Author: kannadanewsnow57

ಬೆಂಗಳೂರು: ಸೆಪ್ಟೆಂಬರ್ 25 ರ ನಾಳೆ ನಗರದಲ್ಲಿ ಬೆಸ್ಕಾಂ ಇಲಾಖೆಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆ.25ರ ನಾಳೆ ಬೆಂಗಳೂರಿನ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ದಿನಾಂಕ 25.09.2024 (ಬುಧುವಾರ) ಬೆಳಿಗ್ಗೆ 11;00 ಗಂಟೆಯಿAದ ಮಧ್ಯಾಹ್ನ 03:30 ಗಂಟೆಯವರೆಗೆ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಗವಿಗುಡಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್ಮೆಂಟ್, ಮತ್ತು ಸುತ್ತಮುತ್ತಲಿನ ಪ್ರದೇಶ.” ಬೆಂಗಳೂರು ಕವಿಪ್ರನಿನಿ ವತಿಯಿಂದ 66/11 ಕೆ.ವಿ. ಇಸ್ಕಾನ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ಜಯನಗರ ವಿಭಾಗದ ದ5ನೇ ಉಪವಿಭಾಗದ ಈ ಪ್ರದೇಶಗಳಲ್ಲಿ ಮಂತ್ರಿ ಅಪಾರ್ಟ್‌ಮೆಂಟ್‌, ತಲಘಟ್ಟಪುರ,…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ಮಾನ್ಯ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದಾರೆ. ಕಾನೂನಿನ ಎದುರು ಎಲ್ಲರೂ ಒಂದೇ ಎಂದು ಹೈಕೋರ್ಟ್ ತಿಳಿಸಿದೆ ಎಂದು ವಿಶ್ಲೇಷಿಸಿದರು. ಹೈಕೋರ್ಟ್‍ನಲ್ಲಿ ಸುದೀರ್ಘ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ಗೌರವಾನ್ವಿತ ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಟ್ಟಿದ್ದರು. ಕಾಂಗ್ರೆಸ್ಸಿಗರು ಗೌರವಾನ್ವಿತ ರಾಜ್ಯಪಾಲರು, ರಾಜಭವನವನ್ನು ಕೇಂದ್ರದ ಏಜೆಂಟ್ ಎಂದು ಆಕ್ಷೇಪಿಸಿದ್ದರು ಎಂದು ಟೀಕಿಸಿದರು. ಕಳೆದ ಕೆಲವು ತಿಂಗಳಿನಿಂದ ಬಿಜೆಪಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಿರಂತರ ಹೋರಾಟ ನಡೆಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ…

Read More

ನವದೆಹಲಿ : ಸೆಪ್ಟೆಂಬರ್ 20 ರಂದು ಗ್ರಾಮಾಂತರ ಪೊಲೀಸರು ಸಲ್ಲಿಸಿದ 1,200 ಪುಟಗಳ ವಿವರವಾದ ಚಾರ್ಜ್‌ಶೀಟ್‌ನಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ನಕಲಿ ಆಂಟಿಬಯೋಟಿಕ್‌ಗಳ ಪೂರೈಕೆಯ ಬಗ್ಗೆ ಆಘಾತಕಾರಿ ಸಂಗತಿಗಳು ಬಹಿರಂಗವಾಗಿವೆ. ಈ ಆಂಟಿಬಯೋಟಿಕ್‌ಗಳು ಹರಿದ್ವಾರ ಮೂಲದ ಪಶುವೈದ್ಯಕೀಯ ಔಷಧ ಪ್ರಯೋಗಾಲಯದಲ್ಲಿ ತಯಾರಿಸಲಾದ ಟಾಲ್ಕಮ್ ಪೌಡರ್ ಮತ್ತು ಪಿಷ್ಟದ ಮಿಶ್ರಣವನ್ನು ಹೊರತುಪಡಿಸಿ ಬೇರೇನೂ ಅಲ್ಲ. ಈ ಬಹಿರಂಗಪಡಿಸುವಿಕೆಯು ಆರೋಗ್ಯ ವ್ಯವಸ್ಥೆಯಾದ್ಯಂತ ಆಘಾತ ತರಂಗಗಳನ್ನು ಕಳುಹಿಸಿದೆ. ನಕಲಿ ಔಷಧಗಳ ಸರಬರಾಜಿನ ಗೊಂದಲದ ಜೊತೆಗೆ, ಕಾರ್ಯಾಚರಣೆಯ ಹಿಂದಿರುವ ದರೋಡೆಕೋರರು ಹವಾಲಾ ಚಾನಲ್‌ಗಳನ್ನು ಬಳಸಿಕೊಂಡು ಭಾರಿ ಮೊತ್ತದ ಹಣವನ್ನು ವರ್ಗಾಯಿಸಿದರು. ನಕಲಿ ಔಷಧಗಳನ್ನು ಖರೀದಿಸಲು ಮುಂಬೈನಿಂದ ಉತ್ತರ ಪ್ರದೇಶದ ಸಹರಾನ್‌ಪುರಕ್ಕೆ ಕೋಟ್ಯಂತರ ರೂ. ಈ ನಕಲಿ ಔಷಧಿಗಳನ್ನು ನಂತರ ಉತ್ತರ ಪ್ರದೇಶ, ಜಾರ್ಖಂಡ್, ಛತ್ತೀಸ್‌ಗಢ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ಆಸ್ಪತ್ರೆಗಳಿಗೆ ವಿತರಿಸಲಾಯಿತು. ನಕಲಿ ಡ್ರಗ್ಸ್ ಪತ್ತೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಕಲ್ಮೇಶ್ವರ ಗ್ರಾಮಾಂತರ ಆಸ್ಪತ್ರೆಗೆ ಬಂದಿದ್ದ ಆ್ಯಂಟಿಬಯೋಟಿಕ್‌ಗಳು ನಕಲಿ ಎಂಬುದನ್ನು ಡ್ರಗ್ ಇನ್ಸ್‌ಪೆಕ್ಟರ್ ನಿತಿನ್ ಭಂಡಾರ್ಕರ್…

Read More

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯ ಮುನ್ಸೂಚನೆಯನ್ನು ಶೇ.6.8ಕ್ಕೆ ಉಳಿಸಿಕೊಂಡಿರುವ ಎಸ್ &ಪಿ ಗ್ಲೋಬಲ್ ರೇಟಿಂಗ್ಸ್, ಅಕ್ಟೋಬರ್ ಹಣಕಾಸು ನೀತಿ ಪರಾಮರ್ಶೆಯಲ್ಲಿ ಆರ್ಬಿಐ ಬಡ್ಡಿದರಗಳನ್ನು ಕಡಿತಗೊಳಿಸುವ ನಿರೀಕ್ಷೆಯಿದೆ ಎಂದು ಹೇಳಿದೆ ಏಷ್ಯಾ ಪೆಸಿಫಿಕ್ನ ಆರ್ಥಿಕ ದೃಷ್ಟಿಕೋನದಲ್ಲಿ, ಎಸ್ &ಪಿ ಗ್ಲೋಬಲ್ ರೇಟಿಂಗ್ಸ್ 2025-26ರ ಆರ್ಥಿಕ ವರ್ಷಕ್ಕೆ ತನ್ನ ಜಿಡಿಪಿ ಬೆಳವಣಿಗೆಯ ಮುನ್ಸೂಚನೆಯನ್ನು ಶೇಕಡಾ 6.9 ಕ್ಕೆ ಉಳಿಸಿಕೊಂಡಿದೆ ಮತ್ತು ಭಾರತದಲ್ಲಿನ ಘನ ಬೆಳವಣಿಗೆಯು ರಿಸರ್ವ್ ಬ್ಯಾಂಕ್ಗೆ ಹಣದುಬ್ಬರವನ್ನು ತನ್ನ ಗುರಿಗೆ ಅನುಗುಣವಾಗಿ ತರುವತ್ತ ಗಮನ ಹರಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ. “ಭಾರತದಲ್ಲಿ, 2024-2025 ರ ಪೂರ್ಣ ಹಣಕಾಸು ವರ್ಷಕ್ಕೆ ಶೇಕಡಾ 6.8 ರಷ್ಟು ಜಿಡಿಪಿಯ ನಮ್ಮ ಅಂದಾಜಿಗೆ ಅನುಗುಣವಾಗಿ, ಹೆಚ್ಚಿನ ಬಡ್ಡಿದರಗಳು ನಗರ ಬೇಡಿಕೆಯನ್ನು ನಿಯಂತ್ರಿಸುವುದರಿಂದ ಜೂನ್ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಮಧ್ಯಮವಾಗಿದೆ” ಎಂದು ಎಸ್ &ಪಿ ಹೇಳಿದೆ. ಕಳೆದ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 8.2 ರಷ್ಟು ಬೆಳವಣಿಗೆ ಕಂಡಿದೆ. ಹಣಕಾಸಿನ ಬಲವರ್ಧನೆಗೆ ಮತ್ತು…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾಳೆ ಮಹತ್ವದ ಸಚಿವ ಸಂಪುಟ ಸಭೆ ಕರೆದಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ರಾಜ್ಯಪಾಲರ ನಡೆ ಬಗ್ಗೆ ಸಂಪುಟದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ರಾಜ್ಯಪಾಲರ ನೋಟಿಸ್ ಗೆ ಹೇಗೆ ಉತ್ತರ ಕೊಡಬೇಕೆಂದು ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

Read More

ಬೆಂಗಳೂರು : ಇಡೀ ದೇಶವೇ ಬೆಚ್ಚಿ ಬೀಳಿಸುವಂತೆ ಸುದ್ದಿಯಾಗಿರುವ ಬೆಂಗಳೂರಿನ ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಹಾಲಕ್ಷ್ಮೀ ಕೊಲೆ ಪ್ರಕರಣದ ಆರೋಪಿಗಾಗಿ ಕೇಂದ್ರ ವಿಭಾಗದ ಪೊಲೀಸರು ಹೊರರಾಜ್ಯಗಳಿಗೆ ತೆರಳಿ ಹಂತಕನ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.ಇದರ ಮಧ್ಯ ಮಹಾಲಕ್ಷ್ಮಿಯ ದೇಹ ತುಂಡು ಮಾಡಿ ಇಟ್ಟಿದ್ದ ಫ್ರಿಜ್ ಅನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಪತ್ತೆಗಾಗಿ ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸುತ್ತಿರುವ ಪೊಲೀಸರು, ಮಹಾಲಕ್ಷ್ಮೀ ಪತಿ ಹೇಮಂತ್ ದಾಸ್ ಶಂಕೆ ವ್ಯಕ್ತಪಡಿಸಿರುವ ವ್ಯಕ್ತಿ ಸೇರಿದಂತೆ ಮೃತಳ ಸಂಪರ್ಕದಲ್ಲಿದ್ದ ಕೆಲವರ ಮೊಬೈಲ್ ಸ್ವಿಚ್ಡ್​ ಆಫ್ ಆಗಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮತ್ತೊಂದೆಡೆ, ಆಕೆಯ ಸಂಪರ್ಕದಲ್ಲಿದವರಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹರಿತವಾದ ಆಯುಧದಿಂದ ಮಹಾಲಕ್ಷ್ಮೀ ಮೃತದೇಹವನ್ನು ಸುಮಾರು 50 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟು ಹಂತಕ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಎಫ್ಎಸ್​​ಎಲ್ ಅಧಿಕಾರಿಗಳು ಬಂದು ತಪಾಸಣೆ ನಡೆಸಿದ್ದರು. ಎಲ್ಲ ರೀತಿಯ ಸ್ಯಾಂಪಲ್​, ಸಾಕ್ಷ್ಯಾಧಾರ ಸಂಗ್ರಹಿಸಿದ್ದ ಅಧಿಕಾರಿಗಳು ಮೃತದೇಹವಿಟ್ಟಿದ್ದ ಫ್ರಿಡ್ಜ್​ನ್ನು…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ರಾಜ್ಯಾದ್ಯಂತ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು, ಕಟ್ಟೆಚ್ಚರ ವಹಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು, ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ಇದೀಗ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು, ಇದೀಗ ದೂರುದಾರರಾದ ಟಿ.ಜೆ. ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಲಿದ್ದಾರೆ. ನಾಳೆ ಅಥವಾ ನಾಡಿದ್ದು ಈ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದ್ದು, ಒಂದು ವೇಳೆ ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಅನುಮತಿ ನೀಡಿದ್ರೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು…

Read More

ನವದೆಹಲಿ:ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲಾದ ವಸತಿ ಆವರಣಗಳನ್ನು ಸೀಲ್ ಮಾಡಲು ನ್ಯಾಯಾಲಯಕ್ಕೆ ಸಹಾಯ ಮಾಡುವ ಸಮಿತಿಗೆ ನೋಟಿಸ್ ನೀಡಿರುವ ಬಗ್ಗೆ ಸುಪ್ರೀಂ ಕೋರ್ಟ್ ಆದಾಯ ತೆರಿಗೆ ಇಲಾಖೆಯಿಂದ ಪ್ರತಿಕ್ರಿಯೆ ಕೋರಿದೆ ಮತ್ತು ವಿವರಣೆಗಾಗಿ ಸಂಬಂಧಪಟ್ಟ ಅಧಿಕಾರಿಗೆ ಸಮನ್ಸ್ ನೀಡಿದೆ ಮಾಜಿ ಅಧಿಕಾರಿ ವಿಜಯ್ ಚಿಬ್ಬರ್ ಮತ್ತು ಮೇಜರ್ ಜನರಲ್ (ನಿವೃತ್ತ) ಸೋಮ್ ಜಿಂಗಾನ್ ಅವರನ್ನು ಒಳಗೊಂಡ ಭುರೆ ಲಾಲ್ ನೇತೃತ್ವದ ಮೂವರು ಸದಸ್ಯರ ಸಮಿತಿಯ ವರದಿಯನ್ನು ಪರಿಗಣಿಸಿದ ನಂತರ ನ್ಯಾಯಮೂರ್ತಿಗಳಾದ ಎ.ಎಸ್.ಓಕಾ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠ ಸೋಮವಾರ ಈ ನಿರ್ದೇಶನಗಳನ್ನು ನೀಡಿದೆ. ತನ್ನದೇ ಆದ ಯಾವುದೇ ಗಳಿಕೆಯನ್ನು ಹೊಂದಿಲ್ಲ ಎಂದು ಸಮಿತಿ ನ್ಯಾಯಾಲಯಕ್ಕೆ ತಿಳಿಸಿದೆ. ಆಸ್ತಿಗಳ ಶಾಶ್ವತ ಡಿ-ಸೀಲ್ಗಾಗಿ ಸಂಗ್ರಹಿಸಿದ ಶುಲ್ಕವನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ ಠೇವಣಿ ಇಡಲಾಗುತ್ತದೆ ಎಂದು ಅದು ಹೇಳಿದೆ. ಸಂಬಂಧಪಟ್ಟ ಆದಾಯ ತೆರಿಗೆ ಅಧಿಕಾರಿಯ ವಿರುದ್ಧ ಕೆಲವು ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ. ಅಮಿಕಸ್ ಕ್ಯೂರಿಯಾಗಿ ನ್ಯಾಯಾಲಯಕ್ಕೆ ಸಹಾಯ ಮಾಡುತ್ತಿರುವ ಹಿರಿಯ ವಕೀಲ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾನು ಮೊದಲು ಹೈಕೋರ್ಟ್ ತೀರ್ಪು ಏನಿದೆ ಎಂದು ತಿಳಿದುಕೊಳ್ಳಬೇಕು. ಸಿಎಂ ಸಿದ್ದರಾಮಯ್ಯ ಮೇಲೆ, ಕುಟುಂಬದ ಮೇಲೆ ದೊಡ್ಡ ಷಡ್ಯಂತ್ರ ಮಾಡಿದ್ದಾರೆ. ಯಾವುದೇ ತನಿಖೆ ಮಾಡಿದ್ರೂ ಸಿಎಂ ಸಿದ್ದರಾಮಯ್ಯ ಕ್ಲೀನ್ ಆಗಿ ಹೊರಬರ್ತಾರೆ. ಅವರು ಮಾಡಿರುವ ಕಾರ್ಯಕ್ರಮ, ಕೊಡುಗೆ ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದ್ದಾರೆ. ಕೋರ್ಟ್ ಆದೇಶದ ಪ್ರತಿ ನೋಡಿ ನಾನು ಪ್ರತಿಕ್ರಿಯೆ ನೀಡುತ್ತೇನೆ. ಸಿಎಂ ಹಾಗೂ ಅವರ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಇದರಿಂದ ಹೊರಗೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ.

Read More