Author: kannadanewsnow57

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪು ಈಗಾಗಲೇ ತಿರುಪತಿ ತಿರುಮಲ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ತಯಾರಿಕೆಗೆ ಸರಬರಾಜು ಆಗುತ್ತಿದೆ. ಈಗ ದೆಹಲಿಗೂ ಕರುನಾಡಿನ ಹೆಮ್ಮೆಯ ನಂದಿನಿ ಕಾಲಿಡುತ್ತಿದೆ. ಇದೇ ನವೆಂಬರ್ 21 ರಂದು ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆಗೊಳ್ಳಲಿದೆ. ದೆಹಲಿಯಲ್ಲಿ ಕೆಎಂಎಫ್ ಔಟ್‍ಲೆಟ್‍ಗೆ ಸಿಎಂ ಸಿದ್ದರಾಮಯ್ಯ ಚಾಲನೆ ಕೊಡಲಿದ್ದಾರೆ. ಆರಂಭಿಕ ಹಂತದಲ್ಲಿ ನಿತ್ಯ 1 ಲಕ್ಷ ಲೀಟರ್ ಹಾಲನ್ನು ದೆಹಲಿಗೆ ಪೂರೈಸಲು ಕೆಎಂಎಫ್ ಮುಂದಾಗಿದೆ. ಹಸುವಿನ ಹಾಲು ಪೂರೈಸುವಂತೆ ಕೆಎಂಎಫ್‍ಗೆ ದೆಹಲಿ ಸರ್ಕಾರ ಮನವಿ ಮಾಡಿತ್ತು. ಈ ಸಂಬಂಧ ಕಳೆದ ನಾಲ್ಕೈದು ತಿಂಗಳಿಂದ ದೆಹಲಿ ಸರ್ಕಾರದ ಜೊತೆ ಕೆಎಂಎಫ್ ಮಾತುಕತೆ ನಡೆಸುತ್ತಿತ್ತು. ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳನ್ನು ಈಗಾಗಲೇ ವಿವಿಧ ರಾಜ್ಯಗಳಲ್ಲಿ ಮಾರಾಟವಾಗುತ್ತಿವೆ. ಕರ್ನಾಟಕದ ಜಿಲ್ಲೆ, ತಾಲ್ಲೂಕು ವಿಭಾಗದಲ್ಲೂ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಗಳಿದ್ದಾವೆ. ಈಗ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಓಪನ್ ಆಗಲಿದೆ. ಈ ಮೂಲಕ ದೆಹಲಿಯಲ್ಲೂ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಲಭ್ಯವಾಗುವಂತೆ ಆಗಲಿದೆ.!

Read More

ನವದೆಹಲಿ : ರಾಜಧಾನಿ ದೆಹಲಿ ಸೇರಿದಂತೆ ದೇಶದ ಅನೇಕ ನಗರಗಳಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು, ಆರೋಗ್ಯ ಸಚಿವಾಲಯವು ಅದರ ಗಂಭೀರ ಆರೋಗ್ಯ ಪರಿಣಾಮಗಳನ್ನು ತಪ್ಪಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದೆ. ಪತ್ರವನ್ನು ನೀಡುವಾಗ, ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಪುಣ್ಯ ಸಲಿಲ ಶ್ರೀವಾಸ್ತವ, ದೇಶದಲ್ಲಿ ವಾಯುಮಾಲಿನ್ಯದಿಂದ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ವಾಯುಮಾಲಿನ್ಯವು ಅನೇಕ ಗಂಭೀರ ಸಮಸ್ಯೆಗಳನ್ನು ಹುಟ್ಟುಹಾಕಿದೆ ಎಂದು ಪತ್ರದಲ್ಲಿ ಹೇಳಲಾಗಿದೆ, ಚಳಿಗಾಲದಲ್ಲಿ, ದೇಶದಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕವು ಸಾಮಾನ್ಯವಾಗಿ ಕಳಪೆ ಮಟ್ಟಕ್ಕೆ ತಲುಪುತ್ತದೆ. ಇದು ಉಸಿರಾಟ, ಹೃದಯ ಮತ್ತು ಮೆದುಳಿನ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಕಾಯಿಲೆಗಳಿಗೆ ಕಾರಣವಾಗಬಹುದು. ಸಚಿವಾಲಯದ ಮಾರ್ಗಸೂಚಿಗಳು ಆರೋಗ್ಯ ಸೇವೆಗಳ ಮಹಾನಿರ್ದೇಶಕ ಅತುಲ್ ಗೋಯಲ್ ಅವರು ಹೊರಡಿಸಿದ ಪತ್ರದಲ್ಲಿ, ಸಾರ್ವಜನಿಕ ಜಾಗೃತಿ ಅಭಿಯಾನಗಳನ್ನು ತೀವ್ರಗೊಳಿಸಲು, ಆರೋಗ್ಯ ಕಾರ್ಯಕರ್ತರ ಸಾಮರ್ಥ್ಯವನ್ನು ಬಲಪಡಿಸಲು ಮತ್ತು ವಾಯು ಮಾಲಿನ್ಯಕ್ಕೆ ಸಂಬಂಧಿಸಿದ ರೋಗಗಳ ಕಣ್ಗಾವಲು ವ್ಯವಸ್ಥೆಯಲ್ಲಿ ಭಾಗವಹಿಸುವಿಕೆಯನ್ನು…

Read More

ಬೈಕ್ ಚಾಲನೆ ಮಾಡುವಾಗ ತುಂಬ ಜನರು ಮೊಬೈಲ್ ಬಳಸುತ್ತಾರೆ. ಆದರೆ ಕೆಲವೊಂದು ಸಣ್ಣ ಅಜಾಗುರೂಕತೆ ಅಪಘಾತಕ್ಕೆ ಕಾರಣವಾಗಬಹುದು. ಸ್ಕೂಟರ್ ಚಾಲಕರೊಬ್ಬರು ಇದೇ ರೀತಿಯ ಕೆಲಸವನ್ನು ಮಾಡುತ್ತಿರುವ ವೀಡಿಯೊ ವೈರಲ್ ಆಗಿದೆ. ಮೊಬೈಲ್ ನಲ್ಲಿ ಮಾತನಾಡುತ್ತ ಬೈಕ್ ಚಾಲನೆ ಮಾಡುತ್ತಿದ್ದ ಸವಾರ ಎದುರಿನಿಂದ ಬರುತ್ತಿದ್ದ ಕಾರಿಗೆ ಸ್ಕೂಟರ್ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಈ ಘಟನೆಯು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಇದು ವ್ಯಕ್ತಿಯು ತನ್ನ ಫೋನ್‌ನಲ್ಲಿ ನಿರತನಾಗಿದ್ದರಿಂದ ಬಲ ತಿರುವು ತೆಗೆದುಕೊಳ್ಳಲು ತಡಮಾಡಿದ್ದಾನೆ ಎಂದು ತೋರಿಸಿದೆ. https://twitter.com/i/status/1856988671867801801 ವೀಡಿಯೋ ಶೇರ್ ಆದ ಬಳಿಕ ಹಲವರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಹೆಚ್ಚಿನ ಜನರು ವ್ಯಕ್ತಿಯ ಅಸಡ್ಡೆಯನ್ನು ಖಂಡಿಸಿದರು, ಇತರರು ಮೊಬೈಲ್ ಫೋನ್‌ಗಳ ಇಂತಹ ಅಸಡ್ಡೆ ಬಳಕೆ ಸಾಮಾನ್ಯವಾಗಿದೆ ಎಂದು ಹೇಳಿದರು. ಈ ಘಟನೆ ಸ್ಕೂಟರ್ ಸವಾರರಿಗೆ ಪಾಠ ಎಂದು ಹಲವರು ಬಣ್ಣಿಸಿದ್ದಾರೆ.

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 6 ಜನ ಬಾಂಗ್ಲಾ ನುಸುಳುಕೋರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ನಗರದಲ್ಲಿ ಖಾಸಗಿ ಗಾರ್ಮೆಂಟ್ಸ್‌ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಬಾಂಗ್ಲಾ ನುಸುಳುಕೋರರು ಪತ್ತೆಯಾಗಿದ್ದು, ಸದ್ಯ ಆರು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿತ್ರದುರ್ಗ ಡಿವೈಎಸ್ಪಿ ದಿನಕರ್, ಸಿಪಿಐ ಗುಡ್ಡಪ್ಪ, ವೆಂಕಟೇಶ ನೇತೃತ್ವದಲ್ಲಿ ದಾಳಿ ನಡೆದಿದೆ. ಬಳಿಕ ಪೊಲೀಸರು ಪರಿಶೀಲನೆ ಮುಂದುವರಿಸಿ, 15 ಜನ ಶಂಕಿತ ಬಾಂಗ್ಲಾ ನುಸುಳುಕೋರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

Read More

ನವದೆಹಲಿ : ಕೇಂದ್ರ ಸರ್ಕಾರವು 2025 ನೇ ಸಾಲಿನ ಗೆಜೆಟೆಡ್ ಮತ್ತು ನಿರ್ಬಂಧಿತ ರಜಾದಿನಗಳ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವಾರ್ಷಿಕ ಪ್ರಕಟಣೆಯು ಸಾರ್ವಜನಿಕ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಮುಂಬರುವ ವರ್ಷಕ್ಕೆ ತಮ್ಮ ವೇಳಾಪಟ್ಟಿಗಳನ್ನು ಯೋಜಿಸುವವರಿಗೆ ಸಹಾಯಕಾರಿಯಾಗಲಿದೆ. ಗೆಜೆಟೆಡ್ ರಜಾದಿನಗಳ ಪಟ್ಟಿ ಹೀಗಿದೆ ಗಣರಾಜ್ಯೋತ್ಸವ ಜನವರಿ 26 ಭಾನುವಾರ ಮಹಾ ಶಿವರಾತ್ರಿ, ಫೆಬ್ರವರಿ 26, ಬುಧವಾರ ಹೋಳಿ, ಮಾರ್ಚ್ 14, ಶುಕ್ರವಾರ ಈದ್-ಉಲ್-ಫಿತರ್, ಮಾರ್ಚ್ 31, ಸೋಮವಾರ ಮಹಾವೀರ ಜಯಂತಿ: ಏಪ್ರಿಲ್ 10, ಗುರುವಾರ ಗುಡ್ ಫ್ರೈಡೆ ಏಪ್ರಿಲ್ 18 ಶುಕ್ರವಾರ ಬುದ್ಧ ಪೂರ್ಣಿಮಾ ಮೇ 12 ಸೋಮವಾರ ಈದ್-ಉಲ್-ಜುಹಾ (ಬಕ್ರೀದ್) ಜೂನ್ 7, ಶನಿವಾರ ಮೊಹರಂ, ಜುಲೈ 6, ಭಾನುವಾರ ಸ್ವಾತಂತ್ರ್ಯ ದಿನ: ಆಗಸ್ಟ್ 15, ಶುಕ್ರವಾರ ಜನ್ಮಾಷ್ಟಮಿ ಆಗಸ್ಟ್ 16 ಶನಿವಾರ ಮಿಲಾದ್-ಉನ್-ನಬಿ (ಈದ್-ಎ-ಮಿಲಾದ್) ಸೆಪ್ಟೆಂಬರ್ 5 ಶುಕ್ರವಾರ ಮಹಾತ್ಮ ಗಾಂಧಿಯವರ ಜನ್ಮದಿನ ಅಕ್ಟೋಬರ್ 2, ಗುರುವಾರ ದಸರಾ ಅಕ್ಟೋಬರ್ 2 ಗುರುವಾರ ದೀಪಾವಳಿ (ದೀಪಾವಳಿ)…

Read More

ನವದೆಹಲಿ : ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆ ಮತ್ತು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು ಖಾಲಿ ಇರುವ ಇನ್‌ಸ್ಪೆಕ್ಟರ್, ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು ಪೋಸ್ಟ್ ವಿವರಗಳು, ವೇತನ ಶ್ರೇಣಿ, ವಯಸ್ಸಿನ ಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದಿರಬೇಕು. ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ಆಸಕ್ತಿ ಹೊಂದಿರುವ ಪಿಯುಸಿ ಮತ್ತು ಪದವೀಧರ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ. ರಾಷ್ಟ್ರೀಯ ತನಿಖಾ ಸಂಸ್ಥೆಯು ಹೆಡ್ ಕಾನ್‌ಸ್ಟೆಬಲ್ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 164 ಹುದ್ದೆಗಳು ಖಾಲಿಯಿದ್ದು, ಅರ್ಹತಾ ಮಾನದಂಡಗಳನ್ನು ಪರಿಗಣಿಸಿ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪೋಸ್ಟ್‌ಗಳ ವಿವರಗಳು ಸಂಸ್ಥೆಯ ಹೆಸರು: ರಾಷ್ಟ್ರೀಯ ತನಿಖಾ ಸಂಸ್ಥೆ ಹುದ್ದೆಗಳು: ಇನ್‌ಸ್ಪೆಕ್ಟರ್, ಹೆಡ್ ಕಾನ್ಸ್‌ಟೇಬಲ್, ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್, ಹೆಡ್…

Read More

ಬೆಂಗಳೂರು : ಸರ್ಜರಿಗಳ ಕುರಿತು ಆತಂಕದಲ್ಲಿ ಇರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವತ್ತ ನೂತನ ಕಾರ್ಯಕ್ರಮ ಜಾರಿಗೆ ತರಲಾಗಿದೆ. ಹೌದು, ಆರೋಗ್ಯ ಇಲಾಖೆ ಶಸ್ತ್ರಚಿಕಿತ್ಸೆಗಳ ಕುರಿತು ಉಚಿತವಾಗಿ ಎರಡನೇ ವೈದ್ಯಕೀಯ ಅಭಿಪ್ರಾಯ ಪಡೆಯಲು ವೇದಿಕೆ ಕಲ್ಪಿಸಿದೆ ಸರ್ಜರಿ ಅವಶ್ಯಕತೆ ಇದೆಯೋ, ಇಲ್ಲವೋ ಹಾಗೂ ಪರ್ಯಾಯ ಚಿಕಿತ್ಸಾ ವಿಧಾನಗಳು ಏನು? ಎಂಬುದರ ಬಗ್ಗೆ ಸಿಗಲಿದೆ ತಜ್ಞ ವೈದ್ಯರು ಸಲಹೆ ನೀಡಲಿದ್ದಾರೆ. 1800 4258 330 ಸಹಾಯವಾಣಿಗೆ ಕರೆ ಮಾಡಿ ತಜ್ಞ ವೈದ್ಯರ ಸಲಹೆ ಪಡೆಯಬಹುದು. ಆರೋಗ್ಯ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ವತಿಯಿಂದ ದಿನದ 24/7 ಗಂಟೆ ಕಾರ್ಯ ನಿರ್ವಹಿಸುವ ಸಹಾಯವಾಣಿಯಾಗಿದೆ. ನೂತನ ಕಾರ್ಯಕ್ರಮಕ್ಕೆ ಇಂದು ಸಂಜೆ 4 ಗಂಟೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಲಿದ್ದಾರೆ. ಪ್ರಾಥಮಿಕ ಹಂತದಲ್ಲಿ TKR/THR ಚಿಕಿತ್ಸಾ ವಿಧಾನಗಳಿಗೆ ಎರಡನೇ ವೈದ್ಯಕೀಯ ಅಭಿಪ್ರಾಯ ಲಭ್ಯವಿದೆ. ಮೊಣಕಾಲು ಕೀಲು ಬದಲಿ, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳು ಹಾಗೂ…

Read More

ಬೆಂಗಳೂರು:  ಕಬ್ಬಿನಾಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹದಳ ನಡೆಸಿದ ಎನ್ಕೌಂಟರ್ ನಲ್ಲಿ ಕಬ್ಬಿನಾಲೆ ಮೂಲದ ನಕ್ಸಲ್ ನಾಯಕ ಪ್ರೀತಂ ಗೌಡ ಮೃತಪಟ್ಟಿರುವುದಾಗಿ ವರದಿಯಾಗಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಇತ್ತೀಚೆಗೆ ಚಿಕ್ಕಮಗಳೂರು ಭಾಗದಲ್ಲಿ ಮುಂಡಗಾರು ಲತಾ ನೇತೃತ್ವದ ನಕ್ಸಲರ ತಂಡ ಓಡಾಡಿದ ಬಗ್ಗೆ ಮಾಹಿತಿ ಗೊತ್ತಾಗಿದ್ದು, ಎಎನ್ಎಫ್, ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಿದ್ದರು. ಎಎನ್ಎಫ್ ತಂಡದ ಕೂಂಬಿಂಗ್ ವೇಳೆ ವಿಕ್ರಂ ಗೌಡ ನೇತೃತ್ವದ ನಕ್ಸಲರ ತಂಡ ಮುಖಾಮುಖಿಯಾಗಿದ್ದು, ಗುಂಡಿನ ಚಕುಮತಿಯಲ್ಲಿ ವಿಕ್ರಂ ಗೌಡ ಮೃತಪಟ್ಟಿರುವುದಾಗಿ ವರದಿಯಾಗಿದೆ. ನಕ್ಸಲರ ನೇತ್ರಾವತಿ ದಳದ ನಾಯಕ ವಿಕ್ರಂ ಗೌಡ. ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಪೀತೆಬೈಲ್ ಅರಣ್ಯ ಪ್ರದೇಶದ ಗ್ರಾಮದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಹತನಾಗಿದ್ದಾನೆ. ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು.

Read More

ಬೆಂಗಳೂರು: ಅಕಾಡೆಮಿಗಳು, ಪ್ರಾಧಿಕಾರದಿಂದ ಪ್ರಕಟಿಸುವ ಪುಸ್ತಕಗಳನ್ನು ಶೇಕಡ 50 ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಾವೇರಿ ಜಿಲ್ಲೆ ಬಂಕಾಪುರದಲ್ಲಿ ಕನಕದಾಸರು ನೆಲೆಸಿದ್ದ ಸ್ಥಳ ಅಭಿವೃದ್ಧಿ ಪಡಿಸಬೇಕು. ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮಾಡುವುದಕ್ಕೆ ಒಪ್ಪಿಗೆ ನೀಡುವಂತೆ ಸಂಘಟಕರು ವೇದಿಕೆಯಲ್ಲಿ ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಎರಡು ಕಾರ್ಯಕ್ರಮಗಳ ಜಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಮತ್ತು ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಶರಣ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿರುವವರನ್ನು ಪ್ರೋತ್ಸಾಹಿಸುವುದು ಬಹಳ ಮುಖ್ಯ. ಬಸವಾದಿ ಶರಣರ ವಿಚಾರಗಳು ಇಡೀ ಜಗತ್ತಿಗೆ ತಲುಪಬೇಕು. ನಮಗೆ ಮಾತ್ರ ಸೀಮಿತವಾಗಿ ತಲುಪಿದರೆ ಸಾಲುವುದಿಲ್ಲ. ಬಸವಾದಿ ಶರಣರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವವನ್ನು ಸಲ್ಲಿಸಿದಂತಾಗುತ್ತದೆ. ಸಮಾಜಕ್ಕೆ…

Read More

ಬೆಂಗಳೂರು: ಉಡುಪಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಪೊಲೀಸರು ಹಾಗೂ ಎಎನ್ಎಫ್ ತಂಡ ತೀವ್ರಗೊಳಿಸಿತ್ತು. ನಿನ್ನೆ ರಾತ್ರಿ ಎಎನ್ಎಫ್ ನಡೆಸಿದ ಎನ್ಕೌಂಟರ್ ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಇತ್ತೀಚೆಗೆ ಚಿಕ್ಕಮಗಳೂರು ಭಾಗದಲ್ಲಿ ಮುಂಡಗಾರು ಲತಾ ನೇತೃತ್ವದ ನಕ್ಸಲರ ತಂಡ ಓಡಾಡಿದ ಬಗ್ಗೆ ಮಾಹಿತಿ ಗೊತ್ತಾಗಿದ್ದು, ಎಎನ್ಎಫ್, ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಿದ್ದರು. ಎಎನ್ಎಫ್ ತಂಡದ ಕೂಂಬಿಂಗ್ ವೇಳೆ ವಿಕ್ರಂ ಗೌಡ ನೇತೃತ್ವದ ನಕ್ಸಲರ ತಂಡ ಮುಖಾಮುಖಿಯಾಗಿದ್ದು, ಗುಂಡಿನ ಚಕುಮತಿಯಲ್ಲಿ ವಿಕ್ರಂ ಗೌಡ ಮೃತಪಟ್ಟಿರುವುದಾಗಿ ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More