Subscribe to Updates
Get the latest creative news from FooBar about art, design and business.
Author: kannadanewsnow57
ಸಿಡ್ನಿ: 40 ಕ್ಕೂ ಹೆಚ್ಚು ನಾಯಿಗಳ ಅತ್ಯಾಚಾರ, ಚಿತ್ರಹಿಂಸೆ ಮತ್ತು ಹತ್ಯೆಯ ಆರೋಪದ ಮೇಲೆ ಮೊಸಳೆ ತಜ್ಞ ಆಡಮ್ ಬ್ರಿಟನ್ ಆಸ್ಟ್ರೇಲಿಯಾದಲ್ಲಿ 249 ವರ್ಷಗಳ ಜೈಲು ಶಿಕ್ಷೆಯನ್ನು ಎದುರಿಸುತ್ತಿದ್ದಾರೆ. ಅವರು ಕೃತ್ಯದ ವೀಡಿಯೊಗಳನ್ನು ಚಿತ್ರೀಕರಿಸಿ ಪೋಸ್ಟ್ ಮಾಡಿದ್ದಾರೆ. 1971 ರಲ್ಲಿ ವೆಸ್ಟ್ ಯಾರ್ಕ್ಷೈರ್ನಲ್ಲಿ ಜನಿಸಿದ ಬ್ರಿಟಿಷ್ ಪ್ರಾಣಿಶಾಸ್ತ್ರಜ್ಞ ತನ್ನ ಶಿಕ್ಷೆಯನ್ನು ಘೋಷಿಸುವ ಮೊದಲು ನ್ಯಾಯಾಲಯದಲ್ಲಿ ಕಣ್ಣೀರಿಟ್ಟರು. ‘ವಿಶ್ವದ ಅತ್ಯಂತ ಕೆಟ್ಟ ಪ್ರಾಣಿ ದೌರ್ಜನ್ಯಕಾರ’ ಎಂಬ ಹಣೆಪಟ್ಟಿ ಹೊತ್ತಿರುವ ಬ್ರಿಟನ್, ಹಡಗು ಕಂಟೇನರ್ನೊಳಗಿನ “ಚಿತ್ರಹಿಂಸೆ ಕೋಣೆಯಲ್ಲಿ” ಪ್ರಾಣಿಗಳ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ 60 ಆರೋಪಗಳನ್ನು ಎದುರಿಸುತ್ತಿದ್ದರು. ದಿ ಸನ್ ಪ್ರಕಾರ, ಬ್ರಿಟನ್ ಲೀಡ್ಸ್ ವಿಶ್ವವಿದ್ಯಾಲಯದಲ್ಲಿ ಪ್ರಾಣಿಶಾಸ್ತ್ರದಲ್ಲಿ ಉನ್ನತ ಶಿಕ್ಷಣವನ್ನು ಪಡೆದರು ಮತ್ತು ಬ್ರಿಸ್ಟಲ್ ವಿಶ್ವವಿದ್ಯಾಲಯದಲ್ಲಿ ಪಿಎಚ್ಡಿ ಪೂರ್ಣಗೊಳಿಸಿದರು. ಆರೋಪಗಳ ಸಮಯದಲ್ಲಿ, ಅವರು ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾಲಯದಲ್ಲಿ ಹಿರಿಯ ಸಂಶೋಧಕರಾಗಿದ್ದರು. ಪ್ರಾಣಿಗಳ ಕ್ರೌರ್ಯದ ಆರೋಪಗಳ ಜೊತೆಗೆ, ಬ್ರಿಟನ್ ಮಕ್ಕಳ ಮೇಲಿನ ದೌರ್ಜನ್ಯದ ವಸ್ತುಗಳನ್ನು ಮತ್ತು ಉಲ್ಬಣಗೊಂಡ ಪ್ರಾಣಿಗಳ ಕ್ರೌರ್ಯದ 37 ಆರೋಪಗಳನ್ನು ಹೊಂದಿದೆ ಮತ್ತು…
ಸ್ಪೇನ್ ಯುರೋ ಚಾಂಪಿಯನ್ಶಿಪ್ ಫುಟ್ಬಾಲ್ ಪ್ರಶಸ್ತಿಯನ್ನು ಅದ್ಭುತ ಪ್ರದರ್ಶನದೊಂದಿಗೆ ಗೆದ್ದುಕೊಂಡಿದೆ. ಜುಲೈ 14 ರಂದು ಬರ್ಲಿನ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸ್ಪೇನ್ 2-1 ಗೋಲುಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಸ್ಪೇನ್ ದಾಖಲೆಯ ನಾಲ್ಕನೇ ಬಾರಿಗೆ ಯೂರೋ ಕಪ್ ಗೆದ್ದಿದೆ. ಅದೇ ಸಮಯದಲ್ಲಿ, ಇಂಗ್ಲೆಂಡ್ ಮತ್ತೆ ನಿರಾಶೆಗೊಂಡಿತು. ಸ್ಪೇನ್ ಈ ಹಿಂದೆ 1964, 2008 ಮತ್ತು 2012ರಲ್ಲಿ ಯುರೋಪಿಯನ್ ಚಾಂಪಿಯನ್ ಶಿಪ್ ಗೆದ್ದಿತ್ತು. ಸ್ಪೇನ್ ಯೂರೋ ಕಪ್ ನ ಅತ್ಯಂತ ಯಶಸ್ವಿ ತಂಡವಾಗಿದೆ. ಜರ್ಮನಿ ಮೂರು ಪ್ರಶಸ್ತಿಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ಬಗ್ಗೆ ಮಾತನಾಡುವುದಾದರೆ, ಅವರು ಸತತ ಎರಡನೇ ಬಾರಿಗೆ ಫೈನಲ್ ತಲುಪಿದರು. ಇದಕ್ಕೂ ಮೊದಲು 2020 ರ ಋತುವಿನಲ್ಲಿ, ಇಟಲಿ ಪ್ರಶಸ್ತಿ ಪಂದ್ಯದಲ್ಲಿ ಅವರನ್ನು ಸೋಲಿಸಿತು. ಈ ಚಾಂಪಿಯನ್ಶಿಪ್ನ 66 ವರ್ಷಗಳ ಇತಿಹಾಸದಲ್ಲಿ ಇಂಗ್ಲೆಂಡ್ ಒಮ್ಮೆಯೂ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ. ಅಂತಿಮ ಪಂದ್ಯದ ಮೊದಲಾರ್ಧದಲ್ಲಿ ಎರಡೂ ತಂಡಗಳಿಂದ ಯಾವುದೇ ಗೋಲು ದಾಖಲಾಗಲಿಲ್ಲ. ಆದಾಗ್ಯೂ, ಈ ಸಮಯದಲ್ಲಿ ಸ್ಪ್ಯಾನಿಷ್ ತಂಡವು 66…
ನವದೆಹಲಿ: ನವದೆಹಲಿಯ ಹಲವಾರು ಪ್ರಮುಖ ಪಂಚತಾರಾ ಹೋಟೆಲ್ಗಳಿಗೆ ಗುತ್ತಿಗೆ ನೀಡಲಾದ ಭೂಮಿಯ ವಾರ್ಷಿಕ ನೆಲ ಬಾಡಿಗೆಯನ್ನು ಕೇಂದ್ರ ಸರ್ಕಾರವು ವರ್ಷಕ್ಕೆ ಸಾವಿರಾರು ಅಥವಾ ಲಕ್ಷ ರೂಪಾಯಿಗಳಿಂದ ತಲಾ ಕೋಟಿಗಳಿಗೆ ಪರಿಷ್ಕರಿಸಿದೆ – ಈ ಕ್ರಮವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಲು ಕನಿಷ್ಠ ಎರಡು ಹೋಟೆಲ್ಗಳಾದ ದಿ ಇಂಪೀರಿಯಲ್ ಮತ್ತು ದಿ ಕ್ಲಾರಿಡ್ಜ್ ಕಾರಣವಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಭೂಮಿ ಮತ್ತು ಅಭಿವೃದ್ಧಿ ಕಚೇರಿ ಈ ವರ್ಷದ ಮಾರ್ಚ್ ನಲ್ಲಿ ದಿ ಇಂಪೀರಿಯಲ್ ಗೆ 177.29 ಕೋಟಿ ರೂ ಮತ್ತು ಕ್ಲಾರಿಡ್ಜ್ ಗಳಿಗೆ 69.37 ಕೋಟಿ ರೂ.ಗಳ ಬೇಡಿಕೆ ನೋಟಿಸ್ ಗಳನ್ನು ಕ್ರಮವಾಗಿ 2002 ಮತ್ತು 2006 ರಿಂದ ಇಲ್ಲಿಯವರೆಗೆ ಪರಿಷ್ಕೃತ ನೆಲ ಬಾಡಿಗೆಯಾಗಿ ನೀಡಿದೆ. ಇದನ್ನು ದಿ ಇಂಪೀರಿಯಲ್ ಗೆ ವರ್ಷಕ್ಕೆ 8.13 ಕೋಟಿ ರೂ ಮತ್ತು ಕ್ಲಾರಿಡ್ಜ್ ಗಳಿಗೆ ವರ್ಷಕ್ಕೆ 3.85 ಕೋಟಿ ರೂ.ಗಳ ದರದಲ್ಲಿ ಲೆಕ್ಕಹಾಕಲಾಗಿದೆ, ಇದು ಪ್ರಸ್ತುತ ದರವಾದ ಕ್ರಮವಾಗಿ 10,716…
ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ 3,000 ಕೆಪಿಎಸ್ ಶಾಲೆಗಳನ್ನು ಕೂಡಾ ತೆರೆಯಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಸಿಚವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ ಆಧುನಿಕ ಸೌಲಭ್ಯಗಳೊಂದಿಗೆ 3,000 ಕೆಪಿಎಸ್ ಶಾಲೆಗಳನ್ನು ಕೂಡಾ ತೆರೆಯಲು ಉದ್ದೇಶಿಸಲಾಗಿದೆ.ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡುವ ಸಲುವಾಗಿ ಅಜೀಂ ಪ್ರೇಂಜಿ ಫೌಂಡೇಶನ್ ನೆರವಿನೊಂದಿಗೆ ಶೀಘ್ರದಲ್ಲೇ ವಾರದಲ್ಲಿ ಆರು ದಿನ ಮೊಟ್ಟೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಪ್ರಸ್ತುತ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ನೀಡಲಾಗುತ್ತಿದೆ. 6 ದಿನ ನೀಡುವುದರಿಂದ ವಾರ್ಷಿಕ 1,400 ಕೋಟಿ ರು. ವೆಚ್ಚವಾಗಲಿದೆ ಎಂದರು . ಸರ್ಕಾರಿ ಶಾಲೆಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಂತ, ಹಂತವಾಗಿ ಶಿಕ್ಷಕರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಬೆಂಗಳೂರು : ಸರ್ಕಾರಿ ನೌಕರನು ಸೇವೆಯಲ್ಲಿ ಎಸಗುವ ಅಪರಾಧಗಳ ಕುರಿತು ವಿಚಾರಣೆ ನಡೆಸಿ, ಸಾಬೀತಾದ ಪ್ರಕರಣಗಳಲ್ಲಿ ಆರೋಪಿ ನೌಕರನಿಗೆ ವಿಧಿಸಬಹುದಾದಂತಹ ದಂಡನೆಗಳ ಬಗ್ಗೆ ಕರ್ನಾಟಕ ಸಿವಿಲ್ ಸೇವಾ ನಿಯಮದಲ್ಲಿ ನಿರ್ದಿಷ್ಟಪಡಿಸಲಾಗಿದೆ. ಆದರೆ, ಸದರಿ ನಿಯಮದಲ್ಲಿ ಯಾವ ಆರೋಪಕ್ಕೆ ಯಾವ ಶಿಕ್ಷೆಯನ್ನು ವಿಧಿಸಬಹುದು ಎಂಬುದನ್ನು ನಿಗದಿಪಡಿಸಿರುವುದಿಲ್ಲ. ಇದರಿಂದಾಗಿ ಕೆಲವು ಸಂದರ್ಭಗಳಲ್ಲಿ ಆರೋಪದ ತೀವ್ರತೆಗಿಂತ ವಿಧಿಸಲಾದ ದಂಡನೆಗಳು ಕಡಿಮೆ ಅಥವಾ ಹೆಚ್ಚಿನದಾಗುವ/ಹೊಂದಿದ ಆರೋಪಗಳ ಶಿಸ್ತು ಪ್ರಾಧಿಕಾರಿಗಳು, ಹೋಲಿಸಬಹುದಾದಂತಹ ತೀವ್ರತೆಯನ್ನು ಹೊಂದಿದ ಆರೋಪಗಳ ಪ್ರಕರಣಗಳಲ್ಲಿ ಬೇರೆ ಬೇರೆ ದಂಡನೆಗಳನ್ನು ವಿಧಿಸುವ ಸಾಧ್ಯತೆಯೂ ಇರುತ್ತದೆ. ಆದುದರಿಂದ, ಸರ್ಕಾರವು ಇದನ್ನು ಕೂಲಂಕುಷವಾಗಿ ಪರಿಶೀಲಿಸಿ ಸಾಬೀತಾದಂತಹ ಆರೋಪಗಳಿಗನುಗುಣವಾಗಿ ವಿಧಿಸಬಹುದಾದ ದಂಡನೆಗಳ ಉದಾಹರಣೆಗಳನ್ನು ಈ ಕೆಳಗೆ ನೀಡಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಮಹಮಾರಿಗೆ ಮತ್ತೊಂದು ಬಲಿಯಾಗಿದ್ದು, ಕೊಡಗು ಜಿಲ್ಲೆಯಲ್ಲಿ ಯುವಕನೊಬ್ಬ ಚಿಕಿಇತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಕೊಡಗು ಜಿಲ್ಲೆಯ ಹೊಸಕೋಟೆ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊಂಡೂರು ಗ್ರಾಮದ ಮಾಡವುಮನೆ ರವಿ ಹಾಗೂ ಶಭಾ ದಂಪತಿ ಪುತ್ರ ವಂಶಿಕ್ ಮೃತ ಯುವಕ, ಜ್ವರದಿಂದ ಬಳಲುತ್ತಿದ್ದ ಯುವಕನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕಷೆ ನಡೆಸಿದಾಗ ಪ್ಲೇಟ್ ಲೆಟ್ ತೀರಾ ಕಮ್ಮಿಯಾಗಿರುವುದು ಕಂಡುಬಂದಿತ್ತು ಹೀಗಾಗಿ ವಂಶಿಕ್ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 445 ಜನರಿಗೆ ರಾಜ್ಯಾಧ್ಯಂತ ಡೆಂಗ್ಯೂ ಪಾಸಿಟಿವ್ ಅಂತ ತಿಳಿದು ಬಂದಿದೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 9,527ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 2630 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 445 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಅಂತ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 294, ತುಮಕೂರು 19, ಧಾರವಾಡ 12, ಬೀದರ್ 72,…
ಬೆಂಗಳೂರು : ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿಗಳ ಜನ ಆರೋಗ್ಯ ಯೋಜನಾ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆಯಲು ಇಂದೇ ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್ಗಳನ್ನು ನಿಮ್ಮ ಹತ್ತಿರದ ಗ್ರಾಮ ಒನ್ ನಿಂದ ರೇಷನ್ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಸಂಖ್ಯೆ ನೀಡಿ ಉಚಿತವಾಗಿ ಪಡೆಯಿರಿ. ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿಪಿಎಲ್ ಕಾರ್ಡ್ನ ಪ್ರತೀ ಕುಟುಂಬಗಳಿಗೆ ರೂ.5 ಲಕ್ಷ ವಾರ್ಷಿಕ ಮಿತಿಯೊಳಗೆ ಉಚಿತ ಚಿಕಿತ್ಸೆ, ಎಪಿಎಲ್ ಕಾರ್ಡ್ನ ಪ್ರತೀ ಕುಟುಂಬಗಳಿಗೆ ಪ್ಯಾಕೇಜ್ ದರದಲ್ಲಿ ಶೇ.30 ರಷ್ಟು ವಾರ್ಷಿಕವಾಗಿ ರೂ.1.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸುತ್ತದೆ. ಈ ಕಾರ್ಡ್ನ ನೆರವಿನಿಂದ ದೇಶದಲ್ಲಿ ಎಲ್ಲೇ ಇದ್ದರೂ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಲು ಪೋರ್ಟಬಿಲಿಟಿ ಸೌಲಭ್ಯವಿದೆ. ತುರ್ತು ಸಂದರ್ಭದಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ರೆಫರಲ್ ಅವಶ್ಯಕತೆ ಇರುವುದಿಲ್ಲ. ಈ ಕಾರ್ಡ್ನ್ನು 14 ಸಂಖ್ಯೆಯ…
ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮಕ್ಕಳ ಹಿತದೃಷ್ಟಿಯಿಂದ ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹತ್ತು ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶ ಹೊರಡಿಸಿದ್ದು, ಸೋಮವಾರ ಭಾರೀ ಮಳೆ ಜಿಲ್ಲೆಯಾಧ್ಯಂತ ಆಗಲಿದೆ ಅಂತ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಇನ್ನೂ ಕೊಡಗು ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರೆದಿದ್ದು, ಇಂದೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಹಿನ್ನೆಲೆಯಲ್ಲಿ ಕೊಡಗಿನ ಎಲ್ಲಾ ಶಾಲಾ-ಕಾಲೇಜುಗಳಿಗೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಬೆಂಗಳೂರು: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ, ಯು.ಕೆ.ಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು ಎಂದರು. ಸಮಾಜಕ್ಕೆ ಅಂಗನವಾಡಿ ಕೊಡುಗೆ ಅಪಾರ. ಕಳೆದ 50 ವರ್ಷಗಳಿಂದ ಅಂಗನವಾಡಿ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿವೆ. ಇನ್ಮುಂದೆ ಗವರ್ನಮೆಂಟ್ ಮಾಂಟೆಸ್ಸರಿ ಆಗಿ ಬದಲಾಗಲಿದ್ದು, ಇತರ ಶಾಲೆಗಳಿಗಿಂತ ನಮ್ಮ ಅಂಗನವಾಡಿ ಕೇಂದ್ರದ ಮಕ್ಕಳು ಹೆಚ್ಚು ಸುರಕ್ಷಿತವಾಗಿರುತ್ತವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಕ್ಕಳಿಗೆ…
ಬೆಂಗಳೂರು : ವಾಲ್ಮೀಕಿ, ಮುಡಾ ಹಗರಣದ ನಡುವೆ ಇಂದಿನಿಂದ ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಲಿದೆ. ಹಲವು ಹಗರಣಗಳು ಹೊರ ಬಂದಿರುವುದರಿಂದ ಕಾಂಗ್ರೆಸ್ ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ. ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಈ ಬಾರಿ ಅಧಿವೇಶದಲ್ಲಿ ಹಗರಣಗಳ ಬಗ್ಗೆ ಪ್ರಸ್ತಾಪಿಸಲು ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಿರ್ಧರಿಸಿವೆ. ಇದಕ್ಕೆ ಪ್ರತಿಯಾಗಿ ಗಟ್ಟಿಯಾಗಿ ನಿಲ್ಲಲು ಸಹ ಸಿದ್ದರಾಮಯ್ಯ ಸರ್ಕಾರ ಸನ್ನದ್ಧವಾಗಿದೆ. ಇದಕ್ಕೆ ಪೂಕರಕವೆಂಬಂತೆ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳು ಖುದ್ದು ಹಾಜರಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ವಿವಿಧ ಇಲಾಖೆಗಳಲ್ಲಿ ಚರ್ಚೆಗೆ ಬರುವ…