Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರು ನಗರದಲ್ಲಿ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ನಗರದ ಹಲವಡೆ ರಸ್ತೆಗಳು ಜಲಾವೃತಗೊಂಡಿದ್ದು, ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಬೆಂಗಳೂರಿನ ಭಾರೀ ಮಳೆಯಿಂದಾಗಿ ಹಲವಡೆ ಅವಾಂತರ ಸೃಷ್ಟಿಯಾಗಿದ್ದು, ಆಡುಗೋಡಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಜನರಿಗೆ ಸಂಕಷ್ಟ ಎದುರಾಗಿದೆ. ಮನೆಯಿಂದ ನೀರು ಹೊರಹಾಕಲು ಜನರು ಪರದಾಡಿದ್ದಾರೆ. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಮನೆಗಳಲ್ಲಿ ಇದ್ದ ವಸ್ತುಗಳು, ಆಹಾರ ಪದಾರ್ಥಗಳು ಚೆಲ್ಲಾಪಿಲ್ಲಿಯಾಗಿವೆ. ಶಾಂತಿನಗರ, ರಿಚ್ ಮಂಡ್ ಸರ್ಕಲ್ ಬಳಿ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇನ್ನೂ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಲಕ್ಕಸಂದ್ರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಪುಕ್ ರಾಜ್ ಬಡಾವಣೆಯ 2ನೇ ಮುಖ್ಯ ರಸ್ತೆ ಜಲಾವೃತೊಂಡಿದೆ. ಮನೆಗಳಿಗೆ ನೀರು ನುಗ್ಗಿ ಸ್ಥಳಿಯ ನಿವಾಸಿಗಳು ಪರದಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಮೋಟಾರ್ ಹಾಕಿ ನೀರು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಚಾಮರಾಜಪೇಟೆಯ ಶಿರಸಿ ರಸ್ತೆಯಲ್ಲಿ ಮಳೆ ಅಬ್ಬರಕ್ಕೆ ರಸ್ತೆ ಬದಿಯ ಬೃಹತ್ ಮರ ಉರುಳಿ ಬಿದ್ದಿದ್ದು, ವಾಹನ ಸವಾರರು ಪರದಾಡಿದ್ದಾರೆ.
ನವದೆಹಲಿ : ಇತ್ತೀಚೆಗೆ ಹೆಚ್ಚುತ್ತಿರುವ ಆನ್ ಲೈನ್ ವಂಚನೆಗಳನ್ನು ತಡೆಯಲು ಕೇಂದ್ರ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಬ್ಯಾಂಕ್ಗಳಿಗೆ ಪ್ರತ್ಯೇಕ ಮತ್ತು ಸುರಕ್ಷಿತ ವಾದ ‘ಬ್ಯಾಂಕ್.ಇನ್’ ಡೊಮೈನ್ ರೂಪಿಸಿದೆ. ಭಾರತದ ಎಲ್ಲಾ ಬ್ಯಾಂಕುಗಳು ಆನ್ಲೈನ್ ವಂಚನೆಗಳನ್ನು ತಡೆಯಲು ಮುಂದಿನ 6 ತಿಂಗಳಲ್ಲಿ .bank.in ಡೊಮೇನ್ಗೆ ಬದಲಾಗಲಿವೆ. ಎನ್ಐಎಕ್ಸ್ಐ ಸಿಇಒ ಈ ವಿಷಯ ತಿಳಿಸಿದ್ದಾರೆ. ಭಾರತದಲ್ಲಿ ಸೈಬರ್ ವಂಚನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ), ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವನ್ನು (ಎಂಇಐಟಿವೈ) ಸಂಪರ್ಕಿಸಿ ಇದಕ್ಕೊಂದು ಪರಿಹಾರ ನೀಡುವಂತೆ ಕೇಳಿಕೊಂಡಿತ್ತು. ಇದರ ಪರಿಣಾಮವಾಗಿ, ಎಲ್ಲಾ ಭಾರತೀಯ ಬ್ಯಾಂಕುಗಳಿಗೆ .bank.in ಎಂಬ ಹೊಸ ಡೊಮೇನ್ ಅನ್ನು ರಚಿಸಲು ಮತ್ತು ಇದನ್ನೇ ಬಳಸಲು ನಿರ್ಧರಿಸಲಾಗಿದೆ. ಹೆಚ್ಚುತ್ತಿರುವ ಸೈಬರ್ವಂಚನೆಗಳನ್ನು ತಡೆಯಲು ಪರಿಹಾರ ರೂಪಿಸುವಂತೆ ಆರ್ಬಿಐ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವನ್ನು ಸಂಪರ್ಕಿ ಸಿತ್ತು. ಈ ನಿಟ್ಟಿನಲ್ಲಿ ಎಲ್ಲ ಬ್ಯಾಂಕ್ಗಳಿಗಾಗಿ ಬ್ಯಾಂಕ್. ಇನ್’ ಡೊಮೈನ್ ರೂಪಿಸಲು ಮತ್ತು ಜಾರಿಗೆ ಸರಕಾರ ಮುಂದಾಗಿದೆ. ಡೊಮೈನ್ ಮಟ್ಟದ…
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ “ಕೀಮೋಥೆರಪಿ ಸೌಲಭ್ಯವನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದರು. ಸ್ಪರ್ಶ್ ಆಸ್ಪತ್ರೆ ಸಮೂಹ ಸಂಸ್ಥೆಯು ಬೆಂಗಳೂರಿನ ಹೆಣ್ಣೂರು ರಸ್ತೆಯಲ್ಲಿ ಭಾನುವಾರ ನೂತನವಾಗಿ ಆರಂಭಿಸಿದ “ವಿಶೇಷ ಚಿಕಿತ್ಸಾ ಸೌಲಭ್ಯಗಳನ್ನೊಳಗೊಂಡ “ಸ್ಪರ್ಶ್ ಆಸ್ಪತ್ರೆ” ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು, ಬಡರೋಗಿಗಳು ಕಿಮೋಥೆರಪಿ ಮಾಡಿಸಲು ಸಾವಿರಾರು ರೂಪಾಯಿ ವ್ಯಯಿಸುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಯಲ್ಲೂ ಈ ಸೌಲಭ್ಯ ಒದಗಿಸಿದರೆ ಸಾಕಷ್ಟು ಜನರಿಗೆ ಸಹಕಾರಿಯಾಗಿದೆ, ಈ ನಿಟ್ಟಿನಲ್ಲಿ ಕಿಮೋಥೆರಪಿಯನ್ನೂ ಸಹ ಸರ್ಕಾರಿ ಆಸ್ಪತ್ರೆಗಳಲ್ಲಿ ಒದಗಿಸಲು ಮುಂದಾಗಿದ್ದು, ಶೀಘ್ರವೇ ಈ ಸೇವೆಗೆ ಚಾಲನೆ ಸಿಗಲಿದೆ ಎಂದರು. ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳ ರೀತಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನಾಗಿ ಮಾಡುವುದು ಕಷ್ಟಸಾಧ್ಯ, ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲೂ ಆಧುನಿಕ ತಂತ್ರಜ್ಞಾನಗಳೊಂದಿಗೆ ಸುಧಾರಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಕೈಗೊಂಡಿದ್ದೇವೆ, ಸಾಕಷ್ಟು ಸೌಲಭ್ಯಗಳನ್ನು ರೋಗಿಗಳ ಸೇವೆಗೆ ಲಭ್ಯವಿದೆ ಎಂದು ತಿಳಿಸಿದರು. ವೈದ್ಯಕೀಯ ಶಿಕ್ಷಣ ಸಚಿವ ಶರಣ…
ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದು ಮತ್ತು ನಾಳೆ ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ. 20, 21 ರಂದು ಬಾಗಲಕೋಟೆ, ಬೀದರ್, ಧಾರಾವಾಡ, ಗದಗ, ಹಾವೇರಿ ಹಾಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಗಳಿಗೆ ಮುಂದಿನ ಎರಡೂರು ದಿನಕ್ಕೆ, ಕರಾವಳಿ ಜಿಲ್ಲೆಗಳಿಗೆ ಇಡೀ ವಾರಕ್ಕೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿಮೇ23ರಿಂದಮಳೆ ಪ್ರಮಾಣಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ,…
ಬಳ್ಳಾರಿ : ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾರ್ಯಕ್ರಮ ಆಯೋಜನೆ ಕುರಿತಂತೆ, ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಈಗ ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಜಾರಿಗೆ ಕುರಿತಂತೆ ಚರ್ಚಿಸಲಾಗಿತ್ತು. ಪ್ರಥಮವಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿಮತ್ತು ಯುವನಿಧಿ ಸೇರಿದಂತೆ ಹಂತ-ಹAತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು. ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಪ್ರಜಾಪ್ರಭುತ್ವದ ಮತದಾರರಿಗೆ ನಮ್ಮ ಸರ್ಕಾರವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕೊಟ್ಟ ಮಾತಿನಂತೆ ಪಂಚ…
ವಿಜಯಪುರ : ರಾಜ್ಯಾದ್ಯಂತ ಮೇ.29 ರಿಂದ ಶಾಲೆಗಳು ಪುನಾರರಂಭವಾಗಲಿದ್ದು, ಪ್ರಾರಂಭೋತ್ಸವ ದಿನದಿಂದಲೇ ಪುಸ್ತಕ, ಸಮವಸ್ತ್ರ ಕೊಡಲು ಸಿದ್ಧತೆ ಕೈಗೊಳ್ಳಲಾಗಿದೆ. ಶೂ, ಸಾಕ್ಸ್ ಮೂರು ತಿಂಗಳ ನಂತರ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೇ 29ರಿಂದ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆಯಲಿದೆ. ವಿದ್ಯಾರ್ಥಿಗಳನ್ನು ಗೌರವದಿಂದ ಶಾಲೆಗೆ ಬರಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಲಾ ಆರಂಭೋತ್ಸವದ ದಿನದಂದೇ ಎಲ್ಲ ಮಕ್ಕಳಿಗೆ ಸಮ ವಸ್ತ್ರ, ಪಠ್ಯಪುಸ್ತಕ ವಿತರಿಸಲಾಗುತ್ತದೆ. ಶೂ, ಸಾಕ್ಸ್ ಹಂತಹಂತವಾಗಿ ಶಾಲೆಯಲ್ಲಿ ವಿತರಿಸಲಾಗುತ್ತಿದೆ. ಅದಕ್ಕೂ ಒಂದು ಕಠಿಣ ಕಾನೂನು ರೂಪಿಸಿ ಶಾಲಾ ಆರಂಭದಲ್ಲೇ ಮಕ್ಕಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ಈ ವರ್ಷ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮಾನವೀಯ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, ಕೆಲವೊಂದು ಶಾಲೆಗಳಿಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಬಂದಿವೆ. ಅವುಗಳು ಮುಂದೆ ಬರದಂತೆ…
ಬೆಂಗಳೂರು : ಸರ್ಕಾರದ ಆದೇಶದಂತೆ ರಾಜ್ಯ ಸರ್ಕಾರಿ ನೌಕರರು ತಮ್ಮ ವೇತನ ಖಾತೆಯನ್ನು ಕಡ್ಡಾಯವಾಗಿ ವೇತನ ಪ್ಯಾಕೇಜ್ ಖಾತೆಗೆ ಬದಲಾಯಿಸಿಕೊಳ್ಳಬೇಕಾಗಿದೆ. ತಮ್ಮ ಅಗತ್ಯತೆ ಮತ್ತು ಅನುಕೂಲಕ್ಕನುಗುಣವಾಗಿ ಬ್ಯಾಂಕ್ಗಳನ್ನು ಆಯ್ಕೆಮಾಡಿಕೊಳ್ಳುವುದು. ಈ ಕೆಳಗೆ ತಿಳಿಸಿರುವ ಬ್ಯಾಂಕುಗಳ ಸೇವಾ ಸೌಲಭ್ಯಗಳು ಆರ್.ಬಿ.ಐ. ನಿಯಮಾವಳಿಗಳಿಗೆ ಅನುಗುಣವಾಗಿ ಕಾಲಕಾಲಕ್ಕೆ ಬದಲಾವಣೆ ನಿಯಮಗಳಿಗೆ ಒಳಪಟ್ಟಿರುತ್ತವೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಬಳ ಪ್ಯಾಕೇಜ್ – ಬ್ಯಾಂಕ್ಗಳು ನೀಡುವ ಸೌಲಭ್ಯಗಳು
ಬೆಂಗಳೂರು : ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಪ್ರವರ್ಗ-2(ಎ) ಪ್ರವರ್ಗ-2(ಬಿ), ಪ್ರವರ್ಗ-3(ಎ) ಹಾಗೂ ಪ್ರವರ್ಗ-3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ ಕೆನಪದರ ಮಿತಿಗೆ ವಿನಾಯಿತಿ ಹಾಗೂ ಜಾತಿ ಪ್ರಮಾಣ ಪತ್ರ ನೀಡುವ ಕುರಿತು. ಸರ್ಕಾರದ ಸುತ್ತೋಲೆ ಸಂಖ್ಯೆ:ಸಕಇ 60 ಬಿಸಿಎ 2004, ದಿನಾಂಕ:28-03-2005ರಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಗಳು ಮತ್ತು ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ನಿಯಮಗಳು, 2000ರ ನಿಯಮ-3(ಎ) (2) ಪ್ರಕಾರ ತಹಶೀಲ್ದಾರರು ಅರ್ಜಿ ಸ್ವೀಕರಿಸಿದ ದಿನಾಂಕದಿಂದ 2 ತಿಂಗಳೊಳಗಾಗಿ, ನಮೂನೆ-ಡಿ, ಇ, ಎಫ್ ಗಳಲ್ಲಿ ವ್ಯಾಸಂಗ, ಉದ್ಯೋಗ ಮತ್ತಿತರ ಎಲ್ಲಾ ಉದ್ದೇಶಗಳಿಗಾಗಿ ಜಾತಿ ಅಥವಾ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನೀಡತಕ್ಕದ್ದೆಂದು ಶ್ರುತಪಡಿಸಲಾಗಿದೆ ಎಂದು ನಮೂದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ನೇರ ನೇಮಕಾತಿಗಾಗಿ ಸಂವಿಧಾನದ ಪರಿಚ್ಛೇದ 15(4) ಹಾಗೂ 16(4)ರಡಿಯಲ್ಲಿ ಪ್ರವರ್ಗ-॥ ಎ, ।।-ಬಿ, ||-ಎ, 111-ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಕೆಳಗಿನ ಹಂತದ ಹುದ್ದೆಗಳಲ್ಲಿ ನಿರ್ಧಿಷ್ಟ ಅವಧಿಯ ಅನುಭವವನ್ನು ನಿಯಮಿಸಿದಲ್ಲಿ ಅಂತಹ ಸಂದರ್ಭದಲ್ಲಿ ಕನಪದರ…
ಯಾದಗಿರಿ : ಯಾದಗಿರಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ನೀರುಪಾಲಾಗಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರ ಬಳಿಯ ಬಸವಸಾಗರ ಜಲಯಾಶಯದ ಜೆಬಿಸಿ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ವಿಜಯಪುರ ಮೂಲದ ಜಟ್ಟೆಪ್ಪ (19) ಹಾಗೂ ಕರಿಯಪ್ಪ (19) ಮೃತ ದುರ್ದೈವಿಗಳು. ಕುರಿ ಮೇಯಿಸಲು ಬಂದಿದ್ದಾಗ ಕಾಲುವೆಗೆ 6 ಮಂದಿ ಇಳಿದಿದ್ದರು. ಆರು ಕುರಿಗಾಹಿಗಳ ಪೈಕಿ ಇಬ್ಬರು ನೀರುಪಾಲಾಗಿದ್ದು, ಇಬ್ಬರು ಈಜಿ ದಡ ಸೇರಿದ್ದಾರೆ. ನೀರುಪಾಲಾದ ಇಬ್ಬರಿಗಾಗಿ ಶೋಧಕಾರ್ಯಾಚರಣೆ ನಡೆದಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳು ಆದ ಹೆಚ್.ಡಿ. ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.