Author: kannadanewsnow57

ಬೆಂಗಳೂರು : ಸರ್ವೇ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ. ಅಲ್ಲದೆ, ಈ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಅವಧಿಯ ವೇಳೆ ರಾಯಭಾಗ ಕ್ಷೇತ್ರದ ಬಿಜೆಪಿ ಶಾಸಕ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು ಸರ್ವೇ ಇಲಾಖೆ ಸಮಸ್ಯೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಸರ್ವೇ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನತಾ ದರ್ಶನ ಕಾರ್ಯಕ್ರಮದಲ್ಲೂ ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲೂ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು. ಗ್ರಾಮ ಲೆಕ್ಕಿಗರು 1,000 ಹಾಗೂ 750 ಜನ ಸರ್ವೇಯರ್ ಭರ್ತಿ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯ ಬಗ್ಗೆ ವಿಧಾನಸಭೆಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ರಾಜ್ಯದಲ್ಲಿ 1,000 ಗ್ರಾಮ…

Read More

ನವದೆಹಲಿ:ಕಳೆದ ಮೂರು ವರ್ಷಗಳಲ್ಲಿ ಪರವಾನಗಿ ನವೀಕರಣ ಬಾಕಿ ಇರುವಾಗ ಎಷ್ಟು ಚಾನೆಲ್ ಗಳನ್ನು ಪ್ರಸಾರದಿಂದ ನಿಲ್ಲಿಸಲು ಕೇಳಲಾಗಿದೆ ಎಂಬ ವಿವರಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಕೇಳಿದೆ. ಸಿಜೆಐ ಡಿ.ವೈ.ಚಂದ್ರಚೂಡ್ ಅವರು ಕೇಂದ್ರವನ್ನು , “ಪರವಾನಗಿಗಾಗಿ ಅರ್ಜಿ ಸಲ್ಲಿಸಿದ ಇತರ ಎಷ್ಟು ನಿಲ್ದಾಣಗಳನ್ನು ಈ ಮಧ್ಯೆ ಮುಚ್ಚಲು ನಿರ್ದೇಶಿಸಲಾಗಿದೆ?”ಎಂದು ಕೇಳಿದರು. ಕರ್ನಾಟಕ ಹೈಕೋರ್ಟ್ ಪ್ರಸಾರಕ್ಕೆ ತಡೆ ನೀಡಿರುವುದನ್ನು ಪ್ರಶ್ನಿಸಿ ಪವರ್ ಟಿವಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಿತು. “ಅನುಮತಿ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದ ಚಾನೆಲ್ಗಳು ಯಾವುವು?” ಮತ್ತು “ಅವರ ಅರ್ಜಿಯ ವಿಲೇವಾರಿಯವರೆಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆಯೇ” ಎಂಬ ಡೇಟಾವನ್ನು ಒದಗಿಸುವಂತೆ ಸಿಜೆಐ ಸರ್ಕಾರವನ್ನು ಕೇಳಿದರು.

Read More

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ( Second PUC Exam-3 Results ) ಫಲಿತಾಂಶವನ್ನು ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ. ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ದಿನಾಂಕ 24-06-2024ರಿಂದ 05-07-2024ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಪರೀಕ್ಷೆಗಳು ನಡೆದಿದ್ದವು. ಈ ಪರೀಕ್ಷೆಯ ಫಲಿತಾಂಶ ನಾಳೆ ಮಧ್ಯಾಹ್ನ ಪ್ರಕಟಿಸಲಾಗುತ್ತಿದೆ ಅಂತ ಹೇಳಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಹೀಗೆ ಚೆಕ್ ಮಾಡಿ ಇನ್ನೂ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ತಾವು ಕುಳಿತಲ್ಲೇ ಅಂತರರ್ಜಾಲದ ಮೂಲಕ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ https://karresults.nic.in ಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ದಾಖಲಿಸಿ ಪರಿಶೀಲಿಸಬಹುದಾಗಿದೆ.…

Read More

ನವದೆಹಲಿ:ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ಸೋಮವಾರ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಪೂರಕ ಚಾರ್ಜ್ಶೀಟ್ ಸಲ್ಲಿಸಿದೆ. ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಅಗತ್ಯವಿರುವ ನಿರ್ಬಂಧಗಳನ್ನು ಸ್ವೀಕರಿಸಲಾಗಿದೆ ಮತ್ತು ಪೂರಕ ಚಾರ್ಜ್ಶೀಟ್ನ ಭಾಗವಾಗಿ ಮಾಡಲಾಗಿದೆ ಎಂದು ವಿಶೇಷ ಸೆಲ್ನ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಬಾಕಿ ಇರುವ ವಿಧಿವಿಜ್ಞಾನ ವರದಿಗಳನ್ನು ಸಹ ಸಲ್ಲಿಸಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಪ್ರಕರಣದ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ವಿಸ್ತರಿಸಿದೆ. ಅವರನ್ನು ಈಗ ಆಗಸ್ಟ್ ೨ ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ನ್ಯಾಯಾಲಯವು ಆಗಸ್ಟ್ ೨ ರಂದು ಚಾರ್ಜ್ ಶೀಟ್ ಅನ್ನು ಆಲಿಸಿ ಪರಿಗಣಿಸಲಿದೆ. ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಸೆಲ್ ಜೂನ್ನಲ್ಲಿ ಆರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಆರೋಪಿಗಳ ವಿರುದ್ಧ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಕಠಿಣ ಯುಎಪಿಎ ಅಡಿಯಲ್ಲಿ 1000 ಪುಟಗಳ ಚಾರ್ಜ್ಶೀಟ್ ಸಲ್ಲಿಸಲಾಗಿದೆ.…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ (Karnataka Govt Employees)  ಹಲವು ಬೇಡಿಕೆಗಳಲ್ಲಿ ಹಳೇ ಪಿಂಚಣಿ ಯೋಜನೆ ಜಾರಿ, 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಿ, ಅದರಂತೆ ವೇತನ ನೀಡುವುದಾಗಿತ್ತು. ಇವುಗಳಲ್ಲಿ 7ನೇ ವೇತನ ಆಯೋಗ  (7th Pay Commission) ಜಾರಿಯ ಮಹತ್ವದ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಆಗಸ್ಟ್.1ರಿಂದ 7ನೇ ವೇತನ ಆಯೋಗವನ್ನು ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ. ಹಾಗಾದ್ರೇ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಸರ್ಕಾರಿ ನೌಕರರಿಗೆ ಎಷ್ಟು ವೇತನ ಹೆಚ್ಚಳ ಆಗಲಿದೆ ಎನ್ನುವ ಬಗ್ಗೆ ಡೀಟೆಲ್ಸ್ ಮುಂದಿದೆ ಓದಿ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. 7ನೇ ವೇತನ ಆಯೋಗದ ಜಾರಿಯೇ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ಅಜೆಂಡಾ ಆಗಿತ್ತು. ಇಂತಹ ಬೇಡಿಕೆಯನ್ನು ಈಡೇರಿಸುವಂತ ಮಹತ್ವದ ನಿರ್ಣಯವನ್ನು…

Read More

ನವದೆಹಲಿ:ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಮತ್ತು ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಜಂಟಿಯಾಗಿ ಅಭಿವೃದ್ಧಿಪಡಿಸಿದ ಹೊಸ “ಹೆಚ್ಚಿನ ಪರಿಣಾಮಕಾರಿತ್ವದ” ಮಲೇರಿಯಾ ಲಸಿಕೆಯನ್ನು ಸೋಮವಾರ ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು, ಪಶ್ಚಿಮ ಆಫ್ರಿಕಾದ ಕೋಟ್ ಡಿ ಐವೊರ್ ಆರ್ 21 / ಮ್ಯಾಟ್ರಿಕ್ಸ್-ಎಂ ನೀಡಲು ಪ್ರಾರಂಭಿಸಿದ ಮೊದಲ ದೇಶವಾಗಿದೆ. ಕಳೆದ ವರ್ಷ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಅನುಮೋದನೆ ಪಡೆದ ಈ ಲಸಿಕೆಯು ಕಠಿಣ ನಿಯಂತ್ರಕ ಪ್ರಕ್ರಿಯೆ ಮತ್ತು ಕ್ಲಿನಿಕಲ್ ಮೌಲ್ಯಮಾಪನಕ್ಕೆ ಒಳಗಾಗಿದೆ ಮತ್ತು ಹೆಚ್ಚು ಪರಿಣಾಮಕಾರಿ ಮತ್ತು ಕೈಗೆಟುಕುವ ದರದಲ್ಲಿ ಕಂಡುಬಂದಿದೆ. ಕಡಿಮೆ-ಡೋಸ್ ಲಸಿಕೆಯಾಗಿ, ಇದನ್ನು ವೇಗ ಮತ್ತು ಪ್ರಮಾಣದಲ್ಲಿ ತಯಾರಿಸಬಹುದು, ಇದು ಸೊಳ್ಳೆಯಿಂದ ಹರಡುವ ರೋಗದ ಹರಡುವಿಕೆಯನ್ನು ತಡೆಯಲು ನಿರ್ಣಾಯಕವೆಂದು ಪರಿಗಣಿಸಲಾಗಿದೆ. “ಮಲೇರಿಯಾ ಹೊರೆಯನ್ನು ಕಡಿಮೆ ಮಾಡುವುದು ,ಆಕ್ಸ್ಫರ್ಡ್ ಮತ್ತು ನೊವಾವಾಕ್ಸ್ನಲ್ಲಿ ನಮ್ಮ ಪಾಲುದಾರರೊಂದಿಗೆ ವರ್ಷಗಳ ನಂಬಲಾಗದ ಕೆಲಸದ ನಂತರ ಆರ್ 21 / ಮ್ಯಾಟ್ರಿಕ್ಸ್-ಎಂ ಲಸಿಕೆ ಬಿಡುಗಡೆಯ ಇಂದಿನ ಪ್ರಾರಂಭವು ಒಂದು ಸ್ಮರಣೀಯ ಮೈಲಿಗಲ್ಲನ್ನು ಸೂಚಿಸುತ್ತದೆ ” ಎಂದು ಎಸ್ಐಐ ಸಿಇಒ…

Read More

ನವದೆಹಲಿ : ಐಸಿಎಂಆರ್ ಸಂಸ್ಥೆಗಳಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಡೆಂಗ್ಯೂ ವೈರಸ್‌ ಗೆ ಲಸಿಕೆ ಕಂಡು ಹಿಡಿಯುತ್ತಿದ್ದು, ದೇಶಾದ್ಯಂತ ಡೆಂಗ್ಯೂ ಜ್ವರವನ್ನು ತಡೆಗಟ್ಟುವ ಡೆಂಗಿಯಾಲ್ ಲಸಿಕೆಯ ಪರಿಣಾಮಕಾರಿತ್ವವನ್ನು ಪರೀಕ್ಷಿಸಲು 18 ರಿಂದ 60 ವರ್ಷದೊಳಗಿನ 10,335 ಆರೋಗ್ಯವಂತ ವಯಸ್ಕರು ಹೊಸ ಕ್ಲಿನಿಕಲ್ ಪ್ರಯೋಗದಲ್ಲಿ ಭಾಗವಹಿಸಲಿದ್ದಾರೆ. ಡೆಂಗ್ಯೂ ಜ್ವರವನ್ನು ತಡೆಗಟ್ಟಲು ಅಮೆರಿಕದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸಹಯೋಗದೊಂದಿಗೆ ಪನೇಸಿಯಾ ಬಯೋಟೆಕ್ ಈ ಲಸಿಕೆಯನ್ನು ಸಿದ್ಧಪಡಿಸಿದೆ ಮತ್ತು ಮಾನವರಲ್ಲಿ ಕ್ಲಿನಿಕಲ್ ಪ್ರಯೋಗಗಳು ಶೀಘ್ರದಲ್ಲೇ ದೇಶದ 19 ಸ್ಥಳಗಳಲ್ಲಿ ಪ್ರಾರಂಭವಾಗಲಿವೆ ಎಂದು ಪ್ರಯೋಗದ ಪ್ರಧಾನ ತನಿಖಾಧಿಕಾರಿಯೂ ಆಗಿರುವ ಬಯೋಮೆಡಿಕಲ್ ವಿಜ್ಞಾನಿ ಡಾ.ಶೀಲಾ ಗೋಡಬೋಲೆ ಹೇಳಿದ್ದಾರೆ. ಅಮೆರಿಕದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ (ಎನ್ಐಎಚ್) ನೊಂದಿಗೆ ಪರವಾನಗಿ ಒಪ್ಪಂದದ ಮೂಲಕ ಪನೇಸಿಯಾ ಬಯೋಟೆಕ್ ಲಸಿಕೆಯನ್ನು ದೇಶೀಯವಾಗಿ ಸಿದ್ಧಪಡಿಸಿದೆ. ಪನೇಸಿಯಾ ಬಯೋಟೆಕ್ ತಯಾರಿಸಿದ ಲಸಿಕೆಯು ನಿಷ್ಕ್ರಿಯ ಪದಾರ್ಥಗಳನ್ನು ಹೊರತುಪಡಿಸಿ ಯುಎಸ್ಎಯ ಎನ್ಐಎಚ್ ಅಭಿವೃದ್ಧಿಪಡಿಸಿದ ಲಸಿಕೆಯಂತೆಯೇ ವೈರಸ್ ಸಂಯೋಜನೆಯನ್ನು ಹೊಂದಿದೆ.…

Read More

ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್)‌ ವ್ಯವಸ್ಥೆ ರದ್ದು ಮಾಡುವ ವಿಚಾರದ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಮಹತ್ವದ ಹೇಳಿಕೆ ನೀಡಿದ್ದಾರೆ. ವಿಧಾನಪರಿಷತ್‌ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ನೀಟ್‌ ಪರೀಕ್ಷೆಯನ್ನು ರದ್ದು ಮಾಡಲು ಸಾಧ್ಯವಿಲ್ಲ. ನೀಟ್‌ ಪರೀಕ್ಷೆಯನ್ನು ಸುಪ್ರೀಂಕೋರ್ಟ್‌ ಆದೇಶದಿಂದ ಕೇಂದ್ರ ಸರ್ಕಾರ ನಿರ್ಧಾರ ಮಾಡಬೇಕು ಎಂದು ತಿಳಿಸಿದ್ದಾರೆ. ನೀಟ್‌ ಪರೀಕ್ಷೆ ಅಕ್ರಮದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಕೇಂದ್ರ ಸರ್ಕಾರ ನೀಟ್‌ ಪರೀಕ್ಷೆ ಮಾಡುವುದರಲ್ಲಿ ಎಡವಟ್ಟು ಮಾಡಿಕೊಂಡಿದೆ. ಪ್ರನೆ ಪತ್ರಿಕೆ ಸೋರಿಕೆಯಾಗಿದ್ದು, ತನಿಖೆ ಮಾಡುವಂತೆ ನಾವು ಆಗ್ರಹ ಮಾಡಿದ್ದೆವು. ಆಗ ಕೇಂದ್ರ ಸರ್ಕಾರ ಒಪ್ಪಲಿಲ್ಲ. ಬಳಿಕ ಸಿಬಿಐ ತನಿಖೆಗೆ ನೀಡಿದೆ ಎಂದರು.

Read More

ಬೆಂಗಳೂರು : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1.73 ಲಕ್ಷ ರೇಷನ್‌ ಕಾರ್ಡ್‌ ವಿತರಣೆ ಮಾಡುವುದಾಗಿ ಸಚಿವ ಕೆ.ಹೆಚ್‌ ಮುನಿಯಪ್ಪ ತಿಳಿಸಿದ್ದಾರೆ. ಬಿಜೆಪಿಯ ಪ್ರತಾಪ್‌ ಸಿಂಹ್‌ ನಾಯಕ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಮುನಿಯಪ್ಪ ಅವರು, ಪಡಿತರ ಕಾರ್ಡ್‌ ಗಾಗಿ 2,95,986 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಪರಿಶೀಲನೆ ನಂತರ 55,950 ಅರ್ಜಿಗಳು ಬಿಪಿಎಲ್‌ ಅಡಿಯಲ್ಲಿ ಬರುವುದಿಲ್ಲ. ಬಾಕಿ ಇರುವ 1.73 ಲಕ್ಷ ರೇಷನ್‌ ಗಳನ್ನು ಶೀಘ್ರವೇ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಮೂಲಕ ಹೊಸ ರೇಷನ್‌ ಕಾರ್ಡ್‌ ಗೆ ಕಾಯುತ್ತಿದ್ದ ಜನರಿಗೆ ಸಿಹಿಸುದ್ದಿ ನೀಡಿದ್ದಾರೆ.

Read More

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆ ಭರ್ತಿಗೆ ಸರ್ಕಾರ ಕ್ರಮವಹಿಸಲಾಗಿದೆ. ಶೀಘ್ರವೇ 10,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ ನಂತ್ರ, ಪ್ರಕ್ರಿಯೆ ಶುರು ಮಾಡಲಾಗುತ್ತದೆ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಬಿಜೆಪಿಯ ತಳವಾರ್ ಸಾಬಣ್ಣ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ. ಇದೇ ಕಾರಣಕ್ಕಾಗಿ ಫಲಿತಾಂಶ ಕೂಡ ಕುಂಠಿತಗೊಂಡಿದೆ. 19,000 ಶಿಕ್ಷಕರ ಕೊರತೆ ಕಲ್ಯಾಣ ಕರ್ನಾಟಕ ಭಾಗದಲ್ಲಿದೆ. ಪ್ರಾಥಮಿಕ ಶಾಲೆಗಳಲ್ಲಿ 7,500 ಹಾಗೂ ಪ್ರೌಢಶಾಲೆಗಳಲ್ಲಿ 2,500ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.  ಇದಲ್ಲದೇ ಕೊಠಡಿಗಳ ಸಮಸ್ಯೆ ಕೂಡ ಇದೆ. ಇದನ್ನು ಕೂಡಲೇ ಸರಿ ಮಾಡಬೇಕು. ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿದರು. ಈ ಪ್ರಶ್ನೆಗೆ ಉತ್ತರಿಸಿದಂತ ಸಚಿವ ಮಧು ಬಂಗಾರಪ್ಪ ಅವರು, ಶಿಕ್ಷಣ ಇಲಾಖೆಯಲ್ಲಿ 50,000 ಶಿಕ್ಷಕರ ಕೊರತೆ ಇದೆ. ಈ ಹಿನ್ನಲೆಯಲ್ಲೇ 10,000 ಶಿಕ್ಷಕರ ನೇಮಕಕ್ಕೆ ಅನುಮತಿಸುವಂತೆ ಆರ್ಥಿಕ ಇಲಾಖಎಗೆ…

Read More