Author: kannadanewsnow57

ನವದೆಹಲಿ: ಮಣಿಪುರದ ಜಿರಿಬಾಮ್ನಲ್ಲಿ ಭದ್ರತಾ ಅಧಿಕಾರಿಗಳ ಬೆಂಗಾವಲು ವಾಹನದ ಮೇಲೆ ಭಾನುವಾರ ನಡೆದ ದಾಳಿಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದಾರೆ. ರಾಜ್ಯದಲ್ಲಿನ ಜನಾಂಗೀಯ ಸಂಘರ್ಷವನ್ನು ಪರಿಹರಿಸಲು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಯಾವಾಗ ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಪ್ರಶ್ನಿಸಿದರು. “ಕಳೆದ ವರ್ಷ ಮೇ 3 ರಂದು ಪ್ರಾರಂಭವಾದ ಹಿಂಸಾಚಾರವು ಇಂದಿಗೂ ಮುಂದುವರೆದಿದೆ. ಒಂದು ರಾಜ್ಯವು ಸಂಪೂರ್ಣವಾಗಿ ಛಿದ್ರಗೊಂಡಿದೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಯಾವಾಗ ನಿದ್ರೆಯಿಂದ ಎಚ್ಚರಗೊಳ್ಳುತ್ತಾರೆ? ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಗಾಯಗೊಂಡ ಮೂವರು ಸೈನಿಕರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ ಅವರು, “ಮಣಿಪುರದಲ್ಲಿ ಸಿಆರ್ಪಿಎಫ್ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯಲ್ಲಿ ಸೈನಿಕನೊಬ್ಬ ಸಾವನ್ನಪ್ಪಿದ ಸುದ್ದಿ ಅತ್ಯಂತ ದುಃಖಕರವಾಗಿದೆ. ಅಗಲಿದ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ದುಃಖಿತ ಕುಟುಂಬಕ್ಕೆ ನನ್ನ ಆಳವಾದ ಸಂತಾಪಗಳು. ಗಾಯಗೊಂಡ ಮೂವರು ಸೈನಿಕರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್…

Read More

ಬೆಂಗಳೂರು : ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸುಧಾರಣೆಯ ಕಾರಣದಿಂದ ಅವರ ಕನಿಷ್ಠ ಬದುಕಿನ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದೆ. ಇದಕ್ಕೆ ಎಸ್‌ ಸಿಎಸ್‌ ಪಿ/ಟಿಎಸ್‌ ಪಿ ಹಣ ದುರ್ಬಳಕೆ ಮಾಡಿಲ್ಲ ಎಂದು ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ. 2023 ಕ್ಕೂ ಮುನ್ನ ಚುನಾವಣಾ ಸಂದರ್ಭದಲ್ಲಿ ನಾವು ಜನರಿಗೆ ನೀಡಿದ ಬದುಕಿನ ಗ್ಯಾರಂಟಿಗಳಿಗೆ ಅನುಸಾರವಾಗಿ ರಾಜ್ಯದ ಬಜೆಟ್ ಗಾತ್ರಕ್ಕೆ ಅನುಗುಣವಾಗಿ ಎಲ್ಲ ಬಡ ಜನರಿಗೆ, ಉಚಿತ ವಿದ್ಯುತ್, ಆಹಾರ ಧಾನ್ಯ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಶ್ರಮವಿದ್ದರೂ ಆದಾಯ ಕಾಣದ ಗೃಹಿಣಿಯರಿಗೆ 2000 ರೂಪಾಯಿಗಳನ್ನು ನೀಡಲಾಗುತ್ತಿದೆ. ಕಳೆದ ಸರ್ಕಾರದಲ್ಲಿ ಉಂಟಾದ ವಿಪರೀತ ಬೆಲೆ ಏರಿಕೆ, ನಿರುದ್ಯೋಗ ಮತ್ತು ಆರ್ಥಿಕ ಕುಸಿತದಿಂದ ಎಲ್ಲ ಸಮುದಾಯಗಳ ಜನರ ಬದುಕು ತೀರಾ ಸಂಕಷ್ಟಕ್ಕೆ ಸಿಲುಕಿತ್ತು. ಇದರ ಜೊತೆಗೆ ಕರೋನಾ ಸಂದರ್ಭದ ಕೆಟ್ಟ ನಿರ್ವಹಣೆ, ಜನರಿಗೆ ದುಡಿಮೆ ಇಲ್ಲದ ಸ್ಥಿತಿ ಮತ್ತು ಪ್ರಧಾನಿ ಮೋದಿಯವರ ಸುಳ್ಳಿನ 20 ಲಕ್ಷ ಕೋಟಿ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿಯ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಮುಡಾದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದರು. ಇದೀಗ ರಾಜ್ಯ ಸರ್ಕಾರದಿಂದ ಮುಡಾ ಅಕ್ರಮ ಕುರಿತಂತೆ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಈ ಕುರಿತು ದಿನ ಪತ್ರಿಕೆಗಳಲ್ಲಿ ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪುಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1) ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ ಅಂತ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ, ಆರೋಪಗಳ ಬಗ್ಗೆ ವಿಚಾರಣೆಯನ್ನು ನಡೆಸಲು Commission of Inquiry Act, 1952ರ ನಿಯಮ…

Read More

ನವದೆಹಲಿ: ವಿಚ್ಛೇದಿತ ಮಹಿಳೆಯರಿಗೆ ‘ಇಡಾತ್’ ಅವಧಿಯ ನಂತರ ಜೀವನಾಂಶವನ್ನು ಪಡೆಯಲು ಅವಕಾಶ ನೀಡುವ ಸುಪ್ರೀಂ ಕೋರ್ಟ್ನ ಇತ್ತೀಚಿನ ತೀರ್ಪನ್ನು ಪ್ರಶ್ನಿಸುವುದಾಗಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಭಾನುವಾರ ತಿಳಿಸಿದೆ. ಉತ್ತರಾಖಂಡದಲ್ಲಿ ಅಂಗೀಕರಿಸಲಾದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕಾನೂನನ್ನು ಮಂಡಳಿಯು ಪ್ರಶ್ನಿಸಲಿದೆ. ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಇಂದು ಕಾರ್ಯಕಾರಿ ಸಮಿತಿ ಸಭೆ ನಡೆಸಿದ್ದು, ಇದರಲ್ಲಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಎಂಟು ನಿರ್ಣಯಗಳನ್ನು ಅನುಮೋದಿಸಲಾಗಿದೆ ಎಂದು ಮಂಡಳಿಯ ವಕ್ತಾರ ಸೈಯದ್ ಖಾಸಿಂ ರಸೂಲ್ ಇಲ್ಯಾಸ್ ಹೇಳಿದ್ದಾರೆ. “ಮೊದಲ ನಿರ್ಣಯವು ಇತ್ತೀಚಿನ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಇತ್ತು. ಈ ನಿರ್ಧಾರವು ಶರಿಯಾ ಕಾನೂನಿಗೆ ವಿರುದ್ಧವಾಗಿದೆ. ಇಸ್ಲಾಂನಲ್ಲಿ ಮದುವೆಯನ್ನು ಪವಿತ್ರ ಬಂಧವೆಂದು ಪರಿಗಣಿಸಲಾಗಿದೆ ಎಂದು ನಿರ್ಣಯವು ಹೇಳುತ್ತದೆ. ವಿಚ್ಛೇದನವನ್ನು ತಡೆಗಟ್ಟಲು ಇಸ್ಲಾಂ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ. ಸುಪ್ರೀಂ ಕೋರ್ಟ್ನ ನಿರ್ಧಾರವು “ಮಹಿಳೆಯರ ಹಿತಾಸಕ್ತಿ” ಎಂದು ಹೇಳಿಕೊಳ್ಳುತ್ತದೆ, ಆದರೆ ಮದುವೆಯ ದೃಷ್ಟಿಕೋನದಿಂದ, ಈ ನಿರ್ಧಾರವು ಮಹಿಳೆಯರಿಗೆ…

Read More

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇಂದಿನಿಂದ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ನೀಡಿದೆ. ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಬೆಳಗಾವಿ, ಹಾಸನ, ಕೊಡಗು, ಬಾಗಲಕೋಎ, ಬೀದರ್‌, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ನಾಳೆ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ 15 ರಿಂದ 20 ಸೆಂ.ಮೀ.ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ. ಹಾಸನ, ಬೀದರ್‌, ರಾಯಚೂರು, ಹಾವೇರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

Read More

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿಯು ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-2 ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ-3 ಕ್ಕೆ ನೋಂದಾಯಿಸಲು ಜುಲೈ 17ಕೊನೆಯ ದಿನವಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ- ಪ್ರಕಟವಾದ ಬೆನ್ನಲ್ಲೇ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-3ಕ್ಕೆ ನೋಂದಾಯಿಸಿಕೊಳ್ಳುವ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಅದರಂತೆ ದಿನಾಂಕ 10-07-2024ರಿಂದ 17-07-2024ರವರೆಗೆ ಅವಕಾಶ ನೀಡಲಾಗಿದೆ ಅಂತ ತಿಳಿಸಿದೆ. ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಪರೀಕ್ಷೆಗಳು ದಿನಾಂಕ 02-08-2024ರಿಂದ 09-08-2024ರವರೆಗೆ ನಡೆಸಲಾಗುತ್ತದೆ ಅಂತ ಮಾಹಿತಿ ನೀಡಿದೆ. SSLC ಪರೀಕ್ಷೆ-3ಕ್ಕೆ ಸಂಬಂಧಿಸಿದಂತೆ ಸ್ಕ್ಯಾನ್ ಪ್ರತಿ, ಮರುಎಣಿಕೆಗೆ ಮತ್ತು ಮರು ಮೌಲ್ಯ ಮಾಪನಕ್ಕೆ ಮಂಡಳಿಯಿಂದ ಮಹತ್ವದ ಮಾಹಿತಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 16-07-2024ರವರೆಗೆ ಡೆಬಿಟ್, ಕ್ರೆಡಿಟ್ ಕಾರ್ಡ್, ಆನ್ ಲೈನ್…

Read More

ಹರಿದ್ವಾರ: ಉತ್ತರಾಖಂಡದ ಹರಿದ್ವಾರ ನಗರದ ಹರ್ ಕಿ ಪೌರಿ ಬಳಿ ಭಾನುವಾರ ಬಸ್ ಸೇತುವೆಯಿಂದ ಬಿದ್ದು 24 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಹರಿದ್ವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೋಡಿ ಬೆಲ್ವಾಲಾ ಪೊಲೀಸ್ ಠಾಣೆಯ ಉಸ್ತುವಾರಿ ಯಶ್ವೀರ್ ಸಿಂಗ್ ತಿಳಿಸಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಮಾಹಿತಿ ನೀಡಿದರು. ಯುಪಿಎಸ್ಆರ್ಟಿಸಿಯ ಮೊರಾದಾಬಾದ್ ಡಿಪೋದ ಬಸ್ ದೀನ್ ದಯಾಳ್ ಪಾರ್ಕಿಂಗ್ ಪ್ರದೇಶದ ಮೇಲಿನ ಸೇತುವೆಯಿಂದ ಬಿದ್ದಿದೆ ಮತ್ತು ಪಾರ್ಕಿಂಗ್ ಸ್ಥಳದಲ್ಲಿ ಕೆಲವು ಕಾರುಗಳು ಸಹ ಹಾನಿಗೊಳಗಾಗಿವೆ ಎಂದು ಸಿಂಗ್ ಹೇಳಿದರು. ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದರು. ಅಪಘಾತದ ಹಿಂದಿನ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ ಎಂದು ಅವರು ಹೇಳಿದರು. ಜಮ್ಮು ಮತ್ತು ಕಾಶ್ಮೀರದ ಗುಡ್ಡಗಾಡು ದೋಡಾ ಜಿಲ್ಲೆಯಲ್ಲಿ ಶನಿವಾರ ಬಸ್ ರಸ್ತೆಯಿಂದ ಜಾರಿ 200 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ…

Read More

ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಇಂದು ಸಿಹಿಸುದ್ದಿ ನೀಡುವ ಸಾಧ್ಯತೆ ಇದೆ. ರಾಜ್ಯ ಸರಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಸಂಬಂಧ ಜು.15 ರ ಇಂದು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಳ್ಳುವ ನಿರೀಕ್ಷೆಯಿದೆ. ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಸಂಪುಟ ಕಾರ್ಯಸೂಚಿಯಲ್ಲಿ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ವಿಷಯ ಸೇರ್ಪಡೆಯಾಗಿದೆ. ಬೇಡಿಕೆಗಾಗಿ ಮಾಸಾಂತ್ಯದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವ ಎಚ್ಚರಿಕೆಯನ್ನು ನೌಕರ ಸಂಘಟನೆಗಳು ನೀಡಿದ್ದವು. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಂಪುಟ ಸಭೆಯಲ್ಲಿ ಈ ವಿಚಾರದಲ್ಲಿ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. 7ನೇ ವೇತನ ಆಯೋಗವು ಶೇ.27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಮಾರ್ಚ್ 2023 ರಿಂದಲೇ ಶೇ.17 ಮಧ್ಯಂತರ ಪರಿಹಾರ ನೀಡಲಾಗಿದ್ದು, ಇನ್ನು ಗರಿಷ್ಠ ಶೇ.10.5 ವೇತನ…

Read More

ಬರ್ಮಿಂಗ್ಹ್ಯಾಮ್: ಅಮೆರಿಕದ ಬರ್ಮಿಂಗ್ಹ್ಯಾಮ್ನ ನೈಟ್ ಕ್ಲಬ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸ್ ಇಲಾಖೆ ಭಾನುವಾರ ತಿಳಿಸಿದೆ. ಆದಾಗ್ಯೂ, ಶೂಟರ್ ಅನ್ನು ಇನ್ನೂ ಬಂಧಿಸಲಾಗಿಲ್ಲ. “ಸುಮಾರು ರಾತ್ರಿ 11:08 ಕ್ಕೆ, 27 ನೇ ಸ್ಟ್ರೀಟ್ ಉತ್ತರದ 3400 ಬ್ಲಾಕ್ನಲ್ಲಿರುವ ನೈಟ್ ಕ್ಲಬ್ನಲ್ಲಿ ಅನೇಕ ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂಬ ವರದಿಯನ್ನು ಉತ್ತರ ಪ್ರಾಂತದ ಅಧಿಕಾರಿಗಳಿಗೆ ಕಳುಹಿಸಲಾಗಿದೆ” ಎಂದು ಪೊಲೀಸರು ವಿವರಗಳನ್ನು ನೀಡಿದರು. “ಪ್ರಾಥಮಿಕ ತನಿಖೆಯ ಪ್ರಕಾರ ನೈಟ್ ಕ್ಲಬ್ ನಲ್ಲಿ ಹುಟ್ಟುಹಬ್ಬದ ಪಾರ್ಟಿ ನಡೆಯುತ್ತಿತ್ತು. ನೈಟ್ ಕ್ಲಬ್ ಒಳಗೆ ವಾಗ್ವಾದ ನಡೆಯಿತು ಎಂದು ನಾವು ನಂಬುತ್ತೇವೆ. ವಾಗ್ವಾದದ ನಂತರ (ಅಜ್ಞಾತ ಸಮಯದ ಚೌಕಟ್ಟು) ಕನಿಷ್ಠ ಒಬ್ಬ ಶಂಕಿತನು ವಾಹನದಲ್ಲಿ ಬಂದು ಬೀದಿಯಿಂದ ನೈಟ್ ಕ್ಲಬ್ ಗೆ ಗುಂಡು ಹಾರಿಸಿದನು. ಗುಂಡಿನ ದಾಳಿಯು ವಾಗ್ವಾದದಿಂದ ಸಂಭವಿಸಿದೆಯೇ ಎಂದು ಕಂಡುಹಿಡಿಯಲು ಪತ್ತೆದಾರರು ಕೆಲಸ ಮಾಡುತ್ತಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಲೆರಾಂಡಸ್…

Read More

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 1-10ನೇ ತರಗತಿ ವಿದ್ಯಾರ್ಥಿಗಳಿಗೆ ವಾರವೀಡಿ ಮೊಟ್ಟೆ ವಿತರಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆಗೆ ರಜಾ ದಿನ ಹೊರತುಪಡಿಸಿ, ಪ್ರಸ್ತುತ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ನೀಡಲಾಗುತ್ತಿದೆ.ವಾರದ 6 ದಿನವೂ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ. 6 ದಿನ ನೀಡುವುದರಿಂದ ವಾರ್ಷಿಕ 1,400 ಕೋಟಿ ರು. ವೆಚ್ಚವಾಗಲಿದೆ. ಸರ್ಕಾರಿ ಶಾಲೆಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಂತ, ಹಂತವಾಗಿ ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಈ ಮೊದಲು ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ವಾರಕ್ಕೊಮ್ಮೆ ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು 10ನೇ ತರಗತಿಯವರೆಗೆ ವಿಸ್ತರಿಸಿದೆ. ವಾರದಲ್ಲಿ ಒಂದು ದಿನದ ಬದಲು ಎರಡು ದಿನಕ್ಕೆ ಹೆಚ್ಚಿಸಲಾಗಿತ್ತು. ಇನ್ನು ವಾರವಿಡೀ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

Read More