Subscribe to Updates
Get the latest creative news from FooBar about art, design and business.
Author: kannadanewsnow57
ಹುಬ್ಬಳ್ಳಿ : ರಾಜ್ಯದಲ್ಲಿ ಗೇಮ್ ಚಟಕ್ಕೆ ಮತ್ತೊಂದು ಬಲಿಯಾಗಿದ್ದು, ಆನ್ ಲೈನ್ ಗೇಮ್ ನಿಂದ ಹಣ ಕಳೆದುಕೊಂಡು ಬಿಇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ಬಿಇ ವಿದ್ಯಾರ್ಥಿ ರಾಕೇಶ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಕೇಶ್ ಪ್ರತಿದಿನ ಆನ್ ಲೈನ್ ಗೇಮ್ ಆಡುತ್ತಿದ್ದ. ಅನ್ ಲೈನ್ ಗೇಮ್ ನಿಂದ ಸಾಕಷ್ಟು ಸಾಲ ಮಾಡಿಕೊಂಡಿದ್ದ ರಾಕೇಶ್ ಮನನೊಂದು ವಸಇ ನಿಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ವಸತಿ ನಿಲಯಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂಬುದರ ಕುರಿತಂತೆ ಆಹಾರ ಇಲಾಖೆ ಸ್ಪಷ್ಟನೆ ನೀಡಿದ್ದು, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನಿಸಲಾಗಿದೆ ಎಂಬುದು ವದಂತಿಯಾಗಿದೆ ಎಂದು ತಿಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಕರೆಯಲಾಗಿದ್ದು, ಇಂದು ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೭ ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂಬ ವದಂತಿ ಹಬ್ಬಿದೆ. ಆದರೆ ಇದಕ್ಕೆ ಆಹಾರ ಇಲಾಖೆ ಸ್ಪಷ್ಟನೆ ನೀಡಿದ್ದು, ರೇಷನ್ ಕಾರಡ್ಡ ನಲ್ಲಿ ತಿದ್ದುಪಡಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ. ಸದ್ಯ ಆರೋಗ್ಯ ಸೌಲಭ್ಯಕ್ಕಾಗಿ ಮಾತ್ರ ಅವಶ್ಯಕತೆ ಇದ್ದವರಿಗೆ ಬಿಪಿಎಲ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರವೇ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿ ಅರ್ಹ ಫಲಾನುಭವಿಗಳಿಗೆ ಕಾರ್ಡ್ ವಿತರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರತಾಪಗಢ: ಉತ್ತರ ಪ್ರದೇಶದಲ್ಲಿ ಘೋರ ದುರಂತ ಸಂಭವಿಸಿದ್ದು, ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು ನಿನ್ನೆ ಒಂದೇ ದಿನ 37 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯಲ್ಲಿ ಸಿಡಿಲು ಬಡಿದು ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ಬುಧವಾರ ಸಂಜೆ ಭಾರಿ ಮಳೆಯ ಸಮಯದಲ್ಲಿ ಐದು ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಇಡೀ ಜಿಲ್ಲೆಯಲ್ಲಿ ಕೋಲಾಹಲ ಉಂಟಾಗಿದೆ. ಘಟನೆಯ ಮಾಹಿತಿಯ ನಂತರ, ಜಿಲ್ಲಾಡಳಿತವು ಸ್ಥಳಕ್ಕೆ ತಲುಪಿ ಮೃತ ದೇಹಗಳನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆ. ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುವುದು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಪಿಲಿಭಿತ್ ಮತ್ತು ಲಖಿಂಪುರ್ ಖೇರಿ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಮತ್ತು ಸ್ಥಳ ಪರಿಶೀಲನೆ ನಡೆಸಿದರು ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ, ಸರ್ಕಾರವು ಎಲ್ಲಾ ಪ್ರವಾಹ…
ನವದೆಹಲಿ: ನೀಟ್-ಯುಜಿ 2024 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ. ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಮತ್ತು ದುಷ್ಕೃತ್ಯದ ಬ್ಯಾಂಡ್ವಿಡ್ತ್ ಆಧಾರದ ಮೇಲೆ ಮರು ಪರೀಕ್ಷೆಗೆ ಆದೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಗಮನಿಸಿದೆ. ಆದಾಗ್ಯೂ, ಕೇಂದ್ರವು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ, ಮರುಪರೀಕ್ಷೆಯನ್ನು ವಿರೋಧಿಸಿತು, ಐಐಟಿ ಮದ್ರಾಸ್ನ ವರದಿಯು ವ್ಯಾಪಕ ತಪ್ಪು ನಡೆದಿದೆ ಎಂಬ ಹೇಳಿಕೆಗಳನ್ನು ತಳ್ಳಿಹಾಕಿದೆ ಎಂದು ಪ್ರತಿಪಾದಿಸಿತು. ಇದಲ್ಲದೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ರಾಷ್ಟ್ರೀಯ, ರಾಜ್ಯ, ನಗರ ಮತ್ತು ಕೇಂದ್ರ ಮಟ್ಟದಲ್ಲಿ ನೀಟ್-ಯುಜಿ ಅಭ್ಯರ್ಥಿಗಳ ನಡುವಿನ ಅಂಕಗಳ ವಿತರಣೆಯನ್ನು ವಿಶ್ಲೇಷಿಸಿದೆ ಎಂದು ಕೇಂದ್ರದ ಅಫಿಡವಿಟ್ನಲ್ಲಿ ತಿಳಿಸಲಾಗಿದೆ. ಇಂದು ವಿಚಾರಣೆಗೆ ೪೦ ಅರ್ಜಿಗಳನ್ನು ಪಟ್ಟಿ ಮಾಡಲಾಗಿದೆ. ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಈ ಪ್ರಕರಣದ ವಿಚಾರಣೆ ನಡೆಸಲಿದೆ. ಇದಕ್ಕೂ ಮುನ್ನ ಜುಲೈ 8 ರಂದು ನಡೆದ ವಿಚಾರಣೆಯ ಸಮಯದಲ್ಲಿ, ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ…
ಫಿಲಿಪೈನ್ಸ್ನಲ್ಲಿ ಇಂದು ಪ್ರಬಲ ಭೂಕಂಪನ ಸಂಭವಿಸಿದೆ. ಫಿಲಿಪೈನ್ಸ್ನ ಸ್ಯಾಕ್ಸರ್ಗೆನ್ನಿಂದ 106 ಕಿಲೋಮೀಟರ್ ದೂರದಲ್ಲಿರುವ ಸೆಲೆಬೆಸ್ ಸಮುದ್ರದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 7.1 ರಷ್ಟಿತ್ತು. ಭೂಕಂಪದ ಆಳವು 620 ಕಿ.ಮೀ ಆಗಿದ್ದು, ಇದರ ಪರಿಣಾಮವು ದೊಡ್ಡ ಪ್ರದೇಶದಲ್ಲಿ ಕಂಡುಬಂದಿದೆ. ಆದಾಗ್ಯೂ, ಅಂತಹ ಪ್ರಬಲ ಭೂಕಂಪನದ ನಂತರವೂ, ಯಾವುದೇ ದೊಡ್ಡ ಹಾನಿ ವರದಿಯಾಗಿಲ್ಲ. ಭೂಕಂಪದ ನಂತರ ಯಾವುದೇ ಸುನಾಮಿ ಎಚ್ಚರಿಕೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಫಿಲಿಪೈನ್ಸ್ನ ಮಿಂಡನಾವೊದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಇದರ ಆಳ 650 ಕಿಲೋಮೀಟರ್. https://twitter.com/NCS_Earthquake/status/1811225929840271606?ref_src=twsrc%5Etfw%7Ctwcamp%5Etweetembed%7Ctwterm%5E1811225929840271606%7Ctwgr%5E718d18269755089dfba86acba0ab2f556864869e%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಬೆಂಗಳೂರು : ನಡುರಸ್ತೆಯಲ್ಲೇ ಲಾರಿ ಹೊತ್ತಿ ಉರಿದ ಪರಿಣಾಮ ಟಿವಿಎಸ್ ಕಂಪನಿಯ 40 ಕ್ಕೂ ಹೆಚ್ಚು ಬೈಕ್ ಗಳು ಸುಟ್ಟುಭಸ್ಮವಾಗಿರುವ ಘಟನೆ ನಡೆದಿದೆ. ತಮಿಳುನಾಡಿನ ಟಿವಿಎಸ್ ಕಂಪನಿಗೆ ಸೇರಿದ ಲಾರಿವೊಂದು ಹೊಸ ಟಿವಿಎಸ್ ಬೈಕ್ ಗಳನ್ನು ಸಾಗಿಸುತ್ತಿದ್ದ ವೇಳೆ ಆನೇಕಲ್ ಬಳಿಯ ಧಮ್ಮರನಹಳ್ಳಿಯಲ್ಲಿ ಏಕಾಏಕಿ ಹೊತ್ತಿ ಉರಿದಿದೆ. ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆದರೆ 40 ಕ್ಕೂ ಹೆಚ್ಚು ಹೊಸ ಟಿವಿಎಸ್ ಬೈಕ್ ಗಳು ಸುಟ್ಟು ಕರಕಲಾಗಿವೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅವ್ಯವಹಾರಕ್ಕೆ ಸಂಬಂದಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದಿನಾಂಕ 10.07.2024 ರಂದು ಮಾನ್ಯ ಲೋಕಾಯುಕ್ತ ಕಚೇರಿಗೆ, ಮಾನವ ಹಕ್ಕುಗಳ ಆಯೋಗಕ್ಕೆ, ಚುನಾವಣಾ ಆಯೋಗಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ದೂರು ಸಲ್ಲಿಸಲಾಗಿದ್ದು ಆಗಿರುವ ವಂಚನೆಗಳಿಗೆ, ಸರ್ಕಾರದ ತಾರತಮ್ಯ ಧೋರಣೆಗಳಿಗೆ, ಚುನಾವಣೆ ಕಚೇರಿಗೆ ತಪ್ಪು ಮಾಹಿತಿ ನೀಡಿರುವ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ರೀತಿಯ ಕ್ರಮವನ್ನು ತೆಗೆದುಕೊಳ್ಳುವಂತೆ ಕೊರಳಾಗಿರುತ್ತದೆ.
ನವದೆಹಲಿ: ಭಾರತೀಯರು ಒಂದು ವರ್ಷದಲ್ಲಿ 68 ದೇಶಗಳ 1,000 ನಗರಗಳಲ್ಲಿ ಪ್ರಯಾಣಿಸಿದ್ದಾರೆ ಎಂದು ಹೊಸ ವರದಿಯೊಂದು ಬುಧವಾರ ಬಹಿರಂಗಪಡಿಸಿದೆ. 2022 ರ ಜೂನ್ಗೆ ಹೋಲಿಸಿದರೆ 2023 ರಲ್ಲಿ ಸಾಗರೋತ್ತರ ಪ್ರಯಾಣಕ್ಕೆ ಮೇ ಅತ್ಯಂತ ಜನಪ್ರಿಯ ತಿಂಗಳು. “ಕಳೆದ ಎರಡು ವರ್ಷಗಳಿಂದ ಭಾರತೀಯರು ಎಲ್ಲಾ ಪ್ರಯಾಣ ದಾಖಲೆಗಳನ್ನು ಮುರಿಯುತ್ತಿದ್ದಾರೆ” ಎಂದು ಉಬರ್ ಇಂಡಿಯಾ ಮತ್ತು ದಕ್ಷಿಣ ಏಷ್ಯಾದ ಅಧ್ಯಕ್ಷ ಪ್ರಭ್ಜೀತ್ ಸಿಂಗ್ ಹೇಳಿದರು. 2023 ರಲ್ಲಿ ವಿದೇಶದಲ್ಲಿ ರೈಡ್ ಶೇರಿಂಗ್ ಅಪ್ಲಿಕೇಶನ್ ಬಳಸುವ ಭಾರತೀಯರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವನ್ನು ಡೇಟಾ ಪ್ರತಿಬಿಂಬಿಸುತ್ತದೆ, ಸಾಗರೋತ್ತರ ಪ್ರಯಾಣಿಕರ ಸಂಖ್ಯೆ ಅಮೆರಿಕನ್ನರ ನಂತರ ಎರಡನೇ ಸ್ಥಾನದಲ್ಲಿದೆ. ವಿದೇಶದಲ್ಲಿದ್ದಾಗ, ಭಾರತೀಯರು ಭಾರತದಲ್ಲಿನ ಪ್ರವಾಸಗಳಿಗೆ ಹೋಲಿಸಿದರೆ ಸರಾಸರಿ ಶೇಕಡಾ 25 ರಷ್ಟು ಹೆಚ್ಚು ದೂರ ಪ್ರಯಾಣಿಸಿದ್ದಾರೆ ಮತ್ತು ದೇಶಗಳಾದ್ಯಂತ 21 ವಿಭಿನ್ನ ಉತ್ಪನ್ನಗಳನ್ನು ಪ್ರಯತ್ನಿಸಿದ್ದಾರೆ ಎಂದು ವರದಿ ತಿಳಿಸಿದೆ. ಪ್ರಸ್ತುತ ಬೇಸಿಗೆ ಪ್ರಯಾಣದ ಋತುವಿನಲ್ಲಿ, ಭಾರತೀಯರು ಹಿಂದಿನ ವರ್ಷಗಳಲ್ಲಿ ಸ್ಥಾಪಿಸಿದ ದಾಖಲೆಗಳನ್ನು ಮುರಿಯುವ ನಿರೀಕ್ಷೆಯಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರು : ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಗೀಸರ್ ಬಳಸುತ್ತಾರೆ. ಅದರಲ್ಲೂ ಮಳೆಗಾಲ ಆರಂಭವಾಗಿದ್ದು, ಹೆಚ್ಚಾಗಿ ಬಿಸಿ ನೀರನ್ನು ಬಳಸುತ್ತಾರೆ. ಗೀಸರ್ ಬಳಸುವಾಗ ಹೆಚ್ಚು ಜಾಗೃತರಾಗಿರಬೇಕು. ಇಲ್ಲದಿದ್ದರೆ ಅಪಾಯ ಖಂಡಿತ. ಅದನ್ನು ಬಳಸುವ ಮೊದಲು ಇಲ್ಲಿದೆ ನೀವು ತಿಳಿಯಬೇಕಾದ ಪ್ರಮುಖ ಅಂಶಗಳು. ಮಾರುಕಟ್ಟೆಯಲ್ಲಿ ಮುಖ್ಯವಾಗಿ ನಾಲ್ಕು ವಿಧದ ಗೀಸರ್ ಗಳು ಲಭ್ಯವಿದ್ದು, ಇದರಲ್ಲಿ ಎಲೆಕ್ಟ್ರಿಕ್ ವಾಟರ್ ಗೀಸರ್, ಇನ್ ಸ್ಟಂಟ್ ವಾಟರ್ ಗೀಸರ್, ಸ್ಟೋರೇಜ್ ಗೀಸರ್, ಗ್ಯಾಸ್ ಗೀಸರ್ ಸೇರಿವೆ. ಈ ವಿವಿಧ ರೀತಿಯ ಗೀಸರ್‌ಗಳಿಗೆ ಸುರಕ್ಷತೆ, ಮುನ್ನೆಚ್ಚರಿಕೆಗಳು ಮತ್ತು ನಿರ್ವಹಣೆ ವಿಭಿನ್ನವಾಗಿದೆ. ಗೀಸರ್ ಸುರಕ್ಷತಾ ಸಲಹೆಗಳು ಗೀಸರ್ ಅನ್ನು ಸರಿಯಾದ ತಾಪಮಾನದಲ್ಲಿ ಹೊಂದಸಬೇಕು ಗೀಸರ್ ಅನ್ನು ಬಳಸುವಾಗ ಸರಿಯಾದ ತಾಪಮಾನವನ್ನು ಹೊಂದಿಸಬೇಕು. ಹೆಚ್ಚಿನ ತಾಪಮಾನದ ಸೆಟ್‌ನಿಂದಾಗಿ ನೀರು ಹೆಚ್ಚಾಗಿ ಬಿಸಿಯಾಗುತ್ತದೆ. ಇದಲ್ಲದೇ ವಿದ್ಯುತ್ ಕೂಡ ವ್ಯರ್ಥವಾಗುತ್ತಿದೆ. ಇದರ ಜೊತೆಗೆ ಗೀಸರ್ ತಾಪಮಾನವನ್ನು ಪರಿಶೀಲಿಸುವುದು ಮುಖ್ಯವಾಗಿದೆ. ಸಾಮಾನ್ಯವಾಗಿ ಗೀಸರ್ ತಾಪಮಾನವನ್ನು 45-40 ಡಿಗ್ರಿಗಳ ನಡುವೆ ಇಡಬೇಕು. ಗೀಸರ್ ಅನ್ನು ಸುಡುವ ವಸ್ತುಗಳಿಂದ ದೂರವಿಡಿ…
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಒಟ್ಟು 15 ಮಂದಿ ತಹಶೀಲ್ದಾರ್, 24 ಮಂದಿ ಪಿಎಸ್ ಐಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಪಿಎಸ್ ಐ ಅಧಿಕಾರಿಗಳ ಪಟ್ಟಿ ವರ್ಗವಣೆಗೊಂಡತಹಶೀಲ್ದಾರ್