಸಲು ಸೂಚನೆ ನೀಡಲಾಗಿದೆ. ಸದರಿ ತರಗತಿಗಳನ್ನು ನಡೆಸಲು ಈ ಕೆಳಗಿನ ಸೂಚನೆಗಳನ್ನು ಪಾಲಿಸಲು ತಿಳಿಸಿದೆ. 1. ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಎಸ್. ಎಸ್.ಎಲ್.ಸಿ. ಪರೀಕ್ಷೆ-2 ತೆಗೆದುಕೊಳ್ಳಲು ಕಡ್ಡಾಯವಾಗಿ ನೊಂದಾಯಿಸಲು ಕ್ರಮವಹಿಸುವುದು. 2. 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1 ರಲ್ಲಿ c, c+. ಶ್ರೇಣಿ…

Read More