Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಮೂಲಸೌಕರ್ಯ ಯೋಜನೆಗಳಿಗಾಗಿ ರಾಜ್ಯ ಪಿಪಿಪಿ ಪರಿಷ್ಕೃತ ಕಾರ್ಯನೀತಿ-2025 ನೀತಿ ಜಾರಿಗೊಳಿಸಿ ರಾಜ್ಯ ಸರ್ಕಾರವು ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. 1. ರಾಜ್ಯ ಸರ್ಕಾರವು 1997 ರಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರತ್ಯೇಕ ಮೂಲಸೌಕರ್ಯ ಕಾರ್ಯನೀತಿಯನ್ನು ಕ್ರಮ ಸಂಖ್ಯೆ (1) ರಲ್ಲಿ ಓದಲಾದ ಆದೇಶದಲ್ಲಿ ಪರಿಚಯಿಸಿತು. ಪ್ರಸ್ತುತ ಸನ್ನಿವೇಶದಲ್ಲಿ, ಭಾರತ ಸರ್ಕಾರದ ಆರ್ಥಿಕ ವ್ಯವಹಾರಗಳ ಇಲಾಖೆಯು ನವೀಕರಿಸಿದ ಮಾರ್ಗಸೂಚಿಗಳು ಮತ್ತು ಮಾರುಕಟ್ಟೆಯಲ್ಲಿನ ಅಭಿವೃದ್ಧಿ ಪ್ರವೃತ್ತಿಗಳನ್ನು ಪರಿಗಣಿಸಿ, ಪರಿಷ್ಕೃತ ಸಾಂಸ್ಥಿಕ ಚೌಕಟ್ಟು ಮತ್ತು ಇತರೆ ಸಂಬಂಧಿತ ನವೀಕರಣಗಳೊಂದಿಗೆ ಹೊಸ ಕಾರ್ಯನೀತಿಯನ್ನು ರೂಪಿಸುವ ಅಗತ್ಯವು ಅತ್ಯಗತ್ಯವಾಗಿದೆ ಎಂದು ಮೇಲೆ ಓದಲಾದ ಕ್ರಮ ಸಂಖ್ಯೆ (2), (7) ಮತ್ತು (8) ರಲ್ಲಿ ಆದೇಶಿಸಲಾಗಿತ್ತು. 2. ಕರ್ನಾಟಕ ರಾಜ್ಯ ಸರ್ಕಾರವು ಮೂಲಸೌಕರ್ಯ ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ಪ್ರಾರಂಭಿಸಿದೆ. ತ್ವರಿತ ಆರ್ಥಿಕ ಬೆಳವಣಿಗೆಯನ್ನು ಸಾಧಿಸಲು ಉತ್ತಮ ಗುಣಮಟ್ಟದ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಅಗತ್ಯವನ್ನು ಗುರುತಿಸಿ ಮತ್ತು ಪ್ರಸ್ತುತ ಆರ್ಥಿಕ ಸನ್ನಿವೇಶವನ್ನು ಪರಿಗಣಿಸಿ, ಕರ್ನಾಟಕ ರಾಜ್ಯ ಸರ್ಕಾರವು (GoK) ಸಮಗ್ರ ಮತ್ತು ಉತ್ತಮವಾಗಿ…
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 15 ಮಂದಿ ಡಿವೈಎಸ್ ಪಿ ಹಾಗೂ 69 ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಉಲ್ಲೇಖಿತ (2) ರ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ಸ್ಥಳ ನಿಯುಕ್ತಿ ಮಾಡಿ ಆದೇಶಿಸಲಾಗಿದೆ. ವರ್ಗಾವಣೆ ಅಧಿಕಾರಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ
ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾಕ್ ಪರ ಗೋಡೆ ಬಹರ ಬರೆದಿದ್ದ ಹಿನ್ನೆಲೆಯಲ್ಲಿ ರೈಲು ನಿಲ್ದಾಣವನ್ನು ಬಾಂಬ್ ನಿಂದ ಸ್ಪೊಟಿಸುವುದಾಗಿ ದುಷ್ಕರ್ಮಿಗಳು ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಡಿಟೆಕ್ಟರ್ ಮೂಲಕ ಬಿಡದಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಅಧಿಕಾರಿಗಳು ಹಾಗೂ ರಾಮನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಿಡದಿ ರೈಲು ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಬೆದರಿಕೆಯೊಡ್ದಿದ್ದು, ಈ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯದಳ, ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ.
ಬೆಂಗಳೂರು : ಸಚಿವ ಭೈರತಿ ಸುರೇಶ್ ಫೇಸ್ ಬುಕ್ ಖಾತೆ ಹ್ಯಾಕ್ ಆಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದೆ, ಯಾವುದೇ ರೀತಿಯ ಮೇಸೆಜ್ ಗಳಿಗೆ ಯಾರು ಕೂಡ ಅನ್ಯತಾ ಭಾವಿಸಬೇಡಿ ಎಂದು ಸಚಿವಭೈರತಿ ಸುರೇಶ್ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಫೇಸ್ ಬುಕ್ ನಲ್ಲಿ ಬೈರತಿ ಸುರೇಶ್ ಫೇಸ್ ಬುಕ್ ಖಾತೆ ಮೂಲಕ ಕೆಟ್ಟದಾಗಿ ಕಮೆಂಟ್ ಮಾಡಲಾಗಿದೆ ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಲಾಗಿದೆ.
ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾಕ್ ಪರ ಗೋಡೆ ಬಹರ ಬರೆದಿದ್ದ ಹಿನ್ನೆಲೆಯಲ್ಲಿ ರೈಲು ನಿಲ್ದಾಣವನ್ನು ಬಾಂಬ್ ನಿಂದ ಸ್ಪೊಟಿಸುವುದಾಗಿ ದುಷ್ಕರ್ಮಿಗಳು ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಡಿಟೆಕ್ಟರ್ ಮೂಲಕ ಬಿಡದಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಅಧಿಕಾರಿಗಲು ಹಾಗೂ ರಾಮನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ : ಅನೇಕ ಜನರು ವಸ್ತುಗಳನ್ನು ಖರೀದಿಸಲು ಇಎಂಐ ಆಶ್ರಯಿಸುತ್ತಾರೆ. ಆದರೆ ಕೆಲವೊಮ್ಮೆ ಜೀವನದಲ್ಲಿ ಸಾಲದ ಇಎಂಐ ಪಾವತಿಸಲು ಸಾಧ್ಯವಾಗದ ಸಂದರ್ಭಗಳು ಎದುರಾಗುತ್ತವೆ. ಇಂತಹ ಪರಿಸ್ಥಿತಿಯಲ್ಲಿ, ತೊಂದರೆಗೊಳಗಾದ ಗ್ರಾಹಕರಿಗೆ ಪರಿಹಾರ ನೀಡಲು ಆರ್ಬಿಐ ನಿರ್ಧರಿಸಿದೆ. ಗ್ರಾಹಕರು ಮತ್ತು ಬ್ಯಾಂಕುಗಳಿಗೆ ಆರ್ಬಿಐ ಯಾವ ಸೂಚನೆಗಳನ್ನು ನೀಡಿದೆ. ಹೌದು, ಒಬ್ಬ ವ್ಯಕ್ತಿಯು ಸಾಲ ಅಥವಾ ಇಎಂಐ ಮೇಲೆ ಸರಕುಗಳನ್ನು ಖರೀದಿಸಿದಾಗಲೆಲ್ಲಾ, ಅವನು ತನ್ನ ಆದಾಯದ ಪ್ರಕಾರ ಇಎಂಐ ಅನ್ನು ನಿರ್ಧರಿಸುತ್ತಾನೆ. ಆದರೆ ಕೆಲವೊಮ್ಮೆ, ಬಜೆಟ್ ಹದಗೆಟ್ಟಾಗ, ಸಾಲದ ಇಎಂಐ ಮರುಪಾವತಿಸುವುದು ಕಷ್ಟಕರವಾಗುತ್ತದೆ. ನೀವು ಸಹ ಈ ಪರಿಸ್ಥಿತಿಯಲ್ಲಿದ್ದರೆ, ಚಿಂತಿಸುವ ಅಗತ್ಯವಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ಗ್ರಾಹಕರಿಗಾಗಿ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಇದರ ಅಡಿಯಲ್ಲಿ ಬ್ಯಾಂಕುಗಳು ಇನ್ನು ಮುಂದೆ ನಿರಂಕುಶವಾಗಿ ವರ್ತಿಸಲು ಅವಕಾಶವಿರುವುದಿಲ್ಲ. ಹೊಸ ನಿಯಮಗಳ ಅಡಿಯಲ್ಲಿ, ಎಲ್ಲಾ ಬ್ಯಾಂಕುಗಳು ಹೆಚ್ಚುವರಿ ಶುಲ್ಕವನ್ನು ವಿಧಿಸಬಾರದು ಎಂದು ಆರ್ಬಿಐ ನಿರ್ದೇಶಿಸಿದೆ. ಗ್ರಾಹಕರು ಸಾಲವನ್ನು ಮರುಪಾವತಿಸದಿದ್ದರೆ, ಬ್ಯಾಂಕ್ ವಿವಿಧ ರೀತಿಯ ಶುಲ್ಕಗಳನ್ನು ವಿಧಿಸುತ್ತದೆ. ಈ ಶುಲ್ಕಗಳು ಗ್ರಾಹಕರ…
ರಾಯಚೂರು : ಪ್ರಾಣೀ ಪ್ರಿಯರಿಗೆ ಬಿಗ್ ಶಾಕ್, ರಾಯಚೂರಿನಲ್ಲಿ ಬೆಕ್ಕುಗಳಿಗೆ ಮಾರಣಾಂತಿಕ ಎಫ್ಪಿವಿ ವೈರಸ್ ದೃಢಪಟ್ಟಿದ್ದು, 100 ಕ್ಕೂ ಬೆಕ್ಕುಗಳು ಹೊಸ ವೈರಸ್ ಗೆ ಬಲಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ರಾಜ್ಯದೆಲ್ಲೆಡೆ ಈಗ ಬೆಕ್ಕುಗಳಿಗೆ ವಕ್ಕರಿಸಿದ ಮಾರಣಾಂತಿಕ ಎಫ್ಪಿವಿ ವೈರಸ್ ಸೋಂಕು ದೃಢಪಟ್ಟಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಸೋಂಕಿನಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಬೆಕ್ಕುಗಳು ಸಾವನ್ನಪ್ಪುತ್ತಿವೆ. ರಾಯಚೂರಿನಲ್ಲಿ ಕಳೆದ ಒಂದು ತಿಂಗಳಲ್ಲಿ 100 ಕ್ಕೂ ಹೆಚ್ಚು ಬೆಕ್ಕುಗಳಲ್ಲಿ ವೈರಾಣು ಪತ್ತೆಯಾಗಿದೆ. ವೈರಸ್ ಸೋಂಕು ತಗುಲಿದಲ್ಲಿ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ. ಸೋಂಕು ತಗುಲಿದೆ 100 ಬೆಕ್ಕುಗಳಲ್ಲಿ 99 ಸಾವನ್ನಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
25-03-2025 ಅಭಿಜಿತ್ ನಕ್ಷತ್ರ ಪೂಜೆ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ…
2025-26 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6 ನೇ ತರಗತಿಗೆ ಉಚಿತ (ಸಿಬಿಎಸ್ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ , ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ.25 ಸೀಟುಗಳು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, https://sevasindhuservices.karnataka.gov.in ಅಡಿಯಲ್ಲಿ ಪ್ರಾರಂಭಿಸಲಾಗಿದ್ದು, ಅದರಂತೆ ಸೇವಾ ಸಿಂಧು ಪೋರ್ಟಲ್ನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ‘ಅಡಿಮಿಷನ್ ಫಾರ್ ಮೊರಾರ್ಜಿ ದೇಸಾಯಿ ರೆಸಿಡೆನ್ಸಿಯಲ್ ಸ್ಕೂಲ್ಸ್’ ಸೇವೆಯ ವೆಬ್ ಪೋರ್ಟಲ್ನಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಏಪ್ರಿಲ್, 10 ರವರೆಗೆ ವಿಸ್ತರಿಸಲಾಗಿದೆ. ವಸತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗೆ ಉಚಿತ ಊಟ…
ಬೆಂಗಳೂರು : ರಾಜ್ಯ ಸರ್ಕಾರದಿಂದ ಬೀದಿಬದಿ ವ್ಯಾಪಾರಿಗಳಿಗೆ ಸಿಹಿಸುದ್ದಿ ನೀಡಿದ್ದು, ಸುಮಾರು 10 ಸಾವಿರ ತಳ್ಳುವ ಗಾಡಿಗಳನ್ನು ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಬಿಬಿಎಂಪಿಯಿಂದ ಬೀದಿಬದಿ ವ್ಯಾಪಾರಿಗಳಿಗೆ ಸುಮಾರು 10 ಸಾವಿರ ತಳ್ಳುವ ಗಾಡಿಗಳನ್ನು ನೀಡಲಾಗುವುದು. ಇವು ಆಟೋ, ಬೈಸಿಕಲ್, ಬೈಕ್ ಹಾಗೂ ಸಾಂಪ್ರದಾಯಿಕ ತಳ್ಳುವ ಗಾಡಿ ಮಾದರಿಯಲ್ಲಿ ಇರಲಿವೆ. ಬೀದಿ ಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಳ್ಳುವ ಕಾಲಮಿತಿಯನ್ನು ಏಪ್ರಿಲ್ ಕೊನೆವರೆಗೂ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ. ಇದುವರೆಗೂ ಪಾಲಿಕೆಯಿಂದ 27,565 ಬೀದಿಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದು ನೋಂದಣಿ ಮಾಡಿಕೊಂಡವರಿಗೆ ಸಹಾಯಧನ ನೀಡಿ ತಳ್ಳುವ ಗಾಡಿಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.