Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಪತಿ-ಪತ್ನಿ ಇಬ್ಬರ ಆರ್ಥಿಕ ಮತ್ತು ಸಾಮಾಜಿಕ ಸ್ಥಾನಮಾನ ಒಂದೇ ಆಗಿದ್ದರೆ, ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ಹೇಳಿದೆ. ತನ್ನ ಪರಿತ್ಯಕ್ತ ಪತಿಯಿಂದ ಜೀವನಾಂಶ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ತೀರ್ಪು ಬಂದಿದೆ. ಈ ಪ್ರಕರಣದಲ್ಲಿ, ಪತಿ ಮತ್ತು ಪತ್ನಿ ಇಬ್ಬರೂ ಒಂದೇ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ, ಅಂದರೆ ಸಹಾಯಕ ಪ್ರಾಧ್ಯಾಪಕರು ಮತ್ತು ಮಹಿಳೆ ಆರ್ಥಿಕವಾಗಿ ಸ್ವತಂತ್ರರು ಎಂದು ನ್ಯಾಯಾಲಯವು ಕಂಡುಕೊಂಡಿತು. ಇದರ ಆಧಾರದ ಮೇಲೆ ನ್ಯಾಯಾಲಯವು ಜೀವನಾಂಶ ಭತ್ಯೆಗಾಗಿ ಅವರ ಬೇಡಿಕೆಯನ್ನು ತಿರಸ್ಕರಿಸಿತು. ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮತ್ತು ಉಜ್ವಲ್ ಭೂಯಾನ್ ಅವರ ಪೀಠವು ಅರ್ಜಿಯನ್ನು ವಿಚಾರಣೆ ನಡೆಸಿತು. “ಇಬ್ಬರೂ ಸಂಗಾತಿಗಳು ಒಂದೇ ಸ್ಥಾನದಲ್ಲಿ ಕೆಲಸ ಮಾಡುತ್ತಿರುವಾಗ ಮತ್ತು ಅವರ ಆರ್ಥಿಕ ಸ್ಥಿತಿ ಒಂದೇ ಆಗಿದ್ದರೆ, ಜೀವನಾಂಶ ನೀಡುವ ಅಗತ್ಯವಿಲ್ಲ” ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿದೆ. ಸ್ವಂತ ಆದಾಯವಿದ್ದರೂ ಸಹ, ತನ್ನ ಪತಿಯಿಂದ ಜೀವನಾಂಶ…
ತುಮಕೂರು : ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಹುಡುಕಿಕೊಂಡು ದೂರು ನೀಡುತ್ತೇನೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಬ್ಯುಸಿ ಇದ್ದೆ. ಇಂದು ಗೃಹ ಸಚಿವರನ್ನು ಹುಡುಕಿಕೊಂಡು ಹೋಗಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡುತ್ತೇನೆ. ಹನಿಟ್ರ್ಯಾಪ್ ಮಡಲು ಬ್ಲೂ ಜೀನ್ಸ್ ಹುಡುಗಿ ಬಂದಿಇದ್ದಳು. ಎರಡು ಬಾರಿಯೂ ಬಂದಿದ್ದು ಬೇರೆ ಬೇರೆ ಹುಡುಗಿಯರು. ಮೊದಲ ಬಾರಿ ತಾನು ಲಾಯರ್ ಎಂದು ಹೇಳಿರಲಿಲ್ಲ. ಎರಡನೇ ಬಾರಿ ಬಂದವಳು ತಾನು ಹೈಕೋರ್ಟ್ ಲಾಯರ್ ಎಂದು ಹೇಳಿಕೊಂಡು ಬಂದಿದ್ದಳು ಎಂದು ತಿಳಿಸಿದ್ದಾರೆ. ತಾನು ಲಾಯರ್ ನಿಮ್ಮ ಬಳಿ ಪರ್ಸನಲ್ ಆಗಿ ಮಾತನಾಡಬೇಕು ಎಂದು ಹೇಳಿ ಬಂದಿದ್ದಳು. ಹನಿಟ್ರ್ಯಾಪ್ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಗಬೇಕು ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು. ಈ ನಿಟ್ಟಿನಲ್ಲಿ ಇಂದು ದೂರು ನೀಡುತ್ತಿದ್ದೇನೆ ಎಂದು ಹೇಳಿದರು.
ತುಮಕೂರು : ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಹುಡುಕಿಕೊಂಡು ದೂರು ನೀಡುತ್ತೇನೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಬ್ಯುಸಿ ಇದ್ದೆ. ಇಂದು ಗೃಹ ಸಚಿವರನ್ನು ಹುಡುಕಿಕೊಂಡು ಹೋಗಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡುತ್ತೇನೆ. ಹನಿಟ್ರ್ಯಾಪ್ ಮಡಲು ಬ್ಲೂ ಜೀನ್ಸ್ ಹುಡುಗಿ ಬಂದಿಇದ್ದಳು. ಎರಡು ಬಾರಿಯೂ ಬಂದಿದ್ದು ಬೇರೆ ಬೇರೆ ಹುಡುಗಿಯರು. ಮೊದಲ ಬಾರಿ ತಾನು ಲಾಯರ್ ಎಂದು ಹೇಳಿರಲಿಲ್ಲ. ಎರಡನೇ ಬಾರಿ ಬಂದವಳು ತಾನು ಹೈಕೋರ್ಟ್ ಲಾಯರ್ ಎಂದು ಹೇಳಿಕೊಂಡು ಬಂದಿದ್ದಳು ಎಂದು ತಿಳಿಸಿದ್ದಾರೆ. ತಾನು ಲಾಯರ್ ನಿಮ್ಮ ಬಳಿ ಪರ್ಸನಲ್ ಆಗಿ ಮಾತನಾಡಬೇಕು ಎಂದು ಹೇಳಿ ಬಂದಿದ್ದಳು. ಹನಿಟ್ರ್ಯಾಪ್ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಗಬೇಕು ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು. ಈ ನಿಟ್ಟಿನಲ್ಲಿ ಇಂದು ದೂರು ನೀಡುತ್ತಿದ್ದೇನೆ ಎಂದು ಹೇಳಿದರು.
ಬೆಂಗಳೂರು : ಮೂಲಸೌಕರ್ಯ ಯೋಜನೆಗಳಿಗಾಗಿ ರಾಜ್ಯ ಪಿಪಿಪಿ ಪರಿಷ್ಕೃತ ಕಾರ್ಯನೀತಿ-2025 ನೀತಿ ಜಾರಿಗೊಳಿಸಿ ರಾಜ್ಯ ಸರ್ಕಾರವು ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. 1. ರಾಜ್ಯ ಸರ್ಕಾರವು 1997 ರಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರತ್ಯೇಕ ಮೂಲಸೌಕರ್ಯ ಕಾರ್ಯನೀತಿಯನ್ನು ಕ್ರಮ ಸಂಖ್ಯೆ (1) ರಲ್ಲಿ ಓದಲಾದ ಆದೇಶದಲ್ಲಿ ಪರಿಚಯಿಸಿತು. ಪ್ರಸ್ತುತ ಸನ್ನಿವೇಶದಲ್ಲಿ, ಭಾರತ ಸರ್ಕಾರದ ಆರ್ಥಿಕ ವ್ಯವಹಾರಗಳ ಇಲಾಖೆಯು ನವೀಕರಿಸಿದ ಮಾರ್ಗಸೂಚಿಗಳು ಮತ್ತು ಮಾರುಕಟ್ಟೆಯಲ್ಲಿನ ಅಭಿವೃದ್ಧಿ ಪ್ರವೃತ್ತಿಗಳನ್ನು ಪರಿಗಣಿಸಿ, ಪರಿಷ್ಕೃತ ಸಾಂಸ್ಥಿಕ ಚೌಕಟ್ಟು ಮತ್ತು ಇತರೆ ಸಂಬಂಧಿತ ನವೀಕರಣಗಳೊಂದಿಗೆ ಹೊಸ ಕಾರ್ಯನೀತಿಯನ್ನು ರೂಪಿಸುವ ಅಗತ್ಯವು ಅತ್ಯಗತ್ಯವಾಗಿದೆ ಎಂದು ಮೇಲೆ ಓದಲಾದ ಕ್ರಮ ಸಂಖ್ಯೆ (2), (7) ಮತ್ತು (8) ರಲ್ಲಿ ಆದೇಶಿಸಲಾಗಿತ್ತು. 2. ಕರ್ನಾಟಕ ರಾಜ್ಯ ಸರ್ಕಾರವು ಮೂಲಸೌಕರ್ಯ ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ಪ್ರಾರಂಭಿಸಿದೆ. ತ್ವರಿತ ಆರ್ಥಿಕ ಬೆಳವಣಿಗೆಯನ್ನು ಸಾಧಿಸಲು ಉತ್ತಮ ಗುಣಮಟ್ಟದ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಅಗತ್ಯವನ್ನು ಗುರುತಿಸಿ ಮತ್ತು ಪ್ರಸ್ತುತ ಆರ್ಥಿಕ ಸನ್ನಿವೇಶವನ್ನು ಪರಿಗಣಿಸಿ, ಕರ್ನಾಟಕ ರಾಜ್ಯ ಸರ್ಕಾರವು (GoK) ಸಮಗ್ರ ಮತ್ತು ಉತ್ತಮವಾಗಿ…
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 15 ಮಂದಿ ಡಿವೈಎಸ್ ಪಿ ಹಾಗೂ 69 ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಉಲ್ಲೇಖಿತ (2) ರ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್‌ಪೆಕ್ಟರ್ (ಸಿವಿಲ್) ರವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ಸ್ಥಳ ನಿಯುಕ್ತಿ ಮಾಡಿ ಆದೇಶಿಸಲಾಗಿದೆ. ವರ್ಗಾವಣೆ ಅಧಿಕಾರಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ
ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾಕ್ ಪರ ಗೋಡೆ ಬಹರ ಬರೆದಿದ್ದ ಹಿನ್ನೆಲೆಯಲ್ಲಿ ರೈಲು ನಿಲ್ದಾಣವನ್ನು ಬಾಂಬ್ ನಿಂದ ಸ್ಪೊಟಿಸುವುದಾಗಿ ದುಷ್ಕರ್ಮಿಗಳು ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಡಿಟೆಕ್ಟರ್ ಮೂಲಕ ಬಿಡದಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಅಧಿಕಾರಿಗಳು ಹಾಗೂ ರಾಮನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಿಡದಿ ರೈಲು ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಬೆದರಿಕೆಯೊಡ್ದಿದ್ದು, ಈ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯದಳ, ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ.
ಬೆಂಗಳೂರು : ಸಚಿವ ಭೈರತಿ ಸುರೇಶ್ ಫೇಸ್ ಬುಕ್ ಖಾತೆ ಹ್ಯಾಕ್ ಆಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದೆ, ಯಾವುದೇ ರೀತಿಯ ಮೇಸೆಜ್ ಗಳಿಗೆ ಯಾರು ಕೂಡ ಅನ್ಯತಾ ಭಾವಿಸಬೇಡಿ ಎಂದು ಸಚಿವಭೈರತಿ ಸುರೇಶ್ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಫೇಸ್ ಬುಕ್ ನಲ್ಲಿ ಬೈರತಿ ಸುರೇಶ್ ಫೇಸ್ ಬುಕ್ ಖಾತೆ ಮೂಲಕ ಕೆಟ್ಟದಾಗಿ ಕಮೆಂಟ್ ಮಾಡಲಾಗಿದೆ ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಲಾಗಿದೆ.
ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾಕ್ ಪರ ಗೋಡೆ ಬಹರ ಬರೆದಿದ್ದ ಹಿನ್ನೆಲೆಯಲ್ಲಿ ರೈಲು ನಿಲ್ದಾಣವನ್ನು ಬಾಂಬ್ ನಿಂದ ಸ್ಪೊಟಿಸುವುದಾಗಿ ದುಷ್ಕರ್ಮಿಗಳು ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಡಿಟೆಕ್ಟರ್ ಮೂಲಕ ಬಿಡದಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಅಧಿಕಾರಿಗಲು ಹಾಗೂ ರಾಮನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ : ಅನೇಕ ಜನರು ವಸ್ತುಗಳನ್ನು ಖರೀದಿಸಲು ಇಎಂಐ ಆಶ್ರಯಿಸುತ್ತಾರೆ. ಆದರೆ ಕೆಲವೊಮ್ಮೆ ಜೀವನದಲ್ಲಿ ಸಾಲದ ಇಎಂಐ ಪಾವತಿಸಲು ಸಾಧ್ಯವಾಗದ ಸಂದರ್ಭಗಳು ಎದುರಾಗುತ್ತವೆ. ಇಂತಹ ಪರಿಸ್ಥಿತಿಯಲ್ಲಿ, ತೊಂದರೆಗೊಳಗಾದ ಗ್ರಾಹಕರಿಗೆ ಪರಿಹಾರ ನೀಡಲು ಆರ್‌ಬಿಐ ನಿರ್ಧರಿಸಿದೆ. ಗ್ರಾಹಕರು ಮತ್ತು ಬ್ಯಾಂಕುಗಳಿಗೆ ಆರ್‌ಬಿಐ ಯಾವ ಸೂಚನೆಗಳನ್ನು ನೀಡಿದೆ. ಹೌದು, ಒಬ್ಬ ವ್ಯಕ್ತಿಯು ಸಾಲ ಅಥವಾ ಇಎಂಐ ಮೇಲೆ ಸರಕುಗಳನ್ನು ಖರೀದಿಸಿದಾಗಲೆಲ್ಲಾ, ಅವನು ತನ್ನ ಆದಾಯದ ಪ್ರಕಾರ ಇಎಂಐ ಅನ್ನು ನಿರ್ಧರಿಸುತ್ತಾನೆ. ಆದರೆ ಕೆಲವೊಮ್ಮೆ, ಬಜೆಟ್ ಹದಗೆಟ್ಟಾಗ, ಸಾಲದ ಇಎಂಐ ಮರುಪಾವತಿಸುವುದು ಕಷ್ಟಕರವಾಗುತ್ತದೆ. ನೀವು ಸಹ ಈ ಪರಿಸ್ಥಿತಿಯಲ್ಲಿದ್ದರೆ, ಚಿಂತಿಸುವ ಅಗತ್ಯವಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ಗ್ರಾಹಕರಿಗಾಗಿ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಇದರ ಅಡಿಯಲ್ಲಿ ಬ್ಯಾಂಕುಗಳು ಇನ್ನು ಮುಂದೆ ನಿರಂಕುಶವಾಗಿ ವರ್ತಿಸಲು ಅವಕಾಶವಿರುವುದಿಲ್ಲ. ಹೊಸ ನಿಯಮಗಳ ಅಡಿಯಲ್ಲಿ, ಎಲ್ಲಾ ಬ್ಯಾಂಕುಗಳು ಹೆಚ್ಚುವರಿ ಶುಲ್ಕವನ್ನು ವಿಧಿಸಬಾರದು ಎಂದು ಆರ್‌ಬಿಐ ನಿರ್ದೇಶಿಸಿದೆ. ಗ್ರಾಹಕರು ಸಾಲವನ್ನು ಮರುಪಾವತಿಸದಿದ್ದರೆ, ಬ್ಯಾಂಕ್ ವಿವಿಧ ರೀತಿಯ ಶುಲ್ಕಗಳನ್ನು ವಿಧಿಸುತ್ತದೆ. ಈ ಶುಲ್ಕಗಳು ಗ್ರಾಹಕರ…
ರಾಯಚೂರು : ಪ್ರಾಣೀ ಪ್ರಿಯರಿಗೆ ಬಿಗ್ ಶಾಕ್, ರಾಯಚೂರಿನಲ್ಲಿ ಬೆಕ್ಕುಗಳಿಗೆ ಮಾರಣಾಂತಿಕ ಎಫ್ಪಿವಿ ವೈರಸ್ ದೃಢಪಟ್ಟಿದ್ದು, 100 ಕ್ಕೂ ಬೆಕ್ಕುಗಳು ಹೊಸ ವೈರಸ್ ಗೆ ಬಲಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ರಾಜ್ಯದೆಲ್ಲೆಡೆ ಈಗ ಬೆಕ್ಕುಗಳಿಗೆ ವಕ್ಕರಿಸಿದ ಮಾರಣಾಂತಿಕ ಎಫ್ಪಿವಿ ವೈರಸ್ ಸೋಂಕು ದೃಢಪಟ್ಟಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಸೋಂಕಿನಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಬೆಕ್ಕುಗಳು ಸಾವನ್ನಪ್ಪುತ್ತಿವೆ. ರಾಯಚೂರಿನಲ್ಲಿ ಕಳೆದ ಒಂದು ತಿಂಗಳಲ್ಲಿ 100 ಕ್ಕೂ ಹೆಚ್ಚು ಬೆಕ್ಕುಗಳಲ್ಲಿ ವೈರಾಣು ಪತ್ತೆಯಾಗಿದೆ. ವೈರಸ್ ಸೋಂಕು ತಗುಲಿದಲ್ಲಿ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ. ಸೋಂಕು ತಗುಲಿದೆ 100 ಬೆಕ್ಕುಗಳಲ್ಲಿ 99 ಸಾವನ್ನಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.