Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು. ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು. ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ…
ಮೈಸೂರು : ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಬಡ ಕುಟುಂಬಗಳ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷಿö್ಮ ಯೋಜನೆಯನ್ನು ಜಾರಿಗೆ ತಂದು, ಸಂಕಷ್ಟದಲ್ಲಿದ್ದವರಿಗೆ ನೆರವಾಗುವುದು, ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಯೋಜನೆಯ ಆಶಯವಾಗಿದ್ದು, ಮಹಿಳಾ ಕೂಲಿ ಕಾರ್ಮಿಕರು, ಬಡ ಕುಟುಂಬದ ಮಹಿಳೆಯರಿಗೆ ರಾಜ್ಯ ಸರ್ಕಾರದ ಗೃಹಲಕ್ಷ್ಮಿಯೋಜನೆಯು ಆಸರೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವ ಕ್ಷೇತ್ರ ವರುಣಾ ವಿಧಾನಸಭಾ ಕ್ಷೇತ್ರಕ್ಕೆಸೇರಿದ ರಾಂಪುರದಲ್ಲಿ ಮಹಿಳೆಯೊಬ್ಬರು ತಮ್ಮ ಖಾತೆಗೆ ಬಂದಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಳಸಿಕೊಂಡು ಶೌಚಾಲಯ ನಿರ್ಮಿಸಿಕೊಂಡಿದ್ದಾರೆ. ಹೌದು, ಗ್ರಾಮದ ನಿವಾಸಿ ಮಂಜುಳಾ ಎಂಬುವರು ಟೈಲರಿಂಗ್ ವೃತ್ತಿ ಮಾಡಿ ಕೊಂಡಿದ್ದು, ಹೊಲಿಗೆ ಯಂತ್ರ ಖರೀದಿ ಸುವ ಉದ್ದೇಶದಿಂದ ಪ್ರತಿ ತಿಂಗಳು ಬರುತ್ತಿದ್ದ 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಶೌಚಾಲಯ ನಿರ್ಮಿಸಿಕೊಂಡಿದ್ದಾರೆ. ಡಿಸೆಂಬರ್‌ನಲ್ಲಿ ಗ್ರಾಮದಲ್ಲಿ ನಡೆದ ಶೌಚಾಲಯ ಬಳಕೆ ಜಾಗೃತಿ ಜಾಥಾವು ಸ್ವಂತಕ್ಕೆ ಶೌಚಗೃಹ ಕಟ್ಟಿಸಿಕೊಳ್ಳಲು ಪ್ರೇರಣೆಯಾಯಿತು ಎಂದು ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾವು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದಂತ ಡಾ.ಶಿವ ಶಂಕರ್.ಎನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಕೂಡಲೇ ಜಾರಿಗೆ ಬರುವಂತೆ ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್, ಬೆಂಗಳೂರು ಇದರ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಮಹಾಂತೇಶ್ ಬಿಳಗಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಹಾಂತೇಶ್ ಬಿಳಗಿ ಅವರನ್ನು ಬಿಇಎಸ್ ಸಿ ಎಲ್ ನ ಎಂಡಿ ಹುದ್ದೆಯಿಂದ ವರ್ಗಾವಣೆ ಮಾಡಿ ಮ್ಯಾನೇಜಿಂಗ್ ಡೈರೆಕ್ಟರ್, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್, ಬೆಂಗಳೂರು ಇಲ್ಲಿಗೆ ನೇಮಿಸಲಾಗಿದೆ. ಇಲ್ಲಿದ್ದಂತ ಜಯವಿಭವಸ್ವಾಮಿ ಅವರನ್ನು ವರ್ಗಾವಣೆ ಮಾಡಿದೆ. ಧಾರವಾಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪಾ ಟಿ.ಕೆ., ಐಎಎಸ್ (ಕೆಎನ್: 2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ…
ಬೆಂಗಳೂರು :ಜನವರಿ 26 ರ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ. ಮುಂದುವರೆದು, ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.
ಬೆಂಗಳೂರು : ಬೆನ್ನು ನೋವಿನಿಂದ ಬಳಲುತ್ತಿದ್ದ ನಟ ದರ್ಶನ್ ಗೆ ಸದ್ಯಕ್ಕೆ ಆಪರೇಷನ್ ಮಾಡಲಾಗುವುದಿಲ್ಲ. ಅವರಿಗೆ ಕೊಟ್ಟ ಎಪಿಡೂರಲ್ ಇಂಜಕ್ಷನ್ ವರ್ಕ್ ಆಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದ ದರ್ಶನ್ ಅವರಿಗೆ ಸರ್ಜರಿ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಕಳೆದ ವಾರ ಕೊಟ್ಟ ಎಪಿಡೂರಲ್ ಇಂಜಕ್ಷನ್ ವರ್ಕ್ ಆಗಿದ್ದು, ದರ್ಶನ್ ಬೆನ್ನು ನೋವಿನಲ್ಲಿ ಸಾಕಷ್ಟು ಸುಧಾರಣೆಯಾಗಿದ್ದು, ಸದ್ಯಕ್ಕೆ ಬೆನ್ನು ನೋವಿನ ಆಪರೇಷನ್ ಬೇಡ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ಬೆನ್ನು ನೋವಿನ ಹಿನ್ನೆಲೆಯಲ್ಲಿ ನಟ ದರ್ಶನ್ ಗೆ ಈಗಾಗಲೇ ಹಲವು ಟೆಸ್ಟ್ ಗಳನ್ನು ನಡೆಸಲಾಗಿದ್ದು, ಬೆನ್ನು ನೋವಿಗೆ ಆಪರೇಷನ್ ಮಾಡಲೇಬೇಕು ಎಂದು ನಿರ್ಧರಿಸಲಾಗಿತ್ತು. ಆದರೆ ಇದೀಗ ನಟ ದರ್ಶನ್ ಇಂಜಕ್ಷನ್ ನೀಡಿದ್ದು, ವರ್ಕ್ ಆಗಿದೆ ಹೀಗಾಗಿ ಸದ್ಯಕ್ಕೆ ಆಪರೇಷನ್ ಮಾಡದಿರಲು ವೈದ್ಯರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ರಾಯಚೂರು : ಮೈಕ್ರೋ ಫೈನಾನ್ಸ್ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಹೊಸ ಪ್ಲಾನ್ ಮಾಡಿದೆ. ಹೌದು, ಮೈಕ್ರೋ ಫೈನಾನ್ಸ್ ಗಳ ಕಡಿವಾಣಕ್ಕೆ ಹೊಸ ಪ್ಲಾನ್ ಮಾಡಿರುವ ರಾಜ್ಯ ಸರ್ಕಾರವು ರಾಜ್ಯದಲ್ಲಿ ಕ್ರೇಡಿಡ್ ಕೋ ಆಪರೇಟಿವ್ ಸೊಸೈಟ್ ಸ್ಥಾಪನೆ ಮಾಡಿ. ಕಡಿಮೆ ಬಡ್ಡಿದರದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಳ ನೀಡುವ ಯೋಜನೆ ಜಾರಿಗೆ ತರಲು ಮುಂದಾಗಿದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ನೀಡುವ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದ್ದು, ರಾಜಸ್ಥಾನ, ತೆಲಂಗಾಣದಲ್ಲಿ ಈ ಬಗ್ಗೆ ಅಧ್ಯಯನ ನಡೆಸಲಾಗಿದೆ. ಅಧಿಕಾರಿಗಳು ಅಧ್ಯಯನ ನಡೆಸಿ ಕಾರ್ಯರೂಪಕ್ಕೆ ತರಲಿದ್ದಾರೆ. ಹಣಕಾಸು ಇಲಾಖೆ ಜೊತೆಗೆ ಸಭೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇಂದು `CM ಸಿದ್ದರಾಮಯ್ಯ’ ನೇತೃತ್ವದಲ್ಲಿ ಮಹತ್ವದ ಸಭೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಹಲವು ಜಿಲ್ಲೆಗಳಲ್ಲಿ ಜನರು…
ಮಂಡ್ಯ : ರಾಜ್ಯದಲ್ಲಿ ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿಯಾಗಿದ್ದು, ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದಲ್ಲಿ ಯುವಕನೊಬ್ಬ ಖಾಸಗಿ ವ್ಯಕ್ತಿಗಳಿಂದ 30 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗಿದ್ದು, ಬಳಿಕ ಸಾಲಗಾರರ ಕಿರುಕುಳದಿಂದ ನೊಂದು ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಮಾಡಲಾಗಿದೆ. ವಳಗೆರೆ ಮೆಣಸ ಗ್ರಾಮದ ನವೀನ್ ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಯಚೂರು : ಮೈಕ್ರೋ ಫೈನಾನ್ಸ್ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಹೊಸ ಪ್ಲಾನ್ ಮಾಡಿದೆ. ಹೌದು, ಮೈಕ್ರೋ ಫೈನಾನ್ಸ್ ಗಳ ಕಡಿವಾಣಕ್ಕೆ ಹೊಸ ಪ್ಲಾನ್ ಮಾಡಿರುವ ರಾಜ್ಯ ಸರ್ಕಾರವು ರಾಜ್ಯದಲ್ಲಿ ಕ್ರೇಡಿಡ್ ಕೋ ಆಪರೇಟಿವ್ ಸೊಸೈಟ್ ಸ್ಥಾಪನೆ ಮಾಡಿ. ಕಡಿಮೆ ಬಡ್ಡಿದರದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಳ ನೀಡುವ ಯೋಜನೆ ಜಾರಿಗೆ ತರಲು ಮುಂದಾಗಿದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ನೀಡುವ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದ್ದು, ರಾಜಸ್ಥಾನ, ತೆಲಂಗಾಣದಲ್ಲಿ ಈ ಬಗ್ಗೆ ಅಧ್ಯಯನ ನಡೆಸಲಾಗಿದೆ. ಅಧಿಕಾರಿಗಳು ಅಧ್ಯಯನ ನಡೆಸಿ ಕಾರ್ಯರೂಪಕ್ಕೆ ತರಲಿದ್ದಾರೆ. ಹಣಕಾಸು ಇಲಾಖೆ ಜೊತೆಗೆ ಸಭೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇಂದು ಬೆಳಗ್ಗೆ 11 ಗಂಟೆ `CM ಸಿದ್ದರಾಮಯ್ಯ’ ನೇತೃತ್ವದಲ್ಲಿ ಮಹತ್ವದ ಸಭೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು…
ನವದೆಹಲಿ : ಭಾರತದಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳು ಮತ್ತು ಪ್ಯಾಕೇಜಿಂಗ್‌ನ ಪ್ರತಿಯೊಬ್ಬ ತಯಾರಕರು, ಬ್ರಾಂಡ್ ಮಾಲೀಕರು ಜುಲೈ 1 ರಿಂದ ಪ್ಯಾಕೇಜಿಂಗ್‌ನಲ್ಲಿ ಪ್ಲಾಸ್ಟಿಕ್ ದಪ್ಪ ಮತ್ತು ತಯಾರಕರ ಹೆಸರು ಸೇರಿದಂತೆ ಎಲ್ಲಾ ವಿವರಗಳನ್ನು ಪ್ಯಾಕೇಜಿಂಗ್‌ನಲ್ಲಿ ಒದಗಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ, ಈ ವಾರ ಪರಿಸರ ಸಚಿವಾಲಯವು ಸೂಚಿಸಿರುವ ಹೊಸ ನಿಯಮಗಳು, ಪ್ಲಾಸ್ಟಿಕ್ ನಿರ್ವಹಣಾ ನಿಯಮಗಳು, 2016 ರ ಅಡಿಯಲ್ಲಿ 120 ಮೈಕ್ರಾನ್‌ಗಿಂತ ಕಡಿಮೆ ದಪ್ಪವಿರುವ ನಿಷೇಧಿತ ಕ್ಯಾರಿ ಬ್ಯಾಗ್‌ಗಳ ಕಟ್ಟುನಿಟ್ಟಿನ ಮೇಲ್ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ. ದೇಶದಲ್ಲಿ ಪರಿಸರ ಸ್ನೇಹಿ ಪ್ಲಾಸ್ಟಿಕ್ ನಿರ್ವಹಣೆಗೆ ಕಾನೂನು ಚೌಕಟ್ಟನ್ನು TOP ನಿಯಮಗಳು ಒದಗಿಸುತ್ತವೆ. ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ ಕಡಿಮೆ ಉಪಯುಕ್ತತೆ ಮತ್ತು ಹೆಚ್ಚಿನ ಕಸ ಎಸೆಯುವ ಸಾಮರ್ಥ್ಯವನ್ನು ಹೊಂದಿರುವ ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಜುಲೈ 1, 2022 ರಿಂದ ನಿಷೇಧಿಸುವ ಪರಿಷ್ಕೃತ ನಿಯಮಗಳನ್ನು ಸಚಿವಾಲಯವು 2021 ರಲ್ಲಿ ಸೂಚಿಸಿತ್ತು. ತಿದ್ದುಪಡಿ ಮಾಡಿದ ನಿಯಮಗಳು ಡಿಸೆಂಬರ್ 31, 2022 ರಿಂದ 120 ಮೈಕ್ರಾನ್‌ಗಳಿಗಿಂತ ಕಡಿಮೆ…
ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಮನೆ ಅಡುಗೆಗಿಂತ ರೆಸ್ಟೋರೆಂಟ್ ಆಹಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಬೆಲೆಗಳು ಹೆಚ್ಚಿದ್ದರೂ, ಜನರು ಅಲ್ಲಿ ತಿನ್ನಲು ಆಸಕ್ತಿ ಹೊಂದಿದ್ದಾರೆ. ಇನ್ನು ಕೆಲವರು ಆಹಾರವನ್ನು ಆರ್ಡರ್ ಮಾಡಿ ವಿತರಣೆ ಮಾಡುತ್ತಿದ್ದಾರೆ. ಸಾವಿರಾರು ಬಿಲ್‌ಗಳು ಬರುತ್ತವೆ ಎಂಬ ಆಲೋಚನೆಯ ಹೊರತಾಗಿಯೂ, ಕೆಲವರು ಇನ್ನೂ ಐಷಾರಾಮಿ ಆನಂದಿಸಲು ಮತ್ತು ಹೊರಗೆ ಊಟ ಮಾಡಲು ಹೋಗುತ್ತಿದ್ದಾರೆ. ಆದಾಗ್ಯೂ, ದೆಹಲಿಯ ಲಜಪತ್ ನಗರದಲ್ಲಿರುವ ಲಜೀಜ್ ರೆಸ್ಟೋರೆಂಟ್ & ಹೋಟೆಲ್ ಡಿಸೆಂಬರ್ 20, 1985 ರ ದಿನಾಂಕದ ಬಿಲ್ ಅನ್ನು ಹಂಚಿಕೊಂಡಾಗ, ಅದನ್ನು ನೋಡಿದ ಎಲ್ಲರೂ ಶಾಕ್ ಆಗಿದ್ದಾರೆ. ಆಗಸ್ಟ್ 12, 2013 ರಂದು ಫೇಸ್‌ಬುಕ್‌ನಲ್ಲಿ ಮೂಲತಃ ಹಂಚಿಕೊಳ್ಳಲಾದ ಈ ಪೋಸ್ಟ್ ಈಗ ಮತ್ತೆ ವೈರಲ್ ಆಗಿದೆ. ದೆಹಲಿಯ ಲಜಪತ್ ನಗರ ಪ್ರದೇಶದಲ್ಲಿರುವ ಲಜೀಜ್ ರೆಸ್ಟೋರೆಂಟ್ ಮತ್ತು ಹೋಟೆಲ್, ಡಿಸೆಂಬರ್ 20, 1985 ರ ಬಿಲ್ ಅನ್ನು ಹಂಚಿಕೊಂಡಿದೆ. ಗ್ರಾಹಕರು ಬಿಲ್‌ನಲ್ಲಿ ತೋರಿಸಿರುವಂತೆ ಶಾಹಿ ಪನೀರ್, ದಾಲ್ ಮಖ್ನಿ, ರೈತಾ ಮತ್ತು ಕೆಲವು ಚಪಾತಿಗಳ…